Tag: ರಾಜೀವ್ ಗಾಂಧಿ

  • 31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

    31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

    ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

    31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು.

    ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಪೆರಾರಿವಾಲ್‍ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್

    ಕ್ಷಮಾಪಣೆ ಅರ್ಜಿ ಬಗ್ಗೆ ರಾಷ್ಟ್ರಪತಿಗಳು ನಿರ್ಧರಿಸುವವರೆಗೆ ನ್ಯಾಯಾಲಯ ಕಾಯಬೇಕು ಎಂಬ ಕೇಂದ್ರ ಮನವಿ ಮಾಡಿತ್ತು. ಆದರೆ ರಾಷ್ಟ್ರಪತಿಗಳು ನಿರ್ಧಾರ ಕೈಗೊಳ್ಳುವ ಮೊದಲೇ ಕೋರ್ಟ್ ಬಿಡುಗಡೆ ಮಾಡಲು ಸೂಚಿಸಿದೆ.

    supreme court 12

    2018ರಲ್ಲಿ ತಮಿಳುನಾಡು ಸರ್ಕಾರ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರಾರಿವಾಲನ್ ಅವರಿಗೆ ಕೋರ್ಟ್ ಮಾರ್ಚ್ 9 ರಂದು ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: 132 ಚೀನಾ ವಿಮಾನ ಪತನ ಉದ್ದೇಶಪೂರ್ವಕ – ಅಮೆರಿಕ ವರದಿ ಹೇಳಿದ್ದೇನು?

    1991ರ ಮೇ 21ರಂದು ರಾಜೀವ್ ಗಾಂಧಿ ಅವರು ಎಲ್‌ಟಿಟಿಇ ಉಗ್ರರಿಂದ ತಮಿಳುನಾಡಿನಲ್ಲಿ ಹತ್ಯೆಯಾಗಿದ್ದರು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಪೆರಾರಿವಾಲನ್ ಒಬ್ಬರಾಗಿದ್ದರು. ಕಳೆದ 31 ವರ್ಷಗಳಿಂದ ಜೀವಾವಧಿ ಶಿಕ್ಷೆಯನ್ನು ಪೆರಾರಿವಾಲನ್ ಅನುಭವಿಸುತ್ತಿದ್ದರು.

  • ರಾಹುಲ್‌ ಗಾಂಧಿ, ರಾಜೀವ್‌ ಗಾಂಧಿ ಮಗನೇ ಅಂತ ನಾವು ಕೇಳಿದ್ದೇವೆಯೇ? ಅಸ್ಸಾಂ ಸಿಎಂ

    ರಾಹುಲ್‌ ಗಾಂಧಿ, ರಾಜೀವ್‌ ಗಾಂಧಿ ಮಗನೇ ಅಂತ ನಾವು ಕೇಳಿದ್ದೇವೆಯೇ? ಅಸ್ಸಾಂ ಸಿಎಂ

    ಡೆಹ್ರಾಡೂನ್: ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಟೀಕಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ರಾಹುಲ್‌ ಗಾಂಧಿ ಅವರು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಮಗ ಎಂಬುದಕ್ಕೆ ಅವರ ಪಕ್ಷದವರಿಂದ ನಾವು ಪುರಾವೆ ಕೇಳುವುದಿಲ್ಲ ಎಂದು ಟೀಕಿಸಿದ್ದಾರೆ.

    ಉತ್ತರಾಖಂಡ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಶರ್ಮಾ, ಸರ್ಜಿಕಲ್‌ ಸ್ಟ್ರೈಕ್‌ ಮತ್ತು ಕೋವಿಡ್‌ ಲಸಿಕೆ ಕುರಿತು ಅನುಮಾನ ವ್ಯಕ್ತಪಡಿಸಿ, ವಿವರಗಳನ್ನು ರಾಹುಲ್‌ ಗಾಂಧಿ ಅವರು ಕೇಳಿದ್ದರು. ಅದಕ್ಕೆ ಪ್ರತಿಯಾಗಿ ಬಿಸ್ವಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ್ದು ಹಾಗೂ ಕೋವಿಡ್‌ ಲಸಿಕೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪುರಾವೆಯನ್ನು ಕೇಳುತ್ತಿದೆ. ನಾವು ಎಂದಾದರು ರಾಹುಲ್‌ ಗಾಂಧಿ ಅವರ ಬಳಿ ರಾಜೀವ್‌ ಗಾಂಧಿ ಮಗ ಎಂಬುದಕ್ಕೆ ಪುರಾವೆ ಕೇಳಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

    ಕೆಲವೊಮ್ಮೆ ಅವರು ಭಾರತ ಒಂದು ರಾಷ್ಟ್ರವಲ್ಲ, ರಾಜ್ಯಗಳ ಒಕ್ಕೂಟ ಎಂದು ಹೇಳುತ್ತಾರೆ. ಇದನ್ನೆಲ್ಲಾ ಕೇಳಿದಾಗ ಜಿನ್ನಾ ಆತ್ಮ ಕಾಂಗ್ರೆಸ್‌ ಮೇಲೆ ಸೇರಿಕೊಂಡಿದೆ ಎನಿಸುತ್ತದೆ. ಮದರಸಾಗಳು, ಮುಸ್ಲಿಂ ವಿಶ್ವವಿದ್ಯಾಲಯಗಳನ್ನು ತೆರೆಯುವುದು ಸರಿ ಎನ್ನುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ

  • ಸಿದ್ದರಾಮಯ್ಯ ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಾರೆ – ಅರಗ ಜ್ಞಾನೇಂದ್ರ

    ಸಿದ್ದರಾಮಯ್ಯ ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಾರೆ – ಅರಗ ಜ್ಞಾನೇಂದ್ರ

    – ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮಗ ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದುಬಿಡುತ್ತಾರೆ

    ಕಾರವಾರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮಗ ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದುಬಿಡುತ್ತಾರೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ಎಷ್ಟು ಕೆಳಮಟ್ಟದಲ್ಲಿ ಮಾತನಾಡಿದರೆ, ಅಷ್ಟು ವೋಟು ಸಿಗುತ್ತದೆ ಎಂದು ಭಾವಿಸಿದ್ದಾರೆ. ಇದು ಅವರ ಭ್ರಮೆ ಅಷ್ಟೇ. ಸಿದ್ದರಾಮಯ್ಯ ಅವರು ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಬೆತ್ತಲಾಗಿ ಕಳ್ಳತನ – ಅಂತರಾಜ್ಯ ಕಳ್ಳ ದಂಪತಿ ಅರೆಸ್ಟ್

    ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುತ್ತಾರೆ. ಕಾಂಗ್ರೆಸ್ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರ ಮಗನಂತೆ ಯಾವುದೇ ಯೋಗ್ಯತೆ, ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದು ಬಿಡುತ್ತಾರೆ. ಬಿಜೆಪಿಯಲ್ಲಿ ಅರ್ಹತೆ, ಯೋಗ್ಯತೆ ಇರುವವರು, ಒಬ್ಬರ ಮಗ ಎಂದು ಮೂಲೆಗೆ ಹಾಕಲಾಗುವುದಿಲ್ಲ. ಯಾರಿಗೆ ಸೇವಾ ಮನೋಭಾವನೆ, ಅರ್ಹತೆ ಇರುತ್ತದೆಯೋ ಅವರು ಮೂಲೆಗೆ ಹೋಗಬಾರದು ಎಂದು ತಿಳಿಸಿದರು.

    ಯಾರಿಗೆ ಸೈದ್ಧಾಂತಿಕವಾಗಿ ಪಕ್ಷ ಕಟ್ಟಲು ಯೋಗ್ಯತೆ ಇಲ್ಲವೋ ಅವರು ಜಾತಿಯನ್ನು ಬಂಡವಾಳ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್, ಜೆಡಿಎಸ್ ಜಾತಿವಾದ ಮಾಡುತ್ತಿದೆ. ಜನ ಅವರನ್ನು ತಿರಸ್ಕಾರ ಮಾಡುತ್ತಾರೆ. ಇವರ ಉದ್ದಾರಕ್ಕಾಗಿ ಜಾತಿಯನ್ನು ಮೇಲೆ ಎಬ್ಬಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

    ದಸರಾದಲ್ಲಿ ಪೊಲೀಸರು ಕೇಸರಿ ಬಣ್ಣದ ವಸ್ತ್ರ ಧರಿಸಿದಕ್ಕೆ ಆಕ್ಷೇಪ ತೆಗೆದಿದ್ದಾರೆ. ದೇಶದಲ್ಲಿ ಕೇಸರಿ ಬ್ಯಾನ್ ಆಗಿದೆಯಾ? ಕೇಸರಿ ಬಣ್ಣ ಪಕ್ಷಕ್ಕೆ ಸೀಮಿತವಾಗಿದೆಯಾ? ಎಂದು ಪ್ರಶ್ನೆ ಮಾಡಿದ ಅವರು, ನಾಳೆ ರಾಷ್ಟ್ರಧ್ವಜದ ಕೇಸರಿ ಬಣ್ಣ ತೆಗೆದು ಹಸಿರು ಬಣ್ಣ ಇದ್ರೆ ಸಾಕು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

