Tag: ರಾಜವರ್ಧನ್ ಸಿಂಗ್ ರಾಥೋಡ್

  • ಕೊಹ್ಲಿ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ!

    ಕೊಹ್ಲಿ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ!

    ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit ) ನೀವು ನಿಮ್ಮ ಫಿಟ್‍ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗೆ ವಿರಾಟ್ ಕೊಹ್ಲಿ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

    ಕೊಹ್ಲಿ ಅವರ ಈ ಟ್ವೀಟ್ ಗೆ ಮೋದಿ ಪ್ರತಿಕ್ರಿಯಿಸಿದ್ದು, ಸವಾಲನ್ನು ಸ್ವೀಕರಿಸಿದ್ದೇನೆ. ನನ್ನ ಫಿಟ್ ನೆಸ್ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದಾರೆ.