Tag: ರಾಮನಗರ

  • ಬಿಗ್ ಬಾಸ್ ಸೀಸನ್-12ಗೆ ಆರಂಭದಲ್ಲೇ ವಿಘ್ನ – ಶೂಟಿಂಗ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಬಂದ್‌ಗೆ ಆದೇಶ

    ಬಿಗ್ ಬಾಸ್ ಸೀಸನ್-12ಗೆ ಆರಂಭದಲ್ಲೇ ವಿಘ್ನ – ಶೂಟಿಂಗ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಬಂದ್‌ಗೆ ಆದೇಶ

    – ಮಾಲೀನ್ಯ ನಿಯಂತ್ರಣ ಮಂಡಳಿಯಿಂದ ಆದೇಶ

    ರಾಮನಗರ: ಬಿಗ್ ಬಾಸ್ ಸೀಸನ್ 12ಕ್ಕೆ (BBK 12) ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ (Jollywood Studios and Adventures) ಬಂದ್ ಮಾಡಲು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

    ಮಾಲೀನ್ಯ ನಿಯಂತ್ರಣ ಮಂಡಳಿ (Pollution Control Board) ಅನುಮತಿ ಪಡೆಯದೇ ಮನರಂಜನಾ ಪಾರ್ಕ್ ಓಪನ್ ಮಾಡಿರೋ ಆರೋಪ ಕೇಳಿಬಂದಿದೆ. ಅಲ್ಲದೇ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯದ ನೀರನ್ನ ಪರಿಸರಕ್ಕೆ ಬಿಡುವ ಮೂಲಕ ಮಾಲಿನ್ಯ ನಿಯಂತ್ರಣ ಕಾಯ್ದೆಗಳನ್ನ ಉಲ್ಲಂಘನೆ ಮಾಡಿರೋ ಆರೋಪ ಕೂಟ ಕೇಳಿಬಂದಿದೆ.

    ಕರ್ನಾಟಕ ಮಾಲಿನ್ಯ ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 31, ಕಾಯ್ದೆ 1983 ನಿಯಮ 20(ಎ) ಅನ್ವಯ ತಕ್ಷಣದಿಂದಲೇ ಸ್ಟುಡಿಯೋ ಬಂದ್ ಮಾಡಲು ಆದೇಶ ಹೊರಡಿಸಿದ್ದು, ಕೂಡಲೇ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಸಿ ಕ್ರಮವಹಿಸಲು ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

    ಜೊತೆಗೆ ತಕ್ಷಣದಿಂದಲೇ ಮನರಂಜನಾ ಪಾರ್ಕ್‌ಗೆ ವಿದ್ಯುತ್ ಸ್ಥಗಿತಗೊಳಿಸುವಂತೆ ಬೆಸ್ಕಾಂಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. ಬಿಗ್ ಬಾಸ್ ಸೀಸನ್ 12ರ ಶೂಟಿಂಗ್ ಸೆಟ್ ಕೂಡ ಜಾಲಿವುಡ್ ಸ್ಟುಡಿಯೋದಲ್ಲೇ ನಿರ್ಮಾಣ ಆಗಿರೋದ್ರಿಂದ ಬಿಗ್ ಬಾಸ್ ಶೂಟಿಂಗ್ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

  • ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ರಾಮನಗರ: ಲೋಕಾಯುಕ್ತ ಡಿವೈಎಸ್‌ಪಿ (Lokayukta DySP) ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ (Money) ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ರಾಮನಗರದ (Ramanagara) ಐಜೂರು ಪೊಲೀಸರು (Ijoor Police) ಬಂಧಿಸಿದ್ದಾರೆ.

    ಮುರೇಗಪ್ಪ ಬಂಧಿತ ಆರೋಪಿ. ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ ಮಾಡಿದ್ದ ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮಹಾರಾಷ್ಟçದ ಕೊಲ್ಲಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಆರೋಪಿ ಮುರೇಗಪ್ಪ ಮೇಲೆ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯಿಂದ 3 ಮೊಬೈಲ್ ಹಾಗೂ 9ಕ್ಕೂ ಹೆಚ್ಚು ಸಿಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೇ ಅಲ್ಲದೇ ಮುರೇಗಪ್ಪ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಲೋಕಾಯಕ್ತ ಅಧಿಕಾರಿ ಎಂದು ಬೆದರಿಕೆ ಹಾಕಿ ಹಣ ಪೀಕಿದ್ದ. ಮುರೇಗಪ್ಪ ಎಂಟು ವರ್ಷಗಳ ಕಾಲ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸಿದ್ದ. ಎರಡು ವರ್ಷ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸಿ, ಸಸ್ಪೆಂಡ್ ಆಗಿದ್ದ. ಬಳಿಕ ಬೆದರಿಕೆ ಹಾಕಿ ಹಣ ಪೀಕುವುದನ್ನೇ ವೃತ್ತಿ ಮಾಡಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ ಐಜೂರು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ – 2 ತಿಂಗಳು ಕಳೆದರೂ 12 ಆರೋಪಿಗಳಿಗೆ ಬಿಡುಗಡೆ ಭಾಗ್ಯವಿಲ್ಲ

  • ಡಿಸಿಎಂ ಅವರೇ ರೈತರ ಮುಂದೆ ತೊಡೆ ತಟ್ಟುತ್ತಿದ್ದೀರಿ, ನಿಮ್ಮ ತೊಡೆ ಮುರಿಯುವ ಕಾಲ ದೂರವಿಲ್ಲ: ನಿಖಿಲ್

    ಡಿಸಿಎಂ ಅವರೇ ರೈತರ ಮುಂದೆ ತೊಡೆ ತಟ್ಟುತ್ತಿದ್ದೀರಿ, ನಿಮ್ಮ ತೊಡೆ ಮುರಿಯುವ ಕಾಲ ದೂರವಿಲ್ಲ: ನಿಖಿಲ್

    – ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ

    ರಾಮನಗರ: ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚು ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ರೈತರ ಮುಂದೆ ತೊಡೆ ತಟ್ಟುವ ಉಪಮುಖ್ಯಮಂತ್ರಿಗಳೇ ನಿಮ್ಮ ತೊಡೆ ಮುರಿಯುವ ಕಾಲ ದೂರ ಇಲ್ಲ ಎಂದು ಡಿಸಿಎಂ ಡಿಕೆಶಿ (DK Shivakumar) ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.

    ಬಿಡದಿಯಲ್ಲಿ ಟೌನ್ ಶಿಪ್ (Bidadi Township) ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ನಿಖಿಲ್ ಕುಮಾರಸ್ವಾಮಿ, ರೈತರನ್ನ ಉದ್ದೇಶಿಸಿ ಮಾತನಾಡಿದರು. ಸರ್ಕಾರ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 80%ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ. ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡ್ರಗ್ಸ್‌ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ

    ರಾಜ್ಯದ ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದೂ ಗೊತ್ತು, ತೊಡೆ ಮುರಿಯುವುದೂ ಗೊತ್ತು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ. ಜೆಡಿಎಸ್ ರೈತರ ಪಕ್ಷ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಯೋಜನೆಯ ಸಾಧಕ- ಬಾಧಕಗಳ ಬಗ್ಗೆ ವಿಚಾರ ಮಾಡದೇ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಸಿದುಕೊಳ್ಳುತ್ತಿರುವುದು ಯಾವ ಉದ್ದೇಶಕ್ಕಾಗಿ? ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ? ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ ಎಂದು ಗುಡುಗಿದರು. ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

  • Ramanagara | ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    Ramanagara | ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ರಾಮನಗರ: ರಸ್ತೆಗುಂಡಿ (Road Pothole) ಮುಚ್ಚದ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ (BJP) ಪ್ರತಿಭಟನೆ ನಡೆಸುತ್ತಿದ್ದು, ರಾಮನಗರದ (Ramanagara) ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿ ಗುಂಡಿ ಮುಚ್ಚದ ಪರಿಸ್ಥಿತಿಗೆ ಬಂದು ನಿಂತಿದೆ. ಬೆಂಗಳೂರು ಈಗ ಗುಂಡಿಯೂರು ಆಗಿದೆ. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗೆ ಸಾವನ್ನಪ್ಪುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

    ಐಟಿ ಕಂಪನಿಗಳು ಬೆಂಗಳೂರು ತೊರೆದು ಬೇರೆ ರಾಜ್ಯಕ್ಕೆ ಹೋಗುತ್ತಿವೆ. ಇಷ್ಟಾದರೂ ಗುಂಡಿ ಮುಚ್ಚದೇ ಉಪಮುಖ್ಯಮಂತ್ರಿಗಳು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಬೆಂಗಳೂರಿನ ಎಲ್ಲಾ ಗುಂಡಿಗಳನ್ನ ಮುಚ್ಚಿ ಮರ್ಯಾದೆ ಉಳಿಸಿಕೊಳ್ಳಿ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

  • Ramanagara | ಬಾವಿಗೆ ಬಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ

    Ramanagara | ಬಾವಿಗೆ ಬಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ

    ರಾಮನಗರ: ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು (Leopard) ಅರಣ್ಯ ಇಲಾಖೆ (Forest Department) ರಕ್ಷಿಸಿರುವ ಘಟನೆ ಮಾಗಡಿ (Magadi) ತಾಲೂಕಿನ ಹಾಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ರೇವಣ್ಣ ಎಂಬವರ ತೋಟದ ಬಾವಿಗೆ ಚಿರತೆ ಬಿದ್ದಿತ್ತು. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು 5 ವರ್ಷದ ಹೆಣ್ಣು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ. ಬೋನ್ ಹಾಗೂ ಬಲೆ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮೇಲೆತ್ತಿದ್ದಾರೆ. ಇದನ್ನೂ ಓದಿ: ಎಡಗಾಲಲ್ಲಿದ್ದ ರಾಡ್ ತೆಗೆಯಲು ಬಲಗಾಲಿಗೆ ಆಪರೇಷನ್ – ಹಿಮ್ಸ್ ಆಸ್ಪತ್ರೆ ವೈದ್ಯರ ಯಡವಟ್ಟು

    ಬಾವಿಗೆ ಬಿದ್ದ ರಭಸಕ್ಕೆ ಚಿರತೆಯ ತಲೆಭಾಗಕ್ಕೆ ಪೆಟ್ಟು ಬಿದ್ದಿದೆ. ಸದ್ಯ ಚಿರತೆಯನ್ನ ಬನ್ನೇರುಘಟ್ಟ ರೆಸ್ಕ್ಯೂ ಸೆಂಟರ್‌ಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸಿಎಫ್ ಪುಟ್ಟಮ್ಮ ಹಾಗೂ ಆರ್‌ಎಫ್‌ಓ ಚೈತ್ರಾ ಮನ್ಸೂರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ಗೆ ಫಂಡಿಂಗ್ – 11 ಮಂದಿಗೆ ಎಸ್‌ಐಟಿ ನೋಟಿಸ್

  • ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್.ಅಶೋಕ್

    ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್.ಅಶೋಕ್

    ರಾಮನಗರ: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು (Greater Bengaluru) ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಕಿಡಿಕಾರಿದರು. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    ಹೌಸಿಂಗ್ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು ನಿರ್ಮಿಸಿಲ್ಲ. ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆಗಳಲ್ಲೇ ಖಾಲಿ ಇದೆ. ಇಷ್ಟು ಖಾಲಿ ಇರುವಾಗ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಂಡರೆ ಅದು ರೈತರಿಗೆ ಮಾಡುವ ವಂಚನೆ. ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸ್ವಾಧೀನ ಬೇಡವೆಂದು ರೈತರಿಗೆ ಜಮೀನು ಬಿಟ್ಟಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕುತಂತ್ರ ಮಾಡಿ ಜಮೀನು ಲೂಟಿ ಮಾಡಿ ರಿಯಲ್ ಎಸ್ಟೇಟ್‌ನಿಂದ ಹಣ ಹೊಡೆಯಲು ಪ್ಲಾನ್ ಮಾಡಿದೆ. ರಾಮನಗರದಲ್ಲಿ ಸೈಟು ಬೇಕೆಂದು ಯಾರು ಕೇಳಿದ್ದಾರೆ? ಮಾಡಿರುವ ಸೈಟುಗಳೇ ಖಾಲಿ ಇದೆ. ಇದು ಅಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಸ್ತೆ ಅಪಘಾತ ಸಂತ್ರಸ್ತರ ಚಿಕಿತ್ಸಾ ವೆಚ್ಚ 2.5 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

    ರೈತರ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡಿದ್ದೇವೆ. ಕೂಡಲೇ ಸರ್ಕಾರ ಈ ಸ್ವಾಧೀನ ಕ್ರಮವನ್ನು ಕೈ ಬಿಡಬೇಕು. ಸರ್ಕಾರದಿಂದ ಯಾರಾದರೂ ಬಂದು ರೈತರ ಅಹವಾಲು ಆಲಿಸಬೇಕಿತ್ತು. ರೈತರನ್ನು ಸಮಾಧಾನ ಮಾಡಿ ಮಾತನಾಡಬೇಕಿತ್ತು. ಅದನ್ನು ಬಿಟ್ಟು ದೌರ್ಜನ್ಯ ಮಾಡಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸ ಬೇಡ ಎಂದರು. ಇದನ್ನೂ ಓದಿ: ವಿಜಯಪುರ-ಚಿಕ್ಕಲಕಿ ಕ್ರಾಸ್‌ವರೆಗೆ ಸಂಚರಿಸುವ ನೂತನ ಬಸ್‌ಗಳಿಗೆ ಚಾಲನೆ

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಡಿನೋಟಿಫಿಕೇಶನ್ ಮಾಡದೆಯೇ ಹಾಗೆಯೇ ಬಿಟ್ಟುಬಿಡಬೇಕು. ಯಾವುದೇ ಸವಲತ್ತು ಬೇಡವೆಂದು ರೈತರು ಹೇಳಿದ್ದಾರೆ. ಬಹುತೇಕ ರೈತರು ಹೀಗೆಯೇ ಇರಲಿ ಎಂದು ಹೇಳಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೈತರ ಮಾತಿಗೆ ಬೆಲೆ ನೀಡಬೇಕು. ಮುಂದೆ ನಮ್ಮ ಸರ್ಕಾರ ಬಂದಾಗ ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ. ಈ ಕುರಿತು ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದೇನೆ. ಇದನ್ನು ಯಾವ ಝೋನ್ ಮಾಡಬೇಕೆಂದು ಸರ್ಕಾರ ರೈತರೊಂದಿಗೆ ಚರ್ಚಿಸಲಿ ಎಂದು ಹೇಳಿದರು. ಇದನ್ನೂ ಓದಿ: 4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

  • ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    – ಪ್ರತಿಭಟನೆ ವೇಳೆ ರೈತರಿಂದ ವಿಷ ಸೇವನೆಗೆ ಯತ್ನ

    ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ (Bidadi Integrated Township) ವಿರೋಧಿಸಿ ರೈತರ (Farmers) ಅಹೋರಾತ್ರಿ ಧರಣಿ ಮುಂದುವರೆದಿದ್ದು, 5ನೇ ದಿನಕ್ಕೆ ರೈತರ ಹೋರಾಟ ಕಾಲಿಟ್ಟಿದೆ. ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಇಂದು ವಿಪಕ್ಷ ನಾಯಕ ಅಶೋಕ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ ಹಾಗೂ ಸಂಸದ ಡಾ.ಮಂಜುನಾಥ್ ಸಾಥ್ ನೀಡಿದ್ದಾರೆ.

    ಗ್ರಾಮಕ್ಕೆ ಎತ್ತಿನಬಂಡಿಯಲ್ಲಿ ಆಗಮಿಸಿದ ಆರ್.ಅಶೋಕ್ (R Ashok) ರೈತರ ಜೊತೆ ಕೂತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ಟೌನ್‌ಶಿಪ್ ಯೋಜನೆಗೆ ಕೃಷಿ ಭೂಮಿ ಬಳಕೆ ಮಾಡಬಾರದು. ರೈತರನ್ನ ಒಕ್ಕಲೆಬ್ಬಿಸುವ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇನೆ. ರೈತರ ಪರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಅಶೋಕ್ ರೈತರಿಗೆ ಭರವಸೆ ನೀಡಿದರು. ಇದನ್ನೂ ಓದಿ:  ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

    ಇನ್ನೂ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿರುವಾಗಲೇ, ರೈತರು ಭೂಸ್ವಾಧೀನ ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದರು. ಇಬ್ಬರು ರೈತ ಮಹಿಳೆಯರು ಹಾಗೂ ಓರ್ವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಕೂಡಲೇ ಪೊಲೀಸರು ರೈತರ ಕೈಯಿಂದ ಕ್ರಿಮಿನಾಶಕದ ಬಾಟಲಿಗಳನ್ನ ಕಿತ್ತು ಬಿಸಾಕಿದರು. ವಿಷ ಕುಡಿಯಲು ಯತ್ನಿಸಿದವರನ್ನು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಈ ವೇಳೆ ಯಾರೂ ಆತ್ಮಹತ್ಯೆ ನಿರ್ಧಾರ ಮಾಡಬೇಡಿ, ನಿಮ್ಮ ಭೂಮಿ ಉಳಿಸಿಕೊಡುವ ಕೆಲಸ ನಾವು ಮಾಡುತ್ತೇವೆ ಎಂದು ರೈತರಿಗೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಮನವಿ ಮಾಡಿದರು. ಇದನ್ನೂ ಓದಿ: Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

  • ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ – ಅಹೋರಾತ್ರಿ ಧರಣಿ

    ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ – ಅಹೋರಾತ್ರಿ ಧರಣಿ

    ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಫ್ (Bidadi Township) ಭೂಸ್ವಾಧೀನ ವಿರೋಧಿಸಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು (Farmers) ಆಹೋರಾತ್ರಿ ಧರಣಿ ಕೈಗೊಂಡಿದ್ದು, ಭೈರಮಂಗಲ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

    ಭೂ ಸ್ವಾಧೀನ ಪ್ರಕ್ರಿಯೆಗೆ ಜೆಎಂಸಿ ಸರ್ವೆ ಆರಂಭವಾಗಿರುವ ಹಿನ್ನೆಲೆ ಸರ್ವೇ ಕಾರ್ಯಕ್ಕೆ ತಡೆ ನೀಡಿ ಧರಣಿ ನಡೆಸಲಾಗುತ್ತಿದೆ. ಬಿಡದಿ ಟೌನ್‌ಶಿಪ್‌ಗೆ 9 ಸಾವಿರ ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವ ಜಿಬಿಎ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ. ಈ ಯೋಜನೆಯಿಂದ ರೈತರಿಗೆ ಯಾವುದೇ ಲಾಭ ಇಲ್ಲ, ಕೃಷಿ ಕೆಲಸ ಬಿಟ್ಟು ವಾಚ್‌ಮೆನ್ ಕೆಲಸ ಮಾಡಿಸಲು ಸರ್ಕಾರ ಮುಂದಾಗುತ್ತಿದೆ ಎಂದು ರೈತರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರೋಪಿ ನಟ ದರ್ಶನ್‌ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ

    ನಾವು ಯಾವುದೇ ಕಾರಣಕ್ಕೂ ಯೋಜನೆಗೆ ಜಮೀನು ನೀಡುವುದಿಲ್ಲ. ಅಲ್ಲದೇ ಬಲವಂತವಾಗಿ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಿತ್ತುಕೊಂಡರೇ ರಕ್ತಪಾತ ನಡೆಯುತ್ತೆ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

  • ನೇಪಾಳದಲ್ಲಿ ಸಿಲುಕಿದ್ದಾರೆ ರಾಮನಗರದ 4 ಮಂದಿ ಪ್ರವಾಸಿಗರು

    ನೇಪಾಳದಲ್ಲಿ ಸಿಲುಕಿದ್ದಾರೆ ರಾಮನಗರದ 4 ಮಂದಿ ಪ್ರವಾಸಿಗರು

    – ಬೆಂಗಳೂರಿನ 50 ಜನರ ಜೊತೆ ನೇಪಾಳ ಪ್ರವಾಸ

    ರಾಮನಗರ: ನೇಪಾಳದಲ್ಲಿ (Nepal) ಹಿಂಸಾತ್ಮಕ ಪ್ರತಿಭಟನೆಯ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರವಾಸಕ್ಕೆಂದು ತೆರಳಿದ್ದ ರಾಮನಗರದ (Ramanagara) 4 ಮಂದಿ ಪ್ರವಾಸಿಗರು ನೇಪಾಳದಲ್ಲಿ ಸಿಲುಕಿದ್ದಾರೆ.

    ಪ್ರವಾಸಿಗರು ಬೆಂಗಳೂರಿನ 50 ಜನರ ಜೊತೆ ನೇಪಾಳ ಪ್ರವಾಸ ಕೈಗೊಂಡಿದ್ದರು. ನೇಪಾಳದ ಕಠ್ಮಂಡುವಿನ ಹೋಟೆಲ್‌ನಲ್ಲಿ ಕರ್ನಾಟಕದ 50 ಮಂದಿ ಪ್ರವಾಸಿಗರು ಸಿಲುಕಿದ್ದಾರೆ. ಇಂದು ಕಠ್ಮಂಡುವಿನಿಂದ ಜನಕ್ ಪುರ್‌ದ ಡಿಯೊಗರ್ ವಿಮಾನ ನಿಲ್ದಾಣಕ್ಕೆ ಪ್ರವಾಸಿಗರು ಪ್ರಯಾಣಿಸಲಿದ್ದಾರೆ. ಇದನ್ನೂ ಓದಿ: ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯ್ತು: ಭಾರತದ ಮೇಲೆ ಗೂಬೆ ಕೂರಿಸಿದ ನೇಪಾಳದ ಮಾಜಿ ಪ್ರಧಾನಿ

    ಸೆ. 1ರಂದು ಬೆಂಗಳೂರಿನ ಏರ್‌ಪೋರ್ಟ್‌ನಿಂದ ಪ್ರವಾಸಿಗರು ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದರು. 13 ದಿನಗಳ ಪ್ರವಾಸಕ್ಕೆಂದು ತೆರಳಿದ್ದ ಕನ್ನಡಿಗರು, ಬೆಂಗಳೂರಿಂದ ವಾರಣಾಸಿ, ಅಯೋಧ್ಯೆ ಬಳಿಕ ನೇಪಾಳ ಬಾರ್ಡರ್ ತಲುಪಿದ್ದರು. ನೇಪಾಳದ ಸೋನಾಲಿ ಬಾರ್ಡರ್‌ಗೆ ತಲುಪಿ ಸೆ.8ರಂದು ಪೊಕ್ರಾದಿಂದ ಕಠ್ಮಂಡು ಕಡೆ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: ನೇಪಾಳ ಹಿಂಸಾಚಾರಕ್ಕೆ ಸ್ಥಗಿತಗೊಂಡಿದ್ದ ಕಠ್ಮಂಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಓಪನ್

    ಮನೋಕಾಮನಾ ದೇವಿ ದರ್ಶನ ಮುಗಿಸಿ ಹೊರಟಾಗ ಅಲ್ಲಿನ ಗಲಾಟೆ ಬಗ್ಗೆ ಮಾಹಿತಿ ದೊರೆತಿದೆ. ಸದ್ಯ ಕಠ್ಮಂಡುವಿನ ಪ್ರೈಮ್‌ಶೂಟ್ ಹೋಟೆಲ್‌ನಲ್ಲಿ ಕನ್ನಡಿಗರು ವಾಸ್ತವ್ಯ ಹೂಡಿದ್ದಾರೆ. ಕಠ್ಮಂಡುವಿನ ಪಶುಪತಿನಾಥ ದೇವರ ದರ್ಶನ ಪಡೆದು ಹೊರ ಬರುವಾಗ ಗಲಾಟೆ ಆರಂಭವಾಗಿದೆ. ಸೆ.9ರಂದು 11 ಗಂಟೆಗೆ ಗಲಾಟೆ ಆರಂಭವಾಗಿದ್ದು, ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಪರಿಸ್ಥಿತಿ ಸುಧಾರಿಸುತ್ತಿದ್ದು. ಸೆ.13ರಂದು ಪ್ರವಾಸಿಗರು ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ನೇಪಾಳದ 18 ಜಿಲ್ಲೆಗಳ ಜೈಲಿನಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿ

  • ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಧ್ಯಕ್ಷ ತಿರುಗೇಟು – ಆಯುಕ್ತರಿಗೆ ಬರೆದ ಪತ್ರ ಬಿಡುಗಡೆ

    ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಧ್ಯಕ್ಷ ತಿರುಗೇಟು – ಆಯುಕ್ತರಿಗೆ ಬರೆದ ಪತ್ರ ಬಿಡುಗಡೆ

    ರಾಮನಗರ: ಬಿಡದಿ ಭೂ ಸ್ವಾಧೀನ (Bidadi Land Acquisition) ವಿಚಾರವಾಗಿ ಪರಿಹಾರಕ್ಕೆ ನಮ್ಮ ತಾಯಿ ಅರ್ಜಿ ಹಾಕಿದ್ರೆ ಅದನ್ನ ಬಡವರಿಗೆ ಕೊಟ್ಟು ಬಿಡುತ್ತೇವೆ ಎಂಬ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿಕೆ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಧ್ಯಕ್ಷ ನಟರಾಜ್ ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಾರೆ.

    ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಿಗೆ ಬರೆದಿರುವ ಪತ್ರ ಬಿಡುಗಡೆ ಮಾಡಿದ್ದಾರೆ. ನೋಟಿಫಿಕೇಷನ್ ಆಗಿ, ಪತ್ರಿಕೆಗಳಲ್ಲಿ ಪ್ರಕಟಗೊಂಡ ಮೂರೇ ದಿನಕ್ಕೆ ಅನಿತಾ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಕೂಡ ಅರ್ಜಿ ಹಾಕಿದ್ದಾರೆ. ನನ್ನ ಹೆಸರಲ್ಲಿ ಖಾತೆ ಇದೆ, ವಿನಯ್ ಗೌಡ ಎಂಬವರಿಗೆ ಕಾರಣಾಂತರಗಳಿಂದ ಎಸ್‌ಪಿಎ (ಸ್ಪೆಷಲ್ ಪವರ್ ಆಪ್ ಅಟಾರ್ನಿ) ಮಾಡಿದ್ದೆವು. ಸದ್ಯ ಅದನ್ನ ಹಿಂಪಡೆದಿದ್ದೇವೆ. ಹೊಸೂರು, ಬನ್ನಿಗಿರಿ ಗ್ರಾಮದಲ್ಲಿರುವ ಭೂಮಿ ಭೂಸ್ವಾಧೀನವಾದಲ್ಲಿ ಎಲ್ಲಾ ನೋಟಿಸ್ ಹಾಗೂ ದಾಖಲೆಗಳನ್ನ ನನ್ನ ವಿಳಾಸಕ್ಕೆ ಕಳುಹಿಸಿ ಎಂದು ಅರ್ಜಿಯಲ್ಲಿ ಬರೆದಿದ್ದಾರೆ. ಅದರ ಅರ್ಥ ಸ್ವಾಧೀನವಾದ್ರೆ ನಮಗೆ ಏನು ಇದೆ ಅದನ್ನ ಕೊಡಬೇಕು ಅಂತ ತಾನೆ? ನಿಖಿಲ್ ಕುಮಾರಸ್ವಾಮಿ ಡಿಕೆ ಶಿವಕುಮಾರ್ ಬಗ್ಗೆ ಮಾತಾಡಿದ್ದಾರೆ. ಮೊದಲು ವಿಚಾರ ತಿಳಿದುಕೊಂಡು ಮಾತನಾಡಲಿ ಎಂದರು. ಇದನ್ನೂ ಓದಿ: ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    ನಮ್ಮ ತಾಯಿ ಅರ್ಜಿ ಹಾಕಿದ್ರೆ, ಆಸ್ತಿ ಸರ್ಕಾರಕ್ಕೆ ಬಿಡುತ್ತೇನೆ, ಅಲ್ಲಿನ ಬಡರೈತರಿಗೆ ದಾನ ಕೊಡುತ್ತೇನೆ ಅಂತ ನಿಖಿಲ್ ಹೇಳಿದ್ದಾರೆ. ನಾನು ಸವಾಲು ಹಾಕ್ತೇನೆ ಯಾವಾಗ ರೈತರಿಗೆ ಬಿಟ್ಟುಕೊಡ್ತೀರಾ ಹೇಳಿ? ದಿನಾಂಕ ನಿಗದಿ ಮಾಡಿ ಜಿಬಿಡಿಎ ಮುಖಾಂತರವೇ ರೈತರ ಹೆಸರಿಗೆ ಮಾಡಿಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್