  • ಕಾಂಗ್ರೆಸ್‍ಗೆ ಸೋನಿಯಾ ಗಾಂಧಿ ಅನಿವಾರ್ಯತೆ ಇದೆ, ನಮಗೆ ಇಲ್ಲ: ಪ್ರತಾಪ್ ಸಿಂಹ

    ಕಾಂಗ್ರೆಸ್‍ಗೆ ಸೋನಿಯಾ ಗಾಂಧಿ ಅನಿವಾರ್ಯತೆ ಇದೆ, ನಮಗೆ ಇಲ್ಲ: ಪ್ರತಾಪ್ ಸಿಂಹ

    ಮೈಸೂರು: ಕಾಂಗ್ರೆಸ್‍ನವರಂತೆ ನಾವು ನಮ್ಮ ಪಕ್ಷದವರ ಹೆಸರನ್ನು ಇಡುತ್ತಿಲ್ಲ. ಸೋನಿಯಾ ಗಾಂಧಿಯನ್ನು ಓಲೈಸಲು ಕಾಂಗ್ರೆಸ್ ಎಲ್ಲದಕ್ಕೂ ರಾಜೀವ್ ಗಾಂಧಿ ಹೆಸರು ಬಳಸಿತ್ತು. ನಮಗೆ ಆ ರೀತಿ ಅನಿವಾರ್ಯತೆ ಏನು ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರದಲ್ಲಿ ರಾಜೀವ್ ಗಾಂಧಿಗು ರಾಷ್ಟ್ರೀಯ ಉದ್ಯಾನವನಕ್ಕು ಏನು ಸಂಬಂಧ? ಸಂಬಂಧವೇ ಇಲ್ಲದವರನ್ನು ಅನೇಕ ಕೇಂದ್ರ ಹಾಗೂ ಸಂಸ್ಥೆಗಳಿಗೆ ಹೆಸರಿಡಲಾಗಿದೆ. ಹೀಗಾಗಿ ಇದನ್ನು ಬದಲಾಯಿಸಲು ಮುಂದಾಗಿದ್ದೇವೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

    ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಭಾರತದ ಮೊದಲ ಲೆ.ಜನರಲ್. ಸ್ಥಳೀಯವಾಗಿಯು ಅವರ ಹೆಸರು ರಾಷ್ಟ್ರೀಯ ಉದ್ಯಾನವನಕ್ಕೆ ಸೂಕ್ತ. ಅವರಿಗೆ ಗೌರವ ಸೂಚಿಸುವ ಭಾಗವಾಗಿ ಹೆಸರು ಬದಲಾವಣೆ ಮಾಡುತ್ತಿದ್ದೇವೆ. ಮೈಸೂರು ವಿಮಾನ ನಿಲ್ದಾಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರು ಇಡುತ್ತಿದ್ದೇವೆ. ರೈಲ್ವೆ ನಿಲ್ದಾಣಕ್ಕೂ ರಾಜ ಮನೆತನದವರ ಹೆಸರು ಇಡುತ್ತಿದ್ದೇವೆ. ನಾವು ಸಕಾರಣದೊಂದಿಗೆ ಹೆಸರು ಇಡುತ್ತೇವೆ ವಿನಹಃ, ಯಾರನ್ನೋ ಓಲೈಸಲು ಅಲ್ಲ ಎಂದು ಹೆಸರು ಬದಲಾವಣೆಯನ್ನು ಪ್ರತಾಪ್ ಸಿಂಹ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರಿನ ಜನರಿಗೆ ನವಿಲು ಯಾವುದು? ಕೆಂಭೂತ ಯಾವುದು ಎಂಬುದು ಗೊತ್ತಿದೆ: ಮಹದೇವಪ್ಪ

    ಹಬ್ಬಕ್ಕೆ ನಿರ್ಬಂಧ, ಹಠ ಬೇಡ:
    ಗಣೇಶ್ ಹಬ್ಬ ಆಚರಣೆಗೆ ಹಲವು ನಿರ್ಬಂಧ ವಿಚಾರದ ಎದ್ದಿರುವ ವಿರೋಧದ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರ ನಿಬರ್ಂಧ ಹೇರಿ ಹಬ್ಬಕ್ಕೆ ಅನುಮತಿ ನೀಡಿದೆ. ನಾವು ಮೊದಲಿನ ರೀತಿಯೇ ಮೆರವಣಿಗೆ ಮಾಡಬೇಕೆಂಬ ಹಠ ಹಿಡಿಯುವ ಸ್ಥಿತಿ ಇಲ್ಲ. ಸರ್ಕಾರವೇನು ಸಂಪೂರ್ಣ ನಿರ್ಬಂಧ ಮಾಡಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಜೀವ ಇದ್ದರೆ ಮುಂದೆ ಇನ್ನು ಅದ್ದೂರಿಯಾಗಿ ಹಬ್ಬ ಆಚರಿಸಬಹುದು. ಯಾರು ದಯವಿಟ್ಟು ಹಠಕ್ಕೆ ಮುಂದಾಗಬೇಡಿ. ಸರ್ಕಾರ ಹೇಳಿರುವ ಮಾರ್ಗಸೂಚಿ ಪಾಲಿಸಿ ಹಬ್ಬ ಆಚರಿಸಿ ಎಂದು ಕರೆ ನೀಡಿದರು.

  • ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

    ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

    – ರಾಜೀವ್ ಗಾಂಧಿ ದೇಶಕ್ಕೆ ಉತ್ತಮ ಅಡಿಪಾಯ ಹಾಕಿದ್ರು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಮ್ಮನ್ನು ರಾಜೀವ್ ಗಾಂಧಿಯವರು ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆಯೊಂದನ್ನು ಇಂದು ಬಿಚ್ಚಿಟ್ಟರು.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕೊರಿಯಾಗೆ ಹೋಗಲು ನನ್ನನ್ನು ರಾಜೀವ್ ಗಾಂಧಿ ಸೆಲೆಕ್ಟ್ ಮಾಡಿದ್ದರು. ಆಗ ನಮ್ಮ ರಾಜ್ಯದ 5 ಮಂದಿ ಸಂಸದರು ನನ್ನ ವಿರುದ್ಧ ಇವನು ಗೂಂಡಾ ಅವರನ್ನು ಕಳಿಸಬೇಡಿ ಅಂತ ರಾಜೀವ್ ಗಾಂಧಿಗೆ ದೂರು ಹೇಳಿದ್ರು. ಆಗ ರಾಜೀವ್ ಗಾಂಧಿಯವರು ನನ್ನ ಬಗ್ಗೆ ಮಾಹಿತಿ ತರಿಸಿಕೊಂಡು ವಿವಾದಿತ ವ್ಯಕ್ತಿಗಳೇ ಮುಂದೆ ಬೆಳೆಯೋದು ಅಂತ ದೂರು ಕೊಟ್ಟವರಿಗೆ ಹೇಳಿ ನನ್ನನ್ನ ಕೊರಿಯಾಗೆ ಕಳಿಸಿದ್ರು ಎಂದು ಸ್ವಾರಸ್ಯಕರವಾದ ಕಥೆಯನ್ನು ಹೇಳಿದರು.

    ವಿರೇಂದ್ರ ಪಾಟೀಲ್ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಬೇಕು ಅಂತ ರಾಜೀವ್ ಗಾಂಧಿಗೆ ಇರಲಿಲ್ಲ. ವೀರೇಂದ್ರ ಪಾಟೀಲ್ ಅವ್ರ ಆರೋಗ್ಯ ಸರಿ ಇಲ್ಲದ ಕಾರಣ ಆ ನಿರ್ಧಾರ ತೆಗೆದುಕೊಂಡ್ರು. ನಂತರ ಬಂಗಾರಪ್ಪ ಅವರನ್ನ ಸಿಎಂ ಮಾಡಿದರು. ಬಂಗಾರಪ್ಪ ಅವ್ರಿಗೆ ನಿಮ್ಮ ಕ್ಯಾಬಿನೆಟ್ ನಲ್ಲಿ ಪ್ರತಿ ಜಾತಿ, ವರ್ಗದಿಂದ ಒಬ್ಬೊಬ್ಬರಿಗೆ ಯುವಕರಿಗೆ ಅವಕಾಶ ಕೊಡಬೇಕು ಅಂತ ಹೇಳಿದ್ರು. ಆಗ ನಾನು ಕೂಡ ಮಂತ್ರಿ ಆದೆ ಎಂದರು. ಇದನ್ನೂ ಓದಿ: ವಧು, ವರರಿಗೆ ಪೆಟ್ರೋಲ್ ಗಿಫ್ಟ್ ಕೊಟ್ಟ ಹಾಸ್ಯ ನಟ

    ರಾಜೀವ್ ಗಾಂಧಿ ಪ್ರಧಾನಿ ಆದ ಮೇಲೆ 63 ಜನಕ್ಕೆ ಮೊದಲ ಬಾರಿಗೆ ಯುವಕರಿಗೆ ಟಿಕೆಟ್ ಕೊಟ್ಟರು. ಯುವಕರಿಗೆ ಶಕ್ತಿ ತಂದು ಕೊಟ್ಟವರೇ ರಾಜೀವ್ ಗಾಂಧಿ. ಯುವಕರಿಗೆ 18 ವರ್ಷಕ್ಕೆ ಮತದಾನದ ಹಕ್ಕನ್ನು ಕೊಟ್ಟಾಗ ಭಾರೀ ವಿರೋಧ ಮಾಡಿದರು. ಆದರೂ ಮತದಾನದ ಹಕ್ಕನ್ನು ಯುವಕರಿಗೆ ಕೊಟ್ಟರು. ರಾಜೀವ್ ಗಾಂಧಿಯವರು ಪಂಚಾಯ್ತಿಯಲ್ಲಿ ಮೀಸಲಾತಿ ಕೊಟ್ಟವರು. ದೂರಸಂಪರ್ಕದಲ್ಲಿ ಕ್ರಾಂತಿ ಮಾಡಿದವರು. ಕಂಪ್ಯೂಟರ್ ಕ್ರಾಂತಿ ಮಾಡಿದರು. ಹೊಸ ಶಿಕ್ಷಣ ನೀತಿ ತಂದರು. ಒಟ್ಟಿನಲ್ಲಿ ಈ ದೇಶಕ್ಕೆ ಉತ್ತಮ ಅಡಿಪಾಯವನ್ನು ರಾಜೀವ್ ಗಾಂಧಿ ಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  48 ವರ್ಷಗಳಾದ್ರೂ ಲಕ ಲಕ ಹೊಳೆಯುತ್ತಿದೆ ದೇವರಾಜ ಅರಸು ಬಳಸಿದ ಬೆಂಜ್ ಕಾರು

