Tag: ರಾಮ್ ಚರಣ್ ತೇಜ್

  • ಆರ್.ಆರ್.ಆರ್ ಸಿನಿಮಾ ಸಲಿಂಗ ಪ್ರೇಮಕಥೆ ಎಂದ ಆಸ್ಕರ್ ಪ್ರಶಸ್ತಿ ವಿಜೇತ ರೆಸೂಲ್

    ಆರ್.ಆರ್.ಆರ್ ಸಿನಿಮಾ ಸಲಿಂಗ ಪ್ರೇಮಕಥೆ ಎಂದ ಆಸ್ಕರ್ ಪ್ರಶಸ್ತಿ ವಿಜೇತ ರೆಸೂಲ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಸಲಿಂಗ ಪ್ರೇಮಕಥೆಯನ್ನು ಹೊಂದಿದೆ ಎಂದು ಈ ಹಿಂದೆ ವಿದೇಶಿಗರು ಆಡಿಕೊಂಡಿದ್ದರು. ಈ ಬಾರಿ ಭಾರತದವರೇ ಆ ರೀತಿಯ ಹೇಳಿಕೆಯನ್ನು ಕೊಡುತ್ತಿದ್ದಾರೆ. ಸೌಂಡ್ ವಿನ್ಯಾಸಕ್ಕಾಗಿ ಆಸ್ಕರ್ ಪ್ರಶಸ್ತಿ ಪಡೆದಿರುವ ಮಲಯಾಳಂ ಚಿತ್ರರಂಗದ ರೆಸೂಲ್ ಪೂಕಟ್ಟಿ ಆರ್.ಆರ್.ಆರ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಇದೊಂದು ಸಲಿಂಗ ಪ್ರೇಮಕಥೆಯನ್ನು ಹೊಂದಿರುವ ಚಿತ್ರ ಎಂದಿದ್ದಾರೆ.

    ರೆಸೂಲ್ ಪೂಕಟ್ಟಿ ಆಸ್ಕರ್ ಪ್ರಶಸ್ತಿ ಪಡೆದ ಸಿನಿಮಾ ಸೌಂಡ್ ಇಂಜಿನಿಯರ್. ಭಾರತದ ಸಿನಿಮಾ ರಂಗಕ್ಕೆ ಒಂದೊಳ್ಳೆ ಹೆಸರು ತಂದು ಕೊಟ್ಟ ತಂತ್ರಜ್ಞ. ಅವರು ಭಾರತೀಯ ಸಿನಿಮಾ ರಂಗವೇ ಹೆಮ್ಮೆ ಪಡುವಂತಹ ಸಿನಿಮಾಗೆ ಈ ರೀತಿ ಹೇಳಿದ್ದು ಸಹಜವಾಗಿಯೇ ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ವಿಶ್ವವೇ ಮೆಚ್ಚಿಕೊಂಡಿದ್ದ ಸಿನಿಮಾಗೆ ಆ ರೀತಿ ಅವರು ಹೇಳಬಾರದಿತ್ತು ಎನ್ನುವ ಮಾತೂ ಕೇಳಿ ಬಂದಿದೆ. ಅಲ್ಲದೇ, ಆರ್.ಆರ್.ಆರ್ ಸಿನಿಮಾ ನಿರ್ಮಾಪಕರು ಈ ಕುರಿತು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

    ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು, ಸಾವಿರಾರು ಕೋಟಿ ಗಳಿಕೆ ಮಾಡಿದೆ. ಮಿತ್ರರಿಬ್ಬರು ಒಬ್ಬರಿಗೊಬ್ಬರು ಸಹಾಯ ಪಡೆದುಕೊಳ್ಳುತ್ತಾ, ತಮ್ಮ ಹಠವನ್ನು ಹೇಗೆ ಸಾಧಿಸುತ್ತಾರೆ ಎನ್ನುವುದೇ ಸಿನಿಮಾದ ಕಥೆ. ಈ ಕಥೆಗೆ ಸಲಿಂಗ ಪ್ರೇಮಕಥೆ ಎಂದು ವ್ಯಂಗ್ಯವಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಸಿನಿಮಾಗಳು ಲಾಸ್ ಆದಾಗ ಆ ಚಿತ್ರದ ಹೀರೋಗಳು ವಿತರಕರಿಗೆ ಅಥವಾ ನಿರ್ಮಾಪಕರಿಗೆ ಒಂದಷ್ಟು ಹಣವನ್ನು ವಾಪಸ್ಸು ಮಾಡಿದ ಉದಾಹರಣೆಗಳನ್ನು ತೆಲುಗು ಮತ್ತು ತಮಿಳು ಸಿನಿಮಾ ರಂಗದಲ್ಲಿ ಕೇಳುತ್ತಲೇ ಇರುತ್ತೇವೆ. ಅದರಲ್ಲೂ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದಾಗ ಅಥವಾ ವಿತರಕರು ಕೈ ಸುಟ್ಟುಕೊಂಡಾಗ ಅವರ ನೆರವಿಗೆ ಅನೇಕ ಬಾರಿ ರಜನಿಕಾಂತ್ ಅವರು ನಿಂತದ್ದು ಇದೆ. ಇದೇ ಮೊದಲ ಬಾರಿಗೆ ನಿರ್ದೇಶಕರೊಬ್ಬರು ತಮ್ಮ ಸಿನಿಮಾ ಸೋಲಿನ ಹೊಣೆಹೊತ್ತು ಸಂಭಾವನೆಯನ್ನು ಹಿಂದುರಿಗಿಸಲು ಮುಂದಾಗಿದ್ದಾರಂತೆ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಇತ್ತೀಚೆಗೆ ಬಿಡುಗಡೆಯಾದ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿತು. ಹೇಳಿಕೊಳ್ಳುವಷ್ಟು ಯಶಸ್ಸು ಕಾಣಲಿಲ್ಲ. ಚಿರಂಜೀವಿ ಸಿನಿಮಾಗಳು ಅಂದರೆ, ನೂರಾರು ಕೋಟಿ ರೂಪಾಯಿ ಕೊಟ್ಟು ವಿತರಣಾ ಹಕ್ಕುಗಳನ್ನು ಪಡೆದಿರುತ್ತಾರೆ. ಹಾಗಾಗಿ ವಿತರಕರಿಗೆ ನೂರಾರು ಕೋಟಿ ಲಾಸ್ ಆಗಿದೆ. ಸ್ವತಃ ವಿತರಕರೆ ತಮಗೆ ಹಣ ವಾಪಸ್ಸು ಮಾಡುವಂತೆ ಕೇಳಿದ್ದರು. ಹೀಗಾಗಿ ಸಿನಿಮಾ ಸೋಲಿನ ಹೊಣೆಯನ್ನು ನಿರ್ದೇಶಕ ಕೊರಟಾಲ ಶಿವ ಹೊತ್ತಿದ್ದಾರಂತೆ. ಹಾಗಾಗಿ ಮೂವತ್ತು ಕೋಟಿಗೂ ಅಧಿಕ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಇದನ್ನೂ ಓದಿ: ರೆಡ್ ಕಲರ್ ಡ್ರೆಸ್‌ನಲ್ಲಿ ಸಮಂತಾ ಮಿಂಚಿಂಗ್

    ವಿದೇಶ ಪ್ರವಾಸದಲ್ಲಿದ್ದ ಚಿರಂಜೀವಿ ಇದೀಗ ವಾಪಸ್ಸಾಗಿದ್ದಾರೆ. ಯಾವ ಏರಿಯಾದಿಂದ ಎಷ್ಟೆಷ್ಟು ಹಣ ಬಂದಿದೆ ಎಂದು ಲೆಕ್ಕಾಚಾರ ಹಾಕಿಸಿ, ಯಾರಿಗೆ ಎಷ್ಟು ಹಣವನ್ನು ಮರಳಿಸಬೇಕು ಎಂದು ಲೆಕ್ಕಹಾಕಿಸಿದ್ದಾರಂತೆ. ಸಿನಿಮಾ ಟೀಮ್‍ನಲ್ಲಿ ಯಾರು ಎಷ್ಟೆಷ್ಟು ಹಣ ಕೊಡಬೇಕು ಎಂದು ಸೂಚಿಸಿದ್ದರಂತೆ. ನಿರ್ದೇಶಕ ಕೊರಟಾಲ ಶಿವ ಅವರು ಚಿರಂಜೀವಿ ಅವರು ಹೇಳಿದ್ದಕ್ಕಿಂತಲೂ ಹೆಚ್ಚಿನ ಹಣ ನೀಡಿದ್ದಾರೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಕೇವಲ ಕೊರಟಾಲ ಶಿವ ಮಾತ್ರವಲ್ಲ ಚಿರಂಜೀವಿ ಕೂಡ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಅಲ್ಲದೇ, ಅವಶ್ಯ ಬಿದ್ದರೆ ಮತ್ತಷ್ಟು ಕೊಡುವುದಾಗಿಯೂ ಅವರು ಹೇಳಿದ್ದಾರೆ. ಏಪ್ರಿಲ್ 29 ರಂದು ಬಿಡುಗಡೆಯಾದ ಆಚಾರ್ಯ ಸಿನಿಮಾದಲ್ಲಿ ಚಿರಂಜೀವಿ ಜೊತೆ ಪುತ್ರ ರಾಮ್ ಚರಣ್ ತೇಜ ಕೂಡ ನಟಿಸಿದ್ದರು. ಆದರೂ, ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಗೆಲ್ಲುವುದಕ್ಕೆ ಆಗಿರಲಿಲ್ಲ.

  • ಆರ್.ಆರ್.ಆರ್ ಸಿನಿಮಾದಲ್ಲಿ ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಸಲಿಂಗ ಕಾಮಿಗಳಾ?

