ನವದೆಹಲಿ: ಕರ್ನಾಟಕ 224 ಮತಗಳ ಪೈಕಿ ನಾಲ್ವರು ಶಾಸಕರ ಮತಗಳು ತಿರಸ್ಕೃತವಾಗಿದೆ. ಕಾಂಗ್ರೆಸ್ ಶಾಸಕರ ಎಲ್ಲಾ ಮತಗಳು ಅರ್ಹವಾಗಿವೆ.
ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಜೊತೆ ಜೆಡಿಸ್ ಬೆಂಬಲ ನೀಡಿದ್ದರಿಂದ ಒಟ್ಟು 154 ಮತಗಳು ಬೀಳಬೇಕಿತ್ತು. ಆದರೆ 150 ಮತಗಳು ಬಿದ್ದಿದ್ದು 4 ಮತಗಳು ತಿರಸ್ಕೃತಗೊಂಡಿದೆ. ಕಾಂಗ್ರೆಸ್‌ನ 70 ಶಾಸಕರ ಮತಗಳು ಯಶವಂತ ಸಿನ್ಹಾ ಅವರಿಗೆ ಬಿದ್ದಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷಗಳು ವಿಪ್ ಜಾರಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿ, ಜೆಡಿಎಸ್ ಶಾಸಕರ ಪೈಕಿ ಯಾರು ಈ ತಪ್ಪು ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ.
ತಾಲಿಮು ನಡೆಸಿದ್ದ ಬಿಜೆಪಿ:
ಈ ಬಾರಿ ರಾಷ್ಟ್ರಪತಿ ಮತದಾನಕ್ಕೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿತ್ತು. ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗಿತ್ತು.
ಈ ಮೊದಲು ಮತದಾನ ಪ್ರಕ್ರಿಯೆಯಲ್ಲಿ ಇಂದನ ಸಚಿವ ಸುನೀಲ್ ಕುಮಾರ್ ಶಾಸಕರಾದ ಸಿ ಟಿ ರವಿ, ಸತೀಶ್ ರೆಡ್ಡಿ, ಅಭಯ್ ಪಾಟೀಲ್ ತರಬೇತಿ ಪಡಿದ್ದರು. ತರಬೇತಿ ಪಡೆದ ಈ ಶಾಸಕರು ಭಾನುವಾರ ನಗರದ ಖಾಸಗಿ ಹೋಟೆಲಿನಲ್ಲಿ ಅಣಕು ಮತದಾನದ ತರಬೇತಿ ನೀಡಿದ್ದರು. ಇದನ್ನೂ ಓದಿ: ದ್ರೌಪದಿ ಮುರ್ಮುಗೆ ಗೆಲುವು – ಯಾರಿಗೆ ಎಷ್ಟು ಮತ?
ಕಳೆದ ಬಾರಿಯ ಚುನಾವಣೆಯಲ್ಲಿ 17 ಮತಗಳು ಅಸಿಂಧುಗೊಂಡಿದ್ದವು. ಈ ಸಲ ಯಾವುದೇ ಲೋಪ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿತ್ತು. ಈ ಸಂಬಂಧ ಎರಡು ದಿನ ಖಾಸಗಿ ಹೊಟೇಲಿನಲ್ಲಿ ಶಾಸಕರನ್ನು ಜಮಾವಣೆ ಮಾಡಿಕೊಂಡು ಬಿಜೆಪಿ ತಾಲೀಮು ನಡೆಸಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಸೋಲಿನ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದರು.
ಪ್ರಕಟಣೆಯಲ್ಲಿ ಏನಿದೆ?
2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತದ 15ನೇ ರಾಷ್ಟ್ರಪತಿಯಾಗಿ ಅವರು ಭಯಪಡದೆ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಿಜವಾಗಿ, ಪ್ರತಿಯೊಬ್ಬ ಭಾರತೀಯನೂ ಇದನ್ನೇ ಆಶಿಸುತ್ತಾರೆ. ನಾನು ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಇದನ್ನೂ ಓದಿ: 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ
ಈ ಚುನಾವಣೆಯಲ್ಲಿ ನನ್ನನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ರಾಜಕೀಯ ಪಕ್ಷಗಳ ನಾಯಕರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ನನಗೆ ಮತ ಹಾಕಿದ ಎಲೆಕ್ಟೋರಲ್ ಕಾಲೇಜಿನ ಎಲ್ಲ ಸದಸ್ಯರಿಗೂ ನಾನು ಧನ್ಯವಾದ ಹೇಳುತ್ತೇನೆ. ಭಗವದ್ಗೀತೆಯಲ್ಲಿ ಭಗವಾನ್ ಕೃಷ್ಣನು ಬೋಧಿಸಿದ ಕರ್ಮಯೋಗದ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ‘ಫಲವನ್ನು ನಿರೀಕ್ಷಿಸದೆ ನಿಮ್ಮ ಕರ್ತವ್ಯವನ್ನು ಮಾಡಿ’ ವಿರೋಧ ಪಕ್ಷಗಳ ಪ್ರಸ್ತಾಪವನ್ನು ನಾನು ಸ್ವೀಕರಿಸಿದೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ನಾನು ನನ್ನ ಕರ್ತವ್ಯವನ್ನು ಆತ್ಮಸಾಕ್ಷಿಯಾಗಿ ನಿರ್ವಹಿಸಿದ್ದೇನೆ.
ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಎರಡು ಪ್ರಮುಖ ರೀತಿಯಲ್ಲಿ ಪ್ರಯೋಜನವನ್ನು ನೀಡಿದೆ ಎಂದು ನಾನು ನಂಬುತ್ತೇನೆ. ಮೊದಲನೆಯದಾಗಿ, ಇದು ಹೆಚ್ಚಿನ ವಿರೋಧ ಪಕ್ಷಗಳನ್ನು ಸಾಮಾನ್ಯ ವೇದಿಕೆಗೆ ತಂದಿತು. ಅಧ್ಯಕ್ಷೀಯ ಚುನಾವಣೆಯ ಆಚೆಗೆ ಪ್ರತಿಪಕ್ಷಗಳ ಏಕತೆಯನ್ನು ಮುಂದುವರಿಸಲು – ವಾಸ್ತವವಾಗಿ, ಮತ್ತಷ್ಟು ಬಲಪಡಿಸಲು ನಾನು ಅವರಿಗೆ ಶ್ರದ್ಧೆಯಿಂದ ಮನವಿ ಮಾಡುತ್ತೇನೆ. ಉಪಾಧ್ಯಕ್ಷರ ಚುನಾವಣೆಯಲ್ಲೂ ಅದು ಸ್ಪಷ್ಟವಾಗಿ ಗೋಚರಿಸಬೇಕು.
ಎರಡನೆಯದಾಗಿ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ರಾಷ್ಟ್ರ ಮತ್ತು ಸಾಮಾನ್ಯ ಜನರ ಮುಂದೆ ಪ್ರಮುಖ ವಿಷಯಗಳ ಬಗ್ಗೆ ವಿರೋಧ ಪಕ್ಷಗಳ ಅಭಿಪ್ರಾಯಗಳು, ಕಾಳಜಿಗಳು ಮತ್ತು ಬದ್ಧತೆಗಳನ್ನು ಎತ್ತಿ ತೋರಿಸಲು ನಾನು ಪ್ರಯತ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ವಿರೋಧ ಪಕ್ಷಗಳು ಮತ್ತು ಅವರ ನಾಯಕರ ವಿರುದ್ಧ ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತು ರಾಜ್ಯಪಾಲರ ಕಚೇರಿಯ ಅಬ್ಬರದ ಮತ್ತು ಅತಿರೇಕದ ಶಸ್ತ್ರಾಸ್ತ್ರಗಳ ಬಗ್ಗೆ ನಾನು ತೀವ್ರ ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್ – ಮಾರ್ಗಸೂಚಿ ಪ್ರಕಟ
ಈ ಸಂಸ್ಥೆಗಳನ್ನು ಇಂಜಿನಿಯರ್‌ಗಳ ಪಕ್ಷಾಂತರ ಮತ್ತು ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯ ಸರ್ಕಾರಗಳನ್ನು ಉರುಳಿಸಲು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಷ್ಟು ಪ್ರಮಾಣದ ರಾಜಕೀಯ ಭ್ರಷ್ಟಾಚಾರವನ್ನು ಭಾರತ ಎಂದೂ ಕಂಡಿರಲಿಲ್ಲ. ಇದು, ಧ್ರುವೀಕರಣದ ವಿಷಪೂರಿತ ರಾಜಕೀಯದೊಂದಿಗೆ ಸೇರಿಕೊಂಡು, ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಕೋಮು ಸೌಹಾರ್ದಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ.
ನಾನು ಭೇಟಿ ನೀಡಿದ ಎಲ್ಲ ರಾಜ್ಯಗಳ ಸಿಎಂ, ನಾಯಕರು, ಸಂಸದರು ಮತ್ತು ವಿರೋಧ ಪಕ್ಷಗಳಿಗೆ ಸೇರಿದ ಶಾಸಕರಲ್ಲಿ ನನ್ನ ಅಭಿಪ್ರಾಯಗಳು ಬಲವಾದ ಅನುರಣನವನ್ನು ಕಂಡುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಸಾಮಾನ್ಯ ಜನರು ಕೂಡ ಈ ಅಭಿಪ್ರಾಯಗಳನ್ನು ಬೆಂಬಲಿಸಿದ್ದಾರೆ.
ಅಂತಿಮವಾಗಿ, ನನ್ನ ದೇಹದಲ್ಲಿ ಕೊನೆಯ ಉಸಿರು ಇರುವವರೆಗೂ, ನಾನು ನಂಬಿದ ಉದ್ದೇಶಕ್ಕಾಗಿ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶಾದ್ಯಂತ ರಾಷ್ಟ್ರಪತಿ ಚುನಾವಣೆಗೆ ಮತದಾನ ಮುಗಿದಿದೆ. ಬೆಳಗ್ಗೆ 10 ಗಂಟೆಗೆ ಶುರುವಾದ ವೋಟಿಂಗ್ ಸಂಜೆ 5 ಗಂಟೆಯವರೆಗೂ ನಡೀತು. ಒಟ್ಟು ಶೇಕಡಾ 99.18ರಷ್ಟು ಮತಗಳು ಚಲಾವಣೆ ಆದವು. ಸಂಸತ್ ಭವನದಲ್ಲಿ ಸಂಸದರು, ರಾಜ್ಯಗಳಲ್ಲಿ ಶಾಸನ ಸಭೆಗಳಲ್ಲಿ ಶಾಸಕರು ತಮ್ಮ ಹಕ್ಕು ಚಲಾಯಿಸಿದ್ರು.
Former Prime Minister and Congress MP Dr Manmohan Singh cast his vote for the Presidential election, today at the Parliament. pic.twitter.com/H6jl3O7hlb
ಸಂಸತ್ ಭವನದಲ್ಲಿ ಪ್ರಧಾನಿ ಮೋದಿ, ಸಚಿವರು, ಸಂಸದರು ವೋಟ್ ಹಾಕಿದ್ರು. ಕೋವಿಡ್ ಕಾರಣ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‍ಕೆ ಸಿಂಗ್ ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ್ರು. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್‍ಡಿ ದೇವೇಗೌಡರು ವ್ಹೀಲ್ ಚೇರ್ನಲ್ಲಿ ಬಂದು ವೋಟ್ ಹಾಕಿದ್ರು. ಬಿಜೆಪಿಯ ಇಬ್ಬರು ಸೇರಿ 8 ಸಂಸದರು ಮತದಾನದಿಂದ ದೂರ ಉಳಿದ್ರು. ಇತ್ತ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ, ಸಚಿವರು, ವಿಪಕ್ಷ ನಾಯಕರು, ಶಾಸಕರು ಮತ್ತು ಇಬ್ಬರು ಸಂಸದರು ಮತದಾನ ಮಾಡಿದ್ರು. ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಸೂಚನೆ
ಸದ್ಯದ ಲೆಕ್ಕಾಚಾರದ ಪ್ರಕಾರ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇಕಡಾ 60ಕ್ಕೂ ಹೆಚ್ಚು ಮತ ಪಡೆದು ವಿಜಯಶಾಲಿ ಆಗಲಿದ್ದಾರೆ. ಮುರ್ಮು ಅವರಿಗೆ ಎನ್‍ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್‍ಆರ್‍ಸಿಪಿ, ಜೆಡಿಎಸ್, ಬಿಎಸ್‍ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಕ್ರಾಸ್ ವೋಟಿಂಗ್ ನಡೆದಿದೆ ಎನ್ನಲಾಗುತ್ತಿದೆ. ಟಿಎಂಸಿ 12 ಶಾಸಕರು ಮುರ್ಮುಗೆ ವೋಟ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಐವರು ಕಾಂಗ್ರೆಸ್ ಶಾಸಕರು ಕೂಡ ಕ್ರಾಸ್ ವೋಟ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ
ತೆಲಂಗಾಣದ ಕಾಂಗ್ರೆಸ್ ಶಾಸಕಿ, ಮಾಜಿ ನಕ್ಸಲ್ ಸೀತಕ್ಕ ಅವರು ಮುರ್ಮುಗೆ ಮತ ಹಾಕಿದ್ರು. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ ಅಂದ್ರು. ಬುಡಕಟ್ಟು ಜನರೇ ಹೆಚ್ಚಿರುವ ಮುಲುಗು ಕ್ಷೇತ್ರವನ್ನು ಸೀತಕ್ಕ ಪ್ರತಿನಿಧಿಸ್ತಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾಗೆ ಮೂರು ಲಕ್ಷದಷ್ಟು ಮತ ಬೀಳುವ ನಿರೀಕ್ಷೆ ಇದೆ. ಈ ಚುನಾವಣೆಯಲ್ಲಿಯೂ ಬಿಜೆಪಿ ಹಣ ಕೊಟ್ಟುಮತ ಖರೀದಿ ಮಾಡಿದೆ ಎಂದು ಯಶವಂತ ಸಿನ್ಹಾ ಗಂಭೀರ ಆರೋಪ ಮಾಡಿರೋದು ಗಮನಾರ್ಹ ವಿಚಾರ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ವ್ಹೀಲ್‌ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಹೆಚ್.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ದ್ರೌಪದಿ ಮುರ್ಮು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ ಖುದ್ದಾಗಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವ್ಹೀಲ್ ಚೇರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದರು.
ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನದ ಮೂಲಕ ಮತದಾನ ನಡೆಯಿತು. ಈ ಸಂದರ್ಭದಲ್ಲಿ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು. ಅವರಿಗೆ ಮತ ಚಲಾಯಿಸಲು ನಾಲ್ವರು ಅಧಿಕಾರಿಗಳು ಸಹಾಯ ಮಾಡಿದರು.
ಈ ವೀಡಿಯೋವನ್ನು ಕಾಂಗ್ರೆಸ್‍ನ ಅನೇಕ ನಾಯಕರು ಹಂಚಿಕೊಂಡಿದ್ದು, ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ. ಅವರನ್ನು ಈ ರೀತಿ ನೋಡಲು ಬೇಸರವಾಗಿದೆ ಎಂದಿದ್ದಾರೆ.
खराब स्वास्थ्य के बाबजूद अपनी लोकतांत्रिक जिम्मेदारी निभाने के लिए संसद पहुंचे सरदार मनमोहन सिंह जी हम सभी के लिए प्रेरणा है।
Former Prime Minister and Congress MP Dr Manmohan Singh cast his vote for the Presidential election, today at the Parliament. pic.twitter.com/H6jl3O7hlb
ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ
Live Tv
[brid partner=56869869 player=32851 video=960834 autoplay=true]
ಚಂಡೀಗಢ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಅಕಾಲಿ ದಳ ಪಕ್ಷ ತನ್ನ ಸದಸ್ಯರಿಗೆ ಸೂಚಿಸಿತ್ತು. ಆದರೆ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಶಾಸಕರೊಬ್ಬರು ರಾಷ್ಟ್ರಪತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ.
ಅಕಾಲಿ ದಳ ಪಕ್ಷದ ಶಾಸಕ ಮನ್‌ಪ್ರೀತ್ ಸಿಂಗ್ ಆಯಲಿ ಚುನಾವಣೆ ಬಹಿಷ್ಕರಿಸಿದ್ದು, ನಾನು ದ್ರೌಪದಿ ಮುರ್ಮು ಹಾಗೂ ಯಶವಂತ್ ಸಿನ್ಹಾ ಇಬ್ಬರಿಗೂ ವೋಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ
ಈ ಕುರಿತು ಫೇಸ್‌ಬುಕ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಶಾಸಕ, 1984ರ ಸಿಖ್ ಹತ್ಯಾಕಾಂಡದ ಹೊಣೆ ಹೊತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ. ಪಂಜಾಬ್‌ನ ಸಮಸ್ಯೆಗಳನ್ನು ಬಗೆಹರಿಸುವ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ನನಗೆ ನಂಬಿಕೆ ಇಲ್ಲ ಎಂದು ಅಯಾಲಿ ಹೇಳಿದ್ದಾರೆ.
ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಅವರು ಪಂಜಾಬ್‌ನ ಸಮಸ್ಯೆಗಳನ್ನು ಪರಿಹರಿಸಲಿಲ್ಲ. ಇದು ಸ್ವಾರ್ಥವೋ ಅಥವಾ ಇನ್ನೇನೋ ಗೊತ್ತಿಲ್ಲ ಎಂದು ಬಿಜೆಪಿ ವಿರುದ್ಧವೂ ಕಿಡಿಕಾರಿದ್ದಾರೆ.
ಸಿಖ್ ಸಮುದಾಯದ ಭಾವನೆಗಳು, ಪಂಜಾಬ್‌ನ ಸಮಸ್ಯೆಗಳು ಮತ್ತು ನನ್ನ ಆತ್ಮಸಾಕ್ಷಿಯ ಧ್ವನಿಯನ್ನು ಆಲಿಸಿ ನಾನು ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿಲ್ಲ ಎಂದು ಆಯಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ
ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿಚಾರವಾಗಿ ನನಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಸಿಖ್ ಕೈದಿಗಳ ಬಿಡುಗಡೆ, ಚಂಡೀಗಢದ ಮೇಲೆ ಪಂಜಾಬ್‌ನ ಹಕ್ಕುಗಳು ಮತ್ತು ಸಟ್ಲೇಜ್-ಯಮುನಾ ಜೋಡಣೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಈ ಬಾರಿ ರಾಷ್ಟ್ರಪತಿ ಮತದಾನಕ್ಕೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿದ್ದು ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗಿದೆ.
ಈ ಮೊದಲು ಮತದಾನ ಪ್ರಕ್ರಿಯೆಯಲ್ಲಿ ಇಂದನ ಸಚಿವ ಸುನೀಲ್ ಕುಮಾರ್ ಶಾಸಕರಾದ ಸಿ ಟಿ ರವಿ, ಸತೀಶ್ ರೆಡ್ಡಿ, ಅಭಯ್ ಪಾಟೀಲ್ ತರಬೇತಿ ಪಡಿದ್ದರು. ತರಬೇತಿ ಪಡೆದ ಈ ಶಾಸಕರು ಭಾನುವಾರ ನಗರದ ಖಾಸಗಿ ಹೋಟೆಲಿನಲ್ಲಿ ಅಣಕು ಮತದಾನದ ತರಬೇತಿ ನೀಡಿದ್ದಾರೆ.
ನವದೆಹಲಿ: ಇಂದು ಬೆಳಗ್ಗೆ 10 ಗಂಟೆಯಿಂದಲೇ ಆರಂಭವಾದ ರಾಷ್ಟ್ರಪತಿ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆಗೆ ಮತ ಚಲಾಯಿಸಲು ಈಗಾಗಲೇ ಸಂಸದರು ಸಂಸತ್ತಿನಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಸಂಸತ್ತಿನ ಆವರಣದಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಸಂಸದರು ಮತ ಚಲಾಯಿಸುತ್ತಿದ್ದಾರೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಈ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ ಚಲಾಯಿಸಿದ್ದಾರೆ.
ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ದ್ರೌಪದಿ ಮುರ್ಮು ಗೆಲುವು ಸಾಧಿಸಿದರೇ 64 ವರ್ಷ ವಯಸ್ಸಿನ ಅವರು ಇದುವರೆಗೆ ಭಾರತದ ಅತ್ಯಂತ ಕಿರಿಯ ರಾಷ್ಟ್ರಪತಿಯಾಗಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಗಣಿ ಸ್ಫೋಟ- ಇಬ್ಬರು ಯೋಧರು ಹುತಾತ್ಮ
ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ನಾಮನಿರ್ದೇಶಿತ ಸದಸ್ಯರು, ರಾಜ್ಯ ವಿಧಾನಸಭೆಗಳು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ. ಒಟ್ಟು 776 ಸಂಸತ್ ಸದಸ್ಯರು ಮತ್ತು 4,033 ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಇದನ್ನೂ ಓದಿ:ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ
Live Tv
[brid partner=56869869 player=32851 video=960834 autoplay=true]
ನವದೆಹಲಿ: ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಚುನಾವಣೆಯಲ್ಲೂ ಆಪರೇಷನ್ ಕಮಲದ ಆರೋಪ ಕೇಳಿಬಂದಿದೆ.
ಬಿಜೆಪಿ ನೇತೃತ್ವದ ಎನ್‍ಡಿಎ ಬಳಿ ಶೇ.60ಕ್ಕೂ ಹೆಚ್ಚು ಅಂದರೆ 6.67 ಲಕ್ಷಕ್ಕೂ ಹೆಚ್ಚು ಮತಗಳು ಇವೆ. ಮೂರು ಲಕ್ಷ ಚಿಲ್ಲರೆ ಮತಗಳನ್ನು ವಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲದ ಕಾರಣ ಯಶವಂತ್ ಸಿನ್ಹಾ ಸೋಲು ಬಹುತೇಕ ಖಚಿತವಾಗಿದೆ. ಅವರ ಬಳಿ ಮೂರು ಲಕ್ಷ ಚಿಲ್ಲರೇ ಮತಗಳಷ್ಟೇ ಇವೆ.
ಪ್ರಮುಖವಾಗಿ ವಿಪಕ್ಷಗಳಲ್ಲಿನ ಬುಡಕಟ್ಟು ಸಮುದಾಯದ ಶಾಸಕರು, ಸಂಸದರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಬಿಜೆಪಿ ಹಣ ಆಮಿಷವನ್ನು ಒಡ್ಡಿದೆ ಎಂಬ ಆರೋಪ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮು ಗೆಲ್ಲುವುದು ಪಕ್ಕಾ ಆಗಿರುವುದರಿಂದ ಬಿಜೆಪಿಯವರು ಫುಲ್ ಜೋಷ್‍ನಲ್ಲಿ ಇದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕ್‍ನಲ್ಲಿರುವ ಪೂರ್ವಜರ ಮನೆಗೆ ಭೇಟಿ ನೀಡಿದ ಭಾರತೀಯ ಮಹಿಳೆ
ಇದೇ ಜೋಷ್‍ನಲ್ಲಿ ಎನ್‍ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರನ್ನು ಕಣಕ್ಕಿಳಿಸಿದೆ. ವಿಪಕ್ಷಗಳು ಇಂದು ಅಭ್ಯರ್ಥಿಯನ್ನು ಪ್ರಕಟಿಸುವ ಸಂಭವ ಇದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.
ವಿಧಾನಸೌಧದಲ್ಲಿ ಇಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಹಿಂದ ಜಪಕ್ಕೆ ಟಕ್ಕರ್ ಕೊಡಲು ಮುಂದಾದ ಬಿಜೆಪಿ
ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೋಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ಮಾಹಿತಿ ನೀಡಿದರು.
ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಐತಿಹಾಸಿಕ ಒತ್ತು ನೀಡಿದ್ದರು. ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ನಮ್ಮ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ತದನಂತರ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ಅವರೇ ತೆರಳಿ ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ ಎಂದು ಬಂಡೆಪ್ಪ ಕಾಶಂಪೂರ್ ತಿಳಿಸಿದರು. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೇ ಮತ ಹಾಕುತ್ತೇವೆ ಎಂದು ಅವರು ತಿಳಿಸಿದರು.
Live Tv
[brid partner=56869869 player=32851 video=960834 autoplay=true]