Tag: ರಾಡ್

  • ಮಗಳನ್ನು ತನ್ನ ಮಗನಿಗೆ ಕೊಡಲಿಲ್ಲವೆಂದು ಕೊಡಲಿ, ರಾಡ್ ನಿಂದ ಹಲ್ಲೆ!

    ಮಗಳನ್ನು ತನ್ನ ಮಗನಿಗೆ ಕೊಡಲಿಲ್ಲವೆಂದು ಕೊಡಲಿ, ರಾಡ್ ನಿಂದ ಹಲ್ಲೆ!

    ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕು ಮೈಲಾಪುರ ಗ್ರಾಮದಲ್ಲಿ ನಡೆದಿದೆ.

    ತನ್ನ ಮಗನಿಗೆ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಕುಟುಂಬದ ಮೇಲೆ ರಾಮಣ್ಣ ತನ್ನ ಮಕ್ಕಳೊಂದಿಗೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅದೇ ಗ್ರಾಮದ ನಾಗಪ್ಪ ಬಸಾಪಟ್ಟಣ ಮೇಲೆ ಹಲ್ಲೆ ಮಾಡಿದ್ದು, ರಾಮಣ್ಣ ತಳವಾರ ಮತ್ತು ಆತನ ಮಕ್ಕಳು ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ.

    ಮೈಲಾಪುರ ಗ್ರಾಮದ ನಾಗಪ್ಪನ ಸಹೋದರ ಕೃಷ್ಣಪ್ಪನ ಮಗಳನ್ನು ತನ್ನ ಮಗನಿಗೆ ಮದುವೆ ಮಾಡಿಕೊಡುವಂತೆ ರಾಮಣ್ಣ ತಳವಾರ ಕೇಳಿದ್ದಾನೆ. ತಮ್ಮ ಮಗಳನ್ನು ರಾಮಣ್ಣನ ಮಗನಿಗೆ ಕೊಡುವುದಕ್ಕೆ ನಾಗಪ್ಪ ಮತ್ತು ಕೃಷ್ಣಪ್ಪ ಸಹೋದರು ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಇಂದು ಬೆಳಗ್ಗೆ ಕೊಡಲಿ ಮತ್ತು ರಾಡ್ ನಿಂದ ನಾಗಪ್ಪನ ಮೇಲೆ ರಾಮಣ್ಣ ಮತ್ತು ಆತನ ಮಕ್ಕಳು ಹಲ್ಲೆ ಮಾಡಿದ್ದಾರೆ.

    ಈ ಘಟನೆಯಿಂದ ನಾಗಪ್ಪನ ತಲೆಗೆ ಬಲವಾದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ರವಾನಿಸಲಾಗಿದೆ. ಈ ಘಟನೆ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • 10ಕ್ಕೂ ಹೆಚ್ಚು ಬೈಕ್‍ಗಳಲ್ಲಿ ಬಂದು ಯುವಕನಿಗೆ 50 ಬಾರಿ ಇರಿದು, ರಾಡ್‍ನಿಂದ ಹೊಡೆದ್ರು

    10ಕ್ಕೂ ಹೆಚ್ಚು ಬೈಕ್‍ಗಳಲ್ಲಿ ಬಂದು ಯುವಕನಿಗೆ 50 ಬಾರಿ ಇರಿದು, ರಾಡ್‍ನಿಂದ ಹೊಡೆದ್ರು

    ನವದೆಹಲಿ: ಸುಮಾರು 20 ವರ್ಷ ಅಸಾಪಾಸಿನ ಯುವಕನಿಗೆ ಹಾಡಹಗಲೇ 50 ಬಾರಿ ಇರಿದು, ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ದೆಹಲಿಯ ಖಾನ್‍ಪುರ್ ಪ್ರದೇಶದಲ್ಲಿ ನಡೆದಿದೆ.

    ಆಶಿಶ್ ಹಲ್ಲೆಗೊಳಗಾದ ಯುವಕ. ಗುರುವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಆಶಿಶ್ ಜಿಮ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್‍ಗಳಲ್ಲಿ ಬಂದ ಸುಮಾರು 20 ಯುವಕರು ದುಗ್ಗಲ್ ಕಾಲೋನಿಯ ಬೀದಿಯಲ್ಲಿ ಆಶಿಶ್ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪರಿಚತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಕಪ್ಪು ಬಣ್ಣದ ಶರ್ಟ್ ಧರಿಸಿದ್ದ ಆಶಿಶ್‍ನನ್ನು ಇಬ್ಬರು ವ್ಯಕ್ತಿಗಳು ತಡೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ 10ಕ್ಕೂ ಹೆಚ್ಚು ಬೈಕ್‍ಗಳು ಒಂದರ ಹಿಂದೆ ಒಂದು ಬಂದಿದ್ದು, ಆಶಿಶ್‍ನನ್ನು ಸುತ್ತುವರೆದಿದ್ದಾರೆ. ನಂತರ ಆಶಿಶ್‍ಗೆ ಸುಮಾರು 50 ಬಾರಿ ಇರಿದಿದ್ದು, ರಾಡ್‍ಗಳಿಂದ ಹೊಡೆದಿದ್ದಾರೆ. ಈ ವೇಳೆ ನೆರೆಹೊರೆಯವರು ಇದನ್ನ ತಡೆಯಲು ಮುಂದಾಗಲಿಲ್ಲ. ಆಶಿಶ್ ರಸ್ತೆ ಮೇಲೆ ಬಿದ್ದಿದ್ದು, ದುಷ್ಕರ್ಮಿಗಳು ಬೈಕ್‍ಗಳಲ್ಲಿ ಚಾಕು ಹಾಗೂ ರಾಡ್‍ಗಳನ್ನ ಹಿಡಿದು ಪರಾರಿಯಾಗೋದನ್ನ ವಿಡಿಯೋದಲ್ಲಿ ಕಾಣಬಹುದು.

