Tag: ರಾಘವೇಂದ್ರ ಸ್ವಾಮಿ

  • ಮಂತ್ರಾಲಯಕ್ಕೆ ಭೇಟಿ ನೀಡಿದ ಬಿ.ಸಿ.ನಾಗೇಶ್ ದಂಪತಿ

    ಮಂತ್ರಾಲಯಕ್ಕೆ ಭೇಟಿ ನೀಡಿದ ಬಿ.ಸಿ.ನಾಗೇಶ್ ದಂಪತಿ

    ರಾಯಚೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದಂಪತಿ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.

    ರಾಯಚೂರು ಜಿಲ್ಲಾ ಪ್ರವಾಸ ಹಿನ್ನೆಲೆ ಆಗಮಿಸಿರುವ ಬಿ.ಸಿ.ನಾಗೇಶ್ ಅವರು ಮಂತ್ರಾಲಯದಲ್ಲಿ ಮಂಚಾಲಮ್ಮ ದೇವಿ ದರ್ಶನ ಪಡೆದ ಬಳಿಕ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ತೆರಳಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ರಾಯಚೂರಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ತಾಜ್‍ ಮಹಲ್ ನಿರ್ಮಾಣದಿಂದ ಪೆಟ್ರೋಲ್ ಬೆಲೆ ಏರಿಕೆ: ಓವೈಸಿ ವ್ಯಂಗ್ಯ

    ದೇವದುರ್ಗ ಅರಕೇರಾದಲ್ಲಿ ಆಯೋಜಿಸಿರುವ ಮಳೆ ನೀರು ಕೋಯ್ಲು ಯೋಜನೆ ಉದ್ಘಾಟನೆ ಬಳಿಕ ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಇದನ್ನೂ ಓದಿ: ರಕ್ಷಿತ್ ಶೆಟ್ಟಿಗೆ ‘ಚಾರ್ಲಿ’ ಕೊಟ್ಟಿದ್ದು ಬರೋಬ್ಬರಿ 100 ಕೋಟಿ ರೂ ಲಾಭವಂತೆ!

    Live Tv
    [brid partner=56869869 player=32851 video=960834 autoplay=true]

  • ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ

    ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ

    ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ದೂರಿಯಾಗಿ ಜರುಗುತ್ತಿದೆ. ಪೂರ್ವಾರಾಧನೆ ಹಿನ್ನೆಲೆ ಇಂದು ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

    ಇಂದು ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಅಭಿನಂದನಾ ಸನ್ಮಾನ ನಡೆಯಿತು. ವಿವಿಧ ಕಲಾವಿದರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಾಳೆ ಆಗಸ್ಟ್ 24 ರಂದು ರಾಯರ ಮಧ್ಯಾರಾಧನೆ ನಡೆಯಲಿದೆ. ಇದನ್ನೂ ಓದಿ: ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

    ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 350 ವರ್ಷಗಳಾಗಲಿವೆ. ರಾಯರು 700 ವರ್ಷ ಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ 350ನೇ ಆರಾಧನಾ ಮಹೋತ್ಸವಕ್ಕೆ ವಿಶೇಷತೆಯಿದ್ದು, 700 ವರ್ಷ ಅವಧಿಯ ಮಧ್ಯಭಾಗವೇ ಈ ವರ್ಷದ ಮಧ್ಯಾರಾಧನೆಯಾಗಿದೆ. ಮಧ್ಯಾರಾಧನೆ ಹಿನ್ನೆಲೆ ತಿರುಮಲ ತಿರುಪತಿ ದೇವಾಲಯದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್​​​ಗಳ ನೇಮಕ

  • ರಾಯಚೂರು ವಿಮಾನ ನಿಲ್ದಾಣಕ್ಕೆ ಗುರುರಾಯರ ಹೆಸರು- ನಗರಸಭೆಯಲ್ಲಿ ನಿರ್ಣಯ

    ರಾಯಚೂರು ವಿಮಾನ ನಿಲ್ದಾಣಕ್ಕೆ ಗುರುರಾಯರ ಹೆಸರು- ನಗರಸಭೆಯಲ್ಲಿ ನಿರ್ಣಯ

    ರಾಯಚೂರು: ಜಿಲ್ಲೆಯ ಯರಮರಸ್ ಬಳಿ ನಿರ್ಮಿಸಲು ಉದ್ದೇಶಿಸಿರುವ ವಿಮಾನ ನಿಲ್ದಾಣಕ್ಕೆ ಮಂತ್ರಾಲಯದ ಶ್ರೀಗುರುರಾಘವೇಂದ್ರ ಸ್ವಾಮಿ ಹೆಸರಿಡಲು ರಾಯಚೂರು ನಗರಸಭೆಯ ಮಹಾಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ಕೆಲಸಗಾತಿ ಅಲ್ಲ, ಪ್ರಚಾರ ಪ್ರಿಯೆ ಅಂತ ಹೇಳೋಕೆ ಬಂದೆ: ಎ. ಮಂಜು

    ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಿನ್ನೆ ನಡೆದ ಮಹಾಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನ ತೆಗೆದುಕೊಳ್ಳಲಾಗಿದ್ದು, ಎಲ್ಲಾ ಸದಸ್ಯರು ಸರ್ವಾನುಮತದಿಂದ ತೀರ್ಮಾನಕ್ಕೆ ಒಪ್ಪಿಕೊಂಡಿದ್ದಾರೆ. ಮೇಜು ಕುಟ್ಟಿ ಸರ್ವಾನುಮತದಿಂದ ನಿರ್ಣಯವನ್ನ ಸದಸ್ಯರು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ಕೋಟ್ಯಂತರ ಭಕ್ತರ ಪಾಲಿನ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳು. ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡುವ ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ ಅಂತ ನಗರಸಭೆ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.

  • ರಾಯರ ಸನ್ನಿಧಿ ಬಗ್ಗೆ ಹಾಡಿಹೊಗಳಿದ ಹರಿಪ್ರಿಯಾ

    ರಾಯರ ಸನ್ನಿಧಿ ಬಗ್ಗೆ ಹಾಡಿಹೊಗಳಿದ ಹರಿಪ್ರಿಯಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿಕೊಟ್ಟು ರಾಯರ ಸನ್ನಿಧಿಯಲ್ಲಿ ಕಳೆದ ದಿನ ತುಂಬಾ ವಿಶೇಷವಾಗಿದೆ ಎಂದು ಕೆಲವು ಸಾಲುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮಂತ್ರಾಲಯಕ್ಕೆ ಹರಿಪ್ರಯಾ ಭೇಟಿಕೊಟ್ಟ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಹರಿಪ್ರಿಯಾ ಭಾಗಿಯಾಗಿದ್ದರು. ಇದೀಗ ಹರಿಪ್ರಿಯಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಚಾರವಾಗಿ ಹಂಚಿಕೊಂಡಿದ್ದಾರೆ.

    ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮಿ ಅವರಿಂದ ಸನ್ಮಾನ ಸ್ವೀಕರಿಸಿದ್ದು ಅಪಾರ ಹೆಮ್ಮೆ ಇದೆ. ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ದಿನದಂದು ಗೌರವ ಸಿಕ್ಕಿರುವುದು ಇನ್ನಷ್ಟು ವಿಶೇಷ. ಮಂತ್ರಾಲಯ ನನ್ನನ್ನು ವಿಸ್ಮಯಗೊಳಿಸುವುದನ್ನು ಎಂದಿಗೂ ಕಮ್ಮಿಯಾಗಿಲ್ಲ. ವಿಶೇಷವಾಗಿ ಅವರ ಆತಿಥ್ಯ ಮತ್ತು ಅಲ್ಲಿನ ಅದ್ಭುತ ವೈಬ್ಸ್ ಎಂದು ಬರೆದುಕೊಂಡು ಕೆಲವು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಹರಿಪ್ರಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊಂಚ ಬಿಡುವು ಮಾಡಿಕೊಂಡು ರಾಘವೇಂದ್ರ ಸ್ವಾಮಿ ದರ್ಶನವನ್ನು ಮಾಡಿದ್ದಾರೆ.

  • ರಾಯರ 349ನೇ ಆರಾಧನಾ ಮಹೋತ್ಸವ ಯೂ ಟ್ಯೂಬ್‍ನಲ್ಲಿ ಪ್ರಸಾರ

    ರಾಯರ 349ನೇ ಆರಾಧನಾ ಮಹೋತ್ಸವ ಯೂ ಟ್ಯೂಬ್‍ನಲ್ಲಿ ಪ್ರಸಾರ

    – ಮಹೋತ್ಸವಕ್ಕೆ ಇಂದು ಮಂತ್ರಾಲಯ ಶ್ರೀಗಳಿಂದ ಚಾಲನೆ

    ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದ್ದು, ಗೋ ಪೂಜೆ, ಗಜ ಪೂಜೆ ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.

