ಬೆಂಗಳೂರು: ಕೂಡಲೇ ಕಾಂಗ್ರೆಸ್ ನಾಯಕ ಹರಿಪ್ರಸಾದ್ (BK Hariprasad) ಅವರನ್ನು ಸರ್ಕಾರ ಬಂಧಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ (DV Sadananda Gowda) ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರಾಮ ಮಂದಿರ (Ram Mandira) ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ ಪ್ರತಿಭಟನೆ ನಡೆಸುತ್ತಿದೆ.
ಹರಿಪ್ರಸಾದ್ ಹೇಳಿದ್ದೇನು?
ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಯಾಕೆಂದರೆ ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು. ನಮಗೆ ಮಾಹಿತಿ ಸಿಗುತ್ತಿದೆ. ಮಾಹಿತಿ ಇದ್ದೇ ಹೇಳುತ್ತಿದ್ದೇನೆ. ಕರ್ನಾಟಕದಲ್ಲಿ ಈ ರೀತಿ ಆಗಬಾರದು ಎಂದರೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕಟ್ಟೆಚ್ಚರ ವಹಿಸಬೇಕು. ಇವು ನನ್ನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧ ಇಲ್ಲ
ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು.
ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಂಧನ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಹೈಕಮಾಂಡ್‌ಗೆ (Congress) ವರದಿ ನೀಡಿದೆ.
ಹುಬ್ಬಳ್ಳಿ ಪ್ರಕರಣದ (Hubballi Case) ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್‌ಗೆ ಲಾಂಗ್ ಪೆಂಡಿಂಗ್ ಕೇಸ್ ವರದಿ ನೀಡಲಾಗಿದೆ. ಕಳೆದ ಒಂದು ತಿಂಗಳಿನಿಂದಲೂ ದೀರ್ಘ ಸಮಯದಿಂದ ಇದ್ದ ಪ್ರಕರಣಗಳ ಕ್ಲೀಯರ್ ಡ್ರೈವ್ ನಡೆಯುತ್ತಿದೆ. ಸಹಜವಾಗಿ ಎಲ್ಲ ಕಡೆ ಲಾಂಗ್ ಪೆಂಡಿಂಗ್ ಕೇಸ್ ಕ್ಲಿಯರ್ ವೇಳೆ ಕರಸೇವಕರದ್ದೂ ಸೇರಿದೆ ಎಂಬ ವರದಿ ನೀಡಲಾಗಿದೆ.
ಈ ಮಧ್ಯೆ ರಾಮ ಮಂದಿರ ಉದ್ಘಾಟನೆ ವೇಳೆ ಇದೆಲ್ಲ ಬೇಕಿತ್ತಾ ಎಂದು ಕಾಂಗ್ರೆಸ್ ಹಿರಿಯ ನಾಯಕರು ಅಸಮಾಧಾನ ಹೊರಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಪರಮೇಶ್ವರ್ ಹೇಳಿದ್ದೇನು?
ಹುಬ್ಬಳ್ಳಿ ಗಲಭೆ (Hubballi Riots) ವಿಚಾರವಾಗಿ ಹಿಂದೂ (Hindu) ಕಾರ್ಯಕರ್ತರ ಬಂಧನ ಉದ್ದೇಶಪೂರ್ವಕ ಅಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (Parameshwar) ಹಿಂದೆ ಹೇಳಿದ್ದರು.
ಒಬ್ಬರನ್ನೇ ಬಂಧನ ಮಾಡಿಲ್ಲ, ಆಕಸ್ಮಿಕವಾಗಿ ಆಗಿರಬಹುದು. ಈ ಸಮಯದಲ್ಲಿ ಉದ್ದೇಶ ಪೂರ್ವಕವಾಗಿ ಯಾರಾದರೂ ಬಂಧನ ಮಾಡುತ್ತಾರಾ? ವರ್ಷಾನುಗಟ್ಟಲೇ ಬಾಕಿ ಉಳಿದಿರುವ ಕೇಸ್‌ಗಳನ್ನು ಕ್ಲೀಯರ್ ಮಾಡಲು ಹೇಳಿದ್ದೇವೆ. ಅದರಲ್ಲಿ ಹುಬ್ಬಳ್ಳಿಯಲ್ಲಿ 32 ಕೇಸುಗಳು ಪೆಂಡಿಂಗ್ ಇತ್ತು . ಅದನ್ನು ಓಪನ್ ಮಾಡಿ ಕ್ಲೀಯರ್ ಮಾಡುವ ವೇಳೆ ಈ ಕೇಸ್ ಬಂದಿದೆ. ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿ ಕಸ್ಟಡಿಗೆ ಕೊಟ್ಟಿದಾರೆ. ಎಲ್ಲರಿಗೂ ಹೇಗೆ ಮಾಡಿದ್ದಾರೆ ಇವರಿಗೂ ಹಾಗೆ ಮಾಡಿದ್ದಾರೆ ಎಂದಿದ್ದರು.
ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಟ್ಟುಕೊಂಡಿಲ್ಲ. ಹಿಂದೂ ಕಾರ್ಯಕರ್ತರು ಇನ್ನೊಂದು ಕಾರ್ಯಕರ್ತರು ಎನ್ನುವ ಟಾರ್ಗೆಟ್ ಮಾಡಿ ಮಾಡುವ ಪ್ರಯತ್ನ ಮಾಡಿಲ್ಲ.ಕಾನೂನಿನ ಪ್ರಕಾರ ಯಾವ ಕ್ರಮ ಆಗಬೇಕು ಪೊಲೀಸ್ ಇಲಾಖೆ ಮಾಡುತ್ತದೆ. ಇದಕ್ಕೆ ಕೋಮು ಬಣ್ಣ ಕಟ್ಟುವುದು ಸೂಕ್ತ ಅಲ್ಲ ಎಂದು ತಿಳಿಸಿದರು.
ಅಯೋಧ್ಯೆ: ಜನವರಿ 22ರಂದು ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ (Ram Lalla Idols)ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ನ (Ram Janmabhoomi Teerth Kshetra Trust) ಪದಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೆ ಮೂರು ಬಾಲರಾಮನ ಮೂರ್ತಿಗಳು ಸಿದ್ಧದ್ದವಾಗಿವೆ. ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಮತ್ತು ಇತರೆ ಸ್ವಾಮೀಜಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ತೆಗೆದುಕೊಳ್ಳುವ ತೀರ್ಮಾನವನ್ನು ಸೂಕ್ತ ಕಾಲದಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ಟ್ರಸ್ಟ್‌ನ ಕಚೇರಿ ಉಸ್ತುವಾರಿಯಾಗಿರುವ ಪ್ರಕಾಶ್ ಗುಪ್ತಾ (Prakash Gupta) ಅವರು ತಿಳಿಸಿದ್ದಾರೆ.
ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಶಿಲ್ಪಿಗಳಾದ ಕರ್ನಾಟಕ ರಾಜ್ಯ ಮೈಸೂರು ಮೂಲದ ಅರುಣ್ ಯೋಗಿರಾಜ್ (Arun Yogiraj), ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಅವರ ಮೂರ್ತಿಗಳನ್ನ ಕೆತ್ತನೆ ಮಾಡಿದ್ದಾರೆ. ಕರ್ನಾಟಕ ಇಬ್ಬರು ಶಿಲ್ಪಿಗಳು ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದಾರೆ. ಸತ್ಯನಾರಾಯಣಪಾಂಡೆ ಅವರು ರಾಜಸ್ಥಾನದಿಂದ ತರಿಸಲಾಗಿದ್ದ ಕಲ್ಲನ್ನು ಬಳಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ
ಅಂತಿಮವಾಗಿ ಪ್ರತಿಷ್ಠಾಪಿಸಬೇಕಾದ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡುವ ಮುನ್ನ ಅದರ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿ ಪಡೆಯಲಾಗುತ್ತದೆ. ನಂತರ ಆಯ್ಕೆಯಾಗುವ ಮೂರ್ತಿಯನ್ನ ಜನವರಿ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್
ಈಗಾಗಲೇ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗೀರಾಜ್ ಅವರು ಕೆತ್ತನೆ ಮಾಡಿರುವ ರಾಮಲಲ್ಲಾ ಮೂರ್ತಿ ಫೈನಲ್ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾಲರಾಮನ ಆಯ್ಕೆಗೆ ಮಾನದಂಡ ಏನು?
ವಿಗ್ರಹ ಕಡೆಯಲು ಬಳಸಿದ ಶಿಲೆಯ ಗುಣಮಟ್ಟ, ರಾಮನ ಬಾಲ್ಯದ ನೋಟ, ವಿಗ್ರಹಕ್ಕೆ ಇರುವ ಸೌಂದರ್ಯ, ಆಕರ್ಷಣೆ, ವಿಗ್ರಹಕ್ಕೆ ಇರುವ ದೈವತ್ವದ ಕಳೆ, ಭಾವ, ವಿಗ್ರಹದ ರಚನಾತ್ಮಕ ಸ್ವರೂಪ, ಕೆತ್ತನೆಯ ಗುಣಮಟ್ಟ ಎಲ್ಲವನ್ನು ಪರಿಗಣಿಸಲಾಗುತ್ತದೆ.
ಬಾಲರಾಮನ ಶಿಲಾ ವಿಶೇಷತೆ ಏನು?
ಮೈಸೂರಿನ ಕೃಷ್ಣಶಿಲೆಯಲ್ಲಿ ಬಾಲರಾಮನ ಮೂರ್ತಿ ಕೆತ್ತಲಾಗಿದ್ದು ಹಾರೋಹಳ್ಳಿಯ ರಾಮ್‌ದಾಸ್ ಎಂಬವರ ಜಮೀನಲ್ಲಿ ಈ ಶಿಲೆ ಪತ್ತೆಯಾಗಿತ್ತು. ಈ ಜಮೀನನ್ನು ಶ್ರೀನಿವಾಸ್ ಎಂಬವರು ಗುತ್ತಿಗೆ ಪಡೆದಿದ್ದರು. ಗುತ್ತಿಗೆದಾರ ಶ್ರೀನಿವಾಸ್ ಅವರನ್ನು ಸುರೇಂದ್ರ ವಿಶ್ವಕರ್ಮ ಸಂಪರ್ಕಿಸಿದ್ದರು. ಇದನ್ನೂ ಓದಿ:Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು
ಮಾನಯ್ಯ ಬಡಿಗೇರ್ ಮೂಲಕ ಕೃಷ್ಣಶಿಲೆಯ ಪರೀಕ್ಷೆ ಮಾಡಿ ಅಯೋಧ್ಯೆ ಗುರುಗಳ ಸಮ್ಮುಖದಲ್ಲಿ ಮೂರ್ತಿ ಶಿಲೆಯನ್ನು ಅಂತಿಮಗೊಳಿಸಲಾಗಿತ್ತು. 19 ಟನ್ ತೂಕ, 9.8 ಅಡಿ ಉದ್ದದ ಶಿಲೆ ಅಯೋಧ್ಯೆಗೆ ರವಾನಿಸಲಾಗಿತ್ತು. ಶಿಲೆ ಕಳುಹಿಸಿದ ನಂತರ ಪ್ರಚಾರ ಪಡೆಯಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಶಿಲೆ ತೆಗೆದ ಸ್ಥಳವನ್ನು ಮಣ್ಣಿನಿಂದ ಮುಚ್ಚಿ ಭೂಮಿ ಸಮತಟ್ಟು ಮಾಡಲಾಗಿದೆ.
– ರಾಮಭಕ್ತನನ್ನು ಬಂಧಿಸಲು ನಿಮಗೆಷ್ಟು ಧೈರ್ಯ?
– ಹಿಂದೂ ವಿರೋಧಿ ಸಿಎಂ ವಿರುದ್ಧ ಹೋರಾಟ ಎಂದ ವಿಜಯೇಂದ್ರ
– ಕಾಂಗ್ರೆಸ್ ಹಿಂದೂ ವಿರೋಧಿ ಅನ್ನೋದನ್ನ ತೋರಿಸಿದೆ ಎಂದ ಶಾಸಕ
ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ (Congress Government) ಹಿಂದೂ ವಿರೋಧಿ ಸರ್ಕಾರ. ಈ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನ ಈ ಸರ್ಕಾರ ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ (Hubballi) 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದರು.
ಹಿಂದೂ ವಿರೋಧಿ ಅನ್ನೋದನ್ನ ತೋರಿಸಿದೆ:
ಜ.22ರಂದು ಅಯೋಧ್ಯೆಯಲ್ಲಿ (Ayodhya) ಭಗವಾನ್ ಶ್ರೀರಾಮನ ಪ್ರತಿಷ್ಠಾ ಕಾರ್ಯಕ್ರಮ ಆಗುವ ಶುಭ ಸಂದರ್ಭದಲ್ಲಿ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಬಳಸಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ರಾಜ್ಯಾದ್ಯಂತ ಹೋರಾಟಕ್ಕೆ ಕರೆ:
ಶ್ರೀರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನ ಬಂಧಿಸಿದೆ, ಇದು ಖಂಡನೀಯ. ಆದ್ದರಿಂದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೇ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.
ಹಿಂದೂ ವಿರೋಧಿ ಸಿಎಂ ವಿರುದ್ಧ ಹೋರಾಟ:
ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನ ಓಲೈಸುವ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರಗಾಲದಲ್ಲೂ ತುಷ್ಟೀಕರಣ ಮಾಡುತ್ತಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.
