Tag: ರಾಣಾ ದಗ್ಗುಬಾಟಿ

  • ಬಾಹುಬಲಿ ಚಿತ್ರಕ್ಕಾಗಿ ನಿರ್ದೇಶಕ ರಾಜಮೌಳಿ ತಂದಿದ್ದರಂತೆ ₹400 ಕೋಟಿ ಸಾಲ ಬಡ್ಡಿಗೆ

    ಬಾಹುಬಲಿ ಚಿತ್ರಕ್ಕಾಗಿ ನಿರ್ದೇಶಕ ರಾಜಮೌಳಿ ತಂದಿದ್ದರಂತೆ ₹400 ಕೋಟಿ ಸಾಲ ಬಡ್ಡಿಗೆ

    ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ‘ಬಾಹುಬಲಿ’ (Baahubali) ಚಿತ್ರಗಳು ಇತಿಹಾಸ ಬರೆದಿವೆ. ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಬಾಚಿವೆ. ಬಾಹುಬಲಿ 1 ಮತ್ತು ಬಾಹುಬಲಿ 2 ಮಾಡಿದ ದಾಖಲೆ ಅಷ್ಟಿಷ್ಟಲ್ಲ. ಒಂದು ವೇಳೆ ಈ ಸಿನಿಮಾ ಸೋತಿದ್ದರೆ ನಿರ್ದೇಶಕ ರಾಜಮೌಳಿ ಯಾವ ಸ್ಥಿತಿಯಲ್ಲಿ ಇರುತ್ತಿದ್ದರು ಎನ್ನುವ ಅಂದಾಜನ್ನು ನಟ ರಾಣಾ ದುಗ್ಗುಬಾಟಿ ಬಿಚ್ಚಿಟ್ಟಿದ್ದಾರೆ. ಬಹುಶಃ ಆ ನೋವಿನಿಂದ ಈಗಲೂ ರಾಜಮೌಳಿ (Rajamouli) ಬರುವುದಕ್ಕೆ ಅಸಾಧ್ಯವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.

    ಮಾಧ್ಯಮವೊಂದರ ಸಂವಾದಲ್ಲಿ ಮಾತನಾಡಿರುವ ದಗ್ಗುಬಾಟಿ (Rana Daggubati), ‘ಬಾಹುಬಲಿ ಚಿತ್ರ ಮಾಡಲು ರಾಜಮೌಳಿ ಹೆಚ್ಚಿನ ಮೊತ್ತದ ಬಡ್ಡಿಯೊಂದಿಗೆ ನಾಲ್ಕು ನೂರು ಕೋಟಿ ರೂಪಾಯಿ ಸಾಲ ತಂದಿದ್ದರು ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶೇಕಡಾ 24ರ ಬಡ್ಡಿಯಲ್ಲಿ ಆ ಹಣವನ್ನು ಸಾಲವಾಗಿ ತಂದಿದ್ದರು ಎಂದು ಹೇಳುವ ಮೂಲಕ ಬೆಚ್ಚಿ ಬೀಳಿಸಿದ್ದಾರೆ. ಬಾಹುಬಲಿ ಸಿನಿಮಾ ಮಾಡುವಾಗಿನ ಆರ್ಥಿಕ ತೊಂದರೆಯನ್ನು ರಾಜಮೌಳಿ ಹೇಳಿದ್ದರು. ಆದರೆ, ಎಷ್ಟು ಎನ್ನುವುದನ್ನು ಬಹಿರಂಗ ಪಡಿಸಿರಲಿಲ್ಲ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

    ‘ಸಿನಿಮಾದವರು ಹಣ ತರಬೇಕು ಎಂದರೆ ಎರಡೇ ಹಾದಿಗಳಿವೆ. ಒಂದು ಆಸ್ತಿಯನ್ನು ಅಡ ಇಡುವುದು ಅಥವಾ ಮಾರುವುದು. ಮತ್ತೊಂದು ಬಡ್ಡಿ ತೆತ್ತು ಸಾಲ ತರುವುದು. ಈ ಎರಡೂ ಅಪಾಯದ ಮಾರ್ಗಗಳು. ಆದರೆ ವಿಧಿಯಿಲ್ಲ. ಸಿನಿಮಾ ಗೆದ್ದರೆ ಬಚಾವ್ ಆಗುತ್ತೇವೆ. ಸೋತರೆ ಅಷ್ಟೇ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ.

    ಬಾಹುಬಲಿ ಸಿನಿಮಾ ಹಿಟ್ ಆಯಿತು. ಹಾಗಾಗಿ ಎಲ್ಲರೂ ಬಚಾವ್ ಆದೆವು ಎಂದು ಹೇಳಿರುವ ರಾಣಾ, ಸೋತಿದ್ದರೆ ಅದನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ಈಗಲೂ ಆ ಸನ್ನಿವೇಶಗಳು ನನ್ನ ಎದುರಿಗೆ ಬಂದರೆ, ಭಯವಾಗುತ್ತದೆ ಎಂದಿದ್ದಾರೆ ರಾಣಾ. ಈ ಮೂಲಕ ಬಾಹುಬಲಿ ಚಿತ್ರಕ್ಕೆ ರಾಜಮೌಳಿಯು ತಂದಿದ್ದ ಸಾಲದ ಮೊತ್ತವನ್ನು ಅವರು ಬಹಿರಂಗ ಪಡಿಸಿದ್ದಾರೆ

  • ಬಾಹುಬಲಿ ನಟ ರಾಣಾ ದಗ್ಗುಬಾಟಿ, ತಂದೆ ವಿರುದ್ಧ ಭೂಕಬಳಿಕೆ ಕೇಸ್

    ಬಾಹುಬಲಿ ನಟ ರಾಣಾ ದಗ್ಗುಬಾಟಿ, ತಂದೆ ವಿರುದ್ಧ ಭೂಕಬಳಿಕೆ ಕೇಸ್

    ಹೈದರಾಬಾದ್: ಬಾಹುಬಲಿ ನಟ ರಾಣಾ ದಗ್ಗುಬಾಟಿ (Rana Daggubati) ಹಾಗೂ ತಂದೆ ಸುರೇಶ್ ಬಾಬು (Suresh Babu) ವಿರುದ್ಧ ಭೂಕಬಳಿಕೆ ಆರೋಪದ ಅಡಿಯಲ್ಲಿ ಪ್ರಕರಣ (FIR) ದಾಖಲಾಗಿದೆ.

    ಹೈದರಾಬಾದ್‌ನ ಫಿಲ್ಮ್ ನಗರದಲ್ಲಿರುವ (Hyderabad Film City) ಜಮೀನು ಆಸ್ತಿ (Property) ವಿವಾದಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರಮೋದ್ ಕುಮಾರ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

    ತೆಲುಗು ನಟ (Telugu Film Actor) ರಾಣಾ ದಗ್ಗುಬಾಟಿ ಮತ್ತು ಅವರ ತಂದೆ ದಗ್ಗುಬಾಟಿ ಸುರೇಶ್ ಬಾಬು ವಿರುದ್ಧ ಜಾಗವೊಂದರ ವಿಚಾರಕ್ಕೆ ಜಗಳ ನಡೆದಿತ್ತು. ಉದ್ಯಮಿ ಪ್ರಮೋದ್ ಕುಮಾರ್ ರಾಣಾ ದಗ್ಗುಬಾಟಿ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸರು (Police) ಕೇಸ್ ದಾಖಲಿಸದ ಕಾರಣ ಪ್ರಮೋದ್ ಕೋರ್ಟ್ ಮೆಟ್ಟಿಲೇರಿ ನೋಟಿಸ್ ತಂದು ದೂರು ನೀಡಿದ್ದರು. ರಾಣಾ ಮತ್ತು ಅವರ ತಂದೆ ಇಬ್ಬರೂ ಸ್ಥಳ ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದೆ. ನಾಂಪಲ್ಲಿ ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೂರುದಾರ ಉದ್ಯಮಿಯು ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

    ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಆರೋಪ ಇದೇ ಮೊದಲೇನಲ್ಲ. ಈ ಹಿಂದೆ 2017ರ ಔಷಧ ಹಗರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

    ‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

    ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ (Sudeep) ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ (Kabzaa) ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ  “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ (Teaser) ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸುತ್ತಿದೆ. ಉಪೇಂದ್ರ ಸರ್ ಮುಂದೆ ನಿಂತು  ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ಅವರು. ಖ್ಯಾತ ನಟಿ ಶ್ರೀಯಾ ಶರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಚಂದ್ರು ಮತ್ತು ತಂಡದ ಅದ್ಭುತ ಕೆಲಸ ಟೀಸರ್ ನಲ್ಲಿ ಕಾಣುತ್ತಿದೆ. “ಕಬ್ಜ” ಭರ್ಜರಿ ಯಶಸ್ಸು ಕಾಣಲಿ ಎಂದು ರಾಣಾ ದಗ್ಗುಬಾಟಿ ಹಾರೈಸಿದರು.

    ನನಗೆ ಆರ್ ಚಂದ್ರು ಅವರು ಕಥೆ ಹೇಳಲು ಬಂದಾಗ, ಕಥೆ ಕೇಳಿ,  ನಿಜವಾಗಿಯೂ ಈ ರೀತಿ ಮಾಡಲು ಆಗುವುದಾ? ಅಂತಾ ಕೇಳಿದ್ದೆ. ಚಿತ್ರೀಕರಣ ನಡೆಯುತ್ತಿರುವಾಗ ಚಂದ್ರು ಅವರ ಕಾರ್ಯ ವೈಖರಿ ನೋಡಿ ಆಶ್ಚರ್ಯವಾಯಿತು. ಈಗಂತೂ ಟೀಸರ್ ನೋಡಿ ಬಹಳ ಸಂತೋಷವಾಗಿದೆ. ಚಿತ್ರ ಬಿಡುಗಡೆಗೆ  ನಾನು ಕಾತುರದಿಂದ ಕಾಯುತ್ತಿದ್ದೇನೆ. ಹೆಚ್ಚಿನ ಕ್ರೆಡಿಟ್ ಚಂದ್ರು ಅವರಿಗೆ ಸೇರಬೇಕು. ಶ್ರೀಯಾ ಅವರು ಅಭಿನಯ ಕೂಡ ಚೆನ್ನಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ರಾಣಾ (Rana Daggubati) ಅವರಿಗೆ ಧನ್ಯವಾದ ಎಂದರು ರಿಯಲ್ ಸ್ಟಾರ್ ಉಪೇಂದ್ರ. ಇದನ್ನೂ ಓದಿಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

    ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಅದರಲ್ಲೂ ಸೂಪರ್ ಸ್ಟಾರ್ ಉಪೇಂದ್ರ (Upendra) ಅವರ ಜೊತೆ ನಟಿಸಿರುವುದು ಹೆಚ್ಚಿನ ಸಂತೋಷ ತಂದಿದೆ. ತುಂಬಾ ಸಹೃದಯಿ, ಸರಳವ್ಯಕ್ತಿ ಅವರು. ಚಂದ್ರು ಸರ್ ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನ್ನ ಪಾತ್ರ‌ ಕೂಡ ತುಂಬಾ ಚೆನ್ನಾಗಿದೆ ಎಂದ ನಾಯಕಿ ಶ್ರೀಯಾ ಶರಣ್ (Shriya Saran), ಟೀಸರ್ ಬಿಡುಗಡೆ ಮಾಡಿದ ರಾಣಾ  ಅವರಿಗೆ ಧನ್ಯವಾದ ತಿಳಿಸಿದರು.

    “ಕಬ್ಜ” ನನ್ನ ಕನಸು. ಈ ಹಿಂದೆ “ತಾಜ್ ಮಹಲ್”, ” ಚಾರ್ ಮಿನಾರ್”, “ಮೈಲಾರಿ” ನಂತಹ‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದೇನೆ. ಆದರೆ ಇದು ಬೇರೆಯದೆ ತರಹದ ಸಿನಿಮಾ. “ಕಬ್ಜ” ಚಿತ್ರ ಉತ್ತಮವಾಗಿ ಮೂಡಿಬಂದಿದೆ ಅಂದರೆ ಅದು ನನ್ನೊಬ್ಬನಿಂದ ಅಲ್ಲ. ಇಡೀ ತಂಡದಿಂದ. ಅದರಲ್ಲೂ ಉಪೇಂದ್ರ ಸರ್ ಅವರ ಸಹಕಾರ ಅಪಾರ. ಈ ಸಮಯದಲ್ಲಿ ಕಿಚ್ಚ ಸುದೀಪ್ ಅವರನ್ನು ನೆನಪಿಸಿಕೊಳ್ಳಬೇಕು. ನಾನು ಈ ರೀತಿಯ ಪಾತ್ರವಿದೆ ಅಂತ ಹೇಳಿದೆ. ಅವರು ಒಪ್ಪಿಕೊಂಡು ಅಭಿನಯಿಸಿದ್ದಾರೆ.

    ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಶ್ರೀಯಾ ಶರಣ್ ಅವರು ಈ ಚಿತ್ರದಲ್ಲಿ ಅಭಿನಯಿಸಿರುವುದು ಹೆಚ್ಚಿನ ಖುಷಿ ತಂದಿದೆ.  ಟೀಸರ್ ಬಿಡುಗಡೆ ಮಾಡಿಕೊಡಲು ಕೇಳಿದಾಗ ಒಪ್ಪಿ ಬಂದು ಟೀಸರ್ ಬಿಡುಗಡೆ ಮಾಡಿಕೊಟ್ಟಿರುವುದಕ್ಕೆ ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಗೆ ಹಾಗೂ ಇಂದಿನ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಅತಿಥಿಗಳಿಗೆತುಂಬು ಹೃದಯದ ಧನ್ಯವಾದ.  ನಮ್ಮ‌”ಕಬ್ಜ” ಚಿತ್ರ ಏಳು ಭಾಷೆಗಳ ಚಿತ್ರವಲ್ಲ. ಒಟ್ಟು ಒಂಭತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ‌ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು. ಕಲಾ ನಿರ್ದೇಶಕ ಶಿವಕುಮಾರ್, ಛಾಯಾಗ್ರಾಹಕ ಎ ಜೆ ಶೆಟ್ಟಿ  ಸೇರಿದಂತೆ ಚಿತ್ರತಂಡದ ಸದಸ್ಯರು “ಕಬ್ಜ” ದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ಶ್ರೀಯಾ ಶರಣ್ ಜೊತೆ ನಾಳೆ ಬೆಂಗಳೂರಿಗೆ ಬರಲಿದ್ದಾರೆ ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ

    ಶ್ರೀಯಾ ಶರಣ್ ಜೊತೆ ನಾಳೆ ಬೆಂಗಳೂರಿಗೆ ಬರಲಿದ್ದಾರೆ ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ

    ತೆಲುಗಿನ ಖ್ಯಾತ ನಟ ರಾಣಾ ದುಗ್ಗುಬಾಟಿ (Rana Daggubati)ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಾಳೆ ಸಂಜೆ 4.30ಕ್ಕೆ ಬೆಂಗಳೂರಿನ ಮಾಲ್ ವೊಂದರಲ್ಲಿ ಉಪೇಂದ್ರ (Upendra) ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ಟೀಸರ್ (Teaser) ಬಿಡುಗಡೆ ಆಗುತ್ತಿದ್ದು, ಈ ಸಮಾರಂಭಕ್ಕೆ ರಾಣಾ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಇವರೊಂದಿಗೆ ಶ್ರೀಯಾ ಶರಣ್  (Shriya Sharan) ಕೂಡ ಕಾರ್ಯಕ್ರಮಕ್ಕೆ ಸಾಥ್ ನೀಡುತ್ತಿದ್ದಾರೆ.

    ಐದು ಭಾಷೆಗಳಲ್ಲಿ ಕಬ್ಜ ಸಿನಿಮಾದ ಟೀಸರ್ ಬಿಡುಗಡೆ ಆಗುತ್ತಿದ್ದು, ಉಪೇಂದ್ರ ಅವರ ಹುಟ್ಟು ಹಬ್ಬಕ್ಕಾಗಿ ಈ ಉಡುಗೊರೆಯ‍ನ್ನು ನೀಡುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು. ಈವರೆಗೂ ಫಸ್ಟ್ ಲುಕ್, ಪೋಸ್ಟರ್ ಮಾತ್ರ ರಿಲೀಸ್ ಆಗಿದ್ದು ,ಇದೇ ಮೊದಲ ಬಾರಿಗೆ ಕಬ್ಜ ಸಿನಿಮಾದ ಟೀಸರ್ ಅಭಿಮಾನಿಗಳಿಗೆ ನೋಡಲು ಸಿಗುತ್ತಿದೆ. ಹಾಗಾಗಿ ಸಹಜವಾಗಿಯೇ ಉಪ್ಪಿ ಮತ್ತು ಸುದೀಪ್ ಅಭಿಮಾನಿಗಳಿಗೆ ಕಾಯುವಂತಾಗಿದೆ. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

    ಕನ್ನಡದ ಸಿನಿಮಾವೊಂದು ಭಾರತೀಯ ಸಿನಿಮಾ ರಂಗದಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, ಈಗಾಗಲೇ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಹವಾ ಕ್ರಿಯೇಟ್ ಮಾಡಿದೆ. ನಿರ್ದೇಶಕ ಚಂದ್ರು, (R. Chandru) ಕಿಚ್ಚ ಸುದೀಪ್ (Sudeep) ಮತ್ತು ಉಪೇಂದ್ರ ಇದೇ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದು, ಕೆಜಿಎಫ್ 2 ಸಿನಿಮಾದಲ್ಲಿದ್ದ ತಾಂತ್ರಿಕ ತಂಡ ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಿದೆ. ಹಾಗಾಗಿ ಕೆಜಿಎಫ್ 2 ಸಿನಿಮಾಗೆ ಕಬ್ಜವನ್ನು ಹೋಲಿಕೆ ಮಾಡಲಾಗುತ್ತಿದೆ.

    ಉಪ್ಪಿ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ.

    Live Tv
    [brid partner=56869869 player=32851 video=960834 autoplay=true]

  • ರಾಣಾ ದಗ್ಗುಬಾಟಿ ವೈವಾಹಿಕ ಜೀವನದಲ್ಲಿ ಬಿರುಕು?

    ರಾಣಾ ದಗ್ಗುಬಾಟಿ ವೈವಾಹಿಕ ಜೀವನದಲ್ಲಿ ಬಿರುಕು?

    ಟಾಲಿವುಡ್ ಸೂಪರ್ ಸ್ಟಾರ್ ರಾಣಾ ದಗ್ಗುಬಾಟಿ, `ಬಾಹುಬಲಿ’ ಸೂಪರ್ ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ವಿಚಾರವಾಗಿ ಸುದ್ದಿಯಾಗ್ತಿದ್ದ ರಾಣಾ ಈಗ ತಮ್ಮ ವೈಯಕ್ತಿಕ ಬದುಕಿನ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ರಾಣಾ ವೈವಾಹಿಕ ಬದುಕಲ್ಲಿ ಬಿರುಕು ಮೂಡಿದ್ಯಾ ಎಂಬ ಪ್ರಶ್ನೆ ಎದುರಾಗಿದೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸುತ್ತಿರುವ ರಾಣಾ ದಗ್ಗುಬಾಟಿ ತಮ್ಮ ಸಂಸಾರಿಕ ಬದುಕಿನ ವಿಚಾರವಾಗಿ ಟಿಟೌನ್‌ನಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ಮಿಹಿಕಾ ಬಜಾಜ್ ಮತ್ತು ರಾಣಾ ಮದುವೆಯಾಗಿ ಎರಡು ವರ್ಷಗಳಾಗಿದೆ. ತಮ್ಮ ಮದುವೆ ವಾರ್ಷಿಕೋತ್ಸವದ ವೇಳೆಯಲ್ಲಿ ರಾಣಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ಅಷ್ಟು ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ತಮ್ಮ ಪತ್ನಿ ಮಿಹಿಕಾ ಜತೆಗಿರುವ ಫೋಟೋ ಕೂಡ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ:ಇನ್ನೊಂದು ವೀಡಿಯೋ ಇದೆ, ಯಾವಾಗ ಬಿಡುತ್ತಾನೋ ನನಗೆ ಗೊತ್ತಿಲ್ಲ: ಸೋನು ಗೌಡ

    ತಮ್ಮ ಸಿನಿಮಾ ಪ್ರಚಾರಕ್ಕಾಗಿ ಸದಾ ಇನ್ಸ್ಟಾಗ್ರಾಂನಲ್ಲಿ ಆಕ್ಟೀವ್ ಇರುತ್ತಿದ್ದ ರಾಣಾ, ತಮ್ಮ ಅಭಿಮಾನಿಗಳ ಜತೆಗೂ ಮಾತನಾಡುತ್ತಿದ್ದರು. ಈಗ ದಿಢೀರ್ ಅಂತಾ ತಮ್ಮ ಖಾತೆಯಲ್ಲಿನ ಅಷ್ಟು ಫೋಟೋಗಳನ್ನ ಡಿಲೀಟ್ ಮಾಡಿರುವುದು ನೆಟ್ಟಿಗರ ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ. ಮಿಹಿಕಾ ಜೊತೆ ದಾಂಪತ್ಯ ಜೀವನಕ್ಕೆ ರಾಣಾ ಫುಲ್ ಸ್ಟಾಪ್ ಇಟ್ಟಿದ್ದಾರಾ. ರಾಣಾ ವೈವಾಹಿಕ ಬದುಕಲ್ಲಿ ಬಿರುಕು ಮೂಡಿದ್ಯಾ ಎಂಬ ಪ್ರಶ್ನೆಗೆ, ಸ್ವತಃ ರಾಣಾ ಉತ್ತರಿಸುವವೆರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ನಕ್ಸಲ್ ಪಾತ್ರದಲ್ಲಿ ಸಾಯಿ ಪಲ್ಲವಿ : ಇಂತಹ ಪಾತ್ರದಲ್ಲಿ ನಾವು ನೋಡಲಾರೆವು ಎಂದ ಫ್ಯಾನ್ಸ್

    ನಕ್ಸಲ್ ಪಾತ್ರದಲ್ಲಿ ಸಾಯಿ ಪಲ್ಲವಿ : ಇಂತಹ ಪಾತ್ರದಲ್ಲಿ ನಾವು ನೋಡಲಾರೆವು ಎಂದ ಫ್ಯಾನ್ಸ್

    ರಾಣಾ ದಗ್ಗುಬಾಟಿ ನಾಯಕನಾಗಿ ನಟಿಸಿರುವ ‘ವಿರಾಟ ಪರ್ವಂ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಸಾಯಿ ಪಲ್ಲವಿ, ನಕ್ಸಲೈಟ್ ಹುಡುಗಿಯ ಪಾತ್ರವನ್ನು ಮಾಡಿದ್ದಾರೆ. ಟ್ರೇಲರ್ ನಲ್ಲಿ ಈ ಪಾತ್ರವನ್ನು ಹೈಲೆಟ್ ಮಾಡಿ ತೋರಿಸಿದ್ದು, ಪಲ್ಲವಿ ಫ್ಯಾನ್ಸ್ ಕಸಿವಿಸಿಗೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ರಾಣಾ ದಗ್ಗುಬಾಟಿ ಈ ಸಿನಿಮಾದ ಹೀರೋ ಆಗಿದ್ದರೂ, ಪಲ್ಲವಿ ಪಾತ್ರಕ್ಕೂ ಅಷ್ಟೇ ಮಹತ್ವ ನೀಡಲಾಗಿದೆಯಂತೆ. ಹಾಗಾಗಿ ಟ್ರೇಲರ್ ತುಂಬಾ ಸಾಯಿ ಪಲ್ಲವಿಯದ್ದೇ ಅಬ್ಬರ. ನಕ್ಸಲ್ ನಾಯಕನ ಪ್ರೀತಿಗೆ ಬಿದ್ದ ಹುಡುಗಿಯೊಬ್ಬಳು, ತಾನೂ ನಕ್ಸಲ್ ಆಗುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ. ಹಾಗಾಗಿ ಇಂತಹ ಪಾತ್ರವನ್ನು ನೀವು ಮಾಡಬಾರದು ಎಂದು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ವಿಭಿನ್ನ ಪಾತ್ರಗಳ ಮೂಲಕವೇ ಈವರೆಗೂ ಗುರುತಿಸಿಕೊಂಡಿರುವ ಸಾಯಿ ಪಲ್ಲವಿ, ಅಭಿಮಾನಿಗಳ ಮಾತಿಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ಟ್ರೇಲರ್ ಬಗ್ಗೆ ಮಾತನಾಡಿ, ಇದೊಂದು ಭರವಸೆ ತುಂಬುವಂತಹ ಚಿತ್ರ ಎಂದಿದ್ದಾರೆ. 1990ರಲ್ಲಿ ನಡೆದ ಕೆಲ ಸತ್ಯ ಘಟನೆಗಳನ್ನು ಈ ಸಿನಿಮಾಗಾಗಿ ಅಳವಡಿಸಿಕೊಂಡಿದ್ದಾರಂತೆ ನಿರ್ದೇಶಕರು. ಹಾಗಾಗಿ ವಿರಾಟ ಪರ್ವಂ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ ಎನ್ನುವ ನಂಬಿಕೆ ಅವರದ್ದು.

  • ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ರಾಣಾ ದುಗ್ಗುಬಾಟಿ ಕಾಂಬಿನೇಷನ್ ನ ‘ಭೀಮ್ಲಾ ನಾಯಕ್’ ಸಿನಿಮಾ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಧೂಳ್ ಎಬ್ಬಿಸಿದೆ. ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೂಡಲೇ ಸಿನಿಮಾದ ಕೆಲ ಭಾಗಗಳನ್ನು ಕತ್ತರಿಸಿ, ನಾಯಕ ನಟ ಪವನ್ ಕಲ್ಯಾಣ್ ಅವರನ್ನು ಬಂಧಿಸಬೇಕು ಎಂದು ಕುಮ್ಮರಿ ಹಾಗೂ ಶಾಲಿವಾಹನ ಕಾರ್ಪೋರೇಷನ್ ಚೇರ್ಮನ್ ಪುರುಷೋತ್ತಮ ಎನ್ನುವವರು ಗುಂಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ : ಮಾಜಿ ಪತಿಯ ಬಗ್ಗೆ ಬೆಂಕಿಯುಗುಳಿದ ಪೂನಂ ಪಾಂಡೆ : ಟಾಪ್ ನಟಿಯ ದಾಂಪತ್ಯ ಹೀಗೂ ಇತ್ತಾ?

    ದೂರಿನಲ್ಲೇನಿದೆ?

    ಕುಂಬಾರಿಕೆ ಎನ್ನುವುದು ನಮ್ಮ ವೃತ್ತಿ, ಬದುಕಿನ ಭಾಗವೇ ಆಗಿ ಹೋಗಿದೆ. ನಾವು ಕುಂಬಾರಿಕೆಯನ್ನು ಕೇವಲ ವ್ಯಾಪಾರದ ದೃಷ್ಟಿಯಿಂದ ನೋಡಿಲ್ಲ. ಅದನ್ನು ದೇವರಂತೆ ಪೂಜಿಸುತ್ತೇವೆ. ಸಾಕಷ್ಟು ಧಾರ್ಮಿಕ ಕಾರ್ಯಗಳಲ್ಲಿ ನಾವು ತಯಾರಿಸಿದ ಮಡಿಕೆಯನ್ನು ಪೂಜಿಸುತ್ತಾರೆ. ಇಂತಹ ಪೂಜ್ಯನೀಯ ಮಡಿಕೆಯನ್ನು ನಟ ರಾಣಾ ದಗ್ಗುಬಾಟಿ ಅವರು ಕಾಲಿನಿಂದ ಒದೆಯುತ್ತಾರೆ. ಈ ದೃಶ್ಯವು ನಮಗೆ ನೋವನ್ನುಂಟು ಮಾಡಿದೆ. ಹಾಗಾಗಿ ಆ ದೃಶ್ಯವನ್ನು ಕೂಡಲೇ ತೆಗೆಯುವಂತೆ ಪುರುಷೋತ್ತಮ್ ದೂರಿನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ : ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

    ಕತ್ತರಿಸಬೇಕೆಂದಿರುವ ದೃಶ್ಯ ಯಾವುದು?

