Tag: ರಾಜಸ್ಥಾನ ಹೈಕೋರ್ಟ್

  • ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ (Asaram Bapu) ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್ (Rajasthan High Court) ಆರು ತಿಂಗಳುಗಳ ಕಾಲ ಮಧ್ಯಂತರ ಜಾಮೀನು (Interim Bail) ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರ ವಿಭಾಗೀಯ ಪೀಠ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸರಾಂ ಅವರ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ ನಿಯಮಿತ ಜಾಮೀನು ಮಂಜೂರು ಮಾಡಿತು. ಇದನ್ನೂ ಓದಿ: ಕ್ವಾಂಟಮ್‌ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು

    ಆಗಸ್ಟ್ 2013ರಿಂದ ಅಸಾರಾಂ ಬಾಪು ಜೈಲಿನಲ್ಲಿದ್ದಾರೆ. ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದರು. ಬಾಲಕಿಯ ಪೋಷಕರು ಅವರ ಭಕ್ತರಾಗಿದ್ದು, ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ಮಾಡಲಾಯ್ತು. ಎರಡು ತಿಂಗಳ ನಂತರ, ಗುಜರಾತ್‌ನ ಸೂರತ್ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರ ಆರೋಪದಲ್ಲಿ ಅಸಾರಾಂ ಮತ್ತು ಅವರ ಮಗ ನಾರಾಯಣ್ ಸಾಯಿ ವಿರುದ್ಧ ಪ್ರಕರಣ ದಾಖಲಾಯಿತು. ಈ ಪ್ರಕರಣಗಳಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

    ಈ ವರ್ಷ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅಸಾರಾಂಗೆ ವೈದ್ಯಕೀಯ ಆಧಾರದ ಮೇಲೆ ಮಾರ್ಚ್ ಅಂತ್ಯದವರೆಗೆ ಮಧ್ಯಂತರ ಜಾಮೀನು ನೀಡಿತ್ತು. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ನೀಡಿತ್ತು. ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವಾಗ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಅಥವಾ ಅವರ ಅನುಯಾಯಿಗಳನ್ನು ಭೇಟಿ ಮಾಡಲು ಪ್ರಯತ್ನಿಸಬಾರದು ಎಂದು ಆದೇಶಿಸಿತು. ಇದನ್ನೂ ಓದಿ: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    ಅಸಾರಾಂ ಬಾಪು ಹೃದಯ ಸಂಬಂಧಿ ಸಮಸ್ಯೆಗಳು, ಇತರ ವಯೋಸಹಜ ರೋಗಗಳಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಆರೈಕೆ ಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಹೈಕೋರ್ಟ್ ಈ ಆಧಾರಗಳನ್ನು ಪರಿಗಣಿಸಿ ಆರು ತಿಂಗಳ ಜಾಮೀನು ನೀಡಿದೆ. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

  • ಹುಟ್ಟಿನಿಂದ ಸ್ತ್ರೀ, ಬಳಿಕ ಪುರುಷ- ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?

    ಹುಟ್ಟಿನಿಂದ ಸ್ತ್ರೀ, ಬಳಿಕ ಪುರುಷ- ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?

    ಜೈಪುರ್: ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರ ದಾಖಲೆಗಳಲ್ಲಿ ಹೆಸರು ಮತ್ತು ಲಿಂಗವನ್ನು ನವೀಕರಿಸಲು ದೈಹಿಕ ಶಿಕ್ಷಣದ ಶಿಕ್ಷಕನಿಗೆ (Physical Training Instructor) ರಾಜಸ್ಥಾನ ಹೈಕೋರ್ಟ್ (Rajasthan High Court) ಅನುಮತಿ ನೀಡಿದೆ. ಅಲ್ಲದೆ ಅರ್ಜಿದಾರರು ತಮ್ಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

    ಒಬ್ಬ ವ್ಯಕ್ತಿಯ ಲಿಂಗದ ಗುರುತನ್ನು (Gender Identity) ಆಯ್ಕೆ ಮಾಡುವ ಹಕ್ಕು ಅವರ ವ್ಯಕ್ತಿತ್ವದ ಅತ್ಯಗತ್ಯ ಭಾಗವಾಗಿದೆ. ಅಲ್ಲದೆ ಅವರ ಸ್ವ ನಿರ್ಣಯ, ಘನತೆ ಮತ್ತು ಮೂಲಭೂತ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ. ಅಲ್ಲದೆ ವ್ಯಕ್ತಿಯ ಲೈಂಗಿಕ ದೃಷ್ಟಿಕೋನ ಅಥವಾ ಲಿಂಗದ ಗುರುತಿನ ಆಧಾರದ ಮೇಲೆ ಯಾವುದೇ ತಾರತಮ್ಯವನ್ನು ಮಾಡುವಂತಿಲ್ಲ. ಎಲ್ಲರಿಗೂ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಆನಂದಿಸಲು ಹಕ್ಕಿದೆ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಧಂಡ್ ತೀರ್ಪಿನ ವೇಳೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ಏನಿದು ಪ್ರಕರಣ?: ಹುಟ್ಟಿನಿಂದ ಹೆಣ್ಣು ಎಂದು ಗುರುತಿಸಲಾಗಿದ್ದ ವ್ಯಕ್ತಿಯೊಬ್ಬರು ಮಹಿಳಾ ವರ್ಗದಲ್ಲಿ ದೈಹಿಕ ತರಬೇತಿ ಬೋಧಕರಾಗಿ ನೇಮಕಗೊಂಡಿದ್ದರು. 32 ನೇ ವಯಸ್ಸಿನಲ್ಲಿ ಲಿಂಗದ ಗುರುತಿನಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ನಂತರ ಲಿಂಗ ಮರುವಿನ್ಯಾಸ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷರಾಗಿ ಬದಲಾದರು. ಈ ಬಗ್ಗೆ ಅವರು ವೈದ್ಯರ ದೃಢೀಕರಣವನ್ನು ಪಡೆದಿದ್ದಾರೆ. ಬಳಿಕ ಅವರು ಆಧಾರ್ ಕಾರ್ಡ್‍ನಲ್ಲಿ (Aadhar Card) ತಮ್ಮ ಹೆಸರನ್ನು ಹಾಗೂ ಲಿಂಗವನ್ನು ಕಾನೂನುಬದ್ಧವಾಗಿ ಬದಲಾಯಿಸಿದ್ದಾರೆ. ಅಲ್ಲದೆ ಅರ್ಜಿದಾರರು ಮದುವೆಯಾಗಿ ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ. ಆದರೆ ಮೂರು ವರ್ಷಗಳಿಂದ ಸೇವಾ ದಾಖಲೆಯಲ್ಲಿ ಹೆಸರು ಮತ್ತು ಲಿಂಗ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಇದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

  • ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.

    ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.

    ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಹೇಳಿದೆ.

    ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

    https://twitter.com/mayhempsingh/status/869827993618665472