    ಆರ್.ಆರ್.ಆರ್ ಸಿನಿಮಾದಲ್ಲಿ ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಸಲಿಂಗ ಕಾಮಿಗಳಾ?

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್.ಆರ್.ಆರ್ ಸಿನಿಮಾ ಈವರೆಗೂ ಬಾಕ್ಸ್ ಆಫೀಸ್ ಗಳಿಕೆ, ಸಿನಿಮಾ ಮೂಡಿ ಬಂದ ರೀತಿ ಮತ್ತು ಮೇಕಿಂಗ್ ನಿಂದಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ಸಿನಿಮಾದ ಕಥೆಯಿಂದಾಗಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಅದರಲ್ಲೂ ವಿದೇಶಿ ನೋಡುಗರು ಈ ಕಥೆಯನ್ನು ಬೇರೆಯದ್ದಾಗಿಯೇ ಸ್ವೀಕರಿಸಿರುವುದು ಇನ್ನೂ ಸುದ್ದಿಗೆ ಕಾರಣವಾಗಿದೆ.

    ಆರ್.ಆರ್.ಆರ್ ಸಿನಿಮಾ ಓಟಿಟಿಯಲ್ಲಿ ನೋಡಲು ಲಭ್ಯವಿದೆ. ಹೀಗಾಗಿ ಅನೇಕರು ಈ ಸಿನಿಮಾವನ್ನು ಅದೇ ವೇದಿಕೆಯಲ್ಲೇ ವೀಕ್ಷಿಸುತ್ತಿದ್ದಾರೆ. ಸಿನಿಮಾ ನೋಡಿದ ವಿದೇಶಿಗರು ಈ ಸಿನಿಮಾವನ್ನು ಗೇ ಕಥೆಯುಳ್ಳ ಚಿತ್ರ ಎಂದು ಕಾಲೆಳೆದಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಪಾತ್ರಗಳು ಸಲಿಂಗ ಕಾಮಿಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಇಂತಹ ಸಾಕಷ್ಟು ಕಾಮೆಂಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೆ ಉತ್ತರಿಸಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಉರಿವ ಬೆಂಕಿಗೆ ತುಪ್ಪವಲ್ಲ, ಪೆಟ್ರೊಲ್ ಸುರಿದು ಮತ್ತಷ್ಟು ಬೆಂಕಿ ಉಗುಳುವಂತೆ ಮಾಡಿದ್ದಾರೆ. ‘ಇದೊಂದು ಸಲಿಂಗ ಪ್ರೇಮ ಎನ್ನುವಂತಹ ಕಥೆಯನ್ನು ಈ ಸಿನಿಮಾ ಹೊಂದಿದೆ ಎನ್ನುವ ಅರ್ಥದಲ್ಲಿ ಟ್ವೀಟ್‌ ಮಾಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ಈ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್‌ ಮತ್ತು ರಾಮ್ ಚರಣ್ ತೇಜ್ ಇಬ್ಬರೂ ಒಟ್ಟೊಟ್ಟಿಗೆ ತೆರೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಸಿನಿಮಾ ಮುಗಿಯುವ ತನಕ ಒಬ್ಬರಿಗಾಗಿ ಒಬ್ಬರು ಫೈಟ್ ಮಾಡುತ್ತಾರೆ. ನೃತ್ಯ ಮಾಡುತ್ತಾರೆ. ಹೀಗಾಗಿ ಇದೊಂದು ಸಲಿಂಗ ಪ್ರೇಮಕಥೆ ಎಂದು ಉಲ್ಲೇಖಿಸಲಾಗುತ್ತಿದೆ.

  • ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

    ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

    ಎಸ್.ಎಸ್.ರಾಜಮೌಳಿ ನಿರ್ದೇಶನದ ಜೂನಿಯರ್ ಎನ್.ಟಿಆರ್ ಹಾಗೂ ರಾಮ್ ಚರಣ್ ನಟನೆಯ ಆರ್.ಆರ್.ಆರ್ ಸಿನಿಮಾ ಬಾಕ್ಸಾಫೀಸ್‌ ಕೊಳ್ಳೆ ಹೊಡೆದಿತ್ತು. ದಾಖಲೆಯ ರೀತಿಯಲ್ಲಿ ಹಣ ಬಾಚಿಕೊಂಡಿತ್ತು. ಇದೀಗ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಇದೇ ತಿಂಗಳ 20ರಂದು ತಾರಕ್ ಹುಟ್ಟುಹಬ್ಬದಂದು ಒಟಿಟಿಗೆ ಲಗ್ಗೆ ಇಟ್ಟ ತ್ರಿಬಲ್ ಆರ್ ಸಿನಿಮಾ ಹೊಸದೊಂದು ರೆಕಾರ್ಡ್ ಬರೆದಿದೆ. ಇದನ್ನೂ ಓದಿ : ‘ಮುದುಕನ ಲವ್ ಸ್ಟೋರಿ’ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ

    ಈ ಸಿನಿಮಾ ಜೀ5 ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾದ ದೃಶ್ಯ ವೈಭವ ತ್ರಿಬಲ್ ಆರ್ ಸಿನಿಮಾ, ಜಸ್ಟ್ ಒಂದೇ ಒಂದು ನಿಮಿಷದಲ್ಲಿ 1000 ಮಿಲಿಯನ್ಸ್ ಸ್ಟ್ರೀಮಿಂಗ್ ಪಡೆದುಕೊಂಡಿದ್ದು, ಜೊತೆಗೆ ಜೀ5ಯಲ್ಲಿ ನಾಲ್ಕು ಭಾಷೆಯಲ್ಲಿಯೂ ಟ್ರೇಡಿಂಗ್ ಕಮಾಲ್ ಮಾಡ್ತಿದೆ. ಇದನ್ನೂ ಓದಿ : ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಈ ಕುರಿತು ಟ್ವಿಟ್ ಮಾಡಿರುವ ಜ್ಯೂನಿಯರ್ ಎನ್.ಟಿ.ಆರ್ ‘ಆರ್.ಆರ್.ಆರ್ ಸಿನಿಮಾಕ್ಕೆ ನೀವು ತೋರಿಸುತ್ತಿರುವ ಪ್ರೀತಿಗೆ ನಾನು ಕೃತಜ್ಞ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಈ ನಾಲ್ಕು ಭಾಷೆಯಲ್ಲಿಯೂ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದ್ದು,ನಿಮ್ಮ ಅದ್ಭುತ ಪ್ರತಿಕ್ರಿಯೆ ಧನ್ಯವಾದ’ ಎಂದು ಹೇಳಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ರಾಜಮೌಳಿ ಸಿನಿಮಾ ಎಂದರೆ ಅಭಿಮಾನಿಗಳು ಸಹಜವಾಗಿಯೇ ಅದ್ದೂರಿತನ ಬಯಸುತ್ತಾರೆ. ಅದಕ್ಕೆ ತಕ್ಕಂತೆಯೇ ‘ಆರ್​ಆರ್​ಆರ್​’ ಸಿನಿಮಾ ಮೂಡಿಬಂದಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಆ್ಯಕ್ಷನ್​ ಖದರ್ ನಲ್ಲಿ ಮೆರೆದಿದ್ದರು. ಜೊತೆಗೆ ಸೆಂಟಿಮೆಂಟ್​ ಕೂಡ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಗಿದೆ.

  • ಮೇ 20ಕ್ಕೆ ಓಟಿಟಿಯಲ್ಲಿ ಆರ್.ಆರ್.ಆರ್ ಸಿನಿಮಾ : ಜ್ಯೂನಿಯರ್ ಎನ್.ಟಿ.ಆರ್ ಬರ್ತಡೇ ಗಿಫ್ಟ್

    ಮೇ 20ಕ್ಕೆ ಓಟಿಟಿಯಲ್ಲಿ ಆರ್.ಆರ್.ಆರ್ ಸಿನಿಮಾ : ಜ್ಯೂನಿಯರ್ ಎನ್.ಟಿ.ಆರ್ ಬರ್ತಡೇ ಗಿಫ್ಟ್

    ನ್ನಡ, ತಮಿಳು, ಹಿಂದಿ,‌ ಮಲಯಾಳಂ, ಮರಾಠಿ, ಗುಜರಾತಿ, ಬೆಂಗಾಲಿ ಹೀಗೆ ನಾನಾ ಭಾಷೆಗಳ‌, ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ಚಿತ್ರಪ್ರೇಮಿಗಳ  ಹಾಕುತ್ತಿರುವ ಪ್ರತಿಷ್ಠಿತ ಒಟಿಟಿ ಸಂಸ್ಥೆ ಜೀ5 ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ RRR ಚಿತ್ರವನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸ್ತಿದೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಎಸ್.ಎಸ್ ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಆರ್ ಆರ್ ಆರ್ ಬಾಕ್ಸಾಫೀಸ್ ಕೊಳ್ಳೆ ಹೊಡೆದು,  1100 ಕೋಟಿ ಹಣ ಲೂಟಿ ಮಾಡಿತ್ತು. ರಾಮ್-ಭೀಮ್ ಪವರ್ ಫುಲ್ ಆಕ್ಟಿಂಗ್ ಗೆ ಸಿನಿಪ್ರೇಕ್ಷಕರು ಜೈಕಾರ ಹಾಕಿದ್ದರು. ಮಾರ್ಚ್ 24ರಂದು ವರ್ಲ್ಡ್ ವೈಡ್ ರಿಲೀಸ್ ಆಗಿದ್ದ ರೌದ್ರ, ರಣ, ರುಧೀರ ಸಿನಿಮಾ ಬೆಳ್ಳಿತೆರೆಯಲ್ಲಿ ಅಬ್ಬರಿಸಿ, ಬೊಬ್ಬಿರಿದಿತ್ತು. ಈಗ ಈ ಸಿನಿಮಾ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದೆ. ವಿಶೇಷ ಅಂದ್ರೆ ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ದಿನವೇ ಅಂದ್ರೆ ಮೇ 20ಕ್ಕೆ ತ್ರಿಬಲ್ ಆರ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದು ತಾರಕ್ ಫ್ಯಾನ್ಸ್ ಗೆ ಡಬ್ಬಲ್ ಖುಷಿಕೊಟ್ಟಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ತ್ರಿಬಲ್ ಆರ್ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ಸ್ವತಃ ಜೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ಡಬ್ ಮಾಡಿದ್ದರು. ಇದೀಗ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿರುವ ಹಿನ್ನೆಲೆ ಆರ್ ಆರ್ ಆರ್ ಸಿನಿಮಾದ ನಯಾ ಟ್ರೇಲರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ಆರ್.ಆರ್.ಆರ್ ಸಿನಿಮಾ ಯಶಸ್ವಿಯಾಗಿ ಐವತ್ತು ದಿನ ಕಂಪ್ಲೀಟ್ ಮಾಡಿದ್ದು, ಇದೇ‌ ಖುಷಿಯಲ್ಲಿರುವ ಚಿತ್ರತಂಡ ಒಟಿಟಿ ಬಿಡುಗಡೆ ದಿನಾಂಕ ರಿವೀಲ್ ಮಾಡಿದೆ. ಮೇ20 ರಿಂದ, ಜೀ5ನಲ್ಲಿ RRR ಸಿನಿಮಾ ಪ್ರೀಮಿಯರ್ ಆಗ್ತಿದೆ. 4k ಕ್ವಾಲಿಟಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

  • ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಬಾಲಿವುಡ್ ಮಂದಿಗಾಗಿಯೇ ಆರ್.ಆರ್.ಆರ್ ಸಿನಿಮಾ ತಂಡ ಸಕ್ಸಸ್ ಪಾರ್ಟಿ ಆಯೋಜನೆ ಮಾಡಿತ್ತು. ಈ ಸಂದರ್ಭದಲ್ಲಿ ಆರ್.ಆರ್.ಆರ್ ಸಿನಿಮಾ ತಂಡ ಮತ್ತು ಬಾಲಿವುಡ್ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಆಮೀರ್ ಖಾನ್, ಕರಣ್ ಜೋಹಾರ್, ಜಾವೇದ್ ಅಖ್ತರ್, ದಿ ಕಾಶ್ಮೀರ್ ಫೈಲ್ಸ್ ನಟ ದರ್ಶನ್ ಸಿಂಗ್, ತುಷಾರ್ ಕಪೂರ್ ಹೀಗೆ ಬಾಲಿವುಡ್ ದಿಗ್ಗಜರೇ ಈ ಪಾರ್ಟಿಗೆ ಬಂದಿದ್ದರು. ಯಾರೇ ದಿಗ್ಗಜರು ಬಂದಿದ್ದರೂ, ಅಲ್ಲಿ ಫಳಫಳ ಹೊಳೆದದ್ದು ಮಾತ್ರ ಮಾದಕ ನಟಿ ರಾಕಿ ಸಾವಂತ್. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    ಪಾರ್ಟಿಗೆ ಅವರು ಬಂದಿದ್ದ ಲುಕ್ಕೇ ವಿಭಿನ್ನವಾಗಿತ್ತು. ತುಂಬಾ ಬೋಲ್ಡ್ ಆಗಿ ಕಾಣುವಂತಹ ರೆಡ್ ಡ್ರೆಸ್ ನಲ್ಲಿ ರಾಕಿ ಆಗಮಿಸಿ, ಎಲ್ಲರ ಗಮನ ಸೆಳೆದರು. ಬರೀ ಕಾಸ್ಟ್ಯೂಮ್ ಮಾತ್ರವಲ್ಲ, ಗೋಲ್ಡನ್ ಕಲರ್ ನಿಂದ ಹೆಣೆಯಲ್ಪಟ್ಟ ಕೇಶ ವಿನ್ಯಾಸ ಮತ್ತು ಸೊಂಟದಲ್ಲಿ ಹಾಕಿಸಿಕೊಂಡಿದ್ದ ರಿವಲ್ವಾರ್ ಟ್ಯಾಟೋ ಕ್ಯಾಮೆರಾಗಳು ಕಣ್ಣಿಗೆ ಆಹಾರವಾಗಿದ್ದಂತೂ ಸುಳ್ಳಲ್ಲ. ಹಾಗಂತ ರಾಕಿ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅಲ್ಲಿಗೆ ಬಂದಿದ್ದ ಅಷ್ಟೂ ಸಿಲಿಬ್ರಿಟಿಗಳ ಜತೆ ಫೋಟೋ ತಗೆಸಿಕೊಂಡರು. ತಮಾಷೆ ಮಾಡಿಕೊಂಡು ಇಡೀ ಪಾರ್ಟಿಗೆ ಕಳೆ ತಂದಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ರಾಕಿಯ ಉತ್ಸಾಹ ಕಂಡು ಎಲ್ಲರೂ ದಂಗಾಗಿದ್ದರು. ಅಲ್ಲದೇ, ತಾನು ಸೊಂಟದಲ್ಲಿ ಬರೆಯಿಸಿಕೊಂಡಿದ್ದ ಗನ್ ಟ್ಯಾಟೋವನ್ನು ಎಲ್ಲರಿಗೂ ತೋರಿಸುವುದೇ ಆ ಸಂದರ್ಭದಲ್ಲಿ ಅವರ ಕಾಯಕವಾಗಿತ್ತು. ಬಂದವರಿಗೆಲ್ಲ ಟ್ಯಾಟೋ ತೋರಿಸಿ, ಮನರಂಜನೆ ನೀಡುತ್ತಿದ್ದರು ರಾಕಿ ಸಾವಂತ್. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಈಗಾಗಲೇ ಆರ್.ಆರ್.ಆರ್ ಸಿನಿಮಾ ವಿಶ್ವದಾದ್ಯಂತ ಭಾರೀ ಗೆಲುವು ಕಂಡಿದೆ. ಇನ್ನೇನು ಸದ್ಯದಲ್ಲೇ 1000 ಕೋಟಿ ಕ್ಲಬ್ ಕೂಡ ಸೇರಲಿದೆ. ಹಿಂದಿಯಲ್ಲೂ ಭರ್ಜರಿ ಹಿಟ್ ಆಗಿದೆ. ಹಾಗಾಗಿ ಇಡೀ ತಂಡ ಬಾಲಿವುಡ್ ಮಂದಿಗೆ ಪಾರ್ಟಿ ಆಯೋಜನೆ ಮಾಡಿತ್ತು. ರಾಮ್ ಚರಣ್ ತೇಜ್, ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರ ತಂಡವೇ ಅಲ್ಲಿತ್ತು.

  • ಆರ್.ಆರ್.ಆರ್ ನಿಖರ ಗಳಿಕೆ  ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ಆರ್.ಆರ್.ಆರ್ ನಿಖರ ಗಳಿಕೆ ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಗಳಿಕೆಯ ಬಗ್ಗೆ ಹೆಚ್ಚಾಗಿ ಊಹಾಪೋಹಗಳಿಗೆ ಹರಿದಾಡಿದವು. ಒಂದೇ ದಿನಕ್ಕೆ 100 ಕೋಟಿ, ಮೂರೇ ದಿನಕ್ಕೆ 250 ಕೋಟಿ ಎಂಬ ಸುದ್ದಿಯೂ ಬಂತು. ಆದರೆ, ನಿಖರವಾಗಿ ಇಂತಿಷ್ಟೇ ಹಣ ಬಂದಿದೆ ಎಂದು ಅಧಿಕೃತವಾಗಿ ಚಿತ್ರತಂಡವು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಇದೀಗ ನಿರ್ಮಾಪಕರೇ ತಮ್ಮ ಚಿತ್ರದ ಗಳಿಕೆಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ಚೆನ್ನಮ್ಮ, ರಾಯಣ್ಣನೂ ಅಲ್ಲ: ನಟ ಚೇತನ್

    ಬುಧವಾರ ನಿರ್ಮಾಪಕರು ನೀಡಿರುವ ಮಾಹಿತಿಯಂತೆ ಈವರೆಗೂ ಆರ್.ಆರ್.ಆರ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಶ್ವದಾದ್ಯಂತ ರೂ. 611 ಕೋಟಿಯಂತೆ. ಇದರಲ್ಲಿ ಭಾರತದಿಂದಲೇ 474 ಕೋಟಿ ಸಂಗ್ರಹವಾಗಿದೆ ಎಂದಿದ್ದಾರೆ. ಕೇವಲ ಹಿಂದಿ ಅವತರಣಿಕೆಯಿಂದಲೇ ಬರೋಬ್ಬರಿ 107 ಕೋಟಿ ಹಣ ಬಂದಿದೆಯಂತೆ. ಇದನ್ನೂ ಓದಿ: ತಂದೆ, ತಾತನ ಹೆಸರು ಬಳಸಿಕೊಳ್ಳದೆ ಜಿಪಂ ಸ್ಥಾನ ಗೆಲ್ಲಲಿ: ನಿಖಿಲ್‍ಗೆ ಸುಮಲತಾ ಸವಾಲು

    ಮಾರ್ಚ್ 25 ರಂದು ರಿಲೀಸ್ ಆಗಿರುವ ಈ ಸಿನಿಮಾ ಆರು ದಿನಕ್ಕೆ ಒಟ್ಟು 611 ಕೋಟಿ ರೂಪಾಯಿ ಗಳಿಸಿದ್ದು, ವಾರಾಂತ್ಯಕ್ಕೆ ಸಾವಿರ ಕೋಟಿ ರೂಪಾಯಿ ಮುಟ್ಟುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಿಂದಲೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಹಾಗಾಗಿ ಹಣ ಮತ್ತಷ್ಟು ಹರಿದು ಬರಲಿದೆ ಎಂದಿದೆ ಡಿವಿವಿ ಎಂಟರ್ ಟೈನ್ ಮೆಂಟ್ ನಿರ್ಮಾಣ ಸಂಸ್ಥೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ರಾಜಮೌಳಿ ಅವರ ಹಿಂದಿನ ಎಲ್ಲ ಸಿನಿಮಾಗಳಿಗೂ ಹೋಲಿಸಿದರೆ, ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು ಇದೇ ಮೊದಲ ಬಾರಿಗೆ. ಬಾಹುಬಲಿ ಚಿತ್ರಕ್ಕಿಂತಲೂ ಬಾಕ್ಸ್ ಆಫೀಸ್ ಕಲೆಕ್ಷನ್ ಆರ್.ಆರ್.ಆರ್ ನಲ್ಲಿ ಜೋರಾಗಿದೆಯಂತೆ. ತಮಿಳು, ಕನ್ನಡ, ತೆಲುಗು, ಹಿಂದಿ ಮಲಯಾಳಂ ಹೀಗೆ ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಯಶ್ ನಟನೆಯ ಕೆಜಿಎಫ್ ಸಿನಿಮಾ ಮತ್ತು ತಮಿಳಿನ ವಿಜಯ್ ಅವರ ಚಿತ್ರಗಳು ತೆರೆ ಕಾಣುವತನಕ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಹಾಗಾಗಿ ಚಿತ್ರದ ಓಟಕ್ಕೆ ಯಾವುದೇ ಅಡೆತಡೆ ಕಾಣುತ್ತಿಲ್ಲ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

    ಸ್ವಾತಂತ್ರ್ಯ ಪೂರ್ವದಲ್ಲಿ ಕ್ರಾಂತಿಕಾರಿಗಳಾದ ಕೋಮರಾಮ್ ಭೀಮ್ ಮತ್ತು ಸೀತಾರಾಮ ರಾಜು ಅವರನ್ನು ಹೋಲುವಂತಹ ಕಾಲ್ಪನಿಕ ಕಥೆಗಳನ್ನಾಧರಿಸಿ ಈ ಸಿನಿಮಾ ಮಾಡಿದ್ದಾರೆ ರಾಜಮೌಳಿ. ಹಾಗಾಗಿ ಈ ಸಿನಿಮಾ ಕಥೆಯಿಂದಲೂ ಮತ್ತು ಮೇಕಿಂಗ್ ನಿಂದಲೂ ಗಮನ ಸೆಳೆದಿದೆ.

  • RRR- ಥಿಯೇಟರ್ ಗೆ ‘ಗನ್’ ತಂದ ಅಭಿಮಾನಿ, ಆಗಿದ್ದೇನು?

    RRR- ಥಿಯೇಟರ್ ಗೆ ‘ಗನ್’ ತಂದ ಅಭಿಮಾನಿ, ಆಗಿದ್ದೇನು?

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಒಂದು ಕಡೆ ಬಾಕ್ಸ್ ಆಫೀಸ್ ಭರ್ತಿ ಆಗುತ್ತಿದ್ದರೆ, ಮತ್ತೊಂದು ಕಡೆ ಅಭಿಮಾನಿಗಳ ಅತಿರೇಕ ವರ್ತನೆಗಳು ನಡೆಯುತ್ತಿದೆ. ಹೀಗಾಗಿ ಸ್ವತಃ ಆರ್.ಆರ್.ಆರ್ ಚಿತ್ರತಂಡವೇ ತಲೆ ಕೆಡಿಸಿಕೊಂಡು ಕೂತಿದೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಸಿನಿಮಾದ ಫಸ್ಟ್ ಶೋಗೆ ಬಂದಿದ್ದ ಚಿತ್ತೂರು ಅಭಿಮಾನಿ ಖುಷಿಯಲ್ಲಿ ಸಂಭ್ರಮಿಸುತ್ತಲೇ ಹೃದಯಾಘಾತವಾಗಿ ತೀರಿಕೊಂಡ. ಆನಂತರ ಆಂಧ್ರದ ಇಬ್ಬರು ಅಭಿಮಾನಿಗಳು ಟಿಕೆಟ್ ಸಿಗಲಿಲ್ಲ ಎಂದು ಬೇಸರದಲ್ಲಿ ಬೈಕ್ ಓಡಿಸಿಕೊಂಡು ಹೋಗುವಾಗ ಅಪಘಾತವಾಗಿ ಜೀವ ಕಳೆದುಕೊಂಡರು. ಇಲ್ಲೊಬ್ಬ ಅಭಿಮಾನಿ ಗನ್ ಸಮೇತ ಚಿತ್ರ ನೋಡಲು ಬಂದು, ಆತಂಕ ಸೃಷ್ಟಿ ಮಾಡಿದ್ದಾನೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಈ ಘಟನೆ ನಡೆದಿದ್ದು ಆಂಧ್ರ ಪ್ರದೇಶದ ಈಸ್ಟ್ ಗೋಧಾವರಿ ಜಿಲ್ಲೆಯ ಪೀಟಾಪುರಂ ಎಂಬಲ್ಲಿ. ಈ ಊರಿನ ಅನ್ನಪೂರ್ಣ ಚಿತ್ರಮಂದಿರದಲ್ಲಿ ಆರ್.ಆರ್.ಆರ್ ಪ್ರದರ್ಶನದ ವೇಳೆಗೆ ಬಾಲಾಜಿ ಹೆಸರಿನ ಅಭಿಮಾನಿಯೊಬ್ಬ ಗನ್ ತಂದು, ಕ್ಯಾಮೆರಾದ ಮುಂದೆಯೇ ಫೋಸ್ ಕೊಟ್ಟಿದ್ದ. ಥಿಯೇಟರ್ ಒಳಗೆ ಹೋಗಿ ಪರದೆಯ ಮುಂದೆಯೇ ಗನ್ ಹಿಡಿದುಕೊಂಡು ನಿಂತುಬಿಟ್ಟ. ಅದನ್ನು ಮಾಧ್ಯಮಗಳು ಕೂಡ ಪ್ರಸಾರ ಮಾಡಿದವು. ಕ್ಷಣಾರ್ಥದಲ್ಲಿಯೇ ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಯಿತು. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅನ್ನಪೂರ್ಣ ಥಿಯೇಟರ್ ಸರಹದ್ದಿನ ಪೀತಾಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಬಾಲಾಜಿಯನ್ನು ವಶಕ್ಕೆ ಪಡೆದಿದ್ದಾರೆ. ಅವನ ಜತೆಗಿದ್ದ ಗನ್ ಅನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈತನಿಗೆ ಗನ್ ಹೇಗೆ ಬಂದಿತು, ಅದರಲ್ಲಿದ್ದ ಗುಂಡುಗಳು ಎಷ್ಟು ಅಪಾಯಕಾರಿ, ಅವನು ಯಾಕೆ ಗನ್ ಅನ್ನು ಥಿಯೇಟರ್ ಗೆ ತಂದ ಹೀಗೆ ಎಲ್ಲಾ ಆಯಾಮಗಳಲ್ಲೂ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರಂತೆ.

  • ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಅತಿಥಿಗಳು ಯಾರು?

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ

    7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್

    ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.

  • ಆರ್.ಆರ್.ಆರ್ ಟೀಮ್ ನಿಂದ ಟೆಂಪಲ್ ರನ್

    ಆರ್.ಆರ್.ಆರ್ ಟೀಮ್ ನಿಂದ ಟೆಂಪಲ್ ರನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಥಿಯೇಟರ್ ಗೆ ಬರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಸಿನಿಮಾ ತಂಡ ದೇವಸ್ಥಾನಗಳಿಗೆ ಭೇಟಿ ನೀಡಿ ಸಿನಿಮಾದ ಗೆಲುವಿನ ಬಗ್ಗೆ ಪ್ರಾರ್ಥಿಸುತ್ತಿದೆ. ಮೊನ್ನೆಯಷ್ಟೇ  ಕರ್ನಾಟಕದಲ್ಲಿ ಪ್ರಿ ರಿಲೀಸ್ ಇವೆಂಟ್ ಮಾಡಿದ್ದ ರಾಜಮೌಳಿ ಅಂಡ್ ಟೀಮ್ ಇದೀಗ ಅಮೃತಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ಕೊಟ್ಟಿದೆ.

    ಈ ಅಮೃತಸರದ ಗೋಲ್ಡನ್ ಟೆಂಪಲ್ ದರ್ಶನ ಪಡೆದರೆ, ಅಂದುಕೊಂಡದ್ದು ಎಲ್ಲವೂ ನೆರವೇರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿಯೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಒಟ್ಟಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಈಗಾಗಲೇ ಆರ್.ಆರ್.ಆರ್ ಸಿನಿಮಾ ಅತೀ ನಿರೀಕ್ಷೆಯನ್ನು ಮೂಡಿಸಿದೆ. ಹಲವು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟ್ರೇಲರ್ ಸಖತ್ ಕ್ರೇಜ್ ಕ್ರಿಯೇಟ್ ಮಾಡಿವೆ. ಹಾಗಾಗಿಯೇ ಈ ಚಿತ್ರಕ್ಕಾಗಿ ವಿಶ್ವದಾದ್ಯಂತ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಇದೇ ಮೊದಲ ಬಾರಿಗೆ ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ತೆರೆ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಸೇರಿದಂತೆ ಹಲವು ತಾರೆಯರ ಬಳಗವೇ ಈ ಸಿನಿಮಾದಲ್ಲಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿದೆ.