Tag: ರಾಘವೇಂದ್ರ ಸ್ವಾಮಿ

  • ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

    ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

    ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ ಕನ್ನಡ (Zee Kannada) ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ ಜೀ ಕನ್ನಡ ಈಗ ಮತ್ತೊಂದು ಭಕ್ತಿಪ್ರಧಾನ ಧಾರಾವಾಹಿಯನ್ನು ಜನರ ಮುಂದಿಡಲು ಸಜ್ಜಾಗಿದೆ. `ಶ್ರೀ ರಾಘವೇಂದ್ರ ಮಹಾತ್ಮೆ’ (Shree Raghavendra Mahatme) ಎಂಬ ಧಾರಾವಾಹಿ ಇದೇ ಸೆಪ್ಟೆಂಬರ್ 1ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ ಮತ್ತು ಇದರಲ್ಲಿ ರಾಯರ ಬಾಲ್ಯ, ಪವಾಡಗಳು ಮತ್ತು ಅವರ ಜೀವನದಲ್ಲಿ ನಡೆದ ಅನೇಕ ಕಥೆಗಳು ನಮಗೆ ಕಾಣಸಿಗಲಿದೆ.

    ಜೀ ಕನ್ನಡವು ನಂಬಿಕೆ, ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಬೇರು ಬಿಟ್ಟಿರುವ ಭವ್ಯವಾದ ಕಥೆಗಳನ್ನು ನಿರಂತರವಾಗಿ ಪ್ರೇಕ್ಷಕರಿಗೆ ಕೊಡುವುದರ ಜೊತೆಗೆ ಅರ್ಥಪೂರ್ಣ ಮನರಂಜನೆಯನ್ನು ನೀಡುವ ತನ್ನ ಮುಖ್ಯಧ್ಯೇಯಕ್ಕೆ ಬದ್ಧವಾಗಿದೆ. ಈ ಪರಂಪರೆಯನ್ನು ಇನ್ನಷ್ಟು ಬಲಪಡಿಸುತ್ತಾ, ಜೀ ಕನ್ನಡ ಈಗ `ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಭಕ್ತಿಪರ ಧಾರಾವಾಹಿಯನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದು ಶ್ರೀ ರಾಘವೇಂದ್ರ ಸ್ವಾಮಿಗಳ ಅಸಾಮಾನ್ಯ ಜೀವನಯಾತ್ರೆಯನ್ನು ವಿವರಿಸುತ್ತದೆ. ರಾಯರ ಬಾಲ್ಯದಿಂದ ಹಿಡಿದು ಅವರ ಆತ್ಮಜಾಗೃತಿ, ಉಪದೇಶಗಳು, ಪವಾಡಗಳು ಮತ್ತು ಪರಂಪರೆ ಈ ಧಾರಾವಾಹಿಯಲ್ಲಿ ಕಾಣಸಿಗಲಿದೆ. ಕಥಾಶೈಲಿ, ಮತ್ತು ಭವ್ಯ ದೃಶ್ಯಾವಳಿಗಳ ಸಮನ್ವಯದೊಂದಿಗೆ ಈ ಧಾರಾವಾಹಿ ರಾಯರ ಆತ್ಮಚರಿತ್ರೆ ಮಾತ್ರವಲ್ಲದೆ ಜೀವನದ ಮೌಲ್ಯಗಳನ್ನು ವೀಕ್ಷಕರಿಗೆ ತಿಳಿಸುವಲ್ಲಿ ಯಶಸ್ವಿಯಾಗಲಿದೆ.ಇದನ್ನೂ ಓದಿ: ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ 

    ಧಾರಾವಾಹಿಯಲ್ಲಿ ಪ್ರತಿಭಾನ್ವಿತ ತಾರಾ ಬಳಗ ಇದ್ದು, ಇದರ ನಿರ್ಮಾಣ ಮತ್ತು ಕ್ರಿಯೇಟಿವ್ ಹೆಡ್ ಆಗಿ ಮಹೇಶ್ ಸುಖಧರೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಟಾಲೆಂಟೆಡ್ ಆಕ್ಟರ್, ಡೈರೆಕ್ಟರ್ ನವೀನ್ ಕೃಷ್ಣ ಅವರು ಹೊತ್ತಿದ್ದಾರೆ. ಇನ್ನು ಈ ಧಾರಾವಾಹಿಗೆ ಮಣಿಕಾಂತ್ ಕದ್ರಿ ಅವರ ಅಮೋಘ ಸಂಗೀತ ಇರಲಿದ್ದು, ವಿಷ್ಣು ಪಾತ್ರದಲ್ಲಿ ಅಮಿತ್ ಕಶ್ಯಪ್ ಅವರು ನಟಿಸಿದ್ದಾರೆ. ಸಿರಿ ಪ್ರಹ್ಲಾದ್ ಲಕ್ಷ್ಮಿ ಪಾತ್ರದಲ್ಲಿ ನಟಿಸಿದ್ದು, ವ್ಯಾಸರಾಯರ ಪಾತ್ರದಲ್ಲಿ ಪರೀಕ್ಷಿತ್ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕಾಸ್ ವಸಿಷ್ಠ, ದೀಪಿಕಾ, ಕಾರ್ತಿಕ್ ಸಾಮಗ, ಧನ್ಯಶ್ರೀ ಪ್ರಭು, ವಿಕ್ರಂ ಸೂರಿ, ಡಾ.ಸಂಜಯ್, ಸ್ನೇಹಾ ಹೆಗ್ಡೆ, ಶ್ರೀನಿಧಿ, ಶ್ರೀಲತಾ, ಅನುರಾಗ್ ಸೇರಿ ಅನೇಕ ಪ್ರತಿಭಾನ್ವಿತ ಕಲಾವಿದರ ದಂಡು ಕಾಣಸಿಗಲಿದೆ. ಅಷ್ಟೇ ಅಲ್ಲದೆ, ಹಿರಣ್ಯ ಕಶಿಪುವಾಗಿ ಚೆಲುವರಾಜು, ಕಯಾದು ಆಗಿ ಲೂಸಿಯಾ ಚೆಲುವೆ ಶ್ರುತಿ ಹರಿಹರನ್ ಈ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇನ್ನು ರಾಯರು ಯಾರು ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ. ಒಟ್ಟಿನಲ್ಲಿ ಇದು ಪ್ರೇಕ್ಷಕರಿಗೆ ಮನರಂಜನೆಯ ಹಬ್ಬವನ್ನು ಕೊಡುವುದಂತೂ ಗ್ಯಾರಂಟಿ.

    `ಶ್ರೀ ರಾಘವೇಂದ್ರ ಮಹಾತ್ಮೆ’ ಕೇವಲ ಪೌರಾಣಿಕ ಕಥೆಯಾಗಿರದೆ ಈಗಿನ ಜನಾಂಗಕ್ಕೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವತ್ತ ಪ್ರಯತ್ನ ಮಾಡಲಿದೆ. ಉನ್ನತ ಮಟ್ಟದ ಟೆಕ್ನಾಲಜಿ, ಭವ್ಯ ಸೆಟ್ಗಳು ಮತ್ತು ಗಟ್ಟಿಯಾದ ಕಥಾಹಂದರದೊಂದಿಗೆ ಈ ಧಾರಾವಾಹಿ ಕನ್ನಡ ಪೌರಾಣಿಕ ಕಥನಶೈಲಿಗೆ ಹೊಸ ಅರ್ಥ ನೀಡಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 1, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿರುವ `ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯನ್ನು ನೋಡಲು ಮರೆಯದಿರಿ.ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

  • ಮಂತ್ರಾಲಯದಲ್ಲಿ ಅದ್ದೂರಿಯಾಗಿ ಜರುಗಿದ ಚಿನ್ನದ ರಥೋತ್ಸವ

    ಮಂತ್ರಾಲಯದಲ್ಲಿ ಅದ್ದೂರಿಯಾಗಿ ಜರುಗಿದ ಚಿನ್ನದ ರಥೋತ್ಸವ

    -ರಾಯರ ವೃಂದಾವನಕ್ಕೆ ಶ್ರೀಗಳಿಂದ ಮಹಾಪಂಚಾಮೃತ ಅಭಿಷೇಕ

    ರಾಯಚೂರು: ಮಂತ್ರಾಲಯ (Mantralaya) ರಾಯರ ಮಠದಲ್ಲಿ ಆರಾಧನಾ ಮಹೋತ್ಸವದ ಮುಖ್ಯ ಘಟ್ಟವಾದ ಮಧ್ಯಾರಾಧನೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮಠದ ಪ್ರಾಕಾರದಲ್ಲಿ ಅದ್ದೂರಿಯಾಗಿ ಚಿನ್ನದ ರಥೋತ್ಸವ ಜರುಗಿತು.

    ತುಂಗಾ ತೀರನಿವಾಸಿ, ಭಕ್ತರ ಪಾಲಿನ ಕಲ್ಪತರು ಕಾಮಧೇನು, ಮಂತ್ರಾಕ್ಷತೆ ಮಹಿಮೆಯ ಮಹಾಪುರುಷ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಕಳೆಗಟ್ಟಿದೆ. ಗುರುರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 353 ವರ್ಷಗಳು ಸಂದಿವೆ. ಶ್ರಾವಣ ಶುಕ್ಲ ಪಕ್ಷದ ಬಿದಿಗೆಯ ಮಂಗಳಕರವಾದ ಈ ದಿನವನ್ನ ಮಧ್ಯಾರಾಧನೆಯಾಗಿ ಆಚರಿಸಲಾಗುತ್ತಿದೆ.ಇದನ್ನೂ ಓದಿ: ರಾಯರು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 354 ವರ್ಷ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

    ಮಧ್ಯಾರಾಧನೆಯ ಅಂಗವಾಗಿ ಮಠದ ಪ್ರಾಕಾರದಲ್ಲಿ ಚಿನ್ನದ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ರಾಯರು ರಚಿಸಿದ ಪರಿಮಳ ಗ್ರಂಥ ಹಾಗೂ ಮೃತ್ತಿಕಾ ಬೃಂದಾವನವನ್ನಿಟ್ಟು ಮಠದ ಪ್ರಾಂಗಣದಲ್ಲಿ ಸ್ವರ್ಣ ರಥೋತ್ಸವ ನೆರವೇರಿಸಲಾಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನಡೆದ ಚಿನ್ನದ ರಥೋತ್ಸವದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

    ಇದಕ್ಕೂ ಮುನ್ನ ಈ ದಿನ ವಿಶೇಷವಾಗಿ ಸ್ವತಃ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ರಾಯರ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕವನ್ನ ನೆರವೇರಿಸಿದರು. ಹಾಲು, ಮೊಸರು, ತುಪ್ಪ, ಜೇನುತುಪ್ಪ, ಹಣ್ಣು, ಗೋಡಂಬಿ, ಒಣದ್ರಾಕ್ಷಿ ಸೇರಿ ವಿವಿಧ ಪದಾರ್ಥಗಳಿಂದ ಶ್ರೀಗಳು ವೃಂದಾವನದ ನಾಲ್ಕು ದಿಕ್ಕಿಗೂ ಅಭಿಷೇಕ ಮಾಡಿದರು. ಬಳಿಕ ಚಿನ್ನದ ಕವಚದೊಂದಿಗೆ ಅಲಂಕಾರ ಪೂಜೆ ನಡೆಯಿತು.

    ಇಂದಿಗೂ ರಾಯರು ವೃಂದಾವನದಲ್ಲಿ ತಮ್ಮ ಯೋಗ ಸಾಮರ್ಥ್ಯದಿಂದ ಸಶರೀರರಾಗಿದ್ದು, ಇಂದು ವಿಶೇಷವಾಗಿ ಭಕ್ತರನ್ನ ಅನುಗ್ರಹಿಸುತ್ತಾರೆ ಅನ್ನೋ ಪ್ರತೀತಿಯಿದೆ. ಈ ಹಿನ್ನೆಲೆ ಮಧ್ಯಾರಾಧನೆ ಎನ್ನುವುದು ಆರಾಧನಾ ಮಹೋತ್ಸವದಲ್ಲಿ ವಿಶೇಷವಾದದ್ದು. ಇನ್ನೂ ನೂತನವಾಗಿ ನಿರ್ಮಾಣವಾದ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ರಾತ್ರಿ ವೇಳೆ ತೆಪ್ಪೋತ್ಸವ ಜರುಗಲಿದೆ.

    ಇನ್ನೂ ನಾಳೆ ಉತ್ತರಾರಾಧನೆ ಹಿನ್ನೆಲೆ ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ಉತ್ತರಾರಾಧನೆಯೊಂದಿಗೆ ರಾಯರ ಆರಾಧನಾ ಮಹೋತ್ಸವದ ಮೂರು ದಿನಗಳ ಕಾರ್ಯಕ್ರಮಗಳಿಗೆ ತೆರೆ ಬೀಳಲಿದೆ.ಇದನ್ನೂ ಓದಿ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

  • ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

    ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

    ರಾಯಚೂರು: ಶ್ರೀಗುರು ರಾಘವೇಂದ್ರ ಸ್ವಾಮಿಗಳ (Raghavendra Swamy Aradhana Mahotsava) 353ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ (Mantralaya) ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ನಡೆಯುತ್ತಿವೆ. ಆರಾಧನಾ ವೈಭವವನ್ನು ಭಕ್ತರು ಕಣ್ಮನಗಳಲ್ಲಿ ತುಂಬಿಕೊಳ್ಳುತ್ತಿದ್ದಾರೆ.

    ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ತಮಿಳುನಾಡಿನ ಶ್ರೀರಂಗಂನ ರಂಗನಾಥ ಸ್ವಾಮಿ ದೇವಾಲಯದಿಂದ ಬಂದ ಶೇಷವಸ್ತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿ ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಯಿತು. ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್

    ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಈ ಹಿನ್ನೆಲೆ ಪ್ರತಿ ವರ್ಷ ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತಿವೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ

    ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದಿನಿಂದ ಮೂರು ದಿನಗಳು ಅತಿ ಮಹತ್ವವಾಗಿವೆ. ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು, ಭಜನಾ ಮಂಡಳಿಗಳು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸುತ್ತಿದ್ದಾರೆ. ಇದನ್ನೂ ಓದಿ: ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿ

    ಪೂರ್ವಾಧನೆ ಹಿನ್ನೆಲೆ ಸಂಜೆ ವೇಳೆ ಮಠದ ಪ್ರಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಮಹನೀಯರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತದೆ. ಇದನ್ನೂ ಓದಿ: Kolkata Doctor Rape-Murder| ಶವ ಹಸ್ತಾಂತರ ಮಾಡಿದ 3 ಗಂಟೆಗಳ ಬಳಿಕ ಎಫ್‍ಐಆರ್ ದಾಖಲಾಗಿದ್ದು ಯಾಕೆ – ಸುಪ್ರೀಂ ಚಾಟಿ

  • ಮಂತ್ರಾಲಯದಲ್ಲಿ ರಾಯರ 429 ನೇ ಹುಟ್ಟುಹಬ್ಬದ ಸಂಭ್ರಮ – ಗುರುವೈಭವೋತ್ಸವಕ್ಕೆ ತೆರೆ

    ಮಂತ್ರಾಲಯದಲ್ಲಿ ರಾಯರ 429 ನೇ ಹುಟ್ಟುಹಬ್ಬದ ಸಂಭ್ರಮ – ಗುರುವೈಭವೋತ್ಸವಕ್ಕೆ ತೆರೆ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Raghavendra Swamy) 429 ನೇ ಹುಟ್ಟುಹಬ್ಬದ ಸಂಭ್ರಮ ಮಂತ್ರಾಲಯದಲ್ಲಿ ಮನೆಮಾಡಿದೆ. ಗುರುರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ ಉತ್ಸವವನ್ನು ಗುರುವೈಭವೋತ್ಸವವಾಗಿ ಮಂತ್ರಾಲಯದಲ್ಲಿ (Mantralaya) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

    ರಾಯರ ಹುಟ್ಟುಹಬ್ಬ ಹಿನ್ನೆಲೆ ಬೆಳಗ್ಗೆಯಿಂದಲೇ ಮಠದಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಮಹಾ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ತಿರುಪತಿ ತಿರುಮಲ ದೇವಾಲಯದಿಂದ ಮಠಕ್ಕೆ ಬಂದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರಿಗೆ ಸಮರ್ಪಣೆ ಮಾಡಲಾಯಿತು. ಚೆನೈನ ಶ್ರೀರಾಘವೇಂದ್ರ ನಾದಹಾರ ಸೇವಾ ಟ್ರಸ್ಟ್‌ನ 150ಕ್ಕೂ ಹೆಚ್ಚು ಕಲಾವಿದರು ನಾದಹಾರ ಸಮರ್ಪಣ ಸೇವೆ ಸಲ್ಲಿಸಿದರು. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ಜರುಗಿತು. ಇದನ್ನೂ ಓದಿ: ಕರ್ನಾಟಕದಲ್ಲಿದ್ದಾರೆ ಒಟ್ಟು 5.42 ಕೋಟಿ ಮತದಾರರು – ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರು?

    ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh) ರಾಯರ ವರ್ಧಂತಿ ಉತ್ಸವದಲ್ಲಿ ಭಾಗವಹಿಸಿ ರಾಯರ ದರ್ಶನ ಪಡೆದರು. ದೇಶದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಭಕ್ತರು ರಾಯರ ಹುಟ್ಟುಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಆರು ದಿನಗಳ ಗುರುವೈಭವೋತ್ಸವಕ್ಕೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇಂದು ರಾತ್ರಿ ವಿದ್ಯುಕ್ತ ತೆರೆ ಬೀಳಲಿದೆ. ಇದನ್ನೂ ಓದಿ: ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ದುಡ್ಡಿಲ್ಲ, ಯೋಜನೆ ಹಣ ಕಡಿತವಾಗಿದೆ: ಮೋದಿ

  • ವಿಜಯದಶಮಿ – ಶ್ರೀಗಳಿಂದ ರಾಯರಿಗೆ ವಿಶೇಷ ಪೂಜೆ

    ವಿಜಯದಶಮಿ – ಶ್ರೀಗಳಿಂದ ರಾಯರಿಗೆ ವಿಶೇಷ ಪೂಜೆ

    ರಾಯಚೂರು: ವಿಜಯದಶಮಿ (Vijayadashami) ಹಿನ್ನೆಲೆ ಗುರು ರಾಯರ ಸನ್ನಿಧಿ ಮಂತ್ರಾಲಯದ (Mantralayam) ರಾಘವೇಂದ್ರ ಸ್ವಾಮಿ (Raghavendra Swamy) ಮಠದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ವಿಶೇಷ ಪೂಜೆ ನೆರವೇರಿಸಿದರು.

    ಶ್ರೀಗಳು ನರಸಿಂಹ ದೇವರ ಸಾಲಿಗ್ರಾಮಕ್ಕೆ ಮನ್ಯುಸೂಕ್ತ ಪುನಹಚರಣೆ ನಡೆಸಿಕೊಟ್ಟರು. ನಂತರ ಉಂಜಾಳ ಮಂಟಪದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಮಂಗಲ ಕಾರ್ಯಕ್ರಮದಲ್ಲಿ ಪ್ರವಚನ ನಡೆಯಿತು. ನಂತರ ಆಯುಧಪೂಜೆ ಅಂಗವಾಗಿ ಶ್ರೀ ಮಠದ ವಾಹನಗಳ ಪೂಜೆ ಮಾಡಲಾಯಿತು. ಇದನ್ನೂ ಓದಿ: ನಾವೆಲ್ಲ ಗೆಲ್ಲುವುದು ಮೋದಿ ಹೆಸರಿಂದ, ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹ

    ಬಳಿಕ ಶ್ರೀಗಳು ಹಳೆಪೇಟೆಯ ಶ್ರೀನಿವಾಸ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿಯ ವಸಂತೋತ್ಸವ ನೆರವೇರಿಸಿದರು. ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಹಾಗೂ ಶಿಷ್ಯ ವೃಂದದವರು ಭಾಗಿಯಾಗಿದ್ದರು. ಇದನ್ನೂ ಓದಿ: ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂತ್ರಾಲಯದಲ್ಲಿ ರಾಯರ 352ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

    ಮಂತ್ರಾಲಯದಲ್ಲಿ ರಾಯರ 352ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

    ರಾಯಚೂರು: ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ (Shri Guru Raghavendra Swami) 352ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ (Mantralayam) ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಗುರುವಾರ ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ನಡೆಯುತ್ತಿವೆ. ಆರಾಧನಾ ವೈಭವವನ್ನು ಭಕ್ತರು ಕಣ್ಮನಗಳಲ್ಲಿ ತುಂಬಿಕೊಳ್ಳುತ್ತಿದ್ದಾರೆ.

    ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಅಹೋಬಲ ನರಸಿಂಹಸ್ವಾಮಿ ದೇವಾಲಯದಿಂದ ರಾಯರಿಗೆ ವಸ್ತ್ರ ರೂಪದ ಪ್ರಸಾದ ತಂದು ಅರ್ಪಿಸಲಾಗಿದೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಮಳೆ ಕೊರತೆ – ಯಾವ ಜಿಲ್ಲೆಯಲ್ಲಿ ಎಷ್ಟು ಕೊರತೆಯಾಗಿದೆ?

    ರಾಯರು 700 ವರ್ಷಗಳ ಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಪ್ರತಿ ವರ್ಷ ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತವೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನೈರ್ಮಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಆಗಮನ – ಬಿಎಸ್‌ವೈ, ಎಂಬಿಪಿ ಪ್ರಯಾಣ

    ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದಿನಿಂದ ಮೂರು ದಿನಗಳು ಅತಿ ಮಹತ್ವದ್ದಾಗಿದೆ. ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು, ಭಜನಾ ಮಂಡಳಿಗಳು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನು ಸಮರ್ಪಿಸುತ್ತಿದ್ದಾರೆ. ಇದನ್ನೂ ಓದಿ: ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು

    ಪೂರ್ವಾರಾಧನೆ ಹಿನ್ನೆಲೆ ಸಂಜೆ ವೇಳೆ ಮಠದ ಪ್ರಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ನಾಲ್ಕು ಜನ ಮಹನೀಯರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತದೆ. ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಇಂದು ಸಂಜೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶ್ರೀಗಳು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಜಗ್ಗೇಶ್

    ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಜಗ್ಗೇಶ್

    ರಾಯಚೂರು: ಚಲನಚಿಚಿತ್ರ ನಟ ಹಾಗೂ ಬಿಜೆಪಿ (BJP) ರಾಜ್ಯಸಭಾ ಸದಸ್ಯ ಜಗ್ಗೇಶ್ (Actor Jaggesh) ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.

    ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರಾಗಿರುವ ಜಗ್ಗೇಶ್ ಹೊಸ ವರ್ಷದ ಹಿನ್ನೆಲೆ ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ

    ಗ್ರಾಮದೇವತೆ ಮಂಚಾಲಮ್ಮ ದೇವಿ ದರ್ಶನ ಬಳಿಕ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ (Mantralaya Raghavendra Swamy Temple) ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

    ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದಿದ್ದಾರೆ. ಸುಬುಧೇಂದ್ರ ತೀರ್ಥ ಸ್ವಾಮಿಗಳ ಕಾಲು ಮುಟ್ಟಿ ನಮಸ್ಕರಿಸಿ ಭಕ್ತಿ ಸಮರ್ಪಿಸಿದ್ದಾರೆ. ಶ್ರೀಗಳು ಜಗ್ಗೇಶ್ ಅವರನ್ನ ಗೌರವಿಸಿ ಆಶೀರ್ವಚನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನ ಮಂತ್ರಾಲಯ (Mantralaya) ರಾಯರ ಮಠದಲ್ಲಿ (Raghavendra Mutt) ಕಾರ್ತಿಕ ಮಾಸದ ಆಚರಣೆ ಸಂಭ್ರಮ ಜೋರಾಗಿದೆ. ಅಭಯ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ ವನ ಭೋಜನ ಅಂಗವಾಗಿ ಶ್ರೀ ಬ್ರಹ್ಮ ಕರಾರ್ಚಿತ ಮೂಲರಾಮದೇವರ ಪೂಜೆಯನ್ನು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subudhendra Teertha Swamiji) ನೆರವೇರಿಸಿದರು.

    ಸಂಸ್ಥಾನ ಪೂಜೆಯ ನಂತರ ಶ್ರೀ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವನ ಭೋಜನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಶ್ರೀ ಮಠದ ಸಿಬ್ಬಂದಿ ಮತ್ತು ಮಂತ್ರಾಲಯದ ಸ್ಥಳೀಯರು ಭಾಗವಹಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿದರು. ಇದನ್ನೂ ಓದಿ: `ಕಾಂತಾರ’ ಸಿನಿಮಾ ನನ್ನದೇ: ರಿಷಬ್ ಸಿನಿಮಾ ಬಗ್ಗೆ ಯಶ್ ಪ್ರತಿಕ್ರಿಯೆ

    ನವೆಂಬರ್ 8 ಮಂಗಳವಾರ ಕಾರ್ತಿಕ ಪೌರ್ಣಿಮಾ ದಿನ ನಡೆಯಬೇಕಿದ್ದ ತುಂಗಾ ಆರತಿ ಕಾರ್ಯಕ್ರಮವನ್ನು ಚಂದ್ರಗ್ರಹಣ ಇರುವುದರಿಂದ ಇಂದು ಮಂತ್ರಾಲಯದಲ್ಲಿ ಆಚರಿಸಲಾಯಿತು. ಇಂದು ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಕ್ಕಾಗಿ ಮಠದಲ್ಲಿ ಅಗತ್ಯ ಸಿದ್ಧತೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ಈಗ 10 ಟನ್ ಚಿನ್ನ, 15 ಸಾವಿರ ಕೋಟಿಯ ಒಡೆಯ

    Live Tv
    [brid partner=56869869 player=32851 video=960834 autoplay=true]

  • ಪಂಚೆ ಧರಿಸಿ ಮಂತ್ರಾಲಯಕ್ಕೆ ರಾಹುಲ್ ಗಾಂಧಿ ಭೇಟಿ – ರಾಯರ ದರ್ಶನ

    ಪಂಚೆ ಧರಿಸಿ ಮಂತ್ರಾಲಯಕ್ಕೆ ರಾಹುಲ್ ಗಾಂಧಿ ಭೇಟಿ – ರಾಯರ ದರ್ಶನ

    ರಾಯಚೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿ (Guru Raghavendra Swamy) ದರ್ಶನ ಪಡೆದರು.

    ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ (Bharat Jodo Padayatre) ಇಂದು ಮಂತ್ರಾಲಯ ತಲುಪಿತು. ಸಾಂಪ್ರದಾಯಿಕ ವಸ್ತ್ರ ಧರಿಸಿ ರಾಯರ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ರಾಘವೇಂದ್ರ ಸ್ವಾಮಿ, ಮಂಚಾಲಮ್ಮ ದೇವಿಯ ದರ್ಶನ ಪಡೆದರು. ನಂತರ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ರಾಹುಲ್ ಗಾಂಧಿಗೆ ಆಶೀರ್ವಚನ ನೀಡಿದರು.

