Tag: ರಾಷ್ಟ್ರಪತಿ ಅಭ್ಯರ್ಥಿ

  • ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ಬೆಂಗಳೂರು: ದೇಶಕ್ಕೆ ಮಾತನಾಡುವ ರಾಷ್ಟ್ರಪತಿ ಬೇಕು. ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡುತ್ತೇನೆ ಎಂದು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್‌ ಸಿನ್ಹಾ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಮೌನಿಯಾಗಿರುವ ಅಥವಾ ರಬ್ಬರ್‌ ಸ್ಟ್ಯಾಂಪ್‌ ರಾಷ್ಟ್ರಪತಿ ಅಗತ್ಯವಿಲ್ಲ. ಮಾತನಾಡುವ ರಾಷ್ಟ್ರಪತಿ ಬೇಕು ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ: ಜಿ. ಪರಮೇಶ್ವರ್

    ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಕೆಲ ಅಭಿಪ್ರಾಯ ವ್ಯಕ್ತಪಡಿಸಿದೆ. ನೂಪುರ್ ಶರ್ಮಾ ಬಗ್ಗೆ ಸುಪ್ರೀಂ ಕೋರ್ಟ್ ಕೆಲವು ಅಭಿಪ್ರಾಯ ಹೇಳಿದೆ. ನ್ಯಾಯಾಂಗವು ಸಂವಿಧಾನಕ್ಕೆ ಉತ್ತರದಾಯಿ ಆಗಿರಬೇಕು ಅಂತಾ ಕೋರ್ಟ್ ಹೇಳಿದೆ. ನ್ಯಾಯಾಲಯದ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯ ಬಗ್ಗೆ ಟೀಕೆ-ಟಿಪ್ಪಣಿ ಮಾಡಲಾಗುತ್ತಿದೆ. ಕೆಟ್ಟದಾಗಿ ಟೀಕೆ ಮಾಡಲಾಗುತ್ತಿದೆ. ನ್ಯಾಯಾಂಗದ ಮೇಲಿನ ಇಂತಹ ಟೀಕೆ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸುಪ್ರೀಂ ಕೋರ್ಟ್ ತಮಗೆ ಅನುಕೂಲಕರ ತೀರ್ಪು ಕೊಟ್ಟರೆ ಸಂಭ್ರಮ ಪಡುತ್ತಾರೆ. ಆದರೆ ತಮಗೆ ಬೇಡವಾದ ತೀರ್ಪು, ಅಭಿಮತ ಬಂದರೆ ತೆಗಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

    ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ, ಸಿಬಿಐ, ಐಟಿ ದುರ್ಬಳಕೆ‌ ಆಗುತ್ತಿವೆ. ವಿಪಕ್ಷಗಳ ನಾಯಕರು ಮಾತಾಡುವ ಪರಿಸ್ಥಿತಿ ಇಲ್ಲ. ಯಾರಾದರೂ ಏನಾದರೂ ಮಾತಾಡಿದರೆ ತನಿಖಾ ಸಂಸ್ಥೆಗಳಿಂದ ನೋಟಿಸ್ ಬರುತ್ತೆ.‌ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಅರುಣಾಚಲ ಪ್ರದೇಶದಲ್ಲಿ ಏನೇನಾಗಿದೆ ಅಂತಾ ಎಲ್ಲರಿಗೂ ಗೊತ್ತಿದೆ. ಹಾಲಿ ಸರ್ಕಾರಗಳನ್ನು ಬೀಳಿಸುವ ಕೆಲಸ ಪ್ರಜಾಪ್ರಭುತ್ವ ವಿರೋಧಿ. ಬಿಜೆಪಿಯು ರಾಜ್ಯಗಳಲ್ಲಿ ಬೇರೆ ಸರ್ಕಾರಗಳನ್ನು ಉರುಳಿಸುವ ಕೆಲಸ ಮಾಡುತ್ತಿರುವುದು ಸಮ್ಮತವಲ್ಲ ಎಂದು ಹೇಳಿದ್ದಾರೆ.

    Live Tv

  • ರಾಷ್ಟ್ರಪತಿ ಅಭ್ಯರ್ಥಿಯಾಗಿ ಅಂಬೇಡ್ಕರ್ ಮೊಮ್ಮಗ – ಬಿಜೆಪಿಗೆ ಇಕ್ಕಟ್ಟು ತರುತ್ತಾ ಇಂದಿನ ವಿಪಕ್ಷಗಳ ಸಭೆ

    ರಾಷ್ಟ್ರಪತಿ ಅಭ್ಯರ್ಥಿಯಾಗಿ ಅಂಬೇಡ್ಕರ್ ಮೊಮ್ಮಗ – ಬಿಜೆಪಿಗೆ ಇಕ್ಕಟ್ಟು ತರುತ್ತಾ ಇಂದಿನ ವಿಪಕ್ಷಗಳ ಸಭೆ

    ಬೆಂಗಳೂರು: ಎನ್‍ಡಿಎ ಮೈತ್ರಿಕೂಟ ದಲಿತ ನಾಯಕ ರಾಮನಾಥ್ ಕೋವಿಂದ್ ಅವರನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಬಹುಮತ ಸಂಪಾದಿಸುವತ್ತ ಚಿತ್ತ ಹರಿಸಿದೆ. ಇತ್ತ ಕೋವಿಂದ್ ಆಯ್ಕೆಯನ್ನ ಒಪ್ಪದ ವಿಪಕ್ಷಗಳು ಮಾತ್ರ ಪ್ರತಿಸ್ಪರ್ಧಿಯನ್ನ ಮಟ್ಟ ಹಾಕುವಲ್ಲಿ ತಲೆಕೆಡೆಸಿಕೊಂಡಿವೆ.

    ಇದೀಗ ದಲಿತ ಅಭ್ಯರ್ಥಿಯನ್ನ ಎದುರಿಸಲು ಮತ್ತೋರ್ವ ಬಲಿಷ್ಠ ದಲಿತ ನಾಯಕನತ್ತ ವಿಪಕ್ಷಗಳು ಚಿತ್ತ ಹರಿಸಿವೆ. ಹೀಗಾಗಿ ಸಿಪಿಎಂ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸೂಕ್ತ ಅಭ್ಯರ್ಥಿ ಎಂದು ಹೇಳಿದೆ. ಕಾಂಗ್ರೆಸ್ ಪಕ್ಷದಿಂದ ದಲಿತ ನಾಯಕರಾದ ಸುಶೀಲ್ ಕುಮಾರ್ ಶಿಂಧೆ ಹಾಗೂ ಮೀರಾ ಕುಮಾರ್ ಹೆಸರುಗಳು ಕೇಳಿಬರುತ್ತಿವೆ.

    ಒಟ್ನಲ್ಲಿ ರಾಷ್ಟ್ರಪತಿ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ವಿಪಕ್ಷಗಳು ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಯನ್ನ ಅಂತಿಮಗೊಳಿಸಲಿವೆ. ಇಂದು ಸಂಜೆ ಸೋನಿಯಾ ನೇತೃತ್ವದಲ್ಲಿ 18 ಪಕ್ಷಗಳು ಮಹತ್ವದ ಸಭೆ ನಡೆಸಲಿವೆ.

    ಈ ಮಧ್ಯೆ ವಿಪಕ್ಷಗಳ ಪ್ರಮುಖ ಅಸ್ತ್ರವಾಗಿದ್ದ ಜೆಡಿಯು ಪಕ್ಷ ಎನ್‍ಡಿಎಗೆ ಬೆಂಬಲ ಸೂಚಿಸಿದೆ.