Tag: ರಾಮದುರ್ಗ

  • ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ – 1.54 ಕೋಟಿ ರೂ. ಜಪ್ತಿ

    ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ – 1.54 ಕೋಟಿ ರೂ. ಜಪ್ತಿ

    ಬೆಳಗಾವಿ: ಮತದಾರರಿಗೆ ಹಂಚುವ ಸಲುವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು (Election Officers) ಜಪ್ತಿಪಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramadurga) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ರಾಮದುರ್ಗ ಬಿಜೆಪಿ (BJP) ಅಭ್ಯರ್ಥಿ ಚಿಕ್ಕರೇವಣ್ಣ ಬುಧವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ (Nomination Papers) ಸಲ್ಲಿಸಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪ ಹೊರಿಸಲಾಗಿತ್ತು. ರಾಮದುರ್ಗ ತುರನೂರು ಬಳಿ ಹಣ ಹಂಚಿಕೆ ಮಾಡುತ್ತಿದ್ದು, ಹಣ ಹಂಚುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ 

    ಈ ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಕಾರು ಚಾಲಕನನ್ನು ಬಂಧಿಸಿದ್ದಾರೆ. ಹಣವನ್ನು (Money) ವಶಕ್ಕೆ ಪಡೆದುಕೊಂಡ ಬಳಿಕ ಈ ಪ್ರಕರಣವನ್ನು ಆದಾಯ ತೆರಿಗೆ (Income Tax) ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

  • ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

    ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

    ಬೆಳಗಾವಿ: ರಾಮದುರ್ಗದಲ್ಲಿ ವಸತಿ ನಿಲಯದಲ್ಲಿ ಊಟ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಅಸ್ವಸ್ಥರಾಗಿದ್ದ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ರಾಮದುರ್ಗ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥರಾಗಿದ್ದ 14 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅದರಲ್ಲಿ ನಾಲ್ವರು ವಿದ್ಯಾರ್ಥಿನಿಯರಿಗೆ ರಾಮದುರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಮದುರ್ಗ ತಹಶಿಲ್ದಾರ್ ಮಾಹಿತಿ ನೀಡಿದ್ದಾರೆ. ಆದರೆ ಹಾಸ್ಟೆಲ್‍ನಲ್ಲಿ ಊಟದ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್‍ನಲ್ಲಿ ಊಟ ಸರಿಯಾಗಿ ಕೊಡಲ್ಲ. ಗುಣಮಟ್ಟದ ಆಹಾರವನ್ನು ಹಾಸ್ಟೆಲ್ ಸಿಬ್ಬಂದಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯರ ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯ ಮೂವರು ಯುವತಿಯರು ನಾಪತ್ತೆ!

  • ಚುಚ್ಚುಮದ್ದು ಪಡೆದು ಮಕ್ಕಳಿಬ್ಬರ ನಿಗೂಢ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

    ಚುಚ್ಚುಮದ್ದು ಪಡೆದು ಮಕ್ಕಳಿಬ್ಬರ ನಿಗೂಢ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

    ಬೆಳಗಾವಿ: ಚುಚ್ಚುಮದ್ದು ಪಡೆದ ಮೂವರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ್ದು, ಮಕ್ಕಳನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಪ್ರಸ್ತುತ ರಾಮದುರ್ಗದಲ್ಲಿ ಮೃತ 14 ತಿಂಗಳ ಮಗು ಮಧು ಮರಣೋತ್ತರ ಪರೀಕ್ಷೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮುಗಿದಿದ್ದು, ಮಗುವಿನ ಮೃತದೇಹದ ಕೈಯನ್ನು ಹಿಡಿದು ಮಗುವಿನ ಅಜ್ಜಿ ಅಂಬುಲೆನ್ಸ್ ಹತ್ತಿದ್ದಾರೆ. ಈ ವೇಳೆ ಮಗುವಿನ ಮುಖ ನೋಡಿದ ಪೋಷಕರ ಕಣ್ಣೀರು ನಿಲ್ಲುತ್ತಿರಲಿಲ್ಲ.

    ಹೇಗಾಯಿತು?
    ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜನವರಿ 13ರಂದು 14 ತಿಂಗಳ ಮಧು ಚುಚ್ಚುಮದ್ದು ಪಡೆದಿದ್ದಳು. ಮಕ್ಕಳಿಗೆ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಸಿಬ್ಬಂದಿ ಚುಚ್ಚುಮದ್ದು ನೀಡಿದ್ದರು. ಬಳಿಕ ಮಗುವಿಗೆ ವಾಂತಿಬೇಧಿ ಕಾಣಿಸಿಕೊಂಡಿತ್ತು. ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಧು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಮೂರು ದಿನಗಳ ಅಂತರದಲ್ಲಿ ಮೂವರು ಮಕ್ಕಳ ಸಾವು ಸಂಭವಿಸಿದೆ. ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಸಿಬ್ಬಂದಿಯಿಂದ ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳಿಗೆ ಚುಚ್ಚುಮದ್ದು ಹಾಗೂ ವಯಸ್ಕರಿಗೆ ಕೋವಿಡ್ ವ್ಯಾಕ್ಸಿನ್ ಒಂದೇ ಕೇಂದ್ರದಲ್ಲಿ ಅಕ್ಕಪಕ್ಕವಿಟ್ಟು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಸಹ ಕೇಳಿಬರುತ್ತಿದೆ.

    ಮಗುವಿನ ಸಾವಿಗೆ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಸಹ ಕೇಳಿಬರುತ್ತಿದೆ. ಈ ಹಿನ್ನೆಲೆ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯ ಮಾಡುತ್ತಿದ್ದಾರೆ. ಇದನ್ನೂ ಓದಿ: 4.50 ಕೋಟಿ ರೂ. ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದ 6 ಮಂದಿ ವಶ