Tag: ರಾಘು ಸಿನಿಮಾ

  • ವಿಜಯ್ ರಾಘವೇಂದ್ರ ನಟನೆಯ ಚಿತ್ರಕ್ಕೆ ರಾಘು ಟೈಟಲ್

    ವಿಜಯ್ ರಾಘವೇಂದ್ರ ನಟನೆಯ ಚಿತ್ರಕ್ಕೆ ರಾಘು ಟೈಟಲ್

    ದ್ದಿಲ್ಲದೇ ವಿಜಯ್ ರಾಘವೇಂದ್ರ ಒಂದಿಲ್ಲೊಂದು ಸಿನಿಮಾಗಳಿಗೆ ಸಹಿ ಮಾಡುತ್ತಲೇ ಇರುತ್ತಾರೆ. ಟಿವಿ ಶೋ ಜತೆ ಜತೆಗೆ ಸತತವಾಗಿ ಸಿನಿಮಾ ಮಾಡುವುದರಲ್ಲಿ ವಿಜಯ್ ರಾಘವೇಂದ್ರ ಯಾವತ್ತಿಗೂ ಹಿಂದೆ ಬಿದ್ದಿಲ್ಲ. ಸದ್ಯ ಅವರು ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಈ ಚಿತ್ರಕ್ಕೆ ರಾಘು ಎಂದು ಟೈಟಲ್ ಇಡಲಾಗಿದೆ. ಇದನ್ನೂ ಓದಿ: ನಿರ್ದೇಶಕ ರಾಜಮೌಳಿ ಮೇಲೆ ಆಲಿಯಾ ಭಟ್ ಕೋಪ – ಬೇರೆ ರೀತಿಯಲ್ಲೇ ಸಿಟ್ಟು ತೋರಿಸಿ ಆಲಿಯಾ

    ಆನ, ಬ್ಯಾಂಗ್ ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಆನಂದ್ ರಾಜ್ ರಾಘು ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. ಈ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವಂತಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ರಾಘು ಥ್ರಿಲ್ಲರ್ ಎಕ್ಸ್ ಪಿರಿಮೆಂಟಲ್ ಸಿನಿಮಾವಾಗಿದ್ದು, ಕನ್ನಡದಲ್ಲಿ ಇದೊಂದು ಹೊಸತನದ ಸಿನಿಮಾವಾಗಿದ್ದು, ವಿಜಯ್ ರಾಘವೇಂದ್ರ ಹಿಂದೆಂದೂ ಮಾಡದ ವಿಭಿನ್ನ ಪಾತ್ರವೊಂದಕ್ಕೆ ಜೀವ ತುಂಬಲಿದ್ದಾರೆ. ಡಿಕೆಎಸ್ ಸ್ಟುಡಿಯೋಸ್ ಮತ್ತು ಕೋಟ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ರಣ್ವೀತ್‌ ಶಿವಕುಮಾರ್‌, ಅಭಿಷೇಕ್‌ ಕೋಟ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಬ್ಯಾಂಗ್’, ‘ಫ್ಯಾಮಿಲಿ ಪ್ಯಾಕ್’ ಖ್ಯಾತಿಯ ಉದಯ್‌ ಲೀಲಾ ಕ್ಯಾಮೆರಾ ವರ್ಕ್,  ಸೂರಜ್‌ ಜೋಯಿಸ್‌ ಸಂಗೀತ ಸಂಯೋಜನೆ, ಅಥರ್ವ್ ಆರ್ಯ ಸಂಭಾಷಣೆ ಬರೆಯುತ್ತಿದ್ದಾರೆ.  ಮೇ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ.