Tag: ರಾಮ ಮಂದಿರ

  • ಕೋರ್ಟ್‌ನಲ್ಲಿ ರಾಮ ಮಂದಿರ ವಿರುದ್ಧ ಕಪಿಲ್‌ ಸಿಬಲ್‌ರನ್ನು ಕಳುಹಿಸಿದ್ದು ಯಾರು: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ಕೋರ್ಟ್‌ನಲ್ಲಿ ರಾಮ ಮಂದಿರ ವಿರುದ್ಧ ಕಪಿಲ್‌ ಸಿಬಲ್‌ರನ್ನು ಕಳುಹಿಸಿದ್ದು ಯಾರು: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ಬೆಂಗಳೂರು: ರಾಮ ಮಂದಿರದ (Ram Mandir) ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ ರಾಮ‌ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್‌ರನ್ನು (Kapil Sibal) ಕಳುಹಿಸಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ಬಿಜೆಪಿ (BJP) ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ.

    ನಾವು ರಾಮ ಭಕ್ತರೇ, ರಾಮ ಮಂದಿರದ ಬಾಗಿಲು ತೆಗೆಸಿದ್ದೇ ನಾವು ಎಂದು ಕಾಂಗ್ರೆಸ್‌ (Congress) ಹೇಳಿದ್ದಕ್ಕೆ ಬಿಜೆಪಿ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದೆ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

    ಪೋಸ್ಟ್‌ನಲ್ಲಿ ಏನಿದೆ?
    ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು!

    ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ!

     

    ಸ್ವಾತಂತ್ರ್ಯ ದೊರಕಿದಾಗಿನಿಂದ ರಾಮ ಮಂದಿರದ ಕಲ್ಪನೆ ದೇಶದ ಜನರಲ್ಲಿತ್ತು, ಅಂದಿನಿಂದ ಇಂದಿನವರೆಗೂ ನಿರ್ಮಾಣವಾಗದ ರಾಮ ಮಂದಿರ ನಿಮ್ಮ ರಾಜೀವ್ ಗಾಂಧಿ ಕಾಲಘಟ್ಟದಲ್ಲಿ ಯಾಕೆ ಆಗಲಿಲ್ಲ? ತಡೆದವರು ಯಾರು? ರಾಮ ಮತ್ತು ರಾಮನ ಆದೇಶವನ್ನು ಪಾಲಿಸುತ್ತಾ ಬಂದಿದ್ದರೆ ಕಾಂಗ್ರೆಸ್ ಪಕ್ಷ ರಾಮನನ್ನು ಕೇವಲ ಕಾಲ್ಪನಿಕ ಎಂದು ಏಕೆ ವ್ಯಂಗ್ಯ ಮಾಡುತ್ತಿತ್ತು ?

    ಕಳೆದ 70 ವರ್ಷಗಳಿಂದಲೂ ಹಿಂದುಗಳ ಆದರ್ಶ ಪುರುಷನಾದ ಶ್ರೀ ರಾಮನ ಮಂದಿರ ನಿರ್ಮಾಣ ಮಾಡಲು ಮೀನಾಮೇಷ ಎಣಿಸಿದ್ದು ಕಾಂಗ್ರೆಸ್ಸಿನಿಂದ ಜನರ ನಂಬಿಕೆಗೆ ಆದ ದುರಂತ!. ರಾಮಾಯಣ ಹೇಗೆ ಜನರ ಮನದಲ್ಲಿದೆಯೋ ಹಾಗೆಯೇ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ‌‌.  ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

  • ನಾವು ರಾಮ ಭಕ್ತರೇ, ಬಾಗಿಲು ತೆಗೆಸಿದ್ದೇ ನಾವು – ಕಾಂಗ್ರೆಸ್‌ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್‌

    ನಾವು ರಾಮ ಭಕ್ತರೇ, ಬಾಗಿಲು ತೆಗೆಸಿದ್ದೇ ನಾವು – ಕಾಂಗ್ರೆಸ್‌ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್‌

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನ ಹತ್ತಿರ ಬರುತ್ತಿದ್ದಂತೆ ರಾಮಮಂದಿರ (Ram Mandir) ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ಪಾಲಿಟಿಕ್ಸ್ (Politics) ಜೋರಾಗಿದೆ. ನಾವು ರಾಮಭಕ್ತರು ಎನ್ನುವುದಕ್ಕೆ ಕಾಂಗ್ರೆಸ್ (Congress) ಸಮರ್ಥನೆ ನೀಡಲು ಆರಂಭಿಸಿದೆ.

    ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಹೇಳಿದೆ.

    ಮಹಾತ್ಮ ಗಾಂಧೀಜಿಗಿಂತ (Mahatma Gandhi) ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ಹೀಗೆ ಕಾಂಗ್ರೆಸ್ ಕ್ರೆಡಿಟ್ ಕ್ಲೈಮ್ ವಾರ್ ಶುರು ಮಾಡಿಕೊಂಡಿದೆ. ಈ ಸಂಬಂಧ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ವಿವರಿಸಿದೆ.

    ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದು ಪರಮೇಶ್ವರ್‌ (Parameshwar) ಹೇಳಿದರೆ ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ ಎಂದು ಡಾ.ಎಂ.ಸಿ ಸುಧಾಕರ್ ತಿಳಿಸಿದ್ದಾರೆ.  ಇದನ್ನೂ ಓದಿ: ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು

     
    ಪೋಸ್ಟ್‌ನಲ್ಲಿ ಏನಿದೆ?
    ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.  ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್‌

    1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ.

    ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ಣು ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್ ಎಂದು ಹೇಳಬೇಕಾಗಿ ಬಂದಿರುವುದು ದುರಂತ.

     

  • ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು

    ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು

    ಬೆಂಗಳೂರು: ರಾಮಮಂದಿರ (Ram Mandir) ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ. ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ (Annabhagya) ಅಕ್ಕಿ ಹುಡುಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.

    ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು, ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ. ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಈ ಸುಳ್ಳು ಹೇಳುವ ಪಾಪಿಗಳು ನೀವು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಸೂಚನೆ ಇನ್ನೂ ಬಂದಿಲ್ಲ: ಪರಮೇಶ್ವರ್

    ಅಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿಕೊಡಿ ಎಂದು ಅಶೋಕ್ ಸವಾಲ್ ಹಾಕಿದ್ದಾರೆ. ಅನ್ನಭಾಗ್ಯದ ಅಕ್ಕಿ ಕೊಡುತ್ತಿರುವುದು ಮೋದಿ. ಪ್ರತಿ ಅಕ್ಕಿಯಲ್ಲೂ ಮೋದಿ ಹೆಸರಿದೆ ಎಂದು ಮುನಿರತ್ನ ಪ್ರತಿಪಾದಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಈ ಅಕ್ಕಿಯನ್ನು ದೊಡ್ಡ ಆಲದ ಹಳ್ಳಿಯಲ್ಲಿ ಬೆಳೆದಿರೋದಾ ಎಂದು ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆದರೆ ಬಿಜೆಪಿಯವರು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ: ಹಿ. ಪ್ರದೇಶದ ಕೈ ಸಚಿವ

    ಹೈಕಮಾಂಡ್ ತೀರ್ಮಾನದ ಮೇಲೆ ನಮ್ಮ ಅಯೋಧ್ಯೆ ಪ್ರವಾಸ ನಿಂತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಇನ್ನು ಜನವರಿ 22ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದಕ್ಕೆ ಬಿಜೆಪಿ ಸಂಕಟ ಪಡುತ್ತಿದೆ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ ಎಂದು ಕಾಂಗ್ರೆಸ್ ಟೀಕಿಸಿದೆ. ಅಲ್ಲದೇ ನಾವು ರಾಮಭಕ್ತರು ಎನ್ನುವುದಕ್ಕೆ ಹಲವು ಸಮರ್ಥನೆ ನೀಡಿದೆ. ಇದನ್ನೂ ಓದಿ: ದೇಶಕ್ಕೆ ಕ್ಯಾ. ಅಬ್ದುಲ್ ಹಮೀದ್ ಅವರಂಥವರು ಬೇಕು, ಜಿನ್ನಾ ಅಲ್ಲ: ನಿತ್ಯಾನಂದ್ ರೈ

    ಈ ಬಗ್ಗೆ ಕಾಂಗ್ರೆಸ್ ಸರಣಿ ವಾದ ಮಾಡಿದೆ. ನಾವು ರಾಮಭಕ್ತರೇ. ಭಾರತದ ಹಳ್ಳಿ ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮ ಗಾಂಧಿ ಕಾಂಗ್ರೆಸ್ ಪಕ್ಷದ ಅಧಿನಾಯಕರಾಗಿದ್ದರು. ಗೋಡ್ಸೆ ಸಿಡಿಸಿದ ಗುಂಡು ಗಾಂಧಿ ಎದೆ ಸೀಳಿದಾಗ, ಅವರಾಡಿದ ಕೊನೆ ಮಾತು ಹೇ ರಾಮ್. 1985-86ರಲ್ಲಿ ಅಯೋಧ್ಯೆಯಲ್ಲಿ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿದ್ದು ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಹೆಚ್‌ಪಿಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಮೊದಲ ಹೆಜ್ಜೆ ಇಡದೇ ಇದ್ದಿದ್ರೆ ಬಿಜೆಪಿಯವರಿಗೆ ಈ ಚಿಂತನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿಸಿದ್ದು ಕಾಂಗ್ರೆಸ್ ಸರ್ಕಾರ. ರಾಮ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಶ್ರೀರಾಮನ ಹೆಸರು ಹೇಳಿಕೊಂಡೇ ಬಿಜೆಪಿ ರಾಜಕೀಯ ಮಾಡುತ್ತಿದೆ. ರಾಮ ಬಿಜೆಪಿಯ ಸ್ವತ್ತಲ್ಲ ಎಂದು ಕಾಂಗ್ರೆಸ್ ಸರಣಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

