Tag: ರಾಜ್ಯ ಶಿಕ್ಷಣ ನೀತಿ

  • 2-3 ದಿನಗಳಲ್ಲಿ SEP ವರದಿ ಸಿಎಂಗೆ ಸಲ್ಲಿಕೆ – ಡಾ.ಸುಧಾಕರ್

    2-3 ದಿನಗಳಲ್ಲಿ SEP ವರದಿ ಸಿಎಂಗೆ ಸಲ್ಲಿಕೆ – ಡಾ.ಸುಧಾಕರ್

    ಬೆಂಗಳೂರು: ಪ್ರೊ.ಸುಖದೇವ್ ಥೋರಟ್ ನೇತೃತ್ವದಲ್ಲಿ ರಚನೆ ಆಗಿರುವ ರಾಜ್ಯ ಶಿಕ್ಷಣ ನೀತಿಯ ಅಂತಿಮ ವರದಿಯನ್ನು 2-3 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಸಲ್ಲಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ (Dr.Sudhakar) ತಿಳಿಸಿದರು.ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯ (SEP) ವರದಿ ಸಿದ್ಧವಾಗಿದೆ. ಇವತ್ತು ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಎಸ್‌ಇಪಿ ಸಮಿತಿ ಸಭೆ ಇದೆ. ಇಲ್ಲಿ ಚರ್ಚೆ ಮಾಡಿದ ನಂತರ ಸಮಯ ತೆಗೆದುಕೊಂಡು ವರದಿಯನ್ನು ಸಿಎಂಗೆ ಕೊಡ್ತೀವಿ. 2-3 ದಿನಗಳಲ್ಲಿ ಸಿಎಂಗೆ ವರದಿ ಸಲ್ಲಿಕೆ ಆಗಬಹುದು ಎಂದರು.

    2021ರಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಅನುಷ್ಠಾನ ಮಾಡಲಾಗಿದೆ. ರಾಜ್ಯದಲ್ಲಿ ಎಸ್‌ಇಪಿ ಮಧ್ಯಂತರ ವರದಿ ಆಧಾರದ ಮೇಲೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನುಷ್ಠಾನ ಆಗಿದೆ. ಶಾಲಾ ಶಿಕ್ಷಣದಲ್ಲಿ ಎಸ್‌ಇಪಿ ಅನುಷ್ಠಾನ ಆಗಿಲ್ಲ. ಎಸ್‌ಇಪಿ ಸಮಿತಿ ವರದಿ ಕೊಟ್ಟ ಬಳಿಕ ಶಾಲಾ ಶಿಕ್ಷಣ ಹಂತದಲ್ಲಿ ಜಾರಿ ಮಾಡಲಾಗುತ್ತದೆ. ಶಾಲಾ ಶಿಕ್ಷಣದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.ಇದನ್ನೂ ಓದಿ: ಎಸ್‌ಜೆಪಿ ಮಹಿಳಾ ಹಾಸ್ಟೆಲ್ ಅವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಗರಂ

  • ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು – ಎಂ.ಸಿ.ಸುಧಾಕರ್

    ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು – ಎಂ.ಸಿ.ಸುಧಾಕರ್

    – ಸೂಕ್ತ ಶಿಕ್ಷಣ ನೀಡುವ ಅಧ್ಯಾಪಕರ ಕೊರತೆ ಬಗ್ಗೆ ಚಿಂತಿಸಿಲ್ಲ ಎಂದ ಸಚಿವ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹೇಳಿಮಾಡಿಸಿದಂತಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದುದ್ದಲ್ಲ, ಶಿಕ್ಷಣಕ್ಕಿಂತ ಸಮಸ್ಯೆಗಳಿಗೆ ಹೆಚ್ಚು ದಾರಿ ಮಾಡಿಕೊಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (Dr. M.C.Sudhakar) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಬಹುಶಿಸ್ತೀಯ, ಬಹು ಆಯ್ಕೆಯ, ಮುಕ್ತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಶಿಕ್ಷಣ ನೀತಿ ಒಂದೇ ಸೂರಿನಡಿ ಎಲ್ಲಾ ವಿಭಾಗಗಳನ್ನು ಹೊಂದಿರುವ ಖಾಸಗಿ ವಿಶ್ವವಿದ್ಯಾಲಯ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿರಬಹುದು. ಆದರೆ ಕೃಷಿ, ಕಾನೂನು, ಇಂಜಿನಿಯರಿಂಗ್, ವೈದ್ಯಕೀಯ ಎಂದೂ ಹಂಚಿಹೋಗಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ಅಸಾಧ್ಯವಾಗಿದೆ ಎಂದರು.ಇದನ್ನೂ ಓದಿ: ಕೇಂದ್ರ ಗೃಹ ಸಚಿವನಾಗಿ ಜಮ್ಮು-ಕಾಶ್ಮೀರ ಭೇಟಿ ಸಮಯದಲ್ಲಿ ಭಯವಾಗುತ್ತಿತ್ತು: ಸುಶೀಲ್ ಕುಮಾರ್ ಶಿಂಧೆ

    ಕಲಾ ವಿಭಾಗದಲ್ಲಿ ಓದುವ ವಿದ್ಯಾರ್ಥಿ ವಿಜ್ಞಾನ ಓದಲು ಬಯಸಿದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಸೂಕ್ತ ಶಿಕ್ಷಣ ನೀಡುವ ಅಧ್ಯಾಪಕರ ಕೊರತೆಯ ಬಗ್ಗೆ ಚಿಂತನೆ ನಡೆಸಿಲ್ಲ. ಕರ್ನಾಟಕದ ಅನೇಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರ ಕೊರತೆಯಿದೆ. 14 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದರೂ ಕೊರತೆ ಮಾತ್ರ ನೀಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದು, ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಕ್ರೆಡಿಟ್ ಸ್ಕೋರ್ ಮತ್ತು ಮುಕ್ತ ಆಯ್ಕೆಗಳನ್ನು ಒಳಗೊಂಡಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ರಾಜ್ಯ ಶಿಕ್ಷಣ ನೀತಿಗಾಗಿ ಆಯೋಗ ರಚಿಸಿ ಮಧ್ಯಂತರ ವರದಿ ಆಧಾರ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿದೆ. ಅತಿಶೀಘ್ರದಲ್ಲಿ ಅಂತಿಮ ವರದಿಯನ್ನು ಕೂಡ ಸ್ವೀಕರಿಸಲಾಗುವುದು ಎಂದು ಭರವಸೆ ನೀಡಿದರು.

    ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಅನೇಕ ಸಮಸ್ಯೆ ಎದುರಿಸುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮತ್ತಷ್ಟು ಸಮಸ್ಯೆಗೆ ಒಳಗಾಗಿತ್ತು. ಆ ಆತಂಕವನ್ನು ರಾಜ್ಯ ಸರ್ಕಾರ ದೂರಗೊಳಿಸಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ, ಬೆಳಸಬೇಕಾಗಿದೆ. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರದ ದೃಷ್ಟಿಯಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಆದ್ಯತೆ ನೀಡಬೇಕು. ಶಿಕ್ಷಣ ಕ್ಷೇತ್ರ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಕೂಡದು ಎಂದು ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.ಇದನ್ನೂಓದಿ: ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜ ಸೇವಕ ರಾಜಣ್ಣಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

    ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದರೂ ಅನೇಕ ಕೊರತೆಗಳನ್ನು ಎದುರಿಸುತ್ತಿದೆ. ಇನ್ನೂ ಹಿಂದುಳಿದ ರಾಜ್ಯಗಳ ಪರಿಸ್ಥಿತಿ ಏನಾಗಿರಬಹುದು? ಈ ವ್ಯವಸ್ಥೆಯಲ್ಲಿ ರಾಷ್ಟ್ರದೂದ್ದಕ್ಕೂ ಒಂದೇ ಶಿಕ್ಷಣ ವ್ಯವಸ್ಥೆ ಜಾರಿ ಹೇಗೆ ಸಾಧ್ಯ? ಪರ್ಯಾಯ ವ್ಯವಸ್ಥೆಗಳನ್ನು ರೂಪಿಸದೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕ್ರಮ ಸರಿಯಾದುದಲ್ಲ. ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪುನರ್ ವಿಮರ್ಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

  • ಸರ್ಕಾರ ನಿಗದಿ ಮಾಡಿದ ಸಮಯದಲ್ಲಿ ರಾಜ್ಯ ಶಿಕ್ಷಣ ನೀತಿ ಸಿದ್ಧಪಡಿಸುತ್ತೇವೆ: ಸುಖ್ ದೇವ್ ತೋರಟ್

    ಸರ್ಕಾರ ನಿಗದಿ ಮಾಡಿದ ಸಮಯದಲ್ಲಿ ರಾಜ್ಯ ಶಿಕ್ಷಣ ನೀತಿ ಸಿದ್ಧಪಡಿಸುತ್ತೇವೆ: ಸುಖ್ ದೇವ್ ತೋರಟ್

    ಬೆಂಗಳೂರು: ಸರ್ಕಾರ ನಿಗದಿ ಮಾಡಿರೋ ಸಮಯದೊಳಗೆ ರಾಜ್ಯ ಶಿಕ್ಷಣ ನೀತಿ (State Education Policy) ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡೋದಾಗಿ ಸರ್ಕಾರ ರಚನೆ ಮಾಡಿರೋ ರಾಜ್ಯ ಶಿಕ್ಷಣ ನೀತಿ ಕಮಿಷನ್ ಅಧ್ಯಕ್ಷ ಸುಖ್ ದೇವ್ ತೋರಟ್ (Sukhadeo Thorat) ತಿಳಿಸಿದ್ದಾರೆ.

