Tag: ರಾಮ ಮಂದಿರ

  • ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ

    ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ

    ಹಾವೇರಿ: ಗಣೇಶ ಚತುರ್ಥಿ ಮುಗಿದು ಇದೀಗ ತಾಳವಾದ್ಯಗಳೊಂದಿಗೆ ಗಣೇಶ ಮೂರ್ತಿ (Ganesha Idol) ವಿಸರ್ಜನೆ ಮಾಡುವ ಕಾರ್ಯಕ್ರಮಗಳು ಅದ್ಧೂರಿಯಾಗಿ ಅಲ್ಲಲ್ಲಿ ನಡೆಯುತ್ತಿವೆ. ಆದ್ರೆ ರಾಣೇಬೆನ್ನೂರಿನಲ್ಲಿ ಗಣೇಶ ಹಬ್ಬದ (Ganesha Festival) ಪ್ರಯುಕ್ತ ಒಂದೂವರೆ ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದೆ.

    ಸುಮಾರು ಒಂದೂವರೆ ಕೋಟಿ ರೂ.ಗಳಷ್ಟು ಹಣ ಖರ್ಚು ಮಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವೇದಿಕೆ ಪಕ್ಕದಲ್ಲೇ ರಾಮಮಂದಿರ ನಿರ್ಮಿಸಲಾಗಿದೆ. ಶತಮಾನಗಳ ಇತಿಹಾಸ ಸಾರುವ ಜೊತೆಗೆ ರಾಮಮಂದಿರದ ಇತಿಹಾಸ ತಿಳಿಸುವ ಮಾಹಿತಿಗಳನ್ನೂ ಇಲ್ಲಿ ಚಿತ್ರಿಸಲಾಗಿದೆ. ಈ ಸೌಂದರ್ಯವನ್ನ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬೀಳುತ್ತಿದ್ದಾರೆ.

    ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕ್ರೀಡಾಂಗಣದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ವಂದೇ ಮಾತರಂ ಸೇವಾ ಸಂಸ್ಥೆಯು ಕಳೆದ 15 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಾ ಬಂದಿದೆ. ಆದ್ರೆ ಈ ಬಾರಿ ಹಬ್ಬವನ್ನು ಇನ್ನಷ್ಟು ವಿಶೇಷವಾಗಿಸಲು ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ ನೇತೃತ್ವದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಜೊತೆಗೆ ಭವ್ಯ ರಾಮಮಂದಿರವನ್ನೂ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

    ರಾಮಮಂದಿರದ ವಿಶೇಷತೆ ಏನು?
    ಸಾವಿರಾರು ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮಾದರಿಯಲ್ಲೇ ಇಲ್ಲಿನ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಜೊತೆಗೆ ರಾಮ ಜನ್ಮಭೂಮಿಗಾಗಿ ನಡೆದ ಹೋರಾಟಗಳು ಹಾಗೂ ಅದರ ಹಿನ್ನೆಲೆಯನ್ನು ಬರಹಗಳಲ್ಲಿ ಅಳವಡಿಸಲಾಗಿದೆ. ಇದರೊಂದಿಗೆ ಮಂದಿರಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಇದನ್ನೂ ಓದಿ: Ind vs Aus ಪಂದ್ಯಕ್ಕೆ ಮಳೆ ಅಡ್ಡಿ; ಓವರ್‌ ಕಡಿತಗೊಳಿಸಲು ನಿರ್ಧಾರ – ಆಸೀಸ್‌ಗೆ ಒಲಿಯುತ್ತಾ ಲಕ್‌?

    ಅಷ್ಟೇ ಅಲ್ಲದೇ ಇತಿಹಾಸ ಸಾರುವ ಅನೇಕ ಕಬ್ಬಿಣ ಹಾಗೂ ಫೈಬರ್‌ನಿಂದ ಸಿದ್ಧಪಡಿಸಲಾದ ಕಲಾಕೃತಿಗಳನ್ನೂ ಈ ಮಂದಿರದಲ್ಲಿ ನಿರ್ಮಿಸಲಾಗಿದೆ. ಶ್ರೀರಾಮನ ಮೂರ್ತಿಯನ್ನೂ ಇಲ್ಲಿ ಇಡಲಾಗಿದ್ದು, ಭಕ್ತರನ್ನು ಆಕರ್ಷಿಸುವಂತೆ ಮಾಡಲಾಗಿದೆ. ಭಕ್ತರು ಸಂತಸದಿಂದಲೇ ಮಂದಿರಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

    ಹಾವೇರಿ ಅಷ್ಟೇ ಅಲ್ಲದೆ ಶಿವಮೊಗ್ಗ, ದಾವಣಗೆರೆ, ಧಾರವಾಡ ಜಿಲ್ಲೆಗಳಿಂದಲೂ ಅನೇಕರು ರಾಮಮಂದಿರ ನೋಡಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2024ರ ಜನವರಿ 22 ರಂದು ಮೋದಿಯಿಂದ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ

    2024ರ ಜನವರಿ 22 ರಂದು ಮೋದಿಯಿಂದ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ

    ನವದೆಹಲಿ: ಮುಂದಿನ ವರ್ಷದ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ram Mandir) ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು (Pran Prathistha) ಪ್ರಧಾನಿ ಮೋದಿ (PM Narendra Modi) ನೆರವೇರಿಸಲಿದ್ದಾರೆ.

    ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರಾಮಲಲ್ಲಾ (Ram Lalla) ಮೂರ್ತಿಯನ್ನು ರಚಿಸಿದ್ದು ಈಗಾಗಲೇ ಅವರು ಅಯೋಧ್ಯೆಯಲ್ಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಅಯೋಧ್ಯೆ ಪ್ರವೇಶ ದ್ವಾರ ರಾಮ ಮಂದಿರ ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ 28ರ ದ್ವಾರಕ್ಕೆ ʼಶ್ರೀ ರಾಮ ದ್ವಾರʼ ಎಂದು ಹೆಸರನ್ನು ಇಡಲು ಯೋಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.

    ಅಯೋಧ್ಯೆಯಲ್ಲಿ (Ayodhya) ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ಮೂರು ವಾರಗಳ ಹಿಂದೆ ತಿಳಿಸಿದ್ದರು.

    ದೇವಾಲಯವನ್ನು ಮೂರು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಪಟ್ಟ: ಅಮಿತ್‌ ಶಾ

    ರಾಮಮಂದಿರ ನಿರ್ಮಾಣದ ಮೊದಲ ಹಂತವನ್ನು 2023ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ನಿರ್ಧರಿಸಿದೆ. ಮೊದಲ ಹಂತದಲ್ಲಿ, ನೆಲ ಮಹಡಿಯಲ್ಲಿ ಐದು ‘ಮಂಟಪಗಳು’ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಗರ್ಭಗುಡಿ. ಗರ್ಭಗುಡಿಯಲ್ಲಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಐದು ಮಂಟಪಗಳ ನಿರ್ಮಾಣದಲ್ಲಿ ಸುಮಾರು 160 ಕಂಬಗಳನ್ನು ಬಳಸಲಾಗಿದೆ. ದೇವಾಲಯದ ಕೆಳಗಿನ ಸ್ತಂಭದಲ್ಲಿ ಶ್ರೀರಾಮನ ಸಂಕ್ಷಿಪ್ತ ವಿವರಣೆಯನ್ನು ಪ್ರಾರಂಭಿಸಲಾಗುವುದು. ವಿದ್ಯುತ್ ಸೌಲಭ್ಯ ಮತ್ತು ಇತರ ಸೌಲಭ್ಯಗಳನ್ನು ಪೂರ್ಣಗೊಳಿಸಬೇಕು. ಈ ಎಲ್ಲಾ ಕಾಮಗಾರಿಗಳು ಡಿಸೆಂಬರ್ 30 ರೊಳಗೆ ಪೂರ್ಣಗೊಳ್ಳಲಿವೆ. ಎರಡನೇ ಮಹಡಿಗಳನ್ನು 2024ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದರು.

  • ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ಮುಂಬೈ: ಇಬ್ಬರ ನಡುವೆ ಗಲಾಟೆ ನಡೆದು, ನೆರೆದಿದ್ದ ಜನ ಕಲ್ಲು ತೂರಾಟ ನಡೆಸಿ ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಛತ್ರಪತಿ ಸಂಭಾಜಿನಗರದ (Chhatrapati Sambhajinagar) ಕಿರದಪುರದ (Kiradpura) ರಾಮಮಂದಿರದ ಹೊರಗೆ ಬುಧವಾರ ರಾತ್ರಿ ನಡೆದಿದೆ.

    ಪೊಲೀಸರು ಅಶ್ರವಾಯು ಸಿಡಿಸಿ ಉದ್ರಿಕ್ತ ಗುಂಪನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಆರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರಗೆ ಅನರ್ಹತೆಯ ಭೀತಿ

     

    ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ತಿಳಿಸಿದ್ದಾರೆ.

    ಔರಂಗಾಬಾದ್ (Aurangabad) ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ (Ram temple) ತೆರಳಿದ್ದ ವೀಡಿಯೋ ಒಂದನ್ನು ಎಐಎಂಐಎಂನ (AIMIM) ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹಂಚಿಕೊಂಡಿದ್ದರು. ಇದನ್ನು ಕೆಲವು ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಎಂದು ಬಿಂಬಿಸಿ ಹಂಚಿಕೊಂಡಿದ್ದರು.

    ಸುಳ್ಳು ಸುದ್ದಿಗಳನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ತೆಗೆಸಿದ್ದು. ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ

  • ಯೋಗಿಯಿಂದಲೇ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಬಿಜೆಪಿ ಪ್ಲಾನ್‌

    ಯೋಗಿಯಿಂದಲೇ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಬಿಜೆಪಿ ಪ್ಲಾನ್‌

    ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಮೂಲಕ ರಾಮ ಮಂದಿರ (Ram Temple) ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ರಾಜ್ಯ ಬಿಜೆಪಿ ಮುಂದಾಗಿದೆ.

    ಹಳೆ ಮೈಸೂರು ಭಾಗದಲ್ಲಿ ಭರ್ಜರಿ ಮತ ಫಸಲು ತೆಗೆಯಲು ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಬಜೆಟ್ (Budget) ಮೂಲಕ ಮಾಡಿದೆ. ಇದನ್ನು ಇಷ್ಟಕ್ಕೆ ಸೀಮಿತಗೊಳಿಸದೇ, ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಗುದ್ದಲಿ ಪೂಜೆಗೆ ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ

    ಮಾರ್ಚ್ ಮೊದಲ ವಾರದಲ್ಲಿ ಹಿಂದೂತ್ವ ಫೈರ್ ಬ್ರ್ಯಾಂಡ್‌, ಯುಪಿ ಸಿಎಂ ಯೋಗಿ ಆದಿತ್ಯನಾಥರನ್ನು ಕರೆಯಿಸಿ ಅವರ ಮೂಲಕವೇ ರಾಮಮಂದಿರಕ್ಕೆ ಅಡಿಗಲ್ಲು ಹಾಕಿಸಲು ಕೇಸರಿ ಪಡೆ ಪ್ಲಾನ್ ಮಾಡಿದ್ದು ಈ ಬೆಳವಣಿಗೆ ವಿಪಕ್ಷಗಳನ್ನು ಚಿಂತೆಗೀಡು ಮಾಡಿದಂತೆ ಕಾಣುತ್ತಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ.

    ರಾಮ ಮಂದಿರ ವಿಚಾರ ಮುಂದಿನ ದಿನಗಳಲ್ಲಿ ರಾಮನಗರ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಒಟ್ಟಾವಾ: ಕೆನಡಾದ (Canada) ಮಿಸಿಸೌಗಾದಲ್ಲಿರುವ (Mississauga) ರಾಮಮಂದಿರವನ್ನು (Ram Mandir) ಭಾರತ (India) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧಿ ಗೀಚುಬರಹಗಳಿಂದ ವಿರೂಪಗೊಳಿಸಲಾಗಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಟೊರೊಂಟೊದಲ್ಲಿರುವ (Toronto) ಭಾರತದ ರಾಯಭಾರ ಕಚೇರಿ ಇದನ್ನು ಖಂಡಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.

    ಮಿಸಿಸೌಗಾದಲ್ಲಿರುವ ರಾಮಮಂದಿರವನ್ನು ಭಾರತ ವಿರೋಧಿ ಗೀಚುಬರಹಗಳ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾವು ಕೆನಡಾದ ಅಧಿಕಾರಿಗಳನ್ನು ವಿನಂತಿಸಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

    ದುಷ್ಕರ್ಮಿಗಳು ಮಂದಿರದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಬರೆದು, ಭಿಂದ್ರವಾಲಾ ಪರ ಘೋಷಣೆಯ ಬರಹಗಳನ್ನು ಬರೆದಿದ್ದಾರೆ. ಬ್ರಾಂಪ್ಟನ್‌ನ ಮೇಯರ್ ಪ್ಯಾಟ್ರಿಕ್ ಬ್ರೌನ್ ಇದನ್ನು ಅಪರಾಧ ಎಂದು ಕರೆದಿದ್ದು, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಕೆನಡಾದಲ್ಲಿನ ಹಿಂದೂ ದೇವಾಲಯಗಳಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವುದು ಇದು ಮೊದಲೇನಲ್ಲ. ಇದಕ್ಕೂ ಮೊದಲು ಜನವರಿಯಲ್ಲಿ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಇದು ಭಾರತೀಯ ಸಮುದಾಯದಿಂದ ಆಕ್ರೋಶಕ್ಕೆ ಕಾರಣವಾಯಿತು. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ಧಾರವಾಡ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು (Ram Mandir) ಕೆಡವಿ ಮುಂದೊಂದು ದಿನ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ಇಮಾಮ್ ಅಸೋಸಿಯೇಶನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ (Maulana Sajid Rashidi) ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಗುಡುಗಿದ್ದಾರೆ.

    ಮುಂದೆ 50-100 ವರ್ಷ ಆದ ಮೇಲೆ ನಮ್ಮ ದೊರೆ ಬರುತ್ತಾನೆ. ಆಗ ರಾಮ ಮಂದಿರ ಕೆಡವಿ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ರಶೀದಿ ಹೇಳಿಕೆ ನೀಡಿದ್ದಾರೆ. ಇನ್ನು 100 ವರ್ಷ ಅಲ್ಲ, ಸಾವಿರ ವರ್ಷವಾದರೂ ರಾಮ ಮಂದಿರ ಕೆಡವಿ ಬಾಬರ್ ಮಸೀದಿ ಕಟ್ಟಲು ನಿಮ್ಮಪ್ಪನಿಂದಲೂ ಸಾಧ್ಯವಿಲ್ಲ ಎಂದು ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಸೊಕ್ಕಿನ ಮಾತನ್ನು ರಶೀದಿ ಹೇಳಿದ್ದಾರೆ. ಇಂತವರು ಈ ದೇಶದ ಅನ್ನ ತಿಂದ ನಮಕ್ ಹರಾಮಿಗಳು. ಈ ದೇಶದ ಮುಸ್ಲಿಮರಿಗೆ ಬಾಬರ್ ಯಾವುದೇ ಸಂಬಂಧ ಇಲ್ಲದಿದ್ದರೂ ಇಸ್ಲಾಂ ಪ್ರತಿಷ್ಠಾಪನೆಯ ಮೂಲ ಉದ್ದೇಶ ಹೊಂದಿದ್ದಾರೆ. ಇದು ಮೌಲಾನಾ ರಶೀದಿ ಬಾಯಿಂದ ಹೊರ ಬಂದಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

    ಈ ದೇಶದ ಹಿಂದೂಗಳು ಜಾಗೃತಗೊಂಡಿದ್ದಾರೆ. ರಶೀದಿಯಂತಹ ಮಾನಸಿಕತೆ ಇರುವ ಮುಸ್ಲಿಮರಿಗೆ ಎಚ್ಚರಿಕೆ ಕೊಡುವ ಉದ್ದೇಶದಿಂದಲೇ 100 ವರ್ಷಗಳಿಂದ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ ಕೆಲಸ ಮಾಡುತ್ತಿವೆ. ನಿಮ್ಮ ಸೊಕ್ಕು ಅಡಗಿಸಲು ನಾವು ಸಿದ್ಧರಿದ್ದೇವೆ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯೇ ಇರುತ್ತದೆ ಹೊರತು, ಬಾಬರ್, ಔರಂಗಜೇಬನ ಮೂರ್ತಿಯಲ್ಲ. ಅಲ್ಲಿ ಯಾವುದೇ ಇಸ್ಲಾಂ ಧರ್ಮ ಗುರು ಇರಲು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    Live Tv
    [brid partner=56869869 player=32851 video=960834 autoplay=true]

  • ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

    ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

    ಲಕ್ನೋ: ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram Mandir) ನಿರ್ಮಾಣ ಹಿನ್ನೆಲೆ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (Ashwath Narayan) ನೇತೃತ್ವದಲ್ಲಿ ಬೆಳ್ಳಿ ಇಟ್ಟಿಗೆ (Silver Brick), ರೇಷ್ಮೆ ಸೀರೆ ಹಾಗೂ ಶಲ್ಯವನ್ನು ಸಮರ್ಪಿಸಲಾಯಿತು.