  • ಅಯೋಧ್ಯೆಯಲ್ಲಿ ಬೆಂಗಳೂರಿನಿಂದ ಅಳಿಲು ಸೇವೆ!

    ಅಯೋಧ್ಯೆಯಲ್ಲಿ ಬೆಂಗಳೂರಿನಿಂದ ಅಳಿಲು ಸೇವೆ!

    ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರದ (Ram Mandir) ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಈ ಅದ್ದೂರಿ ರಾಮೋತ್ಸವಕ್ಕೆ ದೇಶದೆಲ್ಲೆಡೆ ಭರದ ಸಿದ್ದತೆಗಳು ಸಾಗುತ್ತಿದ್ದು, ಕರ್ನಾಟಕದಿಂದ (Karnataka) ಶ್ರೀರಾಮನಿಗೆ ಅಳಿಲು (Squarrel) ಸೇವೆ ಸಲ್ಲಲಿದೆ.

    ಹೌದು. ಅಯೋಧ್ಯೆಯ ಮುಖ್ಯ ರೈಲ್ವೆ ನಿಲ್ದಾಣವಾದ ಅಯೋಧ್ಯೆಧಾಮದ ಮುಖ್ಯ ದ್ವಾರದಲ್ಲಿ ಬೆಂಗಳೂರಿನ ಗಿನ್ನಿಸ್ ವರ್ಲ್ಡ್ ಚಿತ್ರಶಿಲ್ಪಿ ಕಲ್ಯಾಣ್ ಎಸ್ ರಾಥೋಡ್ ಅವರು ನಿರ್ಮಿಸಿದ ಅಳಿಲು ಮೂರ್ತಿಯನ್ನು ಇಡಲಾಗುತ್ತಿದೆ.  ಇದನ್ನೂ ಓದಿ: ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ – ವಿಶ್ವದ ದೊಡ್ಡಣ್ಣ ಅಮೆರಿಕದಲ್ಲೂ ನೇರಪ್ರಸಾರ

    ಭಾರತೀಯ ರೈಲ್ವೆ ಇಲಾಖೆಯಿಂದ ಗುತ್ತಿಗೆ ಪಡೆದು ಕಲ್ಯಾಣ್ ಎಸ್ ರಾಥೋಡ್ ಈ ಅಳಿಲು ಪುತ್ಥಳಿಯನ್ನು ನಿರ್ಮಿಸಿದ್ದಾರೆ. ಸುಮಾರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ,15 ಅಡಿ ಎತ್ತರ, 8 ಅಡಿ ಅಗಲ,13 ಅಡಿ ಉದ್ದದಲ್ಲಿ ಈ ಬೃಹತ್ ಅಳಿಲಿನ ಪುತ್ಥಳಿ ನಿರ್ಮಾಣವಾಗಿದೆ.

    ಕಾರ್ಟನ್ ಸ್ಟೀಲ್ ಬಳಸಿರುವುದರಿಂದ ಈ ಮೂರ್ತಿ ತುಕ್ಕು  ಹಿಡಿಯುವ ಸಾಧ್ಯತೆ ಕಡಿಮೆ. ಅಳಿಲು ಪುತ್ಥಳಿ ಈಗ ಟ್ರಕ್ ನಲ್ಲಿ ಅಯೋಧ್ಯೆಯತ್ತ ಹೊರಟ್ಟಿದ್ದು, ಜ.11 ರಂದು ಅಯೋಧ್ಯೆಗೆ ತಲುಪಲಿದೆ.

     

  • ರಾಜ್ಯದ ಜನ ಕ್ಷಮಿಸಲ್ಲ- ವಿಜಯೇಂದ್ರ ಹೀಗಂದಿದ್ಯಾಕೆ..?

    ರಾಜ್ಯದ ಜನ ಕ್ಷಮಿಸಲ್ಲ- ವಿಜಯೇಂದ್ರ ಹೀಗಂದಿದ್ಯಾಕೆ..?

    ಬೆಂಗಳೂರು: ಬೇರೆ ಬೇರೆ ದೇಶದ್ರೋಹಿಗಳಿಗೂ ರಕ್ಷಣೆ ಮಾಡ್ತೀರಾ?, ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ಅಪಾಯಕರ ರಕ್ಷಣೆ ಕುರಿತ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿನಾಶಕಾಲೇ ವಿಪರೀತ ಬುದ್ಧಿ. ಶ್ರೀ ರಾಮಮಂದಿರ ಉದ್ಘಾಟನೆ ವೇಳೆ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿದೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿದೆ ಎಂದು ಕಿಡಿಕಾರಿದರು.

    ಅಲ್ಪಸಂಖ್ಯಾತರಿಂದಲೇ ತಾವು ಅಧಿಕಾರಕ್ಕೆ ಬಂದಿರುವ ಭಾವನೆ ಕಾಂಗ್ರೆಸ್ ನಲ್ಲಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಯಲ್ಲಿ ಪೆÇಲೀಸ್ ಠಾಣೆಗೆ ಬೆಂಕಿ ಹಾಕಿದ ದೇಶದ್ರೋಹಿಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಬೇರೆ ಬೇರೆ ದೇಶದ್ರೋಹಿಗಳಿಗೂ ರಕ್ಷಣೆ ಮಾಡ್ತೀರಾ?, ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವುದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮನೆ ಮನೆಗೆ ತೆರಳಿ ಅಯೋಧ್ಯೆಯ ಮಂತ್ರಾಕ್ಷತೆ ವಿತರಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    ಬಿಜೆಪಿಯಿಂದ ಅಯೋಧ್ಯೆ ರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ ಹಿನ್ನೆಲೆಯಲ್ಲಿ ಇಂದು ವಿಜಯೇಂದ್ರ ಅವರಿಂದ ಮಂತ್ರಾಕ್ಷತೆ ವಿತರಣೆಗೆ ಚಾಲನೆ ನೀಡಲಾಗಿದೆ. ಬಳಿಕ ಶೇಷಾದ್ರಿಪುರದಲ್ಲಿ ಮನೆಮನೆಗಳಿಗೆ ಮಂತ್ರಾಕ್ಷತೆ ವಿತರಣೆ ಮಾಡಿದರು. ಮಂತ್ರಾಕ್ಷತೆ ವಿತರಣೆಗೂ ಮುನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಮಂತ್ರಾಕ್ಷತೆ ವಿತರಣೆ ಅಭಿಯಾನದಲ್ಲಿ ವಿಜಯೇಂದ್ರ ಪಾಲ್ಗೊಂಡರು.

  • ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ – ಹೆಚ್‌.ಆರ್‌.ರಂಗನಾಥ್‌ಗೆ ಆಹ್ವಾನ

    ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ – ಹೆಚ್‌.ಆರ್‌.ರಂಗನಾಥ್‌ಗೆ ಆಹ್ವಾನ

    ಬೆಂಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಶ್ರೀರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಬ್ಲಿಕ್ ಟಿವಿ (PUBLiC TV) ಮುಖ್ಯಸ್ಥ ಹೆಚ್.ಆರ್. ರಂಗನಾಥ್ (HR Ranganath) ಅವರಿಗೆ ಆಹ್ವಾನ ಕೊಡಲಾಗಿದೆ.

    ಆರ್‌ಎಸ್‌ಎಸ್‌ (RSS) ಪ್ರಾಂತ ಸಂಪರ್ಕ ಪ್ರಮುಖ್ ದೇವಾನಂದ್, ಆರ್‌ಎಸ್‌ಎಸ್‌ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಅವರು ಇಂದು ಪಬ್ಲಿಕ್ ಟಿವಿ ಕಚೇರಿಗೆ ಆಗಮಿಸಿ ಆಹ್ವಾನಿಸಿದರು.

     

    ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ  ದೇಶಾದ್ಯಂತ ಇರುವ 6 ಸಾವಿರ ಗಣ್ಯರಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಆಮಂತ್ರಣ ನೀಡುತ್ತಿದೆ. ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್‌ ಮಾಡಿ: ಅಯೋಧ್ಯೆ ರಾಮ ಮಂದಿರ

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆ ನಡೆಯಲಿದ್ದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್‌ ನಡುವಿನ 84 ಸೆಕೆಂಡ್‌ಗಳ ಅವಧಿಯನ್ನು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. 84 ಸೆಕೆಂಡ್‌ ಅವಧಿಯ ಶುಭ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾ (Prana Pratishta) ಕಾರ್ಯ ಸಂಪನ್ನಗೊಳ್ಳಲಿದೆ.

     

    ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಾಮನ ಮೂರ್ತಿ ಸ್ಥಾಪನೆಗೆ ದಿನಾಂಕಗಳನ್ನು ಸೂಚಿಸಿತ್ತು. ಇದಕ್ಕೆ ಉತ್ತರವಾಗಿ ದಿನಾಂಕಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಇದರಲ್ಲಿ ಜನವರಿ ತಿಂಗಳ 17 ರಿಂದ 25ನೇ ತಾರೀಕಿನ ನಡುವೆ 5 ದಿನಾಂಕಗಳು ಇದ್ದವು. ಕೊನೆಗೆ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಅವರು ಜನವರಿ 22ರ ದಿನಾಂಕ ಹಾಗೂ ಪುಣ್ಯ ಮುಹೂರ್ತವನ್ನು ಆಯ್ಕೆ ಮಾಡಿದರು. ಜನವರಿ 22ರ ಮುಹೂರ್ತ ದೇಶಕ್ಕೆ ಸಂಜೀವಿನಿ ಯೋಗ ತರುತ್ತದೆ ಎಂಬ ಕಾರಣಕ್ಕೆ  ಆ ಸಮಯವನ್ನೇ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

  • ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

    ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

    ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲ ರಾಮನ ಪ್ರಾಣಪ್ರತಿಷ್ಠೆ (Prana Pratishta) ಆಗುವುದರ ಜೊತೆಗೆ ಆವರಣದಲ್ಲಿ 6 ದೇವರ ಗುಡಿಗಳು ಇರಲಿದೆ.

    ಆವರಣದ 4 ಮೂಲೆಯಲ್ಲಿ ಸೂರ್ಯ ದೇವ, ದೇವಿ ಭಗವತಿ, ಗಣೇಶ, ಮತ್ತು ಶಿವನ ಗುಡಿಗಳು ಇರಲಿದೆ. ಇಷ್ಟೇ ಅಲ್ಲದೇ ಉತ್ತರ ಭಾಗದಲ್ಲಿ ಅನ್ನಪೂರ್ಣ ಮತ್ತು ದಕ್ಷಿಣದಲ್ಲಿ ಹನುಮಂತನ ಗುಡಿ ಇರಲಿದೆ.

    ಅಯೋಧ್ಯೆ ರಾಮಮಂದಿರ ಸಂಕೀರ್ಣದ ಒಳಗೆ, ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ನಿಶಾದ್ ರಾಜ್, ಮಾತಾ ಶಬರಿ ಮತ್ತು ದೇವಿ ಅಹಲ್ಯಾ ಗುಡಿಗಳಿರಲಿವೆ. ಬಾಲ ರಾಮನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿದ್ದರೆ ಮೊದಲ ಮಹಡಿಯಲ್ಲಿ ಶ್ರೀರಾಮ ದರ್ಬಾರ್ ಇರುತ್ತದೆ.

    ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಮಂದಿರದಲ್ಲಿ ಪೂಜೆ-ಪುನಸ್ಕಾರಕ್ಕೆ ಅರ್ಚಕರ ಆಯ್ಕೆಯೂ ಆಗಿದೆ. ದೇಶಾದ್ಯಂತ ಆಯ್ಕೆಯಾದ 24 ಅರ್ಚಕರಲ್ಲಿ ಇಬ್ಬರು ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಒಬ್ಬರು ಹಿಂದುಳಿದ ವರ್ಗ (ಒಬಿಸಿ)ಕ್ಕೆ ಸೇರಿದವರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ

    ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮಂದಿರ ನಿರ್ಮಾಣ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಲು ಹೆಚ್ಚುವರಿ 500 ಕಾರ್ಮಿಕರನ್ನು ಕರೆತರಲಾಗಿದೆ.

    ಜನವರಿ 22ರ ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್‌ ನಡುವಿನ 84 ಸೆಕೆಂಡ್‌ಗಳ ಅವಧಿಯನ್ನು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮುಹೂರ್ತಕ್ಕೆ ಸಮಯ ಸೂಚಿಸುವಂತೆ ದೇಶಾದ್ಯಂತ ಇರುವ ವಿದ್ವಾಂಸರು ಹಾಗೂ ಪ್ರಖ್ಯಾತ ಜ್ಯೋತಿಷಿಗಳಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ಮನವಿ ಮಾಡಿತ್ತು. ಎಲ್ಲರಿಂದ ಬಂದ ಮಾಹಿತಿಯನ್ನು ಸಮನ್ವಯಗೊಳಿಸಿ ಕೊನೆಗೆ ಮುಹೂರ್ತ ಸಮಯ ಅಂತಿಮಗೊಳಿಸಲಾಗಿದೆ.  ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    ಕಾಶಿಯ ಜ್ಯೋತಿಷಿಯ ಮುಹೂರ್ತ ಆಯ್ಕೆ
    ಕಾಶಿಯ ಜ್ಯೋತಿಷಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ದ್ರಾವಿಡ ಅವರು 84 ಸೆಕೆಂಡ್‌ ಅವಧಿಯ ಮುಹೂರ್ತವನ್ನು ಸೂಚಿಸಿದ್ದರು. ಜನವರಿ 22ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 08 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್‌ ನಡುವಿನ 84 ಸೆಕೆಂಡ್ ಶುಭ ಮುಹೂರ್ತ ಎಂದು ಸೂಚಿಸಿದ್ದರು.

