Tag: ರಾಮಮಂದಿತ ಶಿಲಾನ್ಯಾಸ

  • ರಾಮಮಂದಿರ ಶಿಲ್ಯಾನ್ಯಾಸಕ್ಕೆ ಬೆಳ್ಳಿ ಇಟ್ಟಿಗೆ- 50 ಮಂದಿ ವಿವಿಐಪಿಗಳು ಭಾಗಿ ಸಾಧ್ಯತೆ

    ರಾಮಮಂದಿರ ಶಿಲ್ಯಾನ್ಯಾಸಕ್ಕೆ ಬೆಳ್ಳಿ ಇಟ್ಟಿಗೆ- 50 ಮಂದಿ ವಿವಿಐಪಿಗಳು ಭಾಗಿ ಸಾಧ್ಯತೆ

    ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ.

    ಐತಿಹಾಸಿಕ ಕಾರ್ಯಕ್ರಮ ಹೇಗೆ ನಡೆಯಲಿದೆ ಎಂಬ ಕುತೂಹಲ ಹಲವರಲ್ಲಿ ಮೂಡಿದೆ. ಇದೇ ವೇಳೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ 40 ಕೆಜಿ ಬೆಳ್ಳಿ ಇಟ್ಟಿಗೆಯನ್ನು ಇಟ್ಟು ಪ್ರಧಾನಿ ಮೋದಿ ಇಟ್ಟು ಶಿಲಾನ್ಯಾಸ ಮಾಡಲಿದ್ದಾರೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

    ಉಳಿದಂತೆ ಪ್ರಧಾನಿ ಮೋದಿ, ಆರ್.ಎಸ್.ಎಸ್ ಮೋಹನ್ ಭಗವತ್ ಸೇರಿ 50 ಮಂದಿ ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಹೇಳಿಕೊಂಡಿದೆ. ಆದರೆ ಇದುವರೆಗೂ ಪ್ರಧಾನಿ ಸಚಿವಾಲಯದಿಂದ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲ.

    ಕೊರೊನಾ ಕಾರಣದಿಂದ ಎರಡು ತಿಂಗಳು ತಡವಾಗಿದ್ದ ಶೀಲಾನ್ಯಾಸ ಕಾರ್ಯಕ್ರಮದ ಸಿದ್ಧತೆಗಳು ಅಯೋಧ್ಯೆಯಲ್ಲಿ ಈಗಾಗಲೇ ಶುರುವಾಗಿದೆ. ಆಗಸ್ಟ್ 3ರಿಂದಲೇ ಮೂರು ದಿನಗಳ ಕಾಲ ಧಾರ್ಮಿಕ ಕಾರ್ಯಗಳು ಆರಂಭವಾಗಲಿದೆ. ಕೊರೊನಾ ಕಾರಣದಿಂದ ಅತಿಥಿಗಳ ಪಟ್ಟಿಯನ್ನು ಕಡಿಮೆ ಮಾಡಲಾಗಿದ್ದು, ಅಯೋಧ್ಯೆಯ ವಿವಿಧ ಭಾಗಗಳಲ್ಲಿ ಭಕ್ತರು ಕಾರ್ಯಕ್ರಮ ವೀಕ್ಷಿಸಲು ಸ್ಕ್ರೀನ್‍ಗಳ ವ್ಯವಸ್ಥೆ ಮಾಡಲಾಗಿದೆ.

    ಮಹಾರಾಷ್ಟ್ರ ಸಿಎಂಉದ್ಧವ್ ಠಾಕ್ರೆ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಬಿಜೆಪಿ ಹಿರಿಯ ನಾಯಕರು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಗವತ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.