Tag: ರಾಜರಾಜೇಶ್ವರಿ ನಗರ

  • ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್

    ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು (RajaRajeshwari Police) ಬಂಧಿಸಿದ್ದಾರೆ.

    ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು (Yoga Centre) ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

    ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

    ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅನುದಾನ ತಾರತಮ್ಯ ಸಂಘರ್ಷ ಜೋರಾಗಿದೆ. ರಾಜರಾಜೇಶ್ವರಿ ನಗರದಲ್ಲಿ (Rajarajeshwari Nagar) ಕಾಮಗಾರಿಗಳು ಅರ್ಧಕ್ಕೆ ನಿಂತ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಮತ್ತು ಬಿಜೆಪಿ ನಾಯಕರು (BJP Leaders) ಇಂದು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಅನುದಾನ ನೀಡದೇ ಇದ್ದರೆ ಸರ್ಕಾರದ ವಿರುದ್ಧ ಮೂರು ದಿನ ಸತ್ಯಾಗ್ರಹ ಮಾಡುವುದಾಗಿ ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ.

    ಆರ್‌ಆರ್ ನಗರಕ್ಕೆ ಬೊಮ್ಮಾಯಿ (Basavaraj Bommai) ಸರ್ಕಾರ ನೀಡಿದ್ದ 126 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಹಿಂಪಡೆದು ಕಾಂಗ್ರೆಸ್ ಶಾಸಕರ (Congress Government) ಕ್ಷೇತ್ರಕ್ಕೆ ಹಂಚಿತ್ತು. ಈ ತಾರತಮ್ಯವನ್ನು ಕ್ಷೇತ್ರದ ಶಾಸಕ, ಮಾಜಿ ಮಂತ್ರಿ ಮುನಿರತ್ನ (Munirathna) ತಿಂಗಳ ಹಿಂದೆಯೇ ಪ್ರಶ್ನಿಸಿದ್ದರು.

     

    ಗಾಂಧಿ ಪ್ರತಿಮೆ ಮುಂದೆ ಧರಣಿಗೆ ಕುಳಿತಿದ್ದರು. ಅಲ್ಲದೇ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಾಲಿಗೆ ಬಿದ್ದು ಕ್ಷೇತ್ರದ ಅಭಿವೃದ್ಧಿ ಸಹಕರಿಸಿ. ಅನುದಾನ ವಾಪಸ್ ಕೊಡಿ ಎಂದು ಕೋರಿದ್ದರು.

    ಮನವಿ ಮಾಡಿ ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ. ಪರಿಣಾಮ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಳ್ಳದೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಈ ಬೆಳವಣಿಗೆಯನ್ನು ವಿಪಕ್ಷ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ 10 ಸಾವಿರ ಕೋಟಿ ಬರ ಪರಿಹಾರ ಘೋಷಣೆ ಮಾಡದಿದ್ರೆ ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ: ಕೋಟ ಎಚ್ಚರಿಕೆ

    ಮಾಜಿ ಮಂತ್ರಿ ಮುನಿರತ್ನ, ಅಶ್ವಥ್‌ನಾರಾಯಣ್, ಸಂಸದ ಪಿಸಿ ಮೋಹನ್ ಜೊತೆಗೂಡಿ ಮಾಜಿ ಸಿಎಂ ಯಡಿಯೂರಪ್ಪ ಆರ್‌ಆರ್ ನಗರ ಕ್ಷೇತ್ರ ಪ್ರದಕ್ಷಿಣೆ ಮಾಡಿದರು. ಅನುದಾನ ಇಲ್ಲದೇ ಸ್ಥಗಿತಗೊಂಡ ಅರ್ಧಂಬರ್ಧ ಕಾಮಗಾರಿಗಳನ್ನು ಪರಿಶೀಲಿಸಿ ಸ್ಥಳೀಯರಿಂದಲೂ ಸಮಸ್ಯೆಗಳನ್ನು ಆಲಿಸಿದರು. ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಕೂಡಲೇ ಅನುದಾನ ರಿಲೀಸ್ ಮಾಡದೇ ಇದ್ದರೆ ಇದರ ವಿರುದ್ಧ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

     

    ಯಾವೆಲ್ಲ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ?
    *ಪಿಇಎಸ್ ಕಾಲೇಜ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಪರಿಣಾಮ ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದೆ.
    *ಹೊಸಕೆರೆಹಳ್ಳಿ ಕೆರೆ ಅಭಿವೃದ್ಧಿ, ಕೆರೆಕೋಡಿ ರಸ್ತೆ ಕಾಮಗಾರಿ ನಿಂತಿದ್ದು, 42 ಕೋಟಿ ರೂ. ಅನುದಾನ ವಾಪಸ್ ಮಾಡಲಾಗಿದೆ.
    *ಬೇಮೆಲ್ ಲೇಔಟ್ ಬಳಿ ವೈಟ್ ಟಾಪಿಂಗ್ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದೆ.
    *ರಾಜರಾಜೇಶ್ವರಿನಗರ ಆರ್ಚ್ ಬಳಿ ಸಿಗ್ನಲ್ ಫ್ರೀ ಕಾರಿಡಾರ್ ಕಾಮಗಾರಿ ಅಪೂರ್ಣ.
    *ಉಲ್ಲಾಳ ಜಂಕ್ಷನ್‌ನಲ್ಲಿ ಗ್ರೇಡ್ ಸಪರೇಟರ್ ಕಾಮಗಾರಿ ಅಪೂರ್ಣ.
    *ಮಲ್ಲತಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿದೆ. 81 ಕೋಟಿ ರೂ. ಅನುದಾನ ಘೋಷಣೆಯಾಗಿದ್ದರೂ ಮಂಜೂರಾಗಿಲ್ಲ.

    ಬಿಎಸ್‌ವೈ ಹೇಳಿದ್ದೇನು?
    ಮುಂದಾದ್ರೂ ವೈಯಕ್ತಿಕ ದ್ವೇಷ ಮಾಡಬೇಡಿ. ಅಭಿವೃದ್ಧಿ ಕಾರ್ಯದ ಕಡೆಗೆ ಸರ್ಕಾರ ಗಮನ ಕೊಡಬೇಕು. ಈ ಕ್ಷೇತ್ರದಲ್ಲಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಅಭಿವೃದ್ಧಿ ಕಾರ್ಯಕ್ಕೆ ಕೊಡಲಿ ಪೆಟ್ಟು ಕೊಡಲಾಗಿದೆ. ಈ ಕ್ಷೇತ್ರ ಮಾತ್ರವಲ್ಲ ಹಲವು ಕ್ಷೇತ್ರಗಳ ಸ್ಥಿತಿ ಇದೇ ಆಗಿದೆ. ಗುತ್ತಿಗೆದಾರರು ಕೆಲಸಕ್ಕೆ ಬರಲು ಒಪ್ಪ್ಪುತ್ತಿಲ್ಲ. ಗುತ್ತಿಗೆದಾರರಿಂದ 8% ಕಮಿಷನ್ ಕೇಳುತ್ತಿದ್ದಾರೆ. ಸರ್ಕಾರದ ತಾರತಮ್ಯ, ಸೇಡಿನ ರಾಜಕೀಯ ನೀತಿ ವಿರುದ್ಧ ನಾನು ಮೂರು ಸತ್ಯಾಗ್ರಹ ಮಾಡುತ್ತೇನೆ.

    ಮುನಿರತ್ನ ಹೇಳಿದ್ದೇನು?
    ಕ್ಷೇತ್ರದ 126 ಕೋಟಿ ಅನುದಾನ ನನಗೆ ಇನ್ನೂ ಹಿಂತಿರುಗಿಸಿಲ್ಲ. ಖುದ್ದು ಯಡಿಯೂರಪ್ಪ ಬಂದು ಕ್ಷೇತ್ರ ವೀಕ್ಷಿಸಿ ದ್ವೇಷದ ರಾಜಕೀಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವ್ಯಾರೂ ಶಾಶ್ವತ ಅಲ್ಲ, ಒಟ್ಟಾಗಿ ಕೆಲಸ ಮಾಡೋಣ ಅಂತಾ ನನ್ನಾಸೆ.

     
    ಡಿಕೆ ಶಿವಕುಮಾರ್‌ ಹೇಳಿದ್ದೇನು?
    ಬಹಳ ಸಂತೋಷ. ಬಿಎಸ್‌ ಯಡಿಯೂರಪ್ಪನವರಿಗೆ ಲೋಕಾಯುಕ್ತ ರಿಪೋರ್ಟ್, ಬಸವರಾಜ ಬೊಮ್ಮಾಯಿ ವರದಿ ಎರಡನ್ನೂ ಕಳುಹಿಸಿಕೊಡುತ್ತೇನೆ.

  • ರಾಜರಾಜೇಶ್ವರಿನಗರದಲ್ಲಿ ಸಚಿವ ಮುನಿರತ್ನ ಪರ ಸುದೀಪ್ ಅಬ್ಬರದ ಪ್ರಚಾರ

    ರಾಜರಾಜೇಶ್ವರಿನಗರದಲ್ಲಿ ಸಚಿವ ಮುನಿರತ್ನ ಪರ ಸುದೀಪ್ ಅಬ್ಬರದ ಪ್ರಚಾರ

    ಬೆಂಗಳೂರು: ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly Election) ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದು, ತಯಾರಿಗಳು ಕೊನೆ ಹಂತವನ್ನು ತಲುಪಿದೆ. ಅಭ್ಯರ್ಥಿಗಳ ಪರವಾಗಿ ಸ್ಟಾರ್ ಪ್ರಚಾರಕರು ಪ್ರಚಾರ ಕಾರ್ಯವನ್ನು ಜೋರಾಗಿಯೇ ನಡೆಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯವನ್ನು ಮಾಡುವುದಾಗಿ ಹೇಳಿದ್ದ ಸುದೀಪ್ (Sudeep) ಭಾನುವಾರ ಸಚಿವ ಮುನಿರತ್ನ (Munirathna) ಪರವಾಗಿ ಪ್ರಚಾರ ನಡೆಸಿದ್ದಾರೆ.

    ರಾಜರಾಜೇಶ್ವರಿನಗರದ (Rajarajeshwari Nagar) ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಪರ ನಟ ಸುದೀಪ್ ಭಾನುವಾರ ನಗರದ ಮಾಳಗಾಳ ಗ್ರಾಮದಲ್ಲಿ ಮತ ಪ್ರಚಾರ ನಡೆಸಿದ್ದಾರೆ. ಜ್ಞಾನಭಾರತಿ ವಾರ್ಡ್, ರಾಜರಾಜೇಶ್ವರಿ ನಗರ ವಾರ್ಡ್ ಸೇರಿದಂತೆ ಅನೇಕ ಕಡೆ ಮತ ಪ್ರಚಾರ ಮಾಡಿದ್ದಾರೆ. ಸುದೀಪ್‌ರನ್ನು ಮುನಿರತ್ನ ತಮ್ಮ ಕ್ಷೇತ್ರಕ್ಕೆ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿನಾ ಬಡ್ಡಿ ಸಮೇತ ತೀರಿಸುತ್ತೇನೆ: ಮೋದಿ

    ಕಳೆದ ತಿಂಗಳು ಸುದೀಪ್ ಬೊಮ್ಮಾಯಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತದಾರರಲ್ಲಿ ಕೇಳಿಕೊಂಡು ಪ್ರಚಾರ ಕಾರ್ಯಗಳನ್ನು ಪ್ರಾರಂಭಿಸಿದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ ಸುದೀಪ್, ಸಿಎಂ ತಿಳಿಸಿದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಗಳನ್ನು ನಡೆಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಜೊತೆ ರಾಹುಲ್ ಗಾಂಧಿ ಬೈಕ್‍ ರೈಡ್‌

  • ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸಿನಿಮಾ ನಾಯಕ ನಟ ಸ್ಪರ್ಧೆ

    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸಿನಿಮಾ ನಾಯಕ ನಟ ಸ್ಪರ್ಧೆ

    ಮುಂಬರುವ 2023ರ ವಿಧಾನಸಭಾ ಚುನಾವಣೆಗೆ (Politics) ಮತ್ತೊಬ್ಬ ಸಿನಿಮಾ ಸ್ಟಾರ್ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ನಟ ಹಾಲಿ ಶಾಸಕ ಮುನಿರತ್ನ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದು ಸಿಕ್ಕಿರುವ ಮಾಹಿತಿ. ಈ ಸ್ಟಾರ್ ಎಂಟ್ರಿಯಿಂದಾಗಿ ಯಾವ ಪಕ್ಷಕ್ಕೆ ಲಾಭ ಯಾವ ಪಕ್ಷಕ್ಕೆ ನಷ್ಟ ಎನ್ನುವ ಕುರಿತು ಚರ್ಚೆ ಆಗುತ್ತಿದೆ.

    ಸ್ವತಂತ್ರ ಅಭ್ಯರ್ಥಿಯಾಗಿ ಈ ನಟ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಈ ಸ್ಟಾರ್ ನಟನ ಹಿಂದೆ ತೆರೆ ಮರೆಯಲ್ಲಿ ರಾಜಕೀಯ ದಿಗ್ಗಜರು ಇದ್ದಾರೆ ಎಂದು ಹೇಳಲಾಗುತ್ತಿದೆ. ಆ ಸ್ಟಾರ್ ನಟ ಬೇರೆ ಯಾರೂ ಅಲ್ಲ ಚೇತನ್ ಚಂದ್ರ (Chetan Chandra). ಬರೋಬ್ಬರಿ 15 ವರ್ಷದಿಂದ ಕನ್ನಡ ಚಿತ್ರರಂಗದಲ್ಲಿರೋ ಚೇತನ್ ಚಂದ್ರ. ಪಿಯುಸಿ, ಪ್ರೇಮಿಸಂ, ರಾಜಧಾನಿ, ಕುಂಬರಾಶಿ, ಜಾತ್ರೆ, ಹುಚ್ಚುಡುಗ್ರು, ಸಂಯುಕ್ತ 2, ಪ್ಲಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಇದನ್ನೂ ಓದಿ: ತೆರೆಗೆ ಅಪ್ಪಳಿಸಲು ಸಜ್ಜಾದ ರಕ್ಷಿತ್‌ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ

    ಚೇತನ್ ಚಂದ್ರ ಅಭಿನಯದ ಇತ್ತೀಚಿನ ಚಿತ್ರ‌ ‘ಪ್ರಭುತ್ವ’ ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಇಂದಿನ ರಾಜಕೀಯ ಸ್ಥಿತಿ, ಸರ್ಕಾರದ ವ್ಯವಸ್ಥೆ ಬಗ್ಗೆ ಮಾತನಾಡೋ ಸಿನಿಮಾ ಇದಾಗಿದ್ದು, ಇತ್ತೀಚೆಗಷ್ಟೆ ಟ್ರೈಲರ್ ಬಿಡುಗಡೆ ಮಾಡಲಾಗಿತ್ತು. ಇದ್ರಲ್ಲಿ ಚೇತನ್ ಕ್ರಾಂತಿಕಾರಿ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ವ್ಯವಸ್ಥೆ ಮತ್ತು ಮತದಾನದ ಬಗ್ಗೆ ಹೊಡೆದಿರೋ ಡೈಲಾಗ್ಸ್ ಸಿನಿಮಾದ ಹೈಲೈಟ್ ಆಗಿದೆ.

    ಸ್ಥಿತಿವಂತ ಹಿನ್ನೆಲೆ ಇರೋ ಚೇತನ್ ಚಂದ್ರಗೆ ಈ ಹಿಂದೆಯೇ ಕಾರ್ಪೋರೇಟರ್ ಎಲೆಕ್ಷನ್ಗೆ ಆಫರ್ ಬಂದಿತ್ತು. ಆದರೆ, ಮುಂದಾಲೋಚನೆ ದೊಡ್ಡದಿಟ್ಟುಕೊಂಡಿದ್ದ ಅವರು ಈ ಬಾರಿ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡೋ ಯೋಜನೆಯನ್ನು ಐದು ವರ್ಷದ ಹಿಂದೆಯೇ ರೂಪಿಸಿದ್ದರಂತೆ. ಅದಕ್ಕೆ ತಕ್ಕಂತೆ ಇದೀಗ ಅದು ಚಾಲ್ತಿಗೆ ಬಂದಿದೆ. ಅದಕ್ಕೆ ಕಾಕತಾಳೀಯ ಎಂಬಂತೆ ಈಗ  ಪ್ರಭುತ್ವ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದೆ.

    ಎಲೆಕ್ಷನ್ಗೂ ಮೊದ್ಲೇ ಪ್ರಭುತ್ವ ಸಿನಿಮಾ ರಿಲೀಸ್ ಆಗೋದು ಕನ್ಫರ್ಮ್ ಆಗಿದ್ದು, ಈ ಸಿನಿಮಾ ಬಂದ್ಮೇಲೆ ಚೇತನ್ ಚಂದ್ರ ಸಿನಿಮಾ ನಸೀಬು ಏನಾಗುತ್ತೋ ಗೊತ್ತಿಲ್ಲ ಆದ್ರೆ ರಾಜಕೀಯವಾಗಿ ಹಣೆಬರಹ ಬದಲಾಗೋ ಎಲ್ಲಾ ಸೂಚನೆ ಸಿಕ್ತಿದೆ. ಇದಿಷ್ಟು ತೆರೆಮರೆಯಲ್ಲಿ‌ ಸಿಕ್ಕಿರೋ ಮಾಹಿತಿ ಅಧಿಕೃತವಾಗಿ ಸದ್ಯದಲ್ಲೇ ಚೇತನ್ ಚಂದ್ರ ಈ ವಿಚಾರವನ್ನ ಬಹಿರಂಗ ಪಡಿಸಲಿದ್ದಾರಂತೆ.

  • ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ಟಿ ಕಾರುಣ್ಯ ರಾಮ್ (Karunya Ram) ಜನ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ತಮ್ಮ ರಾಜರಾಜೇಶ್ವರಿ ನಗರ (Rajarajeshwari Nagar) ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು (Potholes) ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದಾರೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕಾರುಣ್ಯ, ‘ಎರಡು ಘಟನೆಗಳಿಂದಾಗಿ ನಾನು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಲು ಹೊರಟೆ. ನನ್ನ ಸ್ನೇಹಿತರೊಬ್ಬರ ತಂದೆ ತಾಯಿ ವಾಹನ ಓಡಿಸುವಾಗ ರಸ್ತೆಗುಂಡಿಗೆ ಬಿದ್ದು ಆಸ್ಪತ್ರೆ ಸೇರಿದರು. ಅದರಲ್ಲಿ ಒಬ್ಬರು ಮೃತರಾದರು. ಅಲ್ಲದೇ, ನನ್ನ ಕಣ್ಣಾರೆ ಹುಡುಗಿಯೊಬ್ಬಳು ರಸ್ತೆ ಗುಂಡಿಯಲ್ಲಿ ಬಿದ್ದದ್ದು ನೋಡಿದೆ. ಹಣಕ್ಕಿಂತಲೂ ಜೀವ ಅಮೂಲ್ಯ. ಈ ರೀತಿಯಲ್ಲಿ ಪ್ರಾಣ ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕೆ ಗುಂಡಿ ಮುಚ್ಚಲು ಮುಂದಾದೆ’ ಎನ್ನುತ್ತಾರೆ.

    ‘ಸರಕಾರ ಅಥವಾ ಜನಪ್ರತಿನಿಧಿಗಳನ್ನು ಬೈಯುತ್ತಾ ಕೂರುವ ಬದಲು, ನಮ್ಮ ಮನೆ, ಏರಿಯಾ ಸುತ್ತಲೂ ಇರುವ ಒಂದೊಂದು ಗುಂಡಿಯನ್ನು ಮುಚ್ಚಿದರೆ ಸಾಕು. ಗುಂಡಿ ಮುಕ್ತ ಬೆಂಗಳೂರು ಮಾಡಬಹುದು. ಜನರು ಮನಸ್ಸು ಮಾಡಬೇಕು ಅಷ್ಟೆ. ಜೀವ ನಮ್ಮದೆ. ಹಾಗಾಗಿ ನಮ್ಮ ಜೀವವನ್ನು ನಾವೇ ಕಾಪಾಡಿಕೊಳ್ಳಬೇಕು. ಇದು ನಾನು ಕಂಡುಕೊಂಡ ಸತ್ಯ. ಈ ಸೂತ್ರವೇ ನನ್ನನ್ನು ಪ್ರೇರೇಪಿಸಿತು’ ಎನ್ನುವುದು ಕಾರುಣ್ಯ ಮಾತು.

    ರಾತ್ರಿ ಹನ್ನೊಂದರ ಹೊತ್ತಿಗೆ ಗುಂಡಿಗಳನ್ನು ಮುಚ್ಚುವುದಕ್ಕೆ ಶುರು ಮಾಡಿದ ಕಾರುಣ್ಯ ಮತ್ತು ಟೀಮ್ ಗೆ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಅಭಿನಂದನೆ ಸಲ್ಲಿಸಿದ್ದಾರೆ. ‘ಆ ರಸ್ತೆಯಲ್ಲಿ ಹೋಗುತ್ತಿದ್ದವರು ವಾಹನ ನಿಲ್ಲಿಸಿ, ನಮ್ಮನ್ನು ಮಾತನಾಡಿಸುತ್ತಿದ್ದರು. ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಬೆನ್ನುತಟ್ಟಿದರು. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದಕ್ಕಿಂತ ಬೇರೆ ಮೆಚ್ಚುಗೆ ಬೇಕಿಲ್ಲ’ ಎನ್ನುತ್ತಾರೆ ಕಾರುಣ್ಯ. ಇದನ್ನೂ ಓದಿ: ಅನುಷ್ಕಾಳೇ ನನ್ನ ಸ್ಫೂರ್ತಿ ಎಂದು ಪತ್ನಿಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ

    ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಸಂಸ್ಕಾರ ಟ್ರಸ್ಟ್ (Sanskara Trust) ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.

  • ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

    ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

    ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ಮುನಿರತ್ನ 1,25,734 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 67,798 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಕೇಶವಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ. ಒಟ್ಟು 57,936 ಮತಗಳ ಅಂತರದಿಂದ ಮುನಿರತ್ನ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

    ಗೆಲುವಿಗೆ ಕಾರಣ ಏನು?
    ಆರ್ ಆರ್ ನಗರದಲ್ಲಿ ಎರಡು ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಮುನಿರತ್ನ ಅವರ ಕೈ ಹಿಡಿದಿದೆ. ಇದರ ಜೊತೆಯಲ್ಲಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ವೈಯಕ್ತಿಕವಾಗಿ ಇರುವ ವರ್ಚಸ್ಸು ನೆರವಾಗಿದೆ.

    ಆರ್ ಆರ್ ನಗರ ಕ್ಷೇತ್ರದ ಜನತೆಗೆ ಮುನಿರತ್ನ ಪರಿಚಯದ ಮುಖ, ಕೈಗೆ ಸುಲಭವಾಗಿ ಸಿಗುವ ಜನಪ್ರತಿನಿಧಿ ಎಂಬ ಭಾವನೆ ಇದೆ. ಕೋವಿಡ್ 19 ಲಾಕ್ ಡೌನ್ ಸಂದರ್ಭದಲ್ಲಿ ಕ್ಷೇತ್ರದ ಬಡಜನರಿಗೆ ರೇಷನ್ ಕಿಟ್ ವಿತರಣೆ, ಆರ್ಥಿಕ ನೆರವು ಕೊಟ್ಟಿದ್ದು ಸಹಾಯ ಮಾಡಿದೆ.

    ಮನಿರತ್ನ ಗೆದ್ದರೆ ಸಚಿವರಾಗುವುದಾಗಿ ಖುದ್ದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಅಷ್ಟೇ ಸಚಿವರು, ಬಿಜೆಪಿ ನಾಯಕರು ಕೇಡರ್ ಬೇಸ್ ಕಾರ್ಯತಂತ್ರಗಳನ್ನು ನಡೆಸಿ ಪ್ರಚಾರ ನಡೆಸಿದ್ದರು.

    ತಮ್ಮ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ಹೊರಗಿನ ಜನರನ್ನ ಕರೆತಂದು ಅಶಾಂತಿ ಉಂಟುಮಾಡ್ತಿದ್ದಾರೆ ಎಂದು ಆರೋಪಿಸಿ ಪ್ರಚಾರ ಮಾಡಿದ್ದರು. ಇದರ ಜೊತೆ ಜೆಡಿಎಸ್, ಹೆಚ್ ಡಿಕೆ, ದೇವೇಗೌಡರ ಬಗ್ಗೆ ಪ್ರಚಾರದ ಉದ್ದಕ್ಕೂ ಸಾಫ್ಟ್ ಕಾರ್ನರ್ ತೋರಿದ್ದು ಮುನಿರತ್ನ ಅವರ ಕೈ ಹಿಡಿದಿದೆ.

  • ಆರ್‌ಆರ್‌ ನಗರದಲ್ಲಿ ಮುನಿರತ್ನಗೆ ಮತದಾರರ ಕೃಪೆ

    ಆರ್‌ಆರ್‌ ನಗರದಲ್ಲಿ ಮುನಿರತ್ನಗೆ ಮತದಾರರ ಕೃಪೆ

    ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಪ್ರತಿಷ್ಠೆಯಾಗಿದ್ದ ರಾಜರಾಜೇಶ್ವರಿ ನಗರದ ಫಲಿತಾಂಶ ಏನಾಗಬಹುದು ಎಂಬುದು ಎಕ್ಸಿಟ್ ಪೋಲ್‍ನಲ್ಲಿ ಬಯಲಾಗಿದೆ. ಆರ್‍ಆರ್ ನಗರದ 9 ವಾರ್ಡ್‍ಗಳಲ್ಲಿ ಪಬ್ಲಿಕ್ ಟಿವಿ ಸಮೀಕ್ಷೆಯಲ್ಲಿ ನಡೆಸಿದ್ದು, ಅದರ ಪ್ರಕಾರ ಈ ಕ್ಷೇತ್ರ ಬಿಜೆಪಿ ತೆಕ್ಕೆಗೆ ಜಾರುವುದು ಬಹುತೇಕ ಪಕ್ಕಾ ಆಗಿದೆ.

    ರಾಜರಾಜೇಶ್ವರಿ ನಗರದ ಮತದಾರರು ಮುನಿರತ್ನ ಅವರ ಜನಪರ ಕೆಲಸಗಳಿಗೆ ಮೆಚ್ಚಿ ಮತ್ತೆ ಮನ್ನಣೆ ನೀಡಿದಂತೆ ಕಾಣುತ್ತಿದೆ. ಈ ಮೂಲಕ ಮೂರನೇ ಬಾರಿಗೆ ಮುನಿರತ್ನ ಅವರು ವಿಧಾನಸಭೆ ಆಯ್ಕೆ ಆಗಲಿದ್ದಾರೆ.

     

     

    ರಾಜ್ಯದ ಗುಪ್ತಚರ ಇಲಾಖೆ ತನ್ನದೇ ಮೂಲಗಳಿಂದ ಈ ಬಾರಿ ಆರ್ ಆರ್ ನಗರದಲ್ಲಿ ಯಾರು ಗೆಲ್ಲಬಹುದು ಎಂಬ ಲೆಕ್ಕ ಹಾಕಿದ್ದು ಬಿಜೆಪಿ ಗೆಲ್ಲಲ್ಲಿದೆ ಎಂದು ಸರ್ಕಾರಕ್ಕೆ ವರದಿ ನೀಡಿದೆ.

    ರಾಜರಾಜೇಶ್ವರಿ ನಗರ
    ಒಟ್ಟು ಮತದಾರರು: 4,62,201
    ಚಲಾವಣೆಯಾದ ಮತ: 2,09,333
    ಶೇಕಡಾವಾರು ಮತ: 45.3%

    ರಾಜರಾಜೇಶ್ವರಿ ಕೃಪೆ ಯಾರಿಗೆ?
    ಮುನಿರತ್ನ, ಬಿಜೆಪಿ ಅಭ್ಯರ್ಥಿ – 48%
    ಕುಸುಮಾ, ಕಾಂಗ್ರೆಸ್ ಅಭ್ಯರ್ಥಿ – 40%
    ಕೃಷ್ಣಮೂರ್ತಿ, ಜೆಡಿಎಸ್ ಅಭ್ಯರ್ಥಿ – 11%
    ಇತರೆ ಅಭ್ಯರ್ಥಿಗಳು – 1%

    ಗುಪ್ತಚರ ಲೆಕ್ಕ
    ಬಿಜೆಪಿ- 47%
    ಕಾಂಗ್ರೆಸ್- 37%
    ಜೆಡಿಎಸ್- 15%
    ಇತರೆ- 1%

  • ಆಸಕ್ತಿ ತೋರದ ಬೆಂಗ್ಳೂರು ಮಂದಿ – ಎಲ್ಲಿ ಎಷ್ಟು ಪ್ರಮಾಣದ ಮತದಾನ ನಡೆದಿದೆ?

    ಆಸಕ್ತಿ ತೋರದ ಬೆಂಗ್ಳೂರು ಮಂದಿ – ಎಲ್ಲಿ ಎಷ್ಟು ಪ್ರಮಾಣದ ಮತದಾನ ನಡೆದಿದೆ?

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ.

    ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ, ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿ 16 ಹುರಿಯಾಳುಗಳ ಭವಿಷ್ಯ ಮತಯಂತ್ರ ಸೇರಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್‍ನ ಜಯಚಂದ್ರ, ಜೆಡಿಎಸ್‍ನ ಅಮ್ಮಾಜಮ್ಮ ಸೇರಿ 15 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ.

    ಏಳು ದಿನಗಳ ಬಳಿಕ ನವೆಂಬರ್ 10ಕ್ಕೆ ಫಲಿತಾಂಶ ಹೊರಬೀಳಲಿದೆ. ರಾಜರಾಜೇಶ್ವರಿ ನಗರ ಪ್ರಚಾರ ಕಣದಲ್ಲಿ ಸಿಡಿದ ಮಾತಿನ ಮತಾಪುಗಳನ್ನು ನೋಡಿದರೆ ಈ ಬಾರಿಯ ಚುನಾವಣೆಯಲಿ ಏನೇನೋ ಆಗಿಬಿಡಬಹುದು ಎಂಬ ಭೀತಿ ಮನೆ ಮಾಡಿತ್ತು. ಆದರೆ ಅದೃಷ್ಟವಶಾತ್ ಅಂಥದ್ದೇನು ನಡೆಯಲಿಲ್ಲ. ಬೆಳಗ್ಗೆ ಏಳು ಗಂಟೆಗೆ ಶುರುವಾದ ಮತದಾನ ಸಂಜೆ ಆರರವರೆಗೂ ನಡೆಯಿತು.

    ಬೆಳಗ್ಗೆ ಮತ್ತು ಸಂಜೆ ಮತದಾನ ಪ್ರಕ್ರಿಯೆ ಒಂಚೂರು ಬಿರುಸು ಪಡೆದಿದ್ದು ಬಿಟ್ಟರೆ ಉಳಿದ ಅವಧಿಯಲ್ಲಿ ಮತದಾನ ಅತ್ಯಂತ ನೀರಸವಾಗಿತ್ತು. ಬೇಸರದ ವಿಷ್ಯ ಅಂದ್ರೆ, ಅತ್ಯಂತ ಸುಶಿಕ್ಷಿತ ಮತದಾರರು ಎನಿಸಿಕೊಂಡ ನಗರ ಪ್ರದೇಶದ ಮಂದಿ, ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಲೇ ಇಲ್ಲ.

    ಮತದಾನದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಆರ್ ಆರ್ ನಗರದಲ್ಲಿ ವೋಟಿಂಗ್ ಪ್ರಮಾಣ ಹೆಚ್ಚಲೇ ಇಲ್ಲ. ಯುವಕರಿಗಿಂತ ಹಿರಿಯರೇ ಮತಗಟ್ಟೆಗೆ ಹೆಚ್ಚಾಗಿ ಧಾವಿಸಿದ್ದರು. ಆಕ್ಸಿಡೆಂಟ್ ಆಗಿ ನಡೆಯಲಾಗದವರೂ ಸಹ ಮತ ಚಲಾಯಿಸಲು ಬಂದಿದ್ದರು.

    ಶಿರಾದಲ್ಲಿ ಪರಿಸ್ಥಿತಿ ಇದಕ್ಕೆ ಸಂಪೂರ್ಣ ತದ್ವಿರುದ್ಧ. ಅಲ್ಲಿನ ಕೊರೋನಾ ನಡ್ವೆಯೂ ಮತದಾರರು ಜೋರು ಉತ್ಸಾಹದಿಂದ ಮತಗಟ್ಟೆಗೆ ಬಂದರು. ಒಟ್ಟಾರೆ ಎರಡೂ ಕ್ಷೇತ್ರಗಳಲ್ಲಿ ಶೇ.51.3ರಷ್ಟು ಮತದಾನ ಆಗಿದೆ.

    ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 45.25% ಮತದಾನ ನಡೆದರೆ 2018ರಲ್ಲಿ 52% ರಷ್ಟು ಮತದಾನ ನಡೆದಿತ್ತು. ಶಿರಾದಲ್ಲಿ ಈ ಬಾರಿ 82.31% ರಷ್ಟು ಮತದಾನ ನಡೆದಿದ್ದರೆ 2018 ರಲ್ಲಿ 84.31% ರಷ್ಟು ಮತದಾನ ನಡೆದಿತ್ತು.

    ಮತ ಪ್ರಮಾಣ ಇಳಿಕೆಗೆ ಕಾರಣವೇನು?
    – ಲಾಕ್‍ಡೌನ್ ವೇಳೆ ಊರಿಗೆ ಹೋದವರು ಸಂಪೂರ್ಣವಾಗಿ ವಾಪಸ್ ಆಗದೇ ಇರುವುದು
    – ಕೊರೋನಾ ಸೋಂಕು ಭೀತಿ
    – ಮತದಾನ ಮಾಡಲು ನಿರ್ಲಕ್ಷ್ಯ ಧೋರಣೆ
    – ಗಾರ್ಮೆಂಟ್ಸ್‌ ಗೆ ರಜೆ ನೀಡದೇ ಇರುವುದು

  • ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

    ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

    – ಲಿಂಬಾವಳಿ, ಅಶೋಕ್ ಜೋಡೆತ್ತುಗಳು

    ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್‍ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

    ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದೀರಿ, ಇದು ನಡೆಯಲ್ಲ. ನಿಮ್ಮನ್ನ ಬಂಡೆ ಎಂದು ಕರೆಯುತ್ತಾರೆ. ನಿಮ್ಮ ಬಳಿ ಬಂಡೆ ಇರಬಹುದು. ಆದರೆ ನಮ್ಮ ಬಳಿ ನಿಮ್ಮಿಂದ ಬಂದಿರುವ ಡೈನಾಮೈಟ್‍ಗಳಿವೆ. ಒಂದೊಂದು ಡೈನಾಮೈಟ್‍ ಗಳು ನಿಮ್ಮನ್ನು ಪುಡಿಪುಡಿ ಮಾಡುತ್ತಾರೆ ಎಂದರು.

    ತಿಹಾರ್ ಜೈಲಿಗೆ ಹೋದಾಗ ಜನ ನೋಡಿದ್ದಾರೆ. ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಹೊರಬಂದಾಗ ಮೆರವಣಿಗೆ, ಕುಂತಾಗ ಮೆರವಣಿಗೆ, ನಿಂತಾಗ ಮೆರವಣಿಗೆ. ಸಾಕು ನಿಮ್ಮ ಮೆರವಣಿಗೆ, ನೀವು ಮನೆಯಲ್ಲಿ ಕೂರಿ ಎಂದು ಜನ ಕೂರಿಸುತ್ತಾರೆ. ಜಾತಿ ರಾಜಕೀಯ ನಡೆಯಲ್ಲ, ಅಭಿವೃದ್ಧಿ ರಾಜಕೀಯದ ಮೂಲಕ ಮುನಿರತ್ನ ಜನರ ಹೃದಯದಲ್ಲಿ ಇದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಮನೆ, ಮನೆಗೆ ಹೋಗಿ ಜನರ ಕಷ್ಟ ಕೇಳಿದ್ದಾರೆ. ಮುನಿರತ್ನ ಅವರನ್ನು ಪ್ರೀತಿಯಿಂದ ನಮ್ಮ ಪಕ್ಷ ಬರಮಾಡಿಕೊಂಡಿದೆ ಎಂದು ಹೊಗಳಿದರು.

    ಸಚಿವ ಆರ್.ಅಶೋಕ್ ಮತ್ತು ಅರವಿಂದ ಲಿಂಬಾವಳಿ ಜೋಡೆತ್ತುಗಳು. ಈ ಜೋಡೆತ್ತುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಮುನಿರತ್ನ ಗೆಲ್ಲಿಸುತ್ತಾರೆ. ರಾಜರಾಜೇಶ್ವರಿ ನಗರದಲ್ಲಿ ಗೆಲ್ಲುವ ಮೂಲಕ ವಿಶ್ವದಾಖಲೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅಭಿವೃದ್ಧಿಯ ಹರಿಕಾರರು, ಸಾಮಾನ್ಯ ಜನರ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಮಾಜಿ ಶಾಸಕ ಮುನಿರತ್ನ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ, ಪ್ರಧಾನಿ ಮೋದಿ, ಯಡಿಯೂರಪ್ಪ ಸರ್ಕಾರದ ಒಳ್ಳೆಯ ಕಾರ್ಯ ಒಪ್ಪಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಎಲ್ಲರನ್ನೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಸಕ್ಕರೆ ಸೇರಿದೆ. ಹಾಲಿನ ಜೊತೆ ಸಕ್ಕರೆ ಸೇರಿದಾಗ ಸಿಹಿ ಕೊಡುತ್ತೆ. ರಾಜರಾಜೇಶ್ವರಿನಗರದಲ್ಲಿ ಹಾಲು-ಸಕ್ಕರೆ ಸೇರಿ ಗೆಲುವಿನ ಸಿಹಿ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಆಪರೇಷನ್ ಕಮಲ ಜೋರಾಗಿದ್ದು, ಆರ್‍ಆರ್ ನಗರದ ಕಾಂಗ್ರೆಸ್ ಕಾರ್ಪೊರೇಟರ್ ಗಳು ಕಮಲ ಪಾಳಯಕ್ಕೆ ಬರುತ್ತಿದ್ದಾರೆ. ಮುನಿರತ್ನ ವಿರುದ್ಧವಿದ್ದ ಕಾಂಗ್ರೆಸ್ ಕಾರ್ಪೋರೇಟರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಚ್‍ಎಂಟಿ ವಾರ್ಡ್ ಕಾಂಗ್ರೆಸ್ ಕಾರ್ಪೋರೇಟರ್ ಆಶಾ ಸುರೇಶ್ ಅವರು ಅಧಿಕೃತವಾಗಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಲಗ್ಗೆರೆ ಮಂಜುಳಾ ನಾರಾಯಣಸ್ವಾಮಿ ಈಗಾಗಲೇ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ ಕಟೀಲ್, ಬಿಜೆಪಿ ಉಪಾಧ್ಯಕ್ಷ ಲಿಂಬಾವಳಿ, ಸಚಿವ ಆರ್. ಅಶೋಕ್ ಹಾಗೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಹ ಭಾಗಿಯಾಗಿದ್ದರು.

    ಐವರು ಕಾರ್ಪೋರೇಟರ್ಸ್ ಬಿಜೆಪಿಗೆ ಸೇರ್ಪಡೆ
    ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಪೋರೇಟರ್ ಗಳಾದ ಜಾಲಹಳ್ಳಿಯ ಶ್ರೀನಿವಾಸ್, ಯಶವಂತಪುರದ ಜಿ.ಕೆ.ವೆಂಕಟೇಶ್, ಹೆಚ್‍ಎಂಟಿ ವಾರ್ಡ್ ನ ಆಶಾ ಸುರೇಶ್, ಲಕ್ಷ್ಮೀದೇವಿನಗರದ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ವಾರ್ಡ್ ಮೋಹನ್ ಕುಮಾರ್, ಲಗ್ಗೆರೆ ವಾರ್ಡ್ ನ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

  • ಸಿದ್ದರಾಮಯ್ಯ ಕಾರು ಚಾಲಕ, ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

    ಸಿದ್ದರಾಮಯ್ಯ ಕಾರು ಚಾಲಕ, ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

    ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಮತ್ತು ಸಿದ್ದರಾಮಯ್ಯನವರ ಕಾರು ಚಾಲಕ, ಪೈಲೆಟ್‌ ವಾಹನದಲ್ಲಿದ್ದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಚುನಾವಣಾಧಿಕಾರಿ ನಾಗರಾಜ ಎನ್‌ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ), 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿ ಪ್ರಕರಣ ದಾಖಲಾಗಿದೆ.

    ಏನಿದು ಪ್ರಕರಣ?
    ಇಂದು ಬೆಳಗ್ಗೆ ಬಿಬಿಎಂಪಿ ಕಚೇರಿಯಲ್ಲಿ ಕುಸುಮಾ ಅವರ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಆಗಮಿಸಿದ್ದರು. ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕಚೇರಿಯ 100 ಮೀಟರ್‌ ದೂರದಲ್ಲಿ ಯಾವುದೇ ವಾಹನಗಳು ಬಾರದಂತೆ ಬ್ಯಾರಿಕೇಡ್‌ ಹಾಕಲಾಗಿತ್ತು.

    ಬ್ಯಾರಿಕೇಡ್‌ ಹಾಕಲಾಗಿದ್ದರೂ ಕಾಂಗ್ರೆಸ್‌ ನಾಯಕರು ಒಳಬರಲು ಪ್ರಯತ್ನಿಸಿದ್ದಾಗ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರ ಬೆಂಗಾವಲು ಪಡೆಯ ಪೈಲಟ್‌ ವಾಹನದಲ್ಲಿದ್ದ ಪೊಲೀಸರು ಕರ್ತವ್ಯ ನಿರತ ಪೊಲೀಸರನ್ನು ತಳ್ಳಿ ಬ್ಯಾರಿಕೇಡ್‌ ಸರಿಸಿ ಬಿಬಿಎಂಪಿ ಕಚೇರಿಗೆ ವಾಹನಗಳನ್ನು ಹೋಗಲು ಅನುವು ಮಾಡಿಕೊಟ್ಟಿದ್ದಾರೆ.

    ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಬೆಂಗಾವಲು ಪಡೆಯ ಪೊಲೀಸರು, ಅ‍ಭ್ಯರ್ಥಿ ಕುಸುಮಾ ಮತ್ತು ಕಾಂಗ್ರೆಸ್‌ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಾಗರಾಜ ಎನ್‌ ದೂರು ನೀಡಿದ್ದರು.