Tag: ರಾಯಭಾರ ಕಚೇರಿ

  • ಬೆಂಗಳೂರಲ್ಲೇ ಸಿಗಲಿದೆ ಅಮೆರಿಕ ವೀಸಾ – ಸಿಲಿಕಾನ್ ಸಿಟಿಯಲ್ಲಿ ರಾಯಭಾರ ಕಚೇರಿ ತೆರೆಯಲು US ನಿರ್ಧಾರ

    ಬೆಂಗಳೂರಲ್ಲೇ ಸಿಗಲಿದೆ ಅಮೆರಿಕ ವೀಸಾ – ಸಿಲಿಕಾನ್ ಸಿಟಿಯಲ್ಲಿ ರಾಯಭಾರ ಕಚೇರಿ ತೆರೆಯಲು US ನಿರ್ಧಾರ

    – ಅಮೆರಿಕ ವೀಸಾಗಾಗಿ ಕನ್ನಡಿಗರು ಇನ್ನು ಚೆನ್ನೈಗೆ ಹೋಗಬೇಕಾಗಿಲ್ಲ

    ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಮೆರಿಕ (America) ಭೇಟಿಯಿಂದ ಕನ್ನಡಿಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರು (Bengaluru) ಹಾಗೂ ಅಹಮದಾಬಾದ್‌ನಲ್ಲಿ (Ahmedabad) ತನ್ನ ರಾಯಭಾರ ಕಚೇರಿ (Consulate) ತೆರೆಯಲು ಅಮೆರಿಕ ನಿರ್ಧರಿಸಿದೆ.

    ಅಮೆರಿಕವು ಬೆಂಗಳೂರು ಹಾಗೂ ಅಹಮದಾಬಾದ್‌ನಲ್ಲೂ 2 ಹೊಸ ರಾಯಭಾರ ಕಚೇರಿಗಳನ್ನು ತೆರೆಯಲು ಉದ್ದೇಶಿಸಿದ್ದು, ಈ ಮೂಲಕ ಭಾರತದ ಜನರೊಂದಿಗಿನ ಸಂಬಂಧವನ್ನು ಹೆಚ್ಚಿಸಲು ಮುಂದಾಗಿರುವುದಾಗಿ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

    ಕಳೆದ ವರ್ಷ ಅಮೆರಿಕ ಭಾರತೀಯ ವಿದ್ಯಾರ್ಥಿಗಳಿಗೆ ಸುಮಾರು 1,25,000 ದಾಖಲೆಯ ವೀಸಾಗಳನ್ನು ನೀಡಿದೆ. ದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ 20% ರಷ್ಟು ಹೆಚ್ಚಳವಾಗಿದ್ದು, ಅಮೆರಿಕದಲ್ಲೇ ಅತಿ ದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?

    ಅಮೆರಿಕದ ವಾಷಿಂಗ್ಟನ್, ನ್ಯೂಯಾರ್ಕ್, ಸ್ಯಾನ್ ಫ್ರಾನ್ಸಿಸ್ಕೋ, ಚಿಕಾಗೋ, ಹೂಸ್ಟನ್ ಹಾಗೂ ಅಟ್ಲಾಂಟಾದಲ್ಲಿ ಭಾರತ ತನ್ನ ಒಟ್ಟು 5 ರಾಯಭಾರ ಕಚೇರಿಗಳನ್ನು ಹೊಂದಿದೆ. ಭಾರತದಲ್ಲಿ ಪ್ರಸ್ತುತ ನವದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಹಾಗೂ ಹೈದರಾಬಾದ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿಗಳಿವೆ.

    ನವದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ವಿಶ್ವದ ಅತಿದೊಡ್ಡ ರಾಜತಾಂತ್ರಿಕ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಇಲ್ಲಿಯವರೆಗೆ ಕರ್ನಾಟಕದ ಜನತೆ ಅಮೆರಿಕ ಪ್ರವಾಸ ಕೈಗೊಳ್ಳಲು ವೀಸಾ ಪಡೆಯಲು ಚೆನ್ನೈ ಅಥವಾ ಹೈದರಾಬಾದ್ ಅಲೆಯುವುದು ಅನಿವಾರ್ಯವಾಗಿತ್ತು. ಇದೀಗ ಬೆಂಗಳೂರಿನಲ್ಲೂ ಅಮೆರಿಕದ ರಾಯಭಾರ ಕಚೇರಿ ತೆರೆದರೆ ಪ್ರಯಾಣಿಕರು ಇತರ ರಾಜ್ಯಗಳಿಗೆ ಹೋಗುವ ಅನಿವಾರ್ಯತೆ ಇರುವುದಿಲ್ಲ. ಇದನ್ನೂ ಓದಿ: ವಾಷಿಂಗ್ಟನ್‌ನಲ್ಲಿ ಅದ್ಧೂರಿ ಸ್ವಾಗತ – ಮೋದಿಗಾಗಿ ಖಾದ್ಯ ತಯಾರಿಸಿದ್ದಾರೆ ಜಿಲ್ ಬೈಡೆನ್

  • ಉಕ್ರೇನ್ ಬಿಟ್ಟು ಬನ್ನಿ – ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿದ ರಾಯಭಾರ ಕಚೇರಿ

    ಉಕ್ರೇನ್ ಬಿಟ್ಟು ಬನ್ನಿ – ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿದ ರಾಯಭಾರ ಕಚೇರಿ

    ಕೀವ್: ರಷ್ಯಾ-ಉಕ್ರೇನ್ (Russia-Ukraine) ನಡುವೆ ಮತ್ತೆ ಯುದ್ಧದ (War) ಭೀತಿ ಆರಂಭವಾಗಿದ್ದು, ಉಕ್ರೇನ್‍ನಲ್ಲಿರುವ ಭಾರತೀಯರು (Indians) ಕೂಡಲೇ ಉಕ್ರೇನ್ ಬಿಟ್ಟು ಬನ್ನಿ ಎಂದು ಭಾರತೀಯರಿಗಾಗಿ 5 ಬಾರ್ಡರ್ ಕ್ರಾಸಿಂಗ್‍ನ್ನು (Border-Crossing) ಭಾರತದ ರಾಯಭಾರ ಕಚೇರಿ (Indian Embassy) ಗುರುತಿಸಿದೆ.

    ರಷ್ಯಾ-ಉಕ್ರೇನ್ ಮೇಲೆ ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಿದ್ದು, ಇದೀಗ ಭಾರತ ಭಾರೀ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್‍ನಲ್ಲಿರುವ ತನ್ನ ನಾಗರಿಕರಿಗೆ ಭಾರತ, ತುರ್ತಾಗಿ ಉಕ್ರೇನ್ ಅನ್ನು ತೊರೆಯುವಂತೆ ತಿಳಿಸಿದೆ. ಪ್ರಸ್ತುತ ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು (Students) ಸೇರಿದಂತೆ ಭಾರತೀಯ ನಾಗರಿಕರು ಕೂಡಲೇ ಉಕ್ರೇನ್ ಬಿಟ್ಟು ಬರುವಂತೆ ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಸಹಾಯ ಮಾಡುತ್ತಿದೆ. ಜೊತೆಗೆ ಸಹಾಯವಾಣಿ ಕೂಡ ತೆರೆದಿದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

    ಯಾವೆಲ್ಲ ಬಾರ್ಡರ್?
    ಉಕ್ರೇನ್-ಹಂಗೇರಿ ಗಡಿ:
    ಉಕ್ರೇನ್-ಹಂಗೇರಿ ಗಡಿ ಪ್ರದೇಶದ ಚೆಕ್‍ಪೋಸ್ಟ್‌ಗಳು ಜಕಾರ್ಪತಿಯಾ ಪ್ರದೇಶದಲ್ಲಿವೆ. ಇಲ್ಲಿಂದ ರೈಲಿನಲ್ಲಿ ಚಾಪ್ ಸಿಟಿಗೆ ಪ್ರಯಾಣಿಸುವುದು ಅನುಕೂಲಕರ ಆಯ್ಕೆಯಾಗಿದೆ. ಗಡಿ ದಾಟಲು, ಭಾರತೀಯ ಪ್ರಜೆಗಳು ಮಾನ್ಯವಾದ ಪಾಸ್‌ಪೋರ್ಟ್‌, ಮಾನ್ಯ ಉಕ್ರೇನಿಯನ್ ನಿವಾಸಿ ಪರವಾನಿಗೆ (Posvidka). ವಿದ್ಯಾರ್ಥಿ ಕಾರ್ಡ್ ಅಥವಾ ವಿದ್ಯಾರ್ಥಿ ಪ್ರಮಾಣಪತ್ರ, ವಿಮಾನ ಟಿಕೆಟ್ ಇದ್ದರೆ ಈ ಗಡಿ ಮೂಲಕ ದಾಖಲೆಗಳೊಂದಿಗೆ ಬರಬಹುದಾಗಿದೆ. ಇದನ್ನೂ ಓದಿ: ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಉಕ್ರೇನ್-ಸ್ಲೋವಾಕಿಯಾ ಗಡಿ:
    ಉಕ್ರೇನ್-ಸ್ಲೋವಾಕಿಯಾ ಗಡಿಯಲ್ಲಿ ಚೆಕ್‍ಪಾಯಿಂಟ್‍ಗಳು ಜಕಾರ್ಪತಿಯಾ ಪ್ರದೇಶದಲ್ಲಿದೆ. ಅಲ್ಲಿ ಈಗಾಗಲೇ ಮಾನ್ಯವಾದ ಷೆಂಗೆನ್/ಸ್ಲೋವಾಕ್ ವೀಸಾವನ್ನು ಹೊಂದಿಲ್ಲದಿದ್ದರೆ, ಭಾರತೀಯ ಪ್ರಜೆಗಳು ಗಡಿ ಚೆಕ್ ಪೋಸ್ಟ್‌ನಲ್ಲಿ ವೀಸಾವನ್ನು ಪಡೆಯಬೇಕಾಗುತ್ತದೆ. ಇಲ್ಲಿ ವೀಸಾ ಪಡೆಯಲು ಮತ್ತು ಗಡಿ ದಾಟಲು, ಭಾರತೀಯ ಪ್ರಜೆಗಳು ಮಾನ್ಯವಾದ ಪಾಸ್‌ಪೋರ್ಟ್‌. ಮಾನ್ಯ ಉಕ್ರೇನಿಯನ್ ನಿವಾಸಿ ಪರವಾನಿಗೆ . ವಿದ್ಯಾರ್ಥಿ ಕಾರ್ಡ್ ಅಥವಾ ವಿದ್ಯಾರ್ಥಿ ಪ್ರಮಾಣಪತ್ರ, ವಿಮಾನ ಟಿಕೆಟ್ ದಾಖಲೆ ಇದ್ದರೆ ಸಾಕು.