    ರಾಜ್ಯ ಶಿಕ್ಷಣ ನೀತಿ ರಚನೆ ಸಂಬಂಧ ಸರ್ಕಾರ ರಚನೆ ಮಾಡಿದ್ದ ಕಮಿಷನ್ ಇಂದು (ಶುಕ್ರವಾರ) ಮೊದಲ‌ ಸಭೆ ನಡೆಸಿತು. ಸಭೆ ಬಳಿಕ ಮಾತಾಡಿದ ಕಮಿಷನ್ ಅಧ್ಯಕ್ಷ ಸುಖ್ ದೇವ್ ತೋರಟ್, ಕಮಿಷನ್‌ಗೆ ಸರ್ಕಾರ ಸಂಪೂರ್ಣ ಅಧಿಕಾರ ಕೊಟ್ಟಿದೆ. ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ನೀತಿ ರಚನೆಗೆ ಸರ್ಕಾರ ಕಮಿಷನ್ ರಚನೆ ಮಾಡಿದೆ. ಮೊದಲ ಸಭೆಯಲ್ಲಿ ಸದ್ಯ ರಾಜ್ಯದಲ್ಲಿ‌ ಇರುವ ವ್ಯವಸ್ಥೆ ಸ್ಟಡಿ ಮಾಡಲಾಗಿದೆ. ಶೈಕ್ಷಣಿಕ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಬೇಕಾದ ಪ್ರಾಥಮಿಕ ಸಭೆ ಮಾಡಿದ್ದೇವೆ. ಸದ್ಯ ರಾಜ್ಯದಲ್ಲಿ‌‌ ಇರೋ ಶಿಕ್ಷಣ ನೀತಿ ಬಗ್ಗೆ ಪರಾಮರ್ಶೆ ಮಾಡಿದ್ದೇವೆ. ಗುಣಮಟ್ಟದ ಶಿಕ್ಷಣದ ಜೊತೆ ವ್ಯಾಲ್ಯುಬೇಸ್ ಶಿಕ್ಷಣ ನೀಡುವುದು ನಮ್ಮ ‌ಮೊದಲ ಆದ್ಯತೆ ಆಗಿರಲಿದೆ. ವರದಿ ಸಿದ್ದತೆ ಈಗ ಪ್ರಾರಂಭ ಮಾಡಲಾಗಿದೆ. 6 ತಿಂಗಳಲ್ಲಿ ಸರ್ಕಾರಕ್ಕೆ ನಮ್ಮ ಕಮಿಷನ್ ವರದಿ ನೀಡಲಿದೆ. ವರದಿ ಜಾರಿ ಮಾಡೋದು ಸರ್ಕಾರಕ್ಕೆ ಬಿಟ್ಟ ನಿರ್ಧಾರ ಎಂದರು. ಇದನ್ನೂ ಓದಿ: ಮುಂದಿನ 23 ದಿನ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಆದೇಶ

    ರಾಜ್ಯದಲ್ಲಿ ಈಗ ಇರುವ ಪಾಲಿಸಿಗಳ ರಿವ್ಯೂ ಮಾಡ್ತೀವಿ. NEP ಸೇರಿದಂತೆ ಹಲವು ಎಜುಕೇಶನ್ ಪಾಲಿಸಿ ರಿವ್ಯೂ ಮಾಡ್ತೀವಿ. ರಿವ್ಯೂ ಮಾಡಿದ ಬಳಿಕ ಚರ್ಚೆ ಮಾಡಿ ಉತ್ತಮ ಪಾಲಿಸಿ ರೆಡಿ ಮಾಡುವ ಕೆಲಸ ಮಾಡ್ತೀವಿ. ಶೈಕ್ಷಣಿಕ ವ್ಯವಸ್ಥೆಗೆ ಅನುಕೂಲವಾಗಿ ಇರೋ ಶಾಲೆಗಳು, ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಆಲ್ ಇಂಡಿಯಾ ಸರ್ವೆ, ನ್ಯಾಷನಲ್ ಸ್ಯಾಂಪಲ್ ಸರ್ವೆ, ನ್ಯಾಕ್ ರಿಪೋರ್ಟ್, ಎಲ್ಲರದ ಅಧ್ಯಯನ ಮಾಡಲಿದೆ. ವಿವಿಧ ವರದಿಯಲ್ಲಿರೋ ಅಂಕಿಅಂಶಗಳನ್ನು ಪಡೆದ ಶಿಕ್ಷಣ ನೀತಿ ಸಿದ್ದ ಮಾಡ್ತೀವಿ. ಕಮಿಷನ್‌ಗೆ 6 ತಿಂಗಳು ಸಾಕಾಗದೇ ಹೋದರೆ ಸಮಯ ವಿಸ್ತರಣೆಗೆ ಸರ್ಕಾರಕ್ಕೆ ಮನವಿ ಮಾಡ್ತೀವಿ ಎಂದು ತಿಳಿಸಿದರು.

