Tag: ರಾಜ್‌ಘಾಟ್

  • Gandhi Jayanti: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ

    Gandhi Jayanti: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ

    ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Mahatma Gandhi) ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.

    ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ (Gandhi Jayanti) ಬಂದಿದೆ. ಇಂದು (ಅ.2) ಮಹಾತ್ಮ ಗಾಂಧೀಜಿ ಅವರ 156ನೇ ವರ್ಷದ ಜನ್ಮ ದಿನ. ಇದನ್ನೂ ಓದಿ: ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

    ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ಪ್ರದರ್ಶಿಸಿದರು ಎಂದು ಸ್ಮರಿಸಿದ್ದಾರೆ.

    ಜನರನ್ನು ಸಬಲೀಕರಣಗೊಳಿಸುವ ಅಗತ್ಯ ಸಾಧನವಾಗಿ ಸೇವೆ ಮತ್ತು ಕರುಣೆಯ ಶಕ್ತಿಯನ್ನು ಅವರು ನಂಬಿದ್ದರು. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಅನ್ವೇಷಣೆಯಲ್ಲಿ ನಾವು ಅವರ ಮಾರ್ಗವನ್ನು ಅನುಸರಿಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

    ಇದೇ ದಿನ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನ ಕೂಡ. ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಘಾಟ್‌ನಲ್ಲಿ ಶಾಸ್ತ್ರಿ ಅವರಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

    ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಿಯೆಯ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು. ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಮೋದಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

  • G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

    G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

    ನವದೆಹಲಿ: ಜಿ20 (G20) ಶೃಂಗಸಭೆಯ ಎರಡನೇ ದಿನವಾದ ಇಂದು (ಭಾನುವಾರ) ಜಾಗತಿಕ ನಾಯಕರು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು ಮತ್ತು ಪ್ರತಿನಿಧಿಗಳು ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: G20 Summit: ಮೊದಲ ದಿನದ ಅಧಿವೇಶನಗಳು ಯಶಸ್ವಿ – ಇಂದಿನ ಕಾರ್ಯಕ್ರಮಗಳೇನು?

    ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜಿ20 ನಾಯಕರನ್ನು ಬರಮಾಡಿಕೊಂಡರು. ಬಳಿಕ ಬಾಪು ಕುಟಿಯ ಬಗ್ಗೆ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಪು ಕುಟಿಯು ಮಹಾರಾಷ್ಟ್ರದ ವಾರ್ಧಾ ಬಳಿ ಇದೆ. ಇದು 1936 ರಿಂದ 1948ರ ಅವರ ಮರಣದವರೆಗೂ ಮಹಾತ್ಮ ಗಾಂಧಿಯವರ ನಿವಾಸವಾಗಿತ್ತು ಎಂದು ತಿಳಿಸಿದ್ದಾರೆ.

    ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ನಾಯಕರು ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಿದ್ದಾರೆ.

    ಈ ಬಗ್ಗೆ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ, ಜಿ20 ಕುಟುಂಬ ಶಾಂತಿ, ಸೇವೆ, ಸಹಾನುಭೂತಿ ಮತ್ತು ಅಹಿಂಸೆಯ ದಾರಿದೀಪವಾದ ಗಾಂಧಿಗೆ ನಮನ ಸಲ್ಲಿಸಿತು. ಗಾಂಧೀಜಿಯವರ ಕಾಲಾತೀತ ಆದರ್ಶಗಳು, ಸಾಮರಸ್ಯ, ಅಂತರ್ಗತ ಮತ್ತು ಸಮೃದ್ಧ ಜಾಗತಿಕ ಭವಿಷ್ಯಕ್ಕಾಗಿ ನಮ್ಮ ಸಾಮೂಹಿಕ ದೃಷ್ಟಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಮಧ್ಯಪ್ರಾಚ್ಯ-ಯುರೋಪ್ ನಡುವೆ ಮೆಗಾ ಕಾರಿಡಾರ್; ಜಿ20 ಶೃಂಗಸಭೆಯಲ್ಲಿ ಬಿಗ್ ಡೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]