Tag: ರಾಜ್ಯವರ್ಧನ್ ಸಿಂಗ್ ರಾಥೋಡ್

  • ಏರ್ ಸ್ಟ್ರೈಕ್ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗ್ತೀರಾ: ಸಿಬಲ್‍ಗೆ ರಾಜ್ಯವರ್ಧನ್ ಸವಾಲ್

    ಏರ್ ಸ್ಟ್ರೈಕ್ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗ್ತೀರಾ: ಸಿಬಲ್‍ಗೆ ರಾಜ್ಯವರ್ಧನ್ ಸವಾಲ್

    ನವದೆಹಲಿ: ಭಾರತದ ವಾಯುಪಡೆ ನಡೆಸಿರುವ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗುತ್ತಿರಾ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರಿಗೆ ಸವಾಲ್ ಎಸೆದಿದ್ದಾರೆ.

    ಫಬ್ರವರಿ 26ರಂದು ಭಾರತದ ವಾಯುಪಡೆ ನಡೆಸಿರುವ ಏರ್ ಸ್ಟ್ರೈಕ್‍ಗೆ ವಿಪಕ್ಷಗಳು ಸಾಕ್ಷಿ ಕೇಳುತ್ತಿವೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಸಹ ವಾಯುದಾಳಿಗೆ ಸರ್ಕಾರ ಸಾಕ್ಷಿ ನೀಡಬೇಕು. ಮೋದಿ ಸರ್ಕಾರ ವಾಯುಸೇನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು. ಕಪಿಲ್ ಸಿಬಲ್ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

    ಕಪಿಲ್ ಸಿಬಲ್ ಜಿ, ನೀವು ನಮ್ಮ ಗುಪ್ತಚರದಳ ಮತ್ತು ವಾಯುಸೇನೆಯ ಶಕ್ತಿಯ ಬಗ್ಗೆ ನಿಮಗೆ ನಂಬಿಕೆಯಿಲ್ಲ. ಬದಲಾಗಿ ಅಂತರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುವ ಸುದ್ದಿಗಳ ಮೇಲೆ ನೀವು ಹೆಚ್ಚು ನಂಬಿಕೆಯನ್ನು ಹೊಂದಿದ್ದೀರಿ. ವಾಯುದಾಳಿಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ ಅಂದ್ರೆ ನಿಮ್ಮ ಮುಖದ ಮೇಲೆ ನಗು ಕಾಣುತ್ತದೆ. ಇವಿಎಂ ವಿರುದ್ಧ ಸಾಕ್ಷ್ಯಾಧಾರಕ್ಕಾಗಿ ಲಂಡನ್ ವರೆಗೂ ಹೋಗಿ ಬಂದಿದ್ದೀರಿ. ಇದೀಗ ಏರ್ ಸ್ಟ್ರೈಕ್ ಸಾಕ್ಷಿಗಾಗಿ ಬಾಲಕೋಟ್‍ಗೆ ಹೋಗಲು ಸಿದ್ಧರಿದ್ದೀರಾ ಎಂದು ರಾಜ್ಯವರ್ಧನ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

    ಸಿಬಲ್ ಟ್ವೀಟ್: ಮೋದಿ ಜೀ, ಅಂತರಾಷ್ಟ್ರೀಯ ಮಾಧ್ಯಮಗಳು ಬಾಲಕೋಟ್ ನಲ್ಲಿ ಯಾವುದೇ ಉಗ್ರರು ಹತರಾಗಿರುವ ವರದಿ ಆಗಿಲ್ಲ ಎಂದು ಹೇಳುತ್ತಿವೆ. ಹಾಗಾದ್ರೆ ಅವರೆಲ್ಲರೂ ಪಾಕಿಸ್ತಾನದ ಬೆಂಬಲಿಗರಾ? ನೀವು ಭಯೋತ್ಪದನೆ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿದ್ದೀರಾ ಎಂದು ಕಪಿಲ್ ಸಿಬಲ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೇಟ್ಲಿಗೆ ವಿಶ್ರಾಂತಿ – ಪಿಯೂಷ್ ಗೋಯಲ್‍ಗೆ ಹಣಕಾಸು ಹೊಣೆ

    ಜೇಟ್ಲಿಗೆ ವಿಶ್ರಾಂತಿ – ಪಿಯೂಷ್ ಗೋಯಲ್‍ಗೆ ಹಣಕಾಸು ಹೊಣೆ

    ನವದೆಹಲಿ: ಸಚಿವ ಅರುಣ್ ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ಹಿನ್ನೆಲೆಯಲ್ಲಿ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿಯಾಗಿ ಹಣಕಾಸು ಸಚಿವಾಲಯದ ಹೊಣೆಯನ್ನು ನೀಡಲಾಗಿದೆ.

    ದೆಹಲಿಯ ಏಮ್ಸ್ ನಲ್ಲಿ 65 ವರ್ಷದ ಅರುಣ್ ಜೇಟ್ಲಿ ಅವರಿಗೆ ಯಶಸ್ವಿಯಾಗಿ ಇಂದು ಶಸ್ತ್ರ ಚಿಕಿತ್ಸೆ ನಡೆದಿತ್ತು. ಮೂತ್ರಪಿಂಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜೇಟ್ಲಿ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆ ತಿಳಿಸಿದೆ.

    ಕಳೆದ ಒಂದು ತಿಂಗಳಿನಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ಜೇಟ್ಲಿ ಕಳೆದ ಶನಿವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿಂದೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 2014ರ ಸೆಪ್ಟೆಂಬರ್ ನಲ್ಲಿ ಬ್ಯಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆದಿತ್ತು.

    ಪ್ರಸ್ತುತ ಪಿಯೂಷ್ ಗೋಯಲ್ ರೈಲ್ವೇ ಮತ್ತು ಕಲ್ಲಿದ್ದಲು ಇಲಾಖೆಯನ್ನು ನೋಡಿಕೊಳ್ಳುತ್ತಿದ್ದು, ಈಗ ಜೇಟ್ಲಿ ಚೇತರಿಸಿಗೊಳ್ಳುವವರೆಗೂ ಹಣಕಾಸು ಸಚಿವಾಲಯವನ್ನು ನೋಡಿಕೊಳ್ಳಲಿದ್ದಾರೆ.

    ಸ್ಮೃತಿ ಇರಾನಿ ಹೊಂದಿದ್ದ ಪ್ರಸಾರ ಖಾತೆಯನ್ನು ಕ್ರೀಡಾ ಸಚಿವರಾಗಿದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಸ್ಮೃತಿ  ಇರಾನಿ ಜವಳಿ ಖಾತೆಯಲ್ಲಿ ಮುಂದುವರಿಯಲಿದ್ದಾರೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯನ್ನು ನೋಡಿಕೊಳ್ಳುತ್ತಿದ್ದ ಎಸ್.ಎಸ್ ಅಹ್ಲುವಾಲಿಯ ಅವರಿಗೆ ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ಸ್ ಖಾತೆಯನ್ನು ನೀಡಲಾಗಿದೆ.