    ವರದಿ ಸಿದ್ದ ಮಾಡೋ ಮುನ್ನ ಎಲ್ಲಾ ವಿವಿಯ ವಿಸಿಗಳು, ‌ಶಿಕ್ಷಕರು, ವಿದ್ಯಾರ್ಥಿಗಳು, NGOಗಳು, ಶಿಕ್ಷಣ ಸಂಸ್ಥೆಗಳ ಜೊತೆ ಸಭೆಗಳನ್ನ ಮಾಡ್ತೀವಿ. ರಾಜ್ಯದ 4 ವಿಭಾಗವಾರು ಸಭೆ ಮಾಡ್ತೀವಿ. ಎಲ್ಲರ ಅಭಿಪ್ರಾಯ ‌ಪಡೆದು ಪಾಲಿಸಿ ಸಿದ್ದತೆ ಕ್ರಮವಹಿಸುತ್ತೇವೆ. ಲಭ್ಯ ಇರುವ ಎಲ್ಲಾ ರಿಪೋರ್ಟ್‌ಗಳು, ಅಂಕಿಗಳು, ವಿವಿಧ ಪಾಲಿಸಿಗಳು ಎಲ್ಲವನ್ನು ಅಧ್ಯಯನ ಮಾಡಿ ಪಾಲಿಸಿ ಸಿದ್ದತೆ ಮಾಡ್ತೀವಿ. ಇದೊಂದು ಉತ್ತಮ ಪಾಲಿಸಿ ಆಗಲಿದೆ. ಶಾಶ್ವತವಾಗಿ ಕರ್ನಾಟಕ ಶಿಕ್ಷಣ ವ್ಯವಸ್ಥೆಯನ್ನ ಉತ್ತಮಗೊಳಿಸುವ ಪಾಲಿಸಿ ಇದಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ

    ಕರ್ನಾಟಕದಲ್ಲಿ ಇರೋ ಎಲ್ಲಾ ಶಾಲೆಗಳಿಗೆ ಈ ಪಾಲಿಸಿ ಮಾಡಲಿದ್ದೇವೆ. ಕರ್ನಾಟಕ ಸರ್ಕಾರ ಕೊಟ್ಟಿರೋ ಚೌಕಟ್ಟಿ‌ಲ್ಲಿ ಪಾಲಿಸಿ ಇರಲಿದೆ. ಇದೊಂದು ಸಮಗ್ರವಾದ ವರದಿ ಆಗಲಿದೆ. ಸಭೆಯಲ್ಲಿ ಹೇಗೆ ಪಾಲಿಸಿ ಮಾಡಬೇಕು, ಅದರ ರಚನೆ ಹೇಗೆ ಇರಬೇಕು ಅಂತ ಚರ್ಚೆ ಆಗಿದೆ. ಈಗ ಇರುವ ಪಾಲಿಸಿ ದಾಖಲೆಯಾಗಿ ಇಟ್ಟುಕೊಂಡು ಪಾಲಿಸಿ ರಚನೆಗೆ ನಿರ್ಧಾರ ಮಾಡಲಾಗಿದೆ. ಪಾಲಿಸಿ ರಚನೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಲು 9 ಉಪ ಸಮಿತಿ ಮಾಡಲಾಗಿದೆ. ಉಪ ಸಮಿತಿಗಳು ಒಂದೊಂದು ಕ್ಷೇತ್ರದಲ್ಲಿ ಪರಿಶೀಲನೆ ಮಾಡಿ ವರದಿಯನ್ನು ಕೊಡ್ತಾರೆ. ಅದರ ಆಧಾರದಲ್ಲಿ ಸಮಗ್ರ ವರದಿ ಸಿದ್ದ ಮಾಡ್ತೀವಿ ಅಂತ ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]