Tag: ರಾಜಹಂಸಗಡ ಕೋಟೆ

  • ಸಿಎಂ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ

    ಸಿಎಂ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ

    ಬೆಳಗಾವಿ: ರಾಜಹಂಸಗಡ ಕೋಟೆ (Rajahamsagada) ಕದನ ಮುಂದುವರೆದಿದ್ದು ಸಿಎಂ ಉದ್ಘಾಟಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Chhatrapati Shree Shivaji Maharaj Statue) ನಾಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನೇತೃತ್ವದಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳ್ಳಲಿದೆ.

    ಲೋಕಾರ್ಪಣೆ ಸಂದರ್ಭದಲ್ಲಿ ಮಹಾರಾಷ್ಟ್ರದ (Maharashtra) ತುಳಜಾಪುರದಿಂದ ಆಗಮಿಸಿದ ಅರ್ಚಕರಿಂದ ಶಿವಾಜಿ ಪ್ರತಿಮೆಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಲಾಗುತ್ತದೆ. ಮಹಾರಾಜರ 13ನೇ ವಂಶಸ್ಥ ಯುವರಾಜ ಸಂಭಾಜಿರಾಜೇ ಛತ್ರಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಇದೆ. ಭಾನುವಾರ ಬೆಳಗ್ಗೆ 9ರಿಂದ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಪಾಲಕಿ ಉತ್ಸವ, ಧ್ವಜಾರೋಹಣ, ಉತ್ಸವಮೂರ್ತಿ ಪೂಜೆಯೊಂದಿಗೆ ಪ್ರತಿಮೆ ಉದ್ಘಾಟನೆಗೊಳ್ಳಲಿದೆ. ಇದನ್ನೂ ಓದಿ: ನನ್ನ ಸ್ಥಿತಿ ಯಾರಿಗೂ ಬೇಡ- ಅಪ್ಪನ ನೆನಪಿಗಾಗಿ ಕ್ಯಾಂಟೀನ್ ಮಂಜಣ್ಣನಿಂದ ಉಚಿತ ಅಂಬುಲೆನ್ಸ್ ಸೇವೆ

    ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar), ಮಹಾರಾಷ್ಟ್ರದ ಮಾಜಿ ಗೃಹಸಚಿವ ಸತೇಜ್ ಪಾಟೀಲ್, ಮರಾಠಿ ನಟ ಹಾಗೂ ಸಂಸದ ಡಾ.ಅಮೋಲ್ ಕೋಲೆ, ಲಾತೂರು ಶಾಸಕ ಧೀರಜ್ ದೇಶಮುಖ್, ಖ್ಯಾತ ಚಿತ್ರನಟ ರಿತೇಶ್ ದೇಶಮುಖ್ ಸೇರಿ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

    ಇಂದು ಶಾಸ್ತ್ರೋಕ್ತವಾಗಿ ಶಿವಾಜಿ ಪ್ರತಿಮೆಗೆ ಪೂಜೆ ನೆರವೇರುತ್ತಿದೆ. ನಾಳೆ ಸಂಜೆ 5.30ರಿಂದ ರಾಜಹಂಸಗಡ ಕೋಟೆಯಲ್ಲಿ ವಿವಿಧ ಸಾಂಸ್ಕೃತಿಕ ಕಾಯಕ್ರಮಗಳು, ಡೋಲ್ ತಾಶಾ, ಲೇಸರ್ ಶೋ, ಕ್ರ್ಯಾಕರ್ ಶೋ, ಮರದಾನಿ ಖೇಳ ಸೇರಿ ಪಾರಂಪರಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ನಾಳೆ ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಆಗಲಿದೆ. ಹಲವು ರಾಜಕೀಯ ನಾಯಕರಿಗೆ, ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳಿಗೂ ಲಕ್ಷ್ಮಿ ಹೆಬ್ಬಾಳ್ಕರ್ ಆಹ್ವಾನ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಟವಲ್‍ನಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ಕಾಂಗ್ರೆಸ್ ಮಾಜಿ ಶಾಸಕನ ಸಹೋದರ

  • ಲಕ್ಷ್ಮಿ ಹೆಬ್ಬಾಳ್ಕರ್‌ಗೆ ರಮೇಶ್ ಜಾರಕಿಹೊಳಿ ಶಾಕ್

    ಲಕ್ಷ್ಮಿ ಹೆಬ್ಬಾಳ್ಕರ್‌ಗೆ ರಮೇಶ್ ಜಾರಕಿಹೊಳಿ ಶಾಕ್

    ಬೆಳಗಾವಿ: ತಾಲೂಕಿನ ಗ್ರಾಮೀಣ ಮತಕ್ಷೇತ್ರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ (Rajhansgad Fort) ನಿರ್ಮಾಣವಾಗಿದ್ದ ಶಿವಾಜಿ ಪ್ರತಿಮೆ (Chhatrapati Shivaji Maharaj) ಲೋಕಾರ್ಪಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್ 2ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ ಮಾಡಿಸಲು ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮುಂದಾಗಿದ್ದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ (Lakshmi Hebbalkar) ಶಾಕ್ ನೀಡಿದ್ದಾರೆ.

    ಮಾರ್ಚ್ 5ರಂದು ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಧರಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ಆಹ್ವಾನಿಸಲು ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಧಾರ ಮಾಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಮಾಧ್ಯಮ ಪ್ರಕಟಣೆ ನೋಡಿ ಸಿಡಿದೆದ್ದಿದ್ದ ರಮೇಶ್ ಜಾರಕಿಹೊಳಿ, ಇತರ ಬಿಜೆಪಿ ನಾಯಕರು ಶಿಷ್ಟಾಚಾರ ಪ್ರಕಾರ ಸರ್ಕಾರದ ವತಿಯಿಂದ ಪ್ರತಿಮೆ ಲೋಕಾರ್ಪಣೆಗೆ ಪಟ್ಟು ಹಿಡಿದಿದ್ದರು. ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ರಾಜಹಂಸಗಡದ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ನಿರ್ಧಾರ ಮಾಡಲಾಗಿದೆ.

    ಸಿಎಂ ಕೈಯಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆ ಹಠಕ್ಕೆ ಬಿದ್ದಿದ್ದ ಗೋಕಾಕ್ ಸಾಹುಕಾರ್ ಮಾರ್ಚ್ 2ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೆ ಸಿದ್ಧತೆ ಮಾಡಿದ್ದಾರೆ. ಕನ್ನಡ ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

    ಪ್ರತಿಮೆ ಉದ್ಘಾಟನೆ ಸಂಬಂಧ ಶುಕ್ರವಾರ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

    ಪ್ರತಿಮೆ ಲೋಕಾರ್ಪಣೆ ದಿನದಂದು ಒಂದೇ ವೇದಿಕೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಕಾಣಿಸಿಕೊಳ್ಳುತ್ತಾರಾ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಇದೇ ಛತ್ರಪತಿ ಶಿವಾಜಿ ಪ್ರತಿಮೆ ಲೋಕಾರ್ಪಣೆ ವಿಚಾರವಾಗಿ ರಮೇಶ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ನಡುವೆ ಕ್ರೆಡಿಟ್ ವಾರ್ ಏರ್ಪಟ್ಟಿತ್ತು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ ಶಿವಾಜಿ ಪ್ರತಿಮೆಯನ್ನು ಮಾರ್ಚ್ 4, 5ರಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವತಿಯಿಂದಲೂ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ಐತಿಹಾಸಿಕ ರಾಜಹಂಸಗಡ ಕೋಟೆ ಎರಡೆರಡು ಕಾರ್ಯಕ್ರಮಗಳಿಗೆ ಸಾಕ್ಷಿಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಮೈಸೂರಿನ ಆದಿಲ್ ಮನೆ ಮುಂದೆ ನಟಿ ರಾಖಿ ಸಾವಂತ್ ಹೈ ಡ್ರಾಮಾ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k