Tag: ರಾಜಾ ಅಮರೇಶ್ವರ ನಾಯಕ

  • ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಯಚೂರು: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ (Raja Amareshwar Nayak) ಅವರ ಜಾತಿ ಪ್ರಮಾಣ ಪತ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಕಲಬುರಗಿ ಹೈಕೋರ್ಟ್ (High Court) ಪೀಠ ಏ.19ಕ್ಕೆ ಮುಂದೂಡಿದೆ. ಇದರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನವೇ ತೀರ್ಪು ಹೊರಬೀಳುವ ಸಾಧ್ಯತೆಯಿದೆ.

    ರಾಜಾ ಅಮರೇಶ್ವರ ನಾಯಕ ಕ್ಷತ್ರಿಯ ಸಮುದಾಯಕ್ಕೆ ಸೇರಿದ್ದು, ಎಸ್‍ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ನಾಯಕ ಸಮುದಾಯದ ಮುಖಂಡ ನರಸಿಂಹ ನಾಯಕ್ ಎಂಬವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಏ.19ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ಏ.19 ರಂದು ಜಾತಿ ಬಗ್ಗೆ ಅಫಿಡೆವಿಟ್ ಸಲ್ಲಿಸುವಂತೆ ಕೋರ್ಟ್ ರಾಜಾ ಅಮರೇಶ್ವರ ನಾಯಕ ಅವರಿಗೆ ಸೂಚಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು 10 ದಿನ ಎನ್‍ಐಎ ಕಸ್ಟಡಿಗೆ

    ಏ.18 ಕ್ಕೆ ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವ ರಾಜಾ ಅಮರೇಶ್ವರ ನಾಯಕ ಅವರಿಗೆ ಇದೀಗ ನ್ಯಾಯಾಲಯದ ತೀರ್ಪಿನ ಆತಂಕ ಶುರುವಾಗಿದೆ. ವಿರುದ್ಧ ತೀರ್ಪು ಬಂದರೆ ಈ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಆಗಲಿದೆಯೇ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಇದರ ನಡುವೆ ಟಿಕೆಟ್ ವಂಚಿತ ಆಕಾಂಕ್ಷಿ ಬಿ.ವಿ.ನಾಯಕ್ ಸಹ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

  • ರಾಯಚೂರಿನಲ್ಲಿ ಕಾಂಗ್ರೆಸ್ ಭದ್ರಕೋಟೆ ಛಿದ್ರ- ಭರ್ಜರಿಯಾಗಿ ಅರಳಿದ ಕಮಲ

    ರಾಯಚೂರಿನಲ್ಲಿ ಕಾಂಗ್ರೆಸ್ ಭದ್ರಕೋಟೆ ಛಿದ್ರ- ಭರ್ಜರಿಯಾಗಿ ಅರಳಿದ ಕಮಲ

    ರಾಯಚೂರು: ಕಾಂಗ್ರೆಸ್ ಭದ್ರಕೋಟೆ ಎಂದೇ ಕರೆಯಿಸಿಕೊಳ್ಳುತ್ತಿದ್ದ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಒಟ್ಟು 1,17,716 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

    ರಾಜಾ ಅಮರೇಶ್ವರ ನಾಯಕ ಅವರು 6,68,337 ಮತಗಳನ್ನು ಪಡೆದರೆ, ಮೈತ್ರಿ ಪಕ್ಷದ ಅಭ್ಯರ್ಥಿ ಕಾಂಗ್ರೆಸ್‍ನ ಬಿ.ವಿ.ನಾಯಕ 4,80,622 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿ.ವಿ.ನಾಯಕ ಅವರು ಭಾರೀ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

    ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ದೇವದುರ್ಗ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಣದಲ್ಲಿದ್ದ ಬಿಎಸ್‍ಪಿಯ ವೆಂಕನಗೌಡ ನಾಯಕ 13,830 ಮತಗಳು, ಉತ್ತಮ ಪ್ರಜಾಕೀಯ ಪಕ್ಷದ ನಿರಂಜನ ನಾಯಕ 7,833 ಮತ ಹಾಗೂ ಎಸ್‍ಯುಸಿಐನ ಕೆ.ಸೋಮಶೇಖರ 8,842 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.

    ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ 14,921 ಮತದಾರರು ನೋಟಾ ಹಕ್ಕು ಚಲಾಯಿಸಿದ್ದಾರೆ. ಚುಮಾವಣೆಯಲ್ಲಿ ಒಟ್ಟು 11,24,962 ಮತಗಳು ಚಲಾವಣೆಯಾಗಿವೆ. ಭರ್ಜರಿ ಜಯಭೇರಿ ಬಾರಿಸಿರುವ ಬಿಜೆಪಿಯ ರಾಜಾ ಅಮರೇಶ್ವರ ನಾಯಕ್ ಕ್ಷೇತ್ರಕ್ಕೆ ಇರುವ ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿಯನ್ನ ಕಿತ್ತೊಗೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.