Tag: ರಾಜೇಂದ್ರ ಸಿಂಗ್ ಬಾಬು

  • ರಾಜೇಂದ್ರ ಸಿಂಗ್ ಬಾಬು ಅವರಿಲ್ಲದಿದ್ರೆ ನಾನು ಜೀರೋ : ಸುಹಾಸಿನಿ ಮನದಾಳ

    ರಾಜೇಂದ್ರ ಸಿಂಗ್ ಬಾಬು ಅವರಿಲ್ಲದಿದ್ರೆ ನಾನು ಜೀರೋ : ಸುಹಾಸಿನಿ ಮನದಾಳ

    ರಾಜೇಂದ್ರ ಸಿಂಗ್ ಬಾಬು ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. 5 ದಿನಗಳ ಕಾಲ ಚಾಮರಾಜಪೇಟೆಯ ಕಲಾವಿದರ ಭವನದಲ್ಲಿ ಸಾಧನೆ..ಸಂಭ್ರಮ..ಚಿತ್ರೋತ್ಸವ ಕಾರ್ಯಕ್ರಮ ನಡೆದಿದೆ. ಅಕ್ಟೋಬರ್ 23 ರಿಂದ 27ರವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಅಕೋಬರ್ 27ರಂದು ಎಳೆಯಲಾಗಿದೆ.

    ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ನಿರ್ದೇಶಕರು, ನಿರ್ಮಾಪಕರು ರಾಜೇಂದ್ರ ಸಿಂಗ್ ಬಾಬು ಅವರ ಆಪ್ತರು ಹಾಗೂ ಕುಟುಂಬಸ್ಥರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ನಟಿ ಸುಹಾಸಿನಿ ರಾಜೇಂದ್ರ ಸಿಂಗ್ ಬಾಬು ಅವರ ಒಟ್ಟಿಗಿನ ಒಡನಾಟ, ಸಿನಿಮಾ ಶೂಟಿಂಗ್ ದಿನಗಳನ್ನ ನೆನೆದಿದ್ದಾರೆ. ಜೊತೆಗೆ ಬಾಬು ಅವರು ಅವಕಾಶ ಕೊಡದೇ ಇದ್ದಿದ್ದರೇ ಸುಹಾಸಿನಿ ಏನೂ ಅಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    ಸರಳ, ಸಹಜ ಮಾತುಗಳಿಂದ ತಮ್ಮ ಗುರುಗಳಾದ ರಾಜೇಂದ್ರ ಸಿಂಗ್ ಅವರನ್ನ ಹಾಡಿ ಹೊಗಳಿದ್ದಾರೆ. ಬಂಧನ, ಮುತ್ತಿನ ಹಾರ ಸಿನಿಮಾಗಳ ಮೂಲಕ ಸಿನಿಮಾ ಮಂದಿಯ ಹೃದಯದಲ್ಲಿ ಈಗಲೂ ಹಚ್ಚೆ ಒತ್ತಿದ್ದಾರೆ ಸುಹಾಸಿನಿ. ಎಸ್‌ವಿಆರ್ @50 ಕಾರ್ಯಕ್ರಮದಲ್ಲಿ ಅತಿಥಿಯಾಗಿ ಬಂದ ಅವರು ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದ ಸಿನಿಮಾದಲ್ಲಿ ನಟಿಸಿದ್ದು ಖುಷಿ ಕೊಟ್ಟಿದೆ. ನೂರೊಂದು ನೆನಪು ಎದೆಯಾಳದಿಂದ ಹಾಡು ವಂಡರ್‌ಫುಲ್ ಎಂದಿದ್ದಾರೆ. ಇನ್ನು ರಾಜೇಂದ್ರ ಸಿಂಗ್ ಬಾಬು ಅವರಿಗೆ ಸಲ್ಲಬೇಕಾದ ಗೌರ ಸಲ್ಲಿದೆ ಎಂದಿದ್ದಾರೆ.

  • ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಾಜೇಂದ್ರ ಸಿಂಗ್ ಬಾಬು

    ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಾಜೇಂದ್ರ ಸಿಂಗ್ ಬಾಬು

    ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶಕರಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಎಸ್.ವಿ.ಆರ್ 50 ಸಾಧನೆ.. ಸಂಭ್ರಮ ಕಾರ್ಯಕ್ರಮ ಉದ್ಘಾಟನೆ ಮಾಡಲಾಯ್ತು. ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಿದ್ದು, ಅ.23 ರಿಂದ 27 ರವರೆಗೆ 5 ದಿನಗಳ ಕಾಲ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಸಿನಿಮಾಗಳ ಪ್ರದರ್ಶನ ಸಂವಾದ ಕಾರ್ಯಕ್ರಮ ನಡೆಯಲಿದೆ.

    ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ನಟ ಕಿಚ್ಚ ಸುದೀಪ್, ಗಿರೀಶ್ ಕಾಸರವಳ್ಳಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಅಶ್ವತ್ಥ್ ನಾರಾಯಣ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಶಾಸಕ ಮುನಿರತ್ನ ಭಾಗಿಯಾಗಿದ್ದರು. ಉಳಿದಂತೆ ಈ ಸಮಾರಂಭಕ್ಕೆ ಗಿರಿಜಾ ಲೊಕೇಶ್, ಸಂಗೀತ ನಿರ್ದೇಶಕ ಹಂಸಲೇಖ, ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಾಥ್ ಹಾಗೂ ರಾಜೇಂದ್ರ ಸಿಂಗ್ ಬಾಬು ಕುಟುಂಬಸ್ಥರು, ಆಪ್ತರು ಸೇರಿ ಇಡೀ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಇದನ್ನೂ ಓದಿ: ತೆಲುಗಿನ ಸೈಕಲ್‌ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ

    ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹಾಗೂ ಅವರ ಇಡೀ ಕುಟುಂಬ ಸಿನಿಮಾ ರಂಗಕ್ಕೆ ನೀಡಿದ ಅಪಾರ ಕೊಡುಗೆ ಬಗ್ಗೆ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಮಾತಾಡಿದ್ದಾರೆ. ಪ್ರತಿ ವರ್ಷವೂ ಚಿತ್ರರಂಗದಲ್ಲಿ ಸಾಧನೆ ಮಾಡಿದ ಒಬ್ಬೊಬ್ಬ ನಿರ್ದೇಶಕರನ್ನ, ತಂತ್ರಜ್ಞರನ್ನ ಗುರುತಿಸಿ ಗೌರವಿಸುವ ಕಾರ್ಯ ನಿರಂತರವಾಗಿ ನಡೆಯಲಿದೆಯಂತೆ.

  • ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿಯೆಂದು ಹೇಳ್ಕೊತಾರೆ, ಇವ್ರು ಇದನ್ನೆಲ್ಲ ಮಾಡ್ಲೇ ಇಲ್ಲ – ರಾಜೇಂದ್ರ ಸಿಂಗ್ ಬಾಬು

    ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿಯೆಂದು ಹೇಳ್ಕೊತಾರೆ, ಇವ್ರು ಇದನ್ನೆಲ್ಲ ಮಾಡ್ಲೇ ಇಲ್ಲ – ರಾಜೇಂದ್ರ ಸಿಂಗ್ ಬಾಬು

    ಬೆಂಗಳೂರು: ಸುಮ್ಮನೇ ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿ ಎಂದು ಹೇಳಿಕೊಂಡು ತಿರುಗಾಡುತ್ತಾರೆ. ಆದರೆ ನಟಿ ಸರೋಜಾದೇವಿಯವರು (B.Sarojadevi) ಇದನ್ನೆಲ್ಲ ಮಾಡಲೇ ಇಲ್ಲ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಹೇಳಿದರು.

    ನಟಿ ಬಿ.ಸರೋಜಾದೇವಿ ಅವರ ಸಿನಿ ಪಯಣದ ಬಗ್ಗೆ `ಪಬ್ಲಿಕ್ ಟಿಬಿ’ (PUBLiC TV) ಜೊತೆ ಮಾತನಾಡಿದ ಅವರು, ಸುಮಾರು 1954ರಲ್ಲಿ ನಮ್ಮ ತಂದೆಯವರ `ಆಷಾಡಭೂತಿ’ (AshadaBhooti) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಅವಾಗಿನಿಂದಲೂ ನಮ್ಮ ಕುಟುಂಬಕ್ಕೆ ತೀರ ಹತ್ತಿರವಾದವರು. ಪ್ರತಿ ಬಾರಿ ನಮ್ಮ ಮನೆಗೆ ಬಂದಾಗ ನಮ್ಮನ್ನೆಲ್ಲಾ ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಅದಾದ ನಂತರ ನಟನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಬಹು ದೊಡ್ಡ ಸ್ಟಾರ್ ಆದರು. ಆಗಲೂ ಅವರು ನಮ್ಮ ಮನೆಗೆ ಬಂದಾಗ ಮೊದಲು ಹೇಗೆ ನೋಡಿಕೊಳ್ಳುತ್ತಿದ್ದರೂ ಅದೇ ರೀತಿ ನಮ್ಮನ್ನೆಲ್ಲಾ ಕಾಣುತ್ತಿದ್ದರು. ಇನ್ನೂ ನನಗೆ ತುಂಬಾ ಹತ್ತಿರದವರು, ಯಾಕಂದ್ರೆ ಪ್ರತಿ ಬಾರಿ ನಾನು ಮದ್ರಾಸ್‌ಗೆ ಹೋದಾಗ ಚೆನ್ನಾಗಿ ಓದಬೇಕು ಅಂತ ಹೇಳಿ, ಒಂದು ಗಡಿಯಾರ ಉಡುಗೊರೆಯಾಗಿ ನೀಡಿದ್ದರು ಎಂದರು.ಇದನ್ನೂ ಓದಿ: ಪೂಜೆ ಮಾಡಿ ಟಿವಿ ಆನ್‌ ಮಾಡಿದ್ದರು – ಸರೋಜಾದೇವಿಯವರ ಕೊನೆ ಕ್ಷಣ ಹೀಗಿತ್ತು

    ನಮ್ಮ ತಾಯಿಯನ್ನು ಕಂಡರೆ ಅವರಿಗೆ ತುಂಬಾ ಪ್ರೀತಿ, ಅದಲ್ಲದೇ ನನ್ನ ಸ್ನೇಹಿತನೊಬ್ಬನಿಗೆ ತುಂಬಾ ಸಹಾಯ ಮಾಡಿದ್ದರು. ಬಹಳ ಶಿಸ್ತಿನ ನಟಿ, ಅವರ ರೀತಿ ಈಗಿನ ಯಾವ ನಟಿಯರೂ ಇಲ್ಲ. ಸುಮ್ಮನೇ ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿ ಎಂದು ಹೇಳಿಕೊಂಡು ತಿರುಗಾಡುತ್ತಾರೆ. ಆದರೆ ಸರೋಜಾದೇವಿಯವರು ಇದನ್ನೆಲ್ಲ ಮಾಡಲೇ ಇಲ್ಲ. ನಾಲ್ಕು ಭಾಷೆಯಲ್ಲಿ ನಟಿಸೋದು ಅಂದರೆ ಸಣ್ಣ ಮಾತಲ್ಲ. ಹಿಂದಿ, ತಮಿಳು, ತೆಲುಗು ಹಾಗೂ ಕನ್ನಡದಲ್ಲಿ ನಟಿಸಿದರು. ಅವರು ಎಷ್ಟೇ ಬೆಳೆದರೂ ಕೂಡ ಕನ್ನಡದಲ್ಲಿ ಕಿತ್ತೂರು ಚೆನ್ನಮ್ಮ, ಭಾಗ್ಯವಂತರು ಅಂತಹ ಪಾತ್ರಗಳಲ್ಲಿ ನಟಿಸುವುದನ್ನು ನಿಲ್ಲಿಸಲಿಲ್ಲ. ಕೆಲವರಾದರೆ ಕನ್ನಡವನ್ನೇ ಮರೆತು ಬಿಡುತ್ತಿದ್ದರು. ಆದರೆ ಇವರು ಯಾವತ್ತೂ ಕನ್ನಡವನ್ನು ಮರೆಯಲಿಲ್ಲ. ಅಚ್ಚ ಕನ್ನಡದ ನಟಿ, ತುಂಬಾ ಎತ್ತರಕ್ಕೆ ಬೆಳೆದವರು. ಅವರ ಮಟ್ಟಕ್ಕೆ ಯಾರೂ ತಲುಪಲೇ ಇಲ್ಲ. ರಾಜಕುಮಾರ್ ಬಳಿಕ ಯಾರಿಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಿಲ್ಲ, ಬಿ.ಸರೋಜಾದೇವಿ ಅವರಿಗೆ ಈ ಪ್ರಶಸ್ತಿ ನೀಡಬೇಕಿತ್ತು ಎಂದರು ತಿಳಿಸಿದರು.

    ಚಿತ್ರರಂಗದ ಯಾವುದೇ ಆಗು-ಹೋಗಗಳಲ್ಲೂ ನಟಿ ಜೊತೆಗೆ ಇರುತ್ತಿದ್ದರು. ನಿಜಕ್ಕೂ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ ಎಂದು ಸಂತಾಪ ಸೂಚಿಸಿದರು.ಇದನ್ನೂ ಓದಿ: ಹಿರಿಯ ನಟಿ ಬಿ. ಸರೋಜಾದೇವಿ ನಿಧನ – ಡಿಕೆಶಿ ಸಂತಾಪ

  • ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

    ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

    ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು ‘ಯಜಮಾನರ ಅಮೃತ ಮಹೋತ್ಸವ’ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ.

    ಈ ವಿಷಯವಾಗಿ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಅವರು ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಈ ಘನಕಾರ್ಯಕ್ಕೆ ಸಂದೇಶವನ್ನು ಕಳುಹಿಸಿಕೊಟ್ಟು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವು ಈಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

    ಹಾಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ನರಸಿಂಹಲು ಅವರು ಕೂಡ ಇದೇ ಮಾತುಗಳನ್ನು ಹೇಳಿ, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಅವರು ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ

    ರಾಜೇಂದ್ರಸಿಂಗ್ ಬಾಬು ಅವರು ಮಾತನಾಡಿ, ಈ ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಈ ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ನಂತರ ಮಾತನಾಡಿದ ಎಸ್. ನಾರಾಯಣ್ ಅವರು, ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂಬ ಸಂತೋಷವನ್ನು ಹೊರಹಾಕಿದರು.

    ಕೊನೆಯಲ್ಲಿ ಮಾತನಾಡಿದ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವೀರಕಪುತ್ರ ಶ್ರೀನಿವಾಸ್ ಅವರು, ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.