    ಇತ್ತೀಚೆಗೆ ಒಂದು ಸಮೀಕ್ಷೆ ಬಂದಿದೆ. ಮೋದಿ ಅವ್ರ ಜನಪ್ರಿಯತೆ ಇಂದು ಕಡಿಮೆ ಆಗಿದೆ. ಈಗ ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಅದನ್ನ ನಾವೆಲ್ಲ ಬಳಸಿಕೊಳ್ಳಬೇಕು. ಹೊಸ ಯುಗ ಬಂದಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ. ನಾವೆಲ್ಲ ಕಾರ್ಯಕರ್ತರಾಗಿ ದುಡಿಯೋಣ. ಯಾರೂ ಇಲ್ಲಿ ನಾಯಕರಲ್ಲ. ಮೊದಲು ನಾವು ಕಾರ್ಯಕರ್ತರು. ಕಾರ್ಯಕರ್ತರಾಗಿ ಕೆಲಸ ಮಾಡೋಣ. ಪಕ್ಷವನ್ನ ಅಧಿಕಾರಕ್ಕೆ ತರಲು ಕೆಲಸ ಮಾಡೋಣ. ಮುಂದೆ ಸ್ವಾತಂತ್ರ್ಯ ಹೋರಾಟಗಾರರು, ಕೋವಿಡ್ ನಿಂದ ಸತ್ತವರ ಮನೆಗೆ ಹೋಗೋಣ. ಮುಂದಿನ ಅಧಿವೇಶನ ದಲ್ಲಿ ಕೋವಿಡ್ ನಿಂದ ಸತ್ತವರ ಪರ ಹೋರಾಡ ಕೆಲಸ ಮಾಡೋಣ. ಬಿಜೆಪಿ ಸರ್ಕಾರ ಒಂದೇ ಒಂದು ಜನ ಪರ ಕೆಲಸ ಮಾಡಿಲ್ಲ. ಜನರಿಗೆ ಲಸಿಕೆ, ಬೆಡ್, ಔಷಧಿ ಕೊಡಲು ಆಗದ ಈ ಸರ್ಕಾರ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ನಾವೆಲ್ಲರು ಕೆಲಸ ಮಾಡಬೇಕು. ಬ್ಲ್ಯಾಕ್ ಮಟ್ಟದಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಇದೇ ವೇಳೆ ಡಿಕೆಶಿ ಕರೆ ನೀಡಿದರು.

    ಇದೇ ವೇಳೆ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಡಿಕೆಶಿ, ಪೊಲೀಸರು ನಮಗೆ ಕಾರ್ಯಕ್ರಮ ಮಾಡಲು ಅವಕಾಶ ಕೊಡಲ್ಲ ಅಂದ್ರು. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡ್ತಿದ್ದಾರೆ. ಅವ್ರಿಗೊಂದು ನಿಯಮ ನಮಗೊಂದು ನಿಯಮನಾ?, ಜನಾಶೀರ್ವಾದ ಯಾತ್ರೆಯಲ್ಲಿ ಎಸ್ಪಿ ಇದ್ದರು ಗುಂಡು ಹಾರಿಸಿದ್ರು. 3 ಜನ ಪೇದೆಗಳನ್ನ ಸಸ್ಪೆಂಡ್ ಮಾಡಿದ್ರು. ಸಿಎಂ ಅವ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಂತಹ ದೊಡ್ಡ ಸಾಧನೆ ಮಾಡಿದ್ದಾರೆ. ಪೊಲೀಸರು ಹೀಗೆ ಮಾಡಿದ್ರೆ ನಾವು ಪೊಲೀಸರ ವಿರುದ್ಧವೇ ಹೋರಾಟ ಮಾಡಬೇಕಾಗುತ್ತೆ. ಒಬ್ಬೆ ಒಬ್ಬ ನಾಯಕರನ್ನು ಪೊಲೀಸರು ಬಂಧನ ಮಾಡಿಲ್ಲ. ಇದ್ಯಾವ ನ್ಯಾಯ. ಹೀಗೆ ಮಾಡಿದ್ರೆ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ ಎಂದರು.

  • ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

    ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

    ಮಡಿಕೇರಿ: ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಜನರಲ್ ಕಾರ್ಯಪ್ಪ ಹೆಸರಿಡುವುದು ಸೂಕ್ತ. ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ನಾಮಕರಣ ಮಾಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ನೆಹರು ಹೆಸರಲ್ಲಿ ಹಲವು ಸಂಸ್ಥೆಗಳಿವೆ. ಆದರೆ ದೇಶದ ಸೇನೆಯ ಮೊದಲ ಜನರಲ್ ಆಗಿದ್ದ ಕೊಡಗಿನ ಕಾರ್ಯಪ್ಪ ಅವರು ಮೂರು ಸೇನಾ ಪಡೆಗಳ ಮುಖ್ಯಸ್ಥರಾಗಿದ್ದವರು. ಅವರಿಗೆ ಗೌರವ ಕೊಡಲು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಕಾರ್ಯಪ್ಪ ಅವರ ಹೆಸರಿಡುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೂ ನಾನು ಆಗ್ರಹಿಸುತ್ತೇನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಈ ಕುರಿತು ಪತ್ರ ಬರೆಯುತ್ತೇನೆ ಎಂದಿದ್ದಾರೆ.

    ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು
    ಕೊಡಗಿನಲ್ಲಿ ಹುಟ್ಟಿ ನಾಡಿನುದ್ದಕ್ಕೂ ಹರಿಯುವ ಕಾವೇರಿಯ ಹೆಸರನ್ನು ಇಂದಿರಾ ಕ್ಯಾಂಟೀನ್ ಗೆ ಇಡಬೇಕು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರುವುದನ್ನು ಅಲ್ಲಗಳೆದಿರುವ ಶಾಸಕ ಅಪ್ಪಚ್ಚು ರಂಜನ್, ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರಬಹುದು. ಆದರೆ ಕಾವೇರಿ ಹೆಸರಿಡುವುದು ಒಳ್ಳೆಯದು ಎಂದು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

    ಕಾವೇರಿ ನದಿಯಿಂದ ಕರ್ನಾಟಕ ತಮಿಳುನಾಡು ಮತ್ತು ಪಾಂಡಿಚೇರಿ ಸೇರಿ ಮೂರು ರಾಜ್ಯಗಳಿಗೆ ನೀರು ಸಿಗುತ್ತೆ. ಕರ್ನಾಟಕ, ತಮಿಳುನಾಡಿಗೆ ಕಾವೇರಿ ಮಾತೆ ಕೊಡುಗೆ ದೊಡ್ಡದಿದೆ. ಸಾಕಷ್ಟು ರೈತರು ಕಾವೇರಿ ನೀರು ಬಳಸಿ ಕೃಷಿ ಮಾಡುತ್ತಾರೆ. ಅದರಿಂದ ಬೆಳೆದ ಅನ್ನವನ್ನು ಇಂದಿರಾ ಕ್ಯಾಂಟಿನಗಳಲ್ಲಿ ಊಟ ಮಾಡುತಿದ್ದೇವೆ. ಹೀಗಾಗಿ ಕಾವೇರಿ ಹೆಸರಿಡುವುದು ಸೂಕ್ತ ಎಂದಿದ್ದಾರೆ. ಇಂದಿರಾ ಹೆಸರನ್ನು ತೆಗೆದು ಕಾವೇರಿ ಕ್ಯಾಂಟೀನ್ ಹೆಸರಿಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

    ಮೇಕೆದಾಟು ಆಗಲೇಬೇಕು
    ಮೇಕೆದಾಟು ನಮ್ಮ ರಾಜ್ಯದ ಸಂಪತ್ತು, ನಾವು ಅಲ್ಲಿ ಅಣೆಕಟ್ಟೆ ಮಾಡಲು ತಮಿಳುನಾಡಿನವರನ್ನು ಕೇಳಿ ಮಾಡಬೇಕಾದ ಅಗತ್ಯವಿಲ್ಲ. ಹೀಗಾಗಿ ಸರ್ಕಾರ ಮೇಕೆದಾಟು ಕಾಮಗಾರಿಯನ್ನು ಮಾಡಲೇಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. ಮೇಕೆದಾಟು ಯೋಜನೆ ಮಾಡುವುದರಿಂದ ರಾಜ್ಯದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಬರೋಬ್ಬರಿ 60 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಬಹುದು. ಆದ್ದರಿಂದ ಸರ್ಕಾರ ಕೂಡಲೇ ಯೋಜನೆ ಕಾಮಗಾರಿಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ರಾಷ್ಟ್ರೀಯ ಸಂಪತ್ತು ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್, ಕಾವೇರಿ ಕೂಡ ರಾಷ್ಟ್ರೀಯ ಸಂಪತ್ತು. ಆದರೆ ಕಾವೇರಿ ನೀರನ್ನು ನಾವು ಎಷ್ಟನ್ನು ಬಳಸಿಕೊಂಡು ಎಷ್ಟನ್ನು ತಮಿಳುನಾಡಿಗೆ ಕೊಡಬೇಕೆಂದು ನಿರ್ಧಾರವಾಗಿಲ್ಲವೆ. ಕೇಂದ್ರವೇ ಅದನ್ನು ನಿರ್ಧರಿಸಿರುವಾಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ಆಗುತ್ತದೆ. ಕೇಂದ್ರ ನೀರಾವರಿ ಸಲಹಾ ಸಮಿತಿಯ ನಿರ್ದೇಶನದಂತೆ ಮೇಕೆದಾಟು ಯೋಜನೆ ಕಾಮಗಾರಿ ಆರಂಭ ಆಗಲಿ ಎಂದು ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

  • ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತಾ ಶಾ ಪುತ್ರನ ಹೆಸರಿಡಬಹುದು: ಟಿಎಂಸಿ ಸಂಸದ

    ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತಾ ಶಾ ಪುತ್ರನ ಹೆಸರಿಡಬಹುದು: ಟಿಎಂಸಿ ಸಂಸದ

    ನವದೆಹಲಿ: ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತ್ ಶಾ ಅವರು ತಮ್ಮ ಪುತ್ರನ ಹೆಸರಿಡಬಹುದು ಎಂದು ಟಿಎಂಸಿ ಸಂಸದ ಮದನ್ ಮಿತ್ರ ವ್ಯಂಗ್ಯವಾಡಿದ್ದಾರೆ.

    ವಿಷಯಗಳ ವಿಷಯಾಂತರ ಮಾಡೋದು ಅವರ (ಬಿಜೆಪಿ) ಸಂಸ್ಕೃತಿ. ಇಂದು ಪ್ರಧಾನಿ ಮೋದಿ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಿಸಿದ್ದಾರೆ. ಬಹುಶಃ ಮುಂದೊಂದು ದಿನ ಅಮಿತ್ ಶಾ, ನರೇಂದ್ರ ಮೋದಿ ಸ್ಟೇಡಿಯಂ ಹೆಸರು ತೆಗೆದು ಪುತ್ರ ಜಯ್ ಶಾ ಹೆಸರಿಡುತ್ತಾರೆ ಅನ್ನಿಸುತ್ತೆ ಎಂದು ಟೀಕಿಸಿದ್ದಾರೆ. ಟಿಎಂಸಿಯ ಮತ್ತೋರ್ವ ಸಂಸದ ಸುಖೇಂದ್ರ ಕೇಶವ್ ರಾಯ್, ಇದೊಂದು ಕೆಳಮಟ್ಟದ ರಾಜಕೀಯ ಎಂದು ಕಿಡಿಕಾರಿದ್ದಾರೆ.

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಎಂದು ಬದಲಿಸಿದೆ. ಕೇಂದ್ರದ ಈ ನಿರ್ಣಯ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಮೋದಿ ಸರ್ಕಾರದ ಈ ನಿರ್ಣಯವನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಖಂಡಿಸಿವೆ.

    1991-92 ರಲ್ಲಿ ಈ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲು ಆರಂಭಿಸಿದ್ದು, ಕ್ರೀಡಾ ಸಾಧಕರಿಗೆ 25 ಲಕ್ಷ ರೂ. ನಗದು ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ. ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾವಣೆ ಹಿಂದೆ ಮೋದಿ ಸೇಡಿನ ರಾಜಕಾರಣ: ಎಸ್. ಮನೋಹರ್

  • ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ- ತಂದೆಯ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಮಾತು

    ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ- ತಂದೆಯ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಮಾತು

    ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ದಿನದಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ರಾಜೀವ್ ಗಾಂಧಿ ಅವರು ಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನಯ ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ ತಂದೆಯನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯನವರು ರಾಜೀವ್ ಗಾಂಧಿ ಜಯಂತಿ ಹಿನ್ನೆಲೆ ಮಾಜಿ ಪ್ರಧಾನಿಗಳಿಗೆ ನಮನಗಳನ್ನು ಸಲ್ಲಿಸಿದ್ದಾರೆ. ಟೆಲಿಕಾಂ ಕ್ರಾಂತಿ, ಕಂಪ್ಯೂಟರೀಕರಣ, ಪಂಚಾಯತ್ ರಾಜ್, ಮತದಾನ ವಯಸ್ಸಿನ ಇಳಿಕೆ ಮೊದಲಾದ ಪುರೋಗಾಮಿ ಕಾರ್ಯಕ್ರಮಗಳ ಮೂಲಕ ಬಲಶಾಲಿಯಾದ ಆಧುನಿಕ ಭಾರತ ಕಟ್ಟಿದ, ನಮಗೆಲ್ಲ ಅಭಿವೃದ್ದಿಯ ದಾರಿ ತೋರಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ಹುಟ್ಟುಹಬ್ಬದ ದಿನದ ಗೌರವಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ.

     

  • ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ

    ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ

    ಚೆನ್ನೈ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಂತಕಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಅಪರಾಧಿಯಾಗಿರುವ ನಳಿನಿ ಕಳೆದ 29 ವರ್ಷಗಳಿಂದ ವೆಲ್ಲೊರು ಮಹಿಳಾ ಜೈಲಿನಲ್ಲಿದ್ದಾಳೆ. ಸದ್ಯ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದು, ಕಳೆದ 29 ವರ್ಷಗಳಲ್ಲಿ ಆಕೆ ಇದೇ ಮೊದಲ ಬಾರಿಗೆ ಇಂತಹ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿದೆ ಎಂದು ಆಕೆಯ ಪರ ವಕೀಲ ಪುಗಲೆಂತಿ ಮಾಹಿತಿ ನೀಡಿದ್ದಾರೆ.

    ಜೈಲಿನಲ್ಲಿ ನಳಿನಿ ಹಾಗೂ ಇನ್ನೊಬ್ಬ ಅಪರಾಧಿ ಮಧ್ಯೆ ಜಗಳ ನಡೆದಿದೆ. ಈ ವಿಚಾರವನ್ನು ಇತರರು ದೊಡ್ಡ ವಿಷಯವನ್ನಾಗಿ ಮಾಡಿದರು. ಪರಿಣಾಮ ನಳಿನಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದರು ಎಂದು ವಕೀಲರು ವಿವರಿಸಿದರು.

    ಇದಕ್ಕೂ ಮೊದಲು ನಳಿನಿ ಯಾವತ್ತೂ ಯಾವುದೇ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಹೀಗಾಗಿ ಈ ಸಂಬಂಧ ನಿಜವಾದ ಕಾರಣ ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಪುಗಲೆಂತಿ ಇದೇ ವೇಳೆ ಒತ್ತಾಯಿಸಿದ್ದಾರೆ. ಇತ್ತ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಳಿನಿ ಪತಿ ಮುರುಗನ್ ಜೈಲಿನಿಂದ ವಕೀಲರಿಗೆ ಕರೆ ಮಾಡಿ, ಪತ್ನಿಯನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ನಾನು ಆದಷ್ಟು ಬೇಗ ಕಾನೂನಿನ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

    1991ರ ಮೇ 21 ರಂದು ರಾಜೀವ್ ಗಾಂಧಿ ಹತ್ಯೆಯಾಗಿತ್ತು. ತಮಿಳುನಾಡಿನ ಶ್ರೀಪೆರಂಬೂರ್ನಲ್ಲಿ ಚುನಾವಣಾ ಸಮಾವೇಶದ ಸಮಯದಲ್ಲಿ ಎಲ್‍ಟಿಟಿಇ ಸಂಘಟನೆಯ ಆತ್ಮಾಹುತಿ ಬಾಂಬ್ ದಾಳಿಗೆ ಮಾಜಿ ಪ್ರಧಾನಿ ಬಲಿಯಾಗಿದ್ದರು. ಈ ಸಂಬಂಧ ನಳಿನಿ, ಪತಿ ಮುರುಗನ್ ಸೇರಿ 7 ಮಂದಿಯ ಮೇಲೆ ಆರೋಪ ಸಾಬೀತಾಗಿದೆ.

  • ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ: ತಂದೆಯ ಪುಣ್ಯತಿಥಿಗೆ ರಾಹುಲ್ ನಮನ

    ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ: ತಂದೆಯ ಪುಣ್ಯತಿಥಿಗೆ ರಾಹುಲ್ ನಮನ

    ನವದೆಹಲಿ: ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಪ್ಪ ರಾಜೀವ್ ಗಾಂಧಿಯವರ ಪುಣ್ಯತಿಥಿಗೆ ನಮನ ಸಲ್ಲಿಸಿದ್ದಾರೆ.

    ಇಂದು ಭಾರತದ 6ನೇ ಪ್ರಧಾನ ಮಂತ್ರಿಯಾಗಿ ಸೇವೆಸಲ್ಲಿಸಿದ್ದ ರಾಜೀವ್ ಗಾಂಧಿಯವರ 29ನೇ ಪುಣ್ಯತಿಥಿ, ಈ ಸಮಯದಲ್ಲಿ ಅಪ್ಪನನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ರಾಹುಲ್, ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಪ್ರಧಾನ ಮಂತ್ರಿಯಾಗಿ ರಾಜೀವ್ ಜಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಸಾಗಿಸಿದ್ದಾರೆ. ದೇಶವನ್ನು ಮುಂದೆ ತೆಗದುಕೊಂಡು ಹೋಗುವ ದೃಷ್ಟಿಯಿಂದ ಮತ್ತು ರಾಷ್ಟ್ರವನ್ನು ಸಬಲೀಕರಣಗೊಳಿಸಲು ಅವರು ಅನೇಕ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಇಂದು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಪ್ರೀತಿಯಿಂದ ಮತ್ತು ಕೃತಜ್ಞತೆಯಿಂದ ವಂದಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ, ಪುಣ್ಯತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ದೇಶಕ್ಕಾಗಿ ಪ್ರಾಣಬಿಟ್ಟ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರಿಗೆ ತುಂಬು ಹೃದಯದ ನಮನ ಎಂದು ಬರೆದುಕೊಂಡಿದ್ದಾರೆ.

    ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿನ ಶ್ರೀಪೆರಂಬುದೂರ್ ಗೆ ಬಂದಿದ್ದ ರಾಜೀವ್ ಗಾಂಧಿಯವರನ್ನು 1991 ಮೇ 21ರಂದು ಹತ್ಯೆ ಮಾಡಲಾಗಿತ್ತು. ಭಾಷಣ ಮಾಡಲು ಸ್ಟೇಜ್ ಕಡೆ ಹೋಗುತ್ತಿದ್ದಾಗ ರಾಹುಲ್ ಗಾಂಧಿ ಬಳಿ ಬಂದ ಮಹಿಳಾ ಸೂಸೈಡ್ ಬಾಂಬರ್ ತೆನ್ಮೋಜಿ ರಾಜರತ್ಮಂ ಆರ್.ಡಿ.ಎಕ್ಸ್ ಬಾಂಬ್ ಬ್ಲಾಸ್ಟ್ ಮಾಡಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ್ದಳು. ಈ ವೇಳೆ ರಾಜೀವ್ ಗಾಂಧಿ ಜೊತೆ ಇನ್ನೂ 14 ಮಂದಿ ಸಾವನ್ನಪ್ಪಿದ್ದರು.