    ಉಕ್ರೇನ್-ಮಾಲ್ಡೊವಾ ಗಡಿ:
    ಉಕ್ರೇನ್-ಮಾಲ್ಡೊವಾ ಗಡಿ ಮೂಲಕ ಬಂದರೆ ಚೆಕ್‍ಪಾಯಿಂಟ್‍ಗಳು ಚೆರ್ನಿವೆಟ್ಸ್ಕಾ, ವಿನ್ನಿಟ್ಸ್ಕಾ ಮತ್ತು ಒಡೆಸ್ಕಾ ಪ್ರದೇಶದಲ್ಲಿದೆ. ಅಲ್ಲಿಗೆ ಬಂದು ಈಗಾಗಲೇ ಮಾನ್ಯವಾದ ಮೊಲ್ಡೊವನ್ ವೀಸಾವನ್ನು ಹೊಂದಿಲ್ಲದಿದ್ದರೆ, ಭಾರತೀಯ ಪ್ರಜೆಗಳು ಕೈವ್‍ನಲ್ಲಿರುವ ಮೊಲ್ಡೊವಾ ರಾಯಭಾರ ಕಚೇರಿಯಲ್ಲಿ ಮುಂಚಿತವಾಗಿ ಮೊಲ್ಡೊವನ್ ಟ್ರಾನ್ಸಿಟ್ ವೀಸಾವನ್ನು ಪಡೆಯಬೇಕಾಗುತ್ತದೆ. ಗಡಿ ದಾಟಲು ಭಾರತೀಯ ಪ್ರಜೆಗಳು ಭಾರತೀಯ ಪ್ರಜೆಗಳು ಮಾನ್ಯವಾದ ಪಾಸ್‌ಪೋರ್ಟ್‌. ಮಾನ್ಯ ಉಕ್ರೇನಿಯನ್ ನಿವಾಸಿ ಪರವಾನಿಗೆ. ವಿದ್ಯಾರ್ಥಿ ಕಾರ್ಡ್ ಅಥವಾ ವಿದ್ಯಾರ್ಥಿ ಪ್ರಮಾಣಪತ್ರ, ಏರ್ ಟಿಕೆಟ್ ದಾಖಲೆ ಹೊಂದಿದ್ದರೆ ಗಡಿ ದಾಟ ಬಹುದಾಗಿದೆ. ಇದನ್ನೂ ಓದಿ:
    ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಚೀನಾದ ಅಧ್ಯಕ್ಷ ಜಿನ್‌ಪಿಂಗ್ 3ನೇ ಅವಧಿಗೆ ಮರು ಆಯ್ಕೆ

    ಉಕ್ರೇನ್-ಪೋಲೆಂಡ್ ಗಡಿ:
    ಉಕ್ರೇನ್-ಪೋಲೆಂಡ್ ಗಡಿಯಲ್ಲಿ ಚೆಕ್‍ಪಾಯಿಂಟ್‍ಗಳು ಎಲ್ವಿವ್ಸ್ಕಾ, ವೊಲಿನ್ಸ್ಕಾ ಪ್ರದೇಶಗಳಲ್ಲಿದೆ. ಇಲ್ಲಿಗೆ ಬರುವ ಭಾರತೀಯರು ಮಾನ್ಯವಾದ ಷೆಂಗೆನ್, ಪೋಲಿಷ್ ವೀಸಾವನ್ನು ಹೊಂದಿಲ್ಲದಿದ್ದರೆ, ಭಾರತೀಯ ಪ್ರಜೆಗಳು ಪೋಲೆಂಡ್‍ನ ಕಾನ್ಸುಲೇಟ್ ಜನರಲ್‍ನಲ್ಲಿ ಮುಂಚಿತವಾಗಿ ಷೆಂಗೆನ್, ಪೋಲಿಷ್ ವೀಸಾವನ್ನು ಪಡೆಯಬೇಕಾಗುತ್ತದೆ. ಭಾರತೀಯ ಪ್ರಜೆಗಳು ಮಾನ್ಯವಾದ ಪಾಸ್‌ಪೋರ್ಟ್‌. ಮಾನ್ಯ ಉಕ್ರೇನಿಯನ್ ನಿವಾಸಿ ಪರವಾನಿಗೆ. ವಿದ್ಯಾರ್ಥಿ ಕಾರ್ಡ್ ಅಥವಾ ವಿದ್ಯಾರ್ಥಿ ಪ್ರಮಾಣಪತ್ರ, ವಿಮಾನ ಟಿಕೆಟ್ ದಾಖಲೆ ಇದ್ದರೆ ಇಲ್ಲಿ ಗಡಿ ದಾಟಲು ಅವಕಾಶವಿದೆ.

    ಉಕ್ರೇನ್-ರೊಮೇನಿಯಾ ಗಡಿ:
    ಭಾರತೀಯ ರಾಯಭಾರ ಕಚೇರಿ ಹೊರಡಿಸಿದ ಸಲಹೆಯ ಪ್ರಕಾರ, ಚೆಕ್‍ಪೋಸ್ಟ್‌ಗಳು ಜಕಾರ್ಪತಿಯಾ ಮತ್ತು ಚೆರ್ನಿವೆಟ್ಸ್ಕಾನಲ್ಲಿವೆ. ಇಲ್ಲಿಗೆ ಬಂದು ಮಾನ್ಯವಾದ ರೊಮೇನಿಯನ್ ವೀಸಾವನ್ನು ಹೊಂದಿಲ್ಲದಿದ್ದರೆ, ಭಾರತೀಯ ಪ್ರಜೆಗಳು ಕಾನ್ಸುಲೇಟ್ ಜನರಲ್‍ನಲ್ಲಿ ಮುಂಚಿತವಾಗಿ ರೊಮೇನಿಯನ್ ವೀಸಾವನ್ನು ಪಡೆಯಬೇಕು. ಈ ವೀಸಾ ಪಡೆಯಲು ಭಾರತೀಯ ಪ್ರಜೆಗಳು ಮಾನ್ಯವಾದ ಪಾಸ್‌ಪೋರ್ಟ್‌. ಮಾನ್ಯ ಉಕ್ರೇನಿಯನ್ ನಿವಾಸಿ ಪರವಾನಿಗೆ. ವಿದ್ಯಾರ್ಥಿ ಕಾರ್ಡ್ ಅಥವಾ ವಿದ್ಯಾರ್ಥಿ ಪ್ರಮಾಣಪತ್ರ, ವಿಮಾನ ಟಿಕೆಟ್ ದಾಖಲೆ ಇದ್ದರೆ ಗಡಿ ದಾಟಲು ಅವಕಾಶ ನೀಡಲಾಗಿದೆ.

    ಸಹಾಯವಾಣಿ:
    ಭಾರತದ ರಾಯಭಾರ ಕಚೇರಿ, ಕೈವ್: +380933559958, +380635917881, +380678745945
    ಹಂಗೇರಿಯಲ್ಲಿರುವ ಭಾರತದ ರಾಯಭಾರ ಕಚೇರಿ: +361325-7742/43, +36305154192
    ಸ್ಲೋವಾಕಿಯಾದಲ್ಲಿ ಭಾರತದ ರಾಯಭಾರ ಕಚೇರಿ: +421252962916, +421908025212, +421951697560
    ರೊಮೇನಿಯಾದಲ್ಲಿ ಭಾರತದ ರಾಯಭಾರ ಕಚೇರಿ: +40372147432, +40731347727
    ಪೋಲೆಂಡ್‍ನಲ್ಲಿರುವ ಭಾರತದ ರಾಯಭಾರ ಕಚೇರಿ: +48225400000, +48606700105

    Live Tv
    [brid partner=56869869 player=32851 video=960834 autoplay=true]

  • ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧವನ್ನು (Russia Ukraine War) ಇನ್ನಷ್ಟು ತೀವ್ರಗೊಳಿಸಿದ್ದು, ಇದೀಗ ಭಾರತ (India) ಭಾರೀ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್‌ನಲ್ಲಿರುವ ತನ್ನ ನಾಗರಿಕರಿಗೆ ಭಾರತ, ತುರ್ತಾಗಿ ಉಕ್ರೇನ್ ಅನ್ನು ತೊರೆಯುವಂತೆ ಬುಧವಾರ ಕೇಳಿಕೊಂಡಿದೆ.

    ಉಕ್ರೇನ್‌ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಉಕ್ರೇನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಭಾರತ ತನ್ನ ಎಲ್ಲಾ ನಾಗರಿಕರಿಗೆ ಬುಧವಾರ ಸಲಹೆ ನೀಡಿದೆ. ಪ್ರಸ್ತುತ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಲಭ್ಯವಿರುವ ವಿಧಾನಗಳ ಮೂಲಕ ಅಲ್ಲಿಂದ ಆದಷ್ಟು ಬೇಗ ಹೊರಡುವಂತೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ (Embassy) ತನ್ನ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.

    ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುಧವಾರ ಉಕ್ರೇನ್‌ನ 4 ಪ್ರದೇಶಗಳಲ್ಲಿ ಸಮರ ಕಾನೂನನ್ನು ಜಾರಿಗೊಳಿಸಿದ್ದಾರೆ. ಇದರ ಹಿನ್ನೆಲೆ ಯುದ್ಧ ತೀವ್ರಗೊಳ್ಳುವ ಭೀತಿ ಉಂಟಾಗಿದ್ದು, ಭಾರತ ತನ್ನ ನಾಗರಿಕರಿಗೆ ಉಕ್ರೇನ್ ತೊರೆಯುವಂತೆ ಸಲಹೆ ನೀಡಿದೆ. ಇದನ್ನೂ ಓದಿ: ದೀಪಾವಳಿಯಲ್ಲಿ ನಿಷೇಧಿತ ಪಟಾಕಿ ಸಿಡಿಸಿದ್ರೆ 6 ತಿಂಗಳು ಜೈಲು ಶಿಕ್ಷೆ

    ಇದೇ ವೇಳೆ ಆಕ್ರಮಿತ ನಗರ ಖರ್ಸನ್‌ನ ಕೆಲವು ನಿವಾಸಿಗಳು ದೋಣಿಗಳ ಮೂಲಕ ಸ್ಥಳವನ್ನು ತೊರೆದಿದ್ದಾರೆ. ಈ ಪ್ರದೇಶ ಯುದ್ಧ ವಲಯವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ನಾಗರಿಕರನ್ನು ಅಲ್ಲಿಂದ ತೆರವುಗೊಳಿಸಲಾಗುತ್ತಿದೆ. ಖರ್ಸನ್‌ನಿಂದ ಜನರು ಪಲಾಯನವಾಗುತ್ತಿರುವ ಚಿತ್ರಗಳನ್ನು ರಷ್ಯಾ ತನ್ನ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದೆ. ಇದನ್ನೂ ಓದಿ: ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    Live Tv
    [brid partner=56869869 player=32851 video=960834 autoplay=true]

  • ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ- ಉಕ್ರೇನ್‌ನಲ್ಲಿನ ನಾಗರಿಕರಿಗೆ ಭಾರತ ಸಲಹೆ

    ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ- ಉಕ್ರೇನ್‌ನಲ್ಲಿನ ನಾಗರಿಕರಿಗೆ ಭಾರತ ಸಲಹೆ

    ನವದೆಹಲಿ: ಉಕ್ರೇನ್‌ನಲ್ಲಿ (Ukraine) ಹೆಚ್ಚುತ್ತಿರುವ ಘರ್ಷಣೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ (India) ಸೋಮವಾರ ಉಕ್ರೇನ್‌ಗೆ ತೆರಳುವ ಹಾಗೂ ಉಕ್ರೇನ್‌ನಲ್ಲಿ ಇರುವ ತನ್ನ ನಾಗರಿಕರಿಗೆ (Citizens) ಅನಿವಾರ್ಯವಲ್ಲದ ಎಲ್ಲಾ ರೀತಿಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದೆ.

    ಕೀವ್ (Kyiv) ಸೇರಿದಂತೆ ಉಕ್ರೇನ್‌ನ ಹಲವು ಪ್ರಮುಖ ನಗರಗಳಲ್ಲಿ ರಷ್ಯಾ (Russia) ಇಂದು ಭೀಕರವಾಗಿ ದಾಳಿ ನಡೆಸಿದೆ. ಇಂದು ಉಕ್ರೇನ್‌ನಾದ್ಯಂತ ನಡೆದ ದಾಳಿಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಭಾರತ ತನ್ನ ನಾಗರಿಕರಿಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಕೇಳಿಕೊಂಡಿದೆ.

    ಉಕ್ರೇನ್‌ನಲ್ಲಿ ಪ್ರಸ್ತುತ ಉಲ್ಬಣಗೊಳ್ಳುತ್ತಿರುವ ಹಗೆತನದ ದೃಷ್ಟಿಯಿಂದ, ಭಾರತೀಯ ಪ್ರಜೆಗಳು ಉಕ್ರೇನ್‌ಗೆ ಹಾಗೂ ಯುದ್ಧಪೀಡಿತ ದೇಶದೊಳಗೆ ಅನಿವಾರ್ಯವಲ್ಲದ ಎಲ್ಲಾ ರೀತಿಯ ಪ್ರಯಾಣವನ್ನು ತಪ್ಪಿಸಿ. ಉಕ್ರೇನ್ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ನೀಡಿರುವ ಸುರಕ್ಷತೆ ಮತ್ತು ಭದ್ರತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದು ಕೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ಇದನ್ನೂ ಓದಿ:  ಉಕ್ರೇನ್‌ನಲ್ಲಿ ಸಂಘರ್ಷ ಉಲ್ಬಣ- ಕಳವಳ ವ್ಯಕ್ತಪಡಿಸಿದ ಭಾರತ

    ಭಾರತೀಯ ಪ್ರಜೆಗಳು ಉಕ್ರೇನ್‌ನಲ್ಲಿ ತಮ್ಮ ಉಪಸ್ಥಿತಿಯ ಬಗ್ಗೆ ರಾಯಭಾರ ಕಚೇರಿಗೆ ತಿಳಿಸಲು ವಿನಂತಿಸಲಾಗಿದೆ. ಇದರಿಂದ ಅಗತ್ಯವಿರುವಲ್ಲಿ ರಾಯಭಾರ ಕಚೇರಿ ಅವರನ್ನು ತಲುಪಲು ಸಹಾಯವಾಗಲಿದೆ.

    ಉಕ್ರೇನ್‌ನಲ್ಲಿ ಹೆಚ್ಚುತ್ತಿರುವ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಹಗೆತನವನ್ನು ಹೆಚ್ಚಿಸುವುದು ಯಾರ ಹಿತಾಸಕ್ತಿಯೂ ಅಲ್ಲ. ಪರಿಸ್ಥಿತಿಯನ್ನು ಸರಿಪಡಿಸುವ ಗುರಿ ಹೊಂದಿರುವ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇಡಿಗೆ ಸೇಡು – ಇರಾನ್‌ ಡ್ರೋನ್ ಬಳಸಿ ರಷ್ಯಾ, ಉಕ್ರೇನ್ ಮೇಲೆ ದಾಳಿ

    Live Tv
    [brid partner=56869869 player=32851 video=960834 autoplay=true]

  • ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು

    ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ವರದಿಗಳ ಪ್ರಕಾರ, ಜನರು ವೀಸಾಕ್ಕಾಗಿ ರಾಯಭಾರ ಕಚೇರಿಯ ಹೊರಗಡೆ ಗೇಟ್ ಬಳಿ ನಿಂತಿದ್ದಾಗ ಸ್ಫೋಟ ಸಂಭವಿಸಿದೆ. ಈಗಾಗಲೇ 20 ಜನರು ಸಾವನ್ನಪ್ಪಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಆತ್ಮಹತ್ಯಾ ಬಾಂಬರ್‌ನಿಂದಾಗಿ ಸ್ಫೋಟ ಸಂಭವಿಸಿದೆ. ದಾಳಿಗೂ ಮೊದಲೇ ಆತ್ಮಹತ್ಯಾ ಬಾಂಬರ್‌ನನ್ನು ತಾಲಿಬಾನ್ ಗಾರ್ಡ್‌ಗಳು ಗುರುತಿಸಿದ್ದರು. ಅವರು ಗುಂಡು ಹಾರಿಸುತ್ತಿದ್ದಂತೆಯೇ ಆತ್ಮಹತ್ಯಾ ಬಾಂಬರ್ ತನ್ನ ಬಳಿಯಿದ್ದ ಸ್ಫೋಟಕ ಸಾಧನವನ್ನು ಸಕ್ರಿಯಗೊಳಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ

    ಕೇವಲ 2 ದಿನಗಳ ಹಿಂದೆಯಷ್ಟೇ ವಾಯುವ್ಯ ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಸ್ಫೋಟ ಸಂಭವಿಸಿ 20 ಜನರು ಸಾವನ್ನಪ್ಪಿದ್ದರು. ಹೆರಾತ್ ನಗರದ ಗುಜರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಬಾಂಬ್ ದಾಳಿ ನಡೆದಿದ್ದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಮಹಿಳೆಗೆ ಮುಂಬೈ ಕ್ಲಬ್‌ನಲ್ಲಿ ಕಿರುಕುಳ

    ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಮಹಿಳೆಗೆ ಮುಂಬೈ ಕ್ಲಬ್‌ನಲ್ಲಿ ಕಿರುಕುಳ

    ಮುಂಬೈ: ಮುಂಬೈನ ಸಬರ್ಬನ್ ಬಾಂದ್ರಾ ಕ್ಲಬ್‌ನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.

    ಬ್ರಿಟನ್ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಂಗಳವಾರ ರಾತ್ರಿ ತನ್ನ ಪತಿ ಹಾಗೂ ಸ್ನೇಹಿತರೊಂದಿಗೆ ಕ್ಲಬ್‌ಗೆ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಶೌಚಾಲಯಕ್ಕೆ ತೆರಳಿದ್ದಾಗ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದು, ಈ ಬಗ್ಗೆ ತಕ್ಷಣ ತನ್ನ ಪತಿ ಹಾಗೂ ಸ್ನೇಹಿತರಿಗೆ ತಿಳಿಸಿದ್ದಾರೆ. ಬಳಿಕ ಆರೋಪಿಯನ್ನು ಆಕೆಯ ಪತಿ ಹಾಗೂ ಸ್ನೇಹಿತರು ಹಿಡಿದ್ದಾರೆ. ಇದನ್ನೂ ಓದಿ: ಭಾವಿಪತಿಯನ್ನೇ ಅರೆಸ್ಟ್ ಮಾಡಿದ ಇನ್ಸ್‌ಪೆಕ್ಟರ್

    ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದಾರೆ. ಮಹಿಳೆಯ ಪತಿ ಹಾಗೂ ಆಕೆಯ ಸ್ನೇಹಿತರು ಆರೋಪಿಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಆಸ್ತಿಯಲ್ಲಿ ಪಾಲು ಕೊಡದಿದ್ದಕ್ಕೆ ಮೂವರು ಮಕ್ಕಳೊಂದಿಗೆ ಬೆಂಕಿಹಚ್ಚಿಕೊಂಡ ತಾಯಿ

    ಆರೋಪಿಯನ್ನು ಘನಶ್ಯಾಮ್ ಲಾಲ್‌ಚಂದ್ ಯಾದವ್ ಎಂದು ಗುರುತಿಸಲಾಗಿದ್ದು, ಆತ ಎಂಬಿಎ ಪದವೀಧರ ಎಂದು ತಿಳಿದುಬಂದಿದೆ. ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 354, 354ಎ ಹಾಗೂ 509 ಆರೋಪಗಳ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ

    ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ

    ನವದೆಹಲಿ: ಉಕ್ರೇನ್‌ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.

    ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾ ಭೀಕರವಾಗಿ ದಾಳಿ ನಡೆಸುತ್ತಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ. ಇದನ್ನೂ ಓದಿ: ಉಕ್ರೇನ್‍ನ ಮತ್ತೊಬ್ಬ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ

    ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್‌ನ ಭದ್ರತೆ ಕ್ಷೀಣಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್‌ಗೆ ಸ್ಥಳಾಂತರಿಸಲಾಗುವುದು. ಉಕ್ರೇನ್‌ನ ಪರಿಸ್ಥಿತಿ ಸಮತೋಲನಕ್ಕೆ ಬಂದಂತೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – ಜೆರುಸಲೇಮ್‌ನಲ್ಲಿ ಸಂಧಾನಕ್ಕೆ ಬರಲು ಪುಟಿನ್‌ಗೆ ಝೆಲೆನ್ಸ್ಕಿ ಕರೆ

    ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನ 1,300 ಸೈನಿಕರು ಸಾವನ್ನಪ್ಪಿದ್ದು, ರಷ್ಯಾ ನಾಗರಿಕ ಮೇಲೂ ದಾಳಿ ಮಾಡುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ. ಇದೀಗ ರಷ್ಯಾ ಉಕ್ರೇನ್‌ನ ಇಬ್ಬರು ಮೇಯರ್‌ಗಳನ್ನು ಅಪಹರಿಸಿರುವುದಾಗಿ ವರದಿಯಾಗಿದೆ.

  • ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ

    ಕೀವ್: ಉಕ್ರೇನ್‍ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ತಕ್ಷಣವೇ ಖಾರ್ಕಿವ್ ತೊರೆಯುವಂತೆ ತುರ್ತು ಸಲಹೆ ನೀಡಿದೆ. ಇಂದು ಸಂಜೆ 6 ಗಂಟೆ(ಭಾರತೀಯ ಕಾಲಮಾನ ರಾತ್ರಿ 9:30) ಒಳಗಾಗಿ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾ ವಸಾಹತುಗಳನ್ನು ತಲುಪುವಂತೆ ರಾಯಭಾರ ಕಚೇರಿ ತಿಳಿಸಿದೆ.

    ಖಾರ್ಕಿವ್‍ನಲ್ಲಿರುವ ಭಾರತೀಯರು ತಮ್ಮ ಸುರಕ್ಷತೆ ಹಾಗೂ ಭದ್ರತೆಗೆ ಈ ಕೂಡಲೇ ಖಾರ್ಕಿವ್ ಅನ್ನು ತೊರೆಯಬೇಕು. ಆದಷ್ಟು ಬೇಗ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾಗೆ ತಲುಪಿ ಎಂದು ಭಾರತೀಯ ರಾಯಭಾರಿ ಕಚೇರಿ ಟ್ವಿಟ್ಟರ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು

    ಈ ಹಿಂದೆ ಪೋಲೆಂಡ್‍ನಲ್ಲಿರುವ ರಾಯಭಾರಿ ಕಚೇರಿ ಉಕ್ರೇನ್‍ನಲ್ಲಿರುವ ಭಾರತೀಯರಿಗೆ ತುರ್ತು ಸಲಹೆ ನೀಡಿತ್ತು. ಪೋಲೆಂಡ್‍ಗೆ ತ್ವರಿತವಾಗಿ ಪ್ರವೇಶಿಸಲು ಬುಡೋಮಿಯಾರ್ಜ್ ಗಡಿಗೆ ತಕ್ಷಣ ಬರುವಂತೆ ಸಲಹೆ ನೀಡಿತ್ತು. ಇದನ್ನೂ ಓದಿ: ರಷ್ಯಾ- ಉಕ್ರೇನ್‌ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

    ಈಗಾಗಲೇ ರಷ್ಯಾ ಉಕ್ರೇನ್‍ನ ಮುಖ್ಯ ನಗರಗಳಾದ ಕೀವ್ ಹಾಗೂ ಖಾರ್ಕಿವ್ ನಗರಗಳನ್ನು ಮುತ್ತಿಗೆ ಹಾಕಿ ನಿರಂತರ ದಾಳಿ ನಡೆಸುತ್ತಿದೆ. ರಷ್ಯಾದ ಅಟ್ಟಹಾಸಕ್ಕೆ ಉಕ್ರೇನ್‍ನ 6 ಸಾವಿರ ಸೈನಿಕರು ಹಾಗೂ ಸ್ಥಳೀಯರು ಪ್ರಾಣ ಬಿಟ್ಟಿದ್ದು, ಅದರಲ್ಲಿ ಒಬ್ಬ ಕರ್ನಾಟಕದ ವಿದ್ಯಾರ್ಥಿಯೂ ಕೊನೆಯುಸಿರೆಳೆದಿದ್ದಾರೆ.

  • ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಕಾಬೂಲ್: ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ಪಡೆದಿರುವ ತಾಲಿಬಾನ್ ಭಯೋತ್ಪಾದಕರ ಅಟ್ಟಹಾಸ ನಿಂತಿಲ್ಲ. ಈಗ ಭಾರತೀಯ ರಾಯಭಾರ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಹುಡುಕಾಡಿದ್ದಾರೆ ಎಂದು ವರದಿಯಾಗಿದೆ.

    ಹೇರತ್ ಮತ್ತು ಕಂದಹಾರ್ ನಲ್ಲಿರುವ  ಭಾರತದ ರಾಯಭಾರ ಕಚೇರಿಗೆ ದಾಳಿ ಮಾಡಿರುವ ತಾಲಿಬಾನ್ ಉಗ್ರರು ದಾಖಲೆಗಳಿಗಾಗಿ ಹುಡುಕಾಡಿದ್ದಾರೆ ಮತ್ತು ರಾಯಭಾರ ಕಚೇರಿಯಲ್ಲಿದ್ದ ವಾಹನಗಳನ್ನು ಕೊಂಡೊಯ್ದಿದ್ದಾರೆ. ಕಾಬೂಲ್ ಮತ್ತು ಜಲಾಲಬಾದ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿದ್ಯಾ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ.

    ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಮತ್ತು ತಾಲಿಬಾನ್‍ನ ಉಪನಾಯಕ ಸಿರಾಜುದ್ದೀನ್ ಹಕ್ಕಾನಿಯ ಸಹೋದರ ಅನಸ್ ಹಕ್ಕಾನಿ ನೇತೃತ್ವದ ಹಕ್ಕಾನಿ ನೆಟ್‍ವರ್ಕ್‍ನ ಸುಮಾರು 6 ಸಾವಿರ ಕಾರ್ಯಕರ್ತರು ರಾಜಧಾನಿಯಾದ ಕಾಬೂಲ್ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆ ಎನ್‍ಡಿಎಸ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದವರಿಗೆ ಮನೆ ಮನೆಯಲ್ಲೂ ತಾಲಿಬಾನ್ ಬಂದೂಕುಧಾರಿಗಳು ಹುಡುಕಾಡುತ್ತಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ಇನ್ನೂ 450 ಭಾರತೀಯರು ಸಿಲುಕಿಕೊಂಡಿದ್ದು ಅವರನ್ನು ಭಾರತಕ್ಕೆ ವಾಪಸ್ ಕರೆತರುವುದೇ ಈಗ ಸರ್ಕಾರಕ್ಕೆ ಸವಾಲಾಗಿದೆ. ಅಮೆರಿಕ ಮತ್ತು ಇತರೆ ರಾಯಭಾರ ಕಚೇರಿಗಳ ಮೂಲಕ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ವಿದೇಶಾಂಗ ಸಚಿವಾಲಯ ಮಾಡುತ್ತಿದೆ. ಇದನ್ನೂ ಓದಿ: ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ 

    ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡು ನಾಲ್ಕು ದಿನವಾದ್ರೂ ಇನ್ನೂ ಅಲ್ಲಿ ಸರ್ಕಾರ ರಚನೆ ಆಗಿಲ್ಲ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಿಮಾನ ನಿಲ್ದಾಣಕ್ಕೆ ಕರೆತರುವುದೇ ಹರಸಾಹಸವಾಗಿದೆ. ಪ್ರತಿ ಚೆಕ್‍ಪೋಸ್ಟ್‍ಗಳಲ್ಲೂ ಬಂದೂಕುಧಾರಿ ತಾಲಿಬಾನಿಗಳು ತಪಾಸಣೆ ಮಾಡ್ತಿರುವ ಕಾರಣ ತಾಲಿಬಾನಿಗಳ ಅಧಿಕೃತ ಒಪ್ಪಿಗೆ ಸಿಗದ ಹೊರತು ಜೀವಭಯದಿಂದಾಗಿ ಕಾಬೂಲ್‍ನಲ್ಲಿ ಸಿಲುಕೊಂಡಿರುವ ಕೆಲವು ಭಾರತೀಯರು ಮನೆಬಿಟ್ಟು ಹೊರಬರಲು ಸಿದ್ಧರಿಲ್ಲ.

    ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತದ ರಾಯಭಾರ ಕಚೇರಿಗೆ 10 ಕಿಲೋ ಮೀಟರ್ ದೂರವಿದೆ. ವಿಮಾನ ನಿಲ್ದಾಣಕ್ಕೆ ಅಮೆರಿಕ ಸೈನಿಕರ ಪಹರೆ ಇದ್ದರೂ ಹೊರಗಿನ ಭದ್ರತೆ ಅಮೆರಿಕ ಸೈನಿಕರ ಕೈಯಲ್ಲಿ ಇಲ್ಲ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರೊಂದಿಗೆ ಸಂಪರ್ಕ ಸಾಧಿಸುವುದು ಕೂಡಾ ಸವಾಲಾಗಿದೆ ಎಂದು ವರದಿ ಆಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

    ನಾಲ್ಕು ದಿನಗಳ ಹಿಂದೆ ಭಾರತದ ರಾಜತಾಂತ್ರಿಕ ಸಿಬ್ಬಂದಿ, ಸೈನಿಕರನ್ನು ಕರೆತರುವ ವೇಳೆ ಚೆಕ್‍ಪೋಸ್ಟ್ ನಲ್ಲಿ ತಾಲಿಬಾನಿಗಳು ತಡೆಹಾಕಿದ್ದರು. ಆ ಬಳಿಕ ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಕರೆತರಲು ಭಾರತಕ್ಕೆ 1 ದಿನ ಹಿಡಿದಿತ್ತು.

