Tag: ರಾಜಕೀಯ ಕಾರ್ಯದರ್ಶಿ

  • ಸಂತೋಷ್ ಗುಣಮುಖರಾದ ನಂತ್ರ ಕೂತು ಚರ್ಚಿಸುತ್ತೇವೆ: ವಿಜಯೇಂದ್ರ

    ಸಂತೋಷ್ ಗುಣಮುಖರಾದ ನಂತ್ರ ಕೂತು ಚರ್ಚಿಸುತ್ತೇವೆ: ವಿಜಯೇಂದ್ರ

    – ಊಹಾಪೋಹಗಳಿಗೆ ಉತ್ತರಿಸಲ್ಲ

    ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆತ್ಮಹತ್ಯೆ ಯತ್ನ ಮಾಡಿರುವುದು ನಮಗೂ ಶಾಕ್ ತಂದಿದೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

    ನಗರದ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟಿದ್ದಾರೆ ಅಂತ ಊಹಾಪೋಹಗಳು ಹಬ್ಬಿದೆ. ಹೀಗಾಗಿ ಸಂತೋಷ್ ಬಗೆಗಿನ ಊಹಾಪೋಗಗಳಿಗೆ ಉತ್ತರ ಕೊಡಲ್ಲ ಎಂದು ಖಡಕ್ಕಾಗಿ ನುಡಿದಿದ್ದಾರೆ.

    ನಿನ್ನೆ ಸಿಎಂ ಅವರು ಆಸ್ಪತ್ರೆಗೆ ಭೇಟಿ ಮಾಡಿ ಬಂದಿದ್ದಾರೆ. ಸಂತೋಷ್ ಚೇತರಿಸಿಕೊಂಡಿದ್ದಾರೆ. ಇಂದು ಜನರಲ್ ವಾರ್ಡ್ ಗೆ ಶಿಫ್ಟ್ ಮಾಡುತ್ತಾರೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ. ಆದರೆ ಅವರ ಬಗೆಗಿನ ಊಹಾಪೋಗಗಳಿಗೆ ಉತ್ತರ ಕೊಡಲ್ಲ ಎಂದರು. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ

    ಮರಿಸ್ವಾಮಿ ಕಾವೇರಿಗೆ ನಿವಾಸಕ್ಕೆ ಬರೋದು ಹೊಸದಲ್ಲ. ಊಹಾಪೋಹಗಳಿಗೆ ಉತ್ತರ ಕೊಡೋಕೆ ನಂಗೆ ಇಷ್ಟವಿಲ್ಲ. ಮಾಧ್ಯಮಗಳಲ್ಲಿ ರಾಜೀನಾಮೆ ವಿಚಾರ ಬರುತ್ತಿರುವುದು ನೋಡಿದೆ. ಸಂತೋಷ್ ಗೆ ರಾಜೀನಾಮೆ ಕೊಡಿ ಅಂತ ಯಾರೂ ಹೇಳಿಲ್ಲ. ಯಾರಿಗೆ ಯಾವ ಸ್ಥಾನವನ್ನ ಕೊಡಬೇಕು ಅನ್ನೋದು ಮುಖ್ಯಮಂತ್ರಿಗಳಿಗೆ ಗೊತ್ತಿದೆ ಎಂದು ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು

    ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ.

  • ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು

    ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು

    ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

    ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಸಿದ್ದರು. ಖುಡಲೇ ಅವರನ್ನು ಮನೆಯವರು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

    ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಮಾಡಲಾಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ದಾಖಲಾಗಿದೆ. ಅಲ್ಲದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸದ್ಯ ಮಾತಾನಾಡಲಿಕ್ಕೆ ಶಕ್ತನಲ್ಲ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ

    ಅಸ್ಪತ್ರೆಯ ಎಂಎಲ್ ಸಿ ರಿಪೋರ್ಟ್ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಇಂದು ಬೆಳಗ್ಗೆ 11 ಗಂಟೆಗೆ ಎಮ್ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸಂತೋಷ್ ಆರೋಗ್ಯ ಕುರಿತು ಸುದ್ದಿ ಗೊಷ್ಠಿ ನಡೆಸಲಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಸಂತೋಷ್ ಪತ್ನಿ ಜಾಹ್ನವಿ ಮಾತನಾಡಿ, ರಾಜಕೀಯ ಒತ್ತಡದಿಂದ ಸಂತೋಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದಿದ್ದಾರೆ.

  • ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶಾಸಕ ರೇಣುಕಾಚಾರ್ಯ ನೇಮಕ

    ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶಾಸಕ ರೇಣುಕಾಚಾರ್ಯ ನೇಮಕ

    ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

    ಸಂಪುಟ ದರ್ಜೆಯ ಸ್ಥಾನಮಾನವನ್ನು ರೇಣುಕಾಚಾರ್ಯ ಅವರಿಗೆ ನೀಡಲಾಗಿದ್ದು, ಈ ಬಗ್ಗೆ ರೇಣುಕಾಚಾರ್ಯ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

    ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಆಕ್ರೋಶಗೊಂಡಿದ್ದರು. ಸಂಪುಟ ವಿಸ್ತರಣೆ ಬಳಿಕ ಡಿಸಿಎಂ ಲಕ್ಷ್ಮಣ ಸವದಿ, ಅಬಕಾರಿ ಸಚಿವ ನಾಗೇಶ್ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದರು. ಪರಿಣಾಮ ಅವರ ಮನವೊಲಿಸಲು ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಆಪ್ತನಿಗೆ ಬಿಎಸ್‍ವೈ ನೀಡಿದ್ದಾರೆ ಎನ್ನಲಾಗಿದೆ.