Tag: ರಾಜು ಕಾಗೆ

  • ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ

    ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ

    ಚಿಕ್ಕೋಡಿ: ನನ್ನ ಎದುರೇ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದವನು ಮಾನಸಿಕ ಅಸ್ವಸ್ಥ ಎಂದು ಶಾಸಕ ರಾಜು ಕಾಗೆ (Raju Kage) ತಿಳಿಸಿದರು. ಅಲ್ಲದೇ ವ್ಯಕ್ತಿಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು.

    ಶಾಸಕ ರಾಜು ಕಾಗೆ ಎದುರೇ ಕಾಂಗ್ರೆಸ್ ಕಾರ್ಯಕರ್ತನಿಂದ ಪತ್ರಕರ್ತರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ. ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಬೇವನೂರು ಗ್ರಾಮದ ಜಾತ್ರೆಗೆ ಆಹ್ವಾನಿಸಿದಾಗ ನಾನು ಹೋಗಿದ್ದೆ. ಜಾತ್ರೆಯಲ್ಲಿ ಮೋಳೆ ಗ್ರಾಮದ ಒಬ್ಬ ಯುವಕ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಅವನ ಹೆಸರು ನನಗೆ ಗೊತ್ತಿಲ್ಲ. ಅವನು ಸೈಕಿಕ್ ಇದ್ದಾನೆ. ಅಲ್ಲಿಗೆ ವಾದ್ಯಗಳ ಸೌಂಡ್ ಜೋರಾಗಿದ್ದ ಕಾರಣ ಅವನು ಮಾತನಾಡಿದ್ದು ನನಗೆ ಕೇಳಿಸಿಲ್ಲ. ನನಗೆ ಕೇಳಿಸಿದ್ದರೆ ಅಲ್ಲೇ ಅವನಿಗೆ ನಾನು ತಿಳಿ ಹೇಳುತ್ತಿದ್ದೆ ಎಂದು ಸ್ಪಷ್ಟಪಡಿಸಿದರು.

    ಬೆಳಗ್ಗೆ ಕೆಲವು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಈ ವೀಡಿಯೋ ನೋಡಿ ನನಗೂ ಆಶ್ಚರ್ಯವಾಯಿತು. ನನ್ನ 40 ವರ್ಷದ ರಾಜಕಾರಣದಲ್ಲಿ ಮಾಧ್ಯಮಗಳ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ. ಆ ಹೇಳಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ. ನನ್ನ ಮೇಲಿನ‌ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ – ಮೈಸೂರಿನಲ್ಲಿ ಒಂದೇ ದಿನ ಬರೋಬ್ಬರಿ 7,336 ಕೇಸ್ ದಾಖಲು!

    ಶಾಸಕ ರಾಜು ಕಾಗೆ ಎದುರೇ ಸೆಲ್ಫಿ ವೀಡಿಯೋ‌ ಮಾಡಿ ಮಾಧ್ಯಮದವರಿಗೆ ಸಂತೋಷ ಎಂಬಾತ ಧಮ್ಕಿ ಹಾಕಿದ್ದ. ಶಾಸಕ ರಾಜು ಕಾಗೆ ವಿರುದ್ಧ ಸುದ್ದಿ ಹಾಕಿದರೆ ಮನೆಗೆ ನುಗ್ಗಿ ಕೈ-ಕಾಲು ಮುರಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದ. ಈ ದೃಶ್ಯದ ವೀಡಿಯೋ ವೈರಲ್‌ ಆಗಿತ್ತು.

  • ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಚಿಕ್ಕೋಡಿ: ಕಾಗವಾಡ ಕಾಂಗ್ರೆಸ್ ಶಾಸಕ (Kagwad Congress MLA) ರಾಜು ಕಾಗೆ (Raju Kage) ಆಪ್ತನೊಬ್ಬ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ಶಾಸಕ ರಾಜು ಕಾಗೆ ಎದುರು ಕಾಗೆ ಆಪ್ತ ಸಂತೋಷ ಚುರಮೂಲೆ ಎಂಬಾತ ರಾಜು ಕಾಗೆ ಮುಂದೆಯೇ ವಿಡಿಯೋ ಮಾಡಿ ಮಾಧ್ಯಮದವರಿಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕೆಂಡಾಮಂಡಲ

     

    ಬೆವನೂರ ಗ್ರಾಮದ ಅಮೋಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ  ಶಾಸಕರನ್ನು ಮೆಚ್ಚಿಸಲು ರಾಜು ಕಾಗೆಯ ಬಗ್ಗೆ ಮಾಧ್ಯಮದವರು ಬೇರೆ ದೃಷ್ಟಿಯಿಂದ ಸುದ್ದಿಗಳನ್ನು ವೈರಲ್ ಮಾಡಿದರೆ ಮನೆ ನುಗ್ಗಿ ಕೈ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದಾನೆ.

