Tag: ರಾಯಭಾರಿ

  • ನಂದಿನಿ ಉತ್ಪನ್ನಗಳಿಗೆ ಶಿವಣ್ಣ ರಾಯಭಾರಿ: ತಂದೆ-ತಮ್ಮನ ಹಾದಿಯಲ್ಲಿ ಸೆಂಚುರಿಸ್ಟಾರ್

    ನಂದಿನಿ ಉತ್ಪನ್ನಗಳಿಗೆ ಶಿವಣ್ಣ ರಾಯಭಾರಿ: ತಂದೆ-ತಮ್ಮನ ಹಾದಿಯಲ್ಲಿ ಸೆಂಚುರಿಸ್ಟಾರ್

    ರ್ನಾಟಕದ ಹೆಮ್ಮೆಯ ಪ್ರತೀಕ ನಂದಿನಿ ಹಾಲು ಉತ್ಪನ್ನಗಳಿಗೆ (Nandini Product) ರಾಯಭಾರಿಯಾಗಿ ಸ್ಯಾಂಡಲ್ ವುಡ್ ನ ಹೆಸರಾಂತ ನಟ ಶಿವರಾಜ್ ಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಶಿವರಾಜ್ ಕುಮಾರ್ ಜೊತೆ ಕೆಎಂಎಫ್ ಅಧಿಕಾರಿಗಳು ಮಾತುಕತೆ ನಡೆಸಿ, ಶಿವರಾಜ್ ಕುಮಾರ್ (Shivaraj Kumar) ಅವರನ್ನು ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸೇರಿದಂತೆ ಹಲವರು ಹಾಜರಿದ್ದರು.


    ಕೆಎಂಎಫ್ (KMF) ಗೂ ಡಾ.ರಾಜ್ ಕುಟುಂಬಕ್ಕೂ ಹತ್ತಿರದ ನಂಟಿದೆ. 1996ರಲ್ಲಿ ಡಾ.ರಾಜ್ ಕುಮಾರ್ ಅವರು ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಿ (Ambassador) ಒಪ್ಪಿಕೊಂಡರು. ಉಚಿತವಾಗಿಯೇ ಅದನ್ನು ಮಾಡಿಕೊಂಡು ಬಂದರು. ಡಾ.ರಾಜ್ ಕುಮಾರ್ ಕಾಣಿಸಿಕೊಂಡ ಏಕೈಕ ಜಾಹೀರಾತು ಅದಾಗಿತ್ತು. ಡಾ.ರಾಜ್ ಕುಮಾರ್ ಮರಣಾನಂತರ ಆ ಜವಾಬ್ದಾರಿಯನ್ನು ಪುನೀತ್ ರಾಜ್ ಕುಮಾರ್ (Puneeth) ಮುಂದುವರೆಸಿಕೊಂಡು ಹೋಗುತ್ತಿದ್ದರು.


    ಪುನೀತ್ ನಿಧನಾನಂತರ ಮತ್ತೆ ಡಾ.ರಾಜ್ (Raj Kumar) ಕುಟುಂಬಕ್ಕೆ ಆ ಸೇವೆ ಹುಡುಕಿಕೊಂಡು ಹೋಗಿದೆ. ಶಿವರಾಜ್ ಕುಮಾರ್ ಕೂಡ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ತಂದೆ ಮತ್ತು ಸಹೋದರನ ಕೆಲಸವನ್ನು ಮುಂದುರೆಸಿಕೊಂಡು ಹೋಗಲಿದ್ದಾರೆ. 1996ರಿಂದ ಡಾ.ರಾಜ್ ಕುಮಾರ್ ರಾಯಭಾರಿಯಾಗಿದ್ದರೆ, 2009ರಲ್ಲಿ ಪುನೀತ್ ನೇಮಕವಾಗಿದ್ದರು. 2023ರಿಂದ ಆ ಜವಾಬ್ದಾರಿಯನ್ನು ಶಿವಣ್ಣ ವಹಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ಗೆ ಆಹ್ವಾನ

    ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ಗೆ ಆಹ್ವಾನ

    ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ (Ashwini Puneeth Rajkumar) ಅವರನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆಹ್ವಾನಿಸಿದ್ದಾರೆ. ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನ ಗಮನಿಸಿರುವ ಸಚಿವರು, ಆರೋಗ್ಯ ಇಲಾಖೆಯ ವತಿಯಿಂದ ಆಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

    ವರನಟ ಡಾ.ರಾಜ್‌ಕುಮಾರ್ ಅವರಂತೆಯೇ ಪುನೀತ್ ರಾಜ್‌ಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದರು. ಪುನೀತ್ ರಾಜ್‌ಕುಮಾರ್ ಅವರು ಕಣ್ಣುಗಳ ದಾನವು ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅಲ್ಲದೇ ರಾಜ್ಯದಲ್ಲಿ ಅಂಗಾಂಗ ದಾನ ಪ್ರಮಾಣ ಏರಿಕೆ ಕೂಡಾ ಕಂಡಿತ್ತು. ಅನೇಕರು ದಿ. ಪುನೀತ್ ರಾಜ್‌ಕುಮಾರ್ ಅವರನ್ನೇ ಮಾದರಿಯನ್ನಾಗಿಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣ – ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ

    ಅಂಗಾಂಗ ದಾನದ ಮೂಲಕ ಒಬ್ಬ ದಾನಿ ತನ್ನ ಸಾವಿನ ಬಳಿಕವೂ 8 ಜನರಿಗೆ ಜೀವದಾನ ಮಾಡಬಹುದಾಗಿದೆ. ಅಲ್ಲದೇ ಅಂಗಾಂಶ ದಾನದ ಮೂಲಕ 50 ಜನರ ಜೀವವನ್ನ ಉಳಿಸಬಹುದಾಗಿದೆ. ಜೀವನದ ಸಾರ್ಥಕತೆ ಕಾಣಬಹುದಾದ ಅಂಗಾಂಗ ದಾನಕ್ಕೆ ಸರ್ಕಾರದಿಂದ ಹೆಚ್ಚು ಪ್ರೋತ್ಸಾಹ ನೀಡುವತ್ತ ಕಾರ್ಯಕ್ರಮಗಳನ್ನ ರೂಪಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.

    ಆಗಸ್ಟ್ 3 ರಂದು ಅಂಗಾಂಗ ದಾನ ದಿನಾಚರಣೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ, ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂಗಾಂಗ ದಾನದ ಪ್ರಮಾಣ ಪ್ರತಿ ಮಿಲಿಯನ್‌ ಜನಸಂಖ್ಯೆಗೆ 0.08 ರಷ್ಟಿದೆ. ಸುಮಾರು 3 ಲಕ್ಷ ಜನರು ಮೂತ್ರಪಿಂಡ ಕಸಿಗಾಗಿ ಕಾಯುತ್ತಿದ್ದಾರೆ. ಆದರೆ ಪ್ರತಿ ವರ್ಷ ಕೇವಲ 10,000 ಜನರು ಮಾತ್ರ ಕಸಿ ಪಡೆಯುತ್ತಾರೆ. ಇದನ್ನೂ ಓದಿ: ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

    ಭಾರತದಲ್ಲಿ ಸುಮಾರು 50,000 ರೋಗಿಗಳಿಗೆ ಹೃದಯ ಕಸಿ ಅಗತ್ಯವಿದೆ. ಆದರೆ 1% ಜನರು ಮಾತ್ರ ಅಂಗಾಂಗವನ್ನು ಪಡೆಯುತ್ತಿದ್ದಾರೆ. 2 ಲಕ್ಷ ಭಾರತೀಯರಿಗೆ ಕಾರ್ನಿಯಾ ಕಸಿ ಅಗತ್ಯವಿದೆ. ಆದರೆ ಪ್ರತಿ ವರ್ಷ ಕೇವಲ 50,000 ಕಾರ್ನಿಯಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ. ರಾಜ್ಯ ಸರ್ಕಾರವು ಮಾನವ ಅಂಗಾಂಗಗಳ ಕೊರತೆಯನ್ನು ನೀಗಿಸಲು ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದ್ದು, ನಿಮ್ಹಾನ್ಸ್ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮಾನವ ಅಂಗಾಂಗ ಹಿಂಪಡೆಯುವ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಅಂಗಾಂಗ ಹಿಂಪಡೆಯುವಿಕೆ ಪ್ರಾರಂಭಿಸಲಾಗಿದೆ. ಮೆದುಳು ನಿಷ್ಕ್ರಿಯ ಹೊಂದಿದ ರೋಗಿಗಳನ್ನು ಗುರುತಿಸಿ ಅಂಗಾಂಗ ದಾನ ಮಾಡುವ ಕುರಿತು ಸಮಾಲೋಚನೆಗಳನ್ನ ಸಂಬಂಧಿಸಿದವರೊಂದಿಗೆ ನಡೆಸಲಾಗುತ್ತಿದೆ.‌