    ಭೀಮ್ಲಾ ನಾಯಕ್ ವಿರುದ್ಧದ ಸಾಹಸಮಯ ದೃಶ್ಯದಲ್ಲಿ ಭೀಮ್ಲಾ ಮತ್ತು ರಾಣಾ ದುಗ್ಗುಬಾಟಿ ಎದುರಾಗುತ್ತಾರೆ. ಅಲ್ಲಿ ಫೈಟ್ ಸನ್ನಿವೇಶವಿದೆ. ಅದೇ ಸ್ಥಳದಲ್ಲಿ ಮಡಿಕೆ ತುಂಬಿರುವ ಗಾಡಿಯನ್ನು ನಿಲ್ಲಿಸಲಾಗಿದೆ. ರಾಣಾ ಆ ಮಡಿಕೆಯನ್ನು ಒದೆಯುವ ಮೂಲಕ ಬಿಲ್ಡ್‍ಅಪ್ ತೋರಿಸುವ ದೃಶ್ಯ ಅದಾಗಿದೆ. ಈ ದೃಶ್ಯವನ್ನೇ ಚಿತ್ರದಿಂದ ಕೈ ಬಿಡಬೇಕು ಎನ್ನುವುದು ಪುರುಷೋತ್ತಮ್ ವಾದ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

    ಭೀಮ್ಲಾ ನಾಯಕ್ ಸಿನಿಮಾಗೆ ತೊಂದರೆ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಸಿಎಂ ಜಗನ್ ಸರಕಾರಕ್ಕೂ ಭೀಮ್ಲಾ ಸಿನಿಮಾಗೂ ಸಂಬಂಧವಿದೆ ಎನ್ನುವ ಕಾರಣಕ್ಕಾಗಿ ಚಿತ್ರಕ್ಕೆ ಏನೆಲ್ಲ ತೊಂದರೆ ಕೊಡಲಾಗುತ್ತಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಪವನ್ ಕಲ್ಯಾಣ್ ಅಭಿಮಾನಿಗಳು ಅಲ್ಲಲ್ಲಿ ಸರಕಾರದ ವಿರುದ್ಧ ಪ್ರತಿಭಟನೆಯನ್ನೂ ಮಾಡುತ್ತಿದ್ದಾರೆ.

  • ‘ಗರುಡ ಗಮನ ವೃಷಭ ವಾಹನ’ಕ್ಕೆ ನಟ ರಾಣಾ ಫಿದಾ

    ‘ಗರುಡ ಗಮನ ವೃಷಭ ವಾಹನ’ಕ್ಕೆ ನಟ ರಾಣಾ ಫಿದಾ

    ರಾಜ್ ಬಿ. ಶೆಟ್ಟಿ ಹಾಗೂ ರಿಷಭ್ ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಿಡುಗಡೆಗೊಂಡು ಪ್ರೇಕ್ಷಕರ ಗಮನ ಸೆಳೆಯುವ ಮೂಲಕ ಈಗಾಗಲೇ ಸಿನಿ ಅಂಗಳದಲ್ಲಿ ಧೂಳೆಬ್ಬಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಚಿತ್ರವನ್ನು ಕೊಂಡಾಡಿದ್ದರು. ಇದೀಗ ನಟ ರಾಣಾ ದಗ್ಗುಬಾಟಿ ಕೂಡ ಚಿತ್ರಕ್ಕೆ ಫಿದಾ ಆಗಿದ್ದಾರೆ.

    ಹೌದು. ನಟ ರಾನಾ ಅವರು ಕನ್ನಡ ಚಿತ್ರವನ್ನು ನೋಡಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಫಿಲ್ಮ್ ಮೇಕರ್ಸ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿಪ್ರಾಯ ತಿಳಿಸುವಂತೆ ಕೇಳಿಕೊಂಡಿತ್ತು. ದ್ವಲ್ಪ ಸಮಯ ಬಿಡುವು ಮಾಡಿಕೊಂಡು ಗರುಡಗಮನ ವೃಷಭ ವಾಹನ ಚಿತ್ರವನ್ನು ವೀಕ್ಷಿಸಿ. ನಂತರ ಚಿತ್ರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ತಿಳಿಸಿ ಎಂದು ಮನವಿ ಮಾಡಿಕೊಂಡಿತ್ತು. ಅದರಂತೆ ರಾಣಾ ಅವರು ತಮ್ಮ ಅಭಿಪ್ರಾಯವನ್ನು ಕೂಡ ತಿಳಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದ್ದು, ಇಷ್ಟಪಟ್ಟೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕೆಜಿಎಫ್ ಸಿನಿಮಾದ ಹಾಡಿಗೆ ಕಿಲಿ ಪೌಲ್ ಮಸ್ತ್ ಸ್ಟೆಪ್ಸ್

    ಒಟ್ಟಿನಲ್ಲಿ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಕೇವಲ ಚಿತ್ರಪ್ರೇಮಿಗಳು ಮಾತ್ರವಲ್ಲದೇ ವಿವಿಧ ಸಿನಿಮಾರಂಗದ ಸೆಲೆಬ್ರಿಟಿಗಳು ಕೂಡ ಇಷ್ಟಪಟ್ಟಿದ್ದಾರೆ. ಸಿನಿಮಾಗೆ RGV ಮನಸೋತಿದ್ದಾರೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ RGV, ನಿರ್ದೇಶಕ ರಾಜ್ ಬಿ ಶೆಟ್ಟಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ RGV, ಚಿತ್ರವನ್ನು ಹಾಗೂ ರಾಜ್ ಬಿ ಶೆಟ್ಟಿಯವರ ಅಭಿನಯವನ್ನು ಒಂದಷ್ಟು ವಿಜ್ಞಾನ ಪದಗಳಲ್ಲಿ ಬಣ್ಣಿಸಿದ್ದಾರೆ. ಈ ಸಿನಿಮಾ ಮತ್ತೊಂದು ಲೆವೆಲ್ ನಲ್ಲಿದೆ. ರಾಜ್ ಬಿ ಶೆಟ್ಟಿ ಪಾತ್ರಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಈ ಮೂಲಕ ಅವರು ಸಂಪೂರ್ಣ ರೂಪಾಂತರ ಹೊಂದಿದ್ದಾರೆ ಎಂದು ಹೇಳಿ ಇಡೀ ಚಿತ್ರ ‘ಅಲ್ಟ್ರಾಸ್ಕೋಪಿಕ್’ ಎಂದು ಹಾಡಿ ಹೊಗಳಿದ್ದರು.

    ಕಳೆದ ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ರಿಲೀಸ್ ಆಗಿದೆ. ಥಿಯೇಟರ್ ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಬಳಿಕ ZEE5 Mnn(ZEE5 OTT)ಯಲ್ಲಿಯೂ ಕಮಾಲ್ ಮಾಡುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ZEE5 ಒಟಿಟಿಗೆ ಎಂಟ್ರಿ ಕೊಟ್ಟಿದ್ದ ಈ ಸಿನಿಮಾ ಕೇವಲ ಮೂರೇ ದಿನದಲ್ಲಿ ದಾಖಲೆ ಬರೆದಿದೆ. `ಗರುಡ ಗಮನ ವೃಷಭ ವಾಹನ’ ಸಿನಿಮಾ ಮೊದಲು 3 ದಿನಗಳಲ್ಲಿಗಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಕಂಡಿದೆ. ಇದನ್ನೂ ಓದಿ: ‘ತೋತಾಪುರಿ’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಸಿಕ್ತು ಸಿಹಿಸುದ್ದಿ- ಜನವರಿ 24ಕ್ಕೆ ಆಡಿಯೋ ಟೀಸರ್ ರಿಲೀಸ್

  • ಶಾರೂಖ್, ನಯನ ತಾರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ರಾಣಾ ದಗ್ಗುಬಾಟಿ

    ಶಾರೂಖ್, ನಯನ ತಾರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ರಾಣಾ ದಗ್ಗುಬಾಟಿ

    ಮುಂಬೈ: ಬಾಲಿವುಡ್ ಬಾದ್ ಷಾ ನಟ ಶಾರೂಖ್ ಖಾನ್ ಹಾಗೂ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹೊಸ ಸಿನಿಮಾ ಸೆಟ್ಟೇರಿದ್ದು, ಈ ಸಿನಿಮಾಕ್ಕೆ ನಟ ರಾಣಾ ದಗುಬಾಟಿ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

    ಪಠಾಣ್ ಸಿನಿಮಾದದಲ್ಲಿ ಶಾರೂಖ್ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ನಿರ್ದೇಶಕ ಆಟ್ಲಿ ಆ್ಯಕ್ಷನ್ ಕಟ್ ಹೇಳುತ್ತಿರುವ ಇನ್ನೂ ಹೆಸರಿಡದ ಸಿನಿಮಾದ ಚಿತ್ರೀಕರಣದಲ್ಲಿ ಶಾರೂಖ್ ನಿರತರಾಗಿದ್ದು, ಈ ಸಿನಿಮಾದಲ್ಲಿ ಶಾರೂಖ್‍ಗೆ ಜೋಡಿಯಾಗಿ ನಯನತಾರಾ ಕಾಣಿಸಿಕೊಂಡಿಸಿದ್ದಾರೆ. ಈಗಾಗಲೇ ಕಳೆದ 10 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇದೀಗ ಈ ಸಿನಿಮಾದ ಎರಡನೇ ಶೆಡ್ಯೂಲ್‍ಗಾಗಿ ಚಿತ್ರತಂಡ ಮುಂಬೈಗೆ ಹಾರಿದೆ. ಇದನ್ನೂ ಓದಿ: ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್

    ಈ ಎಲ್ಲದರ ಮಧ್ಯೆ ಈ ಸಿನಿಮಾದಲ್ಲಿ ಶಾರೂಕ್‍ಗೆ ಖಳ ನಾಯಕನಾಗಿ ರಾಣಾ ದಗ್ಗುಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಬಹುಬಾಷಾ ನಟಿ ಪ್ರಿಯಮಣಿ, ಸಾನ್ಯಾ ಮಲ್ಹೋತ್ರಾ ಕೂಡ ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಇತ್ತೀಚೆಗಷ್ಟೇ ಪುಣೆಯಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಪ್ರಿಯಾಮಣಿ ಸೆಟ್‍ಗೆ ಭೇಟಿ ನೀಡಿದ್ದು, ಮತ್ತಷ್ಟು ಕೂತುಹಲ ಕೆರಳಿಸಿದೆ. ಇದನ್ನೂ ಓದಿ:ಹಾಸನದಲ್ಲೊಂದು ತ್ರಿಕೋನ ಪ್ರೇಮ ಕಥೆ – ವಿಷ ಸೇವಿಸಿದವಳ ಆಯ್ಕೆ ಬಳಿಕ ಮತ್ತೊಬ್ಬಳು ಕೊಟ್ಟಿದ್ದೇಕೆ ಎಚ್ಚರಿಕೆ.?

