Tag: ರಾಜ್ಯಪಾಲರು

  • ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಅಪರಿಚಿತ ವ್ಯಕ್ತಿ ಕರೆ – ಎಫ್‌ಐಆರ್‌ ದಾಖಲು

    ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಅಪರಿಚಿತ ವ್ಯಕ್ತಿ ಕರೆ – ಎಫ್‌ಐಆರ್‌ ದಾಖಲು

    ಬೆಂಗಳೂರು: ಅಪರಿಚಿತನೊಬ್ಬ ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ (Thawar Chand Gehlot) ಅವರಿಗೆ ಕರೆ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ.

    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅಂತಾ ಹೇಳಿ ಭಾನುವಾರ ಮಧ್ಯಾಹ್ನ 2 ಬಾರಿ ಕರೆ ಮಾಡಿದ್ದಾನೆ. ಮೊದಲ ಬಾರಿಗೆ ಮಾಡಿದಾಗ ಪರಸ್ಪರ ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದವ್ರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಿವಾನಂದ ಪಾಟೀಲ್

    ನಂತರ ಅರ್ಧ ಗಂಟೆ ನಂತರ ಮತ್ತೆ ಕರೆ ಮಾಡಿದ ವ್ಯಕ್ತಿ ಅದೇ ರೀತಿ ಮಾತಾಡೋಕೆ ಶುರು ಮಾಡಿದ್ದ. ಈ ವೇಳೆ ಅನುಮಾನಗೊಂಡ ರಾಜ್ಯಪಾಲರು, ಆತನ ಹಿನ್ನೆಲೆ ಬಗ್ಗೆ ಪ್ರಶ್ನೆ ಮಾಡಿದ್ರು. ಆಗ ಏಕಾಏಕಿ ಕಾಲ್ ಕಟ್ ಮಾಡಲಾಗಿದೆ. ಇದನ್ನೂ ಓದಿ: ಗಣೇಶೋತ್ಸವ ಕಲ್ಲು ತೂರಾಟ ಪ್ರಕರಣ; ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ವಿಜಯೇಂದ್ರ

    ಈ ಬಗ್ಗೆ ಪರಿಶೀಲನೆ ಮಾಡಿದಾಗ ವೇಳೆ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೊದು ಗೊತ್ತಾಗಿದೆ. ಆತ ಯಾರು? ಯಾವ ಕಾರಣಕ್ಕೆ ಕರೆ ಮಾಡಿದ್ದ ಅನ್ನೋದು ಪೊಲೀಸ್‌ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಈ ಸಂಬಂಧ ಕೇಂದ್ರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

  • ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) (Satyapal Malik) ಅವರಿಂದು ನಿಧನರಾಗಿದ್ದಾರೆ.

    ರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಿಕ್‌ ದೆಹಲಿಯ (Delhi) ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

    ಜೆ&ಕೆ ಮಾತ್ರವಲ್ಲದೇ ಬಿಹಾರದ ರಾಜ್ಯಪಾಲರಾಗಿಯೂ (Governor) ಸೇವೆ ಸಲ್ಲಿಸಿದ್ದ ಮಲಿಕ್‌ ಅವರು, ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. ಆದ್ರೆ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ (RML Hospital) ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

    ಸತ್ಯಪಾಲ್‌ ಮಲಿಕ್‌ ಯಾರು?
    ಉತ್ತರ ಪ್ರದೇಶದ (UttarPradesh) ಬಾಗ್‌ಪತ್‌ನವರಾದ ಮಲಿಕ್‌ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ವಿಧಾನಸಭೆಗೆ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನ ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ಪೂರೈಸಿದರು. ಈ ಅವಧಿಯಲ್ಲಿ ಮಲಿಕ್‌ ಹಲವು ಪಕ್ಷಗಳನ್ನ ಬದಲಾಯಿಸಿದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

    1980 ರಲ್ಲಿ, ಚರಣ್ ಸಿಂಗ್ ನೇತೃತ್ವದ ಲೋಕ ದಳದಿಂದ ರಾಜ್ಯಸಭೆಗೆ ಆಯ್ಕೆಯಾದರು. 1984 ರಲ್ಲಿ, ಅವರು ಕಾಂಗ್ರೆಸ್ ಸೇರಿದರು. 1986 ರಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ನಂತರ ಅವರ 1 ವರ್ಷದ ರಾಜ್ಯಪಾಲರ ಅಧಿಕಾರಾವಧಿ ಮುಕ್ತಾಯವಾಯಿತು. ಇದನ್ನೂ ಓದಿ: ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ – ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

  • ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

    ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

    ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme Court) ಐತಿಹಾಸಿಕ ತೀರ್ಪಿನ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

    ತಮಿಳುನಾಡು ರಾಜ್ಯ ವಿಧಾನಸಭೆಯು 2020ರ ಜನವರಿಯಿಂದ 2023ರ ಏಪ್ರಿಲ್‌ವರೆಗೆ 12 ಮಸೂದೆಗಳನ್ನು ಅಂಗೀಕರಿಸಿತ್ತು. ಈ ಮಸೂದೆಗಳು ರಾಜ್ಯದ ವಿಶ್ವವಿದ್ಯಾಲಯಗಳ ಆಡಳಿತವನ್ನು ಗವರ್ನರ್‌ರಿಂದ ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ ಗುರಿಯನ್ನು ಹೊಂದಿದ್ದವು. ಆದರೆ, ಗವರ್ನರ್ ಆರ್.ಎನ್.ರವಿ ಈ ಮಸೂದೆಗಳಿಗೆ ಸಮ್ಮತಿ ನೀಡದೆ ಮೂರು ವರ್ಷಗಳಿಗೂ ಹೆಚ್ಚು ಕಾಲ ವಿಳಂಬ ಮಾಡಿದರು.

    2023ರ ನವೆಂಬರ್‌ನಲ್ಲಿ ಗವರ್ನರ್ 10 ಮಸೂದೆಗಳಿಗೆ ಸಮ್ಮತಿಯನ್ನು ನಿರಾಕರಿಸಿದರು. ಎರಡನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದರು. ರಾಜ್ಯ ವಿಧಾನಸಭೆಯು ಈ 10 ಮಸೂದೆಗಳನ್ನು ವಿಶೇಷ ಅಧಿವೇಶನದಲ್ಲಿ ಮತ್ತೆ ಅಂಗೀಕರಿಸಿ ಗವರ್ನರ್‌ಗೆ ಕಳುಹಿಸಿತಾದರೂ, ಅವರು ಇವುಗಳನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು. ರಾಷ್ಟ್ರಪತಿಗಳು ಒಂದು ಮಸೂದೆಗೆ ಸಮ್ಮತಿ ನೀಡಿದರು, ಏಳನ್ನು ತಿರಸ್ಕರಿಸಿದರು ಮತ್ತು ಎರಡನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

    ಈ ವಿಳಂಬ ಮತ್ತು ಕ್ರಮಗಳನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಗವರ್ನರ್‌ರ ಕ್ರಮಗಳು ಸಂವಿಧಾನದ 200ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಸರ್ಕಾರ ವಾದಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಜೆ.ಬಿ. ಪಾರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠವು, ಗವರ್ನರ್ ಆರ್.ಎನ್. ರವಿ ಅವರ ಕ್ರಮವನ್ನು ಕಾನೂನುಬಾಹಿರ ಮತ್ತು ತಪ್ಪು ಎಂದು ಘೋಷಿಸಿತು.