ರಾಮಭಕ್ತನನ್ನು ಬಂಧಿಸಲು ನಿಮಗೆಷ್ಟು ಧೈರ್ಯ?
ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅದಕ್ಕೂ ಕಾಂಗ್ರೆಸದ್ ಸರ್ಕಾರ ಅಡ್ಡಿಯುಂಟುಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ, ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ. ದೇಶವೇ ಸಂಭ್ರಮದಲ್ಲಿರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು-ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
31 ವರ್ಷದ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ? ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇರುವುದು ಸಂತೋಷ. ಆದ್ರೆ ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ. ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವ ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ಸಿಗರ ಮಾತುಗಳು ಅವರ ಸಂಸ್ಕೃತಿಯನ್ನ ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರ ಹುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ. ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.
ಬೆಂಗಳೂರು: ಮುಸ್ಲಿಮರ (Muslims) ಓಲೈಕೆಗಾಗಿ 31 ವರ್ಷದ ಹಿಂದಿನ ಹುಬ್ಬಳ್ಳಿ ಪ್ರಕರಣವನ್ನು (Hubballi Case) ತೆರೆಯಲಾಗಿದೆ ಎಂದು ಚಿಂತಕ ಚರ್ಕವರ್ತಿ ಸೂಲಿಬೆಲೆ (Chakravarthy Sulibele) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತಾನಾಡಿದ ಅವರು, ಘಟನೆ ನಡೆದ ಬಳಿಕ ಹಲವು ಬಾರಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರದಲ್ಲಿತ್ತು. ಆಗ ಸುಮ್ಮನ್ನಿದ್ದವರು ಈಗ ಏಕಾಏಕಿ ಬಂಧನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ನಡೆದಾಗ ಅಮಾಯಕರನ್ನು ಬಿಡುಗಡೆ ಮಾಡಿ ಎಂದು ಪತ್ರ ಬರೆಯುತ್ತಾರೆ. ಈ ಗಲಭೆ ನಿಮ್ಮ ಅವಧಿಯಲ್ಲಿ ಇದ್ದಾಗಲೇ ನಡೆದಿತ್ತು. ಹುಬ್ಬಳ್ಳಿ ಪ್ರಕರಣ ನಡೆದಾಗ ಭಾಗಿಯಾದ ಮಂದಿ ತರುಣರಾಗಿದ್ದರು. ಈಗ ಅವರಿಗೆ 70 ವರ್ಷ ಆಗಿರಬಹುದು. ಈ ಸಮಯದಲ್ಲಿ ಬಂಧನ ಅಗತ್ಯವೇ ಎಂದು ಕೇಳಿದರು. ಇದನ್ನೂ ಓದಿ: ಬಾಲರಾಮನ ಮೂರ್ತಿಯ ವಿಶೇಷ ಏನು? ಆಯ್ಕೆಗೆ ಮಾನದಂಡ ಏನು? ಶಿಲಾ ವಿಶೇಷತೆ ಏನು?
ಕರ ಸೇವಕರನ್ನು ಭಯಪಡಿಸಲು ಸರ್ಕಾರ ಈಗ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಅದಿತ್ಯನಾಥ್ ಸರ್ಕಾರ ಲಕ್ಷಕ್ಕೂ ಹೆಚ್ಚು ದಾಖಲೆಗಳನ್ನು ಭಾಷಾಂತರ ಮಾಡಿತ್ತು. ಅವರಿಗೆ ಹೇಗೆ ಶ್ರೇಯಸ್ಸು ಕೊಡಲಾಗುತ್ತಿದೆಯೇ ಅದೇ ರೀತಿ ಕರಸೇವಕರಿಗೆ ಶ್ರೇಯಸ್ಸು ಸಲ್ಲಬೇಕು. ಅಂದು ಅವರು ಹೋರಾಟ ಮಾಡದೇ ಇದ್ದರೆ ಇಂದು ಭವ್ಯವಾದ ರಾಮಮಂದಿರ ತಲೆ ಎತ್ತುತ್ತಿರಲಿಲ್ಲ. ಈ ಕಾರಣಕ್ಕೆ ಯಾರೆಲ್ಲ ಕರಸೇವೆಯಲ್ಲಿ ಭಾಗಿಯಾಗಿದ್ದಾರೋ ಅವರನ್ನು ಪ್ರತಿ ಗ್ರಾಮ ಗ್ರಾಮದಲ್ಲಿ ಸನ್ಮಾನ ಮಾಡಬೇಕು. ಎಷ್ಟು ಜನರನ್ನು ಬಂಧಿಸುತ್ತಾರೋ ನೋಡೋ ಬಿಡೋಣ ಎಂದು ಸವಾಲು ಹಾಕಿದರು.