    ಈ ವೇಳೆ, ಡಿ.ಕೆ. ಶಿವಕುಮಾರ್ (D.K.Shivakumar) ನೀಡಿದ ಬೆಳ್ಳಿ ಖಡ್ಗವನ್ನು ಸ್ವಾಮೀಜಿ ನಯವಾಗಿಯೇ ನಿರಾಕರಿಸಿದರು. ನಾಳೆ ರಾಹುಲ್ ಪಾದಯಾತ್ರೆ ಮತ್ತೆ ಕರ್ನಾಟಕಕ್ಕೆ ಕಾಲಿಡಲಿದೆ. ಭಾರತ್ ಜೋಡೋ ಸ್ವಾಗತಕ್ಕೆ ರಾಯಚೂರು ನಗರ ಸಜ್ಜಾಗಿದೆ. ಇದನ್ನೂ ಓದಿ : 1 ಮತದಿಂದ ಸೋತು ಮರು ಮತ ಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದ ಅಭ್ಯರ್ಥಿಗೆ ಮುಖಭಂಗ

    ನಾಳೆಯಿಂದ ಮೂರು ದಿನ ರಾಹುಲ್ ನಡಿಗೆ ರಾಯಚೂರು ಜಿಲ್ಲೆಯಲ್ಲಿ ಸಾಗಲಿದೆ. ನಾಡಿದ್ದು ಪ್ರಿಯಾಂಕಾ ಗಾಂಧಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಂಭವವಿದೆ. ಇದನ್ನೂ ಓದಿ: ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಹಾಯವಾಣಿ ಆರಂಭ – ಸಕ್ಕರೆ ಇಲಾಖೆ ತೀರ್ಮಾನ

    Live Tv
    [brid partner=56869869 player=32851 video=960834 autoplay=true]

  • ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

    ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆಗಸ್ಟ್ 10 ರಿಂದ 16ರವರೆಗೆ ನಡೆಯಲಿದ್ದು, ಕಳೆದ ಎರಡು ವರ್ಷಕ್ಕಿಂತ ವಿಜೃಂಭಣೆಯಿಂದ ಆಚರಿಸುವುದಾಗಿ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅವರು ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥ ಶ್ರೀಗಳು, ಏಳು ದಿನ ಕಾಲ ಸಪ್ತರಾತ್ರೋತ್ಸವ ನಡೆಯಲಿದ್ದು, ಆರಾಧನಾ ಮಹೋತ್ಸವ ಹಿನ್ನೆಲೆ ಮಠದಲ್ಲಿ ಏಳು ದಿನಗಳ ಕಾಲ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನು ನೆನಪು ಮಾತ್ರ

    ಆಗಸ್ಟ್ 12 ರಂದು ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಯರ ಅನುಗ್ರಹ ಪ್ರಶಸ್ತಿ ಪ್ರಧಾನ ಹಾಗೂ ಗ್ರಂಥಗಳ ಬಿಡುಗಡೆ ನಡೆಯಲಿದೆ. ಆಗಸ್ಟ್ 13 ರಂದು ಮಧ್ಯಾರಾಧನೆ ಹಿನ್ನೆಲೆ ತಿರುಪತಿಯಿಂದ ಬರುವ ಶೇಷ ವಸ್ತ್ರವನ್ನು ರಾಯರಿಗೆ ಸಮರ್ಪಣೆ ಮಾಡಲಾಗುವುದು. ಆಗಸ್ಟ್ 14 ರಂದು ಉತ್ತರರಾಧನೆ ಹಿನ್ನೆಲೆ ಮಹಾರಥೋತ್ಸವ ನಡೆಯಲಿದೆ. ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ

    ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬಾರಿ ನದಿ ಸ್ನಾನಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ನದಿ ತಟದಲ್ಲಿ ಸ್ನಾನ ಘಟ್ಟದ ವ್ಯವಸ್ಥೆ ಮಾಡಲಾಗಿದೆ. ಆರಾಧನಾ ಮಹೋತ್ಸವ ಹಿನ್ನೆಲೆ ವಿವಿಧ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದ್ದು, ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಸತಿ, ಆರೋಗ್ಯ, ಸಾರಿಗೆ, ಕುಡಿಯುವ ನೀರು ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಮಠಕ್ಕೆ ಕಾಣಿಕೆ, ದೇಣಿಗೆ ಸಂಗ್ರಹಿಸಲು ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ. ಭಕ್ತರು ನೇರವಾಗಿ ಅಥವಾ ಆನ್‍ಲೈನ್ ಮೂಲಕ ಹಣ ನೀಡಿ ಅಧಿಕೃತ ರಶಿದಿ ಪಡೆಯಬೇಕು ಅಂತ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]