    ದಾಳಿ ಮಾಡಿದ ತಂಡ ಸ್ಥಳದಿಂದ ಕಾಲ್ಕಿತ್ತ ನಂತರ ಸ್ಥಳೀಯರು ಆಶಿಶ್‍ನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಸದ್ಯ ಆಶಿಶ್ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕನಿಷ್ಟ 50 ಇರಿತದ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಘಟನೆ ಬಗ್ಗೆ ವಿಷಯ ತಿಳಿಸಿದ 1 ಗಂಟೆ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

    ಆಶಿಶ್ ಮೇಲೆ ದಾಳಿ ನಡೆದಿದ್ದು ಯಾಕೆ ಎಂಬುದು ಸ್ಪಷ್ಟವಾಗಿಲ್ಲ. ಆದ್ರೆ ಸ್ಥಳಿಯ ನಿವಾಸಿಗಳು ಹೇಳುವ ಪ್ರಕಾರ ಗುರುವಾರ ಬೆಳಗ್ಗೆ ನಡೆದ ಜಗಳದ ನಂತರ ಯುವಕರ ಗುಂಪು ಆಶಿಶ್ ಮೇಲೆ ದಾಳಿ ಮಾಡಿದೆ. ಬಾಲಕನೊಬ್ಬ ಹೋಳಿ ಪ್ರಯುಕ್ತ ನೀರಿನ ಬಲೂನ್‍ಗಳನ್ನ ಎಸೆದಿದ್ದಕ್ಕೆ ಯುವಕರು ಆತನಿಗೆ ಹೊಡೆಯುತ್ತಿದ್ದರು. ಈ ವೇಳೆ ಆಶಿಶ್ ಮಧ್ಯಪ್ರವೇಶಿಸಿ ಬಾಲಕನಿಗೆ ಹೊಡೆಯೋದನ್ನ ತಡೆದಿದ್ದ ಎಂದು ಹೇಳಲಾಗಿದೆ.

  • 28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    ಕೋಲ್ಕತ್ತಾ: ದೆಹಲಿಯ ನಿರ್ಭಯಾ ಪ್ರಕರಣವನ್ನೇ ಹೋಲುವ ಭಯಾನಕ ಘಟನೆಯೊಂದು ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಬುಡಕಟ್ಟು ಜನಾಂಗದ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಬಳಿಕ ಆಕೆಯ ಗುಪ್ತಾಂಗಕ್ಕೆ ರಾಡೊಂದನ್ನು ತೂರಿದ್ದಾರೆ. ಸಂತ್ರಸ್ಥೆ ಮಾನಸಿಕ ಅಸ್ವಸ್ಥೆ ಎಂಬುದಾಗಿ ವರದಿಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ ರಾಂಪ್ರಬೆಶ್ ಶರ್ಮಾ ಹಾಗೂ 50 ವರ್ಷದ ಅಂಧಾರು ಬರ್ಮನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಡಿಜಿ ಅನೂಜ್ ಶರ್ಮಾ ತಿಳಿಸಿದ್ದಾರೆ.

    ಏನಿದು ಘಟನೆ?: ಫೆಬ್ರವರಿ 18 ರಂದು ಪಶ್ಚಿಮ ಬಂಗಾಳದ ದಿನಜಪೋರ್ ಜಿಲ್ಲೆಯ ಕುಶ್ಮುಂಡಿ ಪ್ರದೇಶದಲ್ಲಿ ಸಂತ್ರಸ್ತೆ ಉತ್ಸವವೊಂದಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಘಟನೆಯ ಬಳಿಕ ಚಿಂತಾನಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಾಯ್ಗಂಜ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಲ್ಡಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಳಿಕ ಮಹಿಳೆ ನೆಲದಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಕೂಡಲೇ ನಮಗೆ ಮಾಹಿತಿ ರವಾನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಆಸ್ಪತ್ರೆಗೆ ದಾಖಲಾಗುವ ವೇಳೆ ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಲ್ಲಿಯವರೆಗೆ ಅವರನ್ನು ಸಿಸಿಯು(ಕ್ರಿಟಿಕಲ್ ಕೇರ್ ಯುನಿಟ್) ನಲ್ಲಿ ಇಡಲಾಗಿತ್ತು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ್ದಾರೆ.

    ಮಹಿಳೆ ಅನಾಥೆ: ಸಂತ್ರಸ್ತೆ 10 ವರ್ಷಗಳ ಹಿಂದೆ ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಒಬ್ಬರೇ ಜೀವನ ನಡೆಸುತ್ತಿದ್ದರು. ಅಲ್ಲದೇ ಕಳೆದ ಕೆಲ ವರ್ಷಗಳ ಹಿಂದೆ ಮದುವೆ ಕೂಡ ಆಗಿದ್ದು, ಈಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದ ಬಳಿಕ ಪತಿ ವಿಚ್ಚೇಧನ ನೀಡಿದ್ದಾನೆ. ಹೀಗಾಗಿ ಮಹಿಳೆ ಒಬ್ಬರೇ ಜೀವಿಸುತ್ತಿದ್ದು, ಇವರಿಗೆ ನೆರೆಹೊರೆಯವರು ಆಹಾರ ಕೊಡುತ್ತಿದ್ದರು.

    ತನಿಖೆಗೆ ಬಿಜೆಪಿ ಒತ್ತಾಯ: ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುವುದು ಇದೇ ಮೊದಲಲ್ಲ. ಇಂತಹ ಅನೇಕ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಇಂತಹ ಪ್ರಕರಣಗಳನ್ನು ಪೊಲೀಸರು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸರು ತಳ್ಳಿ ಹಾಕುವ ಮೊದಲು ಸ್ಪಷ್ಟವಾಗಿ ತನಿಖೆ ನಡೆಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಅಲ್ಲಿನ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

  • ಪಾರ್ಕ್ ನಲ್ಲಿ ಆಟವಾಡುತ್ತಿದ್ದಾಗ ತಲೆಗೆ ಕಬ್ಬಿಣದ ರಾಡ್ ಬಿದ್ದು ಬಾಲಕಿ ದುರ್ಮರಣ!

    ಪಾರ್ಕ್ ನಲ್ಲಿ ಆಟವಾಡುತ್ತಿದ್ದಾಗ ತಲೆಗೆ ಕಬ್ಬಿಣದ ರಾಡ್ ಬಿದ್ದು ಬಾಲಕಿ ದುರ್ಮರಣ!

    ಬೆಂಗಳೂರು: ಬಿಬಿಎಂಪಿ ಪಾರ್ಕ್‍ನಲ್ಲಿ ಬಾಲಕಿಯೊಬ್ಬಳ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ದಾರುಣ ಸಾವನ್ನಪ್ಪಿದ್ದಾಳೆ.

    ಬೆಂಗಳೂರಿನ ಕೆ.ಆರ್.ಪುರಂನ ಎಂವಿಜೆ ಲೇಔಟ್ ನಿವಾಸಿ ಬಾಬು ಹಾಗೂ ವಿಜಯಾ ದಂಪತಿಯ ಪುತ್ರಿ ಪ್ರಿಯಾ ಶನಿವಾರ ಸಂಜೆ ಆಟ ಆಡಲು ತೆರಳಿದ್ದಳು. ಈ ವೇಳೆ ಪಾರ್ಕ್‍ನಲ್ಲಿದ್ದ ಕಬ್ಬಿಣದ ರಾಡ್ ತುಂಡಾಗಿ ಪ್ರಿಯಾಳ ತಲೆ ಮೇಲೆ ಬಿದ್ದಿದೆ.

    ರಾಡ್ ಬಿದ್ದ ರಭಸಕ್ಕೆ ರಕ್ತಸಿಕ್ತ ಮಡುವಿನಲ್ಲಿ ಒದ್ದಾಡಿ ಪ್ರಿಯಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಮಕ್ಕಳ ಉದ್ಯಾನವನದಲ್ಲಿ ಆಟಿಕೆ ವಸ್ತುಗಳ ನಿರ್ಮಾಣ ಕಾಮಗಾರಿ ನಡೀತಿತ್ತು. ನಿರ್ಮಾಣ ಹಂತದಲ್ಲಿರುವಾಗಲೇ ಸಿಬ್ಬಂದಿ ಮಕ್ಕಳಿಗೆ ಆಟವಾಡಲು ಅನುವು ಮಾಡಿಕೊಟ್ಟಿದ್ದಕ್ಕೆ ಈ ಮಗು ಸಾವನ್ನಪ್ಪಿದೆ ಅನ್ನೋ ಆರೋಪವೂ ಕೇಳಿ ಬಂದಿದೆ.

    ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹಾದೇವಪುರ ಠಾಣೆ ಪೊಲೀಸ್ರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಪಾರ್ಕ್ ಉಸ್ತುವಾರಿ ವಹಿಸಿಕೊಂಡಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.