ರಾಮ ಮಂದಿರ ಕಟ್ಟುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿತ್ತು. ಆದರೆ ರಾಮಮಂದಿರ ನಿರ್ಮಾಣವಾಗಬಾರದು ಎಂದು ಕಾಂಗ್ರೆಸ್ ನಾಯಕರಾಗಿದ್ದ ಕಪಿಲ್ ಸಿಬಲ್ ನೇತೃತ್ವದಲ್ಲಿ ವಕೀಲರ ತಂಡವೇ ರಚನೆಯಾಗಿತ್ತು. ರಾಮಮಂದಿರ ಕಟ್ಟಬಾರದು ಎಂದು ಕೆಲಸ ಮಾಡಿದ್ದು ಕಾಂಗ್ರೆಸ್. ಈಗ ರಾಮಮಂದಿರ ನಿರ್ಮಾಣವಾಗಿ ಲೋಕಾರ್ಪಣೆ ಆಗುತ್ತಿರುವುದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಮಜನ್ಮಭೂಮಿ ಹೋರಾಟದ ಕೇಸ್‌ಗೆ ಮರುಜೀವ – 31 ವರ್ಷದ ಬಳಿಕ ಹುಬ್ಬಳ್ಳಿ ಆರೋಪಿ ಬಂಧನ
ಇಡೀ ದೇಶಕ್ಕೆ ನಾವು ಒಂದು ಮುಸ್ಲಿಂ ಪಕ್ಷ ಎಂದು ತೋರಿಸಲು ಹೊರಟಿದೆ. ಪಂಚ ರಾಜ್ಯ ಸೋತ ನಂತರ ಇಡೀ ದೆಶದಲ್ಲಿ ಸೋಲುವ ಭೀತಿ ಕಾಂಗ್ರೆಸ್‌ಗಿದೆ. ನರಿಗಳಿಗೆ ಸಾಯುವ ಸಮಯ ಬಂದಾಗ ಸಿಟಿ ಕಡೆ ಹೋಗುತ್ತವೆ ಎಂಬ ಹಿಂದಿ ಗಾದೆಯಂತಾಗಿದೆ ಕಾಂಗ್ರೆಸ್ ಸ್ಥಿತಿ. ಗ್ಯಾರಂಟಿ ನಂಬಿ ಮತ ಹಾಕಿದ ಜನ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election) ಬಿಜೆಪಿ ರಾಮ’ಮಂತ್ರ’ ಪಠಿಸುತ್ತಿದೆ. ಲೋಕಸಮರದಲ್ಲಿ ಮತ ಗಳಿಸಲು ಬಿಜೆಪಿಯಿಂದ (BJP) ಮಂದಿರ ರಾಜಕೀಯ ಶುರುವಾಗಿದೆ. ಆದರೆ ರಾಮಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ಎಡವದಿರಲು ಕಾಂಗ್ರೆಸ್ (Congress) ಪ್ಲಾನ್ ಮಾಡಿದೆ.
ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಕೇವಲ 21 ದಿನಗಳಷ್ಟೇ ಉಳಿದಿದೆ. ಇದೇ ಹೊತ್ತಲ್ಲಿ ಇಡೀ ಕರ್ನಾಟಕವೇ (Karnataka) ಹೆಮ್ಮೆ ಪಡುವ ವಿಚಾರವೊಂದು ಘಟಿಸಿದೆ. ಜನವರಿ 22ರಂದು ಪ್ರತಿಷ್ಠಾಪನೆಯಾಗಲಿರುವ ಬಾಲರಾಮನ (Ramlala) ವಿಗ್ರಹ ಯಾವುದು ಎಂಬ ಕುತೂಹಲಕ್ಕೆ ಹೆಚ್ಚು ಕಡಿಮೆ ತೆರೆ ಬಿದ್ದಿದೆ.
ಕರುನಾಡಿನ ರಾಮ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಮೈಸೂರು (Mysuru) ಮೂಲದ ಕಲಾವಿದ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರುವ ರಾಮ್‌ಲಲ್ಲಾ ವಿಗ್ರಹವನ್ನು ರಾಮಮಂದಿರ ಟ್ರಸ್ಟ್ ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.
ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರು ಮೂಲದ ಜಿಎಲ್ ಭಟ್, ರಾಜಸ್ಥಾನದ ಸತ್ಯನಾರಾಯಣ ಪಾಂಡೆಯವರಿಂದ ಮೂರು ಬಾಲರಾಮನ ವಿಗ್ರಹಗಳನ್ನು ಟ್ರಸ್ಟ್ ಕೆತ್ತಿಸಿತ್ತು. ಈ ಮೂರರಲ್ಲಿ ಅರುಣ್ ಯೋಗಿರಾಜ್ ಕೆತ್ತಿರುವ ವಿಗ್ರಹ ಫೈನಲ್ ಮಾಡಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ಹೇಳಲಾಗಿದೆ.ಹೆರಿಟೇಜ್ ಸೈನ್ಸ್ ತಜ್ಞರು, ಸಾಧುಸಂತರು, ಟ್ರಸ್ಟ್ ಸದಸ್ಯರಿಂದ ಈ ಆಯ್ಕೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?
ಬಾಲರಾಮನ ಮೂರ್ತಿ ವಿಶೇಷ ಏನು?
ಐದು ವರ್ಷದ ಬಾಲಕನ ರೂಪವನ್ನು ಹೊದಿಂದುದ್ದು ಧನುರ್ಧಾರಿ ರೂಪದಲ್ಲಿ ಕೆತ್ತಲಾಗಿದೆ. ಕಮಲದ ಮೇಲೆ ಕುಳಿತಿದ್ದು, ಪವಿತ್ರ ಕೃಷ್ಣಶಿಲೆಯಲ್ಲಿ ನಿರ್ಮಾಣವಾಗಿದೆ. 51 ಇಂಚು ಎತ್ತರವನ್ನು (4.3 ಅಡಿ) ಹೊಂದಿದೆ.
ಬಾಲರಾಮನ ಶಿಲಾ ವಿಶೇಷತೆ ಏನು?
ಮೈಸೂರಿನ ಕೃಷ್ಣಶಿಲೆಯಲ್ಲಿ ಮೂರ್ತಿ ಕೆತ್ತಲಾಗಿದ್ದು ಹಾರೋಹಳ್ಳಿಯ ರಾಮ್‌ದಾಸ್ ಜಮೀನಲ್ಲಿ ಈ ಶಿಲೆ ಸಿಕ್ಕಿತ್ತು. ಈ ಜಮೀನನ್ನು ಶ್ರೀನಿವಾಸ್ ಗುತ್ತಿಗೆ ಪಡೆದಿದ್ದರು. ಗುತ್ತಿಗೆದಾರ ಶ್ರೀನಿವಾಸ್ ಅವರನ್ನು ಸುರೇಂದ್ರ ವಿಶ್ವಕರ್ಮ ಸಂಪರ್ಕಿಸಿದ್ದರು.
ಮಾನಯ್ಯ ಬಡಿಗೇರ್ ಮೂಲಕ ಕೃಷ್ಣಶಿಲೆಯ ಪರೀಕ್ಷೆ ಮಾಡಿ ಅಯೋಧ್ಯೆ ಗುರುಗಳ ಸಮ್ಮುಖದಲ್ಲಿ ಮೂರ್ತಿ ಶಿಲೆಯನ್ನು ಅಂತಿಮಗೊಳಿಸಲಾಗಿತ್ತು. 19 ಟನ್ ತೂಕ, 9.8 ಅಡಿ ಉದ್ದದ ಶಿಲೆ ಅಯೋಧ್ಯೆಗೆ ರವಾನಿಸಲಾಗಿತ್ತು. ಶಿಲೆ ಕಳುಹಿಸಿದ ನಂತರ ಪ್ರಚಾರ ಪಡೆಯಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಶಿಲೆ ತೆಗೆದ ಸ್ಥಳವನ್ನು ಮಣ್ಣಿನಿಂದ ಮುಚ್ಚಿ ಭೂಮಿ ಸಮತಟ್ಟು ಮಾಡಲಾಗಿದೆ.
-ನಮ್ಮ ರಾಮ ನಮ್ಮ ಎದೆಯಲ್ಲಿದ್ದಾನೆ, ನಾನು ಆಂಜನೇಯ ಎಂದ ಮಾಜಿ ಸಚಿವ
ಚಿತ್ರದುರ್ಗ: ಅಯೋಧ್ಯೆಯಲ್ಲಿರುವುದು (Ayodhya) ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ (Siddaramaiah) ಎಂದು ಕಾಂಗ್ರೆಸ್ ಮಾಜಿ ಸಚಿವ ಹೆಚ್. ಆಂಜನೇಯ (H Anjaneya) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ರಾಮಮಂದಿರ (Ram Mandir) ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದೆ ಇದ್ದಿದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ದರಾಮಯ್ಯ ಅವರೇ ರಾಮ, ಹೀಗಿರುವಾಗ ಆ ರಾಮನಿಗೇಕೆ ಹೋಗಿ ಅವರು ಪೂಜಿಸಬೇಕು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?
