ಹೈದರಾಬಾದ್: ಕೇರಳದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬೇಡಿ ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ತಿಳಿಸಿದ್ದಾರೆ.
ಭಕ್ತರು ‘ಅಯ್ಯಪ್ಪ ದೀಕ್ಷಾ’ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಲಾಧಾರಿಗಳು ಮಸೀದಿಗೆ ಹೋದರೆ ಅವರು ಅಶುದ್ಧರಾಗುತ್ತಾರೆ. ಭಕ್ತರನ್ನು ಮಸೀದಿಗೆ ಬರುವಂತೆ ಮಾಡಿರುವುದು ಷಡ್ಯಂತ್ರ ಎಂದು ಸಿಂಗ್ ಹೇಳಿದ್ದಾರೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಎ ರೇವಂತ್ ರೆಡ್ಡಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರು ಭಕ್ತರಿಗೆ ವಸತಿ ನಿರ್ಮಿಸಲು 10 ಎಕರೆ ಜಾಗವನ್ನು ಕೋರಿ ಕೇರಳ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಒತ್ತಾಯಿಸಿದ್ದಾರೆ.
ಗೋಶಾಮಹಲ್ ಶಾಸಕ ಶಾಸಕ ರಾಜಾಸಿಂಗ್ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಮಾತು ವ್ಯಕ್ತವಾಗುತ್ತದೆ.
ಹೈದರಾಬಾದ್: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಮಂಗಳವಾರ ಬಂಧನವಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ರಾಜಾ ಸಿಂಗ್ ಅವರ ಬಿಡುಗಡೆಗೆ ಆದೇಶಿಸಿದೆ.
ಈ ಹಿನ್ನೆಲೆ ರಾಜಾ ಸಿಂಗ್ ವಿರುದ್ಧ ಐಪಿಸಿಯ ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಪಕ್ಷದ ಕೇಂದ್ರ ಶಿಸ್ತು ಪಾಲನಾ ಸಮಿತಿ ಅಮಾನತುಗೊಳಿಸಿದೆ.
ಪ್ರವಾದಿ ಕುರಿತು ಅವಹೇಳನಕಾರಿ ಕಾಮೆಂಟ್‌ಗಳಿಗಾಗಿ ರಾಜಾ ಸಿಂಗ್ ವಿರುದ್ಧ ಇಂದು ಬೆಳಗ್ಗೆ ಪ್ರಕರಣವನ್ನು ದಾಖಲಿಸಲಾಗಿತ್ತು. ನಂತರ ಅವರನ್ನು ಬಂಧಿಸಲಾಯಿತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ, 295, ಮತ್ತು 505 ರ ಅಡಿಯಲ್ಲಿ ದಬೀರ್‌ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್
ಶಾಸಕನಿಗೆ ಅಮಾನತು ಆದೇಶ ಪತ್ರ ರವಾನಿಸಿರುವ ಬಿಜೆಪಿ, ನಿಮ್ಮ ಹೇಳಿಕೆಗಳು ಪಕ್ಷದ ನೀತಿಗೆ ವಿರುದ್ಧವಾಗಿವೆ ಎಂದು ಎಂದು ತಿಳಿಸಿದೆ.
ನೀವು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ, ಇದು ನಿಯಮ 115ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.
ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥ ಓಂ ಪಾಠಕ್ ಅವರು ಬರೆದಿರುವ ಅಮಾನತು ಪತ್ರದಲ್ಲಿ, ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಗಳು/ನಿಯೋಜನೆಗಳಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನನಗೆ ಸೂಚಿಸಲಾಗಿದೆ. ನಿಮ್ಮನ್ನು ಪಕ್ಷದಿಂದ ಏಕೆ ಹೊರಹಾಕಬಾರದು ಎಂಬ ಬಗ್ಗೆ 10 ದಿನಗಳಲ್ಲಿ ಕಾರಣವನ್ನು ನೀಡಿ. ನಿಮ್ಮ ಉತ್ತರ ಸೆ.2ರೊಳಗೆ ಸಂಬಂಧಪಟ್ಟವರಿಗೆ ತಲುಪಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: BJPಗೆ ಶಾಂತಿ ನೆಲೆಸುವುದು ಇಷ್ಟವಿಲ್ಲ, ಪ್ರವಾದಿ – ಮುಸ್ಲಿಮರನ್ನು ದ್ವೇಷಿಸುತ್ತಲೇ ಇದೆ: ಓವೈಸಿ ಕಿಡಿ
ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಬಿಜೆಪಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ವಿರೋಧಿಸುತ್ತಲೇ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ನಿರ್ದಿಷ್ಟ ಧರ್ಮವೊಂದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ನಾನೂ ಖಂಡಿಸುತ್ತೇನೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ವಾಯಸೇನೆ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ – ಓಡೋಡಿ ಬಂದ ಜನ
I condemn the comments made by BJP MLA. BJP doesn't want to see that there is peace in Hyderabad. BJP hates Prophet Muhammad and Muslims. They want to destroy the social fabric of India: AIMIM chief Asaduddin Owaisi on comments made by Telangana BJP MLA Raja Singh pic.twitter.com/Lf8kjO1gWt
ಹೈದರಾಬಾದ್‌ನಲ್ಲಿ ಶಾಂತಿ ನೆಲೆಸಿರುವುದು ಬಿಜೆಪಿಯವರಿಗೆ ಇಷ್ಟವಿಲ್ಲ. ಬಿಜೆಪಿಯವರು ನಿರಂತರವಾಗಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ದ್ವೇಷಿಸುತ್ತಲೇ ಇದ್ದಾರೆ. ಭಾರತದ ಸಾಮಾಜಿಕ ವ್ಯವಸ್ಥೆಯನ್ನೇ ನಾಶಮಾಡಲು ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ
ಕೆಲ ದಿನಗಳ ಹಿಂದೆಯಷ್ಟೇ ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಮುಂದಿನ ದಿನಗಳಲ್ಲಿ ದೆಹಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧಿಸಬಹುದು. ಮುಸ್ಲಿಮರನ್ನು ನಿಂದಿಸುವವರಿಗೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಹುದ್ದೆಗಳು ಸಿಗುತ್ತವೆ. ಹಾಗಾಗಿ ನೂಪುರ್ ಶರ್ಮಾ ಅವರನ್ನು ದೆಹಲಿಯ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದರಲ್ಲಿ ಅಚ್ಚರಿ ಇಲ್ಲ ಎಂದು ಓವೈಸಿ ಟೀಕಿಸಿದ್ದರು.
ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ನಡೆಸಿಕೊಟ್ಟಿದ್ದ ಕಾರ್ಯಕ್ರಮವೊಂದರ ಬಗ್ಗೆ ಟೀಕಿಸಿ ರಾಜಾ ಸಿಂಗ್ ನಿನ್ನೆ ವೀಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ರಾಜಾ ಸಿಂಗ್ ವಿರುದ್ಧ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಸಿಂಗ್ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.
ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನಟಿ ಸಾಯಿ ಪಲ್ಲವಿ ಆಡಿದ ಮಾತು ಇಷ್ಟು ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತದೆ ಎಂದು ಸ್ವತಃ ಅವರಿಗೂ ಅರಿವಿರಲಿಲ್ಲ ಅನಿಸುತ್ತಿದೆ. ಹೀಗಾಗಿ ನಕ್ಸಲ್ ಹಿನ್ನೆಲೆಯಲ್ಲಿ ಬಂದ ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದಲ್ಲಿದ್ದಾಗ ಕೆಲ ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ ಸಾಯಿ ಪಲ್ಲವಿ. ಸಾಯಿ ಪಲ್ಲವಿ ಆಡಿದ ಮಾತು ಅವರಿಗೆ ವಿವಾದಾತ್ಮಕ ಹೇಳಿಕೆ ಎಂದು ಅನಿಸಿದೆಯೋ ಇಲ್ಲವೋ, ಆದರೆ, ಕಾಶ್ಮೀರಿ ಪಂಡಿತರ ಹತ್ಯೆಯನ್ನು ಗೋ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಸಾವಿಗೆ ಹೋಲಿಸಿದ್ದು ಮಾತ್ರ ಭಾರೀ ಚರ್ಚೆ ಮೂಡಿಸಿದೆ.
ಸಾಯಿ ಪಲ್ಲವಿ ಅವರ ಮಾತು ಇದೀಗ ಕೇವಲ ಮಾತಾಗಿ ಉಳಿದುಕೊಂಡಿಲ್ಲ. ಕಾನೂನು ಹೋರಾಟಕ್ಕೂ ಕೆಲವರು ಸಜ್ಜಾಗಿದ್ದಾರೆ. ನಿನ್ನೆಯಷ್ಟೇ ಹೈದರಾಬಾದ್ ನಲ್ಲಿ ಇವರ ವಿರುದ್ಧ ದೂರು ದಾಖಲಾಗಿದೆ. ಇದೀಗ ತೆಲಂಗಾಣದ ಗೋಶಮಹಲ್ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್ ಕೂಡ ಅಖಾಡಕ್ಕೆ ಇಳಿದಿದ್ದಾರೆ. ಪ್ರತಿಯೊಂದು ಜಿಲ್ಲೆಯಲ್ಲೂ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಿಸಿ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ವಿಡಿಯೋ ಕೂಡ ಮಾಡಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?
ರಾಜಾ ಸಿಂಗ್ ವಿವಾದಿತ ಶಾಸಕರೆಂದೇ ಫೇಮಸ್. ಫೈಯರ್ ಬ್ರ್ಯಾಂಡ್ ಎಂಎಲ್ಎ ಎಂದೇ ಆ ಭಾಗದಲ್ಲಿ ಖ್ಯಾತರಾದವರು. ಹೀಗಾಗಿ ಸಾಯಿ ಪಲ್ಲವಿಯ ವಿರುದ್ಧ ಕೇಸು ದಾಖಲಿಸುವಂತೆ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ. ಹಿಂದೂಗಳ ಬಗ್ಗೆ ಮಾತನಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಹತ್ಯೆಯಾದ ಕಾಶ್ಮೀರಿ ಪಂಡಿತರ ಕುಟುಂಬವನ್ನು ಭೇಟಿ ಮಾಡಿ, ಅವರ ನೋವುಗಳನ್ನು ಸಾಯಿ ಪಲ್ಲವಿ ಕೇಳಲಿ ಎಂದು ಸಲಹೆ ನೀಡಿದ್ದಾರೆ. ಹಿಂದೂಗಳನ್ನು ಬೈದರೆ ಪ್ರಚಾರ ಸಿಗುತ್ತದೆ ಎಂಬ ಭ್ರಮೆಯಲ್ಲಿ ಕೆಲವರು ಇದ್ದಾರೆ. ಅವರ ವಿರುದ್ಧ ದೂರು ದಾಖಲಿಸಿ, ಪಾಠ ಕಲಿಸಿ ಎಂದು ಅವರು ಕರೆ ನೀಡಿದ್ದಾರೆ.