ಬೆಂಗಳೂರು: ಸಿದ್ದರಾಮಯ್ಯಗೆ (Siddaramaiah) ಈಗ ಮೂರು ಸಂಕಟ, ಮೂರು ಹೋರಾಟ ಇವೆ. ಭಾವನಾತ್ಮಕ ಸಂಕಟ.. ರಾಜಕೀಯ ಸಂಕಟ.. ಕಾನೂನು ಸಂಕಟಗಳು ಇವೆ.
ಮೂರು ಸಂಕಟಗಳನ್ನ ಹೋರಾಟದ ಮೂಲಕವೇ ಸಮಚಿತ್ತದಿಂದ ಎದುರಿಸಬೇಕಾಗಿದೆ. ಎಫ್‌ಐಆರ್ (FIR) ದಾಖಲಾದರೇ ಸಾರ್ವಜನಿಕವಾಗಿ ಕಾಣಿಸಿ ಕೊಳ್ಳದ ಪತ್ನಿ ವಿಚಾರಣೆ ಎದುರಿಸಬೇಕು. ಇದು ಸಹಜವಾಗಿಯೇ ಸಿಎಂ ಸಿದ್ದರಾಮಯ್ಯಗೆ ಇದು ಅರಗಿಸಿಕೊಳ್ಳಲಾಗದ ವಿಷಯ. ಅನಿರೀಕ್ಷಿತವಾಗಿ ಕುಟುಂಬದಿಂದಲೇ ಬಂದ ಆರೋಪವನ್ನ ಭಾವನಾತ್ಮಕ ಹೋರಾಟದ ಮೂಲಕ ಎದುರಿಸಬೇಕಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?
ಇನ್ನು ರಾಜಕೀಯ ಸಂಘರ್ಷ (Political conflict) ಮಾಡದ ಹೊರತು ಅಧಿಕಾರ ಉಳಿಸಿಕೊಳ್ಳಲು ಆಗದು. ರಾಜ್ಯಪಾಲರ ರಾಜಕೀಯ ಪಿತೂರಿ ಆರೋಪದಿಂದ ಹಿಡಿದು ಅಧಿಕಾರ ಉಳಿಸಿಕೊಳ್ಳುವ ತನಕ ರಾಜಕೀಯ ಹೋರಾಟ ಮಾಡುವುದು ಅನಿವಾರ್ಯ. ಆರೋಪ ಮುಕ್ತರಾಗಲು ಕೋರ್ಟ್ ನಲ್ಲೇ (Karnataka Highcourt) ಹೋರಾಟ ನಡೆಸಬೇಕಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ
ಇಷ್ಟು ವರ್ಷದ ರಾಜಕಾರಣದಲ್ಲಿ ಕಾಪಾಡಿಕೊಂಡು ಬಂದಿದ್ದದ್ದನ್ನ ಮರಳಿಪಡೆಯಲು ಕಾನೂನು ಹೋರಾಟ ಅಗತ್ಯ. ಕಾನೂನು ಹೋರಾಟದ ಮೂಲಕ ಜಯಿಸಿ ಬಂದು ವಿರೋಧಿಗಳಿಗೆ ಉತ್ತರ ಕೊಡಬೇಕಾದ ಅನಿವಾರ್ಯತೆಯೂ ಇದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಮೂರು ಸಂಕಟಗಳನ್ನ ಅನುಭವಿಸಿಯೇ ಮೇಲೆದ್ದು ಬರ್ತಾರಾ? ವಿರೋಧಿಗಳ ಬಾಯಿ ಮುಚ್ಚಿಸುತ್ತಾರಾ? ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: TB Dam | ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ
ಬೆಂಗಳೂರು: ಮುಡಾ ಸೈಟ್ ಹಂಚಿಕೆ (MUDA Site Case) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ರಾಜ್ಯ ಬಿಜೆಪಿ (BJP) ಸ್ವಾಗತಿಸಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.
ಭ್ರಷ್ಟ ಮುಖ್ಯಮಂತ್ರಿ @siddaramaiah ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ.
ದಲಿತರ ಭೂಮಿಯನ್ನು ನುಂಗಿ, ಅಕ್ರಮವಾಗಿ ಅತ್ಯಂತ ಬೆಲೆಬಾಳುವ 14 ಸೈಟುಗಳನ್ನು ಕಬಳಿಸಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರೆಯಲು ಅರ್ಹರಲ್ಲ.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ದಲಿತರ ಭೂಮಿಯನ್ನು ನುಂಗಿ, ಅಕ್ರಮವಾಗಿ ಅತ್ಯಂತ ಬೆಲೆಬಾಳುವ 14 ಸೈಟುಗಳನ್ನು ಕಬಳಿಸಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ ಎಂದು ರಾಜ್ಯ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಒತ್ತಾಯಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್‌ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಬರಲಿ: ಈಶ್ವರಪ್ಪ
ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ.
ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು, ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯ… pic.twitter.com/6Xw7ADs6Yg
— Basanagouda R Patil (Yatnal) (@BasanagoudaBJP) August 17, 2024
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು. ಕಾಂಗ್ರೆಸ್ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಿದ್ದರಾಮಯ್ಯನವರೇ ಭಂಡತನವನ್ನು ಬಿಡಿ.
ನಿಮ್ಮ ವಿರುದ್ಧದ ಆಪಾದನೆ ಮೇಲ್ನೋಟಕ್ಕೆ ಸತ್ಯ ಎಂದೆನಿಸಿದ ಕಾರಣಕ್ಕೆ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
ಈಗ ನೀವು ಸಂಪುಟದಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಲ್ಲ, ರಾಜೀನಾಮೆಗೆ ನಿರ್ಧಾರ ತಗೆದುಕೊಳ್ಳಬೇಕು.@siddaramaiah
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ. ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು, ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯಮಂತ್ರಿಗಳ ತನಿಖೆ ಎದುರಿಸಬೇಕು. ಈ ಕೂಡಲೇ ಸಿದ್ದರಾಮಯ್ಯ ನವರು ರಾಜೀನಾಮೆ ನೀಡುವ ಮೂಲಕ ತನಿಖೆ ಎದುರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆಗ್ರಹಪಡಿಸಿದ್ದಾರೆ.
ಮಾಜಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರೇ ಭಂಡತನವನ್ನು ಬಿಡಿ. ನಿಮ್ಮ ವಿರುದ್ಧದ ಆಪಾದನೆ ಮೇಲ್ನೋಟಕ್ಕೆ ಸತ್ಯ ಎಂದೆನಿಸಿದ ಕಾರಣಕ್ಕೆ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈಗ ನೀವು ಸಂಪುಟದಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಲ್ಲ, ರಾಜೀನಾಮೆಗೆ ನಿರ್ಧಾರ ತಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧೈರ್ಯವಾಗಿರಿ, ನಿಮ್ಮ ಜೊತೆ ನಾವಿದ್ದೇವೆ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್
ಬೆಂಗಳೂರು: ಮುಡಾ ಸೈಟ್ (MUDA Scam Case) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಮುಂದಾಗಿದ್ದಾರೆ.
ವೈಯಕ್ತಿಕವಾಗಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಕಾನೂನು ಸಮರ ಮುಂದುವರೆಸಬೇಕು. ಪ್ರಾಸಿಕ್ಯೂಷನ್ ಅಸಾಂವಿಧಾನಿಕ, ಕಾನೂನುಬಾಹಿರ ಅಂತಾ ಕೋರ್ಟ್‌ಗೆ ಸಿಎಂ ಮನವರಿಕೆ ಮಾಡಬೇಕಾಗುತ್ತದೆ.
ಸಿಎಂ ಮುಂದಿರುವ ಆಯ್ಕೆ ಏನು?
* ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗಬಹುದು.
* ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಸಿಎಂಗೆ ಅವಕಾಶ ಇದೆ.
* 2022ರಲ್ಲಿ ಮುಡಾ ಸೈಟ್ ಸಿಎಂಗೆ ಹಂಚಿಕೆ ಆಗಿರೋದು. ಹೀಗಾಗಿ ರಾಜ್ಯಪಾಲರಿಗೆ ಅಧಿಕಾರ ಇಲ್ಲ ಅಂತಾ ವಾದಿಸಬಹುದು.
* ಸ್ಪೀಕರ್‌ಗೆ ಅವಕಾಶ ಇದೆ ಅಂತಾ ಕೋರ್ಟ್‌ನಲ್ಲಿ ಪ್ರಸ್ತಾಪಿಸಬಹುದು.
ಹೀಗಾಗಿಯೇ ರಾಜಭವನದ ಮೇಲೆ ಸಚಿವರು ಸಂಶಯ ವ್ಯಕ್ತಪಡಿಸಿದ್ದಾರೆ. ಇ.ಡಿ ಜೊತೆಗೆ ರಾಜಭವನದ ದುರುಪಯೋಗ ಆಗ್ತಿದೆ ಅಂತಾ ಆರೋಪಿಸಿ ಗರಂ ಆಗಿದ್ದಾರೆ. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ನಾಳೆ ಕ್ಯಾಬಿನೆಟ್‌ನಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಕ್ಯಾಬಿನೆಟ್ ನಿರ್ಣಯದ ವೇಳೆ ಸಿಎಂ ಸಿದ್ದರಾಮಯ್ಯ ಸಭೆಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಇದೀಗ ಬಿಜೆಪಿಗರು ಪ್ರತಿ ದಾಳಿಗೆ ನಿಂತಿದ್ದಾರೆ. ಆದರೆ ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಇ.ಡಿ ಅನುಮತಿ ಕೇಳಿಲ್ಲ. ಇದನ್ನೂ ಓದಿ: ಆರಗ ಜ್ಞಾನೇಂದ್ರ, ತಂಡದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಅಧ್ಯಯನ
ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬAಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯಪಾಲರು (Governer) ಕನ್ನಡ ಕಡ್ಡಾಯ ನಾಮಫಲಕ (Kannada Mandatory Nameplate) ಸುಗ್ರೀವಾಜ್ಞೆಗೆ (Ordinance) ಸಹಿ ಹಾಕಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒತ್ತಾಯಿಸಿದ್ದಾರೆ.
ಕನ್ನಡ ಕಡ್ಡಾಯ ನಾಮಫಲಕ ಸುಗ್ರೀವಾಜ್ಞೆ ರಾಜ್ಯಪಾಲರು ವಾಪಸ್ ಕಳಿಸಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಅಧಿವೇಶನ ಘೋಷಣೆ ಮಾಡುವ ಮುಂಚೆ ಸುಗ್ರೀವಾಜ್ಞೆ ಮಾಡಿದ್ದೆವು. ದೇಶದ ರಕ್ಷಣೆ ವಿಚಾರ ಹೇಗೆ ಕಾಪಾಡುತ್ತೇವೋ ಅದೇ ರೀತಿ ರಾಜ್ಯದ ಗೌರದ ವಿಚಾರ ಇದು. ನಾವು ಅದಕ್ಕೆ 60% ಕನ್ನಡ ಇರಬೇಕು ಎಂದು, ಯಾವುದೇ ಗೊಂದಲ ಇರಬಾರದು ಎಂದು ಸುಗ್ರೀವಾಜ್ಞೆ ಹೊರಡಿಸಿದ್ದೆವು. ಅಸ್ಮಿತೆ, ಸ್ವಾಭಿಮಾನ, ಭಾಷೆ, ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಅ ದೃಷ್ಟಿಯಿಂದ ಗಲಾಟೆ, ಚಳವಳಿ ನಡೆಯುತ್ತಿತ್ತು. ಹೀಗಾಗಿ ಕನ್ನಡ (Kannada) ಕಡ್ಡಾಯ ಎಂದು ಮಾಡಿದ್ದೇವೆ ಎಂದರು. ಇದನ್ನೂ ಓದಿ: ಲೋಕಸಭೆಯಲ್ಲಿ ಜನ ಮತ ಹಾಕಿಲ್ಲ ಎಂದರೆ ಗ್ಯಾರಂಟಿ ಅವಶ್ಯಕತೆ ಇಲ್ಲಾ ಎಂದರ್ಥ: ಕಾಂಗ್ರೆಸ್ ಶಾಸಕ
ರಾಜ್ಯಪಾಲರು ಯಾಕೆ ವಾಪಸ್ ಕಳಿಸಿದ್ರೋ ಗೊತ್ತಿಲ್ಲ. ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ಸುಗ್ರೀವಾಜ್ಞೆಯನ್ನು ನಾವು ಅಧಿವೇಶನದಲ್ಲಿ ಪಾಸ್ ಮಾಡುತ್ತೇವೆ. ರಾಜ್ಯಪಾಲರು ಅಧಿವೇಶನದವರೆಗೆ ಕಾಯಬಾರದು. ಅಧಿವೇಶನದಲ್ಲಿ ನಾವು ಪಾಸ್ ಮಾಡೇ ಮಾಡ್ತೀವಿ. ಸರ್ಕಾರದ ಪರವಾಗಿ ಅಪೀಲ್ ಮಾಡುತ್ತೇನೆ. ಯಾರು ಇದಕ್ಕೆ ವಿರೋಧ ಮಾಡುತ್ತಿಲ್ಲ. ಯಾಕೆ ರಾಜ್ಯಪಾಲರು ವಿರೋಧ ಮಾಡಿದ್ರೋ ಗೊತ್ತಿಲ್ಲ. ಕರ್ನಾಟಕದಲ್ಲಿ ಇದ್ದೀರಿ. ಕರ್ನಾಟಕದಲ್ಲಿ ರಾಜ್ಯಪಾಲರು ಆಗಿದ್ದೀರಿ. ಇದೊಂದು ಭಾವನಾತ್ಮಕ ವಿಚಾರ. ಈ ವಿಚಾರವಾಗಿ ಸರ್ಕಾರದಲ್ಲಿ ನೀವು ತಪ್ಪು ಕಂಡು ಹಿಡಿಯಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಇಂದಿನಿಂದ ಬಜೆಟ್ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ
ಸುಗ್ರೀವಾಜ್ಞೆಗೆ ನಾಗರಿಕರು ಯಾರಾದ್ರು ವಿರೋಧ ಮಾಡಿದ್ದಾರಾ? ಯಾರಾದ್ರು ಪಕ್ಷದವರು ವಿರೋಧ ಮಾಡಿದ್ದಾರಾ? ಯಾರೂ ವಿರೋಧ ಮಾಡಲ್ಲ. ಹೀಗಾಗಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿರೋ ಬಗ್ಗೆ ಮರುಚಿಂತನೆ ಮಾಡಿ ಸಹಿ ಹಾಕಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್.ಅಶೋಕ್ ಮನವಿ
ಚಂಡೀಗಢ: ಸೆಪ್ಟೆಂಬರ್ 22 ರಂದು ವಿಶ್ವಾಸಮತ ಚಲಾಯಿಸಲು ಪಂಜಾಬ್‌ನ (Punjab) ಆಮ್ ಆದ್ಮಿ ಪಕ್ಷ (AAP) ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶವನ್ನು (One Day Special Session) ಪಂಜಾಬ್‌ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ರದ್ದುಗೊಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು 1 ದಿನದ ವಿಧಾನಸಭೆ ಅಧಿವೇಶನ ನಡೆಸುವ ಸರ್ಕಾರದ ಮನವಿಯನ್ನು ಅವರು ಅಂಗೀಕರಿಸಿದ್ದಾರೆ.
ಭಗವಂತ್ ಮಾನ್ (Bhagwant Mann) ನೇತೃತ್ವದ ಎಎಪಿ ಸರ್ಕಾರ ಸರಕು ಸೇವಾ ತೆರಿಗೆ, ವಿದ್ಯುತ್ ಪೂರೈಕೆಯಂತಹ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 27ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ನಡೆಸಲಿದೆ. ಇದಕ್ಕೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಭಾನುವಾರ ತಿಳಿಸಿದ್ದಾರೆ.
ಪಂಜಾಬ್‌ನ ಎಎಪಿ ಸರ್ಕಾರ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು. ಇದಾದ ಬಳಿಕ ಮಾನ್ ವಿಶ್ವಾಸ ಮತ ಪಡೆಯಲು ಸೆಪ್ಟೆಂಬರ್ 22 ರಂದು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದ್ದರು. ಇದನ್ನೂ ಓದಿ: ಎಸ್.ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದು, ಗಾಬರಿ ಬೇಡ: ಬಸವರಾಜ್ ಬೊಮ್ಮಾಯಿ
ಅಧಿವೇಶನ ನಡೆಸಲು ರಾಜ್ಯಪಾಲರು ಮೊದಲಿಗೆ ಅನುಮತಿ ನೀಡಿದರೂ ಬಳಿಕ ಅದನ್ನು ಹಿಂತೆಗೆದುಕೊಂಡರು. ಇದಾದ ಬಳಿಕ ಪಂಜಾಬ್ ಸಿಎಂ ರಾಜಭವನದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಾಗಿ ತಿಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು ಅಧಿವೇಶನ ನಡೆಸಲು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: PFI ಶಂಕಿತರ ಮೊಬೈಲ್‌ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೇಕ್ ಇನ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾವನ್ನು ಉತ್ತೇಜಿಸುವ ಮೂಲಕ ಸ್ವಾವಲಂಬಿ ಭಾರತವನ್ನು ಕಟ್ಟಲು ಭಾರತೀಯರು ಮುಂದಾಗಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
ಅಮೃತ ಮಹೋತ್ಸವ ಹಬ್ಬವನ್ನು ಭಾರತದ ಜನತೆಗೆ ಸಮರ್ಪಿಸಲಾಗಿದೆ. ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಮತ್ತು ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಕವರ್ ಬಿಡುಗಡೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದ್ದಾರೆ.
ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಎಫ್‌ಕೆಸಿಸಿಐ ಸಂಸ್ಥೆಗೆ 106 ವರ್ಷ. ಎಫ್‌ಕೆಸಿಸಿಐ ಕರ್ನಾಟಕ ರಾಜ್ಯದಲ್ಲಿ ಉದ್ಯಮ, ವ್ಯಾಪಾರ ಮತ್ತು ಸೇವಾ ವಲಯದಲ್ಲಿ ಸಕ್ರಿಯ ಮತ್ತು ಸಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳಾದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನಾ ಕಾರ್ಯಕ್ರಮ
ಸ್ವಾತಂತ್ರ‍್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಪ್ರಯಾಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಇಂದು ಭಾರತದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಆದಾಯ, ವಸತಿ ಮತ್ತು ನೀರು, ಆರೋಗ್ಯ ಸೌಲಭ್ಯಗಳು ಇತ್ಯಾದಿಗಳಿಗೆ ವಿವಿಧ ವಿನೂತನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಮೂಲ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯವು ದೇಶದ ಜಿಡಿಪಿಗೆ ಶೇ.8.8 ರಷ್ಟು ಕೊಡುಗೆ ನೀಡುವ ಮೂಲಕ ಭಾರತದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದೆ. ಕೈಗಾರಿಕೆ, ಸೇವಾ ಮತ್ತು ಕೃಷಿ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದೆ. ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದ 2ನೇ ಅತಿದೊಡ್ಡ ರಾಜ್ಯವಾಗಿದೆ. 2024ರ ವೇಳೆಗೆ ದೇಶವು 5 ಟ್ರಿಲಿಯನ್ ಆರ್ಥಿಕತೆಯ ಗುರಿ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮಗೆ ಸ್ವಾತಂತ್ರ‍್ಯ ನೀಡಿದ ಎಲ್ಲ ಮಹಾಪುರುಷರಿಗೆ ನನ್ನ ನಮನ. ಈ ವಿಶೇಷ ಸಂದರ್ಭದಲ್ಲಿ ನಾವು ಒಂದು ಸಂಕಲ್ಪವನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ‍್ಯವನ್ನು ಅಖಂಡವಾಗಿ ಉಳಿಸಿಕೊಳ್ಳಲು ಮತ್ತು ದೇಶಭಕ್ತಿಯ ವಾತಾವರಣ ಸೃಷ್ಟಿಸಲು ಒಗ್ಗೂಡಿ ಮುನ್ನಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಸಿ.ಎ.ಐ.ಎಸ್ ಪ್ರಸಾದ್ ಹಾಗೂ ಅಂಚೆ ಇಲಾಖೆಯ ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರೀಯ ಸಹೋದರತೆ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಹಬ್ಬವನ್ನು ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನ ರಾಜಭವನದಲ್ಲಿಂದು ಆಚರಿಸಿದರು.
ರಾಷ್ಟ್ರೋತ್ತಾನ ಪರಿಷತ್‍ನ ಮಕ್ಕಳು ತಮ್ಮ ಪರಿಚಯ ಮಾಡಿಕೊಂಡ ರಾಜ್ಯಪಾಲರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ರಾಜ್ಯಪಾಲರು ಮಕ್ಕಳಿಗೆ ಸಿಹಿ ವಿತರಿಸಿ, ಆಶೀರ್ವದಿಸಿದರು.
ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ರಾಜ್ಯಪಾಲರು, 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಅಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಮಕ್ಕಳು ಈ ಸಂಭ್ರಮದಲ್ಲಿ ಭಾಗವಹಿಸುವ ಮೂಲಕ ದೇಶದ ಏಕತೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಿರಿಯರನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸಬೇಕು. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಮಕ್ಕಳು ಕೈಜೋಡಿಸಬೇಕು ಎಂದು ಕರೆ ನೀಡಿ, ಕರ್ನಾಟಕ ರಾಜ್ಯದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಹಬ್ಬ ಆಚರಿಸುತ್ತಿರುವುದು ಬಹಳ ಸಂತಸ ತಂದಿದೆ ಎಂದರು.
ರಾಜ್ಯದ ಜನತೆಗೆ ಹಾಗೂ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರ್ನಾಟಕ ರಾಜ್ಯವು ಗುಣಮಟ್ಟದ ತಾಂತ್ರಿಕ ಹಾಗೂ ಉದ್ಯೋಗ ಆಧಾರಿತ ಶಿಕ್ಷಣ ಒದಗಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಹಾಗೂ ಬೆಂಗಳೂರು ಪ್ರಸ್ತುತ ಶಿಕ್ಷಣದ ಕೇಂದ್ರವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಆರ್‌ಎನ್‌ಎಸ್ ಶಿಕ್ಷಣ ಸಂಸ್ಥೆ, ಸುಮಾರು 9 ಎಕರೆ ಪ್ರದೇಶದಲ್ಲಿ, ಮಾಲಿನ್ಯ ಮುಕ್ತ ಪರಿಸರದಲ್ಲಿ ಅತ್ಯಾಧುನಿಕತೆಯಿಂದ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದರೊಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ, ಕ್ರೀಡೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುತ್ತೀರಿ. ನೀವು ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದೀರಿ ಎಂದು ಶ್ಲಾಘಿಸಿದ್ದಾರೆ.
ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ಅಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳನ್ನು ಬಳಸಿಕೊಂಡು ನೀವು ಶ್ರೇಷ್ಠ ಭಾರತ, ನವ ಭಾರತ- ನವ ಕರ್ನಾಟಕ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಬಹುದು. ಈ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಯಸ್ಸಿನ ಮಿತಿಯಿಂದಾಗಿ 33 ಲಕ್ಷ ಪ್ಯಾಕೇಜ್‌ನ ಅಮೆರಿಕದ ಉದ್ಯೋಗ ಕಳೆದುಕೊಂಡ 15ರ ಬಾಲಕ
ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಅಸಮತೋಲನದಿಂದಾಗಿ ನಾವಿಂದು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯು ಪರಿಸರ ಸಂರಕ್ಷಣೆಯ ಬಗ್ಗೆ ಯೋಚಿಸುವಂತೆ ಒತ್ತಾಯಿಸಿದೆ. ಹಾಗಾಗಿ ಪ್ರಕೃತಿಯ ಬಗ್ಗೆ ಪ್ರೀತಿ ಗೌರವ, ಸರಳ ಜೀವನ ವಿಧಾನ ಹಾಗೂ ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು ಎಂದು ಕರೆ ನೀಡಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೇ ಇಡೀ ಮಾನವಕುಲಕ್ಕೆ ಪ್ರಯೋಜನ ನೀಡುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸುಭುದೇಂದ್ರ ಸ್ವಾಮೀಜಿ, ಸಚಿವರಾದ ಸಿ.ಟಿ.ರವಿ, ಜಿತೇಂದ್ರ ಗೆಹ್ಲೋಟ್, ಬಂಟರ ಸಂಘ ಹಾಗೂ ಆರ್‌ಎನ್‌ಎಸ್ ವಿದ್ಯಾನಿಕೇತನ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಕರ್ನಾಟಕದ ಮಾಜಿ ಲೋಕಾಯುಕ್ತ, ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಮಿಸೆಸ್ ಇಂಡಿಯಾ-2022 ಸಿನಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಿದರು.
ರಾಜಕೀಯ ಪ್ರವೇಶಿಸುವ ಮೊದಲು ವೈದ್ಯರಾಗಿದ್ದ ಸೌಂದರರಾಜನ್, ಪ್ರಯಾಣಿಕನಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆಯನ್ನು ಕೊಟ್ಟು ಸಹಾಯಕ ಔಷಧಿಗಳನ್ನು ನೀಡಿದರು. ಇದರಿಂದ ಸಹ-ಪ್ರಯಾಣಿಕರು ಸಂತೋಷ ವ್ಯಕ್ತಪಡಿಸಿದ್ದು, ಧನ್ಯವಾದವನ್ನು ಹೇಳಿದ್ದಾರೆ. ಈ ಕುರಿತು ರವಿ ಚಂದರ್ ನಾಯ್ಕ ಮುದವತ್ ಅವರು ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್
ನಡೆದಿದ್ದೇನು?
ಸೌಂದರರಾಜನ್ ಅವರು ವಾರಣಾಸಿಯಿಂದ ನವದೆಹಲಿ ಮೂಲಕ ಹೈದರಾಬಾದ್‍ಗೆ ಹಿಂದಿರುಗುತ್ತಿದ್ದಾಗ ವಿಮಾನ ಸಿಬ್ಬಂದಿ ನೀಡಿದ ಪ್ರಕಟಣೆಗೆ ಪ್ರತಿಕ್ರಿಯಿಸಿದರು. ಸಹ-ಪ್ರಯಾಣಿಕನಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಸೌಂದರರಾಜನ್ ಅವರು ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದು, ವಿಮಾನ ನಿಲ್ದಾಣಕ್ಕೆ ಬಂದ ನಂತರ ಚಿಕಿತ್ಸೆ ಪಡೆದ ಪ್ರಯಾಣಿಕರನ್ನು ಗಾಲಿಕುರ್ಚಿಯಲ್ಲಿ ವಿಮಾನ ನಿಲ್ದಾಣದ ವೈದ್ಯಕೀಯ ಬೂತ್‍ಗೆ ಕರೆದೊಯ್ಯಲಾಯಿತು.
ಸೌಂದರರಾಜನ್ ಅವರು ಇತ್ತೀಚೆಗೆ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಎಡೆಬಿಡದ ಮಳೆ ಮತ್ತು ಕೆಸರಿನಲ್ಲಿಯೇ ನಡೆದು ಪ್ರದೇಶದ ಸುತ್ತಲೂ ನಡೆದರು. ನಂತರ ಅವರು ಅಶ್ವಪುರಂ ಮಂಡಲದ ಆಶ್ರಯ ಶಿಬಿರಗಳಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಜನರೊಂದಿಗೆ ಸಂವಾದ ನಡೆಸಿದ್ದರು. ಇದನ್ನೂ ಓದಿ: ಯಡಿಯೂರಪ್ಪ ತ್ಯಾಗ ಮಾಡಿಲ್ಲ, ಅವರನ್ನ ಪಕ್ಷದಿಂದ ದಬ್ಬಿದ್ರು: ಸಿಎಂ ಇಬ್ರಾಹಿಂ
ಮೊದಲು ಅಶ್ವಪುರಂ ಮಂಡಲದ ವೇಮುಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಅವರು ನಂತರ, ಪಾಮುಲಪಲ್ಲಿಯ ಎಸ್‍ಕೆಟಿ ಫಂಕ್ಷನ್ ಹಾಲ್ ಮತ್ತು ಚಿಂತಿರಿಯಾಲ ಕಾಲೋನಿಯ ತರಿಂಗಿಣಿ ಫಂಕ್ಷನ್ ಹಾಲ್‍ನಲ್ಲಿ ಸ್ಥಾಪಿಸಲಾದ ಆಶ್ರಯ ಶಿಬಿರಗಳಿಗೆ ಭೇಟಿ ನೀಡಿದರು. ಸೌಂದರರಾಜನ್ ಅವರು ಹಾನಿಗೊಳಗಾದ ಮನೆಗಳು ಮತ್ತು ಜಲಾವೃತಗೊಂಡ ಭತ್ತದ ಗದ್ದೆಗಳಿಗೆ ಭೇಟಿ ನೀಡಿದ್ದರು.
Live Tv
[brid partner=56869869 player=32851 video=960834 autoplay=true]