ಸಿದ್ದರಾಮಯ್ಯ ಅವರ ತವರು ಸಿದ್ಧರಾಮನಹುಂಡಿಯಲ್ಲೇ ಶ್ರೀರಾಮನ ದೇವಸ್ಥಾನ ಇದೆ, ಅವರು ಅಲ್ಲೇ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಹೀಗಾಗಿ ಬಿಜೆಪಿಯವರನ್ನ ಕರೆಸಿಕೊಂಡು ಅಲ್ಲಿ ಭಜನೆ ಮಾಡುತ್ತಾರೆ. ಆದ್ರೆ ನಮ್ಮ ರಾಮ ಎಲ್ಲಾ ಕಡೆ ಇದ್ದಾನೆ, ನಮ್ಮ ಎದೆಯಲ್ಲಿಯೂ ಇದ್ದಾನೆ. ನಾನು ಆಂಜನೇಯ, ಗೊತ್ತಲ್ವಾ ಆಂಜನೇಯ ಏನು ಮಾಡಿದ ಅಂತಾ? ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು
ಅಲ್ಲದೇ ನಮ್ಮ ಸಮುದಾಯದವರು ರಾಮ ಹಾಗೂ ಆಂಜನೇಯ, ಹನುಮಂತ ಎಂಬ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಆದರೆ ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿಯಾಗಿದೆ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಯವರಿಗಿದೆ. ಅವರ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೆ? ನಾವೂ ಹಿಂದೂಗಳು, ಆದ್ರೆ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು
ಬಿಜೆಪಿಯವರು ಮಂದಿ ನಿರ್ಮಾಣ ಮಾಡಿದ್ದು ಸಾಕು, ದೇಶದಲ್ಲಿ ಮನೆ-ಮನಗಳನ್ನು ಕಟ್ಟುವ ಕೆಲಸ ಆಗಬೇಕು. ದೇಶದಲ್ಲಿ ಕೆಲವರು ಈಗಲೂ ಪ್ರಾಣಿಗಳ ರೀತಿ, ಯೋಗ್ಯವಲ್ಲದ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಅಂತಹವರಿಗೆ ಸೂರು ಒದಗಿಸಿ ರಕ್ಷಣೆ ಕೊಡಬೇಕು. ದೇಶದಲ್ಲಿ ಮನೆ ಇಲ್ಲದವರಿಗೆ, ಮನೆ ಕಟ್ಟಿಸಿಕೊಟ್ಟು ಅದಕ್ಕೆ ರಾಮಮಂದಿರ ಅಂತ ಹೆಸರಿಟ್ಟರೆ, ಆಗ ನಿಜವಾದ ಶ್ರೀರಾಮ ಬಂದು ಎಲ್ಲರನ್ನು ಆಶೀರ್ವದಿಸುತ್ತಾನೆ. ಹಾಗಾಗಿ ಮತಕ್ಕಾಗಿ ಬಿಜೆಪಿ ರಾಮನನ್ನ ಮಾಡುವುದು ಬೇಡ ಹೆಚ್. ಆಂಜನೇಯ ಕಿಡಿ ಕಾರಿದ್ದಾರೆ.
ಲಕ್ನೋ: ಶ್ರೀರಾಮನ ಭಕ್ತರಿಗೆ ಮಾತ್ರ ರಾಮಲಲ್ಲಾ ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ ಎಂದು ಅಯೋಧ್ಯೆ ರಾಮಮಂದಿರದ (Ayodhya Ram Mandir) ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ. ಈ ಮೂಲಕ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು (Uddhav Thackeray) ನೀಡಿದ್ದ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ ಎಂದು ಇತ್ತೀಚೆಗೆ ಉದ್ಧವ್ ಠಾಕ್ರೆ ಹೇಳಿದ್ದರು. ಈ ಹೇಳಿಕೆಗೆ ಆಚಾರ್ಯ ಸತ್ಯೇಂದ್ರ ದಾಸ್ ಪ್ರತಿಕ್ರಿಯೆ ನೀಡಿದ್ದು, ರಾಮನ ಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂಬ ಮಾತು ತಪ್ಪು. ಪ್ರಧಾನಿ ನರೇಂದ್ರ ಮೋದಿಯವರು ಅಪಾರ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಇದು ಅವರ ರಾಜಕೀಯವಲ್ಲ, ಭಕ್ತಿ ಎಂದಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ: ಉದ್ಧವ್ ಠಾಕ್ರೆ ಹೀಗಂದಿದ್ಯಾಕೆ..?