    ಸರ್ಕಾರದ ವತಿಯಿಂದ ಬಡರೋಗಳಿಗೆ ಉಚಿತ ಅಂಗಾಂಗ ಕಸಿ ಮಾಡುವ ಯೋಜನೆ ಆರಂಭಿಸಲಾಗಿದ್ದು, ಇದುವರೆಗೂ 73 ರೋಗಿಗಳು ಪ್ರಯೋಜನ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ನರವಿಜ್ಞಾನ ಸಂಸ್ಥೆ ಹಾಗೂ ಕರ್ನಾಟಕ ವೈದ್ಯಕೀಯ ಸಂಸ್ಥೆ, ಕಿಮ್ಸ್ ಹುಬ್ಬಳ್ಳಿಯಲ್ಲಿ ಕಿಡ್ನಿ ಕಸಿ ಮಾಡಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯಚೂರು ಜಿಲ್ಲಾ ಚುನಾವಣಾ ಐಕಾನ್ ಆಗಿ ಬಾಹುಬಲಿ ನಿರ್ದೇಶಕ ರಾಜಮೌಳಿ ನೇಮಕ

    ರಾಯಚೂರು ಜಿಲ್ಲಾ ಚುನಾವಣಾ ಐಕಾನ್ ಆಗಿ ಬಾಹುಬಲಿ ನಿರ್ದೇಶಕ ರಾಜಮೌಳಿ ನೇಮಕ

    ರಾಯಚೂರು: ಚುನಾವಣಾ ರಾಯಭಾರಿಯಾಗಿ (Election icon) ರಾಯಚೂರು (Raichuru) ಜಿಲ್ಲೆಗೆ ಚಲನಚಿತ್ರ ನಿರ್ದೇಶಕ ಬಾಹುಬಲಿ (Bahubali) ಸಿನೆಮಾ ಖ್ಯಾತಿಯ ಎಸ್.ಎಸ್.ರಾಜಮೌಳಿ (S.S.Rajamouli)ನೇಮಕವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

    ಮತದಾನ ಜಾಗೃತಿ ಕುರಿತು ರಾಜಮೌಳಿ ಚುನಾವಣಾ ಸ್ವೀಪ್ (Election SVEEP)  ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವೀಡಿಯೋ ಕ್ಲಿಪ್‍ಗಳ ಮೂಲಕ ಜಾಗೃತಿ ಮೂಡಿಸುತ್ತಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: Ind Vs Aus: ಆಸ್ಟ್ರೇಲಿಯಾದ ಪ್ರಧಾನಿ‌ ಜೊತೆ ಮೋದಿ ಮ್ಯಾಚ್ ವೀಕ್ಷಣೆ

    ರಾಜಮೌಳಿ ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್‍ನವರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಕಳುಹಿಸಿದ ರಾಯಭಾರಿಗಳ ಪ್ರಸ್ತಾವನೆಗೆ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಸಮ್ಮತಿಸಿದ್ದಾರೆ.

    ಈಗಾಗಲೇ ರಾಯಭಾರಿಗಳ ಆಯ್ಕೆ ಪಟ್ಟಿ ಬಿಡುಗಡೆಯಾಗಿದೆ. ಚುನಾವಣಾ ಸ್ವೀಪ್ ಚಟುವಟಿಕೆಗಳಲ್ಲಿ ನಿರ್ದೇಶಕ ರಾಜಮೌಳಿ ಭಾಗವಹಿಸಲು ಸಂಪರ್ಕಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಪೋಷಕರೇ ಎಚ್ಚರ- ಮಕ್ಕಳಲ್ಲಿ ಹೆಚ್ಚಾಗ್ತಿದೆ ಆಡಿನೋ ವೈರಸ್..!

  • ಬಿಗ್ ಬಾಸ್ ವಿಜೇತ ಕಂ ನಟ ಆರಿ ಅರ್ಜುನನ್ ಇದೀಗ ರಾಯಭಾರಿ

    ಬಿಗ್ ಬಾಸ್ ವಿಜೇತ ಕಂ ನಟ ಆರಿ ಅರ್ಜುನನ್ ಇದೀಗ ರಾಯಭಾರಿ

    ಮೆರಿಕಾದಲ್ಲಿ ದೊಡ್ಡ ಹೆಸರು ಮಾಡಿರುವ ತಮಿಳುನಾಡು ಮೂಲದ ನನ್ಬನ್​ ಸಮೂಹ ಸಂಸ್ಥೆಗಳ ಭಾರತೀಯ ರಾಯಭಾರಿಯಾಗಿ ಖ್ಯಾತ ತಮಿಳು ನಟ ಮತ್ತು ‘ಬಿಗ್​ ಬಾಸ್​ ಸೀಸನ್​ 4’ ವಿಜೇತ ಆರಿ ಅರ್ಜುನನ್​ ಅವರನ್ನು ಆಯ್ಕೆ ಮಾಡಲಾಗಿದೆ. 2005ರಲ್ಲಿ ‘ಆಲಯಾದಿಕುತ್ತು’ ಎಂಬ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ನಟರಾಗಿ ಪರಿಚಿತರಾದ ಆರಿ ಅರ್ಜುನನ್​, ಕಳೆದ 18 ವರ್ಷಗಳಲ್ಲಿ ಹಲವಾರು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ‘ಬಿಗ್​ ಬಾಸ್​-4’ರಲ್ಲಿ ಪ್ರೇಕ್ಷಕರಿಂದ 16 ಕೋಟಿಗೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅವರು ಕಿರುತೆರೆಯ ಇತಿಹಾಸದಲ್ಲೇ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಭಾರತೀಯ ಕಿರುತೆರೆ ಇತಿಹಾಸದಲ್ಲೇ ಯಾರೊಬ್ಬರೂ, ಇಷ್ಟೊಂದು ಅಧಿಕ ಮೊತ್ತದ ಮತಗಳನ್ನು ಪಡೆದ ಉದಾಹರಣೆಯೇ ಇಲ್ಲ. ನಟನೆಯ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿರುವ ಅವರು, ತಮ್ಮದೇ ರೀತಿಯಲ್ಲಿ ಹಲವು ಜನಪರ ಕೆಲಸಗಳಲ್ಲಿ ಕೈಜೋಡಿಸಿದ್ದಾರೆ.

    ನನ್ಬನ್ ಸಮೂಹ ಸಂಸ್ಥೆಗಳ ರಾಯಭಾರಿಯಾಗಿ ಆಯ್ಕೆಯಾಗಿರುವ ಆರಿ ಅರ್ಜುನನ್​ ಅವರಿಗೆ ಸ್ವಾಗತ ಕೋರಿ ಮಾತನಾಡಿರುವ ಸಂಸ್ಥೆಯ ಅಧ್ಯಕ್ಷ ಮತ್ತು ಸಂಸ್ಥಾಪಕ ಗೋಪಾಲ ಕೃಷ್ಣನ್ (ಜಿಕೆ), ‘ಅರ್ಜುನನ್​ ಅವರ ಉತ್ಸಾಹ, ಸೇವಾ ಮನೋಭಾವ ಮತ್ತು ಅವರ ಖ್ಯಾತಿಯು, ಹೂಡಿಕೆದಾರರ ಆರ್ಥಿಕ ಕನಸುಗಳನ್ನು ನೈತಿಕತೆ ಮತ್ತು ಸಮಗ್ರತೆಯೊಂದಿಗೆ ಪೂರೈಸಲು ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ ಅವರನ್ನು ಸಂಸ್ಥೆಯ ರಾಯಭಾರಿಯನ್ನಾಗಿ ನೇಮಿಸಲು ಹರ್ಷಪಡುತ್ತೇವೆ’ ಎಂದು ಹೇಳಿದ್ದಾರೆ.

    ನನ್ಬನ್​ ಎಂದರೆ ತಮಿಳಿನಲ್ಲಿ ನಿಜವಾದ ಸ್ನೇಹಿತ ಎಂದರ್ಥ. ಅದಕ್ಕೆ ಅನುಗುಣವಾಗಿ ಏನನ್ನೂ ನಿರೀಕ್ಷಿಸದೆ ಬೇಷರತ್ತಾಗಿ ಇತರರಿಗೆ ಸಹಾಯ ಮಾಡುವ ಏಕೈಕ ದೃಷ್ಟಿಯೊಂದಿಗೆ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ, ಆರ್ಥಿಕ ಸ್ವಾತಂತ್ರ್ಯವನ್ನು ಪಡೆಯಲು ಸಮುದಾಯವನ್ನು ಸಕ್ರಿಯಗೊಳಿಸುವುದರ ಜತೆಗೆ, ಹಿಂದುಳಿದವರಿಗೆ ಬೆಂಬಲ ನೀಡುವ ಮತ್ತು ಹಸಿರು ಗ್ರಹಕ್ಕಾಗಿ ಸುಸ್ಥಿರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ನನ್ಬನ್​ ಸಮೂಹ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

    ನನ್ಬನ್​ ಸಮೂಹ ಸಂಸ್ಥೆಗಳಡಿ ನನ್ಬನ್ ವೆಂಚರ್ಸ್, ನನ್ಬನ್ ರಿಯಾಲ್ಟಿ, ನನ್ಬನ್ ಚೋಲಾ ಲ್ಯಾಂಡ್ ಹೋಲ್ಡಿಂಗ್ಸ್, ನನ್ಬನ್ ಪ್ರೈವೇಟ್ ಇಕ್ವಿಟಿ, ನನ್ಬನ್ ಇಎಸ್ಜಿ ಸೊಲ್ಯೂಷನ್ಸ್ ಮತ್ತು ನನ್ಬನ್ ಎಂಟರ್​ಟೈನ್​ಮೆಂಟ್​ ಸೇರಿದಂತೆ ಹಲವು ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ESG ಪರಿಹಾರಗಳನ್ನು ಉತ್ತೇಜಿಸಲು ಮತ್ತು ಪ್ರಪಂಚದಾದ್ಯಂತದ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಆರ್ಥಿಕ ಸ್ವಾತಂತ್ರ್ಯವನ್ನು ತರಲು ಈ ವಿಭಾಗಗಳು ಒಟ್ಟಾಗಿ ಕೆಲಸ ಮಾಡುತ್ತವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸುದೀಪ್ ಪ್ರೇರಣೆಯಿಂದ ಗೋವು ದತ್ತು ಪಡೆದ ಯುವ ಉದ್ಯಮಿ ವೀರಕಪುತ್ರ ಶ್ರೀನಿವಾಸ್

    ಸುದೀಪ್ ಪ್ರೇರಣೆಯಿಂದ ಗೋವು ದತ್ತು ಪಡೆದ ಯುವ ಉದ್ಯಮಿ ವೀರಕಪುತ್ರ ಶ್ರೀನಿವಾಸ್

    ಕಿಚ್ಚ ಸುದೀಪ್ ನಿನ್ನೆಯಷ್ಟೇ ಗೋಪೂಜೆ ನೆರವೇರಿಸಿ 31 ಗೋವುಗಳನ್ನು ದತ್ತು ಪಡೆದಿದ್ದರು. ಸುದೀಪ್ ಅವರ ಈ ಕೆಲಸದ ಪ್ರೇರಣೆಯಿಂದಾಗಿ ಯುವ ಉದ್ಯಮಿ, ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷರೂ ಆಗಿರುವ ವೀರಕಪುತ್ರ ಶ್ರೀನಿವಾಸ್ ಕೂಡ ಗೋವುಗಳನ್ನು ದತ್ತು ಪಡೆದಿದ್ದಾರೆ. ಅಲ್ಲದೇ, ಇತರರು ಈ ಕೆಲಸಕ್ಕೆ ಮುಂದಾಗಿ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದ್ದಾರೆ. ನಿನ್ನೆ ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

    ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದ್ದರು. ಈ ಮನವಿಯ ಬೆನ್ನಲ್ಲೇ ವೀರಕಪುತ್ರ ಅವರು ಐದು ಹಸುಗಳನ್ನು ದತ್ತು ಪಡೆದು ಮಾದರಿಯಾಗಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದಿದ್ದಾರೆ. ಸಚಿವ ಪ್ರಭು ಚವ್ಹಾನ್ ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದಾರೆ.

    ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ ಮಾತ್ರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70ಗಳು, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10/- ಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು.

    Live Tv
    [brid partner=56869869 player=32851 video=960834 autoplay=true]

  • ಪುಣ್ಯಕೋಟಿ ದತ್ತು ಯೋಜನೆಗೆ ಕಿಚ್ಚ ರಾಯಭಾರಿ: 31 ಗೋವು ದತ್ತು ಪಡೆದ ಸುದೀಪ್

    ಪುಣ್ಯಕೋಟಿ ದತ್ತು ಯೋಜನೆಗೆ ಕಿಚ್ಚ ರಾಯಭಾರಿ: 31 ಗೋವು ದತ್ತು ಪಡೆದ ಸುದೀಪ್

    ಗಾಗಲೇ ಸಾಕಷ್ಟು ಸಮಾಜಸೇವೆ ಮಾಡಿರುವ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನೇಮಕ ಮಾಡಿದೆ. ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್, ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ರಾಯಭಾರಿ‌ ನೇಮಕಾತಿ ಪತ್ರ ನೀಡಿ ಸನ್ಮಾನಿಸಿದರು.

    ನೇಮಕಾತಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸುದೀಪ್, ಇದೇ ವೇಳೆ 31 ಗೋವುಗಳನ್ನು ದತ್ತು ಪಡೆವುದಾಗಿ ಅವರು ತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ ಮಾಡಿರುವುದಾಗಿ ಸುದೀಪ್ ತಿಳಿಸಿದ್ದಾರೆ. ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ಅವರು ದತ್ತು ಪಡೆಯಲಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ಬಯೋಪಿಕ್‌ಗೆ ಸುಧಾ ಕೊಂಗರಾ ಆ್ಯಕ್ಷನ್ ಕಟ್

    ಸುದೀಪ್ ಅವರು ಸರಕಾರದ ಕಾರ್ಯಕ್ರಮಗಳಿಗೆ ರಾಯಭಾರಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಅವರು ಹಲವಾರು ಕಾರ್ಯಕ್ರಮಗಳ ಜೊತೆ ಕೈ ಜೋಡಿಸಿದ್ದಾರೆ. ಅಲ್ಲದೇ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿಯೂ ಅವರು ಸಹಕಾರಿ ಆಗಿದ್ದಾರೆ. ಈ ಸಲ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗುವ ಮೂಲಕ ಪುಣ್ಯಕೋಟಿ ಉಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್

    ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್

    ರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ  ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ  ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ  ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ.

    ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೋಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕಿ

    ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕಿ

    ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿ ಅದೇಶ ಹೊರಡಿಸಿದ್ದಾರೆ.

    ಭಾರತ, ಜರ್ಮನಿ, ಜೆಕ್‍ಗಣರಾಜ್ಯ, ನಾರ್ವೆ ಮತ್ತು ಹಂಗೇರಿ ದೇಶಗಳ ರಾಯಭಾರಿಗಳನ್ನು ಝೆಲೆನ್ಸ್ಕಿ ವಜಾಗೊಳಿಸಿರುವ ಬಗ್ಗೆ ಅಧಿಕೃತವಾಗಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಆದರೆ ಯಾವ ಕಾರಣಕ್ಕೆ ವಜಾಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಇದನ್ನೂ ಓದಿ: ಹೆತ್ತ ತಾಯಿಯ ಕತ್ತು ಸೀಳಿ ಕೊಂದು, ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಗ

    ಈ ಹಿಂದೆ ರಷ್ಯಾ, ಉಕ್ರೇನ್ ವಿರುದ್ಧ ಯುದ್ಧ ಸಾರಿದಾಗ ಉಕ್ರೇನ್‍ಗೆ ಅಂತಾರಾಷ್ಟ್ರೀಯ ಬೆಂಬಲ ಮತ್ತು ಮಿಲಿಟರಿ ಸಹಾಯವನ್ನು ಹೆಚ್ಚಿಸಲು ಝೆಲೆನ್ಸ್ಕಿ ತನ್ನ ರಾಜತಾಂತ್ರಿಕರ ಬಳಿ ಮನವಿಮಾಡಿಕೊಂಡಿದ್ದರು. ಆದರೆ ಈ ವೇಳೆ ಯಾವುದೇ ನೆರವು ಸಿಕ್ಕಿರಲಿಲ್ಲ. ಆದರೂ ರಷ್ಯಾದೊಂದಿಗೆ ನಿರಂತವಾಗಿ ಯುದ್ಧ ಮಾಡಿ ದೇಶವನ್ನು ಉಳಿಸಿಕೊಳ್ಳಲು ಉಕ್ರೇನ್ ಹೋರಾಡುತ್ತಿದೆ. ಯುದ್ಧ ನಡೆಯುತ್ತಿರುವಂತೆ ಶಕ್ತಿಶಾಲಿ ರಾಕೆಟ್ ಲಾಂಚರ್‌ಗಳನ್ನು ಒಳಗೊಂಡಂತೆ ಕೈವ್‍ಗೆ ಹೊಸ ಮಿಲಿಟರಿ ನೆರವು ನೀಡುವುದಾಗಿ ಯುನೈಟೆಡ್ ಸ್ಟೇಟ್ಸ್ ಭರವಸೆ ನೀಡಿದೆ. ಇದನ್ನೂ ಓದಿ: ಶ್ರೀಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ, ವಾಹನಗಳು ಜಖಂ – ಹೊಸ ಸರ್ಕಾರ ರಚನೆಗೆ ಅಸ್ತು

    ಇತ್ತ ರಷ್ಯಾದ ಪಡೆಗಳು ಯುದ್ಧ ಮುಮದುವರಿಸಿದ್ದು ಉಕ್ರೇನ್‍ನ ಪೂರ್ವ ಡೊನೆಟ್ಸ್ಕ್ ಪ್ರದೇಶದ ಮೇಲೆ ನಿರಂತರ ಶೆಲ್ ದಾಳಿಯನ್ನು ಮುಂದುವರಿಸಿದೆ. ನೆರೆಯ ಲುಗಾನ್ಸ್ಕ್ ಪ್ರದೇಶದ ನಗರಗಳನ್ನು ವಶಪಡಿಸಿಕೊಳ್ಳಲು ರಷ್ಯಾ ಮುಂದಾಗಿದ್ದ ವೇಳೆ ಉಕ್ರೇನ್ ಸಮರ್ಥವಾಗಿ ಎದುರಿಸಿ ರಷ್ಯಾ ಪಡೆಯನ್ನು ಹಿಮ್ಮೆಟ್ಟಿಸಿದೆ. ರಷ್ಯಾ ಈಗ ಸಂಪೂರ್ಣ ಡೊನ್ಬಾಸ್ ಪ್ರದೇಶದ ಮೇಲೆ ತನ್ನ ಹಿಡಿತವನ್ನು ಬಲಪಡಿಸಲು ಮುಂದಾಗಿದೆ. ಈ ನಡುವೆ ಉಕ್ರೇನ್ ಈವರೆಗೆ 37,200 ರಷ್ಯಾ ಸೈನಿಕರನ್ನು ಹೊಡೆದುರುಳಿಸುವುದಾಗಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವಸಂಸ್ಥೆ ಮುಖ್ಯಸ್ಥರ ತಂತ್ರಜ್ಞಾನ ರಾಯಭಾರಿಯಾಗಿ ಭಾರತದ ಅಮನ್ ದೀಪ್ ನೇಮಕ

    ವಿಶ್ವಸಂಸ್ಥೆ ಮುಖ್ಯಸ್ಥರ ತಂತ್ರಜ್ಞಾನ ರಾಯಭಾರಿಯಾಗಿ ಭಾರತದ ಅಮನ್ ದೀಪ್ ನೇಮಕ

    ನ್ಯೂಯಾರ್ಕ್: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಅವರ ತಂತ್ರಜ್ಞಾನ ರಾಯಭಾರಿಯಾಗಿ ಭಾರತೀಯ ರಾಜತಾಂತ್ರಿಕ ಅಧಿಕಾರಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.

    2016 ರಿಂದ 2018 ರವರೆಗೆ ಜಿನೀವಾದಲ್ಲಿ ನಡೆದ ನಿಶಸ್ತ್ರೀಕರಣದ ಸಮ್ಮೇಳನಕ್ಕೆ ಭಾರತೀಯ ರಾಯಭಾರಿ ಹಾಗೂ ಖಾಯಂ ಪ್ರತಿನಿಧಿಯಾಗಿದ್ದ ಗಿಲ್, ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್‌ನ ಅಂತಾರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮತ್ತು ಕೃತಕ ಬುದ್ಧಿಮತ್ತೆ ಸಂಶೋಧನಾ ಸಹಯೋಗದ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಕೋಲ್ಡ್ ವಾರ್ – ನಟಿ ಅನುಷ್ಕಾ ಶೆಟ್ಟಿ ಸಹೋದರನ ಕೊಲೆಗೆ ಸ್ಕೆಚ್

    ಪಂಜಾಬ್ ವಿವಿಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಕಮ್ಯುನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್‌ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಹಾಗೂ ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಅಮನ್ ದೀಪ್ ಸಿಂಗ್ ಗಿಲ್ ಅವರು ಡಿಜಿಟಲ್ ತಂತ್ರಜ್ಞಾನದ ಚಿಂತನೆಯ ನಾಯಕನಾಗಿದ್ದು, ಡಿಜಿಟಲ್ ತಂತ್ರಜ್ಞಾನಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದಾರೆ. ಡಿಜಿಟಲ್ ರೂಪಾಂತರಗಳನ್ನು ಜವಾಬ್ದಾರಿಯುತವಾಗಿ ಹಾಗೂ ಅಭಿವೃದ್ಧಿಗೊಳಿಸುವ ಬಗ್ಗೆ ಒಳ್ಳೆಯ ತಿಳುವಳಿಕೆ ಹೊಂದಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

  • ಅಂಜನಾದ್ರಿಗೆ ಇಂಗ್ಲೆಂಡ್ ದೇಶದ ರಾಯಭಾರಿ ಭೇಟಿ

    ಅಂಜನಾದ್ರಿಗೆ ಇಂಗ್ಲೆಂಡ್ ದೇಶದ ರಾಯಭಾರಿ ಭೇಟಿ

    ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿರುವ ಹನುಮನ ಸನ್ನಿಧಿಗೆ ಇಂಗ್ಲೆಂಡ್ ರಾಯಭಾರಿ ಭೇಟಿ ನೀಡಿದ್ದಾರೆ.

    ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾಗಿರುವ ಅಂಜನಾದ್ರಿಯ ಆಂಜನೇಯ ದೇಗುಲಕ್ಕೆ ಇಂಗ್ಲೆಂಡ್ ರಾಯಭಾರಿ ಪತ್ನಿ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು. ಮುಂಬೈನಲ್ಲಿರುವ ಇಂಗ್ಲೆಂಡಿನ ಬ್ರಿಟೀಷ್ ಸರ್ಕಾರದ ಡೆಪ್ಯೂಟಿ ಕಮಿಷನರ್ ಅಲೆನ್ ಗಿಮೆಲ್ ಹಾಗೂ ಪತ್ನಿ ಮೆಟ್ಟಿಲು ಹತ್ತಿ ಅಂಜನಾದ್ರಿಯ ದರ್ಶನ ಪಡೆದರು.

    ಜಿಂದಾಲ್ ಸಂಸ್ಥೆಯ ನೌಕರ ಹರಿ ಅವರು ಇಂಗ್ಲೆಂಡ್‌ನ ದಂಪತಿಯನ್ನು ದೇಗುಲಕ್ಕೆ ಕರೆತಂದು ದರ್ಶನ ಮಾಡಿಸಿದರು. ಇದಕ್ಕೂ ಮುನ್ನ ಹುಬ್ಬಳ್ಳಿ ಸಮೀಪ ಇರುವ ಗರಗದ ರಾಷ್ಟ್ರ ಧ್ವಜ ತಯಾರಿಸುವ ಘಟಕಕ್ಕೆ ಭೇಟಿ ನೀಡಿದ್ದರು. ಹೊಸಪೇಟೆ ಮತ್ತು ಜಿಂದಾಲ್ ನಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮತ್ತು ಸಹಕಾರ ಸಂಘಗಳ ಕಾರ್ಯಚಟುವಟಿಕೆ ಅಧ್ಯಯನದ ಉದ್ದೇಶಕ್ಕೆ ಬಂದಿದ್ದಾರೆ ಎನ್ನಲಾಗಿದೆ.