    ರಾಮನಗರದಿಂದ ತೆರಳಿರುವ 150 ಯಾತ್ರಾರ್ಥಿಗಳ ತಂಡವು ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ 1.50 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಇಂದು ಅರ್ಪಿಸಿದರು.

    ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ,  ಕನ್ನಡಿಗ ಅರ್ಚಕರಾದ ಗೋಪಾಲ್‌ ಭಟ್‌ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಮೃತ್ತಿಕೆಯನ್ನು ಕೂಡ ಶಾಸ್ತ್ರೋಕ್ತವಾಗಿ ಪೂಜಿಸಿ, ಸಚಿವರು ಮತ್ತು ಅವರ ಸಹಯಾತ್ರಾರ್ಥಿಗಳಿಗೆ ವಿತರಿಸಲಾಯಿತು. ಈ ಮೃತ್ತಿಕೆಯನ್ನು ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

    ಬಳಿಕ, ಮಂದಿರದ ಆವರಣದಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪಕ್ ರಾಯ್‌ ಮತ್ತು ನ್ಯಾಸದ ಪದಾಧಿಕಾರಿಗಳಿಗೆ ಈ ಕಾಣಿಕೆಗಳನ್ನು ರಾಮನಗರ ಜಿಲ್ಲೆಯ ಪರವಾಗಿ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಜತೆಗಿದ್ದ ಭಕ್ತಗಣವು ಭಾರತ್‌ ಮಾತಾ ಕೀ ಜೈ, ಗಂಗಾ ಮಾತಾ ಕೀ ಜೈ, ಸರಯೂ ಮಾತಾ ಕೀ ಕೈ, ಜೈ ಶ್ರೀ ರಾಮ್‌ ಮುಂತಾದ ಘೋಷಣೆಗಳನ್ನು ಉತ್ಸಾಹದಿಂದ ಮೊಳಗಿಸಿತು. ಯಾತ್ರಾರ್ಥಿಗಳ ಈ ಉತ್ಸಾಹಕ್ಕೆ ಅಶ್ವತ್ಥನಾರಾಯಣ ಅವರೂ ದನಿಗೂಡಿಸಿದರು.

    ಈ ವೇಳೆ ಮಾಡತಾಡಿದ ಅಶ್ವಥ್ ನಾರಾಯಣ, ರಾಮ ದೇವರ ಬೆಟ್ಟದ ತಾಣವಾದ ರಾಮನಗರವು ಪರಮಾತ್ಮನಾದ ಶ್ರೀರಾಮನ ಹೆಸರನ್ನೇ ಹೊತ್ತಿದೆ. ಈ ಬೆಟ್ಟದಲ್ಲಿ ದೇಶದಲ್ಲೇ ಅಪರೂಪವಾಗಿರುವ ರಣಹದ್ದಿನ ಸಂತತಿ ಉಳಿದುಕೊಂಡಿದೆ. ರಾಮಾಯಣದಲ್ಲೂ ಈ ಸಂತತಿಗೆ ಸೇರಿದ ಜಟಾಯು, ಸಂಪಾತಿಗಳ ಪಾತ್ರವಿದೆ. ಹೀಗೆ ರಾಮನಗರ, ರಾಮ ಮತ್ತು ರಾಮಾಯಣದ ನಡುವೆ ಮಧುರ ಬಾಂಧವ್ಯವಿದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜಿಲ್ಲೆಯಿಂದ ಬೆಳ್ಳಿ ಇಟ್ಟಿಗೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    ಶ್ರೀರಾಮನು ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಭಾರತೀಯತೆಯ ಪ್ರತೀಕವಾಗಿದ್ದಾನೆ. ನಮ್ಮೆಲ್ಲರ ಪಾಲಿನ ಆದರ್ಶಮೂರ್ತಿಯಾಗಿರುವ ಶ್ರೀರಾಮನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 2024ರ ಜನವರಿಯ ಹೊತ್ತಿಗೆ ಮಂದಿರದ ಕಾಮಗಾರಿಗಳು ಮುಗಿದು, ಜನರಿಗೆ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಅವರು ನುಡಿದರು.

    ರಾಮನಿಂದ ನಮ್ಮಲ್ಲಿ ರಾಮರಾಜ್ಯದ ಪರಿಕಲ್ಪನೆ ಬಂದಿದೆ. ತ್ರೇತಾಯುಗದಿಂದಲೂ ರಾಮನು ಭಾರತೀಯರನ್ನು ಒಗ್ಗೂಡಿಸುವ ಶಕ್ತಿಯಾಗಿ ಉಳಿದುಕೊಂಡು ಬಂದಿದ್ದಾನೆ. ಇಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರಕ್ಕೆ ತಮ್ಮ ಕಾಣಿಕೆಯೂ ಇರಬೇಕೆಂದು ರಾಮನಗರದ ಭಕ್ತ ಮಹಾಶಯರು ಒತ್ತಾಯಿಸಿದರು. ಈ ಮೂಲಕ ರಾಮನಗರದ ಜನತೆಗೆ ಪರಮಾತ್ಮನ ಆಶೀರ್ವಾದ ಸಿಕ್ಕಿದೆ ಎಂದು ಸಚಿವರು ಬಣ್ಣಿಸಿದರು.

    ಪೂಜೆಯ ಬಳಿಕ ಸಚಿವರು ಮತ್ತು ಯಾತ್ರಾರ್ಥಿಗಳು ಪ್ರಗತಿಯಲ್ಲಿರುವ ಮಂದಿರವನ್ನು ವೀಕ್ಷಿಸಿ, ದೇಗುಲದಲ್ಲಿ ದರ್ಶನ ಪಡೆದು ಪುನೀತರಾದರು. ಉಸ್ತುವಾರಿ ಸಚಿವರಿಗೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜು, ರಾಜ್ಯ ರೇಷ್ಮೆ ಕೈಗಾರಿಕೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್ ಗೌಡ ಸೇರಿ ಹಲವರು ಸಾಥ್ ನೀಡಿದರು. ಇದನ್ನೂ ಓದಿ: ಮಂಡ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್‌

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆಯ ರಾಮ ಮಂದಿರದಲ್ಲಿ ದೇವರ ದರ್ಶನಕ್ಕೆ ದಿನ ಫಿಕ್ಸ್

    ಅಯೋಧ್ಯೆಯ ರಾಮ ಮಂದಿರದಲ್ಲಿ ದೇವರ ದರ್ಶನಕ್ಕೆ ದಿನ ಫಿಕ್ಸ್

    ಲಕ್ನೋ: ಅಯೋಧ್ಯೆಯಲ್ಲಿನ (Ayodhya) ಭವ್ಯವಾದ ರಾಮ ಮಂದಿರದಲ್ಲಿ (Ram Mandir) ಭಕ್ತರ (Devotees) ದರ್ಶನವು 2024ರ ಜನವರಿಯಿಂದ ಪ್ರಾರಂಭವಾಗುತ್ತದೆ ಎಂದು ಅದರ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ಪ್ರಮುಖ ಸದಸ್ಯ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 50ರಷ್ಟು ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ. ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024ರ ಜನವರಿಯಲ್ಲಿ ದೇವಾಲಯಗಳನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದರು.

    ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದೇವಾಲಯದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹ ಪ್ರತಿಷ್ಠಾಪಿಸಲಾಗುವುದು. ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020ರ ಆ. 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮಾಡಿದ್ದರು. ಇದನ್ನೂ ಓದಿ: ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕೋತಿಗಳ ಕಾಟ- ಕೈಯಲ್ಲಿರೋ ಬ್ಯಾಗನ್ನೂ ಬಿಡದೇ ಚೆಲ್ಲಾಟ

    Live Tv
    [brid partner=56869869 player=32851 video=960834 autoplay=true]

  • ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ

    ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ

    ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ನಿರ್ಮಾಣ ಹಿಂದೂ ಸಮಾಜದ ಬಹುದಿನದ ಕನಸು. ಆ ಕನಸು ನನಸಾಗುತ್ತಿದೆ. ಆದರೆ ರಾಷ್ಟ್ರದ್ರೋಹಿ ಪಿಎಫ್‍ಐ (PFI) ಸಂಘಟನೆಯ ಕುತಂತ್ರ ಬೆಳಕಿಗೆ ಬಂದಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ರಾಮ ಮಂದಿರವನ್ನು ಪಿಎಫ್‍ಐ ಅಲ್ಲ, ರಾವಣ (Ravana), ಜಿನ್ನಾ (Muhammad Ali Jinnah) ವಂಶಸ್ಥರಿಂದಲೂ ಸ್ಫೋಟಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ K.S Eshwarappa) ಗುಡುಗಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಸ್ಫೋಟ ವಿಷಯವನ್ನು ಪಿಎಫ್‍ಐನವರು ಕನಸಿನಲ್ಲೂ ನೆನಪು ಮಾಡಿಕೊಳ್ಳುವುದು ಬೇಡ. ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಗೌರವ, ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್‍ಐ ಹೇಳಿಕೆಯನ್ನು ಖಂಡಿಸಬೇಕು. ಅಯೋಧ್ಯೆ ರಾಮ ಜನಿಸಿದ ಸ್ಥಳ. ಹೀಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದೆ. ರಾಮ ಮಂದಿರ ಉದ್ಘಾಟನೆಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ದೇಶದ್ರೋಹಿಗಳು ಸ್ಫೋಟಕ್ಕೆ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಎಫೆಕ್ಟ್ – ದೈವನರ್ತಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

    ಇಂತಹ ದೇಶದ್ರೋಹಿಗಳನ್ನು ಕೇವಲ ಜೈಲಿಗೆ ಕಳುಹಿಸಿದರಷ್ಟೇ ಸಾಲದು. ಸಂವಿಧಾನಕ್ಕೆ ತಿದ್ದುಪಡಿ ತಂದು ಕಠಿಣ ಕಾನೂನು ಜಾರಿಗೊಳಿಸಬೇಕು. ಅಂತಹ ಕಠಿಣ ಕಾನೂನು ಶೀಘ್ರವಾಗಿ ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒತ್ತಾಯಿಸುತ್ತೇನೆ. ಹೊಸ ರೂಪದ ಕಾನೂನು ಜಾರಿಗೆ ತರುವ ಮೂಲಕ ದೇಶ ದ್ರೋಹಿಗಳಿಗೆ ಭಯ ಹುಟ್ಟಿಸಬೇಕು. ತುರ್ತಾಗಿ ಲೋಕಸಭೆ ಅಧಿವೇಶನ ಕರೆದು ನೂತನ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಶೇ.50 ಪೂರ್ಣ – ಯೋಗಿ ಆದಿತ್ಯನಾಥ್‌

    ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಶೇ.50 ಪೂರ್ಣ – ಯೋಗಿ ಆದಿತ್ಯನಾಥ್‌

    ಲಕ್ನೋ: ಅಯೋಧ್ಯೆ (Ayodhya) ರಾಮ ಮಂದಿರ (Ram Temple) ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ತಿಳಿಸಿದ್ದಾರೆ.

    ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020 ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ನೀತಿ ಪ್ರಕರಣ – ಬೆಳ್ಳಂಬೆಳಗ್ಗೆ 35 ಕಡೆ ಇಡಿ ದಾಳಿ

    1949ರಿಂದ ಆಂದೋಲನ ಆರಂಭವಾಗಿದ್ದು, ರಾಮಮಂದಿರದ ಕನಸನ್ನು ನನಸಾಗಿಸಲು ಸಮರ್ಪಣಾ ಪ್ರಯತ್ನಗಳು ನಡೆದಿವೆ. ಈಗ ಈ ಪ್ರಯತ್ನಗಳಿಂದಾಗಿ ದೇವಾಲಯದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಕೃಷ್ಣ ದೇವರ ʻಕರ್ಮಣ್ಯೇ ವಾಧಿಕಾರಸ್ತೇ ಮಾಫಲೇಶು ಕದಾಚನʼ ಉಪದೇಶದಂತೆ ನಾವು ರಾಮ ಮಂದಿರ ನಿರ್ಮಾಣ ಕಾರ್ಯ ನಡೆಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಮಸೀದಿ ಗುಮ್ಮಟದ ಮೇಲಿದ್ದ 100 ವರ್ಷದಷ್ಟು ಹಳೆಯ ಚಿನ್ನದ ಭಾಗ ಕಳ್ಳತನ

    Live Tv
    [brid partner=56869869 player=32851 video=960834 autoplay=true]