Tag: ರಾಮಪ್ಪ

  • ಬೆಳಗಾವಿಯಲ್ಲಿ ಮತ್ತೊಂದು ಘಟನೆ- ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ

    ಬೆಳಗಾವಿಯಲ್ಲಿ ಮತ್ತೊಂದು ಘಟನೆ- ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ

    ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ.

    ಬೆಳಗಾವಿ (Belagavi) ಜಿಲ್ಲೆಯ ಕಾಗವಾಡದ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮೇಲೆ ದೌರ್ಜನ್ಯ ಎಸಗಲಾಗಿದೆ. ರಾಮಪ್ಪಗೆ ಎಂಬವರಿಗೆ 1991ರಲ್ಲಿ ಸರ್ಕಾರ 3 ಎಕರೆ ಜಮೀನು ನೀಡಿತ್ತು. ಆ ಬಳಿಕದಿಂದ ರಾಮಪ್ಪ ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಕೆಲ ದಿನಗಳ ಬಳಿಕ ರಾಮಪ್ಪಗೆ ಸೇರಿದ ಜಮೀನಿನ 20 ಗುಂಟೆಯನ್ನು ಒತ್ತುವರಿ ಮಾಡಿದ್ದಾರೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ, ಮಾಯಪ್ಪ ಹಳ್ಯಾಳ ವಿರುದ್ಧ ಒತ್ತುವರಿ ಆರೋಪ ಕೇಳಿಬಂದಿದೆ.

    ನಮಗೆ ರಾಜಕೀಯ ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಜಮೀನು ಜೊತೆ ರಸ್ತೆಗೆ ಮೀಸಲಿಟ್ಟ ಜಾಗವೂ ಒತ್ತುವರಿ ಮಾಡಿದ್ದಾರೆ. ಈ ಒತ್ತುವರಿ ಪ್ರಶ್ನಿಸಲು ಹೋಗಿದ್ದ ಪತ್ನಿ ಜಯಶ್ರೀ ಜೊತೆಗೆ ಅಸಭ್ಯ ವರ್ತನೆ ತೋರಿದ್ದಾರೆ. ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ವಿವಸ್ತ್ರಗೊಳಿಸಿ ವಿಕೃತಿ ಮೆರೆಯುವುದರ ಜೊತೆಗೆ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದಿರುವ ಆರೋಪವನ್ನು ರಾಮಪ್ಪ ಮಾಡಿದ್ದಾರೆ. ಇದನ್ನೂ ಓದಿ: ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನು ಅಲ್ಪಸಂಖ್ಯಾತರಿಗೆ – ಸರ್ಕಾರದ ನಡೆಗೆ ವಿರೋಧ

    ಈ ಹಿಂದೆಯೂ ನಡೆದಿತ್ತು ಇಂಥದ್ದೇ ಘಟನೆ: ಎರಡು ತಿಂಗಳ ಹಿಂದೆಯಷ್ಟೇ ಇಂಥದ್ದೇ ಒಂದು ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಅದುಕೂಡ ಜಮೀನು ವಿಚಾರವಾಗಿತ್ತು. ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದರು. ಮಹಿಳೆಯ ಮಾವ ಜಮೀನಿನಲ್ಲಿ ಮೇವಿನ ಬಣವಿ ಒಟ್ಟಲು ನೀಡಿದ್ದರು. 6 ಎಕರೆ ಭೂಮಿ ಆಕೆಯ ಮಾವನ ಹೆಸರಿನಲ್ಲಿತ್ತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಜಮೀನು ಹೊಂದಿದ್ದರು. ಮಹಿಳೆಯನ್ನು ಆರೋಪಿಗಳೆಲ್ಲ ಸೇರಿ ಹೊಡೆದು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು.

  • ಡಿ.ಕೆ ಶಿವಕುಮಾರ್​ಗೆ ಇನ್ನೂ ವಯಸ್ಸಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ: ರಾಮಪ್ಪ

    ಡಿ.ಕೆ ಶಿವಕುಮಾರ್​ಗೆ ಇನ್ನೂ ವಯಸ್ಸಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ: ರಾಮಪ್ಪ

    ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಸಿಎಂ ಕೂಗು ಮತ್ತಷ್ಟು ಹೆಚ್ಚಿದೆ. ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ಮತ್ತೊಬ್ಬ ಶಾಸಕ ಬ್ಯಾಟಿಂಗ್ ಮಾಡಿದ್ದಾರೆ. 2023ಕ್ಕೆ ಸಿದ್ದರಾಮಯ್ಯನವರೆ ಮುಖ್ಯಮಂತ್ರಿ ಆಗಬೇಕು ಎಂದು ಹರಿಹರ ಶಾಸಕ ರಾಮಪ್ಪ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಗೆ ಇನ್ನೂ ವಯಸ್ಸಿದೆ. ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಗೆ ಕ್ಯಾರೆ ಅನ್ನದ ಕಾಂಗ್ರೆಸ್ ಶಾಸಕರುಗಳು ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಹರಿಹರ ಶಾಸಕ ರಾಮಪ್ಪ ಹೇಳಿದ್ದಾರೆ.ರಾಜ್ಯದ ಜನರ ಅಭಿಪ್ರಾಯ ಇದೇ ಆಗಿದೆ. ನಮ್ಮ ಶಾಸಕರ ಅಭಿಪ್ರಾಯವೂ ಇದೇ ಆಗಿದೆ ಎಂದರು. ಇದನ್ನೂ ಓದಿ: ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ಡಿ.ಕೆ.ಶಿವಕುಮಾರ್ ಅವರಿಗೆ ಇನ್ನೂ ವಯಸ್ಸಿದೆ. ಅವರು ಮುಂದೆ ಬೇಕಾದರೆ ಸಿಎಂ ಆಗಬಹುದು. 2023 ಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು. ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದಕ್ಕೆ ಅವರೇ ಆದರೆ ಒಳ್ಳೆಯದು ಎಂಬುದು ನಮ್ಮ ಆಸೆ. ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಡಿ.ಕೆ.ಶಿವಕುಮಾರ್ ಗೆ ಇನ್ನೂ ವಯಸ್ಸಿದೆ. ಅವರೋ ಅಥವಾ ಬೇರೆಯವರೋ ಮುಂದೆ ಆಗಬಹುದು. ಈಗ 2023 ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ.