ಕರಾವಳಿ ಬೆಡಗಿ ಪೂಜಾ ಹೆಗ್ಡೆ (Pooja Hegde) ಸಾಲು ಸಾಲು ಸಿನಿಮಾಗಳ ಸೋಲನ್ನು ಕಂಡಿರುವ ಹಿನ್ನೆಲೆ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಹೊಸ ಬಗೆಯ ಪಾತ್ರಗಳನ್ನು ಮಾಡಲು ಮುಂದಾಗಿದ್ದಾರೆ. ತಮಿಳಿನ ಹೊಸ ಸಿನಿಮಾದಲ್ಲಿ ದೆವ್ವದ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೂಜಾಗೆ ಕೆರಿಯರ್‌ನಲ್ಲಿ ಹೇಳಿಕೊಳ್ಳುವಂತಹ ಸಕ್ಸಸ್ ಸಿಗುತ್ತಿಲ್ಲ. ಆದರೆ ಅವರಿಗೆ ಬೇಡಿಕೆಯೇನು ಕಮ್ಮಿಯಾಗಿಲ್ಲ. ಬಾಲಿವುಡ್ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಖ್ಯಾತ ನಟ ರಾಘವ್ ಲಾರೆನ್ಸ್ (Raghava Lawrence) ನಟನೆಯ ‘ಕಾಂಚನಾ ಪಾರ್ಟ್ 4’ನಲ್ಲಿ (Kanchana 4) ದೆವ್ವದ (Ghost) ಪಾತ್ರದಲ್ಲಿ ನಟಿಸಲು ಚಿತ್ರತಂಡ ನಟಿಯನ್ನು ಕೇಳಲಾಗಿದೆಯಂತೆ. ಈಗಾಗಲೇ ಒಂದು ಹಂತದ ಮಾತುಕತೆ ನಡೆದಿದೆ. ಆದರೆ ನಟಿ ಒಪ್ಪಿಕೊಂಡ್ರಾ? ಎಂಬುದರ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದೆ.
ದೆವ್ವ ಪಾತ್ರವಾಗಿದ್ದರೂ ನಟನೆಗೆ ಸ್ಕೋಪ್ ಇರುವ ಪಾತ್ರ ಇದಾಗಿದೆ. ಒಂದು ವೇಳೆ, ಈ ಪಾತ್ರ ಒಪ್ಪಿದ್ದೇ ಆದರೆ ಹೊಸ ಪಾತ್ರದಲ್ಲಿ ನಟಿ ಕಾಣಿಸಿಕೊಂಡಂತೆ ಆಗುತ್ತದೆ. ಜಸ್ಟ್ ವೈರಲ್ ಆಗುತ್ತಿರುವ ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಪೂಜಾರನ್ನು ದೆವ್ವ ಪಾತ್ರದಲ್ಲಿ ನೋಡಲು ಕಾಯುತ್ತಿದ್ದಾರೆ. ಇದನ್ನೂ ಓದಿ:ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್
ಅಂದಹಾಗೆ, ಶಾಹಿದ್ ಕಪೂರ್ (Shahid Kapoor) ನಟನೆಯ ದೇವ ಚಿತ್ರದಲ್ಲಿ ಪೂಜಾ ಹೀರೋಯಿನ್ ನಟಿಸಿದ್ದಾರೆ. ತಮಿಳು ನಟ ಸೂರ್ಯ ನಟನೆಯ 44ನೇ ಚಿತ್ರಕ್ಕೂ ಇವರೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ, ಕಾರ್ತಿಕ್ ಸುಬ್ಬರಾಜ್ ನಿರ್ದೇಶನ ಮಾಡುತ್ತಿದ್ದಾರೆ.