    ರಾಜ್ಯಪಾಲರಿಗೆ ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರವಿಲ್ಲ. ಸಂವಿಧಾನದಲ್ಲಿ ಇಂತಹ ಆಯ್ಕೆಯನ್ನು ಒದಗಿಸಲಾಗಿಲ್ಲ ಎನ್ನುವ ಮೂಲಕ ರಾಜ್ಯಪಾಲರ ಕಾರ್ಯವಿಧಾನಕ್ಕೆ ಸ್ಪಷ್ಟ ಸಮಯ ಮಿತಿಗಳನ್ನು ವಿಧಿಸಿತು. ಸಮ್ಮತಿಯನ್ನು ನಿರಾಕರಿಸಲು ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸಲು ಒಂದು ತಿಂಗಳು, ಸಮ್ಮತಿಯನ್ನು ನಿರಾಕರಿಸಲು ಮತ್ತು ವಿಧಾನಸಭೆಗೆ ಮರಳಿಸಲು ಮೂರು ತಿಂಗಳು ಹಾಗೂ ಮರು-ಅಂಗೀಕೃತ ಮಸೂದೆಗೆ ಸಮ್ಮತಿ ನೀಡಲು ಒಂದು ತಿಂಗಳು ಸಮಯ ನಿಗದಿ ಮಾಡಿತು.

    ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವಾದ ಆರ್ಟಿಕಲ್ 142ನ್ನು ಬಳಸಿಕೊಂಡು, ಈ 10 ಮಸೂದೆಗಳು ರಾಜ್ಯ ವಿಧಾನಸಭೆಯಿಂದ ಮರು-ಅಂಗೀಕರಿಸಿದ ದಿನಾಂಕದಿಂದಲೇ ಗವರ್ನರ್‌ರ ಸಮ್ಮತಿಯನ್ನು ಪಡೆದಿರುವಂತೆ ಘೋಷಿಸಿತು. ರಾಷ್ಟ್ರಪತಿಗಳಿಂದ ತೆಗೆದುಕೊಂಡ ಯಾವುದೇ ಕ್ರಮಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

    ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಮಿಳುನಾಡು ಸರ್ಕಾರವು ಈ 10 ಕಾಯ್ದೆಗಳನ್ನು ಸರ್ಕಾರಿ ಗೆಜೆಟ್‌ನಲ್ಲಿ ಅಧಿಸೂಚಿಸಿತು. ಇದರಿಂದಾಗಿ ಅವು ಕಾನೂನು ರೂಪವನ್ನು ಪಡೆದವು. ತಮಿಳುನಾಡು ವೆಟರಿನರಿ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಅಣ್ಣಾ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ ಸೇರಿ ಹತ್ತು ಕಾಯ್ದೆಗಳು ಕಾನೂನಾಗಿ ಜಾರಿಯಾದವು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಬೆಳವಣಿಗೆಯಾಗಿದೆ.

  • 2023-24ನೇ ಸಾಲಿನಲ್ಲಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

    2023-24ನೇ ಸಾಲಿನಲ್ಲಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್ (Congress) ಸರ್ಕಾರ ಬಂದಾಗಿನಿಂದ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಬರೋಬ್ಬರಿ 11 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಖರ್ಚು ವೆಚ್ಚದ ವರದಿಯನ್ನು ಸರ್ಕಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದೆ.

    ಈ ವಿಚಾರವಾಗಿ ವಿಧಾನಪರಿಷತ್‌ನಲ್ಲಿ ಜೆಡಿಎಸ್ ಶಾಸಕ ಜವರಾಯಿಗೌಡ ಪ್ರಶ್ನಿಸಿದರು. ಈ ವೇಳೆ ಸಿಎಂ ಲಿಖಿತ ರೂಪದ ಮೂಲಕ ಉತ್ತರವನ್ನು ನೀಡಿದ್ದಾರೆ. ಇದನ್ನೂ ಓದಿ: ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ವಿವಿಧ ಜಿಲ್ಲೆ ಪ್ರವಾಸ, ವಿಶೇಷ ಪ್ರವಾಸಗಳಿಗಾಗಿ ಸಿಎಂ ವಿಮಾನ ಬಳಕೆ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಇಲ್ಲಿಯವರೆಗೆ ಸಿಎಂ ಹಾಗೂ ರಾಜ್ಯಪಾಲರು ಸುಮಾರು 34 ಕೋಟಿ ರೂ. ವಿಮಾನಯಾನಕ್ಕೆ ಖರ್ಚು ಮಾಡಿದ್ದಾರೆ. ಇದನ್ನೂ ಓದಿ: ಹಮಾಸ್‌ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌, ಶೀಘ್ರವೇ ಗಡೀಪಾರು