ಉದ್ಧವ್ ಠಾಕ್ರೆಯವರು, ರಾಮ ಮಂದಿರ ಉದ್ಘಾಟನೆಗೆ ನನಗೆ ಯಾವುದೇ ಆಹ್ವಾನ ಬಂದಿಲ್ಲ. ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ ಯಾವುದೇ ಪಕ್ಷದ ಆಸ್ತಿಯಲ್ಲ, ರಾಮ ಎಲ್ಲರಿಗೂ ಸೇರಿದವರು. ಹೀಗಾಗಿ ಇದನ್ನು ರಾಜಕೀಯಗೊಳಿಸಬಾರದು ಎಂದು ನಾನು ಬಯಸುತ್ತೇನೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನೀಡಿದೆ, ಸರ್ಕಾರವಲ್ಲ ಎಂದಿದ್ದರು. ಇತ್ತ ಇತ್ತೀಚೆಗೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬಿಜೆಪಿಯು ಲೋಕಸಭಾ ಚುನಾವಣೆಗೆ ಭಗವಾನ್ ರಾಮನೇ ನಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರ ಬಾಕಿ ಉಳಿದಿದೆ ಎಂದಿದ್ದರು.
ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಅಯೋಧ್ಯೆಗೆ (Ayodhya) ಭೇಟಿ ನೀಡಿದ ಸಂದರ್ಭ ಉಜ್ವಲಾ ಯೋಜನೆಯ (Ujwala Yojana) 10ನೇ ಕೋಟಿ ಫಲಾನುಭವಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ಚಹಾ (Tea) ಸವಿದಿದ್ದಾರೆ.
ಮೀರಾ ಮಾಂಝಿ, ಪ್ರಧಾನಿ ಮೋದಿಗೆ ಚಹಾ ನೀಡಿ ಸತ್ಕರಿಸಿದ ಮಹಿಳೆ. ಇವರು ತನ್ನ ಪತಿ ಮತ್ತು ಅತ್ತೆಯೊಂದಿಗೆ ಅಯೋಧ್ಯೆಯಲ್ಲಿ ವಾಸಿಸುತ್ತಿದ್ದು, ಉಜ್ವಲಾ ಯೋಜನೆಯ ಫಲಾನುಭವಿಯಾಗಿದ್ದಾರೆ. ಮೋದಿ ತನ್ನ ಮನೆಗೆ ಭೇಟಿ ನೀಡಿದ ಸಂದರ್ಭ ಮೀರಾ ಭಾವುಕಳಾಗಿ, ಪ್ರಧಾನಿ ಆಗಮನದಿಂದ ತನಗೆ ತುಂಬಾ ಸಂತೋಷವಾಗಿದೆ. ದೇವರು ನನ್ನ ಮನೆಗೆ ಈ ರೀತಿಯಾಗಿ ಭೇಟಿ ನೀಡುತ್ತಾನೆ ಎಂದು ನಾನು ಊಹಿಸಿರಲಿಲ್ಲ. ನನ್ನ ಸಂತೋಷಕ್ಕೆ ಪಾರವೇ ಇಲ್ಲ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೆಲದ ಕಾನೂನು ಎಲ್ಲರಿಗೂ ಒಂದೆ: ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ
ಜನವರಿ 22ಕ್ಕೆ ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ಅದಕ್ಕೂ ಮುನ್ನ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ, ಅಭಿವೃದ್ಧಿಗೊಂಡಿರುವ ರೈಲು ನಿಲ್ದಾಣವನ್ನೂ ಮೋದಿ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ
ಮಾತ್ರವಲ್ಲದೇ 11 ಸಾವಿರ ಕೋಟಿ ರೂ. ಮೌಲ್ಯದ ಅಯೋಧ್ಯೆ ಅಭಿವೃದ್ಧಿ ಕಾಮಗಾರಿ ಹಾಗೂ ಉತ್ತರ ಪ್ರದೇಶದ 4,600 ಕೋಟಿ ರೂ.ಗಳಷ್ಟು ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದ್ದಾರೆ. ಇದರಲ್ಲಿ ರಸ್ತೆ, ಹೆದ್ದಾರಿ, ವಿಮಾನ, ರೈಲ್ವೇ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ಒಳಗೊಂಡಿವೆ. ವಿಶೇಷವೆಂದರೆ ಇದೇ ದಿನ 6 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ 2 ಅಮೃತ್ ಭಾರತ್ ರೈಲುಗಳಿಗೂ ಪ್ರಧಾನಿ ಹಸಿರು ನಿಶಾನೆ ತೋರಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