Tag: ರಾಜ್ಯಪಾಲರು

  • ನೈತಿಕತೆ ಬಗ್ಗೆ ಮಾತನಾಡುವ ವಿಪಕ್ಷಗಳು ಚರ್ಚೆಗೆ ಬರಲಿ – ಪ್ರಿಯಾಂಕ್ ಖರ್ಗೆ ಸವಾಲ್

    ನೈತಿಕತೆ ಬಗ್ಗೆ ಮಾತನಾಡುವ ವಿಪಕ್ಷಗಳು ಚರ್ಚೆಗೆ ಬರಲಿ – ಪ್ರಿಯಾಂಕ್ ಖರ್ಗೆ ಸವಾಲ್

    – ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದ ಸಚಿವ

    ಬೆಂಗಳೂರು: ಮುಡಾ (MUDA) ಸಂಬಂಧ ಏನೇ ತನಿಖೆ ನಡೆಯಲಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಪರ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬ್ಯಾಟಿಂಗ್ ಮಾಡಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಬಳಿಕ ಪ್ರತಿಕ್ರಿಯಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಹೈಕೋರ್ಟ್ ಸೂಕ್ಷ್ಮವಾಗಿ ತನಿಖೆಗೆ ಆದೇಶ ಮಾಡಿದೆ. 17ಎ ಅಡಿ ತನಿಖೆಗೆ ಅನುಮತಿ ಕೊಟ್ಡಿದೆ. ಕೋರ್ಟ್ 218 ಬಿಎನ್‌ಎಸ್‌ಎಸ್ (Bharatiya Nagarik Suraksha Sanhita) ಅಡಿ ತಿರಸ್ಕಾರ ಮಾಡಿದೆ. ಸಿಎಂ ಕೂಡಾ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ನಾವೇ ಮೊದಲು ನ್ಯಾಯಾಂಗ ರಚನೆ ಮಾಡಿದ್ದೇವೆ. ನಾವು ತನಿಖೆಯಿಂದ ಹಿಂದೆ ಸರಿಯಲ್ಲ. ತನಿಖೆ ಆಗಲಿ ಎಂದು ತಿಳಿಸಿದರು.ಇದನ್ನೂ ಓದಿ: ಮುಂಬೈನಲ್ಲಿ ರಾಕಿಭಾಯ್ ಹವಾ ಜೋರು..!

    ರಾಜ್ಯಪಾಲರ (Governer) ಕಚೇರಿ ದುರ್ಬಳಕೆ ಆಗಿದೆ. ಬಿಜೆಪಿಗೆ (BJP) ರಾಜ್ಯಪಾಲರು ಸ್ಟೇಷನ್ ಹೌಸ್ ಆಗಿದ್ದಾರೆ. ರಾಜ್ಯಪಾಲರು ಕಾನೂನು ಪ್ರಕಾರ ಆದೇಶ ಕೊಡಬೇಕು. ಆದರೆ ಅದನ್ನು ಮಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.

    ಸಿಎಂ ರಾಜೀನಾಮೆ ಕೇಳುವ ಬಿಜೆಪಿ ಅವರಿಗೆ ನೈತಿಕತೆ ಇದೆಯಾ? ಯಡಿಯೂರಪ್ಪ ಕೇಸ್ (Yadiyurappa Case) ಬಗ್ಗೆ, ಮುನಿರತ್ನ ಬಗ್ಗೆ ಮಾತಾಡಿದ್ದಾರಾ, ಪ್ರಜ್ವಲ್ ಕೇಸ್ ಬಗ್ಗೆ ಮಾತಾಡಿದ್ದಾರಾ? ಎಲ್ಲಿ ಹೋಗಿತ್ತು ಇವರ ನೈತಿಕತೆ? ವಿಜಯೇಂದ್ರ (Vijayendra) ಮೇಲೂ ಕೇಸ್ ಇದೆ. ಇವರು ನಮಗೆ ನೈತಿಕತೆ ಹೇಳೋದಾ? ಎಂದು ಕಿಡಿಕಾರಿದರು.