  • ‘ರಾಜ ವೀರಮದಕರಿ ನಾಯಕ’ ಚಿತ್ರ ನಿಲ್ಲಲು ಕಾರಣ ಯಾರು?: ದರ್ಶನ್ ಸ್ಫೋಟಕ ಹೇಳಿಕೆ

    ‘ರಾಜ ವೀರಮದಕರಿ ನಾಯಕ’ ಚಿತ್ರ ನಿಲ್ಲಲು ಕಾರಣ ಯಾರು?: ದರ್ಶನ್ ಸ್ಫೋಟಕ ಹೇಳಿಕೆ

    ಅಂದುಕೊಂಡಂತೆ ಆಗಿದ್ದರೆ ಕಾಟೇರ ಸಿನಿಮಾಗೂ ಮೊದಲು ‘ರಾಜ ವೀರಮದಕರಿ ನಾಯಕ’ (Veera Madakari Nayak) ಸಿನಿಮಾ ರೆಡಿ ಆಗಬೇಕಿತ್ತು. ಚಿತ್ರಕ್ಕೆ ಸರಳವಾಗಿ ಮುಹೂರ್ತ ಮಾಡಿ, ಹತ್ತು ದಿನಗಳ ಕಾಲ ಶೂಟಿಂಗ್ ಕೂಡ ಮಾಡಲಾಗಿತ್ತು. ದರ್ಶನ್ (Darshan) ಅವರಿಗಾಗಿಯೇ ರಾಜೇಂದ್ರ ಸಿಂಗ್ ಬಾಬು  (Rajendra Singh Babu)ಸ್ಕ್ರಿಪ್ಟ್ ಬರೆದು, ನಿರ್ದೇಶನಕ್ಕೆ ಮುಂದಾಗಿದ್ದರು. ರಾಕ್ ಲೈನ್ ವೆಂಕಟೇಶ್ (Rock Line Venkatesh) ಈ ಸಿನಿಮಾದ ನಿರ್ಮಾಪಕರು. ಆದರೆ, ದಿಢೀರ್ ಅಂತ ಸಿನಿಮಾ ನಿಂತಿತು. ಈ ಕುರಿತಂತೆ ದರ್ಶನ್ ಮಾತನಾಡಿದ್ದಾರೆ.

    ತಮ್ಮದೇ ಅಭಿಮಾನಿಗಳ ಸಂಘದ ಡಿ ಕಂಪೆನಿ ಯೂಟ್ಯೂಬ್ ಚಾನೆಲ್ ಜೊತೆ ಮಾತನಾಡಿದ ದರ್ಶನ್, ವೀರ ಮದಕರಿ ನಾಯಕ ಸಿನಿಮಾ ನಿಲ್ಲಲ್ಲು ಕಾರಣ ಯಾರು? ಯಾಕೆ ಶೂಟಿಂಗ್ ಅನ್ನು ಸ್ಥಗಿತಗೊಳಿಸಲಾಯಿತು ಎನ್ನುವ ಕುರಿತು ಬಹಿರಂಗ ಪಡಿಸಿದ್ದಾರೆ. ಹತ್ತು ದಿನಗಳ ಕಾಲ ಶೂಟಿಂಗ್ ಮಾಡಲಾದ ವಿಷಯವನ್ನು ಅವರು ಹೇಳಿಕೊಂಡಿದ್ದಾರೆ. ದರ್ಶನ್ ಆಡಿದ ಮಾತು ಅವರ ಪ್ರಮಾಣಿಕತೆಗೆ ಸಾಕ್ಷಿಯಾಗಿದೆ.

    ಸಿನಿಮಾ ಯಾಕೋ ಹಿಡಿತಕ್ಕೆ ಸಿಗಲಿಲ್ಲ. ಹತ್ತು ದಿನಗಳ ಕಾಲ ಶೂಟಿಂಗ್ ಕೂಡ ಆಗಿತ್ತು. ವೀರ ಮದಕರಿ ನಾಯಕ ಒಂದು ಜನಾಂಗದ ದೇವರು. ಅವರಿಗೆ ಅಪಚಾರ ಮಾಡಬಾರದು. ಹಾಗಾಗಿ ನಾನೇ ಸಿನಿಮಾ ನಿಲ್ಲಿಸುವಂತೆ ಹೇಳಿದೆ. ಹೇಗೇಗೋ ಸಿನಿಮಾ ಮಾಡಿ ಬೈಯಿಸಿಕೊಳ್ಳೋಕ್ಕಿಂತ ಹಿಡಿತಕ್ಕೆ ಸಿಕ್ಕಾಗ ಮಾಡೋಣ ಅಂತ ಹೇಳಿದೆ ಎಂದಿದ್ದಾರೆ ದರ್ಶನ್. ಈ ಮೂಲಕ ಸಿನಿಮಾ ನಿಲ್ಲಲು ನಾನೇ ಕಾರಣವೆಂದು ಒಪ್ಪಿಕೊಂಡಿದ್ದಾರೆ.

    ವೀರ ಮದಕರಿ ನಾಯಕ ಸಿನಿಮಾ ನಾನಾ ಕಾರಣಗಳಿಂದಾಗಿ ಸದ್ದು ಮಾಡಿತ್ತು. ನಾಲ್ಕು ವರ್ಷಗಳ ಹಿಂದೆ ಈ ಸುದ್ದಿ ಭಾರೀ ವಿವಾದಕ್ಕೂ ಕಾರಣವಾಗಿತ್ತು. ಈ ಸಿನಿಮಾವನ್ನು ಸುದೀಪ್ ಮಾಡಬೇಕು ಎಂದು ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಮಾತನಾಡಿದ್ದರು. ಆದರೆ, ದರ್ಶನ್ ಅವರು ಈ ಚಿತ್ರಕ್ಕೆ ಬಣ್ಣ ಹಚ್ಚಿದ್ದರು. ಆದರೆ, ಸಿನಿಮಾ ಆಗಲೇ ಇಲ್ಲ.

  • ಅಂಬರೀಶ್ ಹುಟ್ಟುಹಬ್ಬಕ್ಕೆ ‘ಅಂತ’ ಸಿನಿಮಾ  ರೀ ರಿಲೀಸ್

    ಅಂಬರೀಶ್ ಹುಟ್ಟುಹಬ್ಬಕ್ಕೆ ‘ಅಂತ’ ಸಿನಿಮಾ ರೀ ರಿಲೀಸ್

    ಮೇ 29 ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” (Anta) ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ.

    1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ ಸಿಂಗ್ ಅವರ ಮೂಲಕ ಕಥೆ ನನಗೆ ದೊರಕಿತು. ಪರಿಮಳ ಆರ್ಟ್ಸ್ ಮೂಲಕ ಮಾರುತಿ, ವೇಣು ಹಾಗೂ ಕೆ.ಸಿ.ಎನ್ ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಅಂಬರೀಶ್ ಅವರು ನಾಯಕ ಎಂದು ತಿರ್ಮಾನಿಸಲಾಯಿತು. ಲಕ್ಷ್ಮೀ ಈ ಚಿತ್ರದ ನಾಯಕಿ. ವಜ್ರಮುನಿ, ಸುಂದರಕೃಷ್ಣ ಅರಸ್, ಮುಸುರಿ ಕೃಷ್ಣಮೂರ್ತಿ, ಪ್ರಭಾಕರ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ಇಡೀ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ. ಹದಿನೆಂಟು ಅದ್ದೂರಿ ಸೆಟ್ ಹಾಕಲಾಗಿತ್ತು. “ಅಂತ” ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿತ್ತು.  ನನಗೆ ತಿಳಿದಿರುವ ಪ್ರಕಾರ ಈ ಚಿತ್ರದ ಸ್ಪೂರ್ತಿಯಿಂದ ಸಾವಿರಾರು ಚಿತ್ರಗಳು ಬಂದಿದೆ. “ಅಂತ” ಆಗಲೇ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು. ಬೇರೆ ಬೇರೆ ಭಾಷೆಯಲ್ಲಿ ತುಂಬಾ ಬೇಡಿಕೆಯಿತ್ತು. ನನ್ನ ಪ್ರಕಾರ ಚಿತ್ರದ ನಿಜವಾದ ಹೀರೋ ಕಥೆ. ಆ ಕಥೆ ಚೆನ್ನಾಗಿತ್ತು ಎಂದರೆ ಯಶಸ್ಸು ಖಂಡಿತ. ಇಂತಹ ಅದ್ಭುತ “ಅಂತ” ಚಿತ್ರ ಇದೇ ಮೇ 26 ಮರು ಬಿಡುಗಡೆಯಾಗುತ್ತಿದೆ. ಒಳ್ಳೆಯದಾಗಲಿ ಎಂದು ನಿರ್ದೇಶಕ ರಾಜೇಂದ್ರಸಿಂಗ್ ಬಾಬು (Rajendra Singh Babu) ತಿಳಿಸಿದರು. ಇದನ್ನೂ ಓದಿ:ಕಡಲ ಕಿನಾರೆಯಲ್ಲಿ ‘ಬಿಗ್ ಬಾಸ್’ ದೀಪಿಕಾ ದಾಸ್

    ಮೇ29, ಅಂಬರೀಶ್ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಮೇ 26 ರಂದು “ಅಂತ” ಚಿತ್ರವನ್ನು 70 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡುತ್ತಿದ್ದೇವೆ. ಜಯಣ್ಣ ಫಿಲಂಸ್ ಅವರು ಬಿಡುಗಡೆ ಮಾಡುತ್ತಿದ್ದಾರೆ.  35 ಎಂ ಎಂ ನಿಂದ 70 ಎಂ ಎಂ ಮಾಡಲಾಗಿದೆ. ಸೌಂಡ್, ಕಲರಿಂಗ್ ಎಲ್ಲವನ್ನೂ ಈಗಿನ ರೀತಿಗೆ ಬದಲಿಸಲಾಗಿದೆ ಎಂದು ನಿರ್ಮಾಪಕ ವೇಣು ತಿಳಿಸಿದರು.

  • ಅಂಬಿ ಹುಟ್ಟು ಹಬ್ಬಕ್ಕೆ ‘ಅಂತ’ ರೀ ರಿಲೀಸ್

    ಅಂಬಿ ಹುಟ್ಟು ಹಬ್ಬಕ್ಕೆ ‘ಅಂತ’ ರೀ ರಿಲೀಸ್

    ರೆಬೆಲ್ ಸ್ಟಾರ್ ಅಂಬರೀಶ್ (Ambarish) ವೃತ್ತಿ ಬದುಕಿಗೆ ಬಹುದೊಡ್ಡ ಬ್ರೇಕ್ ನೀಡಿದ ‘ಅಂತ’ (Antha) ಸಿನಿಮಾವನ್ನು ಅವರ ಹುಟ್ಟು ಹಬ್ಬದ ದಿನದಂದು ಮರು ಬಿಡುಗಡೆ (Re Release) ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತ್ಯುತ್ತಮ ತಂತ್ರಜ್ಞಾನದ ಮೂಲಕ ಚಿತ್ರಕ್ಕೆ ಮತ್ತಷ್ಟು ಮೆರಗು ತುಂಬಿದ್ದು, ಹಲವು ಚಿತ್ರ ಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

    ಮೇ 29 ಅಂಬರೀಶ್ ಅವರ ಹುಟ್ಟು ಹಬ್ಬ. ಅವರ ಹುಟ್ಟು ಹಬ್ಬದ ಉಡುಗೊರೆ ಎನ್ನುವಂತೆ ಚಿತ್ರವನ್ನು ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾ ಮೊದಲ ಬಾರಿಗೆ ಬಿಡುಗಡೆ ಆಗಿದ್ದು 1981ರಲ್ಲಿ, ಇದೀಗ ಅದೇ ಚಿತ್ರವನ್ನು ಕಲರ್ ಸ್ಕೋಪ್ ಮಾಡಿ, 5.1 ಸೌಂಡ್ ವ್ಯವಸ್ಥೆಯನ್ನು ಅಳವಡಿಸಿ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ

    ಎಚ್.ಕೆ ಅನಂತ್ ರಾವ್ ಅವರ ಸರಣಿಯ ಕಥೆಗಳನ್ನು ಆಧರಿಸಿ ತಯಾರಾದ ಈ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು (Rajendra Singh Babu) ನಿರ್ದೇಶಕರು. ಆರಂಭದಲ್ಲಿ ಈ ಸಿನಿಮಾ ನಿರ್ಮಾಣಕ್ಕೆ ಯಾರೂ ಮನಸ್ಸು ಮಾಡಲಿಲ್ಲ. ಕೊನೆಗೆ ಕೈ ಹಿಡಿದದ್ದು ಎಚ್.ಎನ್. ಮಾರುತಿ ಹಾಗೂ ವೇಣು ಗೋಪಾಲ್. ಸೆನ್ಸಾರ್ ಮಂಡಳಿಯ ವಿಪರೀತ ತೊಂದರೆ ನಡುವೆಯೂ ಸಿನಿಮಾ ರಿಲೀಸ್ ಆಗಿತ್ತು.

  • ಟೈಟಲ್ ವಿವಾದ : ನಟಿ ರಮ್ಯಾ ಪರವಾಗಿ ಕೋರ್ಟ್ ತೀರ್ಪು

    ಟೈಟಲ್ ವಿವಾದ : ನಟಿ ರಮ್ಯಾ ಪರವಾಗಿ ಕೋರ್ಟ್ ತೀರ್ಪು

    ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye) ಸಿನಿಮಾದ ಟೈಟಲ್ (Title) ತಮ್ಮದೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ (Rajendra Singh Babu) ಬಾಬು ಸಿಟಿ ಸಿವಿಲ್ ಕೋರ್ಟ್ (Cour) ಗೆ ಅರ್ಜಿ ಸಲ್ಲಿಸಿದ್ದರು. ತಾವು ಇದೇ ಹೆಸರಿನ ಟೈಟಲ್ ನಲ್ಲಿ ಸಿನಿಮಾ ಮಾಡುತ್ತಿರುವ ಮತ್ತು ಈ ಶೀರ್ಷಿಕೆಯನ್ನು ಬೇರೆಯೊಬ್ಬರು ಬಳಸುತ್ತಿದ್ದು, ಅದನ್ನು ತಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದ್ದು, ರಾಜೇಂದ್ರ ಸಿಂಗ್ ಬಾಬು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಏನಿದು ವಿವಾದ?
    ನಟಿ ರಮ್ಯಾ (Ramya) ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ವಿವಾದಕ್ಕೆ ಗುರಿಯಾಗಿತ್ತು. ಈ ಟೈಟಲ್ ತಮ್ಮದೆಂದು, ಅದನ್ನು ಯಾರಿಗೂ ಕೊಡಬಾರದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ಲಾಯರ್ ಮೂಲಕ ಪತ್ರವೊಂದನ್ನು ಕಳುಹಿಸಿದ್ದರು. ಅಲ್ಲದೇ, ತಾವು ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ, ಅದು ಅರ್ಧಕ್ಕೆ ನಿಂತಿದೆ ಎಂದು ತಿಳಿಸಿದ್ದರು. ನಂತರ ಕೋರ್ಟ್ ಮೆಟ್ಟಿಲು ಕೂಡ ಏರಿದ್ದರು.

