Tag: ರಾಣೇಬೆನ್ನೂರು

  • ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ಕೊಂದ ತಾಯಿ

    ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ಕೊಂದ ತಾಯಿ

    ಹಾವೇರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು (Ranebennur) ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ ಕಾಲನಿ ಗಂಗಮ್ಮ ಗುತ್ತಲ (36) ಹಾಗೂ ಗೌರಿಶಂಕರ ನಗರದ ಅಣ್ಣಪ್ಪ ಮಡಿವಾಳರ (40) ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಪಕ್ಷ ಸಂಘಟನೆ, ಚುನಾವಣಾ ತಯಾರಿ – ಸೆ.18, 19 ರಂದು ಬಿಜೆಪಿಯಿಂದ ಚಿಂತನ, ಮಂಥನ ಸಭೆ

    ಆರೋಪಿಗಳಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಹೀಗಾಗಿ ಆರೋಪಿ ಗಂಗಮ್ಮ ಎರಡು ತಿಂಗಳ ಹಿಂದೆ ತನ್ನ ಪತಿಯನ್ನು ಬಿಟ್ಟು, ಮಗಳನ್ನು ಕರೆದುಕೊಂಡು ಅಣ್ಣಪ್ಪನ ಜೊತೆ ಗುಡ್ಡದ ಆನ್ವೇರಿ ಗ್ರಾಮದಲ್ಲಿ ವಾಸವಾಗಿದ್ದರು. ಆದರೆ ಈ ನಡುವೆ ತಮ್ಮ ಅಕ್ರಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಿದ್ದಾಳೆಂದು ಭಾವಿಸಿ, ಆಕೆಯ ಕೊಲೆಗೆ ಸಂಚು ರೂಪಿಸಿದ್ದರು. ಅದರಂತೆ ಆ.5ರಂದು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹಾವೇರಿ ತಾಲೂಕಿನ ಕುರಗುಂದ ಗ್ರಾಮದ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ಬಳಿ ಸುಟ್ಟು ಹಾಕಲು ಪ್ರಯತ್ನಿಸಿದ್ದರು. ನಂತರ ಬಾಲಕಿಯ ಅರ್ಧದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಗುತ್ತಲ ಠಾಣೆ ಪೊಲೀಸರು ಬಾಲಕಿಯನ್ನು ಅಪರಿಚಿತ ಶವ ಎಂದು ಪರಿಗಣಿಸಿ, ಅಂತ್ಯಸಂಸ್ಕಾರ ನೆರವೇರಿಸಿದ್ದರು.

    ಇದೆಲ್ಲ ನಡೆದ ಸ್ವಲ್ಪ ದಿನಗಳ ಬಳಿಕ ಆರೋಪಿ ಗಂಗಮ್ಮಳ ಪತಿ ಮಂಜುನಾಥ ಮಗುವನ್ನು ನೀಡುವಂತೆ ಬೇಡಿಕೊಂಡಿದ್ದನು. ನೀನು ಅವನ ಜೊತೆಗೆ ಇರು, ಆದರೆ ನನ್ನ ಮಗಳನ್ನು ನನಗೆ ಕೊಟ್ಟುಬಿಡು ಎಂದು ಪಟ್ಟುಹಿಡಿದ್ದಿದ್ದ. ಆಗ ಗಂಗಮ್ಮ ಮಗಳು ಮೈಸೂರಿನಲ್ಲಿದ್ದಾಳೆ, ಅವಳಿಗೆ ಹುಷಾರಿಲ್ಲ, ಆಸ್ಪತ್ರೆಯಲ್ಲಿದ್ದಾಳೆ ಎಂದು ಕಥೆ ಕಟ್ಟಿ, ಒಂದು ತಿಂಗಳು ಕಾಲಕಳೆದಿದ್ದಳು.

    ಇದರಿಂದ ಬೇಸತ್ತ ಪತಿ ಮಂಜುನಾಥ ಮಗಳನ್ನು ಕೊಡಿಸುವಂತೆ ಶಹರ ಠಾಣೆ ಪಿಎಸ್‌ಐ ಗಡ್ಡಪ್ಪ ಗುಂಜುಟಗಿ ಮೊರೆ ಹೋಗಿದ್ದಾನೆ. ಆಗ ಪಿಎಸ್‌ಐ ಮಗಳ ವಿಚಾರವಾದರೆ ಕೂಡಲೇ ಬಗೆಹರಿಸುವೆ ಎಂದು ಗಂಗಮ್ಮ ಮತ್ತು ಅಣ್ಣಪ್ಪನನ್ನು ಕರೆತಂದು ವಿಚಾರಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್‌

  • ಹಾವೇರಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಫಾರ್ಮಸಿ ಕಾಲೇಜಿನ ಕ್ಲರ್ಕ್ ದುರ್ಮರಣ

    ಹಾವೇರಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಫಾರ್ಮಸಿ ಕಾಲೇಜಿನ ಕ್ಲರ್ಕ್ ದುರ್ಮರಣ

    ಹಾವೇರಿ: ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು (Ranebennur) ತಾಲ್ಲೂಕಿನ ಹಲಗೇರಿ (Halageri) ಗ್ರಾಮದಲ್ಲಿ ನಡೆದಿದೆ.

    ಮೃತ ಬೈಕ್ ಸವಾರನನ್ನು ಕವಲೆತ್ತು ಗ್ರಾಮದ ನಿವಾಸಿ ತಿಪ್ಪೇಶ ಕರೂರು (29) ಎಂದು ಗುರುತಿಸಲಾಗಿದ್ದು, ಬಾಪೂಜಿ ಫಾರ್ಮಸಿ ಕಾಲೇಜ್‌ನಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಇದನ್ನೂ ಓದಿ: ಸೆ.13ಕ್ಕೆ ಮಿಜೋರಾಂ, ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ?

    ಕೆಲಸ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಲಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಹಾವೇರಿ | ಕಾಡಿನಿಂದ ನಾಡಿಗೆ ಬಂದು ಮನೆಯಲ್ಲಿ ಅವಿತ ಚಿರತೆ

    ಹಾವೇರಿ | ಕಾಡಿನಿಂದ ನಾಡಿಗೆ ಬಂದು ಮನೆಯಲ್ಲಿ ಅವಿತ ಚಿರತೆ

    ಹಾವೇರಿ: ಬೆಳ್ಳಂಬೆಳಗ್ಗೆ ಕಾಡಿನಿಂದ ನಾಡಿಗೆ ಚಿರತೆಯೊಂದು (Leopard) ಆಗಮಿಸಿ ಮನೆಯಲ್ಲಿ ಅವಿತು ಕುಳಿತ ಘಟನೆ ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರು ನಗರದ ನಾಡಗೇರ್ ಓಣಿಯಲ್ಲಿ ನಡೆದಿದೆ.

    ನಾಡಗೇರ್ ಓಣಿಯ ಖಾಕಿಯವರ ಮನೆಯಲ್ಲಿ ಅವಿತು ಕುಳಿತಿದ್ದ ಚಿರತೆಯ ಕಂಡು ಮನೆಯವರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದರು. ಇದೀಗ 25ಕ್ಕೂ ಅಧಿಕ ಅರಣ್ಯ ಇಲಾಖೆಯ ಸಿಬ್ಬಂದಿ ಸತತ 6 ಗಂಟೆಗಳಿಂದ ಚಿರತೆ ಸೆರೆಯ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಜಿ ಮಾಲೀಕ ಅಶ್ರಫ್‌ನಿಂದ ವಿದ್ಯಾರ್ಥಿನಿ ರೇಪ್‌ ಪ್ರಕರಣ – ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಮಹಿಳಾ ಆಯೋಗ

    ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ಮತ್ತು ಎಸ್ಪಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರವಳಿಕೆ ತಜ್ಞರು ಸ್ಥಳದಲ್ಲಿ ದೌಡಾಯಿಸಿದ್ದಾರೆ. ನುರಿತ ತಜ್ಞರು, ಅರಣ್ಯ ಇಲಾಖೆಯ ಸಿಬ್ಬಂದಿ ಬಲೆ ಹಾಗೂ ಡ್ರೋಣ್ ಕ್ಯಾಮೆರಾಗಳೊಂದಿಗೆ ಚಿರತೆ ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್‌

    ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಇನ್ನು ಮನೆಯಲ್ಲಿ ಅವಿತು ಕುಳಿತ ಚಿರತೆಯನ್ನ ನೋಡಲು ಜನರು ಮುಗಿಬಿದ್ದಿದ್ದಾರೆ.

  • ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

    ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

    ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರಿನ (Ranebennur) ಹೊರವಲಯದಲ್ಲಿರುವ 48ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಇದನ್ನೂ ಓದಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    ಖಾಸಗಿ ಬಸ್ ಪುಣೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ 5 ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಣೇಬೆನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

  • ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

    ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

    ಹಾವೇರಿ: ಸಾರಿಗೆ ಬಸ್‌ಗೆ (Bus) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು (Ranebennur) ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.

    ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ಸ್ಥಳಕ್ಕೆ ಕುಮಾರಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

  • ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ಹಾವೇರಿ: ತಂದೆಯ ಸಾವಿನ ನೋವಿನಲ್ಲೂ ಅಣ್ಣ ತಂಗಿ ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆ ಬರೆದ ಘಟನೆ ಹಾವೇರಿ(Haveri) ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.

    ಪದ್ಮಾವತಿಪುರ ತಾಂಡಾ ನಿವಾಸಿಗಳಾಗಿರುವ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: 25ನೇ ವೆಡ್ಡಿಂಗ್‌ ಆನಿವರ್ಸರಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಹೃದಯಾಘಾತದಿಂದ ಸಾವು

    ಇಂದು ಎಸ್‌ಎಸ್‌ಎಲ್‌ಸಿಯ ಕೊನೆಯ ಪರೀಕ್ಷೆ ಇತ್ತು. ಬೆಳಗ್ಗೆ ತಂದೆ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮನೆಯಲ್ಲಿ ತಂದೆ ಮೃತಪಟ್ಟಿದ್ದರೂ ಸಹ ನಗರದ ಪರೀಕ್ಷೆ ಕೇಂದ್ರಕ್ಕೆ ತೆರಳಿ ಕೊನೆಯ ಹಿಂದಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ಜಾಗ ಕೊಟ್ಟ ರೈತರಿಗೆ 60 ವರ್ಷದಿಂದ ಸಿಗದ ಪರಿಹಾರ – ಡಿಹೆಚ್‍ಓ ಕಾರು ಜಪ್ತಿ

    ಎಲ್ಲಾ ಪರೀಕ್ಷೆಗಳಿಗೆ ತಂದೆಯೇ ಪರೀಕ್ಷಾ ಕೇಂದ್ರದವರೆಗೆ ಹೋಗಿ ಮಕ್ಕಳನ್ನ ಬಿಟ್ಟುಬರುತ್ತಿದ್ದರು. ಆದರೆ ಏಕಾಏಕಿ ಹೃದಯಾಘಾತದಿಂದ ಇಂದು ಬೆಳಗ್ಗೆ ಹನುಮಂತಪ್ಪ ಸಾವನ್ನಪ್ಪಿದ್ದಾರೆ. ವಿದ್ಯಾ ಕುಟುಂಬ ಸದಸ್ಯರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

  • ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್ – ಮೂವರು ಆರೋಪಿಗಳು ಅರೆಸ್ಟ್

    ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್ – ಮೂವರು ಆರೋಪಿಗಳು ಅರೆಸ್ಟ್

    – ರಾಜ್ಯದಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದೆ; ಬೊಮ್ಮಾಯಿ ಕಿಡಿ

    ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸುತ್ತಲೇ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಮತ್ತಿಬ್ಬರು ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಗೆ ಸಂಪುಟ ಒಪ್ಪಿಗೆ – 1 ಕೋಟಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ

    ಸ್ವಾತಿ ಜೊತೆ ಲವ್‌ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಸ್ವಾತಿ ಕೊಲೆ ಮಾಡಿದ್ದ. ಸದ್ಯ ನಯಾಜ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆತನ ಮತ್ತಿಬ್ಬರು ಸ್ನೇಹಿತರಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದರು. ಚಿತ್ರದುರ್ಗದ ಬಳಿ ವಿನಾಯಕ್ ಮತ್ತು ದುರ್ಗಾಚಾರಿಯನ್ನ ಪೊಲೀಸರು ಬಂಧಿಸಿದ್ದರು. ಆದರೀಗ ಈ ಪ್ರಕರಣವು ಹೊಸ ಆಯಾಮ ಪಡೆದುಕೊಂಡಿದೆ. ಇದನ್ನೂ ಓದಿ: ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ – ನಾಲ್ವರಿಗೆ ಗಾಯ

    ಈ ಬಗ್ಗೆ ಹಾವೇರಿ ಎಸ್ಪಿ ಭೇಟಿ ಮಾಡಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಸ್ವಾತಿ ಹತ್ಯೆ ಲವ್ ಜಿಹಾದ್. ಇದಕ್ಕಾಗಿ ಮುಸ್ಲಿಂ ಯುವಕರಿಗೆ ಟ್ರೇನಿಂಗ್ ಕೊಡುತ್ತಿದ್ದಾರೆ. ದುಡ್ಡು ಬೈಕ್, ಕೊಟ್ಟು ಹಿಂದೂ ಯುವತಿಯರನ್ನು ಪಟಾಯಿಸಲು ತರಬೇತಿ ನೀಡಲಾಗ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

    ಸಂಸದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸ್ವಾತಿ ಹತ್ಯೆ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದೆ. ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ. ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಘಟನೆ ನಡೆದು ಒಂದು ವಾರ ಕಳೆದರೂ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

    ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ. ಇದರ ಬಗ್ಗೆ ಪೊಲೀಸರು ನಿಷ್ಠುರವಾಗಿ ಅಪರಾಧಿಗಳನ್ನು ಹಿಡಿದು ಅದರ ಹಿಂದೆ ಇರುವ ಶಕ್ತಿಗಳನ್ನು ಕಡಿವಾಣ ಹಾಕುವುದು ಅತ್ಯಂತ ಅವಶ್ಯ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಬಿಜೆಪಿ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್‌ ಈಶ್ವರ್‌

    ಆದರೆ, ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಗಾಂಭಿರ್ಯತೆಯಿಂದ ತೆಗೆದುಕೊಳ್ಳದೇ ಕೆಲವೇ ದಿನಗಳಲ್ಲಿ ಮರೆತು ಹೋಗುವುದು ಅತ್ಯಂತ ಖಂಡನೀಯ. ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

    ಇನ್ನೂ ಮಾಜಿ ಸಚಿವ ಬಿಸಿ ಪಾಟೀಲ್ ಅವರು ಮಾಸೂರು ಗ್ರಾಮದ ಮೃತ ಸ್ವಾತಿ ಮನೆಗೆ ಭೇಟಿ ನೀಡಿದರು. ಆಕೆಯ ತಾಯಿಗೆ ಸಾಂತ್ವನ ಹೇಳಿ, ಪ್ರಕರಣದ ಮಾಹಿತಿ ಪಡೆದರು. ಪ್ರಕರಣದಲ್ಲಿ ಯಾರೇ ಭಾಗಿಯಾದರೂ ಬಂಧನ ಮಾಡಿ ಶಿಕ್ಷೆ ಕೊಡಿಸುವಂತೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಶಾಸಕರಿಗೆ ಡಿನ್ನರ್‌ – ಡಿಕೆಶಿ ಜೊತೆ ಮೂವರು ಸಚಿವರು ಮುನಿಸು?

    ಮೃತ ಸ್ವಾತಿ ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಸ್ವಾತಿಗೆ ಹೋರಿ ಬೆದರಿಸೋ ಸ್ಪರ್ಧೆಯ ಕ್ರೇಜ್ ಇತ್ತು. ಕೊಲೆ ಮಾಡಿದ ನಯಾಜ್, ದುರ್ಗಾಚಾರಿ, ವಿನಯ್ ಕೂಡಾ ಹೋರಿ ಹಬ್ಬದ ಕ್ರೇಜ್ ಇಟ್ಟುಕೊಂಡಿದ್ದರು. ಹೋರಿ ಬೆದರಿಸೋ ಸ್ಪರ್ಧೆಯೊಂದರಲ್ಲಿ ಪರಿಚಯವಾಗಿದ್ದ ಮೂವರ ಜೊತೆ ಸ್ವಾತಿ ಗೆಳೆತನ ಬೆಳೆಸಿಕೊಂಡಿದ್ದಳು. ಈಗ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಪ್ರಕರಣವು ಸುಖ್ಯಾಂತ ಕಂಡಿದೆ.

