ಈಶ್ವರಪ್ಪ ಪ್ರಭಾವಿ ಆಗಿದ್ದು, ಪ್ರಕರಣ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ನಮಗಿದೆ. ಪೊಲೀಸ್ ಅಧಿಕಾರಿಗಳು ಈ ಕೇಸ್‍ನ ಪ್ರತಿ ಹಂತದ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ರೇಣುಕಾ ಸಂತೋಷ್ ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಗೌರವ, ಸರಳ ಜೀವನ ಹಾಗೂ ಪರಿಸರ ಸಂರಕ್ಷಣೆ ಕಡೆಗೆ ಹೊಸ ಪ್ರಜ್ಞೆಯನ್ನು ಯುವಪೀಳಿಗೆಯಲ್ಲಿ ಜಾಗೃತಗೊಳಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಪ್ರಸ್ತುತ ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಏರುಪೇರಿನಿಂದಾಗಿ ನಾವು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ, ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಲಿಮಾದ ಸೇಂಟ್ ರೋಸ್‌ನ ಮದರ್ ತೆರೇಸಾ ಅವರು ಶಿಕ್ಷಣದಲ್ಲಿ ಮಹಿಳಾ ಸಬಲೀಕರಣದ ಬದ್ಧತೆಯೊಂದಿಗೆ 1948 ರಲ್ಲಿ ಮಹಿಳೆಯರ ಉನ್ನತ ಶಿಕ್ಷಣಕ್ಕಾಗಿ ಮೌಂಟ್ ಕಾರ್ಮೆಲ್ ಕಾಲೇಜನ್ನು ಸ್ಥಾಪಿಸಿದರು. ಇಂದು ಈ ಸಂಸ್ಥೆಯು ದೇಶದ ಪ್ರಸಿದ್ಧ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಸಮಗ್ರ ಶಿಕ್ಷಣವನ್ನು ಒದಗಿಸುವ ದೃಷ್ಟಿಕೋನದಿಂದ ಕಾರ್ಯನಿರ್ವಹಿಸುತ್ತಿರುವುದು ಅಭಿನಂದನಾರ್ಹ. 74 ವರ್ಷಗಳ ನಿರಂತರ ಮತ್ತು ಅವಿರತ ಪ್ರಯತ್ನದಿಂದ ಈ ಸಂಸ್ಥೆಯು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಮತ್ತು ವಿವಿಧ ಚಟುವಟಿಕೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ದೇಶವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಎಂದು ಆಚರಿಸುತ್ತಿರುವ ಸಮಯದಲ್ಲಿ ಮೌಂಟ್ ಕಾರ್ಮೆಲ್ ಕಾಲೇಜಿನ 75 ನೇ ವಾರ್ಷಿಕೋತ್ಸವ ಆಚರಣೆ ಕಾಕತಾಳೀಯವಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಸ್ವಾತಂತ್ರ್ಯದ ಪಯಣವು ಭಾರತೀಯರ ಕಠಿಣ ಪರಿಶ್ರಮ, ನಾವಿನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಈ ವರ್ಷಗಳಲ್ಲಿ ಅವರು ಸ್ವಾವಲಂಬಿ ಭಾರತವನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ಥಳೀಯರಿಗೆ ಗಾಯನದ ಉತ್ಸಾಹದಲ್ಲಿ ಕೆಲಸ ಮಾಡಿದ್ದಾರೆ. ಆರ್ಥಿಕತೆಯನ್ನು ಸುಧಾರಿಸಲು ಸಕ್ರಿಯ ಪ್ರಯತ್ನ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಸಂಪರ್ಕಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಸ್ವಾವಲಂಬಿ ಭಾರತವನ್ನು ಮಾಡಲು ಬದ್ಧರಾಗಿದ್ದಾರೆ. ರಾಷ್ಟ್ರದ ಹೊಸ ಶಿಕ್ಷಣ ನೀತಿಯು 21 ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ಇದು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ ಮತ್ತು ಅಂತಹ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಮೌಂಟ್ ಕಾರ್ಮೆಲ್ ಕಾಲೇಜಿನ ಆಡಳಿತ ಮಂಡಳಿ ಮತ್ತು ಸದಸ್ಯರು ತಮ್ಮ 75 ವರ್ಷಗಳ ಪಯಣವನ್ನು ಪೂರೈಸಿದ ಸೇವಾ ಮನೋಭಾವನೆಯೊಂದಿಗೆ ಮುಂದೆಯೂ ಇದೇ ಸೇವಾ ಮನೋಭಾವನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲರಾದ ಮಾರ್ಗೆರೇಟ ಆಳ್ವ, ಸಿಸ್ಟರ್ ಡಾ.ಕ್ರಿಸ್, ಸಿಸ್ಟರ್ ಅಪರ್ಣಾ, ಸಿಸ್ಟರ್ ಅರ್ಪಣಾ, ಬೆಂಗಳೂರಿನ ಆರ್ಚಿಬಿಷಪ್ ಡಾ.ಪೀಟರ್ ಮಚಾಡೊ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದರು
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಸರ್ಕಾರದಿಂದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು
ಅಲ್ಲದೆ, ಶೀಘ್ರವೇ ತಾವು ಕೂಡ ಖುದ್ದು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ವಿಧಾನ ಮಂಡಲ ಕಲಾಪವನ್ನು ಸರ್ಕಾರ ಸಮರ್ಪಕವಾಗಿ ನಡೆಸದ ಬಗ್ಗೆ ನಮ್ಮ ಪಕ್ಷದ ವತಿಯಿಂದ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.
ಸರ್ಕಾರ ವಜಾ ಆಗುವಂತಹ ಪರಿಸ್ಥಿತಿ:
ಕೇಂದ್ರ ಸರಕಾರವೇ ರಾಜ್ಯ ಸರ್ಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಅಂತ ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಲೇಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ರಾಜ್ಯದಲ್ಲಿ ಇಂಥ ಕೆಟ್ಟ ವಾತಾವರಣ ಉಂಟಾಗಲು ರಾಜ್ಯ ಸರಕಾರವೇ ಕಾರಣ. ಅವರ ಅಸಮರ್ಪಕ ಕಾರ್ಯ ವೈಖರಿಯಿಂದ ಇಡೀ ಶಿಕ್ಷಣ ಕ್ಷೇತ್ರ ಬಂದ್ ಮಾಡಿ ಕೂರಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. ಇನ್ನು ಹೈಕೋರ್ಟ್ ಅಂತೂ ಬಿಬಿಎಂಪಿಗೆ ನಿತ್ಯವೂ ಛೀಮಾರಿ ಹಾಕುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನೀಡಿದೆ. ನಿಮ್ಮನ್ನು ಜೈಲಿಗೆ ಹಾಕಬೇಕಿತ್ತು. ಆದರೂ ಔದಾರ್ಯ ತೋರಿಸಿದ್ದೇವೆ ಎಂದು ನ್ಯಾಯಮೂರ್ತಿಗಳೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಸರ್ಕಾರಕ್ಕೆ ಜನರ ಬಗ್ಗೆ ಬದ್ಧತೆ ಇದೆಯಾ? ಬಹಳ ನೊಂದು ಈ ಮಾತನ್ನು ಹೇಳುತ್ತಿದ್ದೇನೆ ಎಂದು ಹೇಳಿದರು.
ಕಲಾಪ ಹಾಳು ಮಾಡಿದರು:
ಆಡಳಿತಾರೂಢ ಬಿಜೆಪಿ ಹಾಗೂ ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕುಮ್ಮಕ್ಕಾಗಿ ವಿಧಾನಮಂಡಲದ ಕಲಾಪವನ್ನು ಸಂಪೂರ್ಣವಾಗಿ ಹಾಳು ಮಾಡಿವೆ. 2022-2023ನೇ ವರ್ಷದ ಮೊದಲ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಇದಾಗಿತ್ತು. ಸದನದಲ್ಲಿ ಚರ್ಚೆಗೆ ಅವಕಾಶಗಳು ಸಿಗಲಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳಿಂದ ಇದು ಆಗಲಿಲ್ಲ. ಆದರೆ ಆಡಳಿತ ಪಕ್ಷದ ಸದಸ್ಯರು ವಂದನಾ ನಿರ್ಣಯದ ಮೇಲೆ ಮಾತನಾಡಿದರೂ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಬಿಟ್ಟು ಬರೀ ಮೋದಿ ಅವರ ಸಾಧನೆಗಳ ಬಗ್ಗೆ ಮಾತ್ರ ಹೇಳಿದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್
ಸಿಎಂ ಅವರು ಕಾಂಗ್ರೆಸ್ ಧರಣಿ ಮಧ್ಯೆ ಉತ್ತರ ನೀಡಿದ್ದಾರೆ. ರಾಜ್ಯದ ವಿಧಾನ ಮಂಡಲದ ಇತಿಹಾಸದಲ್ಲಿ ಮೊದಲನೇ ಬಾರಿ ಈ ರೀತಿ ಕಲಾಪ ಬಲಿಯಾಗಿದೆ. ಅತ್ಯಂತ ಮಹತ್ವದ ವಿಚಾರಗಳು ಸದನದಲ್ಲಿ ಚರ್ಚೆ ಆಗಬೇಕಿತ್ತು. ಹಲವಾರು ಬಾರಿ ನಾನು ಹೇಳಿದ್ದೇನೆ. ಗಲಾಟೆ ಮಾಡುವವರನ್ನು ಹೊರ ಹಾಕಿ ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಆದರೆ, ನಮ್ಮ ಮನವಿಯನ್ನು ಪರಿಗಣಿಸದೇ, ನಮ್ಮ ಪಕ್ಷಕ್ಕೆ ಮಾತನಾಡಲು ಅವಕಾಶವನ್ನು ನೀಡದೇ ಕಲಾಪವನ್ನು ಪ್ರತಿಷ್ಠೆಗೆ ಬಲಿ ಕೊಡಲಾಗಿದೆ ಎಂದು ದೂರಿದರು.
ರಾಜಕೀಯ ಕೋವಿಡ್:
ಬಡವರ ಮಕ್ಕಳು ವ್ಯಾಸಂಗ ಮಾಡುವಂಥ ಸರಕಾರಿ ಶಾಲೆ ಕಾಲೇಜುಗಳಲ್ಲಿ ಮಕ್ಕಳ ನಡುವೆ ದ್ವೇಷ ಭಾವನೆ ಮೂಡಿಸಿ ಅಶಾಂತಿ ಉಂಟು ಮಾಡಲಾಗುತ್ತಿದೆ. ಸರ್ಕಾರಿ ಶಿಕ್ಷಣ ವ್ಯವಸ್ಥೆಯೇ ನಾಶವಾಗುವ ಹಂತ ಮುಟ್ಟಿದೆ. ಬಡಮಕ್ಕಳ ಮೇಲೆ ಆದ ಅನಾಹುತ ಇದರ ಬಗ್ಗೆ ಕಲಾಪದಲ್ಲಿ ಚರ್ಚೆ ಆಗಬೇಕಿತ್ತು. ಕೊರೊನಾ ಅನಾಹುತದಿಂದ ಎರಡು ವರ್ಷದಿಂದ ಶಿಕ್ಷಣ ರಂಗ ಪೂರ್ಣವಾಗಿ ನಾಶವಾಗಿದೆ. ಈ ವರ್ಷವೂ ಸಹ ಕೊರೊನಾ ಅನಾಹುತದ ನಂತರ ‘ರಾಜಕೀಯದ ಕೋವಿಡ್’ ಪ್ರಯೋಗವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಇಡೀ ರಾಜ್ಯಕ್ಕೆ ‘ರಾಜಕೀಯ ಕೋವಿಡ್ ‘ ಅನ್ನು ಹಬ್ಬಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿ ಕಾರಿದರು.
ರಾಜಕೀಯ ಕೋವಿಡ್‍ಗೆ ಔಷಧಿ ಇಲ್ಲ. ಇಡೀ ರಾಜ್ಯದ ನೆಮ್ಮದಿ ಶಾಂತಿಯನ್ನು ಬುಡಮೇಲು ಮಾಡುವ ರಾಜಕೀಯ ಸ್ವಾರ್ಥಕ್ಕೆ ಕೊನೆ ಇಲ್ಲದಾಗಿದೆ. ಅದಕ್ಕೆ ಈ ರೀತಿ ಗದ್ದಲ ಎಬ್ಬಿಸಿ ಕಲಾಪವನ್ನು ಮುಗಿಸಿದರು. ಸದನ ಸುಗಮವಾಗಿ ನಡೆಸಲು ಅವಕಾಶ ಕೊಡಿ. ಮತಾಂತರ ನಿಷೇಧ ಕಾಯ್ದೆ ವಿಷಯ ಇಟ್ಟುಕೊಂಡು ಬೆಳಗಾವಿ ಅಧಿವೇಶನವನ್ನೂ ಹಾಳುಗೆಡವಿದ್ದಾರೆ ಎಂದು ಹೇಳಿದರು.
ಯಾವ ಪುರುಷಾರ್ಥಕ್ಕೆ ರಾಜ್ಯಪಾಲರ ಭೇಟಿ?
ಸದನದ ಕಲಾಪವನ್ನು ಹಾಳು ಮಾಡಿದ ಅಧಿಕೃತ ಪ್ರತಿಪಕ್ಷವೇ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೊರಟಿದೆ. ಅದೂ ರಾಜಭವನದ ತನಕ ನಡೆದುಕೊಂಡು ಹೋಗಿ ಮನವಿ ಕೊಟ್ಟು ಪ್ರಚಾರ ಪಡೆಯುವ ಹುನ್ನಾರ. ಯಾವ ಮುಖ ಇಟ್ಟುಕೊಂಡು ಆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ? ಈ ನಾಟಕವನ್ನು ಬೇರೆ ರಾಜ್ಯದ ಜನರು ನೋಡಬೇಕೆ ಎಂದು ಗುಡುಗಿದರು.
ಹಿಜಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರ್ಕಾರ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಲಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಮಕ್ಕಳು, ಉಳ್ಳವರ ಮಕ್ಕಳು ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ. ಇಂಥ ವಿಷಯಗಳ ಬಗ್ಗೆ ಸದನ ಚರ್ಚೆ ನಡೆಸಬೇಕಿತ್ತು. ಇನ್ನಾದರೂ ರಾಷ್ಟ್ರೀಯ ಪಕ್ಷಗಳು ಬಡಮಕ್ಕಳ ಜೀವನದ ಜತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆಲ್ಲಾ ಕಾರಣ ಯಾರು ಅಂತ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಿತ್ತು. ಹಾಗೆ ಆಗಲಿಲ್ಲ. ಇದು ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ನ ನೈತಿಕ ಅಧಃ ಪತನವನ್ನು ತೋರಿಸುತ್ತದೆ ಎಂದರು.
ಇಂಥ ಘಟನೆಗಳಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ. ಇಂಥ ಒಬ್ಬ ಯುವಕ ಬಲಿಯಾದರೆ ಆ ಮನೆಯೇ ಬೀದಿಗೆ ಬಿದ್ದಂತೆ. ಆ ತಂದೆ ತಾಯಿ ಭವಿಷ್ಯವೇನು? ಅಂಥ ಕುಟುಂಬಗಳ ಪರಿಸ್ಥಿತಿ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕೊಲೆ ಆಗಿರುವ ಆ ಯುವಕನದ್ದು ಶ್ರೀಮಂತ ಕುಟುಂಬ ಅಲ್ಲ. ಸಣ್ಣ ಸಮಾಜದ ಹುಡುಗ ಆತ. ಹೀಗೆ ಅನೇಕ ಉದಾಹರಣೆಗಳನ್ನು ಕೊಡಬಹುದು ಎಂದು ಹೇಳಿದರು.
