Tag: ರಾಜ್ಯ ಸರ್ಕಾರ

  • ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!

    ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ (MUDA Scam) ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ (Inquiry Commission) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ವಿಧಾನ ಮಂಡಲ ಅಧಿವೇಶನಕ್ಕೆ ಮುನ್ನಾ ದಿನವೇ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌ ದೇಸಾಯಿ (PN Desai) ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಅಲ್ಲದೇ ಸಂಪೂರ್ಣಾ ತನಿಖಾ ವರದಿಯನ್ನು 6 ತಿಂಗಳ ಒಳಗೆ ಸಲ್ಲಿಸುವಂತೆ ವಿಚಾರಣಾ ಆಯೋಗಕ್ಕೆ ಸರ್ಕಾರ (Karnataka Govt) ಗಡುವು ನೀಡಿದೆ.

    ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೇ, ಈ ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission Of Inquiry Act, 1952ರ (ವಿಚಾರಣಾ ಆಯೋಗ ಕಾಯ್ದೆ 1952) ನಿಮಯು 3ರ ಉಪನಿಯಮ (1) ಅನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ.

    ಈ ಹಿನ್ನೆಲೆಯಲ್ಲಿ ಆರೋಪಗಳ ಬಗ್ಗೆ, ವಿಚಾರಣೆಯನ್ನು ನಡೆಸಲು Commission Of Inquiry Act, 1952ರ ನಿಮಯು 3ರ ಉಪನಿಯಮ (1) ಅನ್ವಯ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ, ಅವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದೆ.

    ಸದರಿ ವಿಚಾರಣಾ ಆಯೋಗವು Commission Of Inquiry Act, 1952 ಹಾಗೂ Code Of Civil Procedure (ಸಿವಿಲ್ ಪ್ರೊಸೀಜರ್ ಕೋಡ್ 1952) ನಲ್ಲಿನ ಅವಕಾಶದ ಅಡಿ ವಿಚಾರಣೆ ನಡೆಸಲು ಎಲ್ಲಾ ಅಧಿಕಾರ ಹೊಂದಿರುತ್ತದೆ. ತನಿಖೆಯನ್ನು 6 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕೆಂದು ಸರ್ಕಾರವು ಅಪೇಕ್ಷಿಸುತ್ತದೆ. ವಿಚಾರಣಾ ಆಯೋಗದ ಉಲ್ಲೇಖ ನಿಯಮಗಳನ್ನು ಪ್ರತ್ಯೇಕವಾಗಿ ಹೊರಡಿಲಾಗುತ್ತದೆ.

    ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ / ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು/ಆರ್ಥಿಕ ಸಲಹೆಗಾರರು/ ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸತಕ್ಕದ್ದು. ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟಂತೆ ನಗರಾಭಿವೃದ್ಧಿ ಇಲಾಖೆಯ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು/ ದಾಖಲಾತಿಗಳು/ ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.

  • ದುರಹಂಕಾರ ಬಿಟ್ಟು ಜನಪರ ಆಡಳಿತ ನೀಡಿ- ಸಿಎಂ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

    ದುರಹಂಕಾರ ಬಿಟ್ಟು ಜನಪರ ಆಡಳಿತ ನೀಡಿ- ಸಿಎಂ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

    ಉಡುಪಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಕುಂಜಿಬೆಟ್ಟುವಿನ ಕಛೇರಿ ಬಳಿ ಪ್ರತಿಭಟನೆ ನಡೆಯಿತು. ಖಾಲಿ ಚೆಂಬು ಹಿಡಿದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟಿಸಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಶಾಸಕ ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಗುರುರಾಜ್ ಗಂಟಿಹೊಳೆ ಭಾಗಿಯಾದರು.

    ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ದ ಹರಿಹಾಯ್ದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ (Sunil Kumar), ಬೆಲೆ ಏರಿಕೆ ಮಾಡಿ ಉಳಿದ ರಾಜ್ಯಗಳಿಗೆ ಸರಿಸಮಾನವಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 94 ರೂ. ಇದೆ. ಗುಜರಾತ್ ನಲ್ಲಿ 95 ಇದೆ, ಹರಿಯಾಣದಲ್ಲಿ 94 ರೂ. ಇದೆ ಎಂದರು. ಬೆಲೆ ಏರಿಕೆ ಮಾಡಬಾರದು ಐದು ವರ್ಷ ಗ್ಯಾರಂಟಿಯನ್ನು ಕೊಡಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ನಿರಂತರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಈ ರಾಜ್ಯಗಳು ನಮಗೆ ಮೇಲ್ಪಂಕ್ತಿ ಯಾಗಬೇಕುವೆಂದು ಪ್ರಶ್ನೆ ಮಾಡಿದರು. ತೆಲಂಗಾಣದಲ್ಲಿ ರೂ. 107 ಇದೆ, ಈ ಕಾರಣಕ್ಕೋಸ್ಕರ ಕರ್ನಾಟಕದಲ್ಲಿ ರೂ. 103 ಇದೆ. ಕಾಂಗ್ರೆಸ್ ಆಳ್ವಿಕೆ ಇರುವ ಎಲ್ಲಾ ರಾಜ್ಯಗಳಲ್ಲಿ ಬೆಲೆ ಏರಿಕೆ ಆಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಚೊಂಬು ಪ್ರದರ್ಶಿಸಿದಿರಿ. ಇವತ್ತು ರಾಜ್ಯದಲ್ಲಿ ಜನರಿಗೆ ಚೊಂಬು ಕೊಟ್ಟಿದ್ದೀರಿ. 72 ಜನರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಕೊಟ್ಟಿದ್ದಾರಿ. ಅವರ ಟಿಎ, ಡಿಎ, ಪೆಟ್ರೋಲ್ ಖರ್ಚು ಕೊಡಲು ಸರ್ಕಾರ ಈ ದರ ಏರಿಕೆ ಮಾಡಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಯಾವ ಸರ್ಕಾರಗಳು ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಿಲ್ಲ. ರಾಜ್ಯ ಸರ್ಕಾರದ ಆದೇಶದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ. ಆದೇಶ ವಾಪಸ್ ಪಡೆಯುವ ತನಕ ಹೋರಾಟ ನಡೆಯಲಿದೆ. ಸಿದ್ದರಾಮಯ್ಯ ತಾನು ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

    ದುರಹಂಕಾರ ದೂರ ಮಾಡಿ ಜನಪರ ಆಡಳಿತ ನೀಡಿ. ಗ್ಯಾರೆಂಟಿ ಯೋಜನೆಗಳನ್ನು 5 ವರ್ಷ ಮುಂದುವರಿಸಲೇಬೇಕು. ಇದು ಚುನಾವಣೆಯ ಗ್ಯಾರೆಂಟಿಯಲ್ಲ 5 ವರ್ಷದ ಗ್ಯಾರಂಟಿ. ಅಭಿವೃದ್ಧಿ ಚಟುವಟಿಕೆಗಳು ಕೂಡ ಮಾಡಬೇಕು. ಜನರಿಗೆ ಹೆಚ್ಚುವರಿ ತೆರಿಗೆ ಹಾಕಬಾರದು. ಸರ್ಕಾರ ಇನ್ನು ಯಾವುದೇ ತೆರಿಗೆ ಹಾಕಲು ಬಾಕಿ ಇಲ್ಲ. ರಾಜ್ಯ ಸರ್ಕಾರ ತೊಲಗುವವರೆಗೆ ಬಿಜೆಪಿ ಹೋರಾಟ ನಡೆಸುತ್ತದೆ. ವಿಧಾನಸಭೆ ಅಧಿವೇಶನದಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಆಗುತ್ತದೆ. ಆದೇಶ ವಾಪಸ್ ಪಡೆಯುವ ತನಕ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಸುನೀಲ್ ಕುಮಾರ್ ಹೇಳಿದರು.‌

  • ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ; ಸರ್ಕಾರ ಆದೇಶ

    ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ; ಸರ್ಕಾರ ಆದೇಶ

    ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು (Ambedkar Jayanti 2024) ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ನಂ.1 – ಬಾಲಕಿಯರೇ ಮೇಲುಗೈ

    ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ.

  • ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

    ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಕ್ಯಾಬ್ ಚಾಲಕರು (Auto Cab Drivers) ಸಮರ ಸಾರಿದ್ದಾರೆ. ಈ ಹೊತ್ತಿನಲ್ಲಿ ಕೆಲ ಅಗ್ರಿಗೇಟರ್ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ರಾಜ್ಯದಲ್ಲಿ ಬ್ಯಾನ್ ಆಗಿರುವ ಬೈಕ್ ಟ್ಯಾಕ್ಸಿಗೆ ಈಗ ಕೇಂದ್ರ (Central Govt) ಒಪ್ಪಿಗೆ ನೀಡಿದೆ.

    ವೈಟ್ ಬೋರ್ಡ್‍ನಲ್ಲಿ ಬೈಕ್ ಟ್ಯಾಕ್ಸಿ (Bike Taxi) ನಡೆಸಬಹುದು. ರಾಜ್ಯ ಸಾರಿಗೆ ಇಲಾಖೆ ಅನುಮತಿ ನೀಡಬಹುದು ಎಂದು ರಾಜ್ಯ ಸಾರಿಗೆ ಇಲಾಖೆಗೆ ಕೇಂದ್ರ ಸಾರಿಗೆ ಇಲಾಖೆ ಸಲಹೆ ನೀಡಿದೆ. ಇದು ಸದ್ಯ ಆಟೋ ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸಾರಿಗೆ ಇಲಾಖೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದ್ರೆ ಉಗ್ರವಾದ ಹೋರಾಟ ಮಾಡ್ತೀವಿ ಎಂದು ಚಾಲಕರು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟಿಸ್ತಿರೋರು ರೈತರಲ್ಲ, ದೇಶದ್ರೋಹಿಗಳು: ಅನಂತ್‌ ಕುಮಾರ್‌ ಹೆಗಡೆ

    ರಾಜ್ಯ ಸಾರಿಗೆ ಇಲಾಖೆಯ ರೂಲ್ಸ್ ಪ್ರಕಾರ, ವೈಟ್ ಬೋರ್ಡ್ ಟು ವೀಲರ್ ಇರೋದು ಸ್ವಂತಕ್ಕೆ ಬಳಕೆಗೆ ಮಾತ್ರ. ರಾಜ್ಯ ಸಾರಿಗೆ ಇಲಾಖೆ ಕರ್ನಾಟಕದಲ್ಲಿ ವೈಟ್ ಬೋರ್ಡ್ ಹಾಕಿ ಬೈಕ್ ಟ್ಯಾಕ್ಸಿ ನಡೆಸುವುದನ್ನು ಬ್ಯಾನ್ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳಲ್ಲಿ ಬೈಕ್ ಟ್ಯಾಕ್ಸಿ ನಡೆಸಬಹುದು ಎಂದು ಅನುಮತಿ ನೀಡಿತ್ತು. ಆದರೆ ಇದರಿಂದ ಆಕ್ರೋಶಗೊಂಡಿದ್ದ ರಾಜ್ಯ ಆಟೋ ಕ್ಯಾಬ್ ಚಾಲಕರು, ಕಳೆದ ವಾರ ಸಿಎಂ ಜೊತೆ ನಡೆದ ಸಭೆಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಬ್ಯಾನ್ ಮಾಡಬೇಕು ಎಂದು ಮನವಿ ಮಾಡಿದ್ರು. ಇದಕ್ಕೆ ಮಣಿದ ಸರ್ಕಾರ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಲು ಸಾರಿಗೆ ಇಲಾಖೆಯಿಂದ ವರದಿಯನ್ನು ತರಿಸಿಕೊಂಡಿದ್ದಾರಂತೆ. ಈ ಹೊತ್ತಲ್ಲಿ ಕೇಂದ್ರ ಸಾರಿಗೆ ಇಲಾಖೆ ರಾಜ್ಯ ಸಾರಿಗೆ ಇಲಾಖೆಗೆ ಪತ್ರ ಕಳಿಸಿ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಕಾಂಟ್ರಾಕ್ಟ್ ಕ್ಯಾರೆಜ್ ಅಡಿಯಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬಹುದು ಎಂದಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

    ಒಟ್ಟಾರೆ ಸ್ವಂತಕ್ಕೆ ಬಳಕೆ ಮಾಡಲಿರುವ ಬೈಕ್‍ಗಳಲ್ಲಿ ಯಾವುದೇ ಸುರಕ್ಷತೆ ಇಲ್ಲದೇ ಟ್ಯಾಕ್ಸಿ ನಡೆಸುವುದು ಸರಿಯಲ್ಲ. ಆದರೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಾ ಅಥವಾ ತನ್ನ ಹಿಂದಿನ ರೂಲ್ಸ್ ಅನ್ನೇ ಫಾಲೋ ಮಾಡುತ್ತಾ ಎಂದು ಕಾದು ನೋಡಬೇಕಿದೆ.

  • ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.

    ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.

    ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.

  • ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

    ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

    ಬೆಂಗಳೂರು: ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಸಿಬಿಐ (CBI) ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್‌ಗೆ (D.K.Shivakumar) ಬಿಗ್‌ ರಿಲೀಫ್‌ ಸಿಕ್ಕಿದೆ.

    ಬುಧವಾರ ಹೈಕೋರ್ಟ್‌ನಲ್ಲಿ (Karnataka High Court) ಡಿಸಿಎಂ ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ಸಿಜೆ ಪಿ.ಬಿ.ವರಾಲೆ, ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

    ವಿಚಾರಣೆ ವೇಳೆ ಸರ್ಕಾರದ ಆದೇಶವನ್ನು ಎಜಿ ಶಶಿಕಿರಣ್‌ ಶೆಟ್ಟಿ ಅವರು ಹೈಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಸಿಬಿಐ ಪರ ಪ್ರಸನ್ನ ಕುಮಾರ್‌ ಹಾಗೂ ಡಿ.ಕೆ.ಶಿವಕುಮಾರ್‌ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹಾಜರಿದ್ದರು.

    ಸಿಬಿಐಗೆ ಅನುಮತಿ ನೀಡಿರುವ ಅನುಮೋದನೆ ಹಿಂಪಡೆಯಲಾಗಿದೆ ಎಂದು ಮನು ಸಿಂಘ್ವಿ ಕೋರ್ಟ್‌ ಗಮನಕ್ಕೆ ತಂದರು. ಸರ್ಕಾರದ ಆದೇಶ ಪ್ರತಿಯನ್ನು ಓದಿದ ಹೈಕೋರ್ಟ್‌, ನೀವು ಈಗ ಹೊಸ ತೀರ್ಮಾನ ತೆಗೆದುಕೊಂಡು ಬಂದಿದ್ದೀರಿ. ಇದು ಕಾನೂನುಬದ್ಧವಾಗಿದ್ಯಾ ಎಂದು ಸಿಜೆ ಪ್ರಶ್ನಿಸಿದರು. ಈ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇರಲಿಲ್ಲ. ರಾಜ್ಯ ಸರ್ಕಾರ ಕೆಲವೊಂದು ನಿಯಮ ಉಲ್ಲಂಘನೆ ಮಾಡಿದೆ ಎಂದು ಶಶಿಕಿರಣ್‌ ಶೆಟ್ಟಿ ಜೊತೆ ಬಂದಿದ್ದ ಕಪಿಲ್‌ ಸಿಬಲ್‌ ವಾದಿಸಿದರು.

    ಒಂದು ಪಕ್ಷ ಅಧಿಕಾರ ಹೊಂದಿರಬಹುದು. ‘ಬಿ’ ಪಕ್ಷ ಅಧಿಕಾರಕ್ಕೆ ಬರಬಹುದು. ಈ ರೀತಿ ಪದೇ ಪದೆ ಆದರೆ, ಇದು ಆಡಳಿತಕ್ಕೆ ಅಡ್ಡಿ ಉಂಟು ಮಾಡುವುದಿಲ್ಲವೇ? ಪ್ರತಿ ಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದರೆ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ ಎಂದು ಹೈಕೋರ್ಟ್‌ ಪ್ರಶ್ನಿಸಿತು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

    ಸರ್ಕಾರ ಕಾನೂನುಬದ್ಧವಾಗಿ ಈ ಪ್ರಕರಣ ವಾಪಸ್‌ ಪಡೆದುಕೊಂಡಿದೆ ಎಂದು ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಆದರೆ ಸಿಬಿಐ ಪರ ವಕೀಲರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಈ ಹಂತದಲ್ಲಿ ಅಸಮಂಜಸ ಎಂದು ಸಿಬಿಐ ಪರ ವಕೀಲರು ಹೇಳಿದರು.

    ಈಗಾಗಲೇ ಸರ್ಕಾರ ಪ್ರಕರಣ ವಾಪಸ್‌ ಪಡೆದಿದೆ. ಈ ಪ್ರಕರಣದಲ್ಲಿ ಹೈಕೋರ್ಟ್‌ ಅರ್ಜಿ ವಿಚಾರಣೆ ಅನೂರ್ಜಿತ. ಈ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬೇಕಿಲ್ಲ ಎಂದು ಡಿಕೆಶಿ ಪರ ವಕೀಲರು ವಾದಿಸಿದರು. ಈ ವೇಳೆ ಹೈಕೋರ್ಟ್‌, ಸಂಪುಟದಲ್ಲಿ ಅಂತಿಮ ತೀರ್ಮಾನ ಆಗಿದೆಯಾ? ಸಂಪುಟದ ತೀರ್ಮಾನ ಸಿಬಿಐ ಪ್ರಶ್ನೆ ಮಾಡುತ್ತಿದೆಯಾ ಎಂದು ಕೇಳಿತು. ಆಗ ಡಿಕೆ ಪರ ವಕೀಲ, ಇಲ್ಲ ಸಿಬಿಐ ಇದುವರೆಗೂ ಸರ್ಕಾರದ ಆದೇಶ ಪ್ರಶ್ನಿಸಿಲ್ಲ. ಸಿಬಿಐ ಪೂರ್ವಾನುಮತಿ ಹಿಂಪಡೆದಿದೆ. ನಾವು ವಾದ ಮಾಡುವ ಅವಶ್ಯಕತೆ ಇಲ್ಲ. ನಾವು ಮೇಲ್ಮನವಿ ಹಿಂಪಡೆಯುತ್ತೇವೆ ಎಂದು ತಿಳಿಸಿದರು.

    ಈಗಾಗಲೇ ತನಿಖೆ ಪೂರ್ಣ ಆಗುವ ಹಂತದಲ್ಲಿ ಇದೆ. ಸಿಬಿಐ ಎಫ್‌ಐಆರ್‌ ದಾಖಲಿಸಿದ ಮೇಲೆ ಅನುಮೋದನೆ ನೀಡಿರುವುದನ್ನು ಹಿಂಪಡೆಯಬಹುದೇ ಎಂಬ ಪ್ರಶ್ನೆಯೂ ಇದೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳು ಇದ್ದಾವೆ ಎಂದು ಸಿಬಿಐ ಪರ ವಕೀಲರು ಹೇಳಿದರು. ಇದಕ್ಕೆ ಹೈಕೋರ್ಟ್‌, ದಿನಪತ್ರಿಕೆ ಸುದ್ದಿಯ ಮೇಲೆ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕಾನೂನು ಏನು ಹೇಳುತ್ತೆ ಎಂಬುದರ ಮೇಲೆ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು. ಇದನ್ನೂ ಓದಿ: ಡಿಕೆಶಿಯಂತೆ ನಾಗೇಂದ್ರ ಮೇಲಿನ ಕೇಸ್‌ ಹಿಂಪಡೆಯಲಿ – ಸರ್ಕಾರಕ್ಕೆ ರೆಡ್ಡಿ ಆಗ್ರಹ

    ಈಗಾಗಲೇ ಬೇರೆ ಪ್ರಕರಣದಲ್ಲಿ ಅನುಮತಿ ವಾಪಸ್‌ ಪಡೆದು ಕೋರ್ಟ್‌ ಮಧ್ಯ ಪ್ರವೇಶ ಮಾಡಿದೆ. ಹಳೆಯ ಆದೇಶದ ಪ್ರಕಾರ ಸಿಬಿಐ ಕೊಟ್ಟ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದ ಸಿಬಿಐ ಪರ ವಕೀಲರು, 1994 ರಲ್ಲಿ ಸುಪ್ರೀಂ ನೀಡಿದ್ದ ಕಾಜಿ ಡೋರ್ಜಿ ಪ್ರಕರಣ ತೀರ್ಪು ಓದಿದರು. ಈ ಪ್ರಕರಣದಲ್ಲಿ ಒಮ್ಮೆ ನೀಡಿದ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದರು.

    ಎಲ್ಲ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ ಕೆಲ ನಿಮಿಷಗಳ ಕಾಲ ವಿಚಾರಣೆಯನ್ನು ಮುಂದೂಡಿತು. ಮತ್ತೆ ವಿಚಾರಣೆ ಆರಂಭಿಸಿ ಹೈಕೋರ್ಟ್‌ ತೀರ್ಪು ಪ್ರಕಟಿಸಿತು. ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತು. ಅಲ್ಲದೇ, ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತೀರ್ಪಿನಲ್ಲಿ ತಿಳಿಸಿತು. ಈ ವೇಳೆ, ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಪರ ವಕೀಲರು ವಾದಿಸಿದ್ದನ್ನು ಹೈಕೋರ್ಟ್‌ ಪರಿಗಣಿಸಲಿಲ್ಲ. ಹೈಕೋರ್ಟ್‌ ತೀರ್ಪಿನಿಂದ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

    ಹೈಕೋರ್ಟ್‌ನಲ್ಲಿ ಬಾಕಿ ಇದ್ದ ರಿಟ್‌ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಡಿಸಿಎಂ ಡಿಕೆಶಿ ಹಿಂಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಕಾರದ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹಾಜರಾಗಿದ್ದರು. ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಂತೆಯೇ, ರಿಟ್‌ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿಯೂ ಶಿವಕುಮಾರ್‌ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೆಮೊ ಪರಿಗಣಿಸಿ ಅರ್ಜಿ ಹಿಂಪಡೆಯುವ ನಿರ್ಧಾರಕ್ಕೆ ಅಸ್ತು ಎಂದು ಆದೇಶಿಸಿತು.

  • ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ

    ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ

    ಯಾದಗಿರಿ: ರಾಜ್ಯ ರ್ಕಾರದ ರೈತ ವಿರೋಧಿ ನೀತಿ ಹಾಗೂ ಬಿಜೆಪಿ ಮುಖಂಡರ ಮೇಲೆ ಹಾಕಿರುವ ಸುಳ್ಳು ಕೇಸ್ ರದ್ದು ಪಡಿಸಬೇಕೆಂದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಣಸಗಿ ಪಟ್ಟಣದಲ್ಲಿ ಮಾಜಿ ಸಚಿವ ರಾಜೂಗೌಡ (Raju Gowda) ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರಗೆ ಮಾಜಿ ಸಚಿವ ರಾಜೂ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

    ಹುಣಸಗಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾಜಿ ಸಚಿವರು ಮಾತನಾಡಿ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ನೀರು ಇದ್ದರೂ ಸರ್ಕಾರ ಅವೈಜ್ಞಾನಿಕ ವಾರಬಂದಿ ಜಾರಿಗೆ ತಂದಿದ್ದಾರೆ. ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕೆಂದರು. ಸುರಪುರ ಭಾಗದ ಶಾಸಕ ಹಾಗೂ ಈ ಭಾಗದ ಜನಪ್ರತಿನಿಧಿಗಳು ಈ ಬಗ್ಗೆ ನೀರು ಹರಿಸುವ ಕೆಲಸ ಮಾಡುತ್ತಿಲ್ಲ. ಶಾಸಕರು ಟೇಬಲ್ ಗುದ್ದಿ ನೀರು ಬಿಡಿಸಬೇಕೆಂದರು.

    ವಿದ್ಯುತ್ ಕೊರತೆಯಿಂದ ರೈತರ ಜಮೀನಿಗೆ ನೀರು ಹರಿಸಿಕೊಳ್ಳಲು ರೈತರಿಗೆ ಸಾಧ್ಯವಾಗುತ್ತಿಲ್ಲ ಐಪಿಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿ ರೈತರ ಬೆಳೆ ಬೆಳೆಯಲು ಅನುಕೂಲ ಮಾಡಬೇಕೆಂದರು. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದು .ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ರಾಜಕೀಯ ದ್ವೇಷಕ್ಕೆ ಸುಳ್ಳು ಕೇಸ್ ಹಾಕಲಾಗಿದೆ.ತಪ್ಪಿತಸ್ಥ ಪಿಎಸ್ ಐ ಅವರನ್ನು ಅಮಾನತು ಮಾಡಬೇಕೆಂದು ರಾಜುಗೌಡ ಒತ್ತಾಯ ಮಾಡಿದ್ದಾರೆ. ನ್ಯಾಯಕ್ಕಾಗಿ ನಾವು ರಾಜ್ಯಪಾಲರ ಹತ್ತಿರ ಹೋಗುತ್ತೆವೆ. ಇಂದಿನ ಪ್ರತಿಭಟನೆ ಟ್ರೈಲರ್ ಇದ್ದು ಇನ್ನೂ ಮುಂದೆ ಪಿಕ್ಚರ್ ಬಾಕಿ ಇದೆ.ವಾರ ಬಂದಿ ರದ್ದು ಮಾಡದಿದ್ದರೆ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯೊಳಗೆ ಮಾತ್ರ ಗಲಾಟೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರ್ತಾರೆ: ಯು.ಟಿ. ಖಾದರ್

    ಈ ವೇಳೆ ಬಿಜೆಪಿ ಮುಖಂಡ ಬಬ್ಲುಗೌಡ ಅವರು ಮಾತನಾಡಿ, ಸರಕಾರ ರೈತರಿಗೆ ಮೋಸ ಮಾಡುವ ಕೆಲಸ ಮಾಡಿದೆ.ರಾಜಕೀಯ ಲಾಭಕ್ಕಾಗಿ ರೈತರ ಜತೆ ಚಲ್ಲಾಟವಾಡಬೇಡಿ ವಾರಬಂದಿ ರದ್ದು ಮಾಡಬೇಕು. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಸುಳ್ಳು ಕೇಸ್ ಹಾಕಿದ್ದ ರದ್ದು ಮಾಡಬೇಕೆಂದು ಆಗ್ರಹಿಸಿದ್ರು.

    ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಸಜ್ಜನ್, ಎಚ್.ಸಿ.ಪಾಟೀಲ್ ಸ್ಥಾವರಮಠ, ಕೃಷ್ಣಾ ಮುದನೂರು, ರಂಗಣ್ಣಗೌಡ ದೇವಿಕೇರಿ, ವೆಂಕಟೇಶ ಸಾಹುಕಾರ, ರಾಜಾ ಹಣಮಪ್ಪ ನಾಯಕ ತಾತಾ, ವಿರೇಶ್ ಚಿಂಚೋಳಿ, ಗದ್ದೆಪ್ಪ ಪೂಜಾರಿ ಸೇರಿದಂತೆ ಅನೇಕರು ಇದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಬೆಂಗಳೂರು: ಕರ್ನಾಟಕ ಪಿಎಸ್‌ಐ ನೇಮಕಾತಿ (PSI Scam) ಹಗರಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ (Karnataka Govt) ಆದೇಶ ಹೊರಡಿಸಿದೆ.

    ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಪ್ರಕರಣ ಏನು?
    2021ರ ಅಕ್ಟೋಬರ್‌ 3 ರಂದು ನಡೆದಿದ್ದ, 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು. ಈ ಬಗ್ಗೆ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಸ್ಪಷ್ಟನೆ ಪಡೆದ ನಂತರ ಈ ಎಲ್ಲ 52 ಅಭ್ಯರ್ಥಿಗಳನ್ನು ಪೊಲೀಸ್‌ ಇಲಾಖೆಯ ಯಾವುದೇ ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್‌ ಮಾಡಲಾಗಿದೆ. ಇದನ್ನೂ ಓದಿ: ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಯಮ ಮೀರಿ ಹುದ್ದೆ ನೀಡಿದ ಆರೋಪ- ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಸರ್ಕಾರಕ್ಕೆ ಪತ್ರ

    ನಿಯಮ ಮೀರಿ ಹುದ್ದೆ ನೀಡಿದ ಆರೋಪ- ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಸರ್ಕಾರಕ್ಕೆ ಪತ್ರ

    ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (Pollution Board) ಪೊಲಿಟಿಕಲ್ ಡ್ರಾಮಾ ನಡೆದಿರುವುದು ಬಯಲಾಗಿದೆ. ಅರ್ಹತೆ ಇಲ್ಲದವರಿಗೆ ಅತ್ಯುನ್ನತ ಹುದ್ದೆ ನೀಡಲಾಗಿದೆ ಎಂದು ಆರೋಪಿಸಿ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

    ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸೂರಿ ಪಾಯಲ್ ಅನ್ನೋ ಐಟಿ ವ್ಯವಸ್ಥಾಪಕರಿಗೆ ಸದಸ್ಯ ಕಾರ್ಯದರ್ಶಿಯ ಹುದ್ದೆಗೆ ಬಡ್ತಿ ಸಿಕ್ಕಿದೆ. ಹುದ್ದೆಯ ವಿದ್ಯಾರ್ಹತೆಯನ್ನೂ ಮೀರಿ ಸೂರಿ ಪಾಯಲ್‍ಗೆ 4 ತಿಂಗಳ ಹಿಂದೆ ಸದಸ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಈ ಹಿಂದೆಯೂ ಸೂರಿ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹುದ್ದೆ ಗಿಟ್ಟಿಸಿಕೊಂಡಿದ್ದ. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬಳಿಕ ಮಾತಾನಾಡದೇ ಇಡೀ ರಸ್ತೆಯಲ್ಲಿ ಓಡಿ ಹೋಗಿದ್ದ.

    ಇದೀಗ ಹೆಚ್‍ಸಿ ಗಿರೀಶ್ ಅವ್ರ ವರ್ಗಾವಣೆಯ ಬಳಿಕ ಸೂರಿಗೆ ಹುದ್ದೆ ನೀಡಲಾಗಿದೆ. ಸೂರಿ ಪಾಯಲ್ ಅಧಿಕಾರ ವಹಿಸಿಕೊಂಡ ಬಳಿಕ ಅಧ್ಯಕ್ಷರ ಅಧಿಕಾರದಲ್ಲಿಯೂ ಕೈಯಾಡಿಸಿದ್ದನು. ಅಧ್ಯಕ್ಷರ ಅಧಿಕಾರದಲ್ಲಿಯೂ ಮೂಗು ತೂರಿಸಿದ್ರಿಂದ ಶಾಂತ್ ಎ ತಿಮ್ಮಯ್ಯ ಸಿಟ್ಟಿಗೆದ್ದಿದ್ದಾರೆ. ಎಲ್ಲಾ ಫೈಲ್ ಗಳನ್ನು ತಮ್ಮ ಬಳಿಯೇ ಬರಬೇಕು ಅಂತಾ ಸೂರಿ ಸೂಚನೆ ನೀಡಿದ್ದಾನೆಂದು ಆರೋಪಿಸಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಲೋಕಸಮರಕ್ಕಾಗಿ BJP- JDS ದೋಸ್ತಿ- NDA ಸಭೆಯಲ್ಲಿ ಭಾಗಿಯಾಗ್ತಾರಾ ಹೆಚ್‍ಡಿಕೆ?

    ಸೂರಿ ಪಾಯಲ್ ಹುದ್ದೆ ರದ್ದುಗೊಳಿಸಿದ ಆದೇಶ ನೀಡಿದ ಅಧ್ಯಕ್ಷರು, ಈಗ ಈ ಸ್ಥಾನಕ್ಕೆ ಬೇರೆ ಅರ್ಹ ಸಿಬ್ಬಂದಿಯನ್ನು ನೇಮಕ ಮಾಡಿ ಅಂತಾ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]