Tag: ರಾಜ್ಯ ಬಜೆಟ್ 2018

  • ಕೃಷಿಗೆ ಅತಿ ಹೆಚ್ಚು ಹಣ: ಏನಿದು ಹೊಸ ‘ರೈತ ಬೆಳಕು’ ಯೋಜನೆ?

    ಕೃಷಿಗೆ ಅತಿ ಹೆಚ್ಚು ಹಣ: ಏನಿದು ಹೊಸ ‘ರೈತ ಬೆಳಕು’ ಯೋಜನೆ?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ ಇಲಾಖೆಗೆ 5,849 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈ ಮೂಲಕ ಸಿಎಂ ಅತಿ ಹೆಚ್ಚು ಪಾಲನ್ನು ಕೃಷಿಗೆ ನೀಡಿದ್ದಾರೆ.

    ಬಜೆಟ್ ನಲ್ಲಿ ಖುಷ್ಕಿ ಭೂಮಿಯ ರೈತರ ಸಂಕಷ್ಟಗಳನ್ನು ನೇರವಾಗಿ ಪರಿಹರಿಸಲು ಹಾಗೂ ರೈತರಿಗೆ ನೇರ ಆದಾಯ ನೆರವು ನೀಡುವ `ರೈತ ಬೆಳಕು’ ಹೆಸರಿನ ವಿಶಿಷ್ಟ ಯೋಜನೆಯನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

    ಏನಿದು ಯೋಜನೆ?

    ಈ ಯೋಜನೆಯಡಿ 2018-19ರಿಂದ ಮಳೆ ಆಶ್ರಿತ ಬೆಳೆ ಬೆಳೆಯುವ ರೈತರಿಗೆ ಪ್ರತಿವರ್ಷ, ಪ್ರತಿ ರೈತನಿಗೆ ಗರಿಷ್ಠ 10,000 ರೂ.ಗಳ ಮಿತಿಗೆ ಒಳಪಟ್ಟು ಪ್ರತಿ ಹೆಕ್ಟೇರ್‍ಗೆ 5,000 ರೂ.ಗಳನ್ನು ನೀಡಲಾಗುತ್ತದೆ. ಈ ಹಣವನ್ನು ರೈತರಿಗೆ ಬ್ಯಾಂಕ್ ಖಾತೆಗಳ ಮೂಲಕ ನೇರ ವರ್ಗಾವಣೆ ಮಾಡಲಾಗುತ್ತದೆ. ಯೋಜನೆಗೆ ಪ್ರತಿವರ್ಷ 3,500 ಕೋಟಿ ರೂ. ವೆಚ್ಚವಾಗಲಿದ್ದು, ಅಂದಾಜು 70 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆಯುವ ಸಾಧ್ಯತೆಯಿದೆ.

    ರಾಜ್ಯ ಸರ್ಕಾರ ಈ ಕೃಷಿ ಹೆಚ್ಚಿನ ಆದ್ಯತೆಯ ನೀಡಿ ಆಯವ್ಯಯ ದೊಡ್ಡ ಮೊತ್ತವನ್ನು ಮೀಸಲಿಟ್ಟಿದೆ. ಕಳೆದ ಸಾಲಿನ ಆಯವ್ಯದಲ್ಲಿ ಕೃಷಿ (5,080 ಕೋಟಿ ರೂ.) ತೋಟಗಾರಿಕೆ (1,091ಕೋಟಿ ರೂ.), ಪಶುಸಂಗೋಪನೆ (2,245 ಕೋಟಿ ರೂ.), ರೇಷ್ಮೆ (429ಕೋಟಿ ರೂ.), ಮೀನುಗಾರಿಕೆ (337 ಕೋಟಿ ರೂ.), ಜಲಸಂಪನ್ಮೂಲ (15,929 ಕೋಟಿ ರೂ.), ಸಣ್ಣ ನೀರಾವರಿ (2,099 ಕೋಟಿ ರೂ.) ಸಹಕಾರ ಕ್ಷೇತ್ರ (1,663 ಕೋಟಿ ರೂ.) ವಿದ್ಯುತ್ ಸಬ್ಸಿಡಿ (8,841 ಕೋಟಿ ರೂ.), ಹಾಲಿನ ಸಬ್ಸಿಡಿ (1,200 ಕೋಟಿ ರೂ.) ಮತ್ತು ಸಾಲದ ಮೇಲಿನ ಬಡ್ಡಿ ಸಹಾಯಧನಕ್ಕಾಗಿ (800 ಕೋಟಿ ರೂ.). ಹೀಗೆ ಸುಮಾರು 40 ಸಾವಿರ ಕೋಟಿ ರೂಪಾಯಿಗಳನ್ನು ನಿಗದಿಪಡಿತ್ತು.

    ಕೃಷಿ ಹೊಂಡಗಳು ಮತ್ತು ಪಾಲಿ ಹೌಸ್ ಗಳ ನಿರ್ಮಾಣ, ಮಣ್ಣು ಆರೋಗ್ಯ ಕಾರ್ಡ್ ವಿತರಣೆ, ಹನಿ ನೀರಾವರಿಗೆ ಎಲ್ಲಾ ವರ್ಗದ ರೈತರಿಗೂ ಶೇಕಡಾ 90ರಷ್ಟು ಸಹಾಯಧನ, ರೈತರಿಗೆ ಕೃಷಿ ಯಂತ್ರೋಪಕರಣ ಮತ್ತು ಕೃಷಿ ಸಲಕರಣೆಗಳ ಬಾಡಿಗೆಗೆ ನೀಡುವುದು. ಹಾಲು ಉತ್ಪಾದನಾ ಸಹಾಯಧನ ಯೋಜನೆಗಳನ್ನು ಘೋಷಿಸಿತ್ತು.

    ಪ್ರತಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಸ್ಥಾಪನೆ. ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಗೋದಾಮು ನಿರ್ಮಾಣ. ಶೂನ್ಯ ಬಡ್ಡಿದರದಲ್ಲಿ ಮೂರು ಲಕ್ಷಗಳ ವರೆಗೆ ಸಾಲ ಸೌಲಭ್ಯ. ಜತೆಗೆ ಶೇಕಡಾ ಮೂರರ ಬಡ್ಡಿ ದರದಲ್ಲಿ 3 ಲಕ್ಷದಿಂದ 10 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತಿದೆ. ಅಲ್ಲದೇ ದಿನಾಂಕ 30-9-2015ಕ್ಕೆ ಸುಸ್ತಿಯಾಗಿರುವ ಎಲ್ಲಾ ಬಗೆಯ ಕೃಷಿ ಸಾಲಗಳ ಅಸಲನ್ನು 2017ರ ಮಾರ್ಚ್ 31ರೊಳಗೆ ಪಾವತಿಸಿದ ರೈತರ 124.70 ಕೋಟಿ ರೂ. ಮೊತ್ತದ ಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 10.7 ಲಕ್ಷ ರೈತರ. 2359 ಕೋಟಿ ರೂ. ಬಡ್ಡಿ ಮನ್ನಾ ಮಾಡಲಾಗಿದೆ.

    ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ನ್ಯಾಯಬದ್ಧ ಬೆಲೆ ಸಿಗುವಂತೆ ಮಾಡಲು ಜಾರಿಗೆ ರಾಜ್ಯದಲ್ಲಿ 157 ಕೃಷಿ ಮಾರುಕಟ್ಟೆಗಳಲ್ಲಿ ಆನ್ ಲೈನ್ ಮಾರುಕಟ್ಟೆ ಸ್ಥಾಪನೆ ಮಾಡಲಾಗಿದೆ. ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಒಣಭೂಮಿ ಇರುವ ಪ್ರದೇಶ ಕರ್ನಾಟಕದಲ್ಲಿ ಮಳೆ ಆಶ್ರಿತ ರೈತರ ಗಮನದಲ್ಲಿಟ್ಟುಕೊಂಡು ಮಳೆ ನೀರು ಸಂಗ್ರಹಣೆ ಮತ್ತು ಪುನರ್ ಬಳಕೆಗೆ ಆದ್ಯತೆ ನೀಡಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿಲಾಗಿದೆ. ಮೊದಲ ಹಂತದಲ್ಲಿ 5 ಮುಖ್ಯ ಒಣ ಭೂಮಿ ವಲಯಗಳ ರಾಜ್ಯದ 23 ಜಿಲ್ಲೆಗಳ 107 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.

    ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಬೆಳೆಗಳ ಸಂದಿಗ್ಧ ಪರಿಸ್ಥಿತಿಯಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸಿ ಉತ್ತಮ ಆದಾಯ ಪಡೆಯುವಲ್ಲಿ ಕೃಷಿ ಭಾಗ್ಯ ಯೋಜನೆಯು ಮಹತ್ವದ ಪಾತ್ರವಹಿಸಿದೆ. ಕಳೆದ ವರ್ಷಗಳ ಯಶಸ್ವಿ ಫಲಿತಾಂಶವನ್ನಾಧರಿಸಿ 2018-19ನೇ ಸಾಲಿನಲ್ಲಿಯೂ ಕೂಡ 600 ಕೋಟಿ ರೂ.ಗಳ ಅನುದಾನದೊಂದಿಗೆ ಈ ಯೋಜನೆಯನ್ನು ಮುಂದುವರೆಸಲಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯವು ನಿರಂತರವಾಗಿ ಬರ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ರೈತರಿಗೆ ಆರ್ಥಿಕ ಸ್ಥಿರತೆ ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ರಾಜ್ಯದ ವಂತಿಗೆಯೊಂದಿಗೆ ಸೂಕ್ತ ನೆರವು ಕಲ್ಪಿಸಲಾಗಿದೆ.

    ನಮ್ಮ ರಾಜ್ಯದ ಮುಖ್ಯವಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆಯುವ ನೆಲಗಡಲೆ ಬೆಳೆ ಬೆಳೆಯುವ ಕ್ಷೇತ್ರವು ಇಳಿಮುಖವಾಗುತ್ತಿದ್ದು, ಇದನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ನೆಲಗಡಲೆ ಬೆಳೆ ಬೆಳೆಯುವ ರೈತರಿಗೆ ಸಹಾಯ ಮಾಡಲು 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಅನ್ನು ಪ್ರಾರಂಭಿಕವಾಗಿ ತುಮಕೂರು ಜಿಲ್ಲೆಯ ಪಾವಗಡ, ಸಿರಾ ಮತ್ತು ಮಧುಗಿರಿ ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕುಗಳಿಗೆ ಒದಗಿಸಲಾಗುತ್ತಿದೆ.

    ನೇರ ಭತ್ತ ಬಿತ್ತನೆ ಪದ್ಧತಿಯಿಂದ ಶೇ.35ವರೆಗೆ ನೀರಿನ ಉಳಿತಾಯವಾಗುವುದಲ್ಲದೇ, ಬೆಳೆ ಅವಧಿ 8 ದಿನಗಳವರೆಗೆ ಕಡಿತವಾಗುವುದೆಂದು ಹಲವು ವರ್ಷಗಳ ಸಂಶೋಧನೆಯಿಂದ ದೃಢಪಟ್ಟಿದೆ. ಇದರಿಂದ ಬೇಸಾಯ ವೆಚ್ಚ ಕಡಿಮೆಯಾಗಿ, ರೈತರು ಕಡಿಮೆ ಅವಧಿಯಲ್ಲಿ ಅಧಿಕ ಲಾಭ ಗಳಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ನೇರ ಭತ್ತ ಬಿತ್ತನೆ ಪದ್ಧತಿಯನ್ನು ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿ ಪ್ರೋತ್ಸಾಹಿಸವ ಉದ್ದೇಶವಿದೆ. ಕಬ್ಬು ಬೆಳೆಯಲ್ಲಿ ಲಾಭದಾಯಕತೆ ಮತ್ತು ಸುಸ್ಥಿರತೆ ಹೊಂದಲು ಹಾಗೂ ಹೆಚ್ಚುತ್ತಿರುವ ಕೂಲಿ ವೆಚ್ಚ ಮತ್ತು ಕೂಲಿಕಾರ್ಮಿಕರ ಕೊರತೆಯನ್ನು ನಿವಾರಿಸಲು ಕಬ್ಬು ಕಟಾವು ಯಂತ್ರಗಳ ಬಳಕೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಇದಕ್ಕಾಗಿ ಕೇಂದ್ರ ನೆರವಿನೊಂದಿಗೆ ಖಾಸಗಿ ಸಹಭಾಗಿತ್ವದಲ್ಲಿ ಕಬ್ಬು ಕಟಾವು ಯಂತ್ರಗಳಿಗೆ ಸಹಾಯಧನ ನೀಡಲು 20 ಕೋಟಿ ರೂ.ಗಳನ್ನು ನೀಡಲಾಗಿದೆ.

    ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಸಮಯದಲ್ಲಿ ಹಾವು ಕಡಿತದಿಂದ ಆಕಸ್ಮಿಕ ಮರಣ ಹೊಂದಿದ ರೈತರ ಹಾಗೂ ಕೃಷಿ ಕಾರ್ಮಿಕರ ಕುಟುಂಬಗಳಿಗೆ ನೀಡುತ್ತಿರುವ ಪರಿಹಾರ ಧನವನ್ನು 2 ಲಕ್ಷ ರೂ.ಗಳಿಗೆ ದ್ವಿಗುಣಗೊಳಿಸಗಿದೆ. ಬೆಳೆ ಕಟಾವು ನಂತರ ಶೇಖರಿಸಲ್ಪಟ್ಟ ಹುಲ್ಲು ಮೆದೆ/ಬಣವೆಗಳು ಆಕಸ್ಮಿಕ ಬೆಂಕಿಯಿಂದ ನಷ್ಟವಾಗುವ ಪ್ರಕರಣಗಳಿಗೆ ಹಾಲಿ ಇರುವ ಪರಿಹಾರ ಧನವನ್ನು ದ್ವಿಗುಣಗೊಳಿಸಿ ಗರಿಷ್ಠ 20,000 ರೂ. ಗೆ ಹೆಚ್ಚಿಸಲಾಗಿದೆ.

    ಚಾಮರಾಜನಗರ ಜಿಲ್ಲೆಯಲ್ಲಿ ನೂತನ ಕೃಷಿ ಕಾಲೇಜನ್ನು ಸ್ಥಾಪನೆ. ರಾಜ್ಯದಲ್ಲಿ ಕೃಷಿಕರ ಬೇಡಿಕೆಗೆ ಅನುವಾಗುವಂತೆ ಕೃಷಿಯಲ್ಲಿ ಹೆಚ್ಚಿನ ಸಂಶೋಧನೆಗೆ ಒತ್ತು ಕೊಡಲು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನೂತನ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪನೆ. ಬೆಂಗಳೂರಿನಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ನಂಜುಂಡಸ್ವಾಮಿ ಸಂಶೋಧನಾ ಪೀಠವನ್ನು ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವ ಉದ್ದೇಶವಿದೆ.

  • ಉದ್ಯೋಗ ಭಾಗ್ಯ: ಯುವಜನರಿಗೆ ಸಿಎಂ ಬಜೆಟ್ ನಲ್ಲಿ ಏನಿದೆ?

    ಉದ್ಯೋಗ ಭಾಗ್ಯ: ಯುವಜನರಿಗೆ ಸಿಎಂ ಬಜೆಟ್ ನಲ್ಲಿ ಏನಿದೆ?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ 794 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

    ಹೊಸ ಯೋಜನೆಗಳು:
    ಈ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 2.50 ಲಕ್ಷ ಜನರಿಗೆ ವೃತ್ತಿ ತರಬೇತಿ ಸಂಸ್ಥೆಗಳ ಮೂಲಕ ತರಬೇತಿಯನ್ನು ನೀಡುವ ಗುರಿಯನ್ನು ಹೊಂದಿದೆ. ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರವು (ಸಿಡಾಕ್) ಮತ್ತು ಯು.ಎನ್.ಡಿ.ಪಿ. ಸಹಯೋಗದೊಂದಿಗೆ 16 ಜಿಲ್ಲೆಗಳಲ್ಲಿ ಸಂಭಾವ್ಯ ಉದ್ದಿಮೆದಾರರಿಗೆ ತರಬೇತಿಯನ್ನು ನೀಡಲು ದಿಶಾ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ 32,000 ಜನರಿಗೆ ಪ್ರಯೋಜನ ಪಡೆಯಲಿದ್ದಾರೆ.

    2018-19ನೇ ಸಾಲಿನಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಿ 2 ಕೋಟಿ ರೂ. ಅನುದಾನದಲ್ಲಿ 1 ಲಕ್ಷ ಜನರಿಗೆ ಈ ಯೋಜನೆಯ ಪ್ರಯೋಜನವನ್ನು ಒದಗಿಸುವ ಉದ್ದೇಶವಿದೆ. ಅಲ್ಲದೇ ಈ ಬಾರಿ ಡಿಜಿಟಲ್ ಲರ್ನಿಂಗ್‍ಗೆ ಒತ್ತು ನೀಡಲಾಗುತ್ತದೆ ಮತ್ತು 120 ಸರ್ಕಾರಿ ಐ.ಟಿ.ಐ.ಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ಹೊಂದಿರುವ ಮಲ್ಟಿಮೀಡಿಯಾ ಕಂಪ್ಯೂಟರ್ ಲ್ಯಾಬ್‍ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕಲ್ಪಿಸುವ ಮೂಲಕ ಕೌಶಲ್ಯ ತರಬೇತಿ ಕಾರ್ಯಗತಗೊಳಿಸಿ ಪರಿಣಾಮಕಾರಿಯಾಗಿ ಬಳಕೆ ಮಾಡಲು ನಿರ್ಧರಿಸಲಾಗಿದೆ.

    ವಿದೇಶಗಳಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಹೊಂದಲು ಹಾಗೂ ಕರ್ನಾಟಕವನ್ನು ವಿದೇಶಿ ಉದ್ಯೋಗಕ್ಕೆ ಆದ್ಯತಾ ರಾಜ್ಯವನ್ನಾಗಿ ರೂಪಿಸಲು ರಾಜ್ಯದ ಯುವ ಜನತೆಗೆ ಅಗತ್ಯ ತರಬೇತಿ ಮತ್ತು ಪ್ರೋತ್ಸಾಹವನ್ನು ನೀಡುವ ಗುರಿ ಹೊಂದಿದೆ. 2018-19ನೇ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ಒಟ್ಟಾರೆಯಾಗಿ 794 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

     

  • ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 3,172 ಕೋಟಿ ರೂ.- ಹೊಸ ಯೋಜನೆಗಳೇನು?

    ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 3,172 ಕೋಟಿ ರೂ.- ಹೊಸ ಯೋಜನೆಗಳೇನು?

    ಬೆಂಗಳೂರು: ಇಂದಿನ ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3,172 ಕೋಟಿ ರೂ. ಮೀಸಲಿಡಲಾಗಿದೆ.

    ಹೊಸ ಯೋಜನೆಗಳು:
    * ನಮ್ಮ ಸರ್ಕಾರವು ಸ್ವಾತಂತ್ರ್ಯಯೋಧ ಸಂಗೊಳ್ಳಿ ರಾಯಣ್ಣನವರ ನೆನಪಿಗಾಗಿ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರ’ ವನ್ನು ರಚನೆ ಮಾಡಿದೆ. ಅವರ ಜನ್ಮಸ್ಥಳವಾದ ಸಂಗೊಳ್ಳಿ ಮತ್ತು ಹುತಾತ್ಮರಾದ ನಂದಗಡದಲ್ಲಿ ಮುಂದಿನ ವರ್ಷಗಳಲ್ಲಿ 267 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

    * 2012-13ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರ ವೆಚ್ಚಕ್ಕಾಗಿ ಅನುಕ್ರಮವಾಗಿ ಮಾಹೆಯಾನ 750 ರೂ. ಮತ್ತು 850 ರೂ. ನೀಡಲಾಗುತ್ತಿತ್ತು. 2018-19ನೇ ಸಾಲಿನಲ್ಲಿ ಈ ಮೊತ್ತವನ್ನು ಅನುಕ್ರಮವಾಗಿ 1500 ರೂ. ಮತ್ತು 1600 ರೂ.ಗಳಿಗೆ ಹೆಚ್ಚಿಸಲಾಗುವುದು.

    * ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶುಚಿ ಸಂಭ್ರಮ ಕಿಟ್ ಸೌಲಭ್ಯವನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೂ ಸಹ ವಿಸ್ತರಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯಗಳ ವಿದ್ಯಾರ್ಥಿಗಳ ಊಟದ ವೆಚ್ಚದ ದರಗಳನ್ನು ಮಾಹೆಯಾನ ತಲಾ 700 ರೂ. ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.

    * ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹೆಚ್ಚಿಸಲಾಗುವುದು.
    * ಹಿಂದುಳಿದ ವರ್ಗಗಳು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಹಾಲಿ ಇರುವ ಕೆನೆಪದರ ಆದಾಯ ಮಿತಿಯನ್ನು 6 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
    * ಮುಂದಿನ 5 ವರ್ಷಗಳಲ್ಲಿ 750 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಕಳುಹಿಸುವ ಗುರಿ ಹೊಂದಲಾಗಿದ್ದು, 2018-19ನೇ ಸಾಲಿನಲ್ಲಿ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    * ಹಿಂದುಳಿದ ವರ್ಗಗಳ 2000 ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ವಿಶೇಷ ಕೋಚಿಂಗ್ ನೀಡಲಾಗುವುದು.
    * ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುವುದು.

    * ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು 5000 ರೂ.ಗಳಿಂದ 10,000 ರೂ.ಗಳಿಗೆ ಹೆಚ್ಚಿಸಲಾಗುವುದು.
    * ಕೆ.ಐ.ಎ.ಡಿ.ಬಿ. ಮತ್ತು ಕೆ.ಎಸ್.ಎಸ್.ಐ.ಡಿ.ಸಿ.ಗಳಿಂದ ಕೈಗಾರಿಕಾ ಶೆಡ್‍ಗಳು ಹಾಗೂ ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ 2ಎ ಮತ್ತು ಪ್ರವರ್ಗ 2ಬಿ ಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಕೆನೆಪದರ ಆದಾಯ ಮಿತಿಯನ್ನು ತೆಗೆದು ಹಾಕಲಾಗುವುದು.
    * ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಅಭಿವೃದ್ಧಿ ನಿಗಮವನ್ನು ಪುನರ್ ಸಂಘಟಿಸಲಾಗುವುದು.

    * ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳ ಮೂಲ ಸೌಕರ್ಯ ಅಭಿವೃದ್ಧಿಗಾಗಿ ತಲಾ 5 ಲಕ್ಷ ರೂ. ಅನುದಾನ.
    * ಹಿಂದುಳಿದ ಸಮುದಾಯಗಳಾದ ಸವಿತಾ ಸಮಾಜ, ತಿಗಳ, ಮಡಿವಾಳ ಮತ್ತು ಕುಂಬಾರರ ಆರ್ಥಿಕಾಭಿವೃದ್ಧಿಗಾಗಿ 100 ಕೋಟಿ ರೂ.ಗಳ ಮೀಸಲು.
    * ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವೀಧರರ ಸ್ವಯಂ ಉದ್ಯೋಗಕ್ಕಾಗಿ 10 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6ರಷ್ಟು ಬಡ್ಡಿ ದರ.
    * ಅತಿ ಹಿಂದುಳಿದ ಬುಡಬುಡಕಿ, ಗೊಲ್ಲ, ಹೆಳವ, ಗೊಂದಳಿ, ಜೋಗಿ, ಶಿಕ್ಕಲಿಗರ್, ಪಿಚಗುಂಟಲ, ದೊಂಬಿದಾಸ ಇತ್ಯಾದಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

  • ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22,350 ಕೋಟಿ ರೂ.- ಬಜೆಟ್ ನಲ್ಲಿ ಸಿಕ್ಕಿದ್ದೇನು?

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22,350 ಕೋಟಿ ರೂ.- ಬಜೆಟ್ ನಲ್ಲಿ ಸಿಕ್ಕಿದ್ದೇನು?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22,350 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

    ಹೋಸ ಯೋಜನೆಗಳು:
    * ಒಂದೇ ಸೂರಿನಡಿ ವಿದ್ಯಾಭ್ಯಾಸ ಕಲ್ಪಿಸಿ ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಪ್ರಸಕ್ತ ವರ್ಷದಲ್ಲಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ 12ನೇ ತರಗತಿಯವರೆಗೆ 176 ಸಂಯೋಜಿತ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 2018-19ನೇ ಸಾಲಿನಲ್ಲಿ ಇದನ್ನು ಮುಂದುವರೆಸುತ್ತಾ 100 ಸಂಯೋಜಿತ `ಕರ್ನಾಟಕ ಪಬ್ಲಿಕ್ ಶಾಲೆ’ ಗಳನ್ನು ಪ್ರತಿ ಶಾಲೆಗೆ 5 ಲಕ್ಷ ರೂ.ಗಳಂತೆ 5 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಇದಲ್ಲದೇ, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಶ್ವ ಭ್ರಾತೃತ್ವ ಸೇವಾ ಮನೋಭಾವ, ಶಾಂತಿ, ಶಿಸ್ತು, ಸಂಯಮ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಲು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಪ್ರಾರಂಭ.

    * ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ.

    * ರಾಜ್ಯ ಕೇಂದ್ರ ಗ್ರಂಥಾಲಯಗಳ ಶತಮಾನೋತ್ಸವ ಸ್ಮರಣಾರ್ಥವಾಗಿ ಜಿಲ್ಲಾ, ನಗರ ಮತ್ತು ತಾಲೂಕು ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೆ. ಪ್ರಪ್ರಥಮ ಬಾರಿಗೆ ಅಂತರ್ಜಾಲದ ಕ್ಲೌಡ್ ಮೂಲಕ ರಾಜ್ಯದಲ್ಲಿರುವ ಸರ್ಕಾರಿ ಪ್ರೌಢ ಶಾಲೆಗಳಿಗೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸಂಪರ್ಕ ನೀಡಿ ಅಂದಾಜು 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ. ಈ ಉದ್ದೇಶಕ್ಕೆ 5 ಕೋಟಿ ರೂ.ಗಳನ್ನು ಒದಗಿಸಿದೆ.

    * ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿ ತಾಲೂಕಿನ ಒಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ (ಎಸ್.ಡಿ.ಎಂ.ಸಿ) `ಅತ್ಯುತ್ತಮ ಎಸ್.ಡಿ.ಎಂ.ಸಿ’ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಿದೆ.

    * ರಾಜ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿರುವ 100 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು `ಪಾರಂಪರಿಕ ಶಾಲೆ’ ಗಳೆಂದು ಗುರುತಿಸಿ, ಅವುಗಳನ್ನು ಹಂತ ಹಂತವಾಗಿ ನವೀಕರಿಸಿ ಸಂರಕ್ಷಣೆ.

    * ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು, ಎಲ್ಲಾ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಸಮಿತಿಗಳ ಪ್ರಾರಂಭ ಹಾಗೂ ಅಗಸ್ತ್ಯ ಫೌಂಡೇಶನ್ ಸಹಭಾಗಿತ್ವದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ 7.5 ಕೋಟಿ ರೂ.ಗಳ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ.

  • ಇಂಧನ ಇಲಾಖೆಗೆ 14,136 ಕೋಟಿ ರೂ. ಮೀಸಲು- ಹೊಸ ಯೋಜನೆಗಳ ವಿವರ ಇಂತಿದೆ

    ಇಂಧನ ಇಲಾಖೆಗೆ 14,136 ಕೋಟಿ ರೂ. ಮೀಸಲು- ಹೊಸ ಯೋಜನೆಗಳ ವಿವರ ಇಂತಿದೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ತಮ್ಮ 13ನೇ ಬಾರಿಯ ಬಜೆಟ್ ಮಂಡನೆಯಲ್ಲಿ ಇಂಧನ ಇಲಾಖೆಗೆ 14,136 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ.

    ಹೊಸ ಯೋಜನೆಗಳೇನು?
    ಪ್ರತಿ ಸದಸ್ಯ ಹೊರೆ 10 ಹೆಚ್‍ಪಿ ಮತ್ತು ಕಡಿಮೆ ಸಾಮಥ್ರ್ಯ ಹೊಂದಿದ ಸಹಕಾರ ಸಂಘಗಳ ಖಾಸಗಿ ಹೆಚ್‍ಟಿ ಮತ್ತು ಎಲ್‍ಟಿ ಸಮೂಹ ಏತನೀರಾವರಿ ಸ್ಥಾವರಗಳಿಗೆ 2018-19ನೇ ಸಾಲಿನಿಂದ ವಿದ್ಯುತ್ ಪೂರೈಕೆಯ ಮಿತಿ ಮತ್ತು ನಿಬಂಧನೆಗಳಿಗೆ ಒಳಪಟ್ಟು ಪ್ರತಿ ದಿನ 7 ಗಂಟೆಗಳ ವಿದ್ಯುತ್ ಬಳಕೆ ವೆಚ್ಚವನ್ನು ಬಳಕೆದಾರರಿಗೆ ಹಿಂಪಾವತಿ ಮಾಡಲಾಗುವುದು.

    ಪ್ರಸರಣಾ ಜಾಲವನ್ನು ಬಲವರ್ಧನೆಗೊಳಿಸಲು 2018-19ನೇ ಸಾಲಿನಲ್ಲಿ ಯಾದಗಿರಿ ತಾಲ್ಲೂಕಿನ ರಾಮಸಮುದ್ರ, ರಾಯಚೂರಿನ ಯಾಪಲದಿನ್ನಿ, ಗಂಗಾವತಿಯ ಯರಡೋನ ಹಾಗೂ ಬೆನ್ನೂರು, ಕುಷ್ಟಗಿಯ ತಾವರಗೆರ, ಹಗರಿಬೊಮ್ಮನಹಳ್ಳಿಯ ಬಾಚಿಗೊಂಡನಹಳ್ಳಿ, ಮುದ್ದೇಬಿಹಾಳದ ತಾಳಿಕೋಟಿ, ಇಂಡಿಯ ರೋಡಗಿ (ಕೇಡಗಿ ಕ್ರಾಸ್), ಬಾದಾಮಿಯ ಹೆಬ್ಬಳ್ಳಿ, ಧಾರವಾಡದ ಗರಗ (ಶೇಡಬಾಲ್), ರೋಣದ ಬೆಳವಣಕಿ, ಮಂಗಳೂರಿನ ಮುಲ್ಕಿ, ಪುತ್ತೂರಿನ ಮಾಡಾವು, ಚನ್ನಗಿರಿ (ನಲ್ಲೂರು/ಬೆಂಕಿಕೆರೆ), ಚಳ್ಳಕೆರೆಯ ವಿಶ್ವೇಶ್ವರಪುರ, ಮಧುಗಿರಿಯ ತೆರಿಯೂರು, ಕುಣಿಗಲ್‍ನ ತಿಪ್ಪೂರು, ಬಂಗಾರಪೇಟೆಯ ಟಿ.ಗೊಲ್ಲಹಳ್ಳಿ (ತಿಮ್ಮಸಂದ್ರ), ಆನೇಕಲ್‍ನ ಸಮಂದೂರು, ಬೆಂಗಳೂರು ದಕ್ಷಿಣ ತಾಲೂಕಿನ ಕೋರಮಂಗಲ, ಬೆಂಗಳೂರು ಪೂರ್ವ ತಾಲೂಕಿನ ದೂರವಾಣಿನಗರ, ಹೊಸಕೋಟೆಯ ಮಂಡೂರು, ಚನ್ನಪಟ್ಟಣದ ಬಿ.ವಿ.ಹಳ್ಳಿ, ಅರಕಲಗೂಡಿನ ರುದ್ರಪಟ್ಟಣ, ಕೆ.ಆರ್.ಪೇಟೆಯ ಗಂಗೇನಹಳ್ಳಿ (ಹರಿಯಲದಮ್ಮ ಟೆಂಪಲ್), ಮಂಡ್ಯದ ತುಂಬೆಕೆರೆ, ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಮತ್ತು ಕಿತ್ತೂರು, ಟಿ.ನರಸೀಪುರ ತಾಲೂಕಿನ ಮಡವಾಡಿ (ಪರಿನಾಮಿಪುರ) ಹಾಗೂ ಮಲಿಯೂರು, ನಂಜನಗೂಡು ತಾಲೂಕಿನ ಹೆಮ್ಮರಗಾಲ ಹಾಗೂ ಚಂದ್ರವಾಡಿ (ನಲ್ಲಿನಾಥಪುರ), ಗುಂಡ್ಲುಪೇಟೆಯ ಬಾರಗಿ, ಕೊಳ್ಳೆಗಾಲದ ಕೊತ್ತನೂರು ಹಾಗೂ ಚಾಮರಾಜನಗರದ ಬಡನಕುಪ್ಪೆ (ಕೆಐಎಡಿಬಿ ಕೈಗಾರಿಕಾ ವಲಯ)ಗಳಲ್ಲಿ 35 ವಿದ್ಯುತ್ ಉಪಕೇಂದ್ರಗಳನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮೂಲಕ ಸ್ಥಾಪನೆ.

  • ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

    ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

    ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ 2,281 ಕೋಟಿ ರೂ. ಮೀಸಲಿಡಲಾಗಿದೆ. ಹಾಗಿದ್ರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೇಳಲಾದ ಹೊಸ ಯೋಜನೆಗಳು ಈ ಕೆಳಗಿನಂತಿವೆ.

    * ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಕಾರ್‍ಪೆಂಟರ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು 30 ಕೋಟಿ ರೂ.ಗಳ ಮೊತ್ತದಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುವುದು.
    * ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * ಜೈನ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.
    * ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್ ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

    * ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಲಾಗುವುದು.
    * ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅತ್ಯುತ್ತಮ ಫಲಿತಾಂಶ ಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
    * ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು.
    * ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ 15 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

    * ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪರಿಷತ್ತಿನ ಕಾರ್ಪಸ್ ಫಂಡ್‍ಗೆ 2018-19ನೇ ಸಾಲಿನಲ್ಲಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆ, 5 ಪದವಿ ಪೂರ್ವ ಮಹಿಳಾ ವಸತಿ ಕಾಲೇಜು, 2 ಮಾದರಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
    * ಎಂ.ಎಸ್.ಡಿ.ಪಿ. ಯೋಜನೆಯಡಿಯಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿರುವ 25 ಸ್ಥಳಗಳಲ್ಲಿ ವಿದ್ಯಾರ್ಥಿನಿಲಯ/ಮಾದರಿ/ಆದರ್ಶ ಶಾಲೆ/ ವಸತಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
    *25 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸುವುದು. ಎಲ್ಲಾ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಲಾಗುವುದು. ಐದು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು.

    * 5 ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸ್ತುತ ವಿಜ್ಞಾನ ವಿಭಾಗವಿದ್ದು, ಜೊತೆಗೆ ವಾಣಿಜ್ಯ ವಿಭಾಗ ಪ್ರಾರಂಭಿಸಲಾಗುವುದು. 10 ಮೊರಾರ್ಜಿ ದೇಸಾಯಿ ವಸತಿ ಶಾಲೆ ದಾಖಲಾತಿ ಸಂಖ್ಯಾಬಲ 50 ರಿಂದ 60ಕ್ಕೆ ಹೆಚ್ಚಿಸಲಾಗುವುದು.
    * ದಾಖಲಾತಿ ಪಡೆಯಲು ಪೋಷಕರ ವರಮಾನ ವಿದ್ಯಾರ್ಥಿನಿಲಯಗಳಿಗೆ 44,500 ರೂ ಹಾಗೂ ವಸತಿ ಶಾಲೆಗಳಿಗೆ 1 ಲಕ್ಷ ರೂ. ಇದ್ದು, ಇದನ್ನು 2.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
    * ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ ನೀಡಲಾಗುವುದು.

    * ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಲ್ಲಾ ವಸತಿ ಶಾಲೆಯ/ಕಾಲೇಜುಗಳ ಪ್ರತಿ ವಿದ್ಯಾರ್ಥಿಗೆ ಆಹಾರ ಭತ್ಯೆಯನ್ನು ಮಾಸಿಕ 100 ರೂ.ಗಳಷ್ಟು ಹೆಚ್ಚಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯ/ ವಿದ್ಯಾರ್ಥಿಗಳ ಭೋಜನಾ ವೆಚ್ಚದ ದರಗಳನ್ನು ಮಾಹೆಯಾನ 750 ರೂ.ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.
    * ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಗೆ 2000 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

    * ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ 1ನೇ ವರ್ಷದಲ್ಲಿ ಪ್ರವೇಶ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ಯೋಜನೆಯಡಿ 25 ಸಾವಿರ ರೂ.ಗಳನ್ನು ನೀಡಲಾಗುವುದು.
    * ಬಿ.ಎಡ್. ಹಾಗೂ ಡಿ.ಎಡ್. ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹ ಧನ ನೀಡಲಾಗುವುದು.
    * ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು 25,000ಕ್ಕೆ ಹೆಚ್ಚಿಸಲಾಗುವುದು.
    * ನದಾಫ್/ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.ಗಳನ್ನು ಮತ್ತು ದಿ ಬ್ಯಾರಿ ವೆಲ್‍ಫೇರ್ ಅಸೋಸಿಯೇಷನ್‍ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

    * ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.ಗಳ ಅನುದಾನ ನೀಡಲಾಗುವುದು.
    * ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆಯನ್ನು 4000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು.
    * ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿರುವ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸಿ.ಇ.ಟಿ., NEET ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು.
    * ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

    * ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದ ಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು 800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.