    ತನಿಖೆ ಆಗದೇ ಗಲ್ಲಿಗೆ ಹಾಕುವುದು ಎಷ್ಟು ಸರಿ. ನೈತಿಕತೆ ಬಗ್ಗೆ ಮಾತಾಡುವ ಇಚ್ಛೆಯಿದ್ದರೆ ಬಿಜೆಪಿ ಅವರು ಬರಲಿ. ಗಾಂಧಿ ಪ್ರತಿಮೆ ಮುಂದೆ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.ಇದನ್ನೂ ಓದಿ: ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ನ್ಯಾ.ಸಂತೋಷ್‌ ಹೆಗ್ಡೆ

  • ಯಾವುದೇ ತನಿಖೆ ನಡೆಯಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ : ಡಿಸಿಎಂ ಡಿಕೆಶಿ

    ಯಾವುದೇ ತನಿಖೆ ನಡೆಯಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ : ಡಿಸಿಎಂ ಡಿಕೆಶಿ

    ಬೆಂಗಳೂರು: ಮುಡಾ (MUDA) ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ತಿಳಿಸಿದರು.

    ಹೈಕೋರ್ಟ್ ತೀರ್ಪು ನೀಡಿದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ. ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದರು.ಇದನ್ನೂ ಓದಿ: ಡಿಕೆಶಿಗೆ ಸಿಎಂ ಆಗುವ ಅವಕಾಶ ಬಂದೇ ಬರುತ್ತೆ: ಶಾಸಕ ಬಸವರಾಜ್ ಶಿವಗಂಗಾ

    ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಕೇಸ್ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮುಡಾ (Mysuru Urban Development Authority) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ:  ಸಿದ್ದರಾಮಯ್ಯನವರು ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಲಿ, ರಾಜೀನಾಮೆ ಕೊಡುವುದೊಂದೇ ದಾರಿ: ಸಿ.ಟಿ.ರವಿ

  • ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು – ಈಶ್ವರ್ ಖಂಡ್ರೆ ಕಿಡಿ

    ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು – ಈಶ್ವರ್ ಖಂಡ್ರೆ ಕಿಡಿ

    ಬೆಂಗಳೂರು: ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಬಿಜೆಪಿ (BJP) ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಹೈಕೋರ್ಟ್ (High Court) ಸಿಎಂ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ (CM Siddaramaiah) ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಆಪ್ತರ ಮಾತು ಕೇಳಿ ಸಿಎಂ ಕೆಟ್ಟರು, ಸತ್ಯಕ್ಕೆ ಜಯ ಸಿಕ್ಕಿದೆ : ಶಾಸಕ ಶ್ರೀವತ್ಸ

    ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಿಜೆಪಿಯವರು ಹಗಲು ದರೋಡೆ ಮಾಡಿದ್ದಾರೆ. ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು. ಅಷ್ಟು ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದರು.

    ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟಕ್ಕೆ ಹಲವು ಅವಕಾಶಗಳಿವೆ. ಸರ್ಕಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ನಾವು ಉತ್ತಮ ಕೆಲಸ ಮಾಡಿದ್ದೇವೆ. ಜನ ನಮ್ಮ ಜೊತೆ ಇದ್ದಾರೆ, ನಾವು ಮೇಲ್ಮನವಿ ಹಾಕುತ್ತೇವೆ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಾರಾ ಮಹೇಶ್ ಬಾಬು ಸಂಬಂಧಿ?

  • ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್‌ (High Court) ಗ್ರೀನ್‌ ಸಿಗ್ನಲ್‌ ನೀಡಿದೆ.

    ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು  ವಜಾಗೊಳಿಸಿದೆ.

    ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿತು. ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17ಎ ಅಡಿ  ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಆದೇಶ ಸರಿ ಎಂದು ಆದೇಶದಲ್ಲಿ ಕೋರ್ಟ್‌ ತಿಳಿಸಿದೆ.

    ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ಖಾಸಗಿ ದೂರುದಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಬಹುದು. ರಾಜ್ಯಪಾಲರು ದೂರಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಧ್ಯಯನ ಮಾಡಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಸಮರ್ಪಕವಾಗಿದೆ ಎಂದು ರಾಜ್ಯಪಾಲರ ನಿರ್ಧಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.

