Tag: ರಾಜೇಂದ್ರ ಸಿಂಗ್ ಬಾಬು

  • ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಟ ಆದಿತ್ಯ ಭೇಟಿ

    ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಟ ಆದಿತ್ಯ ಭೇಟಿ

    ಸ್ಯಾಂಡಲ್‌ವುಡ್ (Sandalwood) ನಟ ಆದಿತ್ಯ ಮತ್ತೆ ಸುದ್ದಿಯಲ್ಲಿದ್ದಾರೆ. ಸದ್ಯ ಶೂಟಿಂಗ್‌ಗೆ ಬ್ರೇಕ್ ನೀಡಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಟ ಆದಿತ್ಯ (Actor Aditya) ಭೇಟಿ ನೀಡಿದ್ದಾರೆ. ಈ ಕುರಿತ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಕಿಚ್ಚ ಅಭಿಮಾನಿಗಳಿಗೆ ಸಿಹಿಸುದ್ದಿ: ಸುದೀಪ್ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್

    ಲವ್, ಡೆಡ್ಲಿ ಸೋಮ, ಅಂಬಿ, ಮದನ ಸಿನಿಮಾಗಳ ಮೂಲಕ ಗಮನ ಸೆಳೆದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರ ಪುತ್ರ ಆದಿತ್ಯ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದು ಕುಟುಂಬದ ಜೊತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸದ್ಯ ನಟ ಆದಿತ್ಯ `ಟೆರರ್’ (Terror) ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಸದ್ದು ಮಾಡಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಟೆರರ್ ಚಿತ್ರದ ಟೀಸರ್ ಮೂಲಕ ಗಮನ ಸೆಳೆದಿದ್ದರು. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು (Song) ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡು ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ (Mangli) ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯಗೆದ್ದ ಗಾಯಕಿ, ಇದೇ ಮೊದಲ ಬಾರಿ ತುಳು ಜನತೆಯ ಮನಗೆಲ್ಲಲು ಸಜ್ಜಾಗಿದ್ದಾರೆ.

    ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ (Rajendra Singh Babu) ನಿರ್ದೇಶನದ ‘ಬಿರ್ದ್‌ದ ಕಂಬಳ’ ಮತ್ತು ‘ಕನ್ನಡದ ವೀರ ಕಂಬಳ’ (Veera Kambala) ಸಿನಿಮಾಕ್ಕೆ ಹಾಡಿದ್ದಾರೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಹಾಡು ಹಾಡಿರುವುದು ವಿಶೇಷ. ತುಳುವಿನ ಕೆ.ಕೆ.ಪೇಜಾವರ, ಕನ್ನಡದ ರಘು ಶಾಸ್ತ್ರಿ ಅವರ ಸಾಹಿತ್ಯಕ್ಕೆ ಕದ್ರಿ ಮಣಿಕಾಂತ್ (Manikanth Kadri) ಸಂಗೀತ ನೀಡಿದ್ದಾರೆ.

    ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ ಮಂಗ್ಲಿ, ಬಳಿಕ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್‌ಗೂ ಮಂಗ್ಲಿ ಹಾಡಿದ್ದರು. ಅಷ್ಟೂ ಹಾಡುಗಳು ಸೂಪರ್‌ಹಿಟ್ ಆಗಿರುವುದೇ ವಿಶೇಷ.’

    ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳದ ಕುರಿತು ತುಳು ಮತ್ತು ಕನ್ನಡದಲ್ಲಿ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ಸಂಪೂರ್ಣ ಕರಾವಳಿಯ ಜಾನಪದ ಕಲೆ ಕಂಬಳದ ಕುರಿತಾಗಿರದ್ದು, ಚಿತ್ರೀಕರಣದ ವೇಳೆ ಸುಮಾರು 20 ಜೊತೆ ಕೋಣ ಹಾಗೂ 500ಕ್ಕೂ ಹೆಚ್ಚಿನ ಕಲಾವಿದರೊಂದಿಗೆ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ತುಳುನಾಡಿನ ಹಲವಾರು ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಯಲ್ಲಿ ಖ್ಯಾತ ನಟರಾದ ಪ್ರಕಾಶ್ ರಾಜ್, ರವಿಶಂಕರ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾದ ಶ್ರೀನಿವಾಸ ಗೌಡ ಹಾಗೂ ಕಾಂತಾರ ಚಿತ್ರದ ಗುರುವಖ್ಯಾತಿಯ  ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡರೆ, ನಟ ಆದಿತ್ಯ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನವೀನ್ ಡಿ  ಪಡಿಲ್, ಬೋಜರಾಜ ವಾಮಂಜೂರು, ಉಷಾ ಭಂಡಾರಿ, ರಾಧಿಕಾ ನಾರಾಯಣ, ಗೋಪಿನಾಥ್ ಭಟ್,   ಚಿತ್ರಕಥೆ- ಸಂಭಾಷಣೆ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಸಂಕಲನ ಶ್ರೀನಿವಾಸ್ ಬಾಬು, ಛಾಯಾಗ್ರಹಣ ಆರ್ ಗಿರಿ, ಸಾಹಸ ಡಿಫರೆಂಟ್ ಡ್ಯಾನಿ, ಮಾಸ್ ಮಾದ. ರಾಜೇಶ್ ಕುಡ್ಲ ಕಾರ್ಯಾಕಾರಿ ನಿರ್ಮಾಪಕರು, ನೃತ್ಯ ಮದನ್ ಹರಿಣಿ, ಕಲೆ ಚಂದ್ರಶೇಖರ್ ಸುವರ್ಣ. ಈಗಾಗಲೇ ಚಿತ್ರೀಕರಣ ಕೊನೇ ಹಂತದಲ್ಲಿದ್ದು, ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Virendra Heggade) ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು (Rajendra Singh Babu) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ (Veera Kambala) ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.

    ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್ (Prakash Rai), ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋಗಳನ್ನು ಹಲವರು ಹಂಚಿಕೊಂಡಿದ್ದಾರೆ. ಆದರೆ, ಯಾವ ರೀತಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನುವುದು ಸಸ್ಪೆನ್ಸ್.

    Live Tv
    [brid partner=56869869 player=32851 video=960834 autoplay=true]

  • ಟೈಟಲ್ ವಿವಾದ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಡೆ ಏನು?

    ಟೈಟಲ್ ವಿವಾದ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಡೆ ಏನು?

    ಟಿ ರಮ್ಯಾ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ವಿವಾದಕ್ಕೆ ಗುರಿಯಾಗಿದೆ. ಈ ಟೈಟಲ್ ತಮ್ಮದೆಂದು, ಅದನ್ನು ಯಾರಿಗೂ ಕೊಡಬಾರದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ಲಾಯರ್ ಮೂಲಕ ಪತ್ರವೊಂದನ್ನು ಕಳುಹಿಸಿದ್ದರು. ಅಲ್ಲದೇ, ತಾವು ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ, ಅದು ಅರ್ಧಕ್ಕೆ ನಿಂತಿದೆ ಎಂದು ತಿಳಿಸಿದ್ದರು. ಅದರಿಂದಾಗಿ ಟೈಟಲ್ ಬಗ್ಗೆ ಗೊಂದಲ ಮೂಡಿತ್ತು.

    ವಾಣಿಜ್ಯ ಮಂಡಳಿಗೆ ಪತ್ರ ಬರೆದ ಬೆನ್ನಲ್ಲೇ ಆ ಟೈಟಲ್ ಬಗ್ಗೆ ಪರಿಶೀಲಿಸಿದಾಗ ಅಸಲಿಯಾಗಿ ಅದು ರಾಜೇಂದ್ರ ಸಿಂಗ್ ಬಾಬು ಅವರ ಹೆಸರಿನಲ್ಲಿ ಇರಲಿಲ್ಲ ಎನ್ನುವುದು ಗೊತ್ತಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಮಾಡುತ್ತಿರುವ ಬಿ.ಕೆ.ಗಂಗಾಧರ್ ಅವರು ಈ ಟೈಟಲ್ ಅನ್ನು ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ, ರಮ್ಯಾ ಸಿನಿಮಾ ಮಾಡುತ್ತೇನೆ ಎಂದಾಗ, ಅವರಿಗೆ ಆ ಟೈಟಲ್ ಅನ್ನು ವರ್ಗಾಯಿಸಿದ್ದಾರೆ ಎಂದು ಸ್ವತಃ ವಾಣಿಜ್ಯ ಮಂಡಳಿಯ  ಅಧ್ಯಕ್ಷರೇ ತಿಳಿಸಿದ್ದಾರೆ. ಹಾಗಾಗಿ ರಮ್ಯಾಗೆ ಆ ಟೈಟಲ್ ಸಿಗಲಿದೆ.