ಮುಂಬೈ ಬೆಡಗಿ ಮೃಣಾಲ್ ಠಾಕೂರ್ (Mrunal Thakur) ಬಾಲಿವುಡ್‌ಗಿಂತ ಸೌತ್‌ನಲ್ಲೇ ನಟಿಗೆ ಹೆಚ್ಚಿನ ಬೇಡಿಕೆ ಇದೆ. ಮೃಣಾಲ್ ತೆಲುಗಿನಲ್ಲಿ ನಟಿಸಿದ ಸಿನಿಮಾಗಳು ಹಿಟ್ ಆಗಿವೆ. ಅಪಾರ ಅಭಿಮಾನಿಗಳ ಬಳಗ ಹೊಂದಿರುವ ನಟಿಗೆ ಕಾಲಿವುಡ್‌ನಿಂದ ಈಗ ಬಂಪರ್ ಆಫರ್ ಸಿಕ್ಕಿದೆ. ತಮಿಳಿನ ಸ್ಟಾರ್ ನಟನ ಜೊತೆ ತೆರೆಹಂಚಿಕೊಳ್ಳುವ ಅವಕಾಶ ದಕ್ಕಿದೆ. ಇದನ್ನೂ ಓದಿ:ಬಾಲಿವುಡ್‌ಗೆ ನಟಿ- ಸ್ಟಾರ್ ನಟನ ಪುತ್ರನಿಗೆ ಶ್ರೀಲೀಲಾ ನಾಯಕಿ
ಸೀತಾರಾಮಂ, ಹಾಯ್ ನಾನಾ, ಫ್ಯಾಮಿಲಿ ಸ್ಟಾರ್ ಸಿನಿಮಾಗಳ ನಂತರ ಕಾಲಿವುಡ್‌ನಲ್ಲಿಯೂ ನಟಿ ಮಿಂಚಲು ಸಜ್ಜಾಗಿದ್ದಾರೆ. ತಮಿಳು ನಟ ರಾಘವ್ ಲಾರೆನ್ಸ್ ನಟನೆಯ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ಮೃಣಾಲ್‌ಗೆ ಚಾನ್ಸ್ ಸಿಕ್ಕಿದೆ. ‘ಕಾಂಚನಾ’ ಸಿನಿಮಾದ ಮುಂದುವರೆದ ಭಾಗದಲ್ಲಿ ‘ಸೀತಾರಾಮಂ’ (Seetharamam) ನಟಿ ಕೂಡ ಕಾಣಿಸಿಕೊಳ್ತಿದ್ದಾರೆ.
‘ಕಾಂಚನಾ-4’ (Kanchana 4) ಸಿನಿಮಾ ಮಾಡಲು ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ. ಹಾರರ್ ಕಥೆಗೆ ಸ್ಕ್ರಿಪ್ಟ್ ಕೂಡ ಸಿದ್ಧವಾಗಿದೆ. ಈಗಾಗಲೇ ಚಿತ್ರತಂಡ ಮೃಣಾಲ್‌ರನ್ನು ಭೇಟಿಯಾಗಿ ಚಿತ್ರದ ಕಥೆ ಹೇಳಿದ್ದು, ನಟಿ ಕೂಡ ಓಕೆ ಎಂದಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದೆ. ಈ ಕುರಿತು ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಬೇಕಿದೆ.
ಮೊದಲ ತಮಿಳು ಸಿನಿಮಾದಲ್ಲಿ ರಾಘವ್ ಲಾರೆನ್ಸ್‌ಗೆ (Raghava Lawrence) ಮೃಣಾಲ್ ನಾಯಕಿಯಾಗಿ ನಟಿಸುತ್ತಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.
ಕೆಲ ದಿನಗಳ ಹಿಂದೆ ನಟ ರಾಘವ್ ಬಳಿ ಆಟೋ ಚಾಲಕಿಯರು ತಮ್ಮ ದುಡಿಮೆಯ ಬಹುಪಾಲು ಹಣ ಆಟೋ ಕೊಳ್ಳಲು ತೆಗೆದುಕೊಂಡಿದ್ದ ಸಾಲ ಮರುಪಾವತಿಗೆ ಖರ್ಚಾಗುತ್ತಿರುವುದಾಗಿ ಹೇಳಿಕೊಂಡಿದ್ದರು. ಹಾಗಾಗಿ ಇದೀಗ ರಾಘವ್ ಮತ್ತು ಸ್ನೇಹಿತ ಬಾಲ ಸೇರಿಕೊಂಡು 10 ಆಟೋ ಚಾಲಕಿಯರ ಬ್ಯಾಂಕ್ ಸಾಲವನ್ನು ತೀರಿಸಿದ್ದಾರೆ. ಆ ಮೂಲಕ ದುಡಿದ ಹಣ ಅವರ ಬಳಿಯೇ ಉಳಿಯುವಂತೆ ಮಾಡಿದ್ದಾರೆ.
ಸಾಲ ತೀರಿಸಿದ ದಾಖಲೆ ಸಮೇತ ಅವರಿಗೆ ಉಡುಗೊರೆಯಾಗಿ ರಾಘವ್ ಲಾರೆನ್ಸ್ ಹಾಗೂ ಬಾಲ ನೀಡಿದ್ದಾರೆ. ರಾಘವ್ ತಮಗೆ ಮಾಡಿದ ಸಹಾಯಕ್ಕೆ ಮಹಿಳೆಯರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾನಲ್ಲಿ ಇದೀಗ ವೈರಲ್ ಆಗಿದೆ.
ಇತ್ತೀಚೆಗೆ ರಾಘವ್, ರೈತರಿಗೆ 10 ಟ್ರ್ಯಾಕ್ಟರ್ ನೀಡಿದ್ದರು. ಈ ಮೂಲಕ ರೈತರಿಗೆ ನಟ ನೆರವಾಗಿದ್ದರು. ರಾಘವ್ ನಡೆಗೆ ಅಭಿಮಾನಿಗಳಿಂದ ಶ್ಲಾಘನೆ ವ್ಯಕ್ತವಾಗಿತ್ತು.
ಈಗಾಗಲೇ ಸಾಕಷ್ಟು ಬಾರಿ ಅಶಕ್ತರ ನೆರವಿಗೆ ನಿಂತಿರುವ ನಟ, ನಿರ್ಮಾಪಕ, ನಿರ್ದೇಶಕ ರಾಘವ್ ಲಾರೆನ್ಸ್ (Raghav Lawrence), ಈಗ ರೈತರ ಸಹಾಯಕ್ಕೆ ಹಸ್ತ ಚಾಚಿದ್ದಾರೆ. ಮೇ 1ರಂದು ಕಾರ್ಮಿಕ ದಿನಾಚರಣೆಯ ದಿನದಂದು ರೈತರಿಗೆ ಟ್ರ್ಯಾಕ್ಟರ್ (Tractor) ಅನ್ನು ಉಚಿತ ಕೊಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿರುವ ರಾಘವ್ ಲಾರೆನ್ಸ್, ರೈತರಿಗೆ ಉಚಿತವಾಗಿ 10 ಟ್ರ್ಯಾಕ್ಟರ್ ಗಳನ್ನು ಕೊಡಲು ಮುಂದಾಗಿರುವೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು. ರೈತರ ಕಣ್ಣಲ್ಲಿ ನಾನು ಆನಂದವನ್ನು ಕಾಣಲು ಬಯಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ರೈತರಿಗೆ ಟ್ರ್ಯಾಕ್ಟರ್ ಘೋಷಣೆ ಮಾಡಿರುವ ರಾಘವ್ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬಂದಿವೆ. ನಿಮ್ಮೊಂದಿಗೆ ಸದಾ ನಾವಿರುತ್ತೇವೆ. ಈ ಸೇವೆ ನಿರಂತರವಾಗಿರಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ಅಲ್ಲದೇ, ರೈತರ ನೆರವಿಗೆ ಹೀಗೆ ಎಲ್ಲರೂ ಬರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಾಲಿವುಡ್ ನಟ ರಾಘವ್ ಲಾರೆನ್ಸ್ (Raghava Lawrence) ಅವರು ಕಾರ್ಮಿಕರ ದಿನಾಚರಣೆಯಂದು (ಮೇ.1) ರೈತರಿಗೆ ಉಚಿತ ಟ್ರ್ಯಾಕ್ಟರ್ ಕೊಟ್ಟಿದ್ದಾರೆ. ನಟನ ಜನಪರ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಅಜಿತ್ ಕುಮಾರ್ ಸಿನಿಮಾದಲ್ಲಿ ನಟಿಮಣಿಯರ ದರ್ಬಾರ್
ಇಂದು (ಮೇ 1) ಕಾರ್ಮಿಕರ ದಿನಾಚರಣೆಯ ಸಂದರ್ಭದಲ್ಲಿ ರಾಘವ ಲಾರೆನ್ಸ್ ರೈತರಿಗೆ 10 ಟ್ರ‍್ಯಾಕ್ಟರ್‌ಗಳನ್ನು ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಬೆಂಬಲಿಸಬೇಕಾಗಿ ವಿನಂತಿ ಎಂದು ಕೇಳಿದ್ದಾರೆ.