ಶಿವಮೊಗ್ಗ ಘಟನೆಯಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಇಬ್ಬರು ಇಬ್ಬರು ಅಂತಾರೆ, ಇನ್ನೊಬ್ಬರು ಮೂವರು ಅಂತಾರೆ, ಆಮೇಲೆ ಮತ್ತಿಬ್ಬರು 12 ಜನ ಅರೆಸ್ಟ್ ಅಂತಾರೆ. ಯಾರ ಮಾತು ನಂಬುವುದು ಬಿಡುವುದು. ಇದನ್ನೇ ಎಷ್ಟು ದಿನ ಪ್ರಚಾರಕ್ಕೆ ಇಡುತ್ತಿರಾ ಸತ್ಯಾಸತ್ಯತೆ ಯಾವಾಗ ಹೊರ ಬರುವುದು? ಕೇವಲ ಮರಣ ದಳ್ಳುರಿಯನ್ನೇ ಪ್ರಚಾರ ಮಾಡುತ್ತಿರಾ? ಎಂದು ಸರ್ಕಾರವನ್ನು ತೀವ್ರವಾಗಿ ಪ್ರಶ್ನೆ ಮಾಡಿದರು.
ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ. ಕೊಲೆಯಾದ ಯುವಕ ಬಿಜೆಪಿ ಪರಿವಾರಕ್ಕೆ ಸೇರಿದವನು. ಆತನ ಬಗ್ಗೆ ಎಲ್ಲ ಮಾಹಿತಿ ಸರ್ಕಾರದ ಬಳಿ ಇದೆ. ಆತನ ಪ್ರತೀ ಚಲನವಲನ ಎಲ್ಲಾ ಪೆÇಲೀಸರಿಗೆ ಗೊತ್ತಿದೆ. ಆದರೂ ರಕ್ಷಣೆ ನೀಡಲಿಲ್ಲ, ಆತನ ಜೀವ ಉಳಿಯಲಿಲ್ಲ ಎಂದು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದಕೊಂಡರು.
ಸಿಎಎ ಘಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗುಂಡು ಹಾರಿಸಲಾಯಿತು. ನಂತರ 10 ಲಕ್ಷ ಹಣ ಪರಿಹಾರ ನೀಡಿ ಮತ್ತೆ ಅವರನ್ನು ಗೂಂಡಾಗಳು ಅಂತ ಹೇಳಿದ್ದಿರಿ. ಡಿಜೆ ಹಳ್ಳಿಯಲ್ಲಿ ನಡೆದ ಘಟನೆಗೆ ಯಾರು ಕಾರಣ? ಇನ್ನೂ ಅನೇಕ ಯುವಕರನ್ನು ಈಗಲೂ ಜೈಲಿನಲ್ಲೇ ಇಡಲಾಗಿದೆ. ಆದರೆ ಘಟನೆಗೆ ಕಾರಣರಾದವರು ಕೆಪಿಸಿಸಿ ಅಧ್ಯಕ್ಷರ ಹಿಂದೆ ಮುಂದೆ ಆರಾಮಾಗಿ ಓಡಾಡಿಕೊಂಡಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆಯಂತೆ ಎಂದು ಕಾಂಗ್ರೆಸ್ ಮೇಲೆ ತೀವ್ರ ವಾಗ್ಧಾಳಿ ನಡೆಸಿದರು.
ಶಿವಮೊಗ್ಗದಲ್ಲಿ ನಡೆದ ಘಟನೆ ಪರಿಣಾಮಗಳು ಇಲ್ಲಿಗೇ ನಿಲ್ಲಲ್ಲ. ಸರ್ಕಾರ ಎಚ್ಚರಿಕೆ ವಹಿಸಿ ಇದರ ಬಿಸಿ ಬೇರೆ ಕಡೆ ಹಬ್ಬದಂತೆ ಮಾಡಬೇಕು. ಆದರೆ, ಎರಡು ಪಕ್ಷಗಳು ಮತ ಬ್ಯಾಂಕ್ ಸೃಷ್ಟಿ ಮಾಡಲು ಹೀಗೆ ಮಾಡುತ್ತಿವೆ. ಮತ ಬ್ಯಾಂಕ್‍ಗಾಗಿ ಹೀಗೆ ಬಡವರನ್ನು ಬಳಸಿಕೊಳ್ಳುತ್ತಾ ಇದ್ದಾರೆ. ಅದನ್ನು ಜನ ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್, ಶಾಸಕ ರಾಜಾ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.
ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ಗುರುವಾರ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಜೋಗಜಲಪಾತ ವೀಕ್ಷಿಸಲು ರಾಜ್ಯಪಾಲರು ಬಂದಿದ್ದ ವೇಳೆ ಅಧಿಕಾರಿಗಳಿಂದ ಎಡವಟ್ಟಾಗಿದೆ.
ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡಬೇಕೆಂಬ ಆಸೆಯನ್ನು ಬಹುತೇಕ ಮಂದಿ ಹೊಂದಿರುತ್ತಾರೆ. ದೇಶ, ವಿದೇಶದ ಪ್ರವಾಸಿಗರು ಜೋಗ ಜಲಪಾತಕ್ಕೆ ಬಂದು ಇಲ್ಲಿನ ಸೌಂದರ್ಯ ಸವಿದು ಹೋಗುತ್ತಾರೆ. ಇದೇ ರೀತಿ ಜೋಗ ಜಲಪಾತವನ್ನು ನೋಡಬೇಕೆಂಬ ಹಂಬಲವ ಹೊಂದಿದ್ದ ರಾಜ್ಯಪಾಲರು ಕಾರ್ಯಕ್ರಮದ ನಿಮಿತ್ತ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಜಲಪಾತವನ್ನು ವೀಕ್ಷಣೆಗಾಗಿಯೇ ಸಿದ್ದಾಪುರ ಭಾಗದಲ್ಲಿ ಬರುವ ಬ್ರಿಟೀಷ್ ಬಂಗ್ಲೋದಲ್ಲಿ ತಂಗಿದ್ದರು. ಇದನ್ನೂ ಓದಿ: ರಂಗೋಲಿಯಲ್ಲಿ ಪುನೀತ್ ಭಾವಚಿತ್ರ ಬಿಡಿಸಿ ಕಲಾವಿದ ನಮನ
ಏನಾಗಬೇಕಿತ್ತು?
ರಾಜ್ಯಪಾಲರು ಜೋಗ ವೀಕ್ಷಿಸುವಾಗ ಹೆಚ್ಚಿನ ನೀರು ಇರಬೇಕು ಮತ್ತು ಸುಂದರವಾಗಿಸಬೇಕೆಂದು ಕೆಪಿಸಿ ಅಧಿಕಾರಿಗಳು ಬತ್ತಿ ಹೋಗಿದ್ದ ಜಲಪಾತಕ್ಕೆ ನೀರು ಬಿಟ್ಟಿದ್ದರು. ಆದರೆ ಜಲಾಶಯದಿಂದ ಜಲಪಾತದ ಭಾಗಕ್ಕೆ ನೀರು ಹರಿದುಬರಲು ಎರಡು ಗಂಟೆಗಳಷ್ಟು ಸಮಯ ಬೇಕು. ಈ ನಡುವೆ ರಾಜ್ಯಪಾಲರು ಬೆಳಿಗ್ಗೆ 7-30ರ ವೇಳೆಗೆ ಜೋಗ ಜಲಪಾತ ನೋಡಲು ಬಂದಿದ್ದಾರೆ. ಆ ವೇಳೆಗೆ ಜಲಾಶಯದಿಂದ ಬಿಟ್ಟ ನೀರು ಜಲಪಾತ ತಲುಪದೆ ಕ್ಷೀಣ ಸ್ಥಿತಿಯಲ್ಲಿದ್ದ ಜಲಪಾತವನ್ನು ನೋಡುವುದಕ್ಕೇ ಗೆಹ್ಲೋಟ್ ತೃಪ್ತಿಪಡಬೇಕಾಯಿತು.
ಏನಾಯಿತು? 10 ನಿಮಿಷ ಜಲಪಾತದ ವೀಕ್ಷಣಾ ಪ್ರದೇಶದಲ್ಲಿದ್ದು ರಾಜ್ಯಪಾಲರು ನಿರ್ಗಮಿಸಿದರು, ಆನಂತರ ಸರಿಯಾಗಿ ಎಂಟು ಗಂಟೆಗೆ ಲಿಂಗನಮಕ್ಕಿ ಆಣೆಕಟ್ಟೆಯ ನೀರು ಬಂದು ಜೋಗ ಆಕರ್ಷಕವಾಗಿ ಕಾಣಿಸಿತು. ಆದರೆ ಅಧಿಕಾರಿಗಳ ಎಡವಟ್ಟಿನಿಂದ ಈ ಭರ್ಜರಿ ಜೋಗವನ್ನು ನೋಡಲು ರಾಜ್ಯಪಾಲರಿಗೆ ಆಗಲೇ ಇಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.ಇದನ್ನೂ ಓದಿ: ಬೆಂಗಳೂರಿನ ಶಾಲೆಯಲ್ಲಿ ಕೊರೊನಾ ಸ್ಫೋಟ – 33 ವಿದ್ಯಾಥಿಗಳಿಗೆ ಸೋಂಕು
On the occasion of Mahanavami Shri Thaawarchand Gehlot , Hon’ble Governor of Karnataka performed Ayudha puja at various departments of Raj Bhavan. pic.twitter.com/Xc3LoFtdCm
ತಿರುವನಂತಪುರ: ಕೇರಳ ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳದಿಂದ ಮಹಿಳೆಯರು ಸಾವನ್ನಪ್ಪುತ್ತಿರು ಪ್ರಕರಣ ಹೆಚ್ಚಾಗುತ್ತಿರುವುದನ್ನು ಮನಗಂಡು ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಸ್ವತಃ ವರದಕ್ಷಿಣೆ ಪಿಡುಗಿನ ವಿರುದ್ಧ ನಾಳೆ ಒಂದು ದಿನ ಧರಣಿ ನಡೆಸಲು ಸಿದ್ಧರಾಗಿದ್ದಾರೆ.