    ಬಿ.ಕೆ.ಗಂಗಾಧರ್ ಅವರು ರಮ್ಯಾ ಹೆಸರಿಗೆ ಆ ಟೈಟಲ್ ಅನ್ನು ವರ್ಗಾಯಿಸಿರುವುದರಿಂದ, ರಮ್ಯಾ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆಯಬೇಕಿದೆ. ಗಂಗಾಧರ  ಅವರು ನೀಡಿರುವ ಎನ್.ಓ.ಸಿ ಪತ್ರವನ್ನು ವಾಣಿಜ್ಯ ಮಂಡಳಿಗೆ ನೀಡಿದ ತಕ್ಷಣವೇ ಅದನ್ನು ರಮ್ಯಾ ಅವರ ನಿರ್ಮಾಣ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ರಾಮ್ ಚರಣ್ ದಂಪತಿ

    ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.

    ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ಸಿಂಗ್ ಬಾಬು ಬಳಿ ಇಲ್ಲ: ರಮ್ಯಾ ಬಚಾವ್

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ಸಿಂಗ್ ಬಾಬು ಬಳಿ ಇಲ್ಲ: ರಮ್ಯಾ ಬಚಾವ್

    ಮೂರು ದಿನಗಳ ಹಿಂದೆಯಷ್ಟೇ ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ತಮ್ಮ ಬಳಿ ಇದೆ. ಅದನ್ನು ಯಾರೂ ಬಳಸಬಾರದು ಎಂದು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಕಳುಹಿಸಿದ್ದರು. ಈ ಪತ್ರವು ಸ್ಯಾಂಡಲ್ ವುಡ್ ಅಂಗಳದಲ್ಲಿ ಭಾರೀ ಸದ್ದು ಮಾಡಿತ್ತು. ಆದರೆ, ಅಸಲಿಯಾಗಿ ವಿಷಯವೇ ಬೇರೆ ಆಗಿದೆ. ಈ ಟೈಟಲ್ ರಾಜೇಂದ್ರ ಸಿಂಗ್ ಬಾಬು ಅವರ ಬಳಿಯೇ ಇಲ್ಲವೆಂದು ಗೊತ್ತಾಗಿದೆ.

    ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಇರುವುದು ನಿರ್ಮಾಪಕ ಬಿ.ಕೆ. ಗಂಗಾಧರ್ ಅವರ ಬಳಿ. ಈಗಾಗಲೇ ರಮ್ಯಾ ಅವರು ಗಂಗಾಧರ್ ಅವರಿಂದ ಪತ್ರದ ಮೂಲಕ ಟೈಟಲ್ ಅನ್ನು ತಮಗೆ ವರ್ಗಾಯಿಸಿಕೊಂಡಿದ್ದಾರಂತೆ. ಗಂಗಾಧರ ಅವರು ಕೊಟ್ಟ ಪತ್ರವನ್ನು ವಾಣಿಜ್ಯ ಮಂಡಳಿಗೆ ಸಲ್ಲಿಸಿದರೆ, ಟೈಟಲ್ ರಮ್ಯಾ ಅವರ ಪಾಲಾಗಲಿದೆ. ಹಾಗಾಗಿ ಈ ಶೀರ್ಷಿಕೆಗೂ ಮತ್ತು ರಾಜೇಂದ್ರ ಸಿಂಗ್ ಬಾಬು ಅವರಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ವತಃ ವಾಣಿಜ್ಯ ಮಂಡಳಿಯೇ ಹೇಳಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

     

    ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.

    ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ  ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    ಳೆದ ಒಂದು ವಾರದ ಹಿಂದೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾ.ಮಾ.ಹರೀಶ್ ಅವರಿಗೆ ಸಂದ್ಗಿದ ಪರಿಸ್ಥಿತಿ ಎದುರಾಗಿದೆ. ಹರೀಶ್ ಅವರು ಚುನಾವಣೆಗೆ ನಿಂತಾಗ, ಇವರನ್ನು ಬೆಂಬಲಿಸಿದ್ದ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪತ್ರವೊಂದನ್ನು ಬರೆದಿದ್ದು, ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ರೂಪಾಯಿಯ ದುರುಪಯೋಗ ಆಗಿದೆ. ಅದನ್ನು ತನಿಖೆ ಮಾಡಿಸಿ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಮನವಿಯನ್ನು ಸಲ್ಲಿಸಿದ್ದಾರೆ.

    ನಿನ್ನೆಯಷ್ಟೇ ಭಾ.ಮಾ.ಹರೀಶ್ ಅವರನ್ನು ಭೇಟಿ ಮಾಡಿ ಫಿನಾಯಿಲ್ ಮತ್ತು ಪೊರಕೆಯನ್ನು ನೀಡಿದ್ದ ರಾಜೇಂದ್ರ ಸಿಂಗ್ ಬಾಬು, ವಾಣಿಜ್ಯ ಮಂಡಳಿಯಲ್ಲಿ ನಡೆದ ಅವ್ಯವಹಾರಗಳನ್ನು ಸ್ವಚ್ಛ ಮಾಡಿ ಎಂದು ಶುಭ ಹಾರೈಸಿದ್ದರು. ಇದೇ ಸಂದರ್ಭದಲ್ಲಿ ಮನವಿ ಪತ್ರ ಮತ್ತು   ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಿರುವ ದೂರಿನ ಪತ್ರವನ್ನು ಅಧ್ಯಕ್ಷರಿಗೆ ನೀಡಿದ್ದರು. ಸತ್ಯಾಸತ್ಯತೆ ಪರೀಕ್ಷೆ ನಡೆಸಿ ಎಂದು ನಿವೇದನೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

    ಭಾ.ಮಾ.ಹರೀಶ್ ಅವರಿಗೆ ಕೊಟ್ಟ ಮನವಿ ಪತ್ರದಲ್ಲಿ “ಎಂಬತ್ತು ವರ್ಷದ ಇತಿಹಾಸವಿರುವ ಮಾತೃಸಂಸ್ಥೆಯಲ್ಲಿ ಕಳೆದ 20 ವರ್ಷಗಳಿಂದ ಅನೇಕ ರೀತಿಯ ಅಪಸ್ವರಗಳು ಕೇಳಿ ಬರುತ್ತಿವೆ. ಪೂರಕವಾಗಿ ಅನೇಕ ದೂರುಗಳು ನ್ಯಾಯಾಲಯದಲ್ಲಿವೆ. ಸಿಸಿಐನಲ್ಲಿ ಅನೇಕ ಕೋಟಿ ದಂಡ ಕಟ್ಟಿರುವುದು ಆಯ್ಕೆಯಾದ ಪದಾಧಿಕಾರಿಗಳ ಅನುಭವದ ಕೊರತೆ ಅನಿಸುತ್ತಿದೆ. ಸದಸ್ಯರ ಹಣ ಊಹಿಸಲು ಅಸಾಧ್ಯವಾಗದಂತೆ ಖರ್ಚಾಗುತ್ತಿರುವುದು ದುರಂತ’ ಎಂದು ಬರೆದಿದ್ದಾರೆ ರಾಜೇಂದ್ರ ಸಿಂಗ್ ಬಾಬು.

    ಅಲ್ಲದೇ, ಜಿಲ್ಲಾ ನೋಂದಣಾಧಿಕಾರಿಗಳಿಗೆ ಕೊಟ್ಟ ದೂರನ್ನು ಅವರು ಉಲ್ಲೇಖಿಸಿ, “ಈಗಾಗಲೇ ಸದರಿ ಸಂಸ್ಥೆಯಲ್ಲಿ ಸ್ವಜನ ಪಕ್ಷಪಾತ, ಹಣ ದುರುಪಯೋಗ, ಬೈಲಾ ಉಲ್ಲಂಘನೆ, ನಿಯಮ ಬಾಹಿರ ಚಟುವಟಿಕೆಗಳು ಸೇರಿದಂತೆ ಹಲವು ಗುರುತರವಾದ ಆರೋಪಗಳನ್ನು ದೂರುದಾರರು ಜಿಲ್ಲಾ ನೋಂದಣಾಧಿಕಾರಿಗಳಿಗೆ ನೀಡಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    2020ರಲ್ಲಿ ನೋಂದಣಾಧಿಕಾರಿಗಳಿಗೆ ಕೊಟ್ಟ ದೂರಿನಲ್ಲಿ ಏನಿದೆ?

    ಸಣ್ಣಪುಟ್ಟ ದುರಸ್ಥಿ ಕಾಮಗಾರಿಗೆ ನಾಲ್ಕೈದು ಪಟ್ಟು ಹಣ ಖರ್ಚು ಮಾಡಿರುವುದು. ಉದಾಹರಣೆಗೆ 2 ಶೌಚಾಲಯ ದುರಸ್ಥಿತಿಗೆ ಸುಮಾರು 30 ಲಕ್ಷ ಖುರ್ಚು ಮಾಡಿ ಸಂಘದ ಹಣ ದುರುಪಯೋಗ. ಕಳಸಾ ಬಂಡೂರಿ ಹೋರಾಟದ ಹೆಸರಿನಲ್ಲಿ ಸುಳ್ಳು ಲೆಕ್ಕ ನೀಡಿ ಅನವಶ್ಯಕವಾಗಿ ಸುಮಾರ 40 ಲಕ್ಷ ಖರ್ಚು ಮಾಡಿರುವುದು. ಸಂಸ್ಥೆಯ ವಜ್ರ ಮಹೋತ್ಸವ ಸಂದರ್ಭದಲ್ಲಿ ಎಲ್ಲ ಸದಸ್ಯರಿಗೆ ಬೆಳ್ಳಿ ತಟ್ಟೆ ನೀಡಿದ್ದೇವೆ ಎಂದು ಹತ್ತಾರು ಲಕ್ಷಗಳ ಅವ್ಯವಹಾರ. ಸಿಸಿಐ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಲ್ಲಿ ವೈಯಕ್ತಿಕವಾಗಿ ಸದಸ್ಯರುಗಳಿಗೆ ಪಾವತಿಸಲು ಹಾಕಿದ ದಂಡದ ಹಣ ಎರಡು ಕೋಟಿ ಐವತ್ತು ಲಕ್ಷ ರೂಪಾಯಿ ಸಂಸ್ಥೆಯಿಂದ ಪಾವತಿಸಿ ಸಂಸ್ಥೆಗೆ ಆರ್ಥಿಕ ನಷ್ಟವುಂಟು ಮಾಡಿರುವುದು. ಹೀಗೆ ಇಪ್ಪತ್ತಕ್ಕೂ ಹೆಚ್ಚು ಅಂಶಗಳನ್ನು ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು, “ಕೋಟ್ಯಂತರ ರೂಪಾಯಿ ದುರುಪಯೋಗ ಆಗಿದೆ ಎಂದು ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳು ಸಾಕಷ್ಟು ಜನರು ದೂರು ನೀಡಿದ್ದಾರೆ. ದುರುಪಯೋಗ ಆಗಿಲ್ಲವೆಂದು ಹಿಂದಿನ ಪದಾಧಿಕಾರಿಗಳು ಹೇಳುತ್ತಿದ್ದಾರೆ. ನಮಗೆ ಇದರಿಂದ ಸಾಕಷ್ಟು ಗೊಂದಲವಾಗಿದೆ. ಈ ಕುರಿತು ಇಂದಿನ ಅಧ್ಯಕ್ಷರು ಸ್ಪಷ್ಟನೆ ಕೊಡಬೇಕು ಎಂದು ಮನವಿ ಸಲ್ಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ನಮಗೆ ಉತ್ತರ ಸಿಗುತ್ತದೆ ಎನ್ನುವುದು ನಮ್ಮ ಭಾವನೆ “ಅಂದರು.

    ರಾಜೇಂದ್ರ ಸಿಂಗ್ ಬಾಬು ಮನವಿ ಸ್ವೀಕರಿಸಿರುವ ಭಾ.ಮಾ.ಹರೀಶ್ ಕೂಡ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿ, “ಹಿರಿಯ ನಿರ್ದೇಶಕರು ಕೊಟ್ಟ ಮನವಿಯನ್ನು ಸ್ವೀಕರಿಸಿದ್ದೇನೆ. ಎಕ್ಸಿಕ್ಯೂಟಿ ಕಮೀಟಿ ಮೀಟಿಂಗ್ ನಲ್ಲಿ ಇಟ್ಟು ಚರ್ಚೆ ಮಾಡಲಾಗುವುದು’ ಎಂದಿದ್ದಾರೆ.

  • ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

    ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

    ಮೊನ್ನೆಯಷ್ಟೇ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲವು ಸಾಧಿಸಿರುವ ಭಾ.ಮಾ.ಹರೀಶ್ ಅವರಿಗೆ ಗೆಲುವಿನ ಅಭಿನಂದನೆಗಾಗಿ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ವಿಶೇಷ ಉಡುಗೊರೆ ಕೊಟ್ಟು ಸುದ್ದಿಯಾಗಿದ್ದಾರೆ. ಕಳೆದ ಒಂದು ವಾರದಿಂದ ಹೂಗುಚ್ಛ, ಹಾರ, ತುರಾಯಿಗಳನ್ನು ಸ್ವೀಕರಿಸುತ್ತಿದ್ದ ಭಾ.ಮಾ.ಹರೀಶ್ ಅವರು, ರಾಜೇಂದ್ರ ಸಿಂಗ್ ಬಾಬು ಅವರಿಂದ ಫಿನಾಯಿಲ್ ಮತ್ತು ಪೊರಕೆ ತಗೆದುಕೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಭಾ.ಮಾ.ಹರೀಶ್ ಅವರಿಗೆ ಅಭಿನಂದಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದ ರಾಜೇಂದ್ರ ಸಿಂಗ್ ಅವರು, ಕಸಬರಿಗೆ ಮತ್ತು ಫಿನಾಯಿಲ್ ನೀಡುವ ಮೂಲಕ ವಾಣಿಜ್ಯ ಮಂಡಳಿಯಲ್ಲಿ ನಡೆದ ಅವ್ಯಹಾರವನ್ನು ತೊಳೆಯುವಂತೆ ವಿನಂತಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ನಿರ್ಮಾಪಕ ಕುಮಾರ್ ಶ್ರೀನಿವಾಸ್ ಮೂರ್ತಿ “ಖ್ಯಾತ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ಅವರು ಮತ್ತು ನಿರ್ಮಾಪಕ ಕೃಷ್ಣೇಗೌಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮಾ. ಹರೀಶ್ ಅವರನ್ನು ಭೇಟಿ ಮಾಡಿ, ಫೆನಾಯಿಲ್ ಮತ್ತು ತೆಂಗಿನ ಪೊರಕೆಯನ್ನು ಕೊಟ್ಟು ವಾಣಿಜ್ಯ ಮಂಡಳಿಯನ್ನು ಸ್ವಚ್ಛಗೊಳಿಸುವಂತೆ ತಿಳಿಸಿದರು’ ಎಂದು ಬರೆದುಕೊಂಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಭಾ.ಮಾ.ಹರೀಶ್ ಅವರನ್ನು ಬೆಂಬಲಿಸಿದ್ದ ರಾಜೇಂದ್ರ ಸಿಂಗ್ ಬಾಬು ಅವರು, ವಾಣಿಜ್ಯ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾತನಾಡಿದ್ದಾರೆ. ಲಕ್ಷಾಂತರ ರೂಪಾಯಿ ಅವ್ಯವಹಾರವಾಗಿದೆ ಎಂದು ನೇರವಾಗಿಯೇ ಆರೋಪಿಸಿದ್ದರು. ಈಗ ಪೊರಕೆ ಕೊಟ್ಟು, ಅದನ್ನು ಸರಿ ಮಾಡಿಸುವಂತೆ ವಿನಂತಿಸಿದ್ದಾರೆ ಎನ್ನಲಾಗುತ್ತಿದೆ.

  • ಫಿಲ್ಮ್ ಚೇಂಬರ್ ನಲ್ಲಿ ಅಕ್ರಮ : ಬಾಂಬ್ ಸಿಡಿಸಿದ ರಾಜೇಂದ್ರ ಸಿಂಗ್ ಬಾಬು

    ಫಿಲ್ಮ್ ಚೇಂಬರ್ ನಲ್ಲಿ ಅಕ್ರಮ : ಬಾಂಬ್ ಸಿಡಿಸಿದ ರಾಜೇಂದ್ರ ಸಿಂಗ್ ಬಾಬು

    ನಾಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಈ ಬಾಂಬ್ ಸದ್ಯ ಸಿನಿಮಾ ರಂಗದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ, ವಾಣಿಜ್ಯ ಮಂಡಳಿಯಲ್ಲೂ ಹೀಗೂ ಆಗಿದೆಯಾ ಎನ್ನುವ ಪ್ರಶ್ನೆ ಎದ್ದಿದೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

    ಐದಾರು ತಿಂಗಳು ಹಿಂದೆಯಷ್ಟೇ ರಾಜೇಂದ್ರ ಸಿಂಗ್ ಬಾಬು ಮತ್ತು ಇಪ್ಪತ್ತಕ್ಕೂ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ ನಿರ್ಮಾಪಕರು ಮತ್ತು ನಿರ್ದೇಶಕರು ಫಿಲ್ಮ್ ಚೇಂಬರ್ ಗೆ ಹೋಗಿದ್ದರಂತೆ. ಅಷ್ಟೂ ಜನರು ಫಿಲ್ಮ್ ಚೇಂಬರ್ ನಲ್ಲಿ ಆದ ಅಕ್ರಮದ ಕುರಿತು ದೂರು ನೀಡಿದರಂತೆ. ಆದರೆ, ಹಾಲಿ ಇರುವ ಕಮೀಟಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

    ಮಾಧ್ಯಮಗಳ ಜೊತೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು ಅವರು, ‘ನಾವೆಲ್ಲ ವಾಣಿಜ್ಯ ಮಂಡಳಿಗೆ ಹೋಗಿ ಕಾಫಿ ಮಿಷನ್ ಗಾಗಿ 26 ಸಾವಿರ ಖರ್ಚು ಮಾಡಿದ್ದೀರಿ. ಬಾತ್ ರೂಮ್ ಕಟ್ಟಲು 26 ಲಕ್ಷ, ಇನ್ನಾವುದೋ ಕಾರಣಕ್ಕಾಗಿ 40 ಲಕ್ಷ ಖರ್ಚು ಮಾಡಲಾಗಿದೆ. ಅಲ್ಲದೇ, ನಾನಾ ರೀತಿಯಲ್ಲಿ ಹಣ ದುರ್ಬಳಕೆ ಆಗಿದೆ. ಇದಕ್ಕೆ ಉತ್ತರ ಕೊಡಿ ಎಂದು ಕೇಳಿದೆವು. ಯಾರಿಂದಲೂ ಉತ್ತರ ಬರಲಿಲ್ಲ’ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

    ಇದೇ ಸಂದರ್ಭದಲ್ಲಿ ಏಳು ವಾರ ಬಿಟ್ಟು ಬೇರೆ ಭಾಷೆಯ ಸಿನಿಮಾಗಳು ಕನ್ನಡದಲ್ಲಿ ರಿಲೀಸ್ ಆಗಲಿ ಅಂತ ಡಾ.ರಾಜ್ ಕುಮಾರ್ ಅವರ ನೇತೃತ್ವದಲ್ಲಿ ಹೋರಾಟ ಮಾಡಿದೆವು. ವಿಧಾನ ಸಭೆಯ ಮುತ್ತಿಗೆ ಹಾಕಿದೆವು. ಇದೇ ಫಿಲ್ಮ್ ಚೇಂಬರ್ ನವರು ಆಗ ನಮ್ಮ ಹೋರಾಟದ ವಿರುದ್ಧ ಕೋರ್ಟಿಗೆ ಹೋಗಲು ಸಿದ್ಧರಾಗಿದ್ದರು. ಫಿಲ್ಮ್ ಚೇಂಬರ್ ಕನ್ನಡ ಪರವಾಗಿ ಕೆಲಸ ಮಾಡಬೇಕು ಎಂದು ಚುನಾವಣಾ ಸಂದರ್ಭದಲ್ಲಿ ಹಲವು ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ.

  • ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ರಿಯಲ್ ಆಗಿ ಕಂಬಳದ ಕೋಣ ಓಡಿಸುತ್ತಿದ್ದ ಶ್ರೀನಿವಾಸ್ ಗೌಡ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಈ ಸಿನಿಮಾದಲ್ಲಿ ವಿಶೇಷಪಾತ್ರದಲ್ಲಿ ಆದಿತ್ಯ ನಟಿಸುತ್ತಿದ್ದರೆ, ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಚಿತ್ರತಂಡ ಕೇಳಿದೆಯಂತೆ. ಅವರು ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಅವರ ಭಾಗ ಶೂಟಿಂಗ್ ಕೂಡ ಮುಗಿಯಲಿದೆ ಎಂದಿದೆ ಸಿನಿಮಾತಂಡ.

    ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಆದಿತ್ಯ ಮಾತನಾಡಿ, “ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು” ಎಂದಿದ್ದಾರೆ.

  • ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಗಾಗಲೇ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಕಾಂತಾರ’ ಹೆಸರಿನ ಸಿನಿಮಾವೊಂದು ಸೆಟ್ಟೇರಿದೆ. ಈ ಚಿತ್ರದಲ್ಲಿ ಕಂಬಳ ಕುರಿತಾಗಿಯೂ ಕಥೆಯಿದೆ. ಅಲ್ಲದೇ, ಇದೀಗ ಕಂಬಳ ಕುರಿತಾಗಿ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದ್ದು,  ವೀರ ಕಂಬಳ ಹೆಸರಿನ ಈ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ ಹಂಚಿಕೊಂಡದ್ದು ಹೀಗೆ‌. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ “ಕಂಬಳ’ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ. ಅವರಿಂದ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಅರುಣ್ ರೈ ತೋಡಾರ್ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ದವಾಯಿತು. ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ಒಂದೇ ತರಹ ಇರುವುದಿಲ್ಲ. ಅದನೆಲ್ಲಾ ನೋಡಿಕೊಂಡು ಚಿತ್ರೀಕರಣ ಮಾಡಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ.  ಈ ಚಿತ್ರಕ್ಕೆ ಕಥೆಯೇ ಹೀರೋ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಕೇಳಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ “ವೀರ ಕಂಬಳ” ನಿಮ್ಮ ಮುಂದೆ ಬರಲಿದೆ.  ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದರು. ನಂತರ ವಿಶ್ವದಾದ್ಯಂತ ಜಯಭೇರಿ ಬಾರಿಸುತ್ತಿರುವ “ಕೆ ಜಿ ಎಫ್ ೨” ಚಿತ್ರತಂಡಕ್ಕೆ ಶುಭ ಕೋರಿದ ರಾಜೇಂದ್ರ ಸಿಂಗ್ ಬಾಬು, ಮುಂದೆ ನಾನು ಸಹ ದರ್ಶನ್ ಅವರ  ಅಭಿನಯದಲ್ಲಿ ಅದ್ದೂರಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ. ಎಷ್ಟೋ ಜನಕ್ಕೆ ನಾನು ತುಳುನಾಡಿನವಳೆಂದು ತಿಳಿದಿಲ್ಲ. ನನ್ನ ಮಾತೃ ಭಾಷೆ ಕೂಡ ತುಳು. ಈ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ವಂದನೆಗಳು. ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ರಾಧಿಕಾ ಚೇತನ್.