    5 ದಿನಾಂಕಗಳು ಮುಂದಿತ್ತು!
    ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಾಮನ ಮೂರ್ತಿ ಸ್ಥಾಪನೆಗೆ ದಿನಾಂಕಗಳನ್ನು ಸೂಚಿಸಿತ್ತು. ಇದಕ್ಕೆ ಉತ್ತರವಾಗಿ ದಿನಾಂಕಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಇದರಲ್ಲಿ ಜನವರಿ ತಿಂಗಳ 17ರಿಂದ 25ನೇ ತಾರೀಕಿನ ನಡುವೆ 5 ದಿನಾಂಕಗಳು ಇದ್ದವು. ಕೊನೆಗೆ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ದ್ರಾವಿಡ ಅವರು ಜನವರಿ 22ರ ದಿನಾಂಕ ಹಾಗೂ ಪುಣ್ಯ ಮುಹೂರ್ತವನ್ನು ಆಯ್ಕೆ ಮಾಡಿದರು. ಜನವರಿ 22ರ ಮುಹೂರ್ತ ದೇಶಕ್ಕೆ ಸಂಜೀವಿನಿ ಯೋಗ ತರುತ್ತದೆ ಎಂದು ಗಣೇಶ್ವರ ಶಾಸ್ತ್ರಿ ಹೇಳಿದ್ದಾರೆ.

     

  • ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟ – ಉದ್ದೇಶಪೂರ್ವಕವಾಗಿ ಸರ್ಕಾರದಿಂದಲೇ ಕೇಸ್‌ಗೆ ಮರುಜೀವ?

    ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟ – ಉದ್ದೇಶಪೂರ್ವಕವಾಗಿ ಸರ್ಕಾರದಿಂದಲೇ ಕೇಸ್‌ಗೆ ಮರುಜೀವ?

    ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣಕ್ಕೆ ಸರ್ಕಾರ ಉದ್ದೇಶಪೂರ್ವಕವೇ ಮರುಜೀವ ನೀಡಿದೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.

    ಡಿಸೆಂಬರ್ ಮೊದಲ ವಾರದಿಂದಲೇ 1992 ಪ್ರಕರಣದ ಆರೋಪಿಗಳ ಮಾಹಿತಿ ಪೋಲಿಸರು (Police) ಮುಂದಾಗಿದ್ದರು ಎಂಬ ವಿಚಾರ ಈಗ ಪತ್ತೆಯಾಗಿದೆ.

    ಇದೊಂದು ಸಾಮಾನ್ಯ ಕೇಸ್ ಎಂದು ಸರ್ಕಾರ ಮತ್ತು ಪೊಲೀಸರು ಹೇಳುತ್ತಿದ್ದಾರೆ. ಹಳೇ ಪ್ರಕರಣಗಳನ್ನು ಇತ್ಯರ್ಥಗೊಳಿಸುವಾಗ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಈ ಸಂದರ್ಭದ ವೇಳೆ ಬಂಧನವಾಗಿದ್ದು ಕಾಕಾತಾಳೀಯ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿಕೆ ನೀಡಿದ್ದರು. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

    ಸರ್ಕಾರ ಏನೇ ಹೇಳಿದ್ದರೂ ಪ್ರಕರಣದ 11ನೇ ಆರೋಪಿ ದಿವಂಗತ ಅಶೋಕ್ ವಿಠ್ಠಲ ಬದ್ದಿ ಕುಟುಂಬಸ್ಥರಿಗೆ ಡಿ.9 ರಂದೇ ಕರೆ ಮಾಡಿ ವಿಚಾರ ಸಂಗ್ರಹಿಸಿದ್ದರು.

     

    ಡಿಸೆಂಬರ್ 8ಕ್ಕೆ ದಿ.ಅಶೋಕ್ ಬದ್ದಿ ಮಗ ವೆಂಕಟೇಶ್‌ಗೆ ಕಾಲ್ ಮಾಡಿದ್ದರು. ಈ ವೇಳೆ ತಂದೆಯವರು ಮೃತಪಟ್ಟ ವಿಚಾರವನ್ನು ವೆಂಕಟೇಶ್‌ ತಿಳಿಸಿದ್ದರು. ತಂದೆಯವರು ಮೃತಪಟ್ಟ ವಿಚಾರವನ್ನು ತಿಳಿಸಿದ್ದರೂ ಪೊಲೀಸರು ಮರಣ ಪ್ರಮಾಣ ಪತ್ರ ನೀಡುವಂತೆ ಸೂಚಿಸಿದ್ದಾರೆ.

    ಅಚ್ಚರಿಯ ವಿಷಯ ಏನೆಂದರೆ ಅಶೋಕ ಬದ್ದಿ ಬದುಕಿದ್ದಾಗ ಪೊಲೀಸರ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದರು. ಆಗ ಯಾರು ಸಹ ಪ್ರಕರಣದ ಬಗ್ಗೆ ಮಾತನಾಡಿರಲಿಲ್ಲ. ಈಗ ಏಕಾಏಕಿ ಬಂದು ಕೇಸ್ ಅಂತ ಹೇಳಿದರ ಉದ್ದೇಶ ಏನು? ಮರಣ  ಪ್ರಮಾಣ ಪತ್ರ ನೀಡಬೇಕು ಎಂದು ಕೇಳಿದ್ದು ಯಾಕೆ? ಇದು ಉದ್ದೇಶ ಪೂರ್ವಕವಾಗಿ ಮಾಡಿರುವ ರೀ ಓಪನ್‌ ಪ್ರಕರಣ ಎಂದು ದಿ.ಅಶೋಕ್ ಬದ್ದಿ ಕುಟುಂಬಸ್ಥರು ಪಬ್ಲಿಕ್‌ ಟಿವಿ ಮುಂದೆ ಆರೋಪ ಮಾಡಿದ್ದಾರೆ.

     

  • ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

    ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

    –  ಫೋಟೋ, ವಿಡಿಯೋ ಎಲ್ಲಿಯೂ ಲಭ್ಯವಿಲ್ಲ

    ಅಯೋಧ್ಯಾ: ರಾಮಮಂದಿರ (Ram Mandir) ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿರುವ ಬಾಲರಾಮನ (Ram Lalla) ಮೂರ್ತಿ ಹೇಗಿರಲಿದೆ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಜನವರಿ 22 ಮಧ್ಯಾಹ್ನ 12:20ರ ರಂದು ಉತ್ತರ ಸಿಗಲಿದೆ.

    ಹೌದು. ಈ ಹಿಂದೆ ಮೈಸೂರಿನ ಯೋಗಿರಾಜ್‌ ಅವರು ನಿರ್ಮಿಸಿದ ಮೂರ್ತಿ ಆಯ್ಕೆಯಾಗಿದೆ ಎಂದು ವರದಿಯಾಗಿತ್ತು. ಆದರೆ ರಾಮಮಂದಿರ ನಿರ್ಮಾಣ ಮಾಡುತ್ತಿರುವ ಎಂದು ರಾಮ ಮಂದಿರ ಟ್ರಸ್ಟ್‌ನ (Ram Janmabhoomi Teerth Kshetra Trust) ರಾಮಲಲ್ಲಾ ಮೂರ್ತಿಯ (Ram Lalla Idols)ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲಎಂದು ತಿಳಿಸಿತ್ತು.

    ಈ ಸ್ಪಷ್ಟನೆ ಬಂದ ಬೆನ್ನಲ್ಲೇ ಬಾಲರಾಮನ ಮೂರ್ತಿ ಹೇಗಿದೆ ಎಂಬ ಕುತೂಹಲ ದಿನೇ ದಿನೇ ಭಕ್ತರಲ್ಲಿ ಹೆಚ್ಚಾಗುತ್ತಿದೆ. ಈ ಕುತೂಹಲಕ್ಕೆ ಜ.22ರ ಮಧ್ಯಾಹ್ನ 12:20ರ ಪ್ರಾಣಪ್ರತಿಷ್ಠೆಯ ವೇಳೆ ಉತ್ತರ ಸಿಗಲಿದೆ ಎಂದು ರಾಮ ಮಂದಿರದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ಮೂರು ಮೂರ್ತಿಯ ಮಾದರಿಗಳು ಈಗಾಗಲೇ ಪೂರ್ಣಗೊಂಡಿದ್ದರೂ ಅದರ ಫೋಟೋ ಮತ್ತು ವಿಡಿಯೋ ಎಲ್ಲಿಯೂ ಲಭ್ಯವಿಲ್ಲ. ಜನವರಿ 17 ರಂದು ನಗರ ಯಾತ್ರೆ ನಡೆಸಲು ಉದ್ದೇಶಿಸಲಾಗಿದ್ದರೂ ಇನ್ನೂ ಯಾತ್ರೆಯ ಸ್ವರೂಪದ ಅಂತಿಮಗೊಂಡಿಲ್ಲ. ನಗರ ಯಾತ್ರೆ ಬೆಳಗ್ಗಿನ ಅವಧಿಯಲ್ಲಿ ಮಾಡಲು ಸಿದ್ಧತೆ ನಡೆದಿದೆ.

    11 ಮಂದಿ ಟ್ರಸ್ಟ್‌ ಸದಸ್ಯರ ಅಭಿಪ್ರಾಯವನ್ನು ಡಿ.29 ರಂದು ತೆಗೆದುಕೊಳ್ಳಲಾಗಿದೆ. ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಅಂತಿಮವಾಗಿ ಯಾವ ಪ್ರತಿಮೆ ಎಂಬುದನ್ನು ನಿರ್ಧರಿಸುತ್ತಾರೆ ಎಂದು ರಾಮ ಮಂದಿರ ಟ್ರಸ್ಟ್‌ ಸದಸ್ಯ ಕಾಮೇಶ್ವರ್‌ ಚೌಪಲ್‌ ತಿಳಿಸಿದ್ದಾರೆ.

    ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಶಿಲ್ಪಿಗಳಾದ ಕರ್ನಾಟಕ ರಾಜ್ಯ ಮೈಸೂರು ಮೂಲದ ಅರುಣ್ ಯೋಗಿರಾಜ್ (Arun Yogiraj), ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಅವರ ಮೂರ್ತಿಗಳನ್ನ ಕೆತ್ತನೆ ಮಾಡಿದ್ದಾರೆ. ಕರ್ನಾಟಕ ಇಬ್ಬರು ಶಿಲ್ಪಿಗಳು ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದಾರೆ. ಸತ್ಯನಾರಾಯಣಪಾಂಡೆ ಅವರು ರಾಜಸ್ಥಾನದಿಂದ ತರಿಸಲಾಗಿದ್ದ ಕಲ್ಲನ್ನು ಬಳಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ – ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್

    ಅಂತಿಮವಾಗಿ ಪ್ರತಿಷ್ಠಾಪಿಸಬೇಕಾದ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡುವ ಮುನ್ನ ಅದರ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿ ಪಡೆಯಲಾಗುತ್ತದೆ. ನಂತರ ಆಯ್ಕೆಯಾಗುವ ಮೂರ್ತಿಯನ್ನ ಜನವರಿ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

    ಬಾಲರಾಮನ ಆಯ್ಕೆಗೆ ಮಾನದಂಡ ಏನು?
    ವಿಗ್ರಹ ಕಡೆಯಲು ಬಳಸಿದ ಶಿಲೆಯ ಗುಣಮಟ್ಟ, ರಾಮನ ಬಾಲ್ಯದ ನೋಟ, ವಿಗ್ರಹಕ್ಕೆ ಇರುವ ಸೌಂದರ್ಯ, ಆಕರ್ಷಣೆ, ವಿಗ್ರಹಕ್ಕೆ ಇರುವ ದೈವತ್ವದ ಕಳೆ, ಭಾವ, ವಿಗ್ರಹದ ರಚನಾತ್ಮಕ ಸ್ವರೂಪ, ಕೆತ್ತನೆಯ ಗುಣಮಟ್ಟ ಎಲ್ಲವನ್ನು ಪರಿಗಣಿಸಲಾಗುತ್ತದೆ.

  • ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

    ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

    ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ (Judicial Custody) ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ.

    ಶ್ರೀಕಾಂತ್‌ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ (Mohammad Rafiq) ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ (Inspector) ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.  ಇದನ್ನೂ ಓದಿ: ಕರಸೇವಕರ ಬಿಡುಗಡೆಗೆ ರಾಜ್ಯ ಸರ್ಕಾರಕ್ಕೆ 48 ಗಂಟೆಗಳ ಗಡುವು: ಬಿ.ವೈ.ವಿಜಯೇಂದ್ರ

     

    ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ  ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು.

     
    ಹಳೇಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಳ್ಳುವ ಸರ್ಕಾರ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸುವ ಅಗತ್ಯವೇ ಇರಲಿಲ್ಲ. ಕಾನೂನು ಪ್ರಕಾರವೇ ನಡೆದುಕೊಂಡಿದ್ದರೆ ಪ್ರಭಾರಿಯನ್ನು ನೇಮಿಸುವ ಅಗತ್ಯವೇ ಇರಲಿಲ್ಲ.

    ಕಡ್ಡಾಯ ರಜೆಯ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡಂತೆ ಕಾಣುತ್ತಿದೆ. ಆ ಜಾಗಕ್ಕೆ ಜಾದವ್‌ ಅವರಿಗೆ ಪ್ರಭಾರ ಅಧಿಕಾರ ಕೊಟ್ಟಿದ್ದು ಯಾಕೆ? ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳುವುದಕ್ಕೆ ಈ ತಂತ್ರ ಮಾಡಿದ್ಯಾ ಎಂಬ ಹಲವು ಪ್ರಶ್ನೆಗಳು ಈಗ ಎದ್ದಿದೆ.