    ಕೋರ್ಟ್‌ ತೀರ್ಪಿನ ಸಾರಾಂಶ ಮಾತ್ರ ಈಗ ಲಭ್ಯವಾಗಿದ್ದು ಮಧ್ಯಾಹ್ನ 2:30ಕ್ಕೆ  ಆದೇಶದ ಪ್ರತಿ ಹೈಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಆಗಲಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ಮುಡಾದಲ್ಲಿ ಪ್ರಭಾವ ಬಳಸಿ ಭಾರೀ ಹಗರಣ ಮಾಡಿದ್ದಾರೆ ಎಂದು ಆರೋಪಿಸಿ  ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್‌ ಅವರು  ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಆಗಸ್ಟ್‌ 17 ರಂದು ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲರು ಅನುಮತಿ ನೀಡಿದ್ದರು.

    ಸಿಎಂ ಮುಂದಿರುವ ಆಯ್ಕೆ ಏನು?
    – ಹೈಕೋರ್ಟ್ ಆದೇಶ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗುವ ಸಾಧ್ಯತೆಯಿದೆ. ಈಗಾಗಲೇ ಸಿಎಂ ಕಾನೂನು ಪರಿಣಿತರ ಜೊತೆ ಚರ್ಚೆ ನಡೆಸಿದ್ದಾರೆ.
    – ಹೈಕೋರ್ಟ್ ತೀರ್ಪು ಹಿನ್ನೆಲೆ ನೈತಿಕತೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಥವಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ತನಿಖೆ ಎದುರಿಸುವುದು.
    – ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಯಬೇಕು  ಎಂಬ ಒತ್ತಡ ಹಾಕಿದರೆ  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾವು ಹೇಳಿದವರನ್ನ ಸಿಎಂ ಮಾಡಬಹುದು.
    – ತನಿಖೆ ಮುಗಿದ ಬಳಿಕ ಮತ್ತೆ ಸಿಎಂ ಸ್ಥಾನವನ್ನು ಏರುವುದು.

  • ಪೊಲೀಸ್ ಸ್ಟೇಷನ್, ತನಿಖಾ ಏಜೆನ್ಸಿಗಳೇ ಬೇಡ, ರಾಜ್ಯಪಾಲರಿಗೆ ದೂರು ನೀಡಿದರೆ ಸಾಕು: ಎಂಬಿ ಪಾಟೀಲ್

    ಪೊಲೀಸ್ ಸ್ಟೇಷನ್, ತನಿಖಾ ಏಜೆನ್ಸಿಗಳೇ ಬೇಡ, ರಾಜ್ಯಪಾಲರಿಗೆ ದೂರು ನೀಡಿದರೆ ಸಾಕು: ಎಂಬಿ ಪಾಟೀಲ್

    – ತನಿಖಾ ಏಜೆನ್ಸಿಗಳು ಮಾಡಬೇಕಾಗಿರುವುದನ್ನು ರಾಜ್ಯಪಾಲರು ಮಾಡುತ್ತಿದ್ದಾರೆ

    ಬೆಂಗಳೂರು: ಕರ್ನಾಟಕದಲ್ಲಿ ಪೊಲೀಸ್ ಸ್ಟೇಷನ್, ತನಿಖಾ ಏಜೆನ್ಸಿಗಳೇ ಬೇಡ. ರಾಜ್ಯಪಾಲರಿಗೆ ದೂರು ನೀಡಿದರೆ ಸಾಕು ಅವರೇ ನೋಡಿಕೊಳ್ಳುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ರಾಜ್ಯಪಾಲರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ತನಿಖಾ ಏಜೆನ್ಸಿಗಳೂ ಬೇಡ. ಎಲ್ಲವನ್ನೂ ರಾಜ್ಯಪಾಲರಿಗೆ (Governer) ದೂರು ನೀಡಿದರೆ ಸಾಕು ಎಲ್ಲವನ್ನು ಅವರೇ ನೋಡಿಕೊಳ್ಳುತ್ತಾರೆ. ಪೊಲೀಸರ ತನಿಖಾ ಏಜೆನ್ಸಿಗಳು ಮಾಡಬೇಕಾಗಿರುವುದನ್ನು ರಾಜ್ಯಪಾಲರು ಮಾಡುತ್ತಿದ್ದಾರೆ. ಅವರು ಎಷ್ಟಾದರೂ ಪತ್ರ ಬರೆಯಲಿ ನಾವು ನೋಡಿಕೊಳ್ಳುತ್ತೇವೆ. ರಾಜ್ಯಪಾಲರಿಂದ ಪದೇ ಪದೇ ಪತ್ರವ್ಯವಹಾರ ಹಿನ್ನೆಲೆ ಅವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ರೇಣುಕಾ ಹತ್ಯೆ ಕೇಸ್‌ – ಮೂವರಿಗೆ ಜಾಮೀನು ಮಂಜೂರು