  • ಮೋದಿ ಫೋಟೋ ಹಾಕಿ “ಯೇ ದೋಸ್ತಿ ಹಮ್ ನಹೀ ತೋಡೆಂಗೆ” ಎಂದ ಇಸ್ರೇಲ್

    ಮೋದಿ ಫೋಟೋ ಹಾಕಿ “ಯೇ ದೋಸ್ತಿ ಹಮ್ ನಹೀ ತೋಡೆಂಗೆ” ಎಂದ ಇಸ್ರೇಲ್

    ನವದೆಹಲಿ: ಅಂತಾರಾಷ್ಟ್ರೀಯ ಸ್ನೇಹ ದಿನವಾದ ಇದು ಇಸ್ರೇಲ್ ಭಾರತಕ್ಕೆ ವಿನೂತನ ರೀತಿಯಲ್ಲಿ ವಿಶ್ ಮಾಡಿದ್ದು, ಪ್ರಧಾನಿ ಮೋದಿ ಮತ್ತು ಅ ದೇಶದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಫೋಟೋ ಇರುವ ವಿಡಿಯೋ ಟ್ವೀಟ್ ಮಾಡಿದೆ.

    ಮೋದಿ ಮತ್ತು ಬೆಂಜಮಿನ್ ನೆತನ್ಯಾಹು ಅವರು ಪರಸ್ಪರ ಕೈಕುಲುಕುತ್ತಿರುವ ಫೋಟೋಗಳನ್ನು ಜೋಡಿಸಿ ವಿಡಿಯೋ ಮಾಡಿ, ಅ ವಿಡಿಯೋಗೆ ಬಾಲಿವುಡ್‍ನ ಪ್ರಸಿದ್ಧ ಗೀತೆ ಅಮಿತಾಭ್ ಬಚ್ಚನ್ ಅಭಿನಯದ ಶೋಲೆ ಚಿತ್ರದ,”ಹೇ ದೋಸ್ತಿ ಹಮ್ ನಹೀ ತೋಡೆಂಗೆ” ಹಾಡನ್ನು ಹಿನ್ನೆಲೆಗೆ ಬಳಸಿಕೊಂಡಿದೆ.

    ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಇಸ್ರೇಲ್ ರಾಯಭಾರ ಕಚೇರಿ ಹ್ಯಾಪಿ ಫ್ರೆಂಡ್‍ಶಿಪ್ ಡೇ-2019 ಇಂಡಿಯಾ. ನಮ್ಮದು ಸದಾ ತುಂಬ ಬಲಿಷ್ಠವಾದ ಸ್ನೇಹ ಮತ್ತು ನಮ್ಮ ಸ್ನೇಹ ತುಂಬ ಎತ್ತರಕ್ಕೆ ಬೆಳೆಯಲಿ ಎಂದು ಬರೆದು ಟ್ವೀಟ್ ಮಾಡಿದೆ. ಭಾರತ ಮತ್ತು ಇಸ್ರೇಲ್ ಇತ್ತೀಚಿನ ವರ್ಷಗಳಲ್ಲಿ ಆರ್ಥಿಕತೆ ಮತ್ತು ಮಿಲಿಟರಿ ಹಾಗೂ ಕಾರ್ಯತಂತ್ರದಂತಹ ವಿಚಾರಗಳಲ್ಲಿ ತುಂಬ ಒಳ್ಳೆಯ ಸಂಬಂಧ ಹೊಂದಿದೆ.

    ಇದಕ್ಕೆ ಇಸ್ರೇಲ್ ಭಾಷೆಯಲ್ಲೇ ರೀಟ್ವೀಟ್ ಮಾಡಿರುವ ಮೋದಿ ಅವರು ನಮಗೆ ವಿಶ್ ಮಾಡಿದ ಇಸ್ರೇಲ್ ದೇಶದ ನಾಗರಿಕರಿಗೂ ಹಾಗೂ ನನ್ನ ಉತ್ತಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರಿಗೆ ಧನ್ಯವಾದಗಳು. ಭಾರತ ಮತ್ತು ಇಸ್ರೇಲ್ ತಮ್ಮ ಸ್ನೇಹವನ್ನು ಸಾಬೀತುಪಡಿಸಿವೆ. ನಮ್ಮ ಸಂಬಂಧ ಬಲವಾದ ಮತ್ತು ಶಾಶ್ವತವಾಗಿದೆ. ನಮ್ಮ ದೇಶಗಳ ನಡುವಿನ ಸ್ನೇಹವು ಭವಿಷ್ಯದಲ್ಲಿ ಇನ್ನಷ್ಟು ಬೆಳೆಯುತ್ತದೆ ಮತ್ತು ಅರಳುತ್ತದೆ ಎಂದು ಹಾರೈಸುತ್ತೇನೆ ಎಂದು ಬರೆದಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‍ನ ಚುನಾವಣಾ ಜಾಹೀರಾತುಗಳ ಬ್ಯಾನರ್‍ನಲ್ಲಿ ಮೋದಿ ಮತ್ತು ಬೆಂಜಮಿನ್ ನೆತನ್ಯಾಹು ಅವರ ಫೋಟೋಗಳು ಕೂಡ ಕಂಡುಬಂದಿತ್ತು. ನನ್ನ ಅವಧಿಯಲ್ಲಿ ವಿದೇಶಗಳ ಜೊತೆ ಇಸ್ರೇಲ್ ಸಂಬಂಧ ಹೇಗೆ ಬದಲಾಗಿದೆ ಎನ್ನುವುದನ್ನು ಅಲ್ಲಿನ ಜನತೆಗೆ ತಿಳಿಸಲು ಮೋದಿ ಅವರ ಕಟೌಟ್ ಹಾಕಲಾಗಿತ್ತು.

    2019ರ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಮೋದಿ ಭಾರತದ ಪ್ರಧಾನಿಯದಾಗ ನೆತನ್ಯಾಹು ಅವರು ವಿಶ್ವ ನಾಯಕನಾಗಿ ಮೊದಲು ಮೋದಿ ಅವರಿಗೆ ಅಭಿನಂದನೆ ಹೇಳಿದ್ದರು. ಸತತ ಐದು ಬಾರಿ ಇಸ್ರೇಲಿನ ಪ್ರಧಾನ ಮಂತ್ರಿಯಾಗಿರುವ ಬೆಂಜಮಿನ್ ನೆತನ್ಯಾಹು ಅವರು ಮತ್ತು ಮೋದಿ ಅವರು ಆತ್ಮೀಯ ಗೆಳೆಯರಾಗಿದ್ದಾರೆ.