    ತನ್ನ ಎದುರೇ ಬೆದರಿಕೆ ಹಾಕುತ್ತಿದ್ದರೂ ಶಾಸಕರು ಮಾತ್ರ ಏನು ಮಾತನಾಡದೇ ನಿಂತಿದ್ದರು.

  • ಮೋದಿ ತೀರಿಕೊಂಡ್ರೆ ಯಾರೂ ಪಿಎಂ ಆಗೋದೇ ಇಲ್ವಾ? – ನಾಲಿಗೆ ಹರಿಬಿಟ್ಟ `ಕೈ’ ಶಾಸಕ ರಾಜು ಕಾಗೆ!

    ಮೋದಿ ತೀರಿಕೊಂಡ್ರೆ ಯಾರೂ ಪಿಎಂ ಆಗೋದೇ ಇಲ್ವಾ? – ನಾಲಿಗೆ ಹರಿಬಿಟ್ಟ `ಕೈ’ ಶಾಸಕ ರಾಜು ಕಾಗೆ!

    – ಇಲ್ಲಿ ಕಾಂಗ್ರೆಸ್‌ ಬೇಕು, ಕೇಂದ್ರದಲ್ಲಿ ಮೋದಿನೇ ಬೇಕು ಅಂತಾರೆ ಎಂದ ಶಾಸಕ

    ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ (PM Modi) ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ (Raju Kage) ನಾಲಿಗೆ ಹರಿಬಿಟ್ಟಿದ್ದಾರೆ.

    ಬೆಳಗಾವಿಯ (Belagavi) ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ (Election Campaign) ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಪ್ರಧಾನಿ ಆಗೋದೇ ಇಲ್ಲವಾ? ಮೊದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

    ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರುರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದ್ರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದೇ ವೇಳೆ ನಾನೂ ವಿದ್ಯಾವಂತ ಇದ್ದೀನಿ, ನನಗೂ ಬುದ್ಧಿ ಇದೆ, ನಾನೇನು ಕುರಿ ಅಲ್ಲ. ನಾನು ಸಹ ಈ ದೇಶವನ್ನ ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಾನು ಪ್ರೀತಿಸುತ್ತಿದ್ದ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ!

  • ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮಾತನಾಡಿದ ವಿಚಾರಕ್ಕೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ (Apology)  ಕೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ.

    ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ಭಾನುವಾರ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. ನಾನು ಹೇಳಿದ್ದು ವಯಸ್ಸು ಆಯ್ತಲ್ಲ, ಮುದುಕನಾದೆನಲ್ಲ ಅಂತಾ ಮನಸ್ಸಿಗೆ ನೋವಾಯ್ತು ಅಂತಾ ಹೇಳಿದೆ ಎಂದರು. ಇದನ್ನೂ ಓದಿ:‌ ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ಶಬ್ಧದ ಅರ್ಥ ಸಾವಿರಾರೂ ರೀತಿಯಲ್ಲಿ ನೀವು ಅರ್ಥ ಮಾಡಿಕೊಳ್ಳಬಹುದು. ನನಗೆ ವಯಸ್ಸಾಯ್ತು ಅಂತಾ ಮಾನಸಿಕ ನೋವಾಯ್ತು. ಏನಾದರೂ ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆ ಕೇಳುತ್ತಿದ್ದೇನೆ. ಯಾವುದೇ ಉದ್ದೇಶದಿಂದ ನಾನು ಮಾತನಾಡಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ರಾಜು ಕಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ತುಂಬಿದ ಸಭೆಯಲ್ಲಿ ನರ್ಸ್‌ಗಳ ಸೌಂದರ್ಯದ ಬಗ್ಗೆ ಶಾಸಕ ರಾಜು ಕಾಗೆ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು. ಬೆಳಗಾವಿ (Belagvi) ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ.ನಾಗನೂರು ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಭಾಷಣ ಮಾಡಿದ್ದ ಅವರು, ಲಿವರ್ ಟ್ರಾನ್ಸ್‌ಪ್ಲಾಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ. ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನೂ ಆಗಿಲ್ಲ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಹಿಂಸೆ ಆಗಿದೆ ಎಂದಿದ್ದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯದ ಬಗ್ಗೆ ಮಾತನಾಡಿ ಕೈ ಶಾಸಕ ರಾಜು ಕಾಗೆ (Raju Kage) ಪೇಚಿಗೆ ಸಿಲುಕಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆ ಅಥಣಿ (Athani) ತಾಲೂಕಿನ ಅವರಖೋಡ ಗ್ರಾಮದಲ್ಲಿ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ವರ್ಷ 70 ಆದರೂ ತಮ್ಮ ಮಾನಸಿಕತೆಯನ್ನು ಕಾಂಗ್ರೆಸ್ ಶಾಸಕ ಪ್ರದರ್ಶನ ಮಾಡಿದ್ದಾರೆ. ಶಾಸಕ ರಾಜು ಕಾಗೆ ನರ್ಸ್‌ಗಳ ಸೌಂದರ್ಯದ ಬಗ್ಗೆ ಮಾತನಾಡಿದ್ದು, ಲಿವರ್ ಟ್ರಾನ್ಸ್‌ಪ್ಲಾಂಟ್ (Liver Transplant) ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ ಎಂದರು. ಇದನ್ನೂ ಓದಿ: ಜೂನ್ ಒಳಗೆ ಸಚಿವ ಸ್ಥಾನ ಕೊಡ್ತೀನಯ್ಯ ಅಂತ ಸಿಎಂ ಹೇಳಿದ್ದಾರೆ: ಶಾಸಕ ಪುಟ್ಟರಂಗಶೆಟ್ಟಿ

    ಈ ವೇಳೆ ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನು ಆಗಿಲ್ಲ ರೀ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಆಗಿದೆ ಎಂದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಪರಶುರಾಮನ ಮೂರ್ತಿಯ ಕಂಚಿನ ಲೇಪನ ಹರಿದ ಕಾಂಗ್ರೆಸ್ – ಕಾರ್ಕಳ ನಗರ ಠಾಣೆಗೆ ಬಿಜೆಪಿ ದೂರು

    ರಾಜು ಕಾಗೆ ಭಾಷಣಕ್ಕೆ ಸಭೆಯಲ್ಲಿ ನೆರೆದಿದ್ದ ಜನ ಕೇಕೆ ಹಾಕಿದ್ದಾರೆ. ವೇದಿಕೆಯಲ್ಲಿದ್ದ ಲಕ್ಷ್ಮಣ ಸವದಿ (Laxman Savadi) ಉದ್ದೇಶಿಸಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಈ ಮಾತುಗಳನ್ನ ಆಡಿದ್ದಾರೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನವೇನು ಕೋಳಿ ಮೊಟ್ಟೆನಾ.. ಒಡೆದು ಆಮ್ಲೆಟ್ ಮಾಡೋಕೆ: ಸಿಎಂ ಇಬ್ರಾಹಿಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷದ ರಾಜಕೀಯ ಸಭೆಯಲ್ಲಿ ಮಕ್ಕಳ ದುರ್ಬಳಕೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ನಡೆದಿದೆ.

    ಕಾಂಗ್ರೆಸ್ ಕಾರ್ಯಕರ್ತರಿಂದ ಸಭೆಯಲ್ಲಿ ಮಕ್ಕಳ (Children) ಬಳಕೆ ಮಾಡಿಕೊಳ್ಳಲಾಗಿದೆ. ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಬಳಸಿಕೊಂಡು ಮಕ್ಕಳಿಗೆ ಕಾಂಗ್ರೆಸ್ ಶಾಲು (Shawl) ಹೊದಿಸಲಾಗಿದೆ. ಏನೂ ಅರಿಯದ ಮಕ್ಕಳ ಕೊರಳಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿದ ಪೋಟೋ ಎಲ್ಲೆಡೆ ವೈರಲ್ (Viral) ಆಗಿದೆ. ಇದನ್ನೂ ಓದಿ: ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಪ್ರತಾಪ್ ಸಿಂಹ 

