Tag: ರಾಷ್ಟ್ರೀಯ ಕಾಂಗ್ರೆಸ್

  • ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಭಾನುವಾರ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ರಾಹುಲ್‌ಗಾಂಧಿ ಆಗಾಗ್ಗೆ ವಿದೇಶಿ ಪ್ರವಾಸ ಕೈಗೊಳ್ಳುವುದು ಸಹಜ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಗೈರಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

    ಪಕ್ಷದ ಅಧ್ಯಕ್ಷರ ಆಯ್ಕೆಯ ಬಗ್ಗೆಯೇ ಕಾಂಗ್ರೆಸ್ ಗುರುವಾರ ಸಭೆ ಆಯೋಜನೆ ಮಾಡಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ. ಈ ಸಂದರ್ಭದಲ್ಲಿ ಪಕ್ಷದ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಭೆ ಮುಖ್ಯವಾಗಿದೆ. ಆದರೂ ರಾಹುಲ್ ಈ ಸಭೆಗೆ ಗೈರಾಗುತ್ತಿದ್ದಾರೆ. ಅಧ್ಯಕ್ಷೀಯ ಹುದ್ದೆಯನ್ನು 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ತ್ಯಜಿಸಿದ್ದ ರಾಹುಲ್ ಗಾಂಧಿ, ಮತ್ತೆ ಈ ಹುದ್ದೆಯನ್ನು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

    11 ಕಾಂಗ್ರೆಸ್ ಸದಸ್ಯರ ಬಲ ಹೊಂದಿರುವ ಗೋವಾದಲ್ಲಿ ಹಿರಿಯ ನಾಯಕರು ಬಂಡಾಯ ಏಳಲು ಮುಂದಾಗಿದ್ದಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಆದರೂ ಈವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಾಗಲಿ, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಗುರುವಾರ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ, ಅಕ್ಟೋಬರ್ 2ರಂದು ಆರಂಭಿಸಲಿರುವ `ಭಾರತ್ ಜೋಡೋ ಯಾತ್ರಾ’ ಅಥವಾ ಭಾರತವನ್ನು ಒಗ್ಗೂಡಿಸುವ ಯಾತ್ರೆಯ ಯೋಜನೆ ರೂಪಿಸುವ ಕುರಿತು ಸಹ ಚರ್ಚಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಗೈರು, ನಾಯಕತ್ವದ ಪ್ರಶ್ನೆ ಕುರಿತಾದ ಊಹಾಪೋಹಗಳನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ. ಜಾರಿ ನಿರ್ದೇಶನಾಲಯವು (ED) ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.

    ಕಳೆದ ತಿಂಗಳಿನಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಿತ್ತು. ಇದೇ ವೇಳೆ ಸೋನಿಯಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. 75 ವರ್ಷ ವಯಸ್ಸಿನ ಸೋನಿಯಾರಿಗೆ ಕೋವಿಡ್‌ನಿಂದಾಗಿ ವೈದ್ಯರು ಮನೆಯಲ್ಲಿ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಶ್ವಾಸಕೋಶ ಸೋಂಕಿಗೆ ತುತ್ತಾಗಿದ್ದ ಸೋನಿಯಾ ಗಾಂಧಿ ಅವರು ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ 9,500 ಕೆಜಿ ಕಂಚಿನ ರಾಷ್ಟ್ರೀಯ ಲಾಂಛನ ಅನಾವರಣ – ಏನಿದರ ವಿಶೇಷ?

    ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್

    ಏನಿದು ಪ್ರಕರಣ? 
    ಜವಹರಲಾಲ್ ನೆಹರೂ ಅವರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಎಂಬ ಸಂಸ್ಥೆ ಪ್ರಕಟಿಸುತ್ತಿತ್ತು. ಈ ಸಾರ್ವಜನಿಕ ಸಂಸ್ಥೆಯನ್ನು ರಾಹುಲ್ ಗಾಂಧಿ ನಿರ್ದೇಶಕರಾಗಿರುವ ಯಂಗ್ ಇಂಡಿಯಾ ಲಿಮಿಟೆಡ್ ಖಾಸಗಿ ಸಂಸ್ಥೆಯು ಖರೀದಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಗಾಂಧಿನಗರ: ಈಚೆಗಷ್ಟೇ ಕಾಂಗ್ರೆಸ್‌ ಪಕ್ಷ ತೊರೆದ ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್, ಸತತವಾಗಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸುತ್ತಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಅಯೋಧ್ಯೆಯಲ್ಲಿ ಶತಮಾನಗಳ ನಂತರ ಭಗವಾನ್ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಕೀಳು ಭಾವನೆಯ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಶ್ರೀರಾಮ ಮತ್ತು ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ ಎಂದೂ ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಯಾವಾಗಲೂ ಹಿಂದೂಗಳ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಹಿಂದೆಯೂ ನಾನು ಇದನ್ನೇ ಹೇಳಿದ್ದೆ. ಹಾಗಾಗಿ ರಾಮಮಂದಿರವನ್ನು ಶೀಘ್ರವಾಗಿ ನಿರ್ಮಿಸಬೇಕೆಂದು ಬಯಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಸಾಮಾಜಿಕ ಜಾಲತಾಣದಲ್ಲಿ ಟಾರ್ಗೆಟ್: ಸದ್ಯ ಹಾರ್ದಿಕ್ ಪಟೇಲ್ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದ್ದು, ಹೇಳಲು ಇನ್ನೇನೂ ಉಳಿದಿಲ್ಲ ಎಂದು ಟ್ವೀಟ್ ಮಾಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವರು `ಹಾರ್ದಿಕ್ ಭಾಯ್, ನೀವು ತುಂಬಾ ವೇಗವಾಗಿ ಬದಲಾಗುತ್ತೀರಿ ಅಂದುಕೊಂಡಿರಲಿಲ್ಲ. ನೀವು ಕಪಿಲ್ ಮಿಶ್ರಾ ಆಗಲು ಬಯಸುತ್ತೀರೆಂದು ನಾನು ಒಪ್ಪುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಹಾರ್ದಿಕ್ ಪಟೇಲ್ ಅವರು ಇದೇ ಮೇ 18 ರಂದು ಕಾಂಗ್ರೆಸ್ ಪಕ್ಷದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಪಕ್ಷವು ಕೇವಲ ಪ್ರತಿಭಟನೆಯ ರಾಜಕೀಯಕ್ಕೆ ಸೀಮಿತವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಹಂಚಿಕೊಂಡಿದ್ದರು.

  • ನೈಟ್‌ಕ್ಲಬ್ ಪಾರ್ಟಿಯಲ್ಲಿ ರಾಹುಲ್ – ವೀಡಿಯೋ ಫುಲ್ ವೈರಲ್

    ನೈಟ್‌ಕ್ಲಬ್ ಪಾರ್ಟಿಯಲ್ಲಿ ರಾಹುಲ್ – ವೀಡಿಯೋ ಫುಲ್ ವೈರಲ್

    ಕಠ್ಮಂಡು: ಇಲ್ಲಿನ ಕಠ್ಮಂಡುವಿನ ವರ್ಲ್ಡ್‌ಕ್ಲಾಸ್‌ ನೈಟ್‌ಕ್ಲಬ್ ಪಾರ್ಟಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದ್ದಾರೆ.

    ಪ್ರಮುಖ ರಾಜಕೀಯ ವಿದ್ಯಮಾನಗಳ ನಡುವೆ ಸದಾ ಬ್ಯುಸಿ ಶೆಡ್ಯೂಲ್‌ನಲ್ಲಿರುವ ರಾಹುಲ್‌ಗಾಂಧಿ ಈ ನಡುವೆಯೂ ಪಾರ್ಟಿಮೂಡ್‌ನಲ್ಲಿ ಕಾಣಿಸಿಕೊಂಡಿದ್ದು ಟೀಕೆಗೆ ಗುರಿಯಾಗಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರೊಟ್ಟಿಗೆ ಎಂಜಾಯ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    ಈ ವಿಡಿಯೋವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ, `ಯಾರು? ಅವರು ಯಾರು?’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ರಾಹುಲ್ ಗಾಂಧಿ ಮುಂಬೈ ಮೇಲೆ ದಾಳಿ ನಡೆದಾಗಲೂ ನೈಟ್‌ಕ್ಲಬ್‌ನಲ್ಲಿದ್ದರು. ಅವರ ಪಕ್ಷ ಸ್ಫೋಟಗೊಳ್ಳುತ್ತಿರುವ ಸಮಯದಲ್ಲೂ ನೈಟ್‌ಕ್ಲಬ್‌ನಲ್ಲಿದ್ದಾರೆ ಎಂದು ಕಾಲೆಳೆದಿದ್ದಾರೆ. ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ನೇಪಾಳಕ್ಕೆ ಆಗಮಿಸಿದ್ದರು.