Tag: ರಾಜಭವನ

  • ಆಸ್ತಿ ತೆರಿಗೆ ಬಾಕಿ – ವಿಧಾನಸೌಧ, ರಾಜಭವನ ಸೇರಿ 258 ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟೀಸ್

    ಆಸ್ತಿ ತೆರಿಗೆ ಬಾಕಿ – ವಿಧಾನಸೌಧ, ರಾಜಭವನ ಸೇರಿ 258 ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟೀಸ್

    ಬೆಂಗಳೂರು: ವಿಧಾನಸೌಧ, ರಾಜಭವನ (Raj Bhavan) ಸೇರಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಒಟ್ಟು 258 ಸರ್ಕಾರಿ ಕಟ್ಟಡಕ್ಕೆ ಬಿಬಿಎಂಪಿ ನೋಟಿಸ್‌ ನೀಡಿದೆ.

    ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು (Government Departments) ಬರೋಬ್ಬರಿ 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ. ಈ ಬೆನ್ನಲ್ಲೇ ಇಂತಹದ್ದೊಂದು ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ಖುದ್ದು ಬಿಬಿಎಂಪಿ ಅಧಿಕಾರಿಗಳೇ ಈ ಬಗ್ಗೆ ʻಪಬ್ಲಿಕ್‌ ಟಿವಿʼಗೆ ಮಾಹಿತಿ ನೀಡಿದ್ದಾರೆ.

    ಹೌದು. ವಿಧಾನಸೌಧ (Vidhana Soudha), ವಿಕಾಸ ಸೌಧ, ರಾಜಭವನ ಸೇರಿ ಅನೇಕ ಸರ್ಕಾರಿ ಕಟ್ಟಗಳು ಕೋಟಿಗಟ್ಟಲೆ ಆಸ್ತಿ ತೆರಿಗೆ (Property Tax) ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್‌ ಸಹ ನೀಡಲಾಗಿದೆ. ಈ ಪೈಕಿ ಕೆಲವು ಕಟ್ಟಡಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ನೋಟಿಸ್‌ ನೀಡಲಾಗಿದೆ.

    ಒಂದು ವೇಳೆ ತೆರಿಗೆ ಪಾವತಿ ಮಾಡದಿದ್ದರೆ, ಸರ್ಕಾರದ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

  • ಜ.26, 27ರಂದು ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ: ರಾಜಭವನದಿಂದ ಮಾಹಿತಿ

    ಜ.26, 27ರಂದು ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ: ರಾಜಭವನದಿಂದ ಮಾಹಿತಿ

    ಬೆಂಗಳೂರು: 76ನೇ ಗಣರಾಜ್ಯೋತ್ಸವದ ನಿಮಿತ್ತ ಜನವರಿ 26 ಮತ್ತು 27ರಂದು ರಾಜಭವನಕ್ಕೆ (Raj Bhavan) ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ (R Prabhushankar) ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸತಕ್ಕದ್ದು. ಪ್ರವೇಶದ ಸಮಯ ಸಂಜೆ 6 ರಿಂದ 7:30ವರೆಗೆ ಇರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ: ಯತ್ನಾಳ್

    ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮೆರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

    ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ಪ್ರಭುಶಂಕರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಐದು ವರ್ಷವೂ ಸಿದ್ದರಾಮಯ್ಯ ಸಿಎಂ: ಜಮೀರ್

  • ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

    ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

    ಬೆಂಗಳೂರು: ಬಿಜೆಪಿ (BJP) ನಿಯೋಗವು ಇಂದು (ಫೆ.06) ರಾಜಭವನಕ್ಕೆ (Raj Bhavan) ಭೇಟಿ ನೀಡಿ ರಾಜ್ಯ ಸರ್ಕಾರದ ವಿರುದ್ಧ ದೂರು (Complaint) ಸಲ್ಲಿಸಿತು. ದಿನಪತ್ರಿಕೆಗಳಲ್ಲಿ ಜಾಹೀರಾತು (Advertisement) ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿದ ಕುರಿತು ಆಕ್ಷೇಪಿಸುವ ಮನವಿಯನ್ನು ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ (Governer) ಸಲ್ಲಿಸಲಾಯಿತು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಈ ಮೂಲಕ ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಮನವಿ ಗಮನ ಸೆಳೆದಿದೆ. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿ ಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುವುದಾಗಿ ಮನವಿಯಲ್ಲಿ ಹೇಳಿದೆ. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

    ಕೇಂದ್ರ ಸರ್ಕಾರದ ವಿರುದ್ಧ ರ‍್ಯಾಲಿ ಅಥವಾ ಪ್ರತಿಭಟನೆ ನಡೆಸುವ ಕುರಿತು ತಿಳಿಸಲು ಈ ಜಾಹೀರಾತು ನೀಡಿದ್ದು, ಇದು ಖಜಾನೆಯ ಹಣದ ದುರ್ಬಳಕೆ ಮತ್ತು ಮೋಸಗಾರಿಕೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಜಾಹೀರಾತಿನ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದ್ದು, ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ರಾಜ್ಯದ ವಾರ್ತಾ ಮತ್ತು ಪ್ರಚಾರ ಇಲಾಖೆ ಕಮಿಷನರ್ ಅವರಿಗೆ ಇಂಥ ಜಾಹೀರಾತು ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಬೇಕೆಂದು ಕೂಡ ಮನವಿ ಕೋರಿದೆ. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ

  • Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

    Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

    ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ (Nitish Kumar) ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು (RJD-JDU) ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ.

    ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ (RJD) ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಗೆ ದೇಣಿಗೆ ಕೋರಿದ ಕಾಂಗ್ರೆಸ್‌

    ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

    ಇನ್ನೊಂದೆಡೆ ಬಿಹಾರದಲ್ಲಿ (Bihar) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ. ಭೂಪೇಶ್ ಬಘೇಲ್ ಅವರನ್ನು ವೀಕ್ಷಕನನ್ನಾಗಿ ನೇಮಸಿದೆ. ಮಗದೊಂದು ಕಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

  • ರಾಜಭವನಕ್ಕೆ ಬಾಂಬ್‌ ಬೆದರಿಕೆ ಹಾಕಿದವ ಅರೆಸ್ಟ್‌

    ರಾಜಭವನಕ್ಕೆ ಬಾಂಬ್‌ ಬೆದರಿಕೆ ಹಾಕಿದವ ಅರೆಸ್ಟ್‌

    ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ (Bomb Threat Call to Rajbhavan) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಭಾಸ್ಕರ್ ಎಂದು ಗುರುತಿಸಿದ್ದು, ಈತ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ವಡ್ಡಹಳ್ಳಿಯ ನಿವಾಸಿ. ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ಸುದ್ದಿಯನ್ನು ಭಾಸ್ಕರ್ ತಿಳಿದುಕೊಂಡಿದ್ದ. ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದ ಬಗ್ಗೆಯೂ ತಿಳಿದುಕೊಂಡಿದ್ದ. ಇದನ್ನೂ ಓದಿ: ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ

    ಸೋಮವಾರ ಊರಿನಿಂದ ಬೆಂಗಳೂರಿಗೆ ಬಂದಿದ್ದ ಈತ ಬೆಂಗಳೂರು ಪೊಲೀಸರನ್ನು ಮತ್ತೆ ಆಟವಾಡಿಸಬೇಕು ಎಂದು ನಿರ್ಧರಿಸಿದ್ದ. ಇದಕ್ಕಾಗಿ ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದ. ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ. ಕರೆ ಕಟ್ ಮಾಡಿ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದ.

    ಇತ್ತ ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ (NIA) ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂತೆಯೇ ಪೊಲೀಸರು ಬಾಂಬ್ ಬೆದರಿಕೆ ಕರೆ ನಂತರ ಕರೆ ಬಂದ ನೆಟ್ವರ್ಕ್ ಟ್ರ್ಯಾಕ್ ಮಾಡುತ್ತಿದ್ದರು. ಆದರೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ. ಅಂತೆಯೇ ಚಿತ್ತೂರಿನಿಂದ ತನ್ನೂರಿಗೆ ವಾಪಸ್ ಆಗುವಾಗ ಭಾಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ವಿಧಾನಸೌಧ ಠಾಣೆ ಪೊಲೀಸರು ಭಾಸ್ಕರ್ ನ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

  • ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

    ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

    ಬೆಂಗಳೂರು: ರಾಜಭವನಕ್ಕೆ (Raj Bhavan) ಬಾಂಬ್ ಬೆದರಿಕೆ (Bomb Threat) ಕರೆ ಬಂದಿದೆ. ಸೋಮವಾರ ರಾತ್ರಿ 11:30ರ ವೇಳೆಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ.

    ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

    ಈ ಕಿಡಿಗೇಡಿಗಳು ಎನ್‌ಐಎ (NIA) ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಎನ್‌ಐಎ ಅಧಿಕಾರಿಗಳಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೇಂದ್ರ ವಿಭಾಗದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

  • ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರದ ಸಚಿವರ (Ministers) ಪಟ್ಟಿ ಅಂತಿಮಗೊಂಡಿದ್ದು, ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿವೆ. ಶನಿವಾರ ಬೆಳಗ್ಗೆ 11:45ಕ್ಕೆ ನೂತನ ಮಂತ್ರಿಗಳು ರಾಜಭವನದ (Raj Bhavan) ಗಾಜಿನ ಮನೆಯಲ್ಲಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ. ಸಂಪುಟದಲ್ಲಿ 22 ಜಿಲ್ಲೆಗಳಿಗೆ ಮಂತ್ರಿ ಭಾಗ್ಯ ದೊರೆತಿದೆ.

    ಅಲ್ಲದೆ 9 ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ. ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ವಿಜಯನಗರ, ಹಾವೇರಿ ಜಿಲ್ಲೆಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ಮೂಲಕ 22 ಜಿಲ್ಲೆಗಳಿಗೆ ಮಂತ್ರಿಭಾಗ್ಯ ದೊರೆತಂತಾಗಿದೆ. ಯಾವೆಲ್ಲ ಜಿಲ್ಲೆಗೆ ಎಷ್ಟು ಮಂತ್ರಿ ಸ್ಥಾನ ನೀಡಲಾಗಿದೆ ಎಂಬ ಪಟ್ಟಿಯನ್ನು ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

    ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ:
    ಹೈದ್ರಾಬಾದ್ ಕರ್ನಾಟಕ – 8
    ಬೀದರ್ – 02
    ಕಲಬುರಗಿ – 02
    ರಾಯಚೂರು – 01
    ಕೊಪ್ಪಳ 01
    ಯಾದಗಿರಿ 01
    ಬಳ್ಳಾರಿ 01

    ಕಿತ್ತೂರು ಕರ್ನಾಟಕ – 7
    ಗದಗ – 01
    ಧಾರವಾಡ – 01
    ವಿಜಯಪುರ -02
    ಬಾಗಲಕೋಟೆ -01
    ಬೆಳಗಾವಿ 02

    ಹಳೆ ಮೈಸೂರು – 9
    ಮೈಸೂರು (ಸಿಎಂ ಸೇರಿ) -03
    ಮಂಡ್ಯ – 01
    ರಾಮನಗರ – 01
    ತುಮಕೂರು – 02
    ಚಿಕ್ಕಬಳ್ಳಾಪುರ – 01
    ಬೆಂಗಳೂರು ಗ್ರಾಮಾಂತರ – 01

    ಮಧ್ಯ ಮತ್ತು ಮಲೆನಾಡು ಕರ್ನಾಟಕ – 3
    ದಾವಣಗೆರೆ – 01
    ಚಿತ್ರದುರ್ಗ – 01
    ಶಿವಮೊಗ್ಗ – 01

    ಕರಾವಳಿ ಕರ್ನಾಟಕ – 1
    ಉತ್ತರ ಕನ್ನಡ – 01

    ಬೆಂಗಳೂರು – 6
    ಬ್ಯಾಟರಾಯನಪುರ – 1
    ಚಾಮರಾಜಪೇಟೆ -1
    ಸರ್ವಜ್ಞ ನಗರ – 1
    ಬಿಟಿಎಂ ಲೇಔಟ್ – 1
    ಹೆಬ್ಬಾಳ – 1
    ಗಾಂಧಿನಗರ – 1

  • ಕ್ಷಯ ಮುಕ್ತ ಭಾರತ ಮೋದಿ ಕನಸು: ಗೆಹ್ಲೋಟ್

    ಕ್ಷಯ ಮುಕ್ತ ಭಾರತ ಮೋದಿ ಕನಸು: ಗೆಹ್ಲೋಟ್

    ಬೆಂಗಳೂರು: ದೇಶದ ಪ್ರಧಾನಿಯವರು ಟಿಬಿ ಮುಕ್ತ ಭಾರತಕ್ಕಾಗಿ (TB Mukt Bharat Abhiyan) ಪಣ ತೊಟ್ಟಿದ್ದಾರೆ. ತಮ್ಮ ಕನಸಿನ ಸಾಕಾರಕ್ಕಾಗಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ ನೀಡಿದ್ದಾರೆ ಎಂದು ರಾಜ್ಯಪಾಲ (Governor) ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದರು.

    ಕ್ಷಯ ರೋಗಿಗಳ ದತ್ತು ಪಡೆಯುವ ಮತ್ತು ನಿ-ಕ್ಷಯ ಮಿತ್ರ ದಾನಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಟಿಬಿ ಮುಕ್ತ ಭಾರತ ಅಭಿಯಾನವನ್ನು ಜನಾಂದೋಲನವನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾಗರಿಕರು, ಎನ್‍ಜಿಒಗಳು, ಕಾರ್ಪೋರೇಟ್ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು ನಿ-ಕ್ಷಯ ಮಿತ್ರರಾಗುವ ಮೂಲಕ ಟಿಬಿ ಮುಕ್ತ ಭಾರತ ಅಭಿಯಾನವನ್ನು ಬೆಂಬಲಿಸಬೇಕು. ಒಬ್ಬರ ಜೀವವನ್ನು ಉಳಿಸುವ ಕಾರ್ಯವು ಮಾನವೀಯ ಸೇವೆಯ ಅತ್ಯುತ್ತಮ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪತ್ನಿ ತಡವಾಗಿ ಏಳುತ್ತಾಳೆ – ಪತಿಯಿಂದ ಪೊಲೀಸರಿಗೆ ದೂರು

    `ನಿ-ಕ್ಷಯ 2.0′ ಪೋರ್ಟ್‌ಲ್‌  ಸುಮಾರು 13.5 ಲಕ್ಷ ಕ್ಷಯ ರೋಗಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 89 ಲಕ್ಷ ಸಕ್ರಿಯ ಟಿಬಿ ರೋಗಿಗಳು ದತ್ತು ತೆಗೆದುಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ನಿ-ಕ್ಷಯ ಪೋರ್ಟಲ್ ಟಿಬಿಯಿಂದ ಬಳಲುತ್ತಿರುವ ವ್ಯಕ್ತಿಗಳ ಬೆಂಬಲಕ್ಕಾಗಿ ವೇದಿಕೆಯನ್ನು ಒದಗಿಸುತ್ತಿದೆ ಎಂದು ಹೇಳಿದರು.

    ವಿಶ್ವಸಂಸ್ಥೆಯ ಪ್ರಕಾರ, ಪ್ರಪಂಚದ ಅನೇಕ ದೇಶಗಳು 2030 ರ ವೇಳೆಗೆ ಟಿಬಿಯನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿವೆ. 2025 ರ ವೇಳೆಗೆ ಭಾರತವನ್ನು ಟಿಬಿ ಮುಕ್ತ ಮಾಡುವ ಗುರಿಯನ್ನು ಪ್ರಧಾನಿ ಮೋದಿ (Narendra Modi) ಹೊಂದಿದ್ದಾರೆ. ರಾಜ್ಯವು ಕ್ಷಯ ಮುಕ್ತ ಕರ್ನಾಟಕ 2025ಕ್ಕಾಗಿ (TB Mukt Karnataka) ಈ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದರು.

    ಕರ್ನಾಟಕ ರಾಜ್ಯದಲ್ಲಿ ಗುರುತಿಸಲಾದ 39‌,745 ಟಿಬಿ ರೋಗಿಗಳಲ್ಲಿ 25,895 ರೋಗಿಗಳು ಪೋಷಣ್ ಆಧಾರ್‍ಗೆ ಒಪ್ಪಿಗೆ ನೀಡಿದ್ದಾರೆ. ಅವರಲ್ಲಿ 25,110 ರೋಗಿಗಳನ್ನು ಅನೇಕ ಸಾಮಾಜಿಕ ಸಂಸ್ಥೆಗಳು, ಸಾರ್ವಜನಿಕ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು ದತ್ತು ಪಡೆದಿದ್ದಾರೆ. 100 ಟಿಬಿ ರೋಗಿಗಳನ್ನು ರಾಜಭವನದಿಂದ (Raj Bhavan) ದತ್ತು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ ಅವರು 500 ಟಿಬಿ ರೋಗಿಗಳನ್ನು ಕಾರ್ಯಕ್ರಮದಲ್ಲಿ ದತ್ತು ಪಡೆದರು. ಇದನ್ನೂ ಓದಿ: 3ರ ಬಾಲೆಯ ಕೈಯಿಂದ ಸಿಡಿದ ಗುಂಡು: ಸಹೋದರಿ ಸಾವು

  • ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

    ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

    ಬೆಂಗಳೂರು: ಏರೋ ಇಂಡಿಯಾ ಶೋ (Aero India Show) ಉದ್ಘಾಟಿಸಲು ಸಿಲಿಕಾನ್ ಸಿಟಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ರಾಜಭವನದಲ್ಲಿ ಮಹತ್ವದ ಕಾರ್ಯವೊಂದನ್ನು ನೆರವೇರಿಸಿದ್ದಾರೆ.

    ಹೌದು. ಭಾನುವಾರ ಬೆಂಗಳೂರಿಗೆ ಬಂದಿರುವ ಪ್ರಧಾನಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು. ಇದನ್ನೂ ಓದಿ: ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ಮೋದಿ

    ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ (Thawar Chand Gehlot) ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.

    ಭಾನುವಾರ ರಾತ್ರಿ ಪ್ರಧಾನಿಯವರು ಸಿನಿಮಾ ರಂಗದವರು, ಕ್ರಿಕೆಟ್ ದಿಗ್ಗಜರು ಹಾಗೂ ಇತರ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಿದ್ದರು. ಅಲ್ಲದೆ ಜೊತೆಗೆ ಔತಣಕೂಟವನ್ನು ಹಮ್ಮಿಕೊಂಡಿದ್ದರು. ಇಂದು ಏರ್ ಇಂಡಿಯಾ ಉದ್ಘಾಟಿಸಿ ಬಳಿಕ ಯಲಹಂಕ ವಾಯುನೆಲೆಯಿಂದಲೇ ತ್ರಿಪುರಾ ಚುನಾವಣಾ ಪ್ರಚಾರಕ್ಕಾಗಿ ಅಗರ್ತಲಾಗೆ ಪ್ರಧಾನಿ ಮೋದಿ ಪಯಣ ಬೆಳೆಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    ಬೆಂಗಳೂರು: ಚುನಾವಣಾ ರಾಜ್ಯ ಕರ್ನಾಟಕಕ್ಕೆ ಪದೇ ಪದೇ ಕೇಂದ್ರದ ನಾಯಕರು ಬಂದು ಹೋಗ್ತಿದ್ದಾರೆ. ಅಮಿತ್ ಶಾ (Amitshah) ಮತ್ತು ಮೋದಿ (Narendra Modi) ಅಂತು ವಾರದಲ್ಲಿ ಎರಡೆರಡು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಬಿಜೆಪಿ ಅಲೆ ಸೃಷ್ಟಿಗೆ ಮುಂದಾಗಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಏರ್ ಶೋ (Bengaluru AirShow) ಗೆ ಚಾಲನೆ ನೀಡಲು ಪ್ರಧಾನಿ ಮೋದಿ ಭಾನುವಾರವೇ ಬೆಂಗಳೂರಿಗೆ ಆಗಮಿಸಿದ್ದಾರೆ.

    ಭಾನುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ ಇಂದು ಯಲಹಂಕ ವಾಯುನೆಲೆಯಲ್ಲಿ ಏರ್ ಶೋಗೆ ಚಾಲನೆ ನೀಡಲಿದ್ದಾರೆ. ವಾರದಲ್ಲಿ 2ನೇ ಬಾರಿಗೆ ಬೆಂಗಳೂರಿಗೆ ಮೋದಿ ಭೇಟಿ ನೀಡ್ತಿದ್ದ ಈ ಮೂಲಕ ಬೆಂಗಳೂರು ಮತದಾರರ ಮನಗೆಲ್ಲಲು ದಾಳ ಹೂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ

    ಬಿಗಿ ಪೊಲೀಸ್ ಭದ್ರತೆ: ನರೇಂದ್ರ ಮೋದಿ ಇಂದು ಏರೋ ಶೋ ಉದ್ಘಾಟನೆಗೆ ಹೋಗುವ ರಸ್ತೆಯ ಉದ್ದಗಲಕ್ಕೂ ಖಾಕಿ ಸರ್ಪಗಾವಲು ಮಾಡಲಾಗಿದೆ. ರಾಜಭವನ (Rajabhavana) ದಿಂದ ಮೇಕ್ರಿ ಸರ್ಕಲ್‍ವರೆಗೂ 300 ಸಂಚಾರಿ ಪೊಲೀಸರು, 500ಕ್ಕೂ ಹೆಚ್ಚು ಲಾ ಅಂಡ್ ಅರ್ಡರ್ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಏರೋ ಶೋ (Air Show) ನಡೆಯುವ ಸ್ಥಳದಲ್ಲಿ ಕೆಎಆರ್‍ಪಿ ತುಕಡಿ ಹಾಗೂ ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ರಾಜಭವನದಿಂದ ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಮೆಕ್ರಿ ಸರ್ಕಲ್ ಹೆಚ್‍ಕ್ಯೂಟಿಸಿಗೆ ಹೋಗಿ ಅಲ್ಲಿಂದ ಏರೋ ಶೋ ನಡೆಯುತ್ತಿರೋ ಸ್ಥಳಕ್ಕೆ ಹೆಲಿಕಾಪ್ಟರ್‍ನಲ್ಲಿ ತಲುಪಲಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು: ಬೊಮ್ಮಾಯಿ

    ಎಲ್ಲೆಲ್ಲಿ ಸಂಚಾರ ನಿರ್ಬಂಧ: ಇತ್ತ ಏರ್‌ ಪೋರ್ಟ್ ರಸ್ತೆ (Airport Road) ಎಲಿವೇಟೆಡ್ ಫ್ಲೈಓವರ್ ಮೇಲೆ ಸಾರ್ವಜನಿಕರ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹೆಬ್ಬಾಳದ ಎಸ್ಟಿಮ್ ಮಾಲ್‍ನಿಂದ ಯಲಹಂಕವರೆಗೆ ನಿಷೇಧ ಹೇರಲಾಗಿದೆ. ಏರ್ ಶೋಗೆ ತೆರಳುವ ವಾಹನ ಸವಾರರು ನಿಗದಿತ ಪಾಸ್ ತೋರಿಸಿ ಫ್ಲೈ ಓವರ್ ಮೇಲೆ ತೆರಳಬಹುದು. ಯಲಹಂಕ, ಕೊಡಿಗೆಹಳ್ಳಿ, ಬ್ಯಾಟರಾಯನಪುರ ಸುತ್ತಮುತ್ತಲಿನ ಸಾರ್ವಜನಿಕರು ಫ್ಲೈ ಓವರ್ ಕೆಳಭಾಗದ ಸರ್ವಿಸ್ ರಸ್ತೆ ಬಳಸಲು ಸೂಚನೆ ನೀಡಲಾಗಿದೆ. ಕೆಐಎಎಲ್‍ಗೆ ತೆರಳುವ ಪ್ರಯಾಣಿಕರು ಹೆಣ್ಣೂರು ಜಂಕ್ಷನ್ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಏರ್‌ ಪೋರ್ಟ್ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಎಲಿವೇಟೆಡ್ ಫ್ಲೈಓವರ್ ಮೇಲೆ ಸಾರ್ವಜನಿಕ ವಾಹನಗಳಿಗೆ ನಿಷೇಧ ಹೇರಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k