    ನಮ್ಮ ಊರಿನಲ್ಲಿ ನಡೆಯುವ ಕಂಬಳಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಆಹ್ವಾನಿಸಲು ಕಂಬಳದ ಅಧ್ಯಕ್ಷರು ಹೇಳಿದರು. ಬಾಬು ಸರ್ ನಮ್ಮ ಊರಿಗೆ ಬಂದರು. ಅಲ್ಲಿ ಈ ಚಿತ್ರದ ಮಾತುಕತೆಯಾಗಿ, ಚಿತ್ರ ಆರಂಭವಾಯಿತು. ನಾನು ರಾಜೇಂದ್ರ ಸಿಂಗ್ ಬಾಬು ಅವರ ದೊಡ್ಡ ಅಭಿಮಾನಿ. ಅವರು ನಮ್ಮ ಚಿತ್ರ ನಿರ್ದೇಶನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು ನಿರ್ಮಾಪಕ ಅರುಣ್ ರೈ ತೋಡಾರ್. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ

    ನಾನು ಮೂಲತಃ ರಂಗಭೂಮಿಯವನು. ತುಳು ಭಾಷೆಯ ಸಾಕಷ್ಟು ನಾಟಕಗಳಿಗೆ ಸಂಭಾಷಣೆ ಬರೆದಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರು ನನ್ನನ್ನು ಭೇಟಿಯಾಗಿ ಈ ಚಿತ್ರಕ್ಕೆ ತುಳು ಹಾಗೂ ಕನ್ನಡದಲ್ಲಿ ಸಂಭಾಷಣೆ ಬರೆಯಲು ಹೇಳಿದರು. ಈವರೆಗೂ ನಾನು ಕನ್ನಡ ಚಿತ್ರಕ್ಕೆ ಸಂಭಾಷಣೆ ಬರೆದಿರಲಿಲ್ಲ. ಇದೇ ಮೊದಲು. ಕನ್ನಡ ಚಿತ್ರರಂಗಕ್ಕೆ ಇದು ದೊಡ್ಡ ಚಿತ್ರವಾಗುತ್ತದೆ. ತುಳು ಭಾಷೆಯಲಂತೂ ಪ್ರಚಂಡ ಯಶಸ್ಸು ಕಾಣಲಿದೆ ಎಂದು  ಚಿತ್ರಕಥೆ , ಸಂಭಾಷಣೆ ಬರೆದಿರುವ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ ಗೌಡ ,  ಸ್ವರಾಜ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ “ವೀರ ಕಂಬಳ” ದ ಕುರಿತು ಮಾತನಾಡಿದರು. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಎ.ಆರ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಎಸ್ .ವಿ .ರಾಜೇಂದ್ರ ಸಿಂಗ್ ಬಾಬು. ಅರ್ ಗಿರಿ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಆರ್ ಬಾಬು ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಜೇಶ್ ಕುಡ್ಲ ಅವರ ನಿರ್ಮಾಣ ನಿರ್ವಹಣೆ “ವೀರ ಕಂಬಳ” ಚಿತ್ರಕ್ಕಿದೆ. ಆದಿತ್ಯ, ರಾಧಿಕಾ ಚೇತನ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜೂರು, ಮೈಮ್ ರಮೇಶ್, ರಾಜಶೇಖರ ಕೋಟ್ಯಾನ್, ಉಷಾ ಭಂಡಾರಿ, ಶ್ರೀನಿವಾಸ ಗೌಡ, ಸ್ವರಾಜ್ ಶೆಟ್ಟಿ, ವೀಣಾ ಪೊನ್ನಪ್ಪ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.