    ಬಿಜೆಪಿ (BJP) ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದ್ದೇವಾ? ಇವರು ರಾಜ್ಯಪಾಲರನ್ನ, ಕಚೇರಿಯನ್ನ ಬಳಸಿಕೊಂಡು ದುರುಪಯೋಗ ಮಾಡಿಕೊಳ್ಳುತ್ತಿದ್ದಾರಾ? ಸರ್ಕಾರ ಬಂದ ಮೇಲೆ ಎಲ್ಲಾ ಸಮಿತಿ ಮಾಡಿದ್ದೇವೆ. ಆಗಿನಿಂದಲೇ ನಾವು ತನಿಖೆ ಮಾಡುತ್ತಿದ್ದೇವೆ. ಕಿಮ್ಮನೆ ರತ್ನಾಕರ್ ಹೇಳಿರುವ ವಿಚಾರ ಗೃಹ ಸಚಿವರು ಪರಿಗಣಿಸಬಹುದು. ರಾಜ್ಯಪಾಲ ನಡೆ ಬಗ್ಗೆ ಗಂಭೀರ ಚಿಂತನೆ ಮಾಡುತ್ತೇವೆ ಎಂದರು.

    ನನ್ನ ವಿರುದ್ಧ ದೂರಿನ ಪ್ರಶ್ನೆಯೇ ಬರುವುದಿಲ್ಲ. ಮೊನ್ನೆ ಎರಡು ಗಂಟೆಗಳ ಕಾಲ ಎಲ್ಲವೂ ಕೊಟ್ಟಿದ್ದೇನೆ. ಅರ್ಕಾವತಿ ಸೇರಿದಂತೆ ಬಿಜೆಪಿ ಅವರು ಏನು ಕೊಡ್ತಾರೆ, ರಾಜ್ಯಪಾಲರು ಅವುಗಳ ಬಗ್ಗೆ ಸಿಎಸ್ ಅವರಿಗೆ ಏನು ಮಾಹಿತಿ ಕೇಳುತ್ತಿದ್ದಾರೆ. ಸರ್ಕಾರ ಸಿಎಂ ಸಚಿವ ಸಂಪುಟದಲ್ಲಿ ಇದರ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ. ಮಾಹಿತಿ ಸೋರಿಕೆ ರಾಜ್ಯಪಾಲರ ಕಚೇರಿಯಿಂದ ಆಗುತ್ತಿದೆ. ಬೇಕು ಅಂತಲೇ ಸೋರಿಕೆ ಮಾಡಿರಬೇಕು. ಏನು ಬರೆಯುತ್ತಾರೆ ಬರೆದುಕೊಳ್ಳಲಿ ಎಂದು ಕಿಡಿಕಾರಿದರು.

    ಇದೇ ವೇಳೆ ಗಂಗೇನಹಳ್ಳಿ ಡಿನೋಟಿಫಿಕೇಷನ್ ವಿಚಾರ ಕುರಿತು ಹೆಚ್‌ಡಿಕೆ (HD Kumaraswamy) ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಲೋಕಾಯುಕ್ತ ತನಿಖೆಗೆ ಹೋಗಿ ಬಂದಿದ್ದಾರೆ. ಕುಮಾರಸ್ವಾಮಿ ಅವರು ಹೋಗಬೇಕಲ್ಲವಾ ಅಲ್ಲಿ. ದ್ವಂದ್ವ ನೀತಿ ಗೊತ್ತಾಗುತ್ತಿದೆ. ಸಹಿ ಮಾಡಿಲ್ಲ ಎಂದು ಹೇಳುತ್ತಾರೆ. ಅದು ಅತೀರೇಖದ ಪ್ರಸಂಗ ಎಂದು ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

  • ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯಪಾಲರ (Thawarchand Gehlot) ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡೋ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕ್ಷುಲ್ಲಕ ವಿಷಯಕ್ಕೂ ರಿಪೋರ್ಟ್ ಕೇಳಿದರೆ ಹೇಗೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯಪಾಲರ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ.

    ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೂರು ಕೊಡುವ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ರಾಜ್ಯಪಾಲರು ಸಣ್ಣ ಸಣ್ಣ ವಿಚಾರಕ್ಕೆ ಹೀಗೆ ಮಾಡುತ್ತಿದ್ದಾರೆ. ಯಾರೋ ಒಬ್ಬ ಸಣ್ಣ ದೂರು ಕೊಟ್ಟಿದ್ದಾನೆ. ಮೈಸೂರಿನವನು (Mysuru) ದೂರು ಕೊಟ್ಟಿದ್ದಾನೆ. ಸಿದ್ದರಾಮಯ್ಯ ಯಾವಾಗಲೂ ಕನ್ನಡದಲ್ಲಿ ಸಹಿ ಹಾಕುತ್ತಾರೆ. ಆದರೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿದ್ದಾರೆ. ಅದಕ್ಕೆ ತನಿಖೆ ಮಾಡಿ ಅಂತ ದೂರು ಕೊಟ್ಟಿದ್ದಾನೆ. ಇದು ವಿಷಯನಾ? ಅದು ವಿಷಯನಾ? ಎಂದು ರಾಜ್ಯಪಾಲರನ್ನು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಸಹಿ ಕನ್ನಡದಲ್ಲಿ ಆದರು ಮಾಡಬಹುದು, ಇಂಗ್ಲಿಷ್‌ನಲ್ಲಿ ಬೇಕಾದರೂ ಮಾಡಬಹುದು. ಯಾವ ಭಾಷೆ ಬರುತ್ತೋ ಆ ಭಾಷೆಯಲ್ಲಿ ಸಹಿ ಮಾಡಬಹುದು. ನಾನು ಸಾಮಾನ್ಯವಾಗಿ ಕನ್ನಡದಲ್ಲಿ ಇರೋ ಡ್ರಾಫ್ಟ್ಗಳಿಗೆ ಕನ್ನಡದಲ್ಲಿ ಸಹಿ ಮಾಡುತ್ತೇನೆ. ಇಂಗ್ಲಿಷ್‌ನಲ್ಲಿ ಡ್ರಾಫ್ಟ್ ಇದ್ದರೆ, ಬೇರೆ ರಾಜ್ಯಗಳಿಗೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ ಇಂಗ್ಲಿಷ್‌ನಲ್ಲಿ ಸಹಿ ಮಾಡುತ್ತೇನೆ. ಅದರಲ್ಲಿ ತಪ್ಪೇನು? ಇಂತಹ ಕ್ಷುಲ್ಲಕ ವಿಚಾರಕ್ಕೆ ರಿಪೋರ್ಟ್ ಕೇಳಿದರೆ ಹೇಗೆ ಎಂದರು. ಇದನ್ನೂ ಓದಿ: ಅಣ್ಣನ ಲವ್‌ಸ್ಟೋರಿಗೆ ತಮ್ಮನ ಕೊಲೆ ಪ್ರಕರಣ- 6 ಆರೋಪಿಗಳ ಬಂಧನ

  • ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ಬೆಂಗಳೂರು: ರಾಜಭವನ ಬಿಜೆಪಿ (BJP) ಕಚೇರಿಯಾಗಿದೆ. ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರೋ ಒಬ್ಬ ಸಂಶಯಾಸ್ಪದ ಗುಣ ಇರುವ ವ್ಯಕ್ತಿ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ. ರಾಜ್ಯಪಾಲರು ಆ ಪತ್ರದ ಆಧಾರದಲ್ಲಿ 12 ಗಂಟೆಯೊಳಗೆ ಸಿಎಂ (CM) ವಿರುದ್ದ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಡುತ್ತಾರೆ. ಇದು ರಾಜ್ಯಪಾಲರ ದುರಂತದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯಪಾಲರ ಬಳಿ ದೂರು ಬಂದ ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ವಿವರಣೆ ಕೇಳಿ ಕಳಿಸಿಕೊಡುತ್ತಾರೆ. ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ. ರಾಜ್ಯಪಾಲರು (Governer) ಪಕ್ಷಪಾತ ಮಾಡಬಾರದು. ರಾಜಭವನ ಒಂದು ಪವಿತ್ರವಾದ ಜಾಗ. ಅಲ್ಲಿ ಯಾವುದೇ ರಾಜಕಾರಣ ಮಾಡಬಾರದು. ರಾಜಭವನ ರಾಜಕೀಯ ಮೀರಿ ಇರಬೇಕು. ಆದರೆ ರಾಜಭವನದಲ್ಲಿ ರಾಜಕೀಯ ನಡೆಯುತ್ತಿದೆ. ರಾಜಭವನ ಬಿಜೆಪಿ ಕಚೇರಿ ಆಗಿದೆ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಾಲಿವುಡ್ ಸಿನಿಮಾ ಶೂಟಿಂಗ್‌ಗಾಗಿ ಹಂಪಿಗೆ ಬರಲಿದ್ದಾರೆ ರಶ್ಮಿಕಾ ಮಂದಣ್ಣ

  • ಇಂದು ಸಿದ್ದರಾಮಯ್ಯಗೆ ಬಿಗ್‌ ಡೇ – ಕಾರ್ಯಕ್ರಮಗಳನ್ನು ರಿಸರ್ವ್ ಮಾಡಿದ ಸಿಎಂ

    ಬೆಂಗಳೂರು: ಇಂದು ಸಿದ್ದರಾಮಯ್ಯನವರಿಗೆ (CM Siddaramaiah) ಬಿಗ್ ಡೇ ಆಗಿರುವ ಕಾರಣ ಸಿಎಂ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರಿಸರ್ವ್ ಮಾಡಿದ್ದಾರೆ.

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಹಗರಣ ಕೇಸ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರು (Governer) ಪ್ರಾಸಿಕ್ಯೂಷನ್ (Prosection) ಅನುಮತಿ ನೀಡಿರುವ ಹಿನ್ನೆಲೆ ಹೈಕೋರ್ಟ್‌ನಲ್ಲಿ (High Court) ವಿಚಾರಣೆ ನಡೆಯುತ್ತಿದೆ.ಇದನ್ನೂ ಓದಿ: ಸೌರ ಪ್ಯಾರಾಬೋಲಾಯ್ಡ್ ತಂತ್ರಜ್ಞಾನ; ನವೀಕರಿಸಬಹುದಾದ ಶಕ್ತಿಯ ಭರವಸೆ – ಏನಿದು ತಂತ್ರಜ್ಞಾನ?

    ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಶನಿವಾರ ಎರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ಸೆ.2) ಮಧ್ಯಾಹ್ನ 2:30ಕ್ಕೆ ನಡೆಯಲಿದೆ.

    ಶನಿವಾರ ನಡೆದ ವಿಚಾರಣೆಯಲ್ಲಿ ಪ್ರತಿವಾದಿಗಳ ವಾದಕ್ಕೆ ಉತ್ತರ ಕೊಡಲು ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಸಮಯಾವಕಾಶ ನೀಡುವಂತೆ ಕೋರಿದ್ದರು. ನಂತರ ಕೋರ್ಟ್ ಇಂದು (ಸೆ.2) ವಿಚಾರಣೆಯನ್ನು ಮುಂದೂಡಿತ್ತು.ಇದನ್ನೂ ಓದಿ: ಯಾದಗಿರಿಯಲ್ಲಿ ನಿರಂತರ ಮಳೆಯಿಂದಾಗಿ ನಂದೆಪಲ್ಲಿ ಸೇತುವೆ ಸಂಪೂರ್ಣ ಜಲಾವೃತ

    ಮಧ್ಯಾಹ್ನ ಹೈಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾಗಲಿರುವ ಹಿನ್ನೆಲೆ ವಕೀಲರ ಜೊತೆ ಚರ್ಚೆ ನಡೆಸಬೇಕು ಎಂಬ ಕಾರಣಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಪೂರ್ವ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸಿಎಂ ಸಿದ್ದರಾಮಯ್ಯನವರು ಕಾಯ್ದಿರಿಸಿದ್ದಾರೆ.

  • ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ನಂತ್ರ ಹೈಕಮಾಂಡ್ ತೀರ್ಮಾನ ಏನು ಗೊತ್ತಿಲ್ಲ – ಸತೀಶ್ ಜಾರಕಿಹೋಳಿ

    ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ನಂತ್ರ ಹೈಕಮಾಂಡ್ ತೀರ್ಮಾನ ಏನು ಗೊತ್ತಿಲ್ಲ – ಸತೀಶ್ ಜಾರಕಿಹೋಳಿ

    ಬೆಂಗಳೂರು: ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ನಂತರ ಹೈಕಮಾಂಡ್ ತೀರ್ಮಾನ ಏನು ಅನ್ನೋದು ಗೊತ್ತಿಲ್ಲ ಮುಂದೆ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ (Satish Jarkiholi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಡಿಸಿಎಂ ದೆಹಲಿ ಭೇಟಿ ನಮಗೆ ಅಷ್ಟೊಂದು ಗೊತ್ತಿಲ್ಲ ವಿಷ್ಯ ಏನೂ ಗೊತ್ತಿಲ್ಲ. ಸಾಮಾನ್ಯವಾಗಿ ಇಲ್ಲಿ ನಡೀತಿರೋ ವಿಚಾರವನ್ನ ಹೈಕಮಾಂಡ್ ಗಮನಕ್ಕೆ ತರೋ ಕೆಲಸ ಆಗ್ತಿದೆ. ಅದೇ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ. ಪ್ರಾಸಿಕ್ಯೂಷನ್ (Prosecution) ನಂತ್ರ ಹೈಕಮಾಂಡ್ ತೀರ್ಮಾನ ಏನು? ಎಂಬ ವಿಚಾರದ ಬಗ್ಗೆ ಯಾವುದೇ ಕ್ಲಾರಿಫಿಕೇಷನ್ ಬಂದಿಲ್ಲ. ಕೋರ್ಟ್ ನಲ್ಲಿ ಆದೇಶ ಬಂದ್ಮೇಲೆ ಮುಂದಿನ ತೀರ್ಮಾನ. ಇಂಡಿಯಾ ಒಕ್ಕೂಟ ‌ಏನು ತೀರ್ಮಾನ ಕೈಗೊಳ್ಳುತ್ತದೆ ನೋಡಬಹುದು. ಬೇರೆ ಕಡೆ ಕೂಡ ಈ ರೀತಿ ಕೆಲಸ ಆಗ್ತಿವೆ ಎಂದು ಹೇಳಿದ್ದಾರೆ.

    ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಸರ್ಕಾರಗಳ ನಡುವೆ ಸಂಘರ್ಷ ನಡೆದಿವೆ. ತಮಿಳುನಾಡು, ಬಂಗಾಳ ಸೇರಿ ನಮ್ಮ ರಾಜ್ಯದಲ್ಲೂ ನಡೀತಿದೆ. ರಾಜ್ಯಪಾಲರು ಬಿಲ್ ವಾಪಸ್ ಕಳಿಸಿದ್ದಾರೆ. ಕೆಲ ಬಿಲ್‌ಗಳನ್ನ ವಾಪಸ್ ಕಳಿಸಿದ್ದಾರೆ. ಅವರು ಬಿಲ್ ಕುರಿತು ಸ್ಪಷ್ಟನೆ ಕೇಳೋಕೆ ಹಕ್ಕಿದೆ. ಅದನ್ನ ಸರ್ಕಾರ ಕೂಡ ಉತ್ತರ ಕೊಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾಖಲೆಗಳ ನಾಶ ಪಡಿಸಲು ವೈಟ್ನರ್ ಹಚ್ಚಿದ್ದು ಯಾರು? – ನಾವು ಸರ್ಕಾರ ಬೀಳಿಸಲ್ಲ: ಸಿಎಂ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಇನ್ನೂ ಸರ್ಕಾರ ಅಸ್ಥಿರ‌ಗೊಳಿಸುವ ಕುರಿತು ಮಾತನಾಡಿ, ಸರ್ಕಾರ ಅಸ್ಥಿರ ಗೊಳಿಸೋ‌ ವಿಚಾರದ ಬಗ್ಗೆ ಸಿಎಂ ಹೇಳಿದ್ದಾರೆ. ಹಿಂದೆಯಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದ್ರೆ ಯಾವುದೇ ಬದಲಾವಣೆ ಆಗಲ್ಲ. 6 ಗಳಿಗೊಮ್ಮೆ‌ ಸರ್ಕಾರ ಬೀಳಿಸೋ ವಿಚಾರ ಮುನ್ನಲೆಗೆ ಬರುತ್ತಿರುತ್ತೆ. ಮುಂದಿನ 4 ವರ್ಷಗಳ ಕಾಲ ನಮ್ಮದೇ ಸರ್ಕಾರ ಅಲ್ಲಿವರೆಗೆ ಬೀಳಿಸುವ ಪ್ರಯತ್ನ ನಡೆಯುತ್ತಲೇ ಇರುತ್ತೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಕಪ್ಪುಚುಕ್ಕಿ ತರುವ ಸುಳ್ಳು ಆರೋಪಕ್ಕೆ‌ ರಾಜ್ಯಪಾಲರ ಸಮ್ಮತಿ: ಸಚಿವ ಎಂ.ಬಿ.ಪಾಟೀಲ್

  • ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

    ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

    ಬೆಂಗಳೂರು: ಜಿಪಂ (Zilla Panchayat), ತಾಪಂ (Taluk Panchayat) ಮೀಸಲಿಟ್ಟಿದ್ದ ಬಳಕೆಯಾಗದ ಅನುದಾನ ವಾಪಸ್ ಪಡೆದು ಹಣ ಬಳಕೆ ಆರೋಪ ಮಾಡಿದ್ದು, ಎಲ್ಲಿಗೆ ಬಳಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಬಿಜೆಪಿ ಪರಿಷತ್ ಸದಸ್ಯ ಡಿ.ಎಸ್.ಅರುಣ್ (D S Arun) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

    ಸಿಎಂ ವಿರುದ್ಧ ದೂರಿನ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯ ಹಣಕಾಸು ಸಚಿವರು. ಜೆಡ್‌ಪಿ-ಟಿಪಿ (ಜಿಲ್ಲಾ ಪಂಚಾಯತಿ -ತಾಲ್ಲೂಕು ಪಂಚಾಯತಿ) ಬಳಕೆ ಆಗದ ಹಣ ಎಷ್ಟು ಇದೆ ಎಂದು ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಬಳಿ ಕೇಳಿದ್ದೆ. ಆಗ ಅವರು 1,953 ಕೋಟಿ ರೂ. ಬಳಕೆ ಆಗದ ಹಣ ಇದೆ ಎಂದಿದ್ದರು. ಅದರಲ್ಲಿ 1,494 ಕೋಟಿ ರೂ. ಖಜಾನೆಗೂ ಜಮಾ ಆಗಿಲ್ಲ ಎಂದು ಪ್ರಶ್ನಿಸಿದಾಗ ನಿಯಮಿತವಾಗಿ ಪೇಮೆಂಟ್ ಜಮೆ ಆಗ್ತಾ ಇದೆ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದರು.

    ಖರ್ಚಾಗದೇ ಇದ್ದ ಹಣ ಸಂಚಿತ ನಿಧಿ ಮೂಲಕ ಸರ್ಕಾರಕ್ಕೆ ಬರಬೇಕು. ಅಲ್ಲದೆ ಆ ಹಣ ಬಳಕೆ ಆಗುವಾಗ ಶಾಸಕರ ಅನುಮತಿ ಪಡೆಯಬೇಕು. ನಾನು ಹಣಕಾಸು ಇಲಾಖೆಗೂ ಪತ್ರ ಬರೆದಿದ್ದೆ, ಅಲ್ಲೂ ಹಣ ಜಮಾ ಆಗಿಲ್ಲ, ಆ ಹಣ ಎಲ್ಲಿಗೆ ಹೋಯ್ತು….? ಎಂದು ಪ್ರಶ್ನಿಸಿದ್ದಾರೆ.

    ಜೆಡ್‌ಪಿ-ಟಿಪಿಗೆ ಇಟ್ಟ ಹಣ ಎಲ್ಲಿಗೆ ಹೋಯ್ತು..? ಜೆಡ್‌ಪಿ-ಟಿಪಿಯಲ್ಲಿ ಹಿಂದುಳಿದ ವರ್ಗದವರೆ ಜಾಸ್ತಿ ಇದ್ದಾರೆ. ಈ ಹಣದ ಬಳಕೆ ಸಂಬಂಧಿಸಿದಂತೆ ತನಿಖೆ ಆಗಬೇಕು. ಇದಕ್ಕೆಲ್ಲಾ ಹಣಕಾಸು ಸಚಿವರೇ ಹೊಣೆ ಎಂದರು. ಅದಕ್ಕಾಗಿಯೇ ನಾನು ಸಿದ್ದರಾಮಯ್ಯ ವಿರುದ್ಧವೇ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. ಸಾರ್ವಜನಿಕ ಖಾತೆ ಸಮಿತಿಗೂ ದೂರು ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.