     

    ವಾಣಿಜ್ಯ ಮಂಡಳಿಗೆ ಪತ್ರ ಬರೆದ ಬೆನ್ನಲ್ಲೇ ಆ ಟೈಟಲ್ ಬಗ್ಗೆ ಪರಿಶೀಲಿಸಿದಾಗ ಅಸಲಿಯಾಗಿ ಅದು ರಾಜೇಂದ್ರ ಸಿಂಗ್ ಬಾಬು ಅವರ ಹೆಸರಿನಲ್ಲಿ ಇರಲಿಲ್ಲ ಎನ್ನುವುದು ಗೊತ್ತಾಗಿತ್ತು. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಮಾಡುತ್ತಿರುವ ಬಿ.ಕೆ.ಗಂಗಾಧರ್ ಅವರು ಈ ಟೈಟಲ್ ಅನ್ನು ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ, ರಮ್ಯಾ ಸಿನಿಮಾ ಮಾಡುತ್ತೇನೆ ಎಂದಾಗ, ಅವರಿಗೆ ಆ ಟೈಟಲ್ ಅನ್ನು ವರ್ಗಾಯಿಸಿದ್ದಾರೆ ಎಂದು ಸ್ವತಃ ವಾಣಿಜ್ಯ ಮಂಡಳಿಯ  ಅಧ್ಯಕ್ಷರೇ ತಿಳಿಸಿದ್ದರು.

    ಬಿ.ಕೆ.ಗಂಗಾಧರ್ ಅವರು ರಮ್ಯಾ ಹೆಸರಿಗೆ ಆ ಟೈಟಲ್ ಅನ್ನು ವರ್ಗಾಯಿಸಿರುವುದರಿಂದ, ರಮ್ಯಾ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆಯಬೇಕಿದೆ. ಗಂಗಾಧರ  ಅವರು ನೀಡಿರುವ ಎನ್.ಓ.ಸಿ ಪತ್ರವನ್ನು ವಾಣಿಜ್ಯ ಮಂಡಳಿಗೆ ನೀಡಿದ ತಕ್ಷಣವೇ ಅದನ್ನು ರಮ್ಯಾ ಅವರ ನಿರ್ಮಾಣ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದ್ದರು.

    ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಕೂಡ ಪತ್ರ ಬರೆದಿದ್ದರು.

    ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದರು.

  • ಅಪಘಾತವಾಗಿ ಎರಡು ವರ್ಷ:  ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

    ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

    ರಡು ವರ್ಷಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ (accident) ನಟಿ ರಿಷಿಕಾ ಸಿಂಗ್ (Rishika Singh) ಅವರ ಬೆನ್ನುಮೂಳೆಗೆ (spine) ಬಲವಾಗಿ ಪೆಟ್ಟಾಗಿತ್ತು. ಮಾವಳ್ಳಿಪುರ ಸಮೀಪದಲ್ಲಿ ನಡೆದ ತೀವ್ರ ಅಪಘಾತದಲ್ಲಿ ಅವರ ಕಾರು ನುಜ್ಜುಗುಜ್ಜಾಗಿತ್ತು. ನಿಲಗಿರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳ ಸ್ವಾಧೀನವನ್ನೂ ಅವರು ಕಳೆದುಕೊಂಡಿದ್ದರು. ಆನಂತರ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ಎಲ್ಲವೂ ವರದಿ ಆಗಿರಲಿಲ್ಲ. ಇದೀಗ ಸ್ವತಃ ನಟಿಯೇ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

    ಬೆನ್ನುಮೂಳೆಗೆ ಬಲವಾಗಿಯೇ ಪೆಟ್ಟುಬಿದ್ದ ಪರಿಣಾಮ ಅವರು ಹಾಸಿಗೆಯಲ್ಲೇ ಹಲವು ತಿಂಗಳ ಕಾಲ ಕಳೆಯಬೇಕಾಗಿತ್ತು. ವೈದ್ಯರ ಸತತ ಪ್ರಯತ್ನ ಮತ್ತು ರಿಷಿಕಾ ಅವರ ಧೈರ್ಯದ ಕಾರಣದಿಂದಾಗಿ ಇದೀಗ  ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವ್ಹೀಲ್ ಚೇರ್ ಸಹಾಯದಿಂದ ಓಡಾಡುತ್ತಿದ್ದ ಅವರು, ಇದೀಗ ಎರಡು ಕೋಲುಗಳ ಆಶ್ರಯ ಪಡೆದುಕೊಂಡು ನಡೆದಾಡುವಂತಹ ಚೇತರಿಕೆಯನ್ನು ಕಂಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

    ಒಂದೂವರೆ ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದೆ. ದೇವರಿಂದ ನಾನು ಸರಿ ಹೋಗಿದ್ದೇನೆ. ವೈದ್ಯರನ್ನು ನಾರಾಯಣನಿಗೆ ಹೋಲಿಸುತ್ತಾರೆ. ಅವರಿಂದಾಗಿ ನನ್ನ ಬೆನ್ನುಮೂಳೆ ಸರಿ ಹೋಗಿದೆ. ನನ್ನನ್ನು ಐರನ್ ಮಹಿಳೆಯನ್ನಾಗಿಸಿದ ಡಾಕ್ಟರ್ ಗೆ ಧನ್ಯವಾದಗಳು. ನನ್ನ ಕುಟುಂಬ ನನಗೆ ಶಕ್ತಿಯಾಗಿ ಬೆನ್ನು ಹಿಂದೆ ನಿಂತಿತ್ತು. ನಂಬಿಕೆಯೇ ನನ್ನನ್ನು ಸುಧಾರಿಸಿದೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

    ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ರಿಷಿಕಾ. ಕಳ್ಳ ಮಳ್ಳ ಸುಳ್ಳ, ಕಂಠೀರವ, ಕಠಾರಿ ವೀರ ಸುರಸುಂದರಾಂಗಿ, ಕಿರೀಟ, ದೇವಯಾನಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಬಿಗ್ ಬಾಸ್ ಶೋನಲ್ಲೂ ಅವರು ಸ್ಪರ್ಧಿಯಾಗಿ ಭಾಗಿಯಾಗಿದ್ದರು. ವಿವಾದಗಳ ಕಾರಣದಿಂದಾಗಿಯೂ ಸುದ್ದಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BREAKING:ರಮ್ಯಾ ನಿರ್ಮಾಣದ `ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಕಾನೂನು ಸಂಕಷ್ಟ

    BREAKING:ರಮ್ಯಾ ನಿರ್ಮಾಣದ `ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಕಾನೂನು ಸಂಕಷ್ಟ

    ಸ್ಯಾಂಡಲ್‌ವುಡ್ (Sandalwood) ಕ್ವೀನ್ ರಮ್ಯಾ (Ramya) ಚಿತ್ರರಂಗಕ್ಕೆ ಮರಳಿದ್ದಾರೆ. `ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ಇಡುವ ಮೂಲಕ ನಟಿ ನಿರ್ಮಾಣಕ್ಕೆ ಇಳಿದಿದ್ದರು. ಆದರೆ ಈಗ ಈ ಚಿತ್ರದ ಶೀರ್ಷಿಕೆಗೆ ವಿಘ್ನ ಎದುರಾಗಿದೆ.

    ಮೋಹಕತಾರೆ ರಮ್ಯಾ ನಿರ್ಮಾಣ ಮಾಡ್ತಿರುವ `ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಚಿತ್ರದ ಟೈಟಲ್ ಬಳಸದಂತೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಡೆ ನೀಡಿದ್ದಾರೆ. ಹಾಗಾಗಿ ನಟಿ ರಮ್ಯಾ ಅವರ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಈ ಸಿನಿಮಾದ ಕಾನೂನು ಸಮರದ ಬಗ್ಗೆ ತಿಳಿಸಲು ರಾಜೇಂದ್ರ ಸಿಂಗ್ ಬಾಬು (Rajendra Singh Babu) ಜನವರಿ 19ರಂದು ಸುದ್ದಿಗೋಷ್ಠಿ ನಡೆಸಿದ್ದಾರೆ.

    `ಬಣ್ಣದ ಗೆಜ್ಜೆ’ ಚಿತ್ರಕ್ಕೆ ರಾಜೇಂದ್ರ ಸಿಂಗ್ ಅವರು 1990ರಲ್ಲಿ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ `ಸ್ವಾತಿ ಮುತ್ತಿನ ಮಳೆಯೇ’ ಸಾಂಗ್ ಸೂಪರ್ ಹಿಟ್ ಆಗಿತ್ತು. ರಮ್ಯಾ `ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡುವ ಮುನ್ನವೇ ಈ ಟೈಟಲ್ ಅನ್ನು ತಾವು ರಿಜಿಸ್ಟರ್ ಮಾಡಿರುವುದಾಗಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

     

    View this post on Instagram

     

    A post shared by AppleBox Studios (@applebox.studios)

    ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸುಹಾಸಿನಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 80% ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದ ಬಳಿಕ ಕೆಲವು ದೃಶ್ಯಗಳು ಬಾಕಿ ಉಳಿದಿತ್ತು. ಈಗ ಈ ಶೀರ್ಷಿಕೆಯನ್ನು ಅಭಿಷೇಕ್ ಅಂಬರೀಶ್ ಸಿನಿಮಾಗೆ ಬಳಸಬೇಕು ಎಂದು ಆಲೋಚಿಸಿದ್ದಾರೆ. ಇನ್ನೂ ರಮ್ಯಾ ಕೂಡ ಇದೇ ಟೈಟಲ್‌ನಲ್ಲಿ ಚಿತ್ರ ನಿರ್ಮಾಣ ಮಾಡಿರುವುದು ಸಮಸ್ಯೆ ಎದುರಾಗಿದೆ. ಇದನ್ನೂ ಓದಿ: ಆದಿಲ್ ಖಾನ್ ಜೊತೆ ಮದುವೆಯಾದ ಬೆನ್ನಲ್ಲೇ ರಾಖಿ ಸಾವಂತ್ ಬಂಧನ

    ಈ ವಿಚಾರ ಕೋರ್ಟ್‌ನಲ್ಲಿ ತೀರ್ಪು ಬರುವವರೆಗೂ ರಮ್ಯಾ ನಿರ್ಮಾಣದ ಈ ಸಿನಿಮಾವನ್ನು ಸೆನ್ಸಾರ್ ಮಾಡಬಾರದು ಎಂದು ತಡೆ ನೀಡಿರುವುದಾಗಿ ಈ ವೇಳೆ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ. ರಮ್ಯಾ ನಿರ್ಮಾಣದ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಮತ್ತು ಸಿರಿ ರವಿಕುಮಾರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k