    ಈ ವರದಿಯಲ್ಲಿ ಸಿಎಂ, ರಾಜ್ಯಪಾಲರು ಹಾಗೂ ಹೈಕೋರ್ಟ್ ನ್ಯಾಯಾಧೀಶರ ಸಂಪೂರ್ಣ ವಿಮಾನ ಹಾಗೂ ಹೆಲಿಕಾಷ್ಟರ್ ಪ್ರಯಾಣದ ಖರ್ಚು ವೆಚ್ಚದ ಮಾಹಿತಿಯಿದೆ. 2024-25ನೇ ಸಾಲಿನಲ್ಲಿ ಸರ್ಕಾರವು ಸುಮಾರು 21 ಕೋಟಿ ರೂ. ವಿಮಾನ ಪ್ರಯಾಣಕ್ಕೆ ಖರ್ಚು ಮಾಡಿದೆ.

  • ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಪತ್ರ

    ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಪತ್ರ

    ವಿಜಯಪುರ: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪತ್ರ ಬರೆದಿದ್ದಾರೆ. ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

    ರಾಜ್ಯಪಾಲರಾದ ಥಾವರ್‌ಚಂದ ಗೆಹ್ಲೋಟ್ (Thawar Chand Gehlot) ಅವರಿಗೆ ಪತ್ರ ಬರೆದು ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಜೂಜಾಟ ಪ್ರಕರಣ – ಐವರು ಅಧಿಕಾರಿಗಳು ಅಮಾನತು

    ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಶಾಸಕ ಯತ್ನಾಳ್ ವಿನಂತಿಸಿದ್ದಾರೆ. ಇದನ್ನೂ ಓದಿ: ವಿದ್ಯಾಕಾಶಿ ಧಾರವಾಡಕ್ಕೆ ವರುಣನ ಸ್ಪರ್ಶ – ಮೊದಲ ಮಳೆಗೆ ಕಾಮಣ್ಣನ ಕಣ್ಣೀರು ಎಂದ ಜನ

  • ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

    ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ (Microfinance Bill) ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು (Ordinance) ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.

    ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ವಾಪಸ್ ಕಳುಹಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

    ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

    ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದೇಕೆ?
    ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ, ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ. ಆದ್ದರಿಂದ ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ‌ಮಸೂದೆ ಮಂಡನೆ ಮಾಡಿ ಸಾದಕಬಾಧಕ ಚರ್ಚಿಸಿ ಎಂದು ತಿಳಿವಳಿಕೆ ನೀಡಿದ್ದಾರೆ.

    * ಈಗಿನ ಸುಗ್ರೀವಾಜ್ಞೆಯಲ್ಲಿರುವ ಅಂಶಗಳೇನು?
    > 10 ವರ್ಷ ಜೈಲು, 5 ಲಕ್ಷದ ತನಕ ದಂಡ
    > ನೋಂದಣಿರಹಿತ ಮತ್ತು ಪರವಾನಗಿರಹಿತ ಸಂಸ್ಥೆ, ಲೇವಾದೇವಿದಾರರ ಸಾಲ, ಬಡ್ಡಿ ಮನ್ನಾ
    > ಸಾಲಗಾರರ ಮೇಲೆ ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ
    > ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರ ಸಂಸ್ಥೆಗಳು ನೋಂದಣಿ ಕಡ್ಡಾಯ
    > ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಕಡ್ಡಾಯ
    > ಸಾಲಗಾರರ ಸಂಪೂರ್ಣ ಮಾಹಿತಿ, ಸಾಲದ ಮೊತ್ತ, ಬಡ್ಡಿ ದರ ಪ್ರಕಟಿಸಬೇಕು
    > ವಸೂಲಿಗೆ ಬಾಕಿ, ಸಾಲ ಪಡೆಯುವಾಗ ಲಿಖಿತ ಮುಚ್ಚಳಿಕೆ ನೀಡಬೇಕು
    > ನೋಂದಣಿ ಅವಧಿ ಒಂದು ವರ್ಷ ಮಾತ್ರ, ಅವಧಿ ಮುಗಿಯುವ 60 ದಿನಗಳ ನವೀಕರಣಕ್ಕೆ ಅರ್ಜಿ
    > ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರ
    > ಸಾಲಗಾರರಿಂದ ಭದ್ರತೆಯಾಗಿ ಯಾವುದೇ ವಸ್ತು ಅಥವಾ ಆಸ್ತಿ ಅಡಮಾನ ಇಟ್ಟುಕೊಳ್ಳುವಂತಿಲ್ಲ

    * ದೂರು ಸಲ್ಲಿಸುವುದು ಹೇಗೆ?
    > ಸಾಲಗಾರರು ಕಿರುಕುಳಕ್ಕೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ನೀಡಬಹುದು
    > ಪೊಲೀಸರು ಪ್ರಕರಣ ದಾಖಲಿಸಲು ಯಾವುದೇ ಕಾರಣಕ್ಕೂ ನಿರಾಕರಿಸಬಾರದು
    > ಡಿವೈಎಸ್‌ಪಿ ರ‍್ಯಾಂಕ್‌ಗಿಂತ ಮೇಲಿನ ಅಧಿಕಾರಿಗಳಿಗೆ ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶ
    > ವಿವಾದಗಳನ್ನು ಇತ್ಯರ್ಥಪಡಿಸಲು ಮಧ್ಯವರ್ತಿಯಾಗಿ ಒಂಬುಡುಮನ್ ನೇಮಕಕ್ಕೂ ಅವಕಾಶ

    * ಸಾಲ ವಸೂಲಿ ಹೇಗಿರಬೇಕು?
    > ಸಾಲಗಾರರು, ಕುಟುಂಬದವರ ಮೇಲೆ ಒತ್ತಡ ಹೇರಬಾರದು, ಅವಮಾನ, ಹಿಂಸೆ ಮಾಡಬಾರದು
    > ಸಾಲಗಾರರು, ಕುಟುಂಬದವರನ್ನ ನಿರಂತರವಾಗಿ ಹಿಂಬಾಲಿಸಬಾರದು, ಸ್ವತ್ತು ಅಡಮಾನ ಇಟ್ಟುಕೊಳ್ಳುವಂತಿಲ್ಲ
    > ಬಲವಂತದಿಂದ ಸಾಲ ವಸೂಲಿ ಮಾಡುವಂತಿಲ್ಲ, ಹೊರಗುತ್ತಿಗೆ ಸಿಬ್ಬಂದಿ, ರೌಡಿಗಳ ಬಳಕೆ ಇಲ್ಲ
    > ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಕಿತ್ತುಕೊಳ್ಳುವಂತಿಲ್ಲ.

  • ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್

    ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.ಇದನ್ನೂ ಓದಿ: ಪಕ್ಷದ ವಿದ್ಯಮಾನ ಬೇಸರ ತರಿಸಿದೆ – ಅಧ್ಯಕ್ಷರ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಆರ್.ಅಶೋಕ್

    ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಇವತ್ತು ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇವತ್ತು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದರು.

    ಬಿಲ್‌ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ – ಯತ್ನಾಳ್ ಕಿಡಿ

     

  • ದೆಹಲಿ ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ದೊಡ್ಡ ಸಂಕಷ್ಟ – ಇಡಿ ತನಿಖೆಗೆ ರಾಜ್ಯಪಾಲರು ಅಸ್ತು

    ದೆಹಲಿ ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ದೊಡ್ಡ ಸಂಕಷ್ಟ – ಇಡಿ ತನಿಖೆಗೆ ರಾಜ್ಯಪಾಲರು ಅಸ್ತು

    ನವದೆಹಲಿ: ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರಾದ ವಿ.ಕೆ ಸಕ್ಸೆನಾ (VK Saxena), ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಲೋಕಸಭೆ ಚುನಾವಣೆ ಸೋಲಿನ ಬಳಿಕ ಅಗ್ನಿಪರೀಕ್ಷೆಯಾಗಿರುವ ದೆಹಲಿ ವಿಧಾನಸಭಾ ಚುನಾವಣೆಗೆ (Delhi elections) ಇನ್ನೆರಡು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಹತ್ಯೆ ಮಾಡಲೆಂದು ಕಬ್ಬಿನ ಗದ್ದೆಗೆ ಕರ್ಕೊಂಡು ಬಂದಿದ್ರು: ರಾತ್ರಿ ಏನೇನಾಯ್ತು ವಿವರಿಸಿದ ಸಿಟಿ ರವಿ

    ಕೇಜ್ರಿವಾಲ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣನಾ? ನನಗೂ ಸಿ.ಟಿ ರವಿ ಬಗ್ಗೆ ಸಿಂಪತಿ ಇದೆ – ಡಿಕೆಶಿ

    ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.

    ಇನ್ನೂ ಕೇಜ್ರಿವಾಲ್‌ ಮತ್ತು ಆಪ್‌ ಪಕ್ಷದ ವಿರುದ್ಧ ಇಡಿ ಸಲ್ಲಿಸಿದ ಕೊನೆಯ ಚಾರ್ಜ್‌ಶೀಟ್‌ನಲ್ಲಿ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಹಗರಣದ ಕಿಂಗ್‌ಪಿನ್‌ ಎಂದು ಹೆಸರಿಸಿತ್ತು. ಸಿಸೋಡಿಯಾ ಸಹ ಮದ್ಯನೀತಿ ಹಗರಣದಲ್ಲಿ 18 ತಿಂಗಳು ಜೈಲು ವಾಸ ಅನುಭವಿಸಿ, ಕಳೆದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದರು. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ

    https://youtu.be/YlG_OlaLqTs?si=3RuOGm_tcymnxqzA

    ಇ.ಡಿ ಆರೋಪ ಏನು?
    ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಶುಕ್ರವಾರ (ಡಿ.20) ದೆಹಲಿ ಹೈಕೋರ್ಟ್‌ ಇ.ಡಿಗೆ ನೋಟಿಸ್‌ ನೀಡಿದೆ.

  • ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

    ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

    ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka Highcourt) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ.

    ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿನ್ನೆ ಬಂದಿರೋದು ಪೊಲಿಟಿಕಲ್‌ ಜಡ್ಜ್‌ಮೆಂಟ್‌: ಜಮೀರ್‌ ಅಹ್ಮದ್‌

    ಕಳೆದ ಸೆಪ್ಟೆಂಬರ್‌ 24ರಂದು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ (High Court) ಗ್ರೀನ್‌ ಸಿಗ್ನಲ್‌ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿತ್ತು. ಕಳೆದ ಸೆಪ್ಟೆಂಬರ್‌ 25ರಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಜಮೀರ್‌ ʻನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌ (Political Judgement). ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಮರುದಿನ ತಮ್ಮ ಹೇಳಿಕೆ ಕುರಿತು ಕ್ಷಮೆ ಕೋರಿದ್ದರು. ಇದನ್ನೂ ಓದಿ: ಬಾಯಿ ತಪ್ಪಿನಿಂದ ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದೆ: ಕ್ಷಮೆ ಕೇಳಿದ ಜಮೀರ್

    ಜಮೀರ್‌ ಅವರ ಈ ಹೇಳಿಕೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ನ್ಯಾಯಾಂಗ ನಿಂದನೆಯ ಜೊತೆಗೆ ಸಚಿವ ಜಮೀರ್ ಅಹಮದ್ ವಿರುದ್ಧ ಕ್ರಿಮಿನಲ್ ಪ್ರೊಸಿಡಿಂಗ್‌ಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಅಡ್ವೋಕೇಟ್ ಜನರಲ್‌ಗೆ ಪತ್ರ ಬರೆದಿರುವ ರಾಜ್ಯಪಾಲರು ಸಚಿವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಮೀರ್‌ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು

  • ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

    ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

    – ರಾಜ್ಯಪಾಲರು ಡಿನ್ನರ್‌ಗೆ ಕರೆದಿದ್ದಾರೆ ಎಂದ ಡಿಸಿಎಂ

    ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ವಿದ್ಯಮಾನಗಳು ಜೋರಾಗಿ ನಡೆಯುತ್ತಿವೆ. ಮಂಗಳವಾರ ಮೈಸೂರಿನಲ್ಲಿ (Mysuru) ಮೂವರು ಸಚಿವರು ಡಿನ್ನರ್ ಸಭೆ ನಡೆಸಿದ ಬೆನ್ನಲ್ಲೇ ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ‌ನಡೆಸಿದ್ದಾರೆ.

    ಅರ್ಧ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ಇಬ್ಬರು ನಾಯಕರು ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗ್ತಿದೆ. ಜೊತೆಗೆ 3 ಸಚಿವರು ಡಿನ್ನರ್ ಸಭೆಯ (Dinner Meeting) ವಿಷಯವೂ ಚರ್ಚೆ ಆಗಿದೆ ಎನ್ನಲಾಗ್ತಿದೆ. ಇದನ್ನೂ ಓದಿ: ವೈಜಾಗ್ ಸ್ಟೀಲ್ ಪುನಚ್ಚೇತನ ವಿಚಾರ – ನಿರ್ಮಲಾ ಸೀತಾರಾಮನ್, ನಾಯ್ಡು ಜೊತೆಗೆ ಹೆಚ್‌ಡಿಕೆ ಚರ್ಚೆ

    ಸಿಎಂ ಜೊತೆ ಮಾತುಕತೆ ಬಳಿಕ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಚರ್ಚೆಯ ಗುಟ್ಟು ಬಿಟ್ಟುಕೊಡಲಿಲ್ಲ. ನಾನು ಸಿಎಂ ಭೇಟಿ ಮಾಡದೇ ಇನ್ಯಾರು ಭೇಟಿ ಮಾಡ್ತಾರೆ? ಬೇರೆ ಪಾರ್ಟಿ ಅವರನ್ನ ಭೇಟಿ ಮಾಡ್ತಿದ್ದೇವಾ? ಅವರು ನಮ್ಮ ಲೀಡರ್ ನಮ್ಮ ಸಿಎಂ, ಸಿಎಂ ಅವರ ಜೊತೆ ಅನೇಕ ವಿಚಾರ ಚರ್ಚೆ ಮಾಡಿದ್ದೇವೆ. ರಾಜ್ಯಪಾಲರು ಡಿನ್ನರ್‌ಗೆ ಕರೆದಿದ್ದಾರೆ ಆ ಬಗ್ಗೆ ಮಾತಾಡಿದ್ದೇವೆ ಅಂತ ತಿಳಿಸಿದರು.

    ನಿನ್ನೆ 3 ಸಚಿವರ ಡಿನ್ನರ್ ಸಭೆ ವಿಚಾರಕ್ಕೆ ಪ್ರತಿಕ್ರಿಯೆಗೆ ಡಿಕೆಶಿವಕುಮಾರ್ ನಕಾರ ಮಾಡಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ಹೊರಟು ಹೋದರು. ಇತ್ತ ಹೈಕಮಾಂಡ್ ಡೈರೆಕ್ಷನ್ ಏನಾದ್ರು ಕೊಟ್ಟಿದ್ದೇಯ ಎಂಬ ಪ್ರಶ್ನೆಗೆ ತಲೆ ಅಲ್ಲಾಡಿಸಿ ಪ್ರತಿಕ್ರಿಯೆ ನೀಡದೇ ತೆರಳಿದರು. ಇದನ್ನೂ ಓದಿ: ನಾನು ಕೊಲ್ಲದೇ ಇದ್ದಿದ್ರೆ, ಅವಳೇ ನನ್ನನ್ನ ಕೊಲ್ಲುತ್ತಿದ್ದಳು – ಮಹಾಲಕ್ಷ್ಮಿ ಕೊಲೆ ಹಂತಕನ ಡೆತ್‌ ನೋಟ್‌ನಲ್ಲಿ ರಹಸ್ಯ ಬಯಲು