  • `ಕೈ’ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತನಿಗೆ 5 ಲಕ್ಷ ಪರಿಹಾರ ವಿತರಣೆ

    `ಕೈ’ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತನಿಗೆ 5 ಲಕ್ಷ ಪರಿಹಾರ ವಿತರಣೆ

    ಹಾವೇರಿ: ಕಾಂಗ್ರೆಸ್ (Congress) ಪಕ್ಷ ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಯಿತು.

    ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬ ಕಾರ್ಯಕರ್ತ ಸಮಾವೇಶದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದನ್ನೂ ಓದಿ: ಮ್ಯಾರಥಾನ್‌ನಲ್ಲಿ ಕುಸಿದು ಬಿದ್ದ ವ್ಯಕ್ತಿ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸತೀಶ್ ಸೈಲ್

    ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಶಾಸಕ ಪ್ರಕಾಶ್ ಕೋಳಿವಾಡಗೆ ಮನವಿ ಮಾಡಿದ್ದರು. ಶಾಸಕ ಪ್ರಕಾಶ್ ಕೋಳಿವಾಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದು 5 ಲಕ್ಷ ರೂ. ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದರು. ಇದನ್ನೂ ಓದಿ: ಚಾಮರಾಜನಗರ| ಊರೊಳಗೆ ನುಗ್ಗಿದ ಚಿರತೆಗೆ ಕರು ಬಲಿ – ಜನರಲ್ಲಿ ಆತಂಕ

    ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಮೃತರ ಕುಟುಂಬಕ್ಕೆ ಚೆಕ್ ವಿತರಿಸಿದರು. ಇದನ್ನೂ ಓದಿ: 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್‌ಆರ್‌ಟಿಸಿ

  • ಎತ್ತಿನಬಂಡಿಗೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ದುರ್ಮರಣ

    ಎತ್ತಿನಬಂಡಿಗೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ದುರ್ಮರಣ

    ಹಾವೇರಿ: ಎತ್ತಿನಬಂಡಿಗೆ (Bullock Cart) ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು (Ranebennur) ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.

    ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು. ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ವಿದೇಶಗಳಿಗೆ ಅಮೆರಿಕ ನೀಡುತ್ತಿದ್ದ ನೆರವಿಗೂ ಕೊಕ್ಕೆ ಹಾಕಿದ ಟ್ರಂಪ್‌ – ಭಾರತದ ಮೇಲೂ ಎಫೆಕ್ಟ್‌?

    ದರ್ಶನ್ ಹಾಗೂ ಆಕಾಶ್ ಮೂರನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನರಿಂದ ಪುಣ್ಯಸ್ನಾನ

  • ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ – 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ

    ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ – 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ

    ಹಾವೇರಿ: ಆಕಸ್ಮಿಕವಾಗಿ ಗುಡಿಸಲು ಮನೆಗೆ ಬೆಂಕಿ ಹತ್ತಿದ ಪರಿಣಾಮ ಗುಡಿಸಲು (Hut) ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು (Ranebennur) ತಾಲೂಕಿನ ಹೊಳೆ ಆನ್ವೇರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನಿಂಗಪ್ಪ ಪೂಜಾರ ಎಂಬವರಿಗೆ ಸೇರಿದ ಗುಡಿಸಲು ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಹಣ, ಬಟ್ಟೆ ಸೇರಿದಂತೆ ಮೂರು ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ದೇವರ ಮುಂದೆ ಹಚ್ಚಿದ ದೀಪದ ಕೆಳಗಡೆ ಬಿದ್ದು ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಗೋವಿನ ಕೆಚ್ಚಲು ಕತ್ತರಿಸಿರೋದು ಭವಿಷ್ಯದ ಅಪಾಯವನ್ನು ಸೂಚಿಸುತ್ತಿದೆ: ಸುಗುಣೇಂದ್ರ ಶ್ರೀ

    ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಸ್ತೆಯ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಲಾರಿ – ಇಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಚಿಂತಾಜನಕ