Tag: ರಾಜ್ಯಸರ್ಕಾರ

  • ರಾಜ್ಯದಲ್ಲಿ ಯುಗಾದಿಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಶಶಿಕಲಾ ಜೊಲ್ಲೆ ಸೂಚನೆ

    ರಾಜ್ಯದಲ್ಲಿ ಯುಗಾದಿಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಶಶಿಕಲಾ ಜೊಲ್ಲೆ ಸೂಚನೆ

    ಬೆಂಗಳೂರು: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ.

    ರಾಜ್ಯದಲ್ಲಿ ಅನೇಕ ಇಲಾಖೆಗಳು ತಮ್ಮ ಇಲಾಖೆಯ ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನಲ್ಲಿ ವರ್ಷದ ಒಂದು ದಿನದಲ್ಲಿ ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಿವೆ. ಹಾಗೆಯೇ ಧಾರ್ಮಿಕ ದತ್ತಿ ಇಲಾಖೆಯೂ ಧಾರ್ಮಿಕ ಹಿನ್ನೆಲೆ ಮತ್ತು ಮನೋಭಾವ ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು `ಧಾರ್ಮಿಕ ದಿನ’ವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹೆಡ್‌ಫೋನ್ ತೆಗೆದ ಯಡಿಯೂರಪ್ಪ – ಸಿದ್ದುಗೆ ಶಾಕ್!

    ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಕೆಲ ಭಾಗಗಳಲ್ಲಿ ಸೌರಮಾನ ಯುಗಾದಿಯಂದೇ ಆಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಿಂದಲೇ ಯುಗಾದಿಯ ದಿನದಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿಯೂ ಧಾರ್ಮಿಕ ದಿನ ಆಚರಣೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ಅಂದು ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಯ ಬಗ್ಗೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ವಿಶೇಷ ಪಂಚಾಂಗ ಶ್ರವಣ, ಹೊಸ ಸಂವತ್ಸರದ ಶುಭಾಶುಭ ಫಲಗಳು, ಆದಾಯ ವ್ಯಯಗಳು, ನಕ್ಷತ್ರಗಳ ಫಲಗಳು ಮುಂತಾದವುಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಲ್ಲದೆ ಚಾಂದ್ರಮಾನ ಯುಗಾದಿ ದಿನದಂದು, ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ಸಮಚಿತ್ತ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ರೂಢಿಯಲ್ಲಿರುವಂತೆ ದೇವಾಲಯಗಳಲ್ಲಿ ಬೇವು ಮತ್ತು ಬೆಲ್ಲ ವಿತರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದ್ದಾರೆ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

    ಈ ದಿನದಂದು ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

    ಧಾರ್ಮಿಕ ದಿನಾಚರಣೆಯ ವಿಶೇಷತೆಗಳೇನು?
    1. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು `ಧಾರ್ಮಿಕ ದಿನ’ವನ್ನಾಗಿ ಆಚರಿಸುವುದು
    2. ದೇವಾಲಯಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಕೈಗೊಳ್ಳುವುದು
    3. ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂ ಸೇವಕ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
    5. ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವ ರೀತಿಯಲ್ಲಿ ಕ್ರಿಯಾತ್ಮಕ ಆಚರಣೆ

  • ರಾಜ್ಯದಲ್ಲಿ ಮೆಡಿಕಲ್ ಸೀಟ್‍ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?

    ರಾಜ್ಯದಲ್ಲಿ ಮೆಡಿಕಲ್ ಸೀಟ್‍ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?

    ದಾವಣಗೆರೆ: ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ದಾವಣಗೆರೆಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜುಗಳ ಸೀಟುಗಳು ಕಡಿಮೆ ಶುಲ್ಕವೇ ಇದೆ. ಖಾಸಗಿ ಕಾಲೇಜುಗಳಲ್ಲಿ ಮಾತ್ರ ಶುಲ್ಕ ಹೆಚ್ಚಾಗಿದೆ. ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ಮೆಡಿಕಲ್ ಸೀಟು ಸಿಗುತ್ತಿಲ್ಲ. ಹಾಗಾಗಿ ಅವರು ಎನ್‍ಆರ್‍ಐ ಅಥವಾ ಮ್ಯಾನೇಜ್ಮೆಂಟ್ ಸೀಟುಗಳನ್ನು ಬಯಸುತ್ತಾರೆ. ಇದರಿಂದ ಶುಲ್ಕ ಹೆಚ್ಚಾಗುತ್ತಿರುವ ಕಾರಣ ಅವರು ವಿದೇಶಗಳಲ್ಲಿ ವ್ಯಾಸಂಗ ಮಾಡಲು ತೆರಳುತ್ತಿದ್ದಾರೆ. ಹಾಗಾಗಿ ಶುಲ್ಕ ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

    ನಮ್ಮ ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ-ಬಿ-ಸಿ ಕೆಟಗೆರಿ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಈ ಬಗ್ಗೆ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಸಹ ಚಿಂತನೆ ನಡೆಸಿದೆ. ಜೊತೆಗೆ ಉಕ್ರೇನ್ ಮಾತ್ರವಲ್ಲದೇ ಬೇರೆ ದೇಶಗಳಿಂದಲೂ ವಿದ್ಯಾಭ್ಯಾಸ ಮೊಟಕುಗೊಳಿಸಿ ಕರ್ನಾಟಕಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

    ದೇಶಾದ್ಯಂತ ಸದ್ದು ಮಾಡಿತ್ತು ಬ್ಯಾನ್‍ನೀಟ್
    ವಿದ್ಯಾರ್ಥಿ ನವೀನ್ ಉಕ್ರೇನ್‍ನಲ್ಲಿ ಸಾವಿಗೀಡಾದ ಬೆನ್ನಲ್ಲೇ ರಾಜ್ಯದಲ್ಲಿ ಈಚೆಗಷ್ಟೇ #ಬ್ಯಾನ್ ನೀಟ್ ಅಭಿಯಾನ ನಡೆದಿತ್ತು. ರಾಜ್ಯದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಇರುವ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಸಿಗದ ಪರಿಣಾಮ ಉಕ್ರೇನ್ ನಂಹತ ದೇಶಗಳಿಗೆ ತೆರಳಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ ಉಕ್ರೇನ್-ರಷ್ಯಾ ಯುದ್ಧದಿಂದ ನಮ್ಮ ರಾಜ್ಯದ ನವೀನ್ ಅವರನ್ನು ಕಳೆದುಕೊಳ್ಳಬೇಕಾಯಿತು. ಇದೆಲ್ಲಕ್ಕೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪರೀಕ್ಷೆ ಕಾರಣವಾಗಿದೆ ಎಂದು ಹಲವರು ಆರೋಪಿಸಿ ಸೋಷಲ್ ಮೀಡಿಯಾಗಳಲ್ಲಿ #ಬ್ಯಾನ್‍ನೀಟ್’ ಅಭಿಯಾನ ಆರಂಭಿಸಿದ್ದರು. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ

    ಅಂಡಮಾನ್ ಮತ್ತು ನಿಕೋಬಾರ್ ಐಲ್ಯಾಂಡ್‍ನಲ್ಲಿ 1, ಆಂಧ್ರಪ್ರದೇಶದಲ್ಲಿ 31, ಅರುಣಾಚಲಂನಲ್ಲಿ 1, ಅಸ್ಸಾಂನಲ್ಲಿ 8, ಬಿಹಾರದಲ್ಲಿ 16, ಛಂಡೀಘರ್‍ನಲ್ಲಿ 1, ಛತ್ತಿಸ್‍ಘರ್‍ನಲ್ಲಿ 10, ದಾದ್ರಾ ನಗರಲ್ಲಿ 1, ದೆಹಲಿಯಲ್ಲಿ 10, ಗೋವಾದಲ್ಲಿ 1, ಗುಜರಾತ್‍ನಲ್ಲಿ 29, ಹರಿಯಾಣದಲ್ಲಿ 12, ಹಿಮಾಚಲ್ ಪ್ರದೇಶದಲ್ಲಿ 7, ಜಮ್ಮು ಮತ್ತು ಕಾಶ್ಮೀರದಲ್ಲಿ 8, ಜಾಖರ್ಂಡ್‍ನಲ್ಲಿ 7, ಕರ್ನಾಟಕದಲ್ಲಿ 60, ಕೇರಳದಲ್ಲಿ 32, ಮಧ್ಯಪ್ರದೇಶದಲ್ಲಿ 22, ಮಹಾರಾಷ್ಟ್ರದಲ್ಲಿ 22, ಮಣಿಪುರದಲ್ಲಿ 2, ಮೇಘಾಲಯ- ಮಿಜೋರಾಂನಲ್ಲಿ ತಲಾ 1, ಒಡಿಶಾದಲ್ಲಿ 12, ಪುದುಚೆರಿನಲ್ಲಿ 9, ಪಂಜಾಬ್‍ನಲ್ಲಿ 10, ರಾಜಾಸ್ತಾನ್‍ನಲ್ಲಿ 23, ಸಿಕ್ಕಿಂನಲ್ಲಿ 1, ತಮಿಳುನಾಡಿನಲ್ಲಿ 50, ತೆಲಂಗಾಣದಲ್ಲಿ 33, ತ್ರಿಪುರದಲ್ಲಿ 2 ಹಾಗೂ ಉತ್ತರ ಪ್ರದೇಶದಲ್ಲಿ 22 ವೈದ್ಯಕೀಯ ಕಾಲೇಜುಗಳು ಇವೆ. ಆದರೆ, ಇಲ್ಲಿನ ದುಬಾರಿ ವೆಚ್ಚದ ಪರಿಣಾಮದಿಂದಾಗಿ ವಿದೇಶಗಳಿಗೆ ತೆರಳಿತ್ತಿದ್ದಾರೆ ಎಂದು ಆರೋಪಿಸಿದ್ದರು.

    ಇದರ ಜೊತೆಗೆ ಫೇಸ್‍ಬುಕ್, ಟ್ವಿಟ್ಟರ್ ಗಳಲ್ಲಿ #ಬ್ಯಾನ್‍ನೀಟ್ ಟ್ರೆಂಡಿಂಗ್ ಸದ್ದು ಮಾಡಿತ್ತು. ಚಲನಚಿತ್ರನಟ ಸೂರ್ಯ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

  • ದೀಪಾವಳಿ ಮಾರ್ಗಸೂಚಿ – ಈ 10 ನಿಯಮಗಳನ್ನು ಅಂಗಡಿಗಳು ಪಾಲಿಸಲೇಬೇಕು

    ದೀಪಾವಳಿ ಮಾರ್ಗಸೂಚಿ – ಈ 10 ನಿಯಮಗಳನ್ನು ಅಂಗಡಿಗಳು ಪಾಲಿಸಲೇಬೇಕು

    ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ.

    10 ನಿಯಮಗಳು
    1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು.
    2. ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1ರಿಂದ 17ರವರೆಗೆ ಮಾತ್ರ ತೆರೆದಿರತಕ್ಕದ್ದು,
    3. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆಯ/ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.

    4. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ, ಪ್ರಾಧಿಕಾರಗಳ ಅನುಮತಿ ಅಗತ್ಯ.
    5. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
    6. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆಯ/ಪ್ರಾಧಿಕಾರದಿಂದ ನೀಡುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

    7. ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಮಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಇರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

    8. ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆ ಆಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.
    9. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾರ್ಪೊರೇಷನ್/ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು,


    10. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತು/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪ ಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

  • ಮಾತು ತಪ್ಪಿದ ಸಿಎಂ – ಕೊಟ್ಟ ಅನುದಾನ ಬಡ್ಡಿ ಸಮೇತ ವಾಪಸ್ ಪಡೆದ ರಾಜ್ಯ ಸರ್ಕಾರ

    ಮಾತು ತಪ್ಪಿದ ಸಿಎಂ – ಕೊಟ್ಟ ಅನುದಾನ ಬಡ್ಡಿ ಸಮೇತ ವಾಪಸ್ ಪಡೆದ ರಾಜ್ಯ ಸರ್ಕಾರ

    – ಯಾದಗಿರಿ ಜನರಿಗೆ ಕೈ ಕೊಟ್ಟ ಸರ್ಕಾರ

    ಯಾದಗಿರಿ: ಮೊದಲ ಬಾರಿಗೆ ಸಿಎಂ ಆಗಿದ್ದ ವೇಳೆ ಯಾದಗಿರಿಯನ್ನು ರಾಜ್ಯದ 30ನೇಯ ಜಿಲ್ಲೆಯಾಗಿ ಮಾಡಿದ್ದ ಸಿಎಂ ಯಡಿಯೂರಪ್ಪ, ಕಡಿಮೆ ಅವಧಿಯಲ್ಲಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಿ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿ ಮಾಡುತ್ತೆನೆಂದು ಜನರಿಗೆ ಮಾತು ಕೊಟ್ಟಿದ್ದರು.

    ಈ ಮಾತನ್ನು ಮುಖ್ಯಮಂತ್ರಿಗಳು ಈಗ ಸಂಪೂರ್ಣವಾಗಿ ಮರೆತಿದ್ದು, ಕುಂಟು ನೆಪ ಹೇಳಿ ಜಿಲ್ಲೆಯ ಅಭಿವೃದ್ಧಿಗೆ ಸ್ವತಃ ಅವರೇ ಕೊಡಲಿ ಪೆಟ್ಟನ್ನು ನೀಡುತ್ತಿದ್ದಾರೆ. ಯಾದಗಿರಿ ಜಿಲ್ಲೆ ಈಗಾಗಲೇ ಭಾರತ ದೇಶದಲ್ಲಿಯೇ ಅತಿ ಹಿಂದುಳಿದ ಜಿಲ್ಲೆಯೆಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಶೈಕ್ಷಣಿಕ ಮಹತ್ವಾಕಾಂಕ್ಷೆಯ ಜಿಲ್ಲೆ ಎನ್ನಿಸಿಕೊಂಡಿದೆ. ಎಲ್ಲ ಮಾದರಿಯ ಪರೀಕ್ಷೆಗಳಲ್ಲಿ ಜಿಲ್ಲೆ ಶೈಕ್ಷಣಿಕ ಮಟ್ಟದಲ್ಲಿ ಕೊನೆ ಸ್ಥಾನದಲ್ಲಿದೆ.

    ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ವಿಜ್ಞಾನ ಕೇಂದ್ರ ಆರಂಭ ಮಾಡಲು, ವಿಜ್ಞಾನ ಪರಿಷತ್ತು ಸಂಸ್ಥೆಗೆ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಆದರೆ ಈಗ ಬಿಡುಗಡೆ ಮಾಡಿದ್ದ ಅನುದಾನವನ್ನು ಹಾಗೂ ಅನುದಾನಕ್ಕೆ ಇಲ್ಲಿಯವರಗೆ ದೊರೆತ ಬ್ಯಾಂಕ್ ಬಡ್ಡಿಯನ್ನು ವಾಪಸ್ ರಾಜ್ಯ ಸರ್ಕಾರದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕೆಂದು ಅಪಾರ ಮುಖ್ಯಕಾರ್ಯದರ್ಶಿ ಅವರು ಯಾದಗಿರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈಗ ಜಿಲ್ಲೆಗೆ ಮಂಜೂರಾಗಿದ್ದ ವಿಜ್ಞಾನ ಕೇಂದ್ರವನ್ನು ಕೂಡ ಕೈಬಿಟ್ಟಿದ್ದು ಮತ್ತಷ್ಟು ಶೈಕ್ಷಣಿಕ ಮಟ್ಟದ ಹಿನ್ನೆಡೆಗೆ ಕಾರಣವಾಗಲಿದೆ.

    ಜಿಲ್ಲೆಗೆ ಮಂಜೂರಾಗಿದ್ದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಬಿಎಸ್‍ವೈ ಸರ್ಕಾರ ಕೋವಿಡ್ ಆರ್ಥಿಕ ಸಂಕಷ್ಟದ ನೆಪ ಹೇಳಿ ವಾಪಸ್ ಪಡೆದಿದೆ. ಈಗಾಗಲೇ ಯಾದಗಿರಿ ನಗರದ ಹೊರಭಾಗದ ಮುಂಡರಗಿಯಲ್ಲಿ 10 ಎಕರೆ ಜಾಗದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಮಂಜೂರು ಪಡೆಯಲಾಗಿತ್ತು. ಈಗ ಏಕಾಏಕಿ ಹಣಕಾಸಿನ ಕೊರತೆ ಹಾಗೂ ವಿವಿಧ ಕಾರಣಗಳಿಟ್ಟುಕೊಂಡು ವಿಜ್ಞಾನ ಕೇಂದ್ರ ಕೈಬಿಟ್ಟಿರುವುದಕ್ಕೆ ಜಿಲ್ಲೆಯ ಜನರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

  • ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಚಿಂತನೆ

    ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಚಿಂತನೆ

    ಬೆಂಗಳೂರು: ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ಈ ಬಾರಿ ಧರ್ಮಸ್ಥಳದಲ್ಲೂ ನೀರಿನ ಅಭಾವ ಉಂಟಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸರ್ಕಾರ ಚೆಕ್ ಡ್ಯಾಂ ನಿರ್ಮಿಸಿ ನೀರಿನ ಸಮಸ್ಯೆ ಪರಿಹರಿಸಲು ಮುಂದಾಗಿದೆ.

    ಮುಖ್ಯಮಂತ್ರಿ ಸಲಹೆ ಮೇರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಧರ್ಮಸ್ಥಳದಲ್ಲಿರುವ ನೀರಿನ ಅಭಾವದ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಶ್ರೀ ಹೆಗ್ಗಡೆಯವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ. ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ ನಲ್ಲಿ ತಿಳಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು, 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ತಮ್ಮ ಕಳವಳವನ್ನು ಹೊರಹಾಕಿದ್ದರು.

    ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ಇರುವ ಹಿನ್ನೆಲೆ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಮಾಡಿಕೊಂಡಿದ್ದರು.

  • ಬಿಜೆಪಿ, ಜೆಡಿಎಸ್ ಸರ್ಕಾರ ಇದ್ದಾಗ ಎಚ್‍ಡಿಕೆ ಯಾವುದೇ ತೊಂದರೆ ಇಲ್ದೇ ಆಡಳಿತ ಮಾಡಿದ್ರು: ಈಶ್ವರಪ್ಪ

    ಬಿಜೆಪಿ, ಜೆಡಿಎಸ್ ಸರ್ಕಾರ ಇದ್ದಾಗ ಎಚ್‍ಡಿಕೆ ಯಾವುದೇ ತೊಂದರೆ ಇಲ್ದೇ ಆಡಳಿತ ಮಾಡಿದ್ರು: ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ಯಾವುದೇ ತೊಂದರೆ ಇಲ್ಲದೆ ಆಡಳಿತ ನಡೆಸಿದ್ದರು ಎಂದು ಬಿಜಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಮ್ಮ ದೇಶದಲ್ಲಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳಲ್ಲಿ ದುರ್ಬಲ ಮುಖ್ಯಮಂತ್ರಿ ಎಂದರೆ ಸಿಎಂ ಕುಮಾರಸ್ವಾಮಿ. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವುದಿಲ್ಲ. 20 ತಿಂಗಳು ಮುಖ್ಯಮಂತ್ರಿಯಾದಾಗ ಬಿಜೆಪಿಯವರಿಂದ ಯಾವುದೇ ಸಮಸ್ಯೆಗಳನ್ನು ಎದುರಿಸಿರಲಿಲ್ಲ. ಆದರೆ ಕಾಂಗ್ರೆಸ್ ನಿಂದ ಅನೇಕ ತೊಂದರೆ ಅನುಭವಿಸುತ್ತಿದೆ ಎಂದು ಅವರೇ ಸ್ವತಃ ಹೇಳಿದ್ದಾರೆ. ಎಷ್ಟು ದಿನ ಈ ಸಿಎಂ ಆಗಿರುತ್ತೇನೋ ಗೊತ್ತಿಲ್ಲ ಅಂತ ಅವರೇ ಹೇಳಿದ್ದಾರೆ ಎಂದರು.

    ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳುವುದೇ ಕುಮಾರಸ್ವಾಮಿ ಅವರಿಗೆ ರಾಜ್ಯದಲ್ಲಿ ಒಂದು ದೊಡ್ಡ ಕೆಲಸ ಆಗಿ ಬಿಟ್ಟಿದೆ. ಕಾಂಗ್ರೆಸ್ ನಲ್ಲಿರುವ ಗುಂಪುಗಾರಿಕೆ ಹಾಗೂ ಸರ್ಕಾರದಲ್ಲಿನ ಆಂತರಿಕ ಗೊಂದಲಗಳಿಂದ ರಾಜ್ಯದ ಮೇಲೆ ಏನೂ ಗಮನ ಹರಿಸದೇ ಆಡಳಿತ ನಡೆಯುತ್ತಿದೆ. ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ತಮ್ಮಣ್ಣ ಅವರು ಬಂದಾಗ ಎಲ್ಲಾ ಸಮಸ್ಯೆಗಳು ಹಾಗೆ ಇದೆ. ಯಾವ ಸಮಸ್ಯೆಯನ್ನು ಕೂಡ ರಾಜ್ಯ ಸರ್ಕಾರ ಪರಿಹಾರ ಮಾಡಿಲ್ಲ ಎಂದು ದೂರಿದರು.

    ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಅನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುವುದಿಲ್ಲ. ಕಾಂಗ್ರೆಸ್ ನಿಂದಲೇ ಸಿಎಂ ತೊಂದರೆ ಅನುಭವಿಸುತ್ತಿದ್ದಾರೆ. ಡಿ.ಕೆ ಶಿವಕುಮಾರ್, ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಪರಸ್ಪರ ಬಡಿದಾಡುತ್ತಿರುವುದನ್ನು ಜನತೆ ನೋಡುತ್ತಿದ್ದಾರೆ ಎಂದರು.

    ಬಿಜೆಪಿ ರೌಡಿಗಳ ಮೂಲಕ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎನ್ನುವ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‍ನವರು ನನ್ನನ್ನು ಇಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲು ಸಿಎಂ ಕುಮಾರಸ್ವಾಮಿಗೆ ಶಕ್ತಿ ಇಲ್ಲ. ಇದನ್ನು ಹೇಳುವ ಬದಲು ಬಿಜೆಪಿ ಜೊತೆ ರೌಡಿಗಳ ಹೆಸರು ಸೇರಿಸಿ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಾಸಕರ ಭವನದಲ್ಲಿ ಶಿಸ್ತು ಕಾಪಾಡಲು ಸ್ಪೀಕರ್ ಖಡಕ್ ವಾರ್ನಿಂಗ್ – ಹೊಸ ನಿಯಾಮಾವಳಿ ಜಾರಿ

    ಶಾಸಕರ ಭವನದಲ್ಲಿ ಶಿಸ್ತು ಕಾಪಾಡಲು ಸ್ಪೀಕರ್ ಖಡಕ್ ವಾರ್ನಿಂಗ್ – ಹೊಸ ನಿಯಾಮಾವಳಿ ಜಾರಿ

    ಬೆಂಗಳೂರು: ಶಾಸಕರ ಖಾಸಗಿತನ ಹಾಗೂ ಶಾಸಕರ ಭವನದ ದುರ್ಬಳಕೆ ತಡೆಯಲು ಸ್ಪೀಕರ್ ರಮೇಶ್ ಕುಮಾರ್ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.

    ಈ ಕುರಿತು ಮಾಹಿತಿ ನೀಡಿದ ಅವರು, ಶಾಸಕರ ಭವನದ ಭೇಟಿಯ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನಿಗಧಿ ಮಾಡಲಾಗಿದೆ. ಈ ಸಮಯ ಬಿಟ್ಟು ಶಾಸಕರ ಭವನದಲ್ಲಿ ಶಾಸಕರ ಕುಟುಂಬ ಸದಸ್ಯರು ಬಿಟ್ಟು ಇನ್ನು ಯಾರಿಗೂ ಪ್ರವೇಶವಿಲ್ಲ ಎಂದು ಹೇಳಿದರು.

    ಹೊಸ ನಿಯಾಮವಳಿ ಅನ್ವಯ ಪಾಸ್ ಹೊರತಾಗಿ ಬರುವ ಖಾಸಗಿ ವಾಹನಗಳಿಗೂ ನಿರ್ಬಂಧ ಹೇರಲಾಗುತ್ತದೆ. ಶಾಸಕರ ಭವನ ದುರ್ಬಳಕೆ ಆಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಮಾಡಿದ್ದು, ಇಂದಿನಿಂದಲೇ ಈ ನಿಯಮ ಜಾರಿಗೆ ಬರುತ್ತೆ. ಇನ್ನು ಮುಂದೆ ಇಂತಹವುಗಳಿಗೆ ಹೇಗೆ ಕಡಿವಾಣ ಹಾಕುತ್ತೇನೆ ನೋಡಿ ಎಂದು ಹೇಳಿದರು.

    ಇದೇ ವೇಳೆ ಸರ್ಕಾರದ ಗೊಂದಲಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮೇಶ್ ಕುಮಾರ್ ಅವರು, ನಾನು ಸ್ಪೀಕರ್ ಆಗಿದ್ದು ಸದನ ನಡೆಸುವುದು ನನ್ನ ಕೆಲಸ ಅಷ್ಟೇ. ಆದರೆ ಶಾಸಕರ ಹಾಜರಾತಿಗಾಗಿ ಬಯೋ ಮೆಟ್ರಿಕ್ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸ್ಪೀಕರ್ ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ಈಗಲೇ ಶಾಸಕರು ಬರೋದಿಲ್ಲ ಅಂತ ಹೇಳೋದು ಬೇಡ. ಶಾಸಕರು ಎಂಪ್ಲಾಯ್ ಗಳು ಅಲ್ಲ. ಅವರು ಜನ ಪ್ರತಿನಿಧಿಗಳು ಎಂದು ಹೇಳುವ ಮೂಲಕ ಬಯೋ ಮೆಟ್ರಿಕ್ ವ್ಯವಸ್ಥೆ ಜಾರಿಯನ್ನು ವಿರೋಧಿಸಿದರು.

  • ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಬೆಂಗಳೂರು: ಕರುನಾಡ ಮಣ್ಣಿನ ವೀರ ಯೋಧ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಸಮಾಧಿಯಲ್ಲೂ ರಾಜಕೀಯದಾಟ, ರಸ್ತೆಗೆ ಯೋಧನ ಹೆಸರಿಡಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಅಡ್ಡ, ಬೆಂಗಳೂರಿನ ವೀರ ಯೋಧನಿಗೆ ಕನ್ನಡ ಮಣ್ಣಿನಲ್ಲೇ ಅವಮಾನ.

    ಹೌದು. ಪಂಜಾಬಿನಲ್ಲಿರುವ ವಾಯುನೆಲೆ ಪಠಾಣ್ ಕೋಟ್‍ನಲ್ಲಿ ಲೆಫ್ಟಿನೆಂಟ್ ನಿರಂಜನ್ ಎದೆಯುಬ್ಬಿಸಿ ಉಗ್ರರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ್ದರು. ಕನ್ನಡ ಮಣ್ಣಿನ ಯೋಧ, ನಮ್ಮ ಬೆಂಗಳೂರಿನ ಹೆಮ್ಮೆಯ ನಿರಂಜನ್ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟರು.

    ಆದರೆ ನಮ್ಮ ನೀಚ ರಾಜಕೀಯ ವ್ಯವಸ್ಥೆ ನಿರಂಜನ್ ಹೆಸರನ್ನು ರಸ್ತೆಗೆ ಇಡುವುದಕ್ಕೆ ರಾಜಕೀಯದಾಟ ಆಡುತ್ತಿದೆ. ದೊಡ್ಡ ಬೊಮ್ಮಸಂದ್ರ ಹೆಬ್ಬಾಗಿಲಿನಿಂದ ವಿದ್ಯಾರಣ್ಯಪುರದ ನಂಜಪ್ಪ ವೃತ್ತದವರೆಗಿನ ಮುಖ್ಯರಸ್ತೆಗೆ ನಿರಂಜನ್ ಹೆಸರು ಇಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ರು. ಅಂತಿಮ ತೀರ್ಮಾನವೂ ಆಗಿತ್ತು.

    ಈ ಮಧ್ಯೆ ಇದಕ್ಕಿದ್ದ ಹಾಗೆ ಕೃಷಿ ಸಚಿವ ಕೃಷ್ಣಬೈರೇಗೌಡರು ಯೋಧನ ಹೆಸರು ಬೇಡ, ಸ್ವಾತಂತ್ರ್ಯ ಹೋರಾಟಗಾರ ಪೇಟಾ ಸಿದ್ದಪ್ಪನ ಹೆಸರು ಇಡಿ ಎಂದು ಬಿಬಿಎಂಪಿಗೆ ಆದೇಶ ಕೊಟ್ಟು ಪತ್ರ ಬರೆದಿದ್ದಾರೆ. ಅಸಲಿಗೆ ಈ ಹೆಸರಿನ ಸ್ವಾತಂತ್ರ್ಯ ಹೋರಾಟಗಾರರು ಯಾರು ಇಲ್ಲ ಎಂದು ದೊರೆಸ್ವಾಮಿಯೇ ಹೇಳಿದ್ದಾರಂತೆ. ಆದ್ರೆ ಮಿನಿಸ್ಟರ್ ಮಾತನ್ನು ಪಾಲಿಸೋದಕ್ಕೆ ಮೇಯರ್ ಅವರು ಮುಂದಾಗುತ್ತಿದ್ದಾರೆ ಎಂದು ನಿರಂಜನ್ ಸ್ನೇಹಿತ ಶಶಾಂಕ್ ಹೇಳಿದ್ದಾರೆ.

    ಶೌರ್ಯ ಚಕ್ರ ಪ್ರಶಸ್ತಿ ವಾಪಾಸ್:
    ಹರ್ಯಾಣ ಸರ್ಕಾರ ನಿರಂಜನ್ ಅವರ ಹೆಸರಿನಲ್ಲಿ ಆಡಿಟೋರಿಯಂ ಸ್ಥಾಪನೆ ಮಾಡಿದೆ. ಆದರೆ ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಚಿವರಿಗೆ ನಿಜಕ್ಕೂ ಮಾನ ಮರ್ಯಾದೆ ಇಲ್ಲ, ನಿರಂಜನ್ ಹೆತ್ತವರು ಈ ಬೆಳವಣಿಗೆ ನೋಡಿ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ನಿರಂಜನ್‍ಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿದೆ. ಆದ್ರೇ ನಮ್ಗೆ ಈಗ ಬೇಸರವಾಗಿದೆ, ಇದನ್ನು ವಾಪಾಸ್ ಮಾಡುವ ಬಗ್ಗೆಯೂ ಯೋಚನೆ ಮಾಡುತ್ತೇವೆ ಅಂತಾ ಶಶಾಂಕ್ ಹೇಳಿದ್ದಾರೆ.

    ನಿರಂಜನ್ ಯಾರು?
    2016ರ ಜನವರಿ 1 ಮತ್ತು 2ರ ನಡುರಾತ್ರಿಯಲ್ಲಿ ಉಗ್ರರು ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದಾಗ, ಎನ್‍ಎಸ್‍ಜಿ ಯೋಧರನ್ನು ಅಲ್ಲಿಗೆ ಕಳುಹಿಸಲಾಯಿತು. ಎನ್‍ಎಸ್‍ಜಿ ತಂಡದಲ್ಲಿ ಕರ್ನಾಟಕದ ನಿರಂಜನ್ ಅವರೂ ಇದ್ದರು. ದಾಳಿ ಎಸಗಿದ್ದ ಉಗ್ರನ ಬಳಿಯಿದ್ದ ಗ್ರೆನೇಡ್ ನಿಷ್ಕ್ರಿಯಗೊಳಿಸಲು ನಿರಂಜನ್ ಮುಂದಾಗಿದ್ದ ವೇಳೆ ಅದು ಸ್ಫೋಟಗೊಂಡಿತ್ತು. ಗ್ರೆನೇಡ್ ಸ್ಫೋಟದಿಂದಾಗಿ ಅವರ ಶ್ವಾಸಕೋಶಗಳು ಒಡೆದಿದ್ದವು. ಆಸ್ಪತ್ರೆಗೆ ಸಾಗಿಸುವ ಮುನ್ನವೇ ನಿರಂಜನ್ ಹುತಾತ್ಮರಾಗಿದ್ದರು. ನಿರಂಜನ್ ಅವರು ಅಮೆರಿಕದ ಎಫ್‍ಬಿಐನಿಂದ ತರಬೇತಿ ಪಡೆದಿದ್ದರು. ಪಾಲಕ್ಕಾಡ್ ಜಿಲ್ಲೆಯ ಮುನ್ನರಾರ್ ಕಾಡ್ ಮೂಲದ ನಿರಂಜನ್, ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲೇ. 40 ವರ್ಷದ ಹಿಂದೆಯೇ ಅವರ ಕುಟುಂಬವು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿತ್ತು.