Hi Friends and fans, On this Special “Labour’s Day”, I’m very Happy to begin #Maatram journey under the initiative “Service is god” through Our charitable trust. As a first start 10 Tractors will be provided with my own money for Farmers – The backbone of our country. Everyone do… pic.twitter.com/AjuuNOhLSA
ಈ ವಿಶೇಷ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನನಗೆ ತುಂಬಾ ಸಂತೋಷವಾಗಿದೆ. ಆರಂಭದಲ್ಲಿ ನಮ್ಮ ದೇಶದ ಬೆನ್ನೆಲುಬಾಗಿರುವ ರೈತರಿಗೆ ನನ್ನ ಸ್ವಂತ ಹಣದಲ್ಲಿ 10 ಟ್ರ‍್ಯಾಕ್ಟರ್ ನೀಡುತ್ತೇನೆ. ಅಗತ್ಯವಿರುವ ಜನರಿಗೆ ಸೇವೆ ಸಲ್ಲಿಸಲು ಪ್ರತಿಯೊಬ್ಬರೂ ಈ ನಿಸ್ವಾರ್ಥ ಪ್ರಯಾಣವನ್ನು ಬೆಂಬಲಿಸಬೇಕು. ಶಬ್ದಗಳಿಗಿಂತ ಕಾರ್ಯಗಳು ಜೋರಾಗಿ ಮಾತನಾಡುತ್ತವೆ. ನನ್ನ ಪ್ರಯಾಣದಲ್ಲಿ ನನಗೆ ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದ ಬೇಕು. ಇಂದಿನಿಂದ ಸೇವೆ ಆರಂಭವಾಗಿದೆ ಎಂದು ಲಾರೆನ್ಸ್ ಹೇಳಿರುವ ವಿಡಿಯೋ ಶೇರ್ ಮಾಡಿದ್ದಾರೆ.
ಇದಷ್ಟೇ ಅಲ್ಲ, ಇತ್ತೀಚೆಗೆ 150 ಮಕ್ಕಳನ್ನು ಲಾರೆನ್ಸ್ ದತ್ತು ಪಡೆದಿದ್ದರು. ಅವರ ಶಿಕ್ಷಣದ ಹೊಣೆ ನಟ ವಹಿಸಿಕೊಂಡಿದ್ದಾರೆ. ಸಿನಿಮಾ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಕೂಡ ಮಾಡುತ್ತಿದ್ದಾರೆ.
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ನಟನೆಯ ‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ಸಿನಿಮಾ ಆಯ್ಕೆಯಲ್ಲಿ ಅವರು ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಸಜ್ಜಾಗಿದ್ದಾರೆ. ಇದನ್ನೂ ಓದಿ:Bigg Boss: ಕನ್ನಡದ ನಟಿ ಶೋಭಾ ಶೆಟ್ಟಿ ಆಟಕ್ಕೆ ದಂಗಾದ ದೊಡ್ಮನೆ ಸ್ಪರ್ಧಿಗಳು
ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ.
ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ (Raghava Lawrence) ನಾಯಕನಾಗಿ ನಟಿಸಿದ್ದರು. ಮೊದಲ ಚಂದ್ರಮುಖಿ ಸಿನಿಮಾದಲ್ಲಿ ರಜನೀಕಾಂತ್ ನಿರ್ವಹಿಸಿದ್ದ ಪಾತ್ರವನ್ನೇ ರಾಘವ್ ನಿರ್ವಹಿಸಿದ್ದರು.
ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರಾರಂಭ ಆಗಲಿದೆ.
ರಾಘವ ಲಾರೆನ್ಸ್- ಕಂಗನಾ ರಾಣಾವತ್ (Kangana Ranaut) ನಟನೆಯ ‘ಚಂದ್ರಮುಖಿ-2’ (Chandramukhi 2) ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಟ್ರೈಲರ್, ಟೀಸರ್ ಭಾರೀ ಸದ್ದು ಮಾಡುತ್ತಿದೆ. ಹಿರಿಯ ನಟ ಪಿ.ವಾಸು ನಿರ್ದೇಶನದಲ್ಲಿ ಮೂಡಿಬಂದಿರುವ ಚಂದ್ರಮುಖಿ-2 ಸಿನಿಮಾದ ಆಡಿಯೋ ಲಾಂಚ್ ಇವೆಂಟ್ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿ ತಮ್ಮ ಅನುಭವ ಹಂಚಿಕೊಂಡಿದೆ.
ನಟ ರಾಘವ್ ಲಾರೆನ್ಸ್ (Raghava Lawrence) ಮಾತನಾಡಿ, ಹಲವು ಕುತೂಹಲಕಾರಿ ಅಂಶಗಳನ್ನು ಹಂಚಿಕೊಂಡರು. ದೊಡ್ಡ ಸ್ಟಾರ್‌ಗಳ ಜೊತೆ ಸಿನಿಮಾ ಮಾಡುವ ಸುಭಾಸ್ಕ್ ಕರಣ್ ನನ್ನ ಜೊತೆ ಸಿನಿಮಾ ಮಾಡ್ತಾರಾ ಅಂತ ಆಶ್ಚರ್ಯ ಪಡ್ತಿದ್ದೆ? ಆದರೆ, ‘ಚಂದ್ರಮುಖಿ 2’ ಅಂತ ದೊಡ್ಡ ಸಿನಿಮಾ ಮಾಡಿದ್ರು. ಅವರ ಬ್ಯಾನರ್‌ನ ಭಾಗವಾಗಿರುವುದಕ್ಕೆ ಹೆಮ್ಮೆ ಪಡುತ್ತೇವೆ. ನಮ್ಮ ನಿರ್ದೇಶಕ ವಾಸು ಸರ್ ಗೆ ನಾಲ್ಕು ದಶಕಗಳ ಅನುಭವವಿದೆ. ನಾನು ಸೈಡ್ ಡ್ಯಾನ್ಸರ್ ಆಗಿ ಕೆಲಸ ಮಾಡಿದ ಕಾಲದಿಂದಲೂ ಅವರು ನಿರ್ದೇಶಕರಾಗಿ ಉತ್ತಮ ಚಿತ್ರಗಳನ್ನು ಮಾಡಿದ್ದಾರೆ. ಇದನ್ನೂ ಓದಿ:ಕನ್ನಡತಿ ಶ್ರೀಲೀಲಾಗೆ ಸರಸ್ವತಿ ವರಪ್ರಸಾದ ಎಂದು ಹೊಗಳಿದ ಬಾಲಯ್ಯ
ಕಂಗನಾ ರಣಾವತ್ ಅವರು ಈ ಸಿನಿಮಾ ಮಾಡುತ್ತಿದ್ದಾರೆ ಎಂದು ತಿಳಿದಾಗ ನನಗೆ ಆಶ್ಚರ್ಯವಾಯಿತು. ಕೀರವಾಣಿ ಬಗ್ಗೆ ಮಾತನಾಡಲು ಪದಗಳು ಸಾಕಾಗುವುದಿಲ್ಲ, ಅವರು ಎಂದಿಗೂ ಕೆಲಸದ ಬಗ್ಗೆ ಟೆನ್ಷನ್ ಆಗುವುದಿಲ್ಲ. ಈ ಚಿತ್ರದ ಸಮಯದಲ್ಲಿ ಅವರು ತಮ್ಮ ಕೆಲಸವನ್ನು ಆನಂದಿಸುತ್ತಾರೆ, ಅದಕ್ಕಾಗಿಯೇ ಅವರು ನಮ್ಮ ಚಿತ್ರಕ್ಕೆ ಉತ್ತಮ ಸಂಗೀತವನ್ನು ನೀಡಿದ್ದಾರೆ. ಛಾಯಾಗ್ರಾಹಕ ರಾಜಶೇಖರ್, ಕಲಾ ನಿರ್ದೇಶಕ ತೊಟ್ಟ ಥರಣಿ ಗಾರು, ಸಂಕಲನಕಾರ ಆಂಟನಿ ಅವರು ಇಡೀ ಚಿತ್ರತಂಡದೊಂದಿಗೆ ‘ಚಂದ್ರಮುಖಿ 2’ ನಂತಹ ಅದ್ಭುತ ಚಿತ್ರವನ್ನು ಮಾಡಿದ್ದಾರೆ. ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದರು.
ಬಾಲಿವುಡ್ ಕ್ವೀನ್ ಕಂಗನಾ ರಣಾವತ್, ನನ್ನ ನಟನಾ ವೃತ್ತಿಜೀವನದಲ್ಲಿ ನಾನು ‘ಚಂದ್ರಮುಖಿ 2’ ಚಿತ್ರ ಮಾಡಿಲ್ಲ. ಅಸಲಿ ವಿಷಯವೆಂದರೆ, ನಾನು ಯಾರನ್ನೂ ಆಫರ್ ಕೇಳಿಲ್ಲ. ಮೊದಲ ಬಾರಿಗೆ ನಾನು ನಿರ್ದೇಶಕ ಪಿ. ವಾಸು ಅವರನ್ನು ಕೇಳಿದೆ. ಈ ಚಿತ್ರದಲ್ಲಿ ವಾಸು ಅವರು ನನ್ನ ಪಾತ್ರದ ಜೊತೆಗೆ ಪ್ರತಿ ಪಾತ್ರಕ್ಕೂ ಸಮಾನ ಪ್ರಾಮುಖ್ಯತೆ ನೀಡಿದ್ದಾರೆ.ಇಡೀ ಕ್ರೆಡಿಟ್ ಅವರಿಗೆ ಸಲ್ಲುತ್ತದೆ.ಲಾರೆನ್ಸ್ ಮಾಸ್ಟರ್ ಅನೇಕರಿಗೆ ಸ್ಫೂರ್ತಿ ಎಂದರು.
ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ.ಕೀರವಾಣಿ ಮಾತನಾಡಿ, ಚಂದ್ರಮುಖಿ 2 (Chandramukhi 2) ಆಸ್ಕರ್ ಪ್ರಶಸ್ತಿ (Oscar Award)ಪಡೆದ ನಂತರ ನಾನು ಸಂಗೀತ ಸಂಯೋಜನೆ ಮಾಡಿರುವ ಚಿತ್ರ. ಇಂತಹ ಒಳ್ಳೆಯ ಅವಕಾಶ ನೀಡಿದ ನಿರ್ದೇಶಕ ಪಿ.ವಾಸು ಅವರಿಗೆ ಧನ್ಯವಾದಗಳು. ವಾಸು ಅವರು ಉತ್ತಮ ನಿರ್ದೇಶಕ ಮಾತ್ರವಲ್ಲದೆ. ಒಬ್ಬ ಒಳ್ಳೆಯ ಗಾಯಕ. ನನ್ನ ಮುಂದಿನ ಚಿತ್ರಕ್ಕೆ ಅವರು ಗಾಯಕನಾಗಲು ನಾನು ಬಯಸುತ್ತೇನೆ. ರಾಘವ ಲಾರೆನ್ಸ್ ಅವರ ಬೆಂಬಲದಿಂದ ಹಾಡುಗಳು ಚೆನ್ನಾಗಿ ಬಂದಿವೆ ಎಂದರು.
ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, RRR ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಪಡೆದ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. ರಾಧಾ ಕೃಷ್ಣ ಎಂಟರ್ಟೈನ್ಮೆಂಟ್ ತೆಲುಗಿನಲ್ಲಿ ಚಂದ್ರಮುಖಿ-2 ಸಿನಿಮಾವನ್ನು ರಿಲೀಸ್ ಮಾಡಲಾಗಿದೆ.
ಆರ್.ಆರ್.ಆರ್ ಸಿನಿಮಾದ ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Keeravani) ಇದೀಗ ಚಂದ್ರಮುಖಿ 2 ಚಿತ್ರಕ್ಕೂ ಮ್ಯೂಸಿಕ್ ಮಾಡುತ್ತಿದ್ದಾರೆ. ಇದೊಂದೇ ಸಿನಿಮಾಗಾಗಿ ಅವರು ಬರೋಬ್ಬರಿ 10 ಹಾಡುಗಳನ್ನು ಕಂಪೋಸ್ ಮಾಡಿದ್ದಾರಂತೆ. ಹತ್ತೂ ಹಾಡುಗಳು ಸಿನಿಮಾದ ಪ್ರಮುಖ ಘಟ್ಟಗಳಲ್ಲಿ ಬರುತ್ತವೆ ಎನ್ನುವುದು ವಿಶೇಷ.
ಅತೀ ನಿರೀಕ್ಷೆ ಮೂಡಿಸಿರುವ ‘ಚಂದ್ರಮುಖಿ 2’ (Chandramukhi 2) ಸಿನಿಮಾದ ಒಂದೊಂದೇ ಮೊದಲ ನೋಟಗಳು (First Look) ಅನಾವರಣಗೊಳ್ಳುತ್ತಿವೆ. ಮೊನ್ನೆಯಷ್ಟೇ ರಾಘವ್ ಲಾರೆನ್ಸ್ ಫಸ್ಟ್ ಲುಕ್ ರಿಲೀಸ್ ಮಾಡಿತ್ತು ಚಿತ್ರತಂಡ. ಇದೀಗ ಕಂಗನಾ ರಣಾವತ್ ಅವರ ಮೊದಲ ನೋಟವನ್ನು ಬಿಡುಗಡೆ ಮಾಡಿ, ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಂಗನಾ ಯಾವ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್
ಕಂಗನಾ ರಣಾವತ್ (Kangana Ranaut) ಅವರು ಇತ್ತೀಚಿಗೆ ‘ಎಮರ್ಜೆನ್ಸಿ’ (Emergency) ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. ಚಂದ್ರಮುಖಿಯಾಗಿ ನಟಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಫಸ್ಟ್ ಲುಕ್ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ.
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಚಂದ್ರಮುಖಿ-2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence), ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2 ಚಿತ್ರವಾಗಿದೆ.
2015ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ‘ಚಂದ್ರಮುಖಿ’ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ನಟ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದೆ. ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ.
ಅತೀ ನಿರೀಕ್ಷೆ ಮೂಡಿಸಿರುವ ‘ಚಂದ್ರಮುಖಿ 2’ (Chandramukhi 2) ಸಿನಿಮಾದ ಒಂದೊಂದೇ ಮೊದಲ ನೋಟಗಳು (First Look) ಅನಾವರಣಗೊಳ್ಳುತ್ತಿವೆ. ಮೊನ್ನೆಯಷ್ಟೇ ರಾಘವ್ ಲಾರೆನ್ಸ್ ಫಸ್ಟ್ ಲುಕ್ ರಿಲೀಸ್ ಮಾಡಿತ್ತು ಚಿತ್ರತಂಡ. ಇದೀಗ ಕಂಗನಾ ರಣಾವತ್ ಅವರ ಮೊದಲ ನೋಟವನ್ನು ಬಿಡುಗಡೆ ಮಾಡಿ, ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಂಗನಾ ಯಾವ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಕಂಗನಾ ರಣಾವತ್ (Kangana Ranaut) ಅವರು ಇತ್ತೀಚಿಗೆ ‘ಎಮರ್ಜೆನ್ಸಿ’ (Emergency) ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. ಚಂದ್ರಮುಖಿಯಾಗಿ ನಟಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಫಸ್ಟ್ ಲುಕ್ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಚಂದ್ರಮುಖಿ-2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence), ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2 ಚಿತ್ರವಾಗಿದೆ.
2015ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ‘ಚಂದ್ರಮುಖಿ’ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ನಟ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದೆ. ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ.
18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬೆಳ್ಳಿತೆರೆಗೆ ಲಗ್ಗೆ ಇಡಲಿದೆ. ರಾಘವ್ ಲಾರೆನ್ಸ್- ಕಂಗನಾ ನಟನೆಯ ಚಂದ್ರಮುಖಿ 2 ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ರಾಘವ್- ಕಂಗನಾ ಜೋಡಿ ಮೋಡಿ ಮಾಡುತ್ತಾ ಕಾದುನೋಡಬೇಕಿದೆ.
ಕಂಗನಾ ರಣಾವತ್ (Kangana Ranaut) ಅವರು ಇತ್ತೀಚಿಗೆ ‘ಎಮರ್ಜೆನ್ಸಿ’ (Emergency) ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. ಚಂದ್ರಮುಖಿಯಾಗಿ ನಟಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಂಗನಾ ಸಿನಿಮಾ ಅಂದಾಕ್ಷಣ ಅಭಿಮಾನಿಗಳಿಗೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಚಂದ್ರಮುಖಿ-2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence), ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2 ಚಿತ್ರವಾಗಿದೆ. ಇದನ್ನೂ ಓದಿ:ಸಿನಿಮಾ ಚಾನ್ಸ್‌ಗಾಗಿ ನಭಾ ಗ್ಲ್ಯಾಮರಸ್ ಫೋಟೋಶೂಟ್
2015ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ‘ಚಂದ್ರಮುಖಿ’ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ನಟ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದೆ. ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬೆಳ್ಳಿತೆರೆಗೆ ಲಗ್ಗೆ ಇಡಲಿದೆ.
ರಾಘವ್ ಲಾರೆನ್ಸ್- ಕಂಗನಾ ನಟನೆಯ ಚಂದ್ರಮುಖಿ 2 ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ರಾಘವ್- ಕಂಗನಾ ಜೋಡಿ ಮೋಡಿ ಮಾಡುತ್ತಾ ಕಾದುನೋಡಬೇಕಿದೆ.