    ಒಟ್ಟಾರೆ ಬಾಹುಬಲಿಯಲ್ಲಿ ನೆಗೆಟಿವ್ ರೋಲ್‍ನಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಈ ಸಿನಿಮಾದಲ್ಲಿಯೂ ಶಾರೂಖ್‍ಗೆ ಖಳನಾಯನಾಗಿ ಕಾಣಿಸಿಕೊಳ್ಳಲಿದ್ದಾರಾ ಎಂದು ಕಾದು ನೋಡಬೇಕಾಗಿದೆ.

  • ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

    ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

    – 2017ರ ಡ್ರಗ್ಸ್ ಕೇಸ್, ಸೆ.2 ರಿಂದ 22ರೊಳಗೆ ವಿಚಾರಣೆ

    ನವದೆಹಲಿ: ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾವಿದರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ರವಿ ತೇಜ ಮತ್ತು ಚಾರ್ಮಿ ಕೌರ್ ಸೇರಿದಂತೆ 10 ಜನರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.

    ಸೆಪ್ಟೆಂಬರ್ 6ಕ್ಕೆ ರಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 8ಕ್ಕೆ ರಾಣಾ ದಗ್ಗುಬಾಟಿ ಮತ್ತು ಸೆಪ್ಟೆಂಬರ್ 9ರಂದು ರವಿತೇಜ ಹೈದರಬಾದ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕಲಾವಿದ ಜೊತೆ ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಆಗಸ್ಟ್ 31ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ರವಿತೇಜ ಡ್ರೈವರ್ ಮತ್ತು ‘ಎಫ್’ ಕ್ಲಬ್ ನ ‘ಜಿಎಂ’ ಹೆಸರಿನ ವ್ಯಕ್ತಿಗೂ ನೋಟಿಸ್ ನೀಡಲಾಗಿದೆ. ಇವರೆಲ್ಲರ ವಿಚಾರಣೆ ಸೆಪ್ಟೆಂಬರ್ 2ರಿಂದ 22ರೊಳಗೆ ನಡೆಯಲಿದೆ.

    12 ಲಕ್ಷ ಮೌಲ್ಯದ ಡ್ರಗ್ಸ್, 12 ಕೇಸ್:
    2017ರಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ತೆಲಂಗಾಣದ ಅಬಕಾರಿ ಇಲಾಖೆ, 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡು ಒಟ್ಟು 12 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಇದೇ ಪ್ರಕರಣದಲ್ಲಿ ಟಾಲಿವುಡ್ ಕಲಾವಿದರ ಹೆಸರು ಕೇಳಿ ಬಂದರೂ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಎಸ್‍ಐಟಿ ಯಾರನ್ನೂ ಆರೋಪಿಗಳೆಂದು ಪರಿಗಣಿಸಿರಲಿಲ್ಲ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಸುಶಾಂತ್ ಕೇಸ್ – ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ

    62 ಜನರ ಕೂದಲು, ಉಗುರು ಮಾದರಿ ಸಂಗ್ರಹ:
    2017 ಜುಲೈನಲ್ಲಿ ಎಸ್‍ಐಟಿ ಟಾಲಿವುಡ್ ಕಲಾವಿದರು ಸೇರಿದಂತೆ 62 ಜನರ ಕೂದಲು ಮತ್ತು ಉಗುರು ಮಾದರಿಯನ್ನು ಸಂಗ್ರಹಿಸಿತ್ತು. ಆದ್ರೆ ಈ ವರದಿಯಲ್ಲಿ ಎಸ್‍ಐಟಿಗೆ ಯಾವ ಸುಳಿವು ಸಿಕ್ಕಿರಲಿಲ್ಲ. ಇದೇ ಪ್ರಕರಣದಲ್ಲಿ ಸೌಥ್ ಆಫ್ರಿಕಾ ಮೂಲದ ರಾಫೇಲ್ ಎಲೆಕ್ಸ್ ವಿಕ್ಟರ್ ಎಂಬಾತನನ್ನು ಬಂಧಿಸಲಾಗಿತ್ತು. ಈತ ಮುಂಬೈ ಮತ್ತು ಹೈದರಾಬಾದ್ ನಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಎಸ್‍ಐಟಿ ಚಾರ್ಜ್ ಶೀಟ್ ಸಹ ಸಲ್ಲಿಸಿದೆ. ಇದನ್ನೂ ಓದಿ: ಅರ್ಜುನ್ ರಾಂಪಾಲ್‍ಗೆ ಮತ್ತೆ ಡ್ರಗ್ಸ್ ಕಂಟಕ – ಎನ್‍ಸಿಬಿಯಿಂದ ನೋಟಿಸ್

    2019ರ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ರಕುಲ್ ಪ್ರೀತ್ ಸಿಂಗ್ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಟೀಂ ವಿಚಾರಣೆ ನಡೆಸಿ, ಕೆಲ ಮಾಹಿತಿ ಪಡೆದುಕೊಂಡಿತ್ತು. ಆದ್ರೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರಲಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಸಹ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ಭಾರತಿ ಸಿಂಗ್ ಡ್ರಗ್ಸ್ ಪ್ರಕರಣ- ಇಬ್ಬರು ಎನ್‍ಸಿಬಿ ಅಧಿಕಾರಿಗಳ ಅಮಾನತು