Tag: ರಾಷ್ಟ್ರೀಕೃತ ಬ್ಯಾಂಕ್

  • ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು ಮುಚ್ಚುವುದೇ ಒಳ್ಳೆಯದು- ಕೇಂದ್ರದ ವಿರುದ್ಧ ರೇವಣ್ಣ ಕಿಡಿ

    ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು ಮುಚ್ಚುವುದೇ ಒಳ್ಳೆಯದು- ಕೇಂದ್ರದ ವಿರುದ್ಧ ರೇವಣ್ಣ ಕಿಡಿ

    ಹಾಸನ: ರಾಷ್ಟ್ರೀಕೃತ ಬ್ಯಾಂಕ್‍ಗಳು ರೈತರಿಗೆ ಹಣ ಕೊಡುತ್ತಿಲ್ಲ, ಹೀಗಾಗಿ ಅವುಗಳನ್ನು ಮುಚ್ಚುವುದು ಒಳ್ಳೆಯದು ಎಂದು ಮಾಜಿ ಸಚಿವ ಎಚ್‍ಡಿ ರೇವಣ್ಣ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರೈತರಿಗೆ ಗೋಳು ಕೊಡುವ ಬ್ಯಾಂಕ್ ಎಂದರೆ ಅದು ರಾಷ್ಟ್ರೀಕೃತ ಬ್ಯಾಂಕ್‍ಗಳು. ಈ ರಾಷ್ಟ್ರೀಕೃತ ಬ್ಯಾಂಕ್‍ಗಳು ಬಡ ರೈತರಿಗೆ ಸಾಲ ಕೊಡುತ್ತಿಲ್ಲ. ರೈತರು ಒಂದು ಲಕ್ಷ ರೂ. ಸಾಲ ತೆಗೆದುಕೊಂಡರೇ ಒಂದು ವರ್ಷಕ್ಕೆ 5 ಲಕ್ಷ ರೂ. ಹಣ ಕಟ್ಟಿ ಎಂದು ಹೇಳುತ್ತಾರೆ. ಈ ಬ್ಯಾಂಕ್ ಗಳು ಉಳ್ಳವರಿಗೆ ಮಾತ್ರ ಉಪಯೋಗವಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರು ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು ಮುಚ್ಚಲಿ ಎಂದು ಒತ್ತಾಯ ಮಾಡಿದರು.

    ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ರೈತರ ಮನೆ ಹಾಳಾಗುತ್ತಿದೆ. ಮೋದಿಯವರೇ ನೀವೇ ಹೇಳಿ ಈ ಬ್ಯಾಂಕ್‍ಗಳು ಯಾಕೆ ಇದೆ ಎಂದು. ಈ ಬ್ಯಾಂಕ್‍ಗಳಿಂದ ಉಳ್ಳವರೆಗೆ ಸಾಲ ಕೊಡುತ್ತೇವೆ ಎಂದು ಒಂದು ಆದೇಶ ಹೊರಡಿಸಿ ಎಂದು ಕೇಂದ್ರ ಸರ್ಕಾರದ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

    ಕೊರೊನಾದಿಂದ 4,200 ಟನ್ ಹಾಲಿನ ಪೌಡರ್ ಮಾರಾಟವಾಗದೇ ಡೈರಿಯಲ್ಲೇ ಉಳಿದಿದೆ. ಕೊರೊನಾ ಸಮಯದಲ್ಲಿ ವಿವಿಧ ಬೆಳೆಗಳಲ್ಲಿ ನಷ್ಟ ಅನುಭವಿಸಿದ್ದು ಹಾಗೂ ಕೆ.ಎಂ.ಎಫ್. ಮೂಲಕವೇ ಜೋಳ ಖರೀದಿ ಮಾಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರೈತರ ನೆರವಿಗೆ ಸರ್ಕಾರ ಬರಬೇಕು. ಲಾಕ್‍ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು, ಹೂವು, ತರಕಾರಿ ಬೆಳೆಗಳು ಸೇರಿ ಅಂದಾಜು 104 ಕೋಟಿ ರೂ.ಗಳ ನಷ್ಟವಾಗಿದೆ. ಜೊತೆಗೆ ಮಳೆ ಹಾನಿಗೂ ಇದುವರೆಗೂ ಯಾವ ಪರಿಹಾರವನ್ನು ಸರ್ಕಾರ ನೀಡಿಲ್ಲ. ತೋಟಗಾರಿಕ ಬೆಳೆಗಳಲ್ಲಿ ಸಮೀಕ್ಷೆ ಪ್ರಕಾರ ಆಗಸ್ಟ್ ತಿಂಗಳ ಒಳಗೆ 19,23,37,000 ರೂ ನಷ್ಟವಾಗಿದೆ. ಕಾಫಿ ಬೆಳೆಯಲ್ಲಿ 18,10,57,000 ರೂ. ನಷ್ಟ ಸಂಭವಿಸಿದೆ ಎಂದು ವಿವರಿಸಿದರು.

    ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ಮಳೆ ಹಾನಿ ಸೇರಿದಂತೆ ಇತರೆ ಪ್ರಕೃತಿ ವಿಕೋಪದ ಕಾರಣ ಕಾಫಿ ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಪರಿಹಾರ ಒದಗಿಸಲಿ. ಜಿಲ್ಲೆಯ ಹೂವಿನ ಬೆಳೆಗಾರರಿಗೆ ಇದುವರೆಗೆ 7 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಅಲ್ಲದೆ ಬ್ಯಾಂಕ್ ಖಾತೆಯೂ ಸರಿ ಇಲ್ಲ ಎಂಬ ಕಾರಣಕ್ಕೆ ಹಲವರಿಗೆ ಪರಿಹಾರ ತಲುಪಿಲ್ಲ ಎಂದರು.

    ಜಿಲ್ಲೆಯಲ್ಲಿ ಈ ಬಾರಿ ಸುಮಾರು 78 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯುವ ನಿರೀಕ್ಷೆ ಇತ್ತು. ಆದರೆ 95 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದಾರೆ. 6 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳದ ಇಳುವರಿ ಬರುವ ನಿರೀಕ್ಷೆ ಇದ್ದು, ಇವರಿಗೆ ಬೆಂಬಲ ಬೆಲೆ ನೀಡಬೇಕು. ಒಟ್ಟು 6 ಲಕ್ಷ ಟನ್ ಜೋಳವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.

    ಜೋಳ ಖರೀದಿಯಲ್ಲಿ ರೈತರನ್ನು ದಲ್ಲಾಳಿಗಳು ಶೋಷಣೆ ಮಾಡುತ್ತಿದ್ದು, ಜೋಳಕ್ಕೆ 1,700 ರೂ. ಇದ್ದರೇ ದಲ್ಲಾಳಿಗಳು 1,200 ರೂ.ಗೆ ಖರೀದಿ ಮಾಡಿ 1,700 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕೆ.ಎಂ.ಎಫ್‍ಗೆ ರೈತರು ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಗಮನ ಕೊಡಬೇಕು ಎಂದು ಸಲಹೆ ನೀಡಿದರು.

  • ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ – ಯೂಟರ್ನ್ ಹೊಡೆದ ಸಿಎಂ ಕುಮಾರಸ್ವಾಮಿ

    ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ – ಯೂಟರ್ನ್ ಹೊಡೆದ ಸಿಎಂ ಕುಮಾರಸ್ವಾಮಿ

    ಬೆಳಗಾವಿ: ಮುಂದಿನ ವರ್ಷ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಅಧಿವೇಶನದ ಕಲಾಪಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಸಾಲಮನ್ನಾ ಮಾಡುವುದಕ್ಕೆ ಮುಂದಿನ ವರ್ಷದ ಬಜೆಟ್‍ನಲ್ಲಿ ಹಣವನ್ನು ಮೀಸಲಿಡಲಾಗಿದೆ. ಬಿಜೆಪಿಯವರು ಆರು ತಿಂಗಳು ಕಾದು ನೋಡಲಿ. ನಾನು ಎಲ್ಲಿಯೂ ಹೋಗುವುದಿಲ್ಲ. ಈಗಲೇ ಎಲ್ಲ ಹಣವನ್ನು ಪಾವತಿ ಮಾಡಲು ಸಿದ್ಧನಿರುವೆ. ಒಂದು ವೇಳೆ ನಾಲ್ಕು ಹಂತದಲ್ಲಿ ಹಣ ಪಾವತಿಸುವ ಪರಿಸ್ಥಿತಿ ಬಂದಾಗ ಎದುರಿಸಬೇಕಾಗುತ್ತದೆ ಎಂದು ದ್ವಂದ್ವ ಹೇಳಿಕೆ ನೀಡಿದ್ದಾರೆ.

    ರೈತರ ಸಾಲಮನ್ನಾಗೆ ನಾನು ಬದ್ಧನಿರುವೆ. ರೈತರ ಕೃಷಿ ಸಾಲಮನ್ನಾ ಹಣವನ್ನು ಬ್ಯಾಂಕ್‍ಗಳಿಗೆ ನಾಲ್ಕು ವರ್ಷದಲ್ಲಿ ಪಾವತಿಸಲಾಗುತ್ತದೆ. ಈ ಕುರಿತು ಮುಂದಿನ ವರ್ಷದ ಬಜೆಟ್‍ನಲ್ಲಿ ಸಂಪೂರ್ಣ ಮಾಹಿತಿ ನೀಡತ್ತೇನೆ. ಯಾವ ವರ್ಷ ಎಷ್ಟು ಹಣವನ್ನು ಬ್ಯಾಂಕಿಗೆ ನೀಡಬೇಕು ಎನ್ನುವ ವಿಚಾರವಾಗಿ ಆರ್ಥಿಕ ಇಲಾಖೆಯ ಜೊತೆಗೆ ಚರ್ಚೆ ಮಾಡಿದ್ದೇನೆ. ಈಗಾಗಲೇ ದೊಡ್ಡಬಳ್ಳಾಪುರ ರೈತರ ಸಾಲಮನ್ನಾ ಮಾಡಲಾಗಿದೆ ಎಂದರು.

    ನೀರಾವರಿ ನಿಗಮಗಳ ಯೋಜನೆಗಳಿಗೆ ಬ್ರೇಕ್ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಾಲಮನ್ನಾಕ್ಕೆ ಹಣ ಹೊಂದಿಸಲು ಯಾವುದೇ ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿದಿಲ್ಲ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಸ್ಥಗಿತ ಮಾಡಿಲ್ಲ. ಇದಕ್ಕೂ ಸಾಲಮನ್ನಾಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾ ಮಾಡಲು ಪ್ರತ್ಯೇಕ ಹಣ ಮೀಸಲಿರಿಸಿದ್ದೇವೆ. ನೀರಾವರಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

    ಕಲಾಪ ಕದನ:
    ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ನಾನು ನಿನ್ನೆ ಹಗುರವಾಗಿ ಮಾತಾಡಿದ್ದೇನೆ ಎನ್ನುವುದು ಬಿಜೆಪಿಯವರ ಆರೋಪ. ಆದರೆ ಸರ್ಕಾರದ ಬಗ್ಗೆ ಇಷ್ಟು ದಿನ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಹಗುರವಾಗಿ ಮಾತಾಡಿದ್ದಾರೆ. ಈ ವರ್ತನೆಯಿಂದ ಬೇಸತ್ತ ನಾವು ಬಿಜೆಪಿ ವಿರುದ್ಧ ಧರಣಿ ಮಾಡಬೇಕಿತ್ತು. ಕಲಾಪದಲ್ಲಿ ನಿನ್ನೆ ಮಧ್ಯಾಹ್ನ ಸಾಲಮನ್ನಾ ಕುರಿತು ಮಾಹಿತಿ ನೀಡುತ್ತಿದ್ದೆ. ಅದನ್ನು ಕೇಳುವ ಮನಸ್ಥಿತಿ ಬಿಜೆಪಿಯವರಿಗೆ ಇರಲಿಲ್ಲ ಎಂದರು.

    ಈ ಹಿಂದೆ ಸಿಎಂ ಹೇಳಿದ್ದೇನು?:
    ವಿಧಾನಸೌಧದಲ್ಲಿ ಇದೇ ತಿಂಗಳ 4ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು 50 ಸಾವಿರ ರೂ. ಮನ್ನಾ ಮಾಡಲಾಗುವುದು. ಸಾಲಮನ್ನಾಕ್ಕಾಗಿ 6,500 ಕೋಟಿ ರೂ. ಮೀಸಲಿಟ್ಟಿದ್ದೇವೆ. ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿ 17 ಲಕ್ಷ ರೈತರ ಸಾಲ ಪಡೆದಿದ್ದು, ಪ್ರತಿಯೊಬ್ಬರ ಖಾತೆಯ 50 ಸಾವಿರ ರೂ. ಸಾಲಮನ್ನಾ ಮಾಡಲಾಗುವುದು ಎಂದು ಹೇಳಿದ್ದರು.

    ಅಕ್ಟೋಬರ್ 24 ರಂದು ಸಿಎಂ, ಸಹಕಾರಿ ಬ್ಯಾಂಕ್‍ಗಳಿಗೆ ಕಳೆದ ತಿಂಗಳು 1,300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೀಗಾಗಿ ಸಾಲಮನ್ನಾ ಪ್ರಕ್ರಿಯೆ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಉಳಿದ 1,200 ಕೋಟಿ ರೂ.ವನ್ನು ಇದೇ ತಿಂಗಳು ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದರು. ಇದನ್ನು ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಸಾಲಮನ್ನಾ ಗಿಫ್ಟ್!

    ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ವಾಣಿಜ್ಯ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ 2ಲಕ್ಷ ರೂ.ವರೆಗಿನ ಎನ್‍ಪಿಎ ಸಾಲ, ಸುಸ್ತಿ ಸಾಲ ಮತ್ತು ಮರು ಹೊಂದಾಣಿಕೆ ಸಾಲವನ್ನು ಬಡ್ಡಿ ಸಹಿತ ಮನ್ನಾ ಮಾಡುವ ಕುರಿತು ಸಂಪುಟ ತೀರ್ಮಾನ ಕೈಗೊಂಡು ಈ ಆದೇಶ ಹೊರಡಿಸಿತ್ತು. ಇದನ್ನು ಓದಿ: ಸಾಲಮನ್ನಾ ನಂತರವೂ ರಾಜ್ಯ ಸರ್ಕಾರದ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದೆ: ಸಿಎಂ

    ಸಾಲಮನ್ನಾ ಯೋಜನೆಯ ಪ್ರಕ್ರಿಯೆಗಳನ್ನು ಮುಂದುವರಿಸಲು ಇಬ್ಬರು ಐಎಎಸ್ ಅಧಿಕಾರಿಗಳನ್ನೊಳಗೊಂಡ ನೋಡಲ್ ಸಮಿತಿಯನ್ನೂ ಸರ್ಕಾರ ರಚಿಸಿದೆ. ಈ ಸಮಿತಿ ಬ್ಯಾಂಕ್‍ಗಳೊಂದಿಗೆ ಸಂಪರ್ಕ ಹೊಂದಿ ಸಾಲಮನ್ನಾದ ಅನುಕೂಲ ನೇರವಾಗಿ ರೈತರಿಗೆ ತಲುಪುವಂತೆ ಮಾಡಲಿದೆ. ಇದರ ಜತೆಗೆ ಚಾಲ್ತಿ ಸಾಲದ ಪೈಕಿ 25 ಸಾವಿರ ರೂ. ಮನ್ನಾ ಮಾಡಲಾಗುತ್ತದೆ. ಈ ಮೊತ್ತವನ್ನು ರೈತರ ಸಾಲದ ಖಾತೆಗೆ ಸರ್ಕಾರ ಜಮಾ ಮಾಡಲಿದೆ ಎಂದು ಕುಮಾರಸ್ವಾಮಿ ಹಿಂದೆ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಹಂಗಿನ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ

    ಮತ್ತೆ ಹಂಗಿನ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ

    -ನೀಡಿದ ಭರವಸೆ ಈಡೇರಿಸಲು ಆಗಲಿಲ್ಲಾ ಅಂತಾ ಕಣ್ಣೀರು ಹಾಕಿದ್ದೇನೆ

    ಬೆಂಗಳೂರು: ಯಾವುದೋ ಹಂಗಿನಲ್ಲಿ ನಾನು ಕೆಲಸ ಮಾಡ್ತಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಹಂಗಿನ ಬಗ್ಗೆ ಮಾತನಾಡಿದ್ದಾರೆ.

    ರೈತರ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರೈತರ ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಾಡಲು ಪ್ರಯತ್ನಿಸುತ್ತಿರುವೆ. ನೀಡಿದ ಭರವಸೆಯನ್ನು ಈಡೇರಿಸಲು ಆಗಲಿಲ್ಲಾ ಅಂತಾ ಕೆಲವೊಮ್ಮೆ ಕಣ್ಣೀರು ಹಾಕಿದ್ದೇನೆ. ಸಾಲಮನ್ನಾ ಮಾಡುವುದು ನಿಶ್ಚಿತ. ಹಾಗಂತ ಸರ್ಕಾರದ ಆಸ್ತಿಯನ್ನು ಮಾರಿ ಸಾಲಮನ್ನಾ ಮಾಡುವುದಿಲ್ಲ ಎಂದು ಹೇಳಿದರು.

    ಸಾಲಮನ್ನಾ ನಿಮಿತ್ತ ಐಎಎಸ್ ಅಧಿಕಾರಿ ನೇಮಕ ಮಾಡಿದ್ದು, ಅವರೊಂದಿಗೆ ನಾನು ಕೆಲಸ ಮಾಡುತ್ತಿರುವೆ. ರಾಷ್ಟ್ರೀಯ ಬ್ಯಾಂಕ್‍ಗಳ ಜೊತೆ 10 ಬಾರಿ ಸಭೆ ಮಾಡಲಾಗಿದೆ. ಪರಿಣಾಮ ಬ್ಯಾಂಕ್‍ನವರು ಬಾಂಡ್ ವಿಚಾರವಾಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ನಿರ್ಧಾರ ಹೇಳಿಲ್ಲ ಎಂದು ರಾಷ್ಟ್ರೀಕೃತ ಬ್ಯಾಂಕ್‍ಗಳ ವಿರುದ್ಧ ಸಿಎಂ ಗರಂ ಆದರು.

    ನಾನು ಯಾವುದೇ ಪತ್ರ, ಪುಸ್ತಕ ನೋಡಿ ಸಾಲಮನ್ನಾ ವಿಚಾರ ಹೇಳುವ ಅಗತ್ಯವಿಲ್ಲ. ಏಕೆಂದರೆ ಎಲ್ಲ ವಿಚಾರವೂ ನನ್ನ ತಲೆಯಲ್ಲಿ ಉಳಿದುಬಿಟ್ಟಿದೆ. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ 21 ಲಕ್ಷ ರೈತರು ಸಾಲ ಪಡೆದಿದ್ದಾರೆ. ಅವರಲ್ಲಿ 2.80 ಲಕ್ಷ ರೈತರು ವಸೂಲಾಗದ ಸಾಲದ ಪ್ರಮಾಣ (ಎನ್‍ಪಿಎ) ಅಕೌಂಟ್ ಗಳಿವೆ. ಇಂತಹ ಖಾತೆಗಳಿಗೆ ಒಂದು ಬಾರಿ ಹಣ ಪಾವತಿಸಿದರೆ ನಮಗೆ ರಿಲ್ಯಾಕ್ಸ್ ಕೊಡುತ್ತೀರಾ ಅಂತ ಕೇಳಿದ್ದೇನೆ. 17 ಲಕ್ಷ ರೈತರ ಸಾಲದಲ್ಲಿ 50 ಸಾವಿರ ಮೊತ್ತದ ಸಾಲಕ್ಕೆ 6,500 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಉಳಿದಂತೆ ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿರುವ 2 ಲಕ್ಷ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದರು.

    ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ:
    ಸಾಲಮನ್ನಾ ಯೋಜನೆ ದೊಡ್ಡ ಕೆಲಸವಾಗಿದೆ. ಯಾವುದೇ ಮಧ್ಯವರ್ತಿಗಳು ಭ್ರಷ್ಟಾಚಾರ ಎಸಗದಂತೆ ಎಚ್ಚರಿಕೆಯಿಂದ ಹಂತ ಹಂತವಾಗಿ ಯೋಜನೆ ಜಾರಿಗೆ ತರಲಾಗುತ್ತಿದೆ. ಒಂದು ವೇಳೆ ಇದರಲ್ಲಿ ಭ್ರಷ್ಟಾಚಾರ ನಡೆದರೆ ನಾನು ಕೋರ್ಟ್ ಮುಂದೆ ಹಾಜರಾಗಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ರೈತರಿಗೆ ಅನ್ಯಾಯ ಆಗಬಾರದು. ಸಾಲಮನ್ನಾ ಹಣ ರೈತರಿಗೆ ಹೋಗಬೇಕು ಅಂತ ಕೆಲಸ ಮಾಡುತ್ತಿದ್ದೇವೆ. ವೈಜ್ಞಾನಿಕವಾಗಿ ಕೆಲಸ ನಡೆದಿದ್ದು, ಅಧಿಕಾರಿಗಳಿಗೆ ಯಾವುದೇ ಹಂತದಲ್ಲಿಯೂ ಹಣ ಹೊಡೆಯಲು ಅವಕಾಶ ನೀಡಲ್ಲ ಎಂದರು.

    ಹಿಂದಿನ ಸರ್ಕಾರವು 15 ವರ್ಷಕ್ಕೆ ಆಗುವಷ್ಟು ಕೆಲಸಕ್ಕೆ ಆದೇಶ ಮಾಡಿದೆ. ಅದರ ಹಣ ಹೊಂದಿಸುವುದೇ ನಮಗೆ ಕಷ್ಟವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಸಹಕಾರ ಸಂಘಗಳ ಸಾಲಮನ್ನಾ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

    ನಾನು ನಿಮ್ಮ ಪರ, ಹೋರಾಟ ಬೇಡ:
    ಕಬ್ಬು ಬೆಳೆಗಾರರ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಿಎಂ, ರೈತರ ಜೊತೆ ಸುದೀರ್ಘವಾಗಿ ಸಭೆ ಮಾಡಿದ್ದೇನೆ. ನಾನು ಸಿಎಂ ಆಗುವ ಮುನ್ನ ಸಕ್ಕರೆ ಕಾರ್ಖಾನೆ ಮಾಲೀಕರು 2,000 ಕೋಟಿ ರೂ. ಎಫ್‍ಆರ್ ಪಿ ದರ ನೀಡರಲಿಲ್ಲ. ನಾನು ಅಧಿಕಾರಕ್ಕೆ ಬಂದ ಮೇಲೆ ಮಾಲೀಕರ ಸಭೆ ನಡೆಸಿ ಹಣ ಕೊಡಿಸಲು ಕ್ರಮ ತೆಗೆದುಕೊಂಡಿದ್ದೇನೆ. ಇದರಿಂದಾಗಿ ಈಗ 35 ಕೋಟಿ ರೂ. ಮಾತ್ರ ಬಾಕಿ ಇದೆ ಎಂದು ತಿಳಿಸಿದರು.

    ರೈತರು ಕಬ್ಬು ನೀಡುವಾಗ ಸಕ್ಕರೆ ಮಾಲೀಕರ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಸಕ್ಕರೆ ಬೆಲೆ ಕಡಿಮೆ ಆಗಿದ್ದಕ್ಕೆ ಕಡಿಮೆ ಹಣ ಕೊಡುತ್ತೇವೆ ಅಂತ ಮಾಲೀಕರು ಪಟ್ಟು ಹಿಡಿದರು. ಬಳಿಕ ಖರೀದಿ ಮಾಡಿರುವ ಹಣವನ್ನೇ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿತು. ಅದನ್ನು ಮಾಲೀಕರು ಉಲ್ಲಂಘನೆ ಮಾಡಿದ್ದರೆ ನನಗೆ ಮಾಹಿತಿ ನೀಡಿ, ನಾನು ಕ್ರಮ ಕೈಗೊಳ್ಳುತ್ತೇನೆ ಎಂದು ರೈತರಿಗೆ ಅಭಯ ನೀಡಿರುವೆ ಎಂದರು.

    ನಾನು ಇನ್ನೊಂದು ಸಭೆ ಮಾಡುತ್ತೇನೆ. ನಾನು ನೀವು ರಾಜ್ಯ ಬಿಟ್ಟು ಹೋಗಲ್ಲ. ರೈತರು ಸುಮ್ಮನೆ ಹೋರಾಟ ಮಾಡುವುದು ಬೇಡ. ಯಾವುದೇ ಸಮಸ್ಯೆ ಇದ್ದರೂ ನಾನು ಇರುವವರೆಗೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ. ಪ್ರತಿಭಟನೆ ಮಾಡಬೇಡಿ ಎಂದು ಸಿಎಂ ರೈತರಿಗೆ ಮನವಿ ಮಾಡಿಕೊಂಡರು.

    ಉತ್ತರ ಕರ್ನಾಟಕ ಬಹುತೇಕ ರಾಜಕಾರಣಿಗಳೇ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ. ಇದೇ ದೊಡ್ಡ ಸಮಸ್ಯೆ ಆಗಿರುವುದು. ರೈತರ ಅಮಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಪ್ರಶ್ನೆ ಮಾಡಿದರೆ, ಏಕೆ ತಲೆ ಕೆಡಿಸಿಕೊಳ್ಳುತ್ತಿರಾ ನಮಗೆ ಪ್ರಶ್ನೆ ಮಾಡುತ್ತಾರೆ. ಎಫ್‍ಆರ್‍ಪಿ ದರ ಕೊಡಬೇಕು ಅಂತ ಮಾಲೀಕರಿಗೆ ಸೂಚನೆ ನೀಡಿದ್ದೇವೆ. ತೂಕದಲ್ಲಿ ಮೋಸ ವಿಚಾರದಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2009ರ ನಂತರದ ಬೆಳೆ ಸಾಲ ಮಾತ್ರ ಮನ್ನಾ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

    2009ರ ನಂತರದ ಬೆಳೆ ಸಾಲ ಮಾತ್ರ ಮನ್ನಾ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

    ಬೆಂಗಳೂರು: 2009ಕ್ಕಿಂತ ಹಿಂದಿನ ವರ್ಷಗಳಲ್ಲಿ ರೈತರು ಬ್ಯಾಂಕಿನಲ್ಲಿ ಪಡೆದ ಬೆಳೆ ಸಾಲಮನ್ನಾ ಮಾಡುವುದು ಕಷ್ಟ. ಹೀಗಾಗಿ ಅಂತಹ ಸಾಲಕ್ಕೆ ಸರ್ಕಾರ ಯಾವುದೇ ಜವಾಬ್ದಾರಿಯಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಿಎಂ, ಮಂಡ್ಯ ಜಿಲ್ಲೆಯ ರೈತ ಜವರೇಗೌಡ ಅವರು 2007ರಲ್ಲಿಯೇ ಬೆಳೆ ಸಾಲ ಪಡೆದಿದ್ದಾರೆ. ಇದರಿಂದಾಗಿ ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ಅವರಿಗೆ ನೋಟಿಸ್ ನೀಡಿದೆ. ಈ ಹಿಂದೆಯೂ ಅವರಿಗೆ ಕೋರ್ಟ್ ನಿಂದ ನೋಟಿಸ್ ಬಂದಿದ್ದರೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಯಾವ ಸಾಲಮನ್ನಾ?
    2009ರಿಂದ ಇಚೇಗಿನ ಬೆಳೆಸಾಲ ಮಾತ್ರ ಮನ್ನಾ ಆಗುತ್ತದೆ. ಹೊರತಾಗಿ ಟ್ರ್ಯಾಕ್ಟರ್, ದನದ ಕೊಟ್ಟಿಗೆ ನಿರ್ಮಾಣ ಸೇರಿದಂತೆ ಕೃಷಿ ಸಂಬಂಧಿ ಸಾಲಗಳು ಮನ್ನಾ ಆಗುವುದಿಲ್ಲ. ಇದರ ಅನ್ವಯ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ 2 ಲಕ್ಷ ಸುಸ್ತಿ ಬೆಳೆ ಸಾಲಮನ್ನಾ ಹಾಗೂ ಚಾಲ್ತಿ ಸಾಲವಿರುವ ರೈತರ ಖಾತೆಗೆ 25 ಸಾವಿರ ರೂ. ಜಮೆ ಮಾಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

    ರೈತರ ಜಾಗೃತಿಗೆ ಕ್ರಮ:
    ಸಾಲಮನ್ನಾ ಕುರಿತು ರೈತರಲ್ಲಿ ಅನೇಕ ಗೊಂದಲಗಳಿವೆ. ಈ ಕುರಿತು ನಾನೊಬ್ಬನೇ ಮಾತನಾಡುತ್ತೇನೆ. ಏಕೆಂದರೆ ನಾನಷ್ಟೇ ಜವಾಬ್ದಾರಿ ಹೊತ್ತಿರುವೆ. ಎಲ್ಲ ಸರ್ಕಾರದ ಹಣೆ ಬರವೇ ಇಷ್ಟು ಅಂತಾ ಬೇಸರದಿಂದ ಮಾತು ಆರಂಭಿಸಿದ ಸಿಎಂ, ರೈತರಲ್ಲಿ ಜಾಗೃತಿ ಮೂಡಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಜೊತೆಗೆ ನಾಡ ಕಚೇರಿಯಲ್ಲಿ ಅರ್ಜಿಗಳನ್ನು ಪ್ರಾರಂಭಿಸಲಾಗುತ್ತದೆ. ಈ ಮೂಲಕ ರೈತರು ಯಾವ ರೀತಿಯ ಸಾಲ? ಯಾವ ವರ್ಷ? ಎಷ್ಟು ಹಣ ಪಡೆದಿದ್ದಾರೆ? ಎಂದು ಮಾಹಿತಿ ಪಡೆಯಲಾಗುತ್ತದೆ. ಬಳಿಕ ಅವರು ನೀಡಿದ ವಿವರಣೆ ನಮ್ಮ ಸರ್ಕಾರದ ಸಾಲಮನ್ನಾಕ್ಕೆ ಅನ್ವಯವಾಗುತ್ತದೆ ಇಲ್ಲವೋ ಅಂತಾ ನೋಡಿ, ಜಾಗೃತಿ ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಸಾಲಮನ್ನಾ ನಿರ್ಧಾರದಿಂದ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಾಲಪಡೆದ ಒಟ್ಟು 22 ಲಕ್ಷ ರೈತರಿಗೆ ಅನುಕೂಲವಾಗುತ್ತದೆ. ಸಾಲಮನ್ನಾ ಫಲಾನುಭವಿ ರೈತರಿಗೆ ನಾನು ಪತ್ರ ಬರೆಯುವ ನಿರ್ಧಾರಕ್ಕೆ ಮುಂದಾಗಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ

    ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆಂಬ ಹೇಳಿಕೆ ನೀಡಿದ್ದಾರೆಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಸದಾಶಿವನಗರದ ನಿವಾಸ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು 5 ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಯಾರ ಕಾಲನ್ನು ಎಳೆಯುವ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯನವರು ಮೇಧಾವಿ ನಾಯಕರಾಗಿದ್ದಾರೆ. ಅವರು ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಅವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

    ಅಲ್ಲದೇ ರಾಜಕಾರಣಿಗಳಿಗೆ ಆಸೆ, ಕನಸುಗಳು ಇರಬೇಕಾಗುತ್ತದೆ ಅದು ಸಹಜ, ಆದರೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದಾರೆ. ನಾವು ಸಹ ಸಿದ್ದರಾಮಯ್ಯನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಬೇಕೆಂದು ಅಂದುಕೊಂಡೇ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವು. ಆದರೆ ಜನರ ತೀರ್ಪಿಗೆ ತಲೆಬಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

    ಲೇವಾದೇವಿ ಬಗ್ಗೆ ಸುಗ್ರೀವಾಜ್ಞೆ ಕುರಿತು ಪ್ರತಿಕ್ರಿಯಿಸಿ, ಖಾಸಗಿ ಲೇವಾದೇವಿ ವ್ಯವಹಾರಗಳಲ್ಲಿ ನಾವು ಬಹಳ ಜನ ರೈತರನ್ನು ರಕ್ಷಣೆ ಮಾಡಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮೈತ್ರಿ ಸರ್ಕಾರ ಈ ನಿರ್ಧಾರಕ್ಕೆ ಕೈ ಹಾಕಿದೆ. ಲೇವಾದೇವಿ ಸುಗ್ರೀವಾಜ್ಞೆ ಕುರಿತು ಚರ್ಚೆಯ ಬಳಿಕವೇ ನಿರ್ಧಾರ ಕೈಗೊಂಡಿದ್ದೇವೆ. ಇದಕ್ಕೆ ಸರ್ಕಾರ ಹಾಗೂ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಂಪೂರ್ಣ ತೀರ್ಮಾನದ ನಂತರ ಕೇಂದ್ರ ಸರ್ಕಾರಕ್ಕೆ ಸದನದ ನಿರ್ಧಾರವನ್ನು ಕಳುಹಿಸಿಕೊಟ್ಟಿದ್ದೇವೆ ಎಂದರು.  ಇದನ್ನೂ ಓದಿ: ರೈತರ ಖಾಸಗಿ ಸಾಲವೂ ಮನ್ನಾ- ಯಾರದ್ದು ಆಗುತ್ತೆ? ಯಾರದ್ದು ಆಗಲ್ಲ?

    ರಾಷ್ಟ್ರೀಕೃತ ಬ್ಯಾಂಕುಗಳು ದೊಡ್ಡ ದೊಡ್ಡ ಉದ್ಯಮಿಗಳು ಹಾಗೂ ವ್ಯಾಪಾರಿಗಳ ಸಾಲವನ್ನು ಒಂದೇ ದಿನದಲ್ಲಿ ಮನ್ನಾ ಮಾಡುತ್ತಾರೆ. ಆದರೆ ರೈತರ ಸಾಲವನ್ನು ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಕೂಡಲೇ ಏಕಮುಖದಲ್ಲಿ ಮನ್ನಾ ಮಾಡಿ, ಆ ಹಣವನ್ನು ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ ತೀರಿಸುತ್ತದೆ ಎಂದು ಹೇಳಿದರು.

    ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ, ಅವರು ಪ್ರವಾಸ ಕೈಗೊಳ್ಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಈಗಾಗಲೇ ಅವರುಗಳು ನೆರೆ ಪೀಡಿತ ಭಾಗಗಳಲ್ಲಿ ಪರೀಕ್ಷಿಸಿ ಏನೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತೋ ಅದನ್ನೇಲ್ಲಾ ಮಾಡಿದ್ದಾರೆ. ಅವರು ಹೋಗುತ್ತಿರುವುದು ಅಕ್ಕ ಸಮ್ಮೇಳನಕ್ಕೆ, ನನಗೂ ಸಹ ಆಹ್ವಾನ ಬಂದಿತ್ತು, ಆದರೆ ಕಾರಣಾಂತರಗಳಿಂದ ತೆರಳಲು ಸಾಧ್ಯವಾಗಿಲ್ಲ. ಈ ಮೊದಲು ಎಷ್ಟೋ ಸಿಎಂಗಳು ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಂಡಿಲ್ಲವೇ ಎಂದು ಪ್ರಶ್ನಿಸಿದರು.

    ಈ ವೇಳೆ ಕೊಡಗು ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‍ರವರನ್ನು ಕೊಂಡಾಡಿದ ಅವರು, ಸಚಿವರು ತುಂಬಾ ಅದ್ಭುತ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದ್ದಾರೆ, ಅಲ್ಲೇ ಉಳಿದು ಗಟ್ಟಿಯಾಗಿ ನಿಂತು ಕೆಲಸ ಕಾರ್ಯಗಳನ್ನು ನೋಡಿಕೊಂಡಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈತ್ರಿ ಸರ್ಕಾರದ ಸಂಪುಟ ಸಭೆ- ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರ ಕೊಡುತ್ತಾ ಸಿಹಿ ಸುದ್ದಿ?

    ಮೈತ್ರಿ ಸರ್ಕಾರದ ಸಂಪುಟ ಸಭೆ- ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರ ಕೊಡುತ್ತಾ ಸಿಹಿ ಸುದ್ದಿ?

    ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆ ಬರುವ ಸಾಧ್ಯತೆಗಳಿವೆ. ಅಲ್ಲದೇ ರಾಜ್ಯದ ರೈತರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಲಿದೆ ಎನ್ನಲಾಗಿದೆ.

    ಈಗಾಗಲೇ ಸಹಕಾರ ಬ್ಯಾಂಕ್‍ಗಳಲ್ಲಿನ ರೈತರ ಸಾಲಮನ್ನಾ ಮಾಡಿರುವ ಸರ್ಕಾರ, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಸಾಲವನ್ನೂ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲಮನ್ನಾಕ್ಕೆ ಸಮ್ಮತಿ ಸಿಗಲಿದೆ ಎನ್ನಲಾಗಿದೆ. ಇದರ ಜೊತೆಗೆ, ಕೊಡಗಿನ ನೆರೆ ಸಂತ್ರಸ್ತರಿಗೆ ಪರಿಹಾರ, ಪುನರ್ ನಿರ್ಮಾಣದ ಅನುದಾನದ ಬಗ್ಗೆಯೂ ಘೋಷಣೆಯಾಗುವ ಸಾಧ್ಯತೆ ಇದೆ.

    ಇತ್ತ ಕೇರಳ ರಾಜ್ಯ ಸರ್ಕಾರ ಪ್ರವಾಹದಲ್ಲಿ ಸಿಲುಕಿರುವ ಅಲ್ಲಿನ ಸಂತ್ರಸ್ತರ ಸಹಾಯಕ್ಕೆ ಬಂದಿದ್ದು, ಸಿಎಂ ಪಿಣರಾಯಿ ವಿಜಯನ್ ಪ್ರವಾಹ ಸಂತ್ರಸ್ತರಿಗೆ 1 ಲಕ್ಷ ರೂ. ವರೆಗೂ ಬಡ್ಡಿ ರಹಿತ ಸಾಲ ಘೋಷಣೆ ಮಾಡಿದ್ದಾರೆ. ಕುಟುಂಬದ ಒಬ್ಬರಿಗೆ 1 ಲಕ್ಷ ರೂ. ಇದು ಅನ್ವಯವಾಗಲಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅನುಕೂಲವಾಗಲಿದೆ. ಇದರೊಂದಿಗೆ ಸದ್ಯ ರಾಜ್ಯ ಸರ್ಕಾರದ ಮೇಲೂ ನಿರೀಕ್ಷೆ ಹೆಚ್ಚಾಗಿದ್ದು, ಕೊಡಗಿನ ಪ್ರವಾಹ ಸಂತ್ರಸ್ತರಿಗೂ ಬಡ್ಡಿ ರಹಿತ ಘೋಷಣೆ ಮಾಡಿ ಸರ್ಕಾರ ನೆರವು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ನಾಳೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ- ಯಾವ ಬ್ಯಾಂಕ್ ಇರುತ್ತೆ, ಯಾವುದು ಇರಲ್ಲ?

    ನಾಳೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ- ಯಾವ ಬ್ಯಾಂಕ್ ಇರುತ್ತೆ, ಯಾವುದು ಇರಲ್ಲ?

    ನವದೆಹಲಿ: ಮಂಗಳವಾರದಂದು ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‍ಗಳು ಬಂದ್‍ಗೆ ಕರೆ ನೀಡಿವೆ.

    ಎಸ್‍ಬಿಐ ಜೊತೆ ಸಹವರ್ತಿ ಬ್ಯಾಂಕ್‍ಗಳ ವಿಲೀನಕ್ಕೆ ವಿರೋಧಿಸಿ, ನೋಟು ನಿಷೇಧದಿಂದ ಬ್ಯಾಂಕ್‍ಗಳಿಗೆ ನಷ್ಟವಾದ ವೆಚ್ಚ ಭರಿಸುವಂತೆ ಹಾಗೂ ಸೇವಾಭದ್ರತೆ ಸೇರಿದಂತೆ ಸುಮಾರು 30 ಬೇಡಿಕೆಗಳನ್ನು ಮುಂದಿಟ್ಟು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಂಗಳವಾರಂದು ಬಂದ್‍ಗೆ ಕರೆ ನೀಡಿದೆ. ದೇಶದಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚಿನ ಬ್ಯಾಂಕ್ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

    ದೇಶದ್ಯಾಂತ ಬ್ಯಾಂಕ್‍ಗಳು ಮುಷ್ಕರ ನಡೆಸಲು ನಿರ್ಧರಿಸಿರುವುದರಿಂದ, ಬ್ಯಾಂಕಿಂಗ್ ಸೇವೆ ಬಹುತೇಕ ಸ್ತಬ್ಧವಾಗಲಿದ್ದು, ಎಟಿಎಂನಲ್ಲಿ ಸೇವೆಯಲ್ಲೂ ವ್ಯತ್ಯಯ ಉಂಟಾಗಲಿದೆ.

    ಯಾವ ಬ್ಯಾಂಕ್‍ಗಳು ಇರಲ್ಲ?: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಐಡಿಬಿಐ ಬ್ಯಾಂಕ್, ಎಸ್‍ಬಿಐ, ಎಸ್‍ಬಿಎಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್ ಸೇರಿದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‍ಗಳು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಈ ಬ್ಯಾಂಕ್‍ಗಳ ಸೇವೆ ನಾಳೆ ಇರುವುದಿಲ್ಲ.

    ಯಾವ ಬ್ಯಾಂಕ್‍ಗಳು ಇರುತ್ತೆ?: ಐಸಿಐಸಿಐ, ಹೆಚ್‍ಡಿಎಫ್‍ಸಿ, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹಿಂದ್ರ ಸೇರಿದಂತೆ ಖಾಸಗಿ ಬ್ಯಾಂಕ್‍ಗಳು ನಾಳೆ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.