    ಆಗಸ್ಟ್ 2 ರಿಂದ 8 ರವರೆಗೆ ಆರಾಧನೆ ಹಿನ್ನೆಲೆ ಸಪ್ತರಾತ್ರೋತ್ಸವ ನಡೆಯಲಿದೆ. ಕೊರೊನಾ ಹಿನ್ನೆಲೆ ಈ ಬಾರಿ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಹೀಗಾಗಿ ಮಠದ ಆಡಳಿದ ಮಂಡಳಿ ಆರಾಧನಾ ಸಪ್ತರಾತ್ರೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಮಠದ ಅಧಿಕೃತ ಯೂ ಟ್ಯೂಬ್ ಚಾನಲ್ ‘ಮಂತ್ರಾಲಯ ವಾಹಿನಿ’ಯಲ್ಲಿ ನೇರಪ್ರಸಾರ ಮಾಡಲು ನಿರ್ಧರಿಸಿದೆ.

    ಮಂತ್ರಾಲಯ ಮಠದ ಪ್ರಾಕಾರದಲ್ಲಿ ಮಾತ್ರ ಕಾರ್ಯಕ್ರಮಗಳು ನಡೆಯುತ್ತಿದ್ದು. ಧಾರ್ಮಿಕ, ಆಧ್ಯಾತ್ಮಿಕ, ಉತ್ಸವ, ಪ್ರವಚನ ಸೇರಿ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗುವುದು. ನಾಳೆ ಬೆಳಗ್ಗೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮೂಲ ರಾಮದೇವರಿಗೆ ಪೂಜೆ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ದೇಶದ ವಿವಿಧೆಡೆಯಿರುವ ಗುರುರಾಘವೇಂದ್ರ ಸ್ವಾಮಿಯ ಶಾಖಾ ಮಠಗಳಲ್ಲೂ ಏಳು ದಿನಗಳ ಕಾಲ ಸಡಗರದಿಂದ ಆರಾಧನಾ ಮಹೋತ್ಸವ ಆಚರಿಸಲಾಗುತ್ತದೆ.

  • 347ನೇ ಆರಾಧನಾ ಮಹೋತ್ಸವ- ಸಾಧಕರಿಗೆ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಪ್ರಶಸ್ತಿ ನೀಡಿ ಗೌರವ

    347ನೇ ಆರಾಧನಾ ಮಹೋತ್ಸವ- ಸಾಧಕರಿಗೆ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಪ್ರಶಸ್ತಿ ನೀಡಿ ಗೌರವ

    ರಾಯಚೂರು: ಕಲಿಯುಗ ಕಾಮಧೇನು ರಾಘವೇಂದ್ರ ಸ್ವಾಮಿಗಳ 347 ನೇ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಇದೇ ವೇಳೆ ಸಾಧಕರಿಗೆ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

    ಇಂದು ಮಠದಲ್ಲಿ ಪೂರ್ವಾರಾಧನೆ ನಡೆಯುತ್ತಿದ್ದು, ಗುರು ರಾಯರು ವೃಂದಾವನಸ್ಥರಾಗಿ ಇಂದಿಗೆ 347 ವರ್ಷಗಳು ಸಂದಿವೆ. ಈ ದಿನವನ್ನೇ ಪೂರ್ವಾರಾಧನೆಯಾಗಿ ಆಚರಿಸಲಾಗುತ್ತಿದೆ. ಮುಂದಿನ ಎರಡು ದಿನಗಳನ್ನು ಮಧ್ಯಾರಾಧನೆ ಹಾಗೂ ಉತ್ತರರಾಧನೆಯಾಗಿ ಆಚರಿಸಲಾಗುತ್ತದೆ. ಆರಾಧನೆಯ ಪ್ರತಿ ದಿನವೂ ಇಂದಿನಿಂದ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಮಹಾ ಪಂಚಾಮೃತ ಅಭಿಷೇಕ, ನಿರ್ಮಾಲ್ಯ ವಿಸರ್ಜನೆ, ಮೂಲರಾಮದೇವರ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮಠದಲ್ಲಿ ನಡೆಸಲಾಗುವುದು.

    ಸಂಜೆ ವೇಳೆಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆ ಪುಣ್ಯಸ್ನಾನಕ್ಕಾಗಿ ವಿವಿಧ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಹರಿದು ಬರುತ್ತಿದ್ದಾರೆ.

    ಇತ್ತ ಬೆಂಗಳೂರಿನ ಜಯನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಸ್ವಾಮಿಯ ಆರಾಧನೆ ನಡೆಯುತ್ತಿದೆ. ಈ ವೇಳೆ ಹಲವಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv