Tag: ರಾಜವರ್ಧನ್

  • ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ

    ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ

    ನ್ಯಾಯಾಧೀಶರ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ದರ್ಶನ್ (Darshan) ವಿಚಾರಣೆಗೆ ಹಾಜರಾಗಿದ್ದ ವೇಳೆ ಜಡ್ಜ್ ಬಳಿ ವಿಷ ಕೇಳಿರುವ ಸನ್ನಿವೇಶ ನಡೆದಿದೆ. ಜೈಲಿನಲ್ಲಿ ದರ್ಶನ್ ಜೀವನ ನರಕವಾಗಿದ್ದು, ಇರಲಾಗದೆ ವಿಷ ಕೊಟ್ಟುಬಿಡಿ ಎಂದು ಜಡ್ಜ್ ಬಳಿ ಬೇಡಿಕೊಂಡಿದ್ದಾರೆ. ದರ್ಶನ್ ಇಂಥಹ ಕೆಟ್ಟ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಅವ್ರ ಈ ಪರಿಸ್ಥಿತಿಗೆ ಬಗ್ಗೆ ದರ್ಶನ್ ಆಪ್ತ ನಟ ರಾಜವರ್ಧನ್ (Rajavardhan) ಬೇಸರ ಹೊರಹಾಕಿದ್ದಾರೆ.

    ಅವರು ಅಲ್ಲಿ ಹೀಗೆಲ್ಲ ಮಾತನಾಡೋದ್ರಿಂದ ಇಲ್ಲಿ ನಾವು ಡಿಸ್ಟರ್ಬ್ ಆಗ್ತೀವಿ ಎಂದು ದರ್ಶನ್ ಸದ್ಯದ ಪರಿಸ್ಥಿತಿ ಕುರಿತು ಮರುಕ ವ್ಯಕ್ತಪಡಿಸಿದರು. ದರ್ಶನ್ ಈ ಥರದ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಅವರಿಗಾಗಿ ಇಲ್ಲಿ ಎಷ್ಟೋ ಜನ್ರು ಪ್ರಾರ್ಥನೆ ಮಾಡ್ತಿದ್ದಾರೆ. ಈಗಿರುವ ಕೆಟ್ಟ ಪರಿಸ್ಥಿತಿ ಮುಂದೆ ಸರಿ ಹೋಗುತ್ತೆ ಆಶಾ ಭಾವನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ

    ಯಾರಿಗೋಸ್ಕರ ಇಷ್ಟೆಲ್ಲ ಮಾಡಬೇಕು ಅಂತ ದರ್ಶನ್‌ಗೆ ಜೈಲಿನಲ್ಲಿ ಅನ್ಸಿರುತ್ತೆ ನಿಜ. ಆದರೆ ಅಂಥಹ ಕೆಟ್ಟ ನಿರ್ಧಾರ ತಗೋಬೇಡಿ. ದರ್ಶನ್ ಹಾಗೆಲ್ಲ ಹೇಳ್ಬಿಟ್ರೆ ಹೊರಗಡೆ ಇರೋ ನಮಗೆ ತುಂಬಾ ಕಷ್ಟ ಆಗುತ್ತೆ. ದರ್ಶನ್ ಅವರು ತುಂಬಾ ಚೆನ್ನಾಗಿ ಬಾಳಿದ ವ್ಯಕ್ತಿ. ಅವರು ಮೂರನೇ ಬಾರಿ ಅಲ್ಲಿಗೆ ಹೋಗಿ ಹೀಗೆ ಕಷ್ಟ ಪಡ್ತಿರೋದು. ಕಷ್ಟ ಸಹಿಸಲಾಗದೆ ಹಾಗೆಲ್ಲ ಮಾತನಾಡಿರ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

    ಅವರ ಬೇರೆ ಮುಖ ಮಾತ್ರ ಹೊರಗಡೆ ಪ್ರೊಜೆಕ್ಟ್ ಆಗ್ತಾ ಬಂದಿದೆ. ಈಗಾಗಲೇ ಅವರು ತುಂಬಾ ಕಷ್ಟ ಪಟ್ಟಿದ್ದಾರೆ. ಅವರು ನೋಡೋಕೆ ಸ್ವಲ್ಪ ಒರಟಾಗಿ ಕಾಣಿಸ್ತಾರೆ. ಆದರೆ ಅವರ ಸ್ವಭಾವ ಮೃದುವಾಗಿದೆ. ನಾವು ದರ್ಶನ್ ಅವರನ್ನು ಹತ್ತಿರದಿಂದ ನೋಡಿದ್ದೇವೆ. ಅವ್ರು ಅಷ್ಟು ಕೆಟ್ಟವರಲ್ಲ ಎಂದಿದ್ದಾರೆ.

  • ಮಾಲ್ಡೀವ್ಸ್‌ನಲ್ಲಿ ರಾಜವರ್ಧನ್‌ – ದಿವ್ಯ ದಂಪತಿ ಆನಿವರ್ಸರಿ ಸೆಲಬ್ರೇಷನ್

    ಮಾಲ್ಡೀವ್ಸ್‌ನಲ್ಲಿ ರಾಜವರ್ಧನ್‌ – ದಿವ್ಯ ದಂಪತಿ ಆನಿವರ್ಸರಿ ಸೆಲಬ್ರೇಷನ್

    ಸ್ಯಾಂಡಲ್‌ವುಡ್‌ನ ನಟ, ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್‌ (Raja Vardan) ಹಾಗೂ ಪತ್ನಿ ದಿವ್ಯ ಮಾಲ್ಡೀವ್ಸ್‌ನ ಕಡಲ ಕಿನಾರೆಯಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನ (Marriage Anniversary) ಆಚರಿಸಿಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವ ಆಚರಣೆಯ ಬ್ಯೂಟಿಫುಲ್ ಮುಮೆಂಟ್ಸ್‌ಳನ್ನ ಕ್ಯಾಮೆರಾದಲ್ಲಿ ಸೆರೆಹಿಡಿದು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಸಿನಿಮಾಗಳ ನಟನೆಯ ಜೊತೆಗೆ ನಿರ್ಮಾಣಕ್ಕೂ ಕೈಹಾಕಿರುವ ರಾಜವರ್ಧನ್‌ ಇದರ ಮಧ್ಯದಲ್ಲಿಯೂ ಫ್ಯಾಮಿಲಿಗೆ ಕೂಡ ಟೈಂ ಕೊಟ್ಟಿದ್ದಾರೆ. ಸ್ಪೆಷಲ್ ಡೇಯನ್ನ ಸ್ಪೆಷಲ್ ಜಾಗದಲ್ಲಿ ಕಳೆಯೋಕೆ ವಿದೇಶಕ್ಕೆ ಹಾರಿದ್ದಾರೆ. ಇದೇ ವರ್ಷ ತೆರೆಕಂಡ ಗಜರಾಮ ಸಿನಿಮಾ ಬಳಿಕ ಜಾವಾ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ ರಾಜವರ್ಧನ್. ಇದನ್ನೂ ಓದಿ: ಉಪೇಂದ್ರಾಗೆ ಮಾಲಾಶ್ರೀ ಮಗಳು ಆರಾಧನಾ ಜೋಡಿ

    ಬಿಚ್ಚುಗತ್ತಿ, ಹಿರಣ್ಯ ಹಾಗೂ ಗಜರಾಮ ಸಿನಿಮಾದಲ್ಲಿ ನಟಿಸಿರುವ ರಾಜವರ್ಧನ್ ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಹೊಸ ಪ್ರಯತ್ನ ಮಾಡಲು ಮುಂದಾಗಿದ್ದಾರೆ. ಸದ್ಯ ಮಾಲ್ಡೀವ್ಸ್‌ನ (Maldives) ಸುಂದರ ತಾಣದಲ್ಲಿ ಪತ್ನಿ ಜೊತೆ ಆ್ಯನಿವರ್ಸರಿ ಸೆಲಬ್ರೇಷನ್ ಮಾಡ್ತಿದ್ದಾರೆ. ಇದನ್ನೂ ಓದಿ: ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?

  • ನ್ಯಾಯಾಂಗದ ಮೇಲೆ ನಂಬಿಕೆಯಿದೆ, ದರ್ಶನ್ ಆಚೆ ಬರುತ್ತಾರೆ: ನಟ ರಾಜವರ್ಧನ್

    ನ್ಯಾಯಾಂಗದ ಮೇಲೆ ನಂಬಿಕೆಯಿದೆ, ದರ್ಶನ್ ಆಚೆ ಬರುತ್ತಾರೆ: ನಟ ರಾಜವರ್ಧನ್

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದ ಬಗ್ಗೆ ಒಬ್ಬೊಬ್ಬರೇ ನಟ, ನಟಿಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈಗ ಡಿಂಗ್ರಿ ನಾಗರಾಜ್ ಪುತ್ರ ನಟ ರಾಜವರ್ಧನ್ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ನಟನೆಯ ‘ವಿಐಪಿ’ ಚಿತ್ರದ ಸಾಂಗ್

    ಈ ಪ್ರಕರಣದ ಬಗ್ಗೆ ಬೇಜಾರಿದೆ. ನ್ಯಾಯ ಸಿಕ್ಕೇ ಸಿಗುತ್ತೆ ಎಂಬ ನಂಬಿಕೆಯಿದೆ. ದರ್ಶನ್ ಅಣ್ಣ ಹೊರಗಡೆ ಬಂದೇ ಬರುತ್ತಾರೆ ಎಂಬ ನಂಬಿಕೆ ಇದೆ. ಸೋಷಿಯಲ್ ಮೀಡಿಯಾ ಅಂದ್ಮೇಲೆ ಪರ ಮತ್ತು ವಿರೋಧ ಇದ್ದೇ ಇರುತ್ತದೆ.ಫ್ಯಾಮಿಲಿ ಅವರಿಗೆ ಸಾಕಷ್ಟು ನೆಗೆಟಿವ್ ಕಾಮೆಂಟ್ಸ್ ಬಂದೇ ಬರುತ್ತದೆ. ಅದನ್ನು ನಾವು ಎದುರಿಸಬೇಕು ಎಂದು ರಾಜವರ್ಧನ್ (Actor Rajavardan) ಮಾತನಾಡಿದ್ದಾರೆ.

    ತುಂಬಾ ಟ್ರಾವೆಲ್ ಮಾಡಿದ್ದೀನಿ ದರ್ಶನ್ ಅಣ್ಣ ಜೊತೆ ಬೆಸ್ಟ್ ದಿನಗಳನ್ನು ಕಳೆದಿದ್ದೇವೆ. ಆ್ಯಕ್ಷನ್ ಸೀನ್ಸ್ ಮಾಡುವ ಬಗ್ಗೆ ಸಲಹೆ ನೀಡಿದರು. ಒಂದು ಸಲ ನನಗೆ ಕಾಲಿಗೆ ಪೆಟ್ಟಾದಾಗ ಚೆನ್ನಾಗಿ ನೋಡಿಕೊಂಡಿದ್ದರು. ಲಾಕ್‌ಡೌನ್ ಆಗಿದ್ರು ಮನೆಗೆ ಡಾಕ್ಟರ್‌ನ ಕಳುಹಿಸಿದ್ದರು. ಈಗ ಅವರನ್ನು ನೋಡಿದ್ರೆ ನಿಜಕ್ಕೂ ಬೇಜಾರಾಗುತ್ತದೆ ಎಂದು ನಟ ಮಾತನಾಡಿದ್ದಾರೆ.

    ನ್ಯಾಯಾಂಗದ (Court) ಮೇಲೆ ನಂಬಿಕೆಯಿದೆ. ಲಕ್ಷಾಂತರ ಅಭಿಮಾನಿಗಳ ಪ್ರಾರ್ಥನೆಯಿದೆ. 100% ದರ್ಶನ್ ಹೊರಗಡೆ ಬರುತ್ತಾರೆ. ಬಂದು ಇಂಡಸ್ಟ್ರಿ ಮೊದಲು ಹೇಗೆ ಇತ್ತೋ ಹಾಗೆ ಆಗುತ್ತದೆ. ದರ್ಶನ್ ಅಣ್ಣ ಇದ್ದಿದ್ರೆ ನನ್ನ ಸಿನಿಮಾಗೆ ತುಂಬಾ ಸಪೋರ್ಟ್ ಮಾಡ್ತಿದ್ದರು. ದರ್ಶನ್ ಅಣ್ಣನ ಸಾಕಷ್ಟು ಸಿನಿಮಾದಲ್ಲಿ ನಟಿಸುವ ಅವಕಾಶ ಇತ್ತು. ಮುಂದೆ ಅವರ ಜೊತೆ ನಟಿಸ್ತಿವೋ ಬಿಡ್ತಿವೋ ಗೊತ್ತಿಲ್ಲ ಆದರೆ ಆಚೆ ಬಂದರೆ ಅಷ್ಟೇ ಸಾಕು ಎಂದು ರಾಜವರ್ಧನ್ ಮಾತನಾಡಿದ್ದಾರೆ.

  • ‘ಹಿರಣ್ಯ’ನ ಹೊಸ ಸಾಂಗ್ ರಿಲೀಸ್: ಹೃದಯ ಮೀಟುವ ಹೊಸ ಹಾಡು ಕೇಳಿ

    ‘ಹಿರಣ್ಯ’ನ ಹೊಸ ಸಾಂಗ್ ರಿಲೀಸ್: ಹೃದಯ ಮೀಟುವ ಹೊಸ ಹಾಡು ಕೇಳಿ

    ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ (Rajavardhan) ನಟನೆಯ ಹಿರಣ್ಯ (Hiranya) ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ.

    ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿದೆ.

  • ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

    ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

    ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ (Rajavardan) ಇದೀಗ ಹಿರಣ್ಯ (Hiranya Film) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ‘ಪದೇ ಪದೇ’ (Padhe Padhe) ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ.

    ಈ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವೇದಾಸ್ ಇನ್ಫಿನಿಟಿ ಪಿಚ್ಚರ್ ಬ್ಯಾನರ್‌ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಮನೆಯ ಮೇಲೆ ಗುಂಡಿನ ದಾಳಿ- ಸಲ್ಮಾನ್ ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು

    ‘ಬಿಗ್ ಬಾಸ್’ (Bigg Boss) ಖ್ಯಾತಿಯ ದಿವ್ಯಾ ಸುರೇಶ್ (Divya Suresh) ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ಅವರು ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

    ‘ಹಿರಣ್ಯ’ ಸಿನಿಮಾಗೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಈ ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಹಿರಣ್ಯ’ ಟೀಮ್ ನಿರತರಾಗಿದ್ದಾರೆ.

  • ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ರಿಲೀಸ್

    ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ರಿಲೀಸ್

    ಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.  ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಉಪ ಮೇಯರ್ ಮೋಹನ್ ರಾಜು ಟ್ರೈಲರ್ ರಿಲೀಸ್ ಮಾಡಿ  ಈ ಟೈಟಲ್  ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.  ಈ ಚಿತ್ರದಲ್ಲಿ  ಜಯಂತ್ ಕಾಯ್ಕಿಣಿ ಅವರು 3 ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಮನೋಮೂರ್ತಿ ಚಿತ್ರದಲ್ಲಿ 5 ಹಾಡಿದ್ದು, ಕ್ಯಾಮೆರಾ ವರ್ಕ್ ಅದ್ಭುತವಾಗಿ ಮೂಡಿಬಂದಿದೆ. ಪ್ರಣಯಂ ಅಂದ್ರೆ ಲವ್, ಅದನ್ನಿಲ್ಲಿ  ಢಿಫರೆಂಟಾಗಿ ಹೇಳಿದ್ದಾರೆ. ಖಂಡಿತ ಈ ವರ್ಷದ ಮೊದಲ ಹಿಟ್ ಸಿನಿಮಾ ಆಗುತ್ತೆ ಎಂದರು. ನಂತರ ಜಯಂತ್ ಕಾಯ್ಕಿಣಿ ಮಾತನಾಡಿ ಪರಮೇಶ್ ತುಂಬಾ ಜೋಷ್ ಇರುವಂಥ ಪ್ರೊಡ್ಯೂಸರ್ ಸಿನಿಮಾಗಾಗಿ ತುಂಬಾ ಕಷ್ಟಪಡುತ್ತಾರೆ. ಮನೋಮೂರ್ತಿ ಹಾಗೂ ನಮ್ಮ ದಾಂಪತ್ಯಕ್ಕೆ 17 ವರ್ಷ ಆಯ್ತು. ಆಗಿದ್ದ ಕುತೂಹಲ, ಚಡಪಡಿಕೆ ಈಗಲೂ ಇದೆ. ಹಿಂದೆ ಪರಮೇಶ್ ಅವರ ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೂ ನಾನೇ ಸಾಂಗ್ ಬರೆದಿದ್ದೆ. ಇದರಲ್ಲಿ 3 ಹಾಡನ್ನು ಬರೆದಿದ್ದೇನೆ ಎಂದು ಹೇಳಿದರು.  ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ನಾನು ಈ ಸ್ಕ್ರಿಪ್ಟ್ ಮಾಡಿಕೊಂಡು ಬಂದಾಗ ನಿರ್ಮಾಪಕರು  ತುಂಬಾ ಚೆನ್ನಾಗಿ ಬಂದಿದೆ ಎಂದು ಖುಷಿಯಿಂದ ಹಗ್ ಮಾಡಿದರು.  ಸುಮಾರು ಲೊಕೇಶನ್ ಗಳನ್ನು ನೋಡಿ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ  ಲೊಕೇಶನ್ ಸಿಕ್ತು.  ಎಲ್ಲಾ ಲೆಜೆಂಡರಿಗಳ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಬಂದಿದೆ. ನಾಗೇಶ್ ನನಗೆ ಇನ್ನೊಂದು ಕಣ್ಣಿದ್ದ ಹಾಗೆ. ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಜನ  ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

    ನಾಯಕ ರಾಜವರ್ಧನ್ ಮಾತನಾಡುತ್ತ ಬಿಚ್ಚುಗತ್ತಿಗೂ ಮುಂಚೆಯೇ ಪರಮೇಶ್ ಈ ಕಥೆಯನ್ನು ಹೇಳಿದರು .ಇವತ್ತಿನ ಫ್ಯಾಮಿಲಿಗಳಲ್ಲಿ ಈ ಥರದ ಘಟನೆಗಳು ನಡೆಯುತ್ತಲೇ ಇವೆ. ಅಂಥಾ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ನಾವೀ ಸಿನಿಮಾ ಮಾಡಿದ್ದೇವೆ. ಬಿ.ಸಿ. ಸೆಂಟರ್ ಆಡಿಯನ್ಸ್ ಗಳಿಗೆ ಬೇಕಾದ ಕಾನ್ಸೆಪ್ಟ್  ಚಿತ್ರದಲ್ಲಿದೆ. ಆಗಿನ್ನೂ ವಿದೇಶದಿಂದ ಬರುವ ಗೌತಂ ಎಂಬ  ಪಾತ್ರ ಮಾಡಿದ್ದೇನೆ. ಆತ 5-10 ದಿನದಲ್ಲಿ  ಸ್ವಂತ ರಿಲೇಶನ್ ನಲ್ಲೇ ಹುಡುಗಿಯೊಬ್ಬಳನ್ನು ಮದುವೆಯಾಗ್ತಾನೆ. ಆನಂತರ  15-20 ದಿನಗಳಲ್ಲಿ ನಡೆಯುವ ಕಥೆ, ನನ್ನದು ತುಂಬಾ ಇನ್ ಟೆನ್ಸಿವ್ ಆಗಿರುವ ಪಾತ್ರ. ಮನೋಮೂರ್ತಿ, ಜಯಂತ್ ಕಾಯ್ಕಿಣಿ ಅವರಂಥ ಲೆಜೆಂಡರಿಗಳ‌ ಜೊತೆ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದರು.

    ನಿರ್ಮಾಪಕ ಪರಮೇಶ್ ಮಾತನಾಡುತ್ತಾ, ನಾನು ಈವರೆಗೆ 9 ಸಿನಿಮಾ ಮಾಡಿದ್ದೇನೆ. ಆದರೂ ಗಾಂಧಿನಗರದಲ್ಲಿ ಪ್ರೊಡ್ಯೂಸರ್ ಗೆ ನೆಲೆಯೆ ಇಲ್ಲದಾಗಿದೆ. ನಮ್ಮದು ತುಂಬಾ ಕ್ರಿಟಿಕಲ್ ಫೀಲ್ಡ್. ಈಗ ಸಿನಿಮಾ ಹೇಗೋ ಮಾಡಿಬಿಡಬಹುದು. ರಿಲೀಸ್ ಮಾಡೋದು ತುಂಬಾ ಕಷ್ಟ. ರಿಲೀಸ್ ಡೇಟ್ ಅನೌನ್ಸ್ ಮಾಡಲಿಕ್ಕೇ ಭಯವಾಗುತ್ತೆ. ಬಿಡುಗಡೆಗೇ 2ಕೋಟಿ ಬೇಕಾಗುತ್ತೆ, ಎಲ್ಲಿಂದ ತರೋದು. ಹಾಗೂ, ರಿಲೀಸ್ ಮಾಡಲು ಮೂರು ಸಲ ಟ್ರೈ ಮಾಡಿದೆ. ಆಗಲಿಲ್ಲ. ಈಗ ಧೈರ್ಯ ಮಾಡಿದ್ದೇನೆ. ಇಂಡಸ್ಟ್ರಿಗೆ ಒಂದೊಳ್ಳೆ ಸಿನಿಮಾ ಕೊಟ್ಟಿದ್ದೇನೆ. ಜನ ಕೈ ಹಿಡಿಯುತ್ತಾರೆಂಬ ನಂಬಿಕೆಯಿದೆ ಎಂದರು.

     

    ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಚಿತ್ರದಲ್ಲಿ ಗೋವಿಂದೇಗೌಡ,  ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಉಳಿದ ಪಾತ್ರಗಳಲ್ಲಿ  ನಟಿಸಿದ್ದಾರೆ. ಮನೋಮೂರ್ತಿ ಅವರ  ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ ಚಿತ್ರಕ್ಕಿದೆ.

  • ‘ಗಜರಾಮ’ ಟೀಸರ್ ರಿಲೀಸ್- ಆ್ಯಕ್ಷನ್ ಮೂಡ್‌ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್

    ‘ಗಜರಾಮ’ ಟೀಸರ್ ರಿಲೀಸ್- ಆ್ಯಕ್ಷನ್ ಮೂಡ್‌ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್

    ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ (Rajavardhan) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ‘ಗಜರಾಮ’ (Gajarama) ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಜ.14ರಂದು ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್‌ಆರ್‌ವಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

    ನಾಯಕ ರಾಜವರ್ಧನ್ ಮಾತನಾಡಿ, ತುಂಬಾ ಎಮೋಷನಲ್ ಜರ್ನಿ. ತುಂಬಾ ಕಂಟೆಂಟ್ ಇದೆ ಮಾತನಾಡುವುದು. ಅದನ್ನು ಟ್ರೈಲರ್ ಲಾಂಚ್‌ನಲ್ಲಿ ಮಾತನಾಡುತ್ತೇನೆ. ‘ಗಜರಾಮ’ ಸಬ್ಜೆಕ್ಟ್. ಈ ರೀತಿ ಕಮರ್ಷಿಯಲ್ ಇರುವ ಎಲಿಮೆಂಟ್‌ನಲ್ಲಿ ನಾನು ಸಣ್ಣ ವಯಸ್ಸಿನಲ್ಲಿ ಬೇರೆ ಹೀರೋ ನೋಡಿ ಸಿಳ್ಳೆ ಚಪ್ಪಾಳೆ ಹೊಡೆದು ಎಂಜಾಯ್ ಮಾಡುತ್ತಿದ್ದೆ. ಇವತ್ತು ನನ್ನನ್ನು ನಾನು ಸ್ಕ್ರೀನ್ ಮೇಲೆ ನೋಡಿಕೊಂಡಿದ್ದು ಖುಷಿಯಾಗಿದೆ. ನಮ್ಮ ತಂದೆ ಟೀಸರ್ ನೋಡಿ ಖುಷಿಪಡುತ್ತಾರೆ. ಇಡೀ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ:ಯುವ ಪ್ರತಿಭೆ ವಿನಯ್- ದಿಶಾ ರಮೇಶ್ ನಟನೆಯ ‘ದಿ’ ಸಿನಿಮಾದ ಸಾಂಗ್‌ ಔಟ್

    ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಗಜರಾಮ ಟೀಸರ್ ನೋಡಿದ್ದೀರಾ? ಚಿತ್ರದಲ್ಲಿ ಆ್ಯಕ್ಷನ್, ಸೆಂಟಿಮೆಂಟ್, ಲವ್ ಕೂಡ ಇದೆ. ಮೂರು ಶೇಡ್‌ನಲ್ಲಿ ನಾಯಕ ಕಾಣಿಸಿಕೊಳ್ಳುತ್ತಾರೆ. ಒಂದು ಪೈಲ್ವಾನ್ ಪಾತ್ರ. ಮತ್ತೊಂದು ಸೆಂಟಿಮೆಂಟ್ ಪಾತ್ರ ಅದಕ್ಕೆ ರಾಮ. ಮಗದೊಂದು ನಾಯಕಿನ್ನು ರಕ್ಷಿಸುವ ಪಾತ್ರ, ಅದು ರಾವಣ. ಹೀಗೆ ಮೂರು ರೀತಿ ಶೇಡ್ ಇದೆ. ಇದು ವಿಭಿನ್ನ ಸಿನಿಮಾ. ಅದಕ್ಕಾಗಿ ಚಿತ್ರದ ಮ್ಯೂಸಿಕ್ ಮತ್ತು ಹಾಡುಗಳು ವಿಭಿನ್ನವಾಗಿ ಮಾಡಿದ್ದೇವೆ.

    ನಿರ್ದೇಶಕ ಸುನೀಲ್ ಕುಮಾರ್ ಮಾತನಾಡಿ, ಟೀಸರ್ ಇಷ್ಟು ಅದ್ಭುತವಾಗಿ ಬರಲು ಕಾರಣ. ನಿರ್ಮಾಪಕರು. ಇವರು ನನ್ನ ಮೇಲೆ ನಂಬಿಕೆ ಇಟ್ಟು ಪ್ರಾಜೆಕ್ಟ್ ಕೊಟ್ಟಿದ್ದರು. ಆ ನಂಬಿಕೆ ಉಳಿಸಿಕೊಂಡಿದ್ದೇನೆ ಎಂದುಕೊಂಡಿದ್ದೇನೆ. ರಾಜವರ್ಧನ್ ಸರ್ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ರಾಮ ಪಾತ್ರಕ್ಕೆ ಪರಿಪೂರ್ಣ ಜೀವ ತುಂಬಿದ್ದಾರೆ. ‘ಶಿಷ್ಯ’ ನಟ ದೀಪಕ್ (Deepak) ಪೊಲೀಸ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಚಿತ್ರತಂಡಕ್ಕೆ ಡೈರೆಕ್ಟರ್ ಸುನೀಲ್ ಮೆಚ್ಚುಗೆ ಸೂಚಿಸಿದ್ದಾರೆ.

    ನಾಯಕಿ ತಪಸ್ವಿನಿ ಮಾತನಾಡಿ, ನನ್ನದು ಇದು ಎರಡನೇ ಸಿನಿಮಾ. ಚಿತ್ರರಂಗಕ್ಕೆ ನಾನು ಹೊಸಬಳು. ನನ್ನ ಮೊದಲ ಚಿತ್ರ ರಿಷಬ್ ಶೆಟ್ಟಿ ಜೊತೆ ಮಾಡಿರುವುದಕ್ಕೆ ನಾನು ಲಕ್ಕಿ. ‘ಹರಿಕಥೆ ಅಲ್ಲ ಗಿರಿಕಥೆ’ ಬ್ಯೂಟಿಫುಲ್ ಜರ್ನಿಯಾಗಿತ್ತು. ‘ಗಜರಾಮ’ ಸಿನಿಮಾಗೆ ಬಂದಾಗ ಸುನಿಲ್ ಸರ್ ಹೇಳಿದ ಕಥೆ ಕೇಳಿ ಖುಷಿಯಾಯ್ತು. ಇಡೀ ತಂಡ ನನಗೆ ಕಂಫರ್ಟ್ ಕೊಟ್ಟಿದೆ. ಇಡೀ ತಂಡ ಎಲ್ಲಾ ರೀತಿಯಿಂದಲೂ ಬೆಂಬಲ ನೀಡಿದ್ದಾರೆ. ಟೀಸರ್ ನೋಡಿ ಪಾಸಿಟಿವ್ ಎನರ್ಜಿ ಬಂದಿದೆ ಎಂದರು.

    ಆ್ಯಕ್ಷನ್ ಅಂಶಗಳಿಂದ ಕೂಡಿರುವ ಟೀಸರ್‌ನಲ್ಲಿ ಪ್ರೇಮಕಥೆಯನ್ನು ಅನಾವರಣ ಮಾಡಲಾಗಿದೆ. ಭರ್ಜರಿ ಆ್ಯಕ್ಷನ್ಸ್ ಮೂಲಕ ರಾಜವರ್ಧನ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್ ನಟಿಸಿದ್ದಾರೆ. ಕಬೀರ್ ಸಿಂಗ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನೀಲ್ ಕುಮಾರ್ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

    ಆ್ಯಕ್ಷನ್ ಮಾಸ್ ಮನರಂಜನೆಯ ಸಿನಿಮಾ ಆಗಿರುವ ‘ಗಜರಾಮ’ (Gajarama) ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

  • ರಾಜವರ್ಧನ್ ನಟನೆಯ ‘ಗಜರಾಮ’ ಚಿತ್ರದ ಟೀಸರ್ ರಿಲೀಸ್

    ರಾಜವರ್ಧನ್ ನಟನೆಯ ‘ಗಜರಾಮ’ ಚಿತ್ರದ ಟೀಸರ್ ರಿಲೀಸ್

    ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ‘ಗಜರಾಮ’ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ನಿನ್ನೆ ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ಬಿಡುಗಡೆ ಬಳಿಕ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಮಾಹಿತಿ ಹಂಚಿಕೊಂಡಿದೆ.

    ನಾಯಕ ರಾಜವರ್ಧನ್ ಮಾತನಾಡಿ, ತುಂಬಾ ಎಮೋಷನಲ್ ಜರ್ನಿ.  ತುಂಬಾ ಕಂಟೆಂಟ್ ಇದೆ ಮಾತನಾಡುವುದು. ಅದನ್ನು ಟ್ರೇಲರ್ ಲಾಂಚ್ ನಲ್ಲಿ ಮಾತನಾಡುತ್ತೇನೆ. ಗಜರಾಮ ಸಬ್ಜೆಕ್ಟ್. ಈ ರೀತಿ ಕಮರ್ಷಿಯಲ್ ಇರುವ ಎಲಿಮೆಂಟ್ ನ್ನು ನಾನು ಸಣ್ಣ ವಯಸ್ಸಿನಲ್ಲಿ ಬೇರೆ ಹೀರೋ ನೋಡಿ ಸಿಳ್ಳೆ ಚಪ್ಪಾಳೆ ಹೊಡೆದು ಎಂಜಾಯ್ ಮಾಡುತ್ತಿದ್ದೆ. ಇವತ್ತು ನನ್ನನ್ನು ನಾನು ಸ್ಕ್ರೀನ್ ಮೇಲೆ ನೋಡಿಕೊಂಡಿದ್ದು ಖುಷಿಯಾಗಿದೆ. ನಮ್ಮ ತಂದೆ ಟೀಸರ್ ನೋಡಿ ಖುಷಿಪಡುತ್ತಾರೆ. ಇಡೀ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ ಎಂದು ತಿಳಿಸಿದರು. ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಗಜರಾಮ ಟೀಸರ್ ನೋಡಿದ್ದೀರಾ? ನಮ್ಮ ಹೀರೋ ಇದು ಆಕ್ಷನ್ ಅಂತಾರೆ. ಆದರೆ ಆಕ್ಷನ್ ಇದೆ. ಸೆಂಟಿಮೆಂಟ್, ಲವ್ ಕೂಡ ಇದೆ. ಮೂರು ಶೇಡ್ ನಲ್ಲಿ ನಾಯಕ ಕಾಣಿಸಿಕೊಳ್ಳುತ್ತಾರೆ. ಒಂದು ಪೈಲ್ವಾನ್ ಪಾತ್ರ. ಮತ್ತೊಂದು ಸೆಂಟಿಮೆಂಟ್ ಪಾತ್ರ ಅದಕ್ಕೆ ರಾಮ. ಮಗದೊಂದು ನಾಯಕಿನ್ನು ರಕ್ಷಿಸುವ ಪಾತ್ರ. ಅದು ರಾವಣ. ಹೀಗೆ ಮೂರು ರೀತಿ ಶೇಡ್ ಇದೆ. ಇದು ವಿಭಿನ್ನ ಸಿನಿಮಾ. ಅದಕ್ಕಾಗಿ ಚಿತ್ರದ ಮ್ಯೂಸಿಕ್ ಮತ್ತು ಹಾಡುಗಳು ವಿಭಿನ್ನವಾಗಿ ಮಾಡಿದ್ದೇವೆ. 2024ರಲ್ಲಿ ಈ ಚಿತ್ರ ಗಜರಾಮ ಸೂಪರ್ ಹಿಟ್ ಆಗಬೇಕು ಎಂದರು.

    ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ಟೀಸರ್ ಇಷ್ಟು ಅದ್ಭುತವಾಗಿ ಬರಲು ಕಾರಣ. ನಿರ್ಮಾಪಕರು. ಇವರು ನನ್ನ ಮೇಲೆ ನಂಬಿಕೆ ಇಟ್ಟು ಪ್ರಾಜೆಕ್ಟ್ ಕೊಟ್ಟಿದ್ದರು. ಆ ನಂಬಿಕೆ ಉಳಿಸಿಕೊಂಡಿದ್ದೇನೆ ಎಂದುಕೊಂಡಿದ್ದೇನೆ. ರಾಜವರ್ಧನ್ ಸರ್ ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ರಾಮ ಪಾತ್ರಕ್ಕೆ ಪರಿಪೂರ್ಣ ಜೀವ ತುಂಬಿದ್ದಾರೆ. ದೀಪಕ್ ಸರ್ ಪೊಲೀಸ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಚಂದ್ರು ಸರ್ ಕ್ಯಾಮೆರಾವರ್ಕ್, ಮನೋಮೂರ್ತಿ ಸರ್ ಸಂಗೀತ, ಧನು ಮಾಸ್ಟರ್ ಕೊರಿಯೋಗ್ರಫಿ ಅದ್ಭುತವಾಗಿದೆ ಎಂದರು. ನಾಯಕಿ ತಪಸ್ವಿನಿ ಮಾತನಾಡಿ, ನನ್ನದು ಇದು ಎರಡನೇ ಸಿನಿಮಾ. ಇಂಡಸ್ಟ್ರೀಗೆ ನಾನು ಹೊಸಬಳು. ನನ್ನ ಮೊದಲ ಚಿತ್ರ ರಿಷಬ್ ಸರ್ ಜೊತೆ ಮಾಡಿರುವುದಕ್ಕೆ ನಾನು ಲಕ್ಕಿ. ಹರಿಕಥೆ ಅಲ್ಲ ಗಿರಿಕಥೆ ಬ್ಯೂಟಿಫುಲ್ ಜರ್ನಿಯಾಗಿತ್ತು. ಗಜರಾಮ ಸಿನಿಮಾಗೆ ಬಂದಾಗ ಸುನಿಲ್ ಸರ್ ಹೇಳಿದ ಕಥೆ ಕೇಳಿ ಖುಷಿಯಾಯ್ತು. ಇಡೀ ತಂಡ ನನಗೆ  ಕಂಪರ್ಟ್ ಕೊಟ್ಟಿದೆ. ಇಡೀ ತಂಡ ಎಲ್ಲಾ ರೀತಿಯಿಂದಲೂ ಸಪೋರ್ಟ್ ಮಾಡಿದ್ದಾರೆ. ಟೀಸರ್ ನೋಡಿ ಪಾಸಿಟಿವ್ ಎನರ್ಜಿ ಬಂದಿದೆ ಎಂದರು.

    ಆಕ್ಷನ್ ಅಂಶಗಳಿಂದ ಕೂಡಿರುವ ಟೀಸರ್ ನಲ್ಲಿ ಪ್ರೇಮಕಥೆಯನ್ನು ಅನಾವರಣ ಮಾಡಲಾಗಿದೆ. ಭರ್ಜರಿ ಆಕ್ಷನ್ಸ್ ಮೂಲಕ ರಾಜವರ್ಧನ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ ನಟಿಸಿದ್ದಾರೆ. ಕಬೀರ್ ಸಿಂಗ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

    ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

  • ‘ಹಿರಣ್ಯ’ ಟೀಸರ್‌ ಔಟ್- ಮ್ಯಾಸೀವ್ ಸ್ಟಾರ್ ರಾಜವರ್ಧನ್ ಭರ್ಜರಿ ಆ್ಯಕ್ಷನ್

    ‘ಹಿರಣ್ಯ’ ಟೀಸರ್‌ ಔಟ್- ಮ್ಯಾಸೀವ್ ಸ್ಟಾರ್ ರಾಜವರ್ಧನ್ ಭರ್ಜರಿ ಆ್ಯಕ್ಷನ್

    ಬಿಚ್ಚುಕತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ ‘ಹಿರಣ್ಯ’ (Hiranya Film) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಹಿರಣ್ಯ ಸಿನಿಮಾದ ಮಾಸ್ ಟೀಸರ್ ರಿಲೀಸ್ ಆಗಿದೆ. ಭರ್ಜರಿ ಆಕ್ಷನ್ ಮೂಲಕ ರಾಜವರ್ಧನ್ ಅಬ್ಬರಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ‘ಹಿರಣ್ಯ’ ಟೀಸರ್ ಬಿಡುಗಡೆ ಮಾಡಲಾಯಿತು. ಲಹರಿ ಸಂಸ್ಥೆಯ ವೇಲು, ರಾಜವರ್ಧನ್ (Rajavardhan) ಸಿನಿಮಾಗೆ ಸಾಥ್ ಕೊಟ್ಟರು. ಈ ವೇಳೆ, ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಪ್ರವೀಣ್ ಅವ್ಯುಕ್ತ ಮಾತನಾಡಿ, ಮುಹೂರ್ತದಲ್ಲಿ ಹೇಳಿದ್ದೆ ಕೆಲಸ ಆದ್ಮೇಲೆ ನಿಮ್ಮ ಮುಂದೆ ಬರುತ್ತಿವೆ ಎಂದಿದ್ದೆ. ಕೆಲಸ ಆಗಿದೆ ಬಂದಿದ್ದೇವೆ. ಈ ಮೂವೀ ಎಂಜಾಯ್ ಮಾಡಲು ಮಾತೇ ಬರುತ್ತಿಲ್ಲ. ರಾಜವರ್ಧನ್ ಅವರು ರಾಣಾ ಡೆಡ್ಲಿ ಕ್ಯಾರೆಕ್ಟರ್ ಮಾಡಿದ್ದಾರೆ. ಟೆಸ್ಟ್ ಲುಕ್ ಮಾಡಿದೆವು. ಇಷ್ಟವಾಯ್ತು. ಅದ್ಭುತವಾಗಿ ಅವರು ಫರ್ಪಾಮ್ ಮಾಡಿದ್ದಾರೆ. ಇಡೀ ತಂಡದ ಬೆಂಬಲದಿಂದ ಸಿನಿಮಾ ತಯಾರಾಗಿದೆ ಎಂದು ತಿಳಿಸಿದರು.

    ನಟ ರಾಜವರ್ಧನ್ ಮಾತನಾಡಿ, ಹಿರಣ್ಯ ಎರಡು ವರ್ಷದ ಹಿಂದೆ ಪ್ರವೀಣ್ ಬಂದು ಕಥೆ ಹೇಳಿದ್ದರು. ಬಿಚ್ಚುಕತ್ತಿಯಂತಹ ದೊಡ್ಡ ಸಿನಿಮಾ ಮಾಡಿದ್ದೆ. ಆ ಸಮಯದಲ್ಲಿ ಕಥೆ ಆಯ್ಕೆ ಮಾಡಿಕೊಳ್ಳುವುದು ದೊಡ್ಡ ಚಾಲೆಂಜ್. ಪ್ರವೀಣ್ ಕಥೆ ಹೇಳಿದಾಗ ಒಂದು ಪಾಯಿಂಟ್ ಇಷ್ಟು ವರ್ಷವಾಯ್ತು. ಕಿರುಚಿತ್ರ ಮಾಡಿ ನೀವು ಈ ಮಟ್ಟಕ್ಕೆ ಬಂದಿದ್ದೀರಾ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು. ಕಥೆಯನ್ನು ನೀವು ನಂಬಿದ್ದೀರಾ. ನಿರ್ಮಾಪಕರು ನಂಬಿದ್ದಾರೆ. ಒಂದೊಳ್ಳೆ ಔಟ್ ಫುಟ್ ಬಂದಿದೆ. ಆದಷ್ಟು ಬೇಗ ಸಿನಿಮಾ ತೆರೆಗೆ ಬರಲಿದೆ ಎಂದರು. ಇದನ್ನೂ ಓದಿ:ನಮ್ರತಾ ಜೊತೆಗಿನ ಫ್ಲರ್ಟ್ ಬಗ್ಗೆ ಸ್ನೇಹಿತ್‌ಗೆ ಕುಟುಕಿದ ಮೈಕಲ್

    ನಿರ್ಮಾಪಕ ವಿಜಯ್ ಗೌಡ ಮಾತನಾಡಿ, ಡೈರೆಕ್ಟರ್ ಪ್ರವೀಣ್ ನಮ್ಮನ್ನು ಅಪ್ರೋಚ್ ಆದರು. ಆ ನಂತರ ಮ್ಯಾಸೀವ್ ಸ್ಟಾರ್ ರಾಜವರ್ಧನ್ ಅವರನ್ನು ಅಪೋರ್ಚ್ ಮಾಡಿದೆವು. ಆ ನಂತರ ತಂಡ ಕಟ್ಟಿಕೊಂಡು ಸಿನಿಮಾ ಶುರು ಮಾಡಿದೆವು. ರಾಜವರ್ಧನ್ ಹಾಗೂ ಇಡೀ ತಂಡ ಬೆಂಬಲದಿಂದ ಸಿನಿಮಾ ಇಲ್ಲಿವರೆಗೆ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ:‘ಕಾಂತಾರ’ ಚಿತ್ರಕ್ಕೆ ಮಹೂರ್ತ : ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಹಲವು ಶಾರ್ಟ್ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್ ಅವ್ರ‍್ಯುಕ್ತ್ ಹಿರಣ್ಯ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ (Bigg Boss) ದಿವ್ಯಾ ಸುರೇಶ್ (Diva Suresh) ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ.

    ವೇದಾಸ್ ಇನ್ಫಿನಿಟಿ ಪಿಕ್ಚರ್ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್ ಕುಮಾರ್ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ‘ಹಿರಣ್ಯ’ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

  • ‘ಗಜರಾಮ’ ಚಿತ್ರದ ಸ್ಪೆಷಲ್ ನಂಬರ್ ಹಾಡಿಗೆ ಹೆಜ್ಜೆ ಹಾಕಿದ ರಾಗಿಣಿ

    ‘ಗಜರಾಮ’ ಚಿತ್ರದ ಸ್ಪೆಷಲ್ ನಂಬರ್ ಹಾಡಿಗೆ ಹೆಜ್ಜೆ ಹಾಕಿದ ರಾಗಿಣಿ

    ನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ ವುಡ್ ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ (Rajavardhan) ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’ (Gajarama). ಈ ಚಿತ್ರದ  ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ‌ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.

    ರಾಗಿಣಿ (Ragini Dwivedi) ಮಾತನಾಡಿ, ‘ಹೊಸ ಹೊಸ ಪ್ರಯತ್ನಗಳು ನಮ್ಮ ಇಂಡಸ್ಟ್ರೀಯಲ್ಲಿ ಆಗಬೇಕು. ಕನ್ನಡ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಅದನ್ನು ನೋಡಿ ಹೆಮ್ಮೆ ಅನಿಸುತ್ತದೆ. ನಾನು ಎಲ್ಲಿ ಹೋದರು ಕರ್ನಾಟಕ ನನ್ನ ಮನೆ ತರ. ಗಜರಾಮ ಸಿನಿಮಾದಲ್ಲಿ ನನಗಾಗಿ ಮಾಡಿರುವ ಸ್ಪೆಷಲ್ ಸಾಂಗ್ (Special Song) ಇದೆ. ರಾಜ್ ಅದ್ಭುತ ನಟ. ಮನೋಮೂರ್ತಿ ಅವರ ಮ್ಯೂಸಿಕ್, ಧನು ಕೊರಿಯೋಗ್ರಫಿ ಎಲ್ಲವೂ ಸೇರಿ ಈ ವರ್ಷದ ಹಿಟ್ ಹಾಡುಗಳಲ್ಲಿ ಒಂದಾಗಲಿದೆ. ಇಡೀ ತಂಡಕ್ಕೆ ನಿಮ್ಮ‌‌ ಬೆಂಬಲ ಇರಲಿ’ ಎಂದರು.

    ರಾಜವರ್ಧನ್ ಮಾತನಾಡಿ, ಇವತ್ತು ಕುಂಬಳಕಾಯಿವರೆಗೂ ಬಂದಿದ್ದೇವೆ. ಈ ಸಿನಿಮಾ ಒಂದು ವರ್ಷದ ಜರ್ನಿ. ಲೈಫ್ ಲೈನ್ ಪಿಕ್ಚರ್ಸ್ ಜೊತೆ ಮಾಡುತ್ತಿರುವ ಮೊದಲ ಚಿತ್ರ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ಸುನಿಲ್ ಮುಂದಿನ ದಿನಗಳಲ್ಲಿ ಮಾಸ್ ಡೈರೆಕ್ಟರ್ ಆಗಿ ಚಿತ್ರರಂಗ ಬರ್ತಾರೆ. ರಾಗಿಣಿ ಅವರು ಕಾಲೇಜ್ ಟೈಮ್ ನಿಂದ ಕ್ರಶ್. ಈಗ ವರ್ಕ್ ಮಾಡುವ ಅವಕಾಶ ಸಿಕ್ಕಿದೆ. ಡ್ರೀಮ್ ಕಂಪ್ಲೀಟ್ ಆಗಿದೆ. ಮನೋ ಸರ್ ಮೆಲೋಡಿ ಕಿಂಗ್. ಈಗ ಮಾಸ್ ಕಿಂಗ್ ಆಗಿದ್ದಾರೆ. ನಮ್ಮ ಕಥೆಗೆ ಹೇಗೆ ಬೇಕೋ ಆಗಿದ್ದಾರೆ ನಮ್ಮ ಹೀರೋಯಿನ್. ರಾಮ್ ನನ್ನ ಪಾತ್ರ. ರಾಮ ರಾವಣ ಎರಡು ನಾನೇ. ತುಂಬಾ ಒಳ್ಳೆ ಆರ್ಟಿಸ್ಟ್ ಚಿತ್ರದಲ್ಲಿದ್ದಾರೆ ಎಂದರು.

    ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ಬೆಂಗಳೂರು, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಇವತ್ತು ಕೊನೆಯ ದಿನ. ರಾಜವರ್ಧನ್ ಸರ್ ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ನಿರ್ಮಾಪಕರು ಬಜೆಟ್ ಕೇಳದೆ ಸಿನಿಮಾ ಮಾಡಿದ್ದಾರೆ. ಮನೋಮೂರ್ತಿ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಸಾಂಗ್ ಕೇಳಿದ ತಕ್ಷಣ ರಾಗಿಣಿ ಮೇಡಂ ಒಪ್ಪಿಕೊಂಡರು ಎಂದರು.

    ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ,  ಇವತ್ತು ಸಿನಿಮಾಗೆ ಕುಂಬಳಕಾಯಿ. ಮೂಹೂರ್ತ ಆದಾಗ ಎಷ್ಟು ಖುಷಿ ಆಗಿತ್ತು. ಈಗ ಅಷ್ಟೇ ಖುಷಿಯಾಗುತ್ತಿದೆ. ಈ ಸಾಂಗ್ ಅನ್ನು ವಿವರಣೆ ಪಡೆದು ಬಳಿಕ ಮಾಡುತ್ತೇನೆ. ಅದಕ್ಕಾಗಿ ಕಾಯಬೇಕು ಎಂದರು. ಮನೋ ಸರ್ ಗೆ ತುಂಬಾ ಕಾಟ ಕೊಟ್ಟು ಸಾಂಗ್ ಮಾಡಿಸಿದ್ದೇವೆ. ಧನು ಮಾಸ್ಟರ್ ಈ ಹಾಡನ್ನು ಕೊನೆಯಲಿ ಮಾಡೋಣಾ ಎಂದರು. ಒಳ್ಳೆ ಔಟ್ ಫುಟ್ ಬಂದಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ಬರುವ ಪ್ರಯತ್ನ ಮಾಡುತ್ತೇವೆ ಎಂದರು. ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಸಿನಿಮಾದಲ್ಲಿ ಒಟ್ಟು 5 ಹಾಡುಗಳಿವೆ. ಈ ಸಾಂಗ್ ಅದ್ಭುತವಾಗಿ ಮೂಡಿಬಂದಿದೆ. ಈ ತರ ಹಾಡು ಮಾಡದೆ ಬಹಳ ವರ್ಷಗಳೇ ಆಗಿದೆ ಎಂದರು.

    ಶಿಷ್ಯ ದೀಪಕ್ ಪೊಲೀಸ್ ಪಾತ್ರದಲ್ಲಿ, ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ಖಳನಾಯಕನಾಗಿ, ತಪಸ್ವಿನಿ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ. ಕಾಮಿಡಿ ‌ಕಿಲಾಡಿ ಖ್ಯಾತಿಯ ಸಂತು ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಪ್ರಮೋದ್ ಮರವಂತೆ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

    ‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]