    ಉಗಾರ ಖುರ್ದ ಪಟ್ಟಣದಲ್ಲಿ ಹಾಲು ಮತದ ಸಮಾಜದ ವತಿಯಿಂದ ರಾಜು ಕಾಗೆಯವರಿಗೆ (Raju Kage) ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಪೋಟೋ ವೈರಲ್ ಆದರೂ ಸಹ ಕಂಡು ಕಾಣದಂತೆ ಚುಣಾವಣಾ ಆಯೋಗ ಹಾಗೂ ತಾಲೂಕು ಆಡಳಿತ ಕುಳಿತಿದೆ. ಚುನಾವಣೆ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಳ್ಳದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶವಿದ್ದರೂ ಮಕ್ಕಳ ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊಡದೇ ಪ್ರಚಾರಕ್ಕೆ ಬಂದ್ರೆ ವೋಟ್ ಕೊಡಲ್ಲ: ನಿಖಿಲ್‌ಗೆ ಮಹಿಳೆಯರಿಂದ ತರಾಟೆ

  • ಮುಜರಾಯಿ ಇಲಾಖೆಯ ಅನುದಾನವನ್ನ ಬೇರೆ ರಾಜ್ಯಕ್ಕೆ ಕೊಡ್ತಿದ್ದಾರೆ, ಆದ್ರೆ ನಮಗೆ ನೀಡ್ತಿಲ್ಲ: ಕಾಂಗ್ರೆಸ್‌ ಮುಖಂಡ ಆರೋಪ

    ಮುಜರಾಯಿ ಇಲಾಖೆಯ ಅನುದಾನವನ್ನ ಬೇರೆ ರಾಜ್ಯಕ್ಕೆ ಕೊಡ್ತಿದ್ದಾರೆ, ಆದ್ರೆ ನಮಗೆ ನೀಡ್ತಿಲ್ಲ: ಕಾಂಗ್ರೆಸ್‌ ಮುಖಂಡ ಆರೋಪ

    ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ (Shashikala Jolle) ವಿರುದ್ಧ ಕಾಂಗ್ರೆಸ್ (Congress) ಮುಖಂಡ ಹಾಗೂ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ (Raju Kage) ಅಸಮಾಧಾನ ಹೊರಹಾಕಿದರು.

    ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ ಅವರು, ಮುಜರಾಯಿ ಇಲಾಖೆಯ (Muzrai Department) ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಅನುದಾನ ನೀಡಲಾಗುತ್ತಿದೆ. ಆದರೆ ನಮಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಮುಜರಾಯಿ ಇಲಾಖೆ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಪರೋಕ್ಷವಾಗಿ ಆರೋಪಿಸಿದ ರಾಜು ಕಾಗೆ ದೇವಸ್ಥಾನ ನಿರ್ಮಾಣದಲ್ಲೂ ರಾಜಕಾರಣ‌‌ ಸರಿಯಲ್ಲ ಎಂದಿದ್ದಾರೆ. ನಮ್ಮ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ ನಾನು ಭಾಗವಹಿಸಿದ್ದಕ್ಕೆ ಬಿಜೆಪಿ ಅವರು ದೇವಸ್ಥಾನ ನಿರ್ಮಾಣಕ್ಕಾಗಿ ದೇಣಿಗೆ ಹಣ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗ್ತಿವೆ : ಕಾಂಗ್ರೆಸ್‌

    Live Tv
    [brid partner=56869869 player=32851 video=960834 autoplay=true]

  • ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ, ಕಾಂಗ್ರೆಸ್ ಮುಖಂಡ ರಾಜು‌ ಕಾಗೆ ಭೇಟಿ

    ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ, ಕಾಂಗ್ರೆಸ್ ಮುಖಂಡ ರಾಜು‌ ಕಾಗೆ ಭೇಟಿ

    ಚಿಕ್ಕೋಡಿ: ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ಮತಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್‌ ನಾಯಕ ರಾಜು ಕಾಗೆ ಅವರ ಮನೆಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

    ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ರಮೇಶ್‌ ಜಾರಕಿಹೊಳಿ ಭೇಟಿ ನೀಡುವುದರ ಜೊತೆಗೆ ಮಾಜಿ ಶಾಸಕ‌ ಹಾಗೂ ಕಾಂಗ್ರೆಸ್ ನಾಯಕ ರಾಜು ಕಾಗೆ ಮನೆಗೆ ಭೇಟಿ ನೀಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ‌ ಗುಪ್ತ ಚರ್ಚೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ಕಾಗೆ ಅವರಿಗೆ ಅನಾರೋಗ್ಯ ಇದೆ. ಹೀಗಾಗಿ ಅವರನ್ನು ಭೇಟಿಯಾಗಲು ಬಂದಿದ್ದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಾವಿನ ಮರಿ ಬೆಂದ ಉಪ್ಪಿಟ್ಟು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

    ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆಯಿಂದ ಲಖನ ಅವರಿಗೆ ಮುಳವಾಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೆಬ್ಬಾಳಕರ ಪಕ್ಷ ಬೇರೆ ನಮ್ಮ ಪಕ್ಷ ಬೇರೆ‌. ನಮ್ಮ ಪಕ್ಷದಿಂದ ಮಹಾಂತೇಶ ಕವಟಗಿ‌ಮಠ ಸ್ಪರ್ಧೆ ಮಾಡುತ್ತಾರೆ. ನಾವೂ ಲಖನ ಜಾರಕಿಹೊಳಿ ಅವರಿಗೆ ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಕೇಳಿಲ್ಲ. ನಾನಂತೂ ಮಹಾಂತೇಶ ಕವಟಗಿಮಠ ಪರವಾಗಿ ಪ್ರಚಾರ ಮಾಡುತ್ತೇನೆ. ಈಗಾಗಲೇ ಪ್ರತಿ ತಾಲೂಕಿಗೂ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಒಬ್ಬರು ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವ್ರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಗರಂ

    ರಾಜಕೀಯ ದೃಷ್ಟಿಯಿಂದ ಹೇಳುವುದಾದರೆ ಬಿಟ್ ಕಾಯಿನ್ ಅಂದರೇನು ನನಗೆ ಗೊತ್ತೆ ಇಲ್ಲಾ. ಬಿಟ್ ಕಾಯಿನ್ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.

  • ಮೂವರು ಪ್ರಭಾವಿಗಳು ಸೇರಿ 40 ಬಿಜೆಪಿ ಶಾಸಕರು ಶೀಘ್ರವೇ ಕಾಂಗ್ರೆಸ್‍ಗೆ ಬರುತ್ತಾರೆ: ರಾಜು ಕಾಗೆ

    ಮೂವರು ಪ್ರಭಾವಿಗಳು ಸೇರಿ 40 ಬಿಜೆಪಿ ಶಾಸಕರು ಶೀಘ್ರವೇ ಕಾಂಗ್ರೆಸ್‍ಗೆ ಬರುತ್ತಾರೆ: ರಾಜು ಕಾಗೆ

    ಚಿಕ್ಕೋಡಿ/ಬೆಳಗಾವಿ: ಶೀಘ್ರದಲ್ಲೇ ಬಿಜೆಪಿಯಿಂದ ಕಾಂಗ್ರೆಸ್ ಗೆ 40 ಜನ ಶಾಸಕರು ಬರುತ್ತಾರೆ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಮೂರು ಜನ ಪ್ರಭಾವಿಗಳಿಗೆ ಸಚಿವ ಸ್ಥಾನ ಕೈ ತಪ್ಪಿಸಲಾಗಿದೆ. ಬಿಜೆಪಿಯಲ್ಲಿ ಈಗ ಆಂತರಿಕ ಕಚ್ಚಾಟ ಶುರುವಾಗಿದೆ. ಮೂವರು ಪ್ರಭಾವಿ ಶಾಸಕರೊಂದಿಗೆ ಒಟ್ಟು 40 ಜನ ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ರಾಜು ಕಾಗೆ ಹೊಸ ವಲಸೆ ಬಾಂಬ್ ಹಾಕಿದ್ದಾರೆ. ಇದನ್ನೂ ಓದಿ: ಸಿಂದಗಿ, ಹಾನಗಲ್ ಉಪ ಚುಣಾವಣೆ- ಇಂದು ಹೈಕಮಾಂಡ್ ಕೈ ಸೇರಲಿದೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

    ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಜನ ಶಾಪ ಹಾಕುತ್ತಿದ್ದಾರೆ. ನರೇಂದ್ರ ಮೋದಿಯವರ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಪಕ್ಷದ ಮೇಲಿನ ನಂಬಿಕೆಯನ್ನು ಜನ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ 40 ಜನ ಶಾಸಕರು ಬರುತ್ತಾರೆ ಎಂದು ರಾಜು ಕಾಗೆ ಹೇಳಿದ್ದಾರೆ.

  • ರಾಜು ಕಾಗೆ ವಿರುದ್ಧ ತೊಡೆ ತಟ್ಟಿದ ವಿವೇಕ್ ಶೆಟ್ಟಿ

    ರಾಜು ಕಾಗೆ ವಿರುದ್ಧ ತೊಡೆ ತಟ್ಟಿದ ವಿವೇಕ್ ಶೆಟ್ಟಿ

    – ರಾಜು ಕುಟುಂಬದವ್ರಿಂದ ವಿವೇಕ್ ಮೇಲೆ ನಡೆದಿತ್ತು ಹಲ್ಲೆ

    ಚಿಕ್ಕೋಡಿ(ಬೆಳಗಾವಿ): ಕಾಗವಾಡ ಮತಕ್ಷೇತ್ರದಲ್ಲಿ ಒಂದು ಕಡೆ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ಸ್ಪರ್ಧೆ ಸಾಲದು ಅಂತ ಈಗ ದ್ವೇಷದ ರಾಜಕಾರಣಕ್ಕೂ ಈ ರಣಕಣ ಸಾಕ್ಷಿಯಾಗಲಿದೆ.

    ಕಾಗವಾಡ ಕ್ಷೇತ್ರದ ಈಗಿನ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಕುಟುಂಬದವರಿಂದ ಹಲ್ಲೆ ನಡೆದು ಎರಡು ವರ್ಷಗಳೇ ಕಳೆದಿವೆ. ಅಂದು ಹಲ್ಲೆಗೊಳಗಾಗಿದ್ದ ಯುವಕ ವಿವೇಕ್ ಶೆಟ್ಟಿ ಈಗ ಉಪಚುನಾವಣೆಯಲ್ಲಿ ರಾಜು ಕಾಗೆ ಎದುರು ಸ್ಪರ್ಧೆಗಿಳಿದಿದ್ದಾರೆ. ಬಹುಜನ ವಂಚಿತ ಅಘಾಡಿ ಪಕ್ಷದಿಂದ ಸ್ಪರ್ಧೆಗಿಳಿದಿರುವ ವಿವೇಕ್ ಶೆಟ್ಟಿ, ರಾಜು ಕಾಗೆ ವಿರುದ್ಧ ತೊಡೆ ತಟ್ಟಿದ್ದಾರೆ.

    ರಾಜು ಕಾಗೆ ಬಿಜೆಪಿ ಶಾಸಕರಾಗಿದ್ದ ಸಂದರ್ಭದಲ್ಲಿ ಕುಟುಂಬ ಸಮೇತ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ಮಾಡಿ ಜೈಲಿಗು ಕೂಡ ಹೋಗಿ ಬಂದಿದ್ದರು. ಇವರಿಂದ ಹಲ್ಲೆಗೊಳಗಾಗಿದ್ದ ಯುವಕ ಈಗ ರಾಜು ಕಾಗೆಯವರನ್ನು ಸೋಲಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಬಹುಜನ ವಂಚಿತ ಅಘಾಡಿ ಪಕ್ಷದಿಂದ ಸ್ಪರ್ಧೆ ಮಾಡಿ ದಲಿತ ಹಾಗೂ ಮುಸ್ಲಿಂ ಮತಗಳು ರಾಜು ಕಾಗೆ ಪಾಲಾಗದಂತೆ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ವಿವೇಕ್ ವಿರುದ್ಧ ರಾಜು ಕಾಗೆ ಕಿಡಿಕಾರಿದ್ದಾರೆ.

    ಒಟ್ಟಿನಲ್ಲಿ ಒಂದು ಕಡೆ ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದು ಕಡೆ ಮತ್ತೆ ವಿವೇಕ್ ಶೆಟ್ಟಿ ಹಲ್ಲೆ ಪ್ರಕರಣ ಮೇಲೆ ಬಂದಿದೆ. ಶೆಟ್ಟಿ ಹಾಗೂ ಕಾಗೆ ಕುಟುಂಬದ ದ್ವೇಷದ ರಾಜಕಾರಣ ಮುಂದಿನ ದಿನಗಳಲ್ಲಿ ಯಾವ ಹಂತ ತಲುಪಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

    https://www.youtube.com/watch?v=i9uLjb_O_5Y