Tag: ರಾಮಸಂದ್ರ

  • ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಸಾವು

    ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಸಾವು

    ಕೋಲಾರ: ಅಪರಿಚತ ವಾಹನ ಬೈಕ್‌ಗೆ (Bike) ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ತಾಲೂಕಿನ ರಾಮಸಂದ್ರ (Ramasandra) ಗಡಿಯಲ್ಲಿ ಗುರುವಾರ ಮುಸುಕಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಮೃತರು ಬೆಂಗಳೂರಿಗೆ (Bengaluru) ಹೋಗಿ ವಾಪಸ್ ಹಿಂದಿರುಗುವ ವೇಳೆ ಘಟನೆ ನಡೆದಿದೆ. ವೇಮಗಲ್ ಮೂಲದ ಪುನೀತ್ (23), ಕೋಲಾರ ಪಟ್ಟಣದ ಜಗನ್ (22) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

    ಬೈಕ್ ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇನ್ನೂ ಘಟನೆ ಹೇಗೆ ನಡೆಯಿತು? ವಾಹನ ಯಾವುದು ಎಂಬ ಎಲ್ಲಾ ಮಾಹಿತಿಯನ್ನು ಪಡೆಯುವ ಸಲುವಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ

  • ಹಣ ಕೊಡಲಿಲ್ಲವೆಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ

    ಹಣ ಕೊಡಲಿಲ್ಲವೆಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ

    ರಾಮನಗರ: ಹಣ ಕೊಡಲಿಲ್ಲ ಎಂದು ಯುವತಿಗೆ ಯುವಕನೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ರಾಮಸಂದ್ರ ಗ್ರಾಮದಲ್ಲಿ ನಡೆದಿದೆ.

    ರಾಮಸಂದ್ರ ಗ್ರಾಮದ 21 ವರ್ಷದ ಕಾವ್ಯ ಕೊಲೆಯಾದ ದುರ್ದೈವಿ. ಅದೇ ಗ್ರಾಮದ ವೆಂಕಟೇಶ್ ಕೊಲೆ ಮಾಡಿದ ಆರೋಪಿ. ಮೃತಳ ತಾಯಿ ರಾತ್ರಿ ವ್ಯಾಪಾರ ಮುಗಿಸಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಹಣಕ್ಕಾಗಿ ಪೀಡಿಸುತ್ತಿದ್ದ ವೆಂಕಟೇಶ್ ಬುಧವಾರದಂದು ಕಾವ್ಯಳ ಬಳಿ ಹಣವಿರುವುದನ್ನು ಕಂಡಿದ್ದಾನೆ. ಹಣದ ಅವಶ್ಯಕತೆ ಹೆಚ್ಚಾಗಿದ್ದ ಕಾರಣ ವೆಂಕಟೇಶ್ ರಾತ್ರಿ ಕಾವ್ಯಳ ಬಳಿ ಹಣಕ್ಕಾಗಿ ಪೀಡಿಸಿದ್ದಾನೆ. ಆದ್ರೆ ಹಣ ನೀಡಲು ಕಾವ್ಯ ಒಪ್ಪದಿದ್ದಾಗ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿತಕ್ಕೆ ಒಳಗಾದ ಕಾವ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಘಟನೆ ಸಂಬಂಧ ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪರಾರಿಯಾಗಿದ್ದ ಆರೋಪಿ ವೆಂಕಟೇಶ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.