ಕೇರಳದಲ್ಲಿ ಕಳೆದ ಕೆಲ ವರ್ಷಗಳಿಂದ ವರದಕ್ಷಿಣೆ ವಿಚಾರವಾಗಿ ಮನಸ್ಥಾಪ ಬಂದು ಹಲವು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಮತ್ತು ಕಿರುಕುಳದಿಂದಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗುತ್ತಿದೆ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಮಹಿಳೆಯರು ಬಲಿಯಾಗುತ್ತಿರುವುದನ್ನು ಖಂಡಿಸಿ ಮತ್ತು ವರದಕ್ಷಿಣೆ ಪಿಡುಗಿನ ಬಗ್ಗೆ ಅರಿವನ್ನು ಮೂಡಿಸುವ ಉದ್ದೇಶದಿಂದ ಸ್ವತಃ ರಾಜ್ಯದ ರಾಜ್ಯಪಾಲರಾದ ಖಾನ್ ಅವರು ಒಂದು ದಿನದ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಧರಣಿ ಕೇರಳದ ಗಾಂಧಿ ಭವನದಲ್ಲಿ ನಡೆಯಲಿದ್ದು, ಕಳೆದ ಒಂದು ತಿಂಗಳ ಹಿಂದೆಯೆ ಖಾನ್ ಅವರು ಈ ಕುರಿತು ವಾಗ್ದಾನ ಮಾಡಿದ್ದರು ಇದೀಗ ನಾಳೆ ಧರಣಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪತಿ
ಕಳೆದ ತಿಂಗಳು ಕೇರಳದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊರ್ವಳಿಗೆ ಆಕೆಯ ಗಂಡ ವರದಕ್ಷಿಣೆಯಾಗಿ ದುಬಾರಿ ಕಾರಿಗೆ ಬೇಡಿ ಇಟ್ಟು, ಬಳಿಕ ಆಕೆಗೆ ಕಿರುಕುಳ ನೀಡಿ ಆಕೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿತ್ತು. ಈ ಸಂದರ್ಭ ಖಾನ್, ಅವರು ಸ್ವಯಂ ಸೇವಕ ಸಂಘಗಳು ಇತರ ಸಂಘ ಸಂಸ್ಥೆಗಳು ರಾಜ್ಯದಲ್ಲಿ ವರದಕ್ಷಿಣೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದಿದ್ದರು.
ನಾಳೆ ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘ ಸಂಸ್ಥೆಗಳು ವರದಕ್ಷಿಣೆ ಪಿಡುಗಿನ ಬಗ್ಗೆ ಅರಿವನ್ನು ಮೂಡಿಸಿ, ಧರಣಿ ನಡಸಲು ಮುಂದಾಗಿವೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗುತ್ತಿದ್ದಾರೆ.
ಬೆಂಗಳೂರು: ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕಂದಾಯ ಸಚಿವ ಆರ್.ಆಶೋಕ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಬರಮಾಡಿಕೊಂಡರು.
ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ನೂತನ ರಾಜ್ಯಪಾಲರನ್ನು ನಾನು ಸಿಎಸ್ ರವಿಕುಮಾರ್ ಸರ್ಕಾರದ ಪರವಾಗಿ ಸ್ವಾಗತಿಸಲು ಬಂದಿದ್ದೇವೆ. ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವುದು ಸಂತೋಷವಾಗಿದೆ. ಈ ಹಿಂದೆಯೇ ರಾಜ್ಯದ ಉಸ್ತುವಾರಿಗಳಾಗಿ ಗೆಹ್ಲೋಟ್ ರವರು ಕೆಲಸ ಮಾಡಿದ್ದಾರೆ. ಕರ್ನಾಟಕದ ಪರಿಚಯ ಮತ್ತು ಇತಿಹಾಸ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದರು.
ಕೇಂದ್ರ ಸಚಿವರಾಗಿ ಕೆಲಸ ಮಾಡಿದ ಅನುಭವ ಗೆಹ್ಲೋಟ್ ಅವರಿಗಿದೆ. ತುಳಿತಕ್ಕೆ ಒಳಗಾದ ಸಮುದಾಯದಿಂದ ಬಂದವರಾಗಿದ್ದಾರೆ. ಅವರ ಸಲಹೆ ಸೂಚನೆ ಮತ್ತು ಒಳ್ಳೆಯ ಆಡಳಿತಕ್ಕೆ ಅವರ ಮಾರ್ಗದರ್ಶನ ಅಗತ್ಯವಾಗಿದೆ ಎಂದು ತಿಳಿಸಿದರು. ತಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು: ಕಳೆದ ನಾಲ್ಕು ದಶಕಗಳಿಂದ ಸತತವಾಗಿ 7 ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ, ಪ್ರಸ್ತುತ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನ ಸಾರಥ್ಯ ವಹಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಕಾರ್ಯವೈಖರಿ ಅನುಕರಣೀಯವಾಗಿದ್ದು, ಎಲ್ಲಾ ಪೀಠಾಸೀನಾಧಿಕಾರಿಗಳಿಗೆ ಮಾದರಿಯಾಗಿದೆ ಎಂದು ನಿರ್ಗಮಿತ ರಾಜ್ಯಪಾಲ ವಜೂಭಾಯಿ ವಾಲಾ ಶ್ಲಾಘಿಸಿದ್ದಾರೆ.
ಆರು ವರ್ಷ ಹತ್ತು ತಿಂಗಳ ಕಾಲ ನಿರಂತರವಾಗಿ ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ವಜೂಭಾಯಿ ವಾಲಾರವರನ್ನು ರಾಜಭವನದಲ್ಲಿಂದು ಭೇಟಿ ಮಾಡಿದ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನಿರ್ಗಮಿತ ರಾಜ್ಯಪಾಲರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಜೂಭಾಯಿ ವಾಲಾರವರು, ಸಭಾಪತಿಗಳ ಸದನ ಕಲಾಪ ನಡೆಸುವ ಕಾರ್ಯ ಪದ್ಧತಿಯನ್ನು ಕೊಂಡಾಡಿದ ರಾಜ್ಯಪಾಲರು ನಾಲ್ಕು ದಶಕಗಳ ಸಮಾಜಮುಖಿ ಚಿಂತನೆಗಳು ಮತ್ತು ರಾಜಕೀಯ ಅನುಭವದಿಂದ ವಿಧಾನ ಪರಿಷತ್ತಿನ ಕಲಾಪಗಳನ್ನು ಅರ್ಥಪೂರ್ಣವಾಗಿ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದರು.
ಚಿಂತಕರ ಚಾವಡಿಯಾಗಿರುವ ವಿಧಾನ ಪರಿಷತ್ತಿನಲ್ಲಿ ವರ್ತಮಾನದ ಸಮಸ್ಯೆಗಳ ಕುರಿತು ಚಿಂತನ ಮಂಥನ ನಡೆಯುತ್ತಿರುವುದರ ಜೊತೆಗೆ ಹಲವಾರು ಮೌಲ್ವಿಕ ವಿಚಾರಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಸುವ ಮೂಲಕ ಇಡೀ ಸಮಾಜಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳ ಸಾರ್ಥಕ್ಯದ ಕುರಿತು ಸ್ಪಷ್ಟ ಸಂದೇಶ ನೀಡುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯಪಾಲ ವಜೂಭಾಯಿ ವಾಲಾ ನುಡಿದರು. ಇದನ್ನೂ ಓದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
ಹಿರಿಯ ಸದಸ್ಯರ ಅನುಭವ, ವಿಚಾರಧಾರೆ ಹಾಗೂ ಸದನದ ಘನತೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ನಡೆಸುತ್ತಿರುವ ನಿರಂತರ ಪ್ರಯತ್ನ ಎಲ್ಲರಿಗೂ ಮಾದರಿಯಾಗಿದೆ. ಆರು ವರ್ಷ ಹತ್ತು ತಿಂಗಳ ಕಾಲ ಕರ್ನಾಟಕದ ಜನತೆ ತಮಗೆ ನೀಡಿದ ಗೌರವ ಹಾಗೂ ಸಹಕಾರಕ್ಕೆ ನಿರ್ಗಮಿತ ರಾಜ್ಯಪಾಲರು ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.
ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಅವರ ಪಕ್ಷದವರೇ ಹೇಳಿಕೆ ನೀಡಿ ದಾಖಲೆ ಬಿಡುಗಡೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ
ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡಿತೀದೆ ಎಂದು ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಹೊರಿಸಿದ್ದಾರೆ. ಹಾಗಾಗಿ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ತಿಳಿಸಿ ಸರ್ಕಾರ ವಜಾ ಮಾಡಬೇಕು. ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಲಿ, ಬೆಲ್ಲದ್ ಬಹಿರಂಗವಾಗಿ ಹೇಳಿದ್ದಾರೆ ಎಲ್ಲದರ ತನಿಖೆ ನಡೆಯಬೇಕು ಎಂದಿದ್ದಾರೆ. ಬಳಿಕ ತಮ್ಮ ಬಗ್ಗೆ ಆರೋಪ ಮಾಡಿರುವ ಹೆಚ್. ವಿಶ್ವನಾಥ್ ಕುರಿತು ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ.
ಬೆಂಗಳೂರು: ಬಿಜೆಪಿಯಲ್ಲಿ ನಿಧಾನವಾಗಿ ಸಿಎಂ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆಯೇ ಎಂಬ ಅನುಮಾನ ಇದೀಗ ಶುರುವಾಗಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ಹೇಳಿಕೆ ನೀಡುತ್ತಿರುವಾಗಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೈಕಮಾಂಡ್ ಹಾಗೂ ರಾಜ್ಯಪಾಲರಿಗೆ ದೂರು ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ದೂರು ನೀಡಿದ್ದಾರೆ. ಈ ಮೂಲಕ ಬಿಎಸ್‍ವೈ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಪಾಲರಿಗೆ ಮಾತ್ರವಲ್ಲದೆ ಹೈಕಮಾಂಡ್‍ಗೂ ಪತ್ರ ಬರೆದಿದ್ದು, ಗಮನಕ್ಕೆ ತಾರದೇ ನನ್ನ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ಲಿಖಿತ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಎರಡು ಪುಟಗಳ ಪತ್ರ ಬರೆದು ಅಸಮಧಾನ ತೋಡಿಕೊಂಡಿದ್ದಾರೆ.
ಪತ್ರದಲ್ಲಿ ಏನಿದೆ?
ಗಮನಕ್ಕೆ ತರದೇ ನನ್ನ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಿದ್ದು, ಇಲಾಖೆಯ ಹಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೆಲ ಪ್ರಮುಖ ನಿರ್ಧಾರಗಳಲ್ಲಿ ಹಿರಿಯ ಸಚಿವರಾದ ನನ್ನನ್ನು ಪರಿಗಣಿಸಿಲ್ಲ. ಸಚಿವರ ಅಧಿಕಾರ ಮೊಟಕುಗೊಳಿಸಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೂಡಲೇ ಮಧ್ಯ ಪ್ರವೇಶ ಮಾಡಿ ಇದಕ್ಕೆ ಬ್ರೇಕ್ ಹಾಕಬೇಕು.
ಬೆಂಗಳೂರು ನಗರ ಜಿ.ಪಂ ಅಧ್ಯಕ್ಷ ಮರಿಸ್ವಾಮಿ, ಸಿಎಂ ಯಡಿಯೂರಪ್ಪರಿಗೆ ಬೀಗರೂ ಹೌದು. ಹಣಕಾಸು ಇಲಾಖೆಯ ಪತ್ರದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿಲ್ಲಾ ಪಂಚಾಯತ್‍ಗೆ 65 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಸಚಿವರ ಗಮನಕ್ಕೆ ತರುವುದು ಎಂದು ಮರಿಸ್ವಾಮಿ ಸರ್ಕಾರದ ಆದೇಶ ಮಾಡಿಸಿಕೊಂಡಿದ್ದಾರೆ. ಮರಿಸ್ವಾಮಿ ತಮ್ಮ ಸಂಬಂಧಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂಬ ಕಾರಣಕ್ಕೆ ಇಷ್ಟು ದೊಡ್ಡ ಪ್ರಮಾಣದ ಹಣ ಅನುದಾನದ ರೂಪದಲ್ಲಿ ಬಿಡುಗಡೆಯಾಗಿದೆ.
ಜಿ.ಪಂ.ಗಳಿಗೆ 2019-20ರಲ್ಲಿ 1 ಅಥವಾ 2 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಇದೀಗ ರಾಜ್ಯದ ಯಾವುದೇ ಜಿಲ್ಲಾ ಪಂಚಾಯತ್‍ಗೂ ಬಿಡುಗಡೆಯಾಗದ ದೊಡ್ಡ ಪ್ರಮಾಣದ ಅನುದಾನದ ಕೇವಲ ಇದೊಂದೇ ಜಿಲ್ಲಾ ಪಂಚಾಯತ್‍ಗೆ ಬಿಡುಗಡೆಯಾಗಿದೆ. ಹೀಗೆ ಸಾಲು ಸಾಲು ವಿಚಾರಗಳಲ್ಲಿ ಸಿಎಂ ಯಡಿಯೂರಪ್ಪ ನಮ್ಮ ಇಲಾಖೆಯ ಕೆಲಸ, ಕಾರ್ಯಗಳಲ್ಲಿ ಮೂಗು ತೂರಿಸುತ್ತಿದ್ದಾರೆ.
2020-21ರ ವರ್ಷದಲ್ಲಿ ಘೋಷಿತ ಗ್ರಾಮೀಣಾಭಿವೃದ್ಧಿ ಇಲಾಖೆ ಯೋಜನೆಗಳಿಗೆ ಅನುದಾನ ಕೊಟ್ಟಿಲ್ಲ. ಕಳೆದೊಂದು ವರ್ಷದಲ್ಲಿ ವಿಶೇಷ ಅನುದಾನದ ಹೆಸರಲ್ಲಿ 1,439 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಹಣ ಬಜೆಟ್ ನಲ್ಲಿ ಘೋಷಣೆ ಮಾಡಿರಲಿಲ್ಲ. ಕಳೆದ ಫೆಬ್ರವರಿಯಲ್ಲಿ ಆರ್ಥಿಕ ಇಲಾಖೆಯು 81 ಶಾಸಕರ ಕ್ಷೇತ್ರಗಳಿಗೆ 775 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಹಣವೂ ಬಜೆಟ್‍ನಲ್ಲಿ ಘೋಷಣೆ ಮಾಡಿರಲಿಲ್ಲ.
ಬಜೆಟ್ ನಲ್ಲಿ ಘೋಷಣೆ ಮಾಡದೇ ಅನುದಾನ ನೀಡಲಾಗಿದ್ದು, ಇದರಿಂದ ಬಜೆಟ್ ಯೋಜನೆಗಳಿಗೆ ತೊಡಕಾಗುತ್ತದೆ. ಶಾಸಕರ ಕ್ಷೇತ್ರಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಅನುದಾನ ಕೊಡಬೇಕಿತ್ತು. ಆದರೆ ಆರ್ಥಿಕ ಇಲಾಖೆ ನೇರವಾಗಿ ಅನುದಾನ ಕೊಟ್ಟಿರುವುದು ಸರಿಯಲ್ಲ. ಕೇವಲ 5 ಲಕ್ಷಕ್ಕೂ ಕಡಿಮೆ ಮೊತ್ತದ ರಸ್ತೆ ಕಾಮಗಾರಿಗಳಿಗೂ ಮನವಿ ಸ್ವೀಕರಿಸಲಾಗಿದೆ. ಇಷ್ಟು ಕಮ್ಮಿ ಮೊತ್ತದಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣ ಸಾಧ್ಯವೇ? ಗ್ರಾಮೀಣಾಭಿವೃದ್ಧಿ ಇಲಾಖೆಗೆ ಒಟ್ಟು 3995.56 ಕೋಟಿ ರೂ. ಮೀಸಲಿರಿಸಲಾಗಿದೆ. ಈ ಪೈಕಿ 1600.42 ಕೋಟಿ ರೂ. ಮಾತ್ರ ಬಿಡುಗಡೆ ಆಗಿದೆ. ಉಳಿದ ಹಣ ವಿಶೇಷ ಅನುದಾನದ ರೂಪದಲ್ಲಿ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾಗಿದೆ. ನನ್ನ ಇಲಾಖೆಯಲ್ಲಿ ಆರ್ಥಿಕ ಇಲಾಖೆ ಹಸ್ತಕ್ಷೇಪದಿಂದ ನನಗೆ ಮುಜುಗರವಾಗಿದೆ. ಈ ರೀತಿಯ ಆಡಳಿತ ವ್ಯವಸ್ಥೆ ಸರಿಯಾದುದಲ್ಲ. ಈ ಥರದ ಆಡಳಿತ ಶೈಲಿ ಬದಲಾಯಿಸಿಕೊಡಿ.