Tag: ರಾಮ್ ಚರಣ್ ತೇಜ್

  • ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

    ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

    ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭದ್ರತಾ ಮುಖ್ಯಸ್ಥನಿಗೆ ಕರೆ ಮಾಡಿದ್ದರಂತೆ ರಾಮ್ ಚರಣ್

    ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭದ್ರತಾ ಮುಖ್ಯಸ್ಥನಿಗೆ ಕರೆ ಮಾಡಿದ್ದರಂತೆ ರಾಮ್ ಚರಣ್

    ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತೇಜ್ ನಟನೆಯ, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕೆಲ ದೃಶ್ಯಗಳು ಉಕ್ರೇನ್ ನಲ್ಲಿ ಚಿತ್ರೀಕರಣವಾಗಿದೆ. ಕೆಲ ದಿನಗಳ ಕಾಲ ಇಡೀ ಚಿತ್ರತಂಡ ಉಕ್ರೇನ್ ನಲ್ಲಿಯೇ ಬೀಡುಬಿಟ್ಟು, ಅಲ್ಲಿನ ಸುಂದರ ತಾಣಗಳನ್ನು ಸೆರೆ ಹಿಡಿದಿತ್ತು. ಅದಾದ ಕೆಲವೇ ತಿಂಗಳ ಬಳಿಕೆ ಉಕ್ರೇನ್ ಮತ್ತು ರಷ್ಯಾ ಯುದ್ಧ ಶುರುವಾಯಿತು. ಇಡೀ ದೇಶಕ್ಕೆ ದೇಶವೇ ಯುದ್ಧದ ಭಯದಲ್ಲಿ ಬದುಕಿತ್ತು. ಈ ಸಂದರ್ಭದಲ್ಲಿ ನಟ ರಾಮ್ ಚರಣ್ ತೇಜ್, ತಮಗೆ ಪರಿಚಯ ಇರುವ ಭದ್ರತಾ ಸಿಬ್ಬಂದಿಯ ಮುಖ್ಯಸ್ಥರಿಗೆ ಕರೆ ಮಾಡಿ, ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದಾರೆ.

    ಭದ್ರತಾ ಸಿಬ್ಬಂದಿಯು ನೀಡಿದ ಮಾಹಿತಿ ರಾಮ್ ಚರಣ್ ಅವರಲ್ಲೂ ಆತಂಕ ಮೂಡಿಸಿತ್ತಂತೆ. “ನನ್ನ ತಂದೆ ಬಂದೂಕಿನೊಂದಿಗೆ ರಸ್ತೆಯಲ್ಲಿದ್ದಾರೆ. ಯಾವ ಕಡೆಯಿಂದ ಏನು ಬರುತ್ತದೋ ಗೊತ್ತಿಲ್ಲವೆಂದು’ ಭದ್ರತಾ ಸಿಬ್ಬಂದಿಯ ಮುಖ್ಯಸ್ಥರು ತಿಳಿಸಿದ್ದಾರೆ. “ನನ್ನ ಕೈಲಾದ ಸಹಾಯವನ್ನು ನಾನೂ ಮಾಡುತ್ತೇನೆ. ನಿಮ್ಮ ದೇಶಕ್ಕೆ ಬರಲು ಆಗದೇ ಇರಬಹುದು. ಇಲ್ಲಿಂದಲೇ ನಾನು ಶಾಂತಿಗಾಗಿ ಪ್ರಾರ್ಥಿಸುವೆ” ಎಂದು ಮರು ಉತ್ತರ ಕೊಟ್ಟಿದ್ದರಂತೆ ರಾಮ್ ಚರಣ್ ತೇಜ್. ಈ ಘಟನೆಯನ್ನು ಅವರು ಆರ್.ಆರ್.ಆರ್ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ ಮೆಗಾ ಪವರ್ ಸ್ಟಾರ್. ಅಲ್ಲದೇ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸುತ್ತಾ, ‘ನಾನು ಇಲ್ಲಿಯವರೆಗೆ ಚಿತ್ರೀಕರಿಸಿದ ಅತ್ಯುತ್ತಮ ದೇಶಗಳಲ್ಲಿ ಉಕ್ರೇನ್ ದೇಶವು ಕೂಡ ಒಂದಾಗಿದೆ’ ಎಂದು ಉಕ್ರೇನ್ ಬಗ್ಗೆ ಬಣ್ಣಿಸಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್ 

    ದೇಶದ ಜನತೆ ಮತ್ತು ವಿಶ್ವದಾದ್ಯಂತ ಇರುವ ಅವರು ತಮ್ಮ ಅಭಿಮಾನಿಗಳ ಜತೆ ತಾವು ಸದಾ ಇರುವುದನ್ನು ಅವರು ಮತ್ತೆ ಮತ್ತೆ ಸಾಬೀತು ಪಡಿಸುತ್ತಲೇ ಇದ್ದಾರೆ. ಕೋವಿಡ್-19 ಸಮಯದಲ್ಲೂ ಅವರು ಹತ್ತಾರು ಕೆಲಸಗಳನ್ನು ಮಾಡಿದ್ದರು. ಸಾಕಷ್ಟು ಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದರು. ಇದನ್ನೂ ಓದಿ: ಅಪ್ಪು ಹುಟ್ಟು ಹಬ್ಬಕ್ಕೆ ನೇತ್ರದಾನದ ವಾಗ್ದಾನ

    ‘ಆರ್‍ಆರ್‍ಆರ್’ ಕುರಿತು ಹೇಳುವುದಾದರೆ, ಉಕ್ರೇನ್ ಮತ್ತು ಬಲ್ಗೇರಿಯಾದಲ್ಲಿ ಈ ಚಿತ್ರದ ಕೆಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. 400 ಕೋಟಿ ರೂಪಾಯಿ ಬಜೆಟ್‍ನಲ್ಲಿ ನಿರ್ಮಿಸಲಾದ ಈ ಚಿತ್ರವನ್ನು ಆರಂಭದಲ್ಲಿ ಜುಲೈ 30, 2020 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಅಂತಿಮವಾಗಿ, ಚಿತ್ರವನ್ನು ಮಾರ್ಚ್ 25, 2022 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

  • ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಪ್ರೀ ರಿಲೀಸ್ ಕನ್ನಡ ಇವೆಂಟ್ ಬೆಂಗಳೂರಿನಲ್ಲಿ ಮಾಡುವುದಾಗಿ ಈ ಹಿಂದೆ ಘೋಷಣೆ ಆಗಿತ್ತು. ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಇವೆಂಟ್ ಮಾಡುವ ಕುರಿತು ಚಿತ್ರತಂಡವೇ ಹೇಳಿತ್ತು. ಕೋವಿಡ್ ನಿಯಮ ಪಾಲನೆಯ ಕಾರಣದಿಂದಾಗಿ ಕಾರ್ಯಕ್ರಮ ಆಗಲಿಲ್ಲ. ಇದೀಗ ಅದೇ ಇವೆಂಟ್ ಬೆಂಗಳೂರಿನಿಂದ ಶಿಫ್ಟ್ ಆಗಿದೆ. ಮಾರ್ಚ್ 19ರಂದು ಸಿನಿಮಾದ ಪ್ರೀ ರಿಲೀಸ್ ಕನ್ನಡ ಇವೆಂಡ್ ಆಂಧ್ರದ ಗಡಿಭಾಗವಾದ ಚಿಕ್ಕ ಬಳ್ಳಾಪುರದಲ್ಲಿ ನಡೆಯಲಿದೆ. ಇದನ್ನೂ ಓದಿ : ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ಬೆಂಗಳೂರಿನಲ್ಲಿ ಮಾಡಲು ಹೊರಟಿದ್ದ ಇವೆಂಟ್ ಅಲ್ಲಿಗೆ ಶಿಫ್ಟ್ ಆಗಲು ಕಾರಣ ಟ್ರಾಫಿಕ್ ಜಾಮ್ ಎನ್ನುತ್ತಿದೆ ಚಿತ್ರತಂಡ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಹೋದರೆ, ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ತೊಂದರೆ ಆಗುತ್ತದೆ. ಹಾಗಾಗಿ ಚಿಕ್ಕ ಬಳ್ಳಾಪುರದಲ್ಲಿ ಮಾಡಲು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಕನ್ನಡ ಮತ್ತು ತೆಲುಗಿನ ಖ್ಯಾತ ಗಣ್ಯರೆಲ್ಲ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯ ಅತಿಥಿಯಾಗಿ ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆಯಂತೆ. ಇದನ್ನೂ ಓದಿ : ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದೇ ಮೊದಲ ಬಾರಿಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಜೊತೆಯಾಗಿ ನಟಿಸಿದ್ದಾರೆ. ಇಬ್ಬರ ಫ್ಯಾನ್ಸ್ ಮಧ್ಯ ಆಗಾಗ್ಗೆ ಸ್ಟಾರ್ ವಾರ್ ನಡೆಯುತ್ತಿತ್ತು. ಹೀಗಾಗಿ ಇಬ್ಬರೂ ಅಭಿಮಾನಿಗಳು ಒಟ್ಟಿಗೆ ಸಿನಿಮಾ ನೋಡುವುದು ಇದೊಂದು ಸಿನಿಮಾದ ಐತಿಹಾಸಿಕ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.