Tag: ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ

  • ರಾಜ್ಯದಲ್ಲಿ ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಕಡಿಮೆ

    ರಾಜ್ಯದಲ್ಲಿ ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಕಡಿಮೆ

    ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಸತತ ಎರಡು ವಾರಗಳ ಕಾಲ ಬಿಡುವಿಲ್ಲದೇ ಸುರಿದ ಮಳೆರಾಯ ಒಂದು ವಾರ ಬಿಡುವು ನೀಡಲಿದ್ದಾನೆ.

    ರಾಜ್ಯದಲ್ಲಿ ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ರಾಜ್ಯದಲ್ಲಿ ಯಾವುದೇ ಮೋಡಗಳ ಸಾಲು (ಟ್ರಂಪ್) ನಿರ್ಮಾಣವಾಗಿಲ್ಲ ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ. ಇದನ್ನು ಓದಿ: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗುಡ್‍ನ್ಯೂಸ್, ಆತಂಕದಲ್ಲಿ ತಮಿಳುನಾಡು!

    ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ರಾಜ್ಯದ ಅನೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಅವಧಿಗೂ ಮುನ್ನವೇ ರಾಜ್ಯ ಜಲಾಶಯಗಳು ಭರ್ತಿಯಾಗಿವೆ.

  • ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

    ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅದರಲ್ಲೂ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಸೂಚನೆ ನೀಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಗವಾಸ್ಕರ್, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಅಲ್ಲಲ್ಲಿ ಸಾಧಾರಣ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

    ಇನ್ನು ಕಾವೇರಿಕೊಳ್ಳದ ವರ್ಷಧಾರೆಯಿಂದಾಗಿ ಕೆಆರ್‍ಎಸ್‍ಗೆ ಒಂದೇ ದಿನ 1 ಅಡಿಗೂ ಹೆಚ್ಚು ನೀರು ಬಂದಿದೆ. 124.80 ಅಡಿ ಸಾಮಥ್ರ್ಯ ಹೊಂದಿರುವ ಡ್ಯಾಮ್‍ನಲ್ಲಿ ಸದ್ಯ 107.45 ಅಡಿ ನೀರಿದ್ದು, ಒಳ ಹರಿವು 16,600 ಕ್ಯೂಸೆಕ್ ಇದ್ದು, ಹೊರಹರಿವು 3,505 ಕ್ಯೂಸೆಕ್ ಇದೆ. ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಪರಿಣಾಮ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ನದಿಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಆಗುಂಬೆ ಘಾಟ್‍ನಲ್ಲಿ ಕುಸಿದಿದ್ದ ಗುಡ್ಡ ತೆರವು ಮಾಡಲಾಗಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉತ್ತರ ಕನ್ನಡದ ಜಿಲ್ಲೆಯಾದ್ಯಂತ ದಾಖಲೆಯ ಮಟ್ಟದ ಮಳೆಯಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಎಚ್ಚರಿಕೆ ನೀಡಲಾಗಿದೆ. ಮೈಸೂರಿನಲ್ಲೂ ಇಂದು ಮಧ್ಯಾಹ್ನ ವೇಳೆಗೆ ಸಾಧಾರಣ ಮಳೆಯಾಗಿದೆ.

  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

    ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದ್ದು, ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

    ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

  • ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಬೆಂಗಳೂರು: ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಬೆಂಗಳೂರು ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಗಾಳಿ ಸಮೇತ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಅನೇಕ ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬ ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದು ಬಿದ್ದವು. ಅಷ್ಟೇ ಅಲ್ಲದೇ ಕೆಲವು ಸೇತುವೆಗಳು ಬಿರುಕು ಕಂಡಿದ್ದು, ಬಂಟ್ವಾಳ ಮತ್ತು ಮಂಗಳೂರು ಸಂಪರ್ಕ ಕಲ್ಪಿಸುವ ಫಲ್ಗುಣಿ ಸೇತುವೆ ಕುಸಿದು ಬಿದ್ದಿತ್ತು.

  • ರಾಜ್ಯದ ರೈತರಿಗೆ ಸಿಹಿ ಸುದ್ದಿ – ರಾಜ್ಯಕ್ಕೆ ಮುಂಗಾರು ಪ್ರವೇಶ ಶೀಘ್ರ

    ರಾಜ್ಯದ ರೈತರಿಗೆ ಸಿಹಿ ಸುದ್ದಿ – ರಾಜ್ಯಕ್ಕೆ ಮುಂಗಾರು ಪ್ರವೇಶ ಶೀಘ್ರ

    ಬೆಂಗಳೂರು: ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಬೆಂಗಳೂರಿನ ಹಲವೆಡೆ ಭರ್ಜರಿ ಮಳೆಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ರಸ್ತೆ ಸಂಪೂರ್ಣ ನದಿಯಂತಾಗಿತ್ತು. ಕೋಲಾರ, ದೇವನಹಳ್ಳಿ, ಆನೇಕಲ್, ನೆಲಮಂಗಲ, ತುಮಕೂರುಗಳಲ್ಲಿ ಗಂಟೆಗಟ್ಟಲೆ ಬಿರುಗಾಳಿ ಮಳೆಯಾಗಿದೆ. ಎಂದಿನಂತೆ ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

    ಮುಂಗಾರು ಪ್ರವೇಶದ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರದ ಶ್ರೀನಿವಾಸ್ ರೆಡ್ಡಿ ಅವರು, ಕೇರಳ ಕರಾವಳಿ ಭಾಗಕ್ಕೆ ಮೇ 29 ಕ್ಕೆ ಮುಂಗಾರು ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಈ ಭಾರಿ ಮುಂಗಾರು ಸ್ವಲ್ಪ ಬೇಗನೇ ಪ್ರವೇಶ ನೀಡಲಿದೆ. ಮೇ 30 ಅಥವಾ ಜೂನ್ 1ರ ವೇಳೆಗೆ ಮುಂಗಾರು ಅಗಮನವಾಗುವ ಅವಕಾಶವಿದ್ದು, ಮೇ 30 ಕ್ಕೆ ರಾಜ್ಯದ ಕರವಾಳಿ ಹಾಗೂ ದಕ್ಷಿಣ ಒಳನಾಡಗೆ ವ್ಯಾಪಿಸುವ ಸಾಧ್ಯತೆ ಎಂದು ತಿಳಿಸಿದ್ದಾರೆ.

    ಅರಬ್ಬೀ ಸುಮುದ್ರದಿಂದ ನೈರುತ್ಯ ಮುಂಗಾರು ಭಾಗದಲ್ಲಿ ಮಳೆಯ ಮಾರುತಗಳ ವೇಗ ಹೆಚ್ಚಾಗಿರುವುದರಿಂದ ರಾಜ್ಯಕ್ಕೆ ಮುಂಗಾರು ನಿಗಧಿತ ಸಮಯಕ್ಕಿಂತ ಬೇಗ ಬರುವ ಸಾಧ್ಯತೆ ಇದೆ. ಅಲ್ಲದೇ ಈ ಭಾರಿ ರಾಜ್ಯಕ್ಕೆ ವಾಡಿಕೆಯಂತೆ ಮಳೆ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಇನ್ನು ಸಂಜೆ ಸುರಿದ ನಗರದ ಹೊರವಲಯದ ನೆಲಮಂಗಲದ ಸುರಿದ ಆಲಿಕಲ್ಲು ಬಿರುಗಾಳಿ ಸಹಿತ ಭಾರಿ ಮಳೆಗೆ, ಬೃಹತ್ ಗಾತ್ರದ ಮರಗಳು ಧರೆಗುರುಳಿದೆ. ನೆಲಮಂಗಲದ ಹಲವೆಡೆ ಸಂಜೆ 4 ಗಂಟೆಯಿಂದಲೂ, ಗುಡುಗು ಸಿಡಿಲು ಬಿರುಗಾಳಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ಹನುಮಂತಪುರದ ಪ್ರಿನ್ಸ್ ಹೋಟೆಲ್ ಬಳಿ ಬೃಹಧಾಕಾರದ ನೀಲಗಿರಿ ಮರವೊಂದು ಹೆದ್ದಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿ ಮೇಲೆ ಬಿದ್ದಿದೆ. ಈ ವೇಳೆ ವಾಹನದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ.

    ಹೆದ್ದಾರಿಗೆ ಮರ ಬಿದ್ದಿದ್ದರಿಂದ ಸಂಚಾರ ದಟ್ಟಣೆ ಹೆಚ್ಚಾಗಿತ್ತು, ಸ್ಥಳಕ್ಕೆ ಡಾಬಸ್‍ಪೇಟೆ ಪೊಲೀಸರ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ತಾಲೂಕಿನ ದಕ್ಷಿಣಕಾಶಿ ಶಿವಗಂಗೆಯಲ್ಲೂ ಸಹ ಭಾರಿ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ಪುರಾತನವಾದ ಬೃಹತ್ ಮರವೊಂದು ಉರುಳಿಬಿದ್ದಿದೆ. ರಸ್ತೆ ಬದಿಯ ಅಂಗಡಿ ಮಳಿಗೆ ಸೇರಿದಂತೆ ಹೋಟೆಲ್ ಹಾಗೂ ಮನೆಗಳ ಮೇಲೆ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಘಟನೆಯಿಂದ ಜನರು ಪಾರಾಗಿದ್ದಾರೆ. ಸ್ಥಳೀಯ ಜನರು ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ. ಮನೆ ಹಾಗೂ ಮಳಿಗೆಗಳನ್ನ ಕಳೆದುಕೊಂಡ ಕುಟುಂಬಗಳು ಆತಂಕಕ್ಕೆ ಒಳಗಾಗಿದ್ದಾರೆ.