Tag: ರಾಮದೇವರ ಬೆಟ್ಟ

  • ರಾಮದೇವರ ಬೆಟ್ಟಕ್ಕೆ ಪ್ರತಾಪ್ ಸಿಂಹ ಭೇಟಿ – ಪಟ್ಟಾಭಿರಾಮನಿಗೆ ವಿಶೇಷ ಪೂಜೆ ಸಲ್ಲಿಕೆ

    ರಾಮದೇವರ ಬೆಟ್ಟಕ್ಕೆ ಪ್ರತಾಪ್ ಸಿಂಹ ಭೇಟಿ – ಪಟ್ಟಾಭಿರಾಮನಿಗೆ ವಿಶೇಷ ಪೂಜೆ ಸಲ್ಲಿಕೆ

    ರಾಮನಗರ: ಶ್ರಾವಣ ಶನಿವಾರ (Shravan Saturday) ಹಿನ್ನೆಲೆ ರಾಮನಗರದ (Ramanagara) ರಾಮದೇವರ ಬೆಟ್ಟಕ್ಕೆ (Ramadevara Betta) ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ರಾಮದೇವರ ಬೆಟ್ಟ ಹತ್ತಿ ಪಟ್ಟಾಭಿರಾಮನ ದರ್ಶನ ಪಡೆದು ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೊದಲ ಬಾರಿಗೆ ರಾಮದೇವರ ಬೆಟ್ಟಕ್ಕೆ ಬಂದಿದ್ದೇನೆ. ಪ್ರಕೃತಿ ನಡುವೆಯಿರುವ ಪಟ್ಟಾಭಿರಾಮನ ವಿಶೇಷ ದೇವಾಲಯ ಇದು. ಸುಗ್ರೀವ ಈ ದೇವಾಲಯ ನಿರ್ಮಾಣ ಮಾಡಿದ ಇತಿಹಾಸ ಇದೆ. ಇಂದು ಸ್ಥಳೀಯ ಮುಖಂಡರು ಆಹ್ವಾನಿಸಿದ ಹಿನ್ನೆಲೆ ಭೇಟಿ ನೀಡಿದ್ದೇನೆ ಎಂದರು. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?

    ಈ ದೇವಾಲಯ ಮತ್ತಷ್ಟು ಅಭಿವೃದ್ಧಿ ಆಗಬೇಕು, ಮೂಲಭೂತ ಸೌಕರ್ಯಗಳು ಬೇಕು. ಮುಂದೆ 2028ಕ್ಕೆ ಶ್ರೀರಾಮನ ಆಶೀರ್ವಾದದಿಂದ ಬಹುಮತದೊಂದಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರಕ್ಕೆ ಬರಲಿದೆ. ನಮ್ಮ ಸರ್ಕಾರ ಬಂದಮೇಲೆ ಈ ದೇವಾಲಯ ಅಭಿವೃದ್ಧಿಗೆ ಮುಂದಾಗುತ್ತೇವೆ ಎಂದು ತಿಳಿಸಿದರು.  ಇದನ್ನೂ ಓದಿ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

  • ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಚುರುಕು- ರೆಡಿಯಾಗ್ತಿದೆ 50 ಕೋಟಿ ವೆಚ್ಚದ DPR

    ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಚುರುಕು- ರೆಡಿಯಾಗ್ತಿದೆ 50 ಕೋಟಿ ವೆಚ್ಚದ DPR

    ಬೆಂಗಳೂರು: ಹಳೇ ಮೈಸೂರು ಭಾಗದ ರಾಮನಗರದಿಂದ (Ramanagara) ಈ ಬಾರಿ ಹಿಂದುತ್ವದ ಬಲವಾದ ಗಾಳಿ ಬೀಸುವುದು ಫಿಕ್ಸ್ ಆದಂತಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ (Ramadevara Betta) ರಾಮಮಂದಿರ ನಿರ್ಮಾಣ ಸಂಬಂಧ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

    ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣಕ್ಕೆ ಸರ್ಕಾರ ಸಮಗ್ರ ಯೋಜನಾ ವರದಿ ಸಿದ್ಧಪಡಿಸುತ್ತಿದೆ. ಬಜೆಟ್‌ನಲ್ಲಿ (Karnataka Budget 2023) ರಾಮಮಂದಿರ ನಿರ್ಮಾಣ ಘೋಷಣೆ ಮಾಡಿದ್ದ ಸರ್ಕಾರ, ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು 50 ಕೋಟಿ ರೂ. ಅನುದಾನ ಬಿಡುಗಡೆಗೆ ಮುಂದಾಗಿದೆ.

    BASAVARAJ BOMMAI 1

    ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಾಥಮಿಕವಾಗಿ 50 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಯವರ ಅನುಮತಿಯಷ್ಟೇ ಬಾಕಿಯಿದೆ.

    ಅಯೋಧ್ಯೆಯ ರಾಮಮಂದಿರ ಮಾದರಿಯಲ್ಲಿ 19 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚ ಮಾಡಲಾಗ್ತಿದೆ. ಏಸ್ತೆಟಿಕ್ ಆರ್ಕಿಟೆಕ್ಸ್ನ ಖ್ಯಾತ ವಾಸ್ತುಶಿಲ್ಪಿ ಯಶಸ್ವಿನಿ ಶರ್ಮಾ ನೇತೃತ್ವದ ತಂಡ ರಾಮಮಂದಿರದ ವಿನ್ಯಾಸ ಸಿದ್ಧಪಡಿಸುತ್ತಿದೆ. ಇದನ್ನೂ ಓದಿ: ಡ್ರಗ್ಸ್ ದಂಧೆ ಕೇಸ್ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಅಮಾನತು

    ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ (Ashwath Narayan) ಈ ಸಂಬಂಧ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಸಭೆ ನಡೆಸಿದ್ದು, ಸಾರ್ವಜನಿಕರಿಂದಲೂ ದೇಣಿಗೆ ಅಥವಾ ಅಗತ್ಯ ಸಾಮಗ್ರಿ ಸಂಗ್ರಹದ ಬಗ್ಗೆಯೂ ಚರ್ಚಿಸಿದ್ದಾರೆ.

    ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗೋದಕ್ಕೂ ಮುನ್ನವೇ ಮಾರ್ಚ್ 3ನೇ ವಾರದಲ್ಲಿ ರಾಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮೂಲಕ ಶಿಲಾನ್ಯಾಸಕ್ಕೆ ಪ್ಲಾನ್ ಮಾಡಲಾಗಿದೆ. ಇದನ್ನೂ ಓದಿ: 2 ಪಕ್ಷಗಳಿಂದ ರಾಜ್ಯದಲ್ಲಿ ಭ್ರಷ್ಟಾಚಾರ ನಡೀತಿದೆ: ಸಂಡೂರಿನಲ್ಲಿ ಚಾಣಕ್ಯ ಕಿಡಿ

    ರಾಮಮಂದಿರದ ಜತೆಗೆ ಶ್ರೀರಾಮ ದ್ವಾರಾ, ರಾಮಮಂದಿರ ಪೆವಿಲಿಯನ್, ಅಶೋಕವನ, ಶ್ರೀರಾಮ ಪಥ ಮ್ಯೂಸಿಯಂ, ಜಟಾಯು ಗ್ಯಾಲರಿ ನಿರ್ಮಿಸಲು ಉದ್ದೇಶಿಸಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ – ಸಿ.ಟಿ ರವಿ

    ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ – ಸಿ.ಟಿ ರವಿ

    ರಾಮನಗರ: ಶುದ್ಧ ಹಿಂದೂಗಳು (Hindu) ಯಾರೂ ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಆದರೆ ಕೆಲವರು ವಿರೋಧ ಯಾಕೆ ಮಾಡ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದ್ದಾರೆ.

    ರಾಮನಗರದ (Ramanagara) ಅಚಲು ಗ್ರಾಮದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ರಾಮದೇವರ ಬೆಟ್ಟ (Ramadevara Betta) ಅಭಿವೃದ್ಧಿ ಕೇವಲ ಚುನಾವಣಾ ಗಿಮಿಕ್’ ಎಂದಿದ್ದ ಜೆಡಿಎಸ್ (JDS) ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

    ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ - ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಇಲ್ಲಿಯವರೆಗೆ ರಾಮಮಂದಿರ (Rammandir) ಕಟ್ಟಬೇಡಿ ಅಂತಾ ಯಾರನ್ನಾದರೂ ಕಟ್ಟಿಹಾಕಿದ್ರಾ? ಇಲ್ಲಿ ಅಧಿಕಾರದಲ್ಲಿದ್ದವರು ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿ ತೋರಿಸಬೇಕಿತ್ತು. ನಾವೂ ಹಿಂದೂ ಅಂತಾ ಹೇಳಿಕೊಳ್ಳುವವರು ಇಷ್ಟು ದಿನ ಏನ್ಮಾಡ್ತಿದ್ರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ – ಬೃಹತ್ ಬೈಕ್ ರ್‍ಯಾಲಿ

    ಸಿದ್ದರಾಮಯ್ಯಗೆ ಜಿಲೆಬಿ ಕಂಡ್ರೆ ಆಗಲ್ಲ: `ಕೋಮು ಸಂಘರ್ಷಕ್ಕೆ ಬಿಜೆಪಿ ಕಾರಣ’ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಸುಳ್ಳು ಹೇಳುವುದು ಹುಟ್ಟು ಗುಣ, ಹಳೇ ಕಾಯಿಲೆ. ಅಧಿಕಾರಕ್ಕಾಗಿ ಅಹಿಂದ ರಾಜಕಾರಣ ಮಾಡಿದರು, ನಂತರ ದೂಡಿದರು. ಅವರು ಅಧಿಕಾರದಲ್ಲಿದ್ದಾಗ ಅವರಿಗೆ ಜಿಲೆಬಿ ಕಂಡರೆ ಆಗಲ್ಲ ಎಂಬ ಆರೋಪ ಇತ್ತು. ಅಂದರೆ ತಿನ್ನುವ ಜಿಲೆಬಿ ಅಲ್ಲ. ಗೌಡ, ಲಿಂಗಾಯತ, ಬ್ರಾಹ್ಮಣ ಅಂತಾ. ಆ ರಾಜಕಾರಣವನ್ನ ಸಿದ್ದರಾಮಯ್ಯ ಮಾಡ್ತಿದ್ದರು. ಈಗ ನಾನು ಕೂಡಾ ಹಿಂದೂ ಅಂತಾರೆ. ಆದರೆ ಹಿಂದೂ ಆದವರೂ ರಾಮಮಂದಿರ ಕಟ್ಟಲು ವಿರೋಧ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ.

    ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ - ಬೃಹತ್ ಬೈಕ್ ರ್‍ಯಾಲಿ

    ಹಿಂದೂ ಆದವರೂ ಟಿಪ್ಪು ಜಯಂತಿ ಆಚರಿಸಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಮಾಡ್ತಾರೆ. ಕುಂಕುಮ ಕಂಡರೆ ಆಗದವರು ಯಾವ ಸೀಮೆ ಹಿಂದೂ? ಕೇಸರಿ ಕಂಡರೆ ಅಲರ್ಜಿ ಇರೋರು ಎಲ್ಲರನ್ನ ಪ್ರೀತ್ಸೋ ಜನರಾ? ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೇ. ಅದನ್ನು ದೂರ ಇಡ್ತಾರಾ? ನಮ್ಮ ಎಲ್ಲಾ ಸ್ವಾಮೀಜಿಗಳು ಧರಿಸುವ ಬಟ್ಟೆಯೂ ಕೇಸರಿ. ಇವರಿಗೆ ಅವರ ಆಶೀರ್ವಾದ ಮಾತ್ರ ಬೇಕು. ಆದ್ರೆ ಕೇಸರಿ ಕಂಡ್ರೆ ಆಗಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ: `ನನ್ನ ಹೆಣ ಸಹ ಬಿಜೆಪಿಗೆ ಹೋಗಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸಿ.ಟಿ.ರವಿ, ಮನುಷ್ಯನ ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ ಎಂದು ಅವರಿಗೂ ಗೊತ್ತಿದೆ. ಹೆಣ ತಗೊಂಡು ರಾಜಕಾರಣ ಮಾಡಲು ಆಗಲ್ಲ. ಹೆಣ ಎದ್ದು ಬಂದು ವೋಟ್ ಹಾಕುತ್ತಾ? ಹೆಣವನ್ನ ಅವರ ಮನೆಯಲ್ಲೂ ಮೂರು ದಿನ ಇಟ್ಟುಕೊಳ್ಳಲ್ಲ. ಆದರೆ ಸಿದ್ದರಾಮಯ್ಯ ನೂರು ವರ್ಷ ಬದುಕಿರಲಿ. ನಮ್ಮ ಪಕ್ಷಕ್ಕೆ ಅವರ ಅವಶ್ಯಕತೆ ಇಲ್ಲ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

    ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

    ರಾಮನಗರ: ರಾಮದೇವರ ಬೆಟ್ಟವು (RamaDevra Betta)  ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೀಗಾಗಿ ಜೀರ್ಣೋದ್ಧಾರ ಅಭಿವೃದ್ಧಿಗೆ ಡಿಪಿಆರ್ ಸಿದ್ಧ ಪಡಿಸಲಾಗುತ್ತಿದೆ. ಈ ಯೋಜನೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ರಾಮನಗರದಲ್ಲಿ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ (Dr. Ashwathnarayan) ತಿಳಿಸಿದ್ದಾರೆ.

    ರಾಮದೇವರ ಬೆಟ್ಟ ಅಭಿವೃದ್ಧಿ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ. ರಾಮನಗರದಲ್ಲಿ ಈವರೆಗೂ ರಾಮದೇವರ ಬೆಟ್ಟ ಅಭಿವೃದ್ಧಿ ಆಗಿಲ್ಲ. ಕೆಲವರು ಅಸಹಾಯಕರಾಗಿದ್ದಾರೆ. ಬೇರೆ ಪಕ್ಷದ ಯಾರೊಬ್ಬರು ಬೆಟ್ಟ ನೋಡಿಲ್ಲ. ರಾಮಜನ್ಮ ಭೂಮಿ ಬಿಟ್ಟರೆ, ರಾಮನಗರದ ರಾಮದೇವರ ಬೆಟ್ಟ ಮತ್ತೊಂದು ಪವಿತ್ರ ಕ್ಷೇತ್ರವಾಗಲಿದೆ. ಎಲ್ಲಾ ಸೂಕ್ಷ್ಮತೆಗಳನ್ನು ಗಮನಿಸಿ ಕಾನೂನಿನ ಚೌಕಟ್ಟಿನ ಪರಿದಿಯೊಳಗೆ ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿಯೇ ತಿರುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಹೇಳೋದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಬಿಕೆ ಹರಿಪ್ರಸಾದ್ ಕಿಡಿ

    ಡಿ.ಕೆ.ಶಿವಕುಮಾರ್ (D.K Shivakumar)  ಸಿಡಿ ಮಾಡಿಸಿದ್ದರು ಎಂದು ರಮೇಶ್ ಜಾರಕಿಹೊಳಿ (Ramesh Jarkiholi)  ಹೇಳಿಕೆ ಬಗ್ಗೆ ಮಾತನಾಡಿದ ಸಚಿವರು, ಈ ಬಗ್ಗೆ ತನಿಖೆ ನಡೆದು ಸತ್ಯಾಂಶ ಹೊರಬರಬೇಕು. ಷಡ್ಯಂತ್ರ ಮಾಡುವವರು, ಬ್ಲಾಕ್ ಮೇಲರ್‌ಗಳಿಗೆ ತಕ್ಕ ಪಾಠ ಕಲಿಸುವ ಕೆಲಸ ಆಗಬೇಕು. ಈ ಬಗ್ಗೆ ಜಾರಕಿಹೊಳಿ ಸಹ ತನಿಖೆ ನಡೆಸಿ ಎಂದಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಪದೇ ಪದೇ ರಾಜ್ಯಕ್ಕೆ ಬರುವುದರಿಂದ JDS, ಕಾಂಗ್ರೆಸ್‍ಗೆ ಭಯ ಶುರುವಾಗಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಸಚಿವ ಸುಧಾಕರ್ ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ (Siddaramaiah)  ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಚರ್ಚೆ ಮಾಡಲು ಸದನ ಇದೆ. ಕಮಿಟಿ ಇದೆ. ಅಲ್ಲಿ ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕಿತ್ತು. ಅದನ್ನು ಬಿಟ್ಟು ನಿರಾಧಾರವಾಗಿ ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಹೇಳಿಕೆ ನೀಡುವುದು ಸರಿ ಅಲ್ಲ. ಮೈ ಪರಚಿಕೊಂಡು ಅಪದಾನೆ ಮಾಡಿದ್ರೆ ಸುಳ್ಳು ಸತ್ಯವಾಗುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ರಾಮನಗರ: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ರಾಮನಗರದ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿರುವ (Ramadevara Betta) 19 ಎಕರೆ ಪ್ರದೇಶದಲ್ಲಿ ಅಯೋಧ್ಯೆ ರಾಮಮಂದಿರ (Ayodhya Ram Mandir) ಮಾದರಿಯಲ್ಲೇ ಒಂದು ದೇವಸ್ಥಾನ ನಿರ್ಮಿಸಲು ತ್ವರಿತವಾಗಿ ಒಂದು ಅಭಿವೃದ್ಧಿ ಸಮಿತಿಯನ್ನು ರಚಿಸಬೇಕು ಎಂದು ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (CN Ashwath Narayan) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದಿದ್ದಾರೆ.

    ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿರುವ ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಯವಾಗಿದೆ. ಬೆಂಗಳೂರಿಗೆ ಸನಿಹದಲ್ಲಿರುವ ಈ ಬೆಟ್ಟವನ್ನು ಭಕ್ತರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸುವುದರಿಂದ ಸಂಸ್ಕೃತಿ ರಕ್ಷಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಎರಡನ್ನೂ ಸಾಧಿಸಲು ಅವಕಾಶವಿದೆ ಎಂದು ಅವರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಸಭಾಪತಿಗೆ ವಕೀಲ ಮನವಿ ಪತ್ರ

    ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣನೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ಇದ್ದನೆಂಬ ನಂಬಿಕೆ ಇದೆ. ಇಲ್ಲಿರುವ ಪಾತಾಳಗಂಗೆಯ ಉದ್ಭವಕ್ಕೆ ರಾಮನೇ ಕಾರಣ ಎನ್ನುವ ಶ್ರದ್ಧೆ ಇದೆ. ಅಲ್ಲದೆ ಸಪ್ತರ್ಷಿಗಳು ಕೂಡ ಇಲ್ಲಿ ತಪಸ್ಸನ್ನು ಆಚರಿಸಿರುವ ಕುರುಹುಗಳಿವೆ. ಹಾಗೆಯೇ ಈ ಬೆಟ್ಟವು ದೇಶದ ಏಕೈಕ ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಪಕ್ಷಿಗಳಿಗೂ ರಾಮಾಯಣಕ್ಕೂ ಸಂಬಂಧವಿರುವುದು ಕೂಡ ಗಮನಾರ್ಹವಾಗಿದೆ ಎಂದು ಸಚಿವರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ವಂದೇ ಭಾರತ್, ಶತಾಬ್ದಿ ಸೂಪರ್‌ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ- ಸೋಮಣ್ಣ

    ಐತಿಹಾಸಿಕ ತಾಣವಾಗಿರುವ ರಾಮದೇವರ ಬೆಟ್ಟವು ತ್ರೇತಾಯುಗದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಇದನ್ನು ಆಕರ್ಷಕವಾಗಿ ಅಭಿವೃದ್ಧಿಪಡಿಸಿ, ಮುಂದಿನ ತಲೆಮಾರುಗಳಿಗೂ ದಾಟಿಸಬೇಕು ಎನ್ನುವುದು ಸ್ಥಳೀಯರ ಅಭಿಲಾಷೆಯಾಗಿದೆ ಎಂದು ಅವರು ಪತ್ರದಲ್ಲಿ ಗಮನ ಸೆಳೆದಿದ್ದಾರೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಸಚಿವರು ಈ ಪತ್ರ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]