Tag: ರಾಷ್ಟ್ರ ಪ್ರಶಸ್ತಿ

  • ಮೈಸೂರಿನ ವಿಜ್ಞಾನ ಶಿಕ್ಷಕ ಮಧುಸೂದನ್‌ಗೆ ರಾಷ್ಟ್ರ ಪ್ರಶಸ್ತಿ

    ಮೈಸೂರಿನ ವಿಜ್ಞಾನ ಶಿಕ್ಷಕ ಮಧುಸೂದನ್‌ಗೆ ರಾಷ್ಟ್ರ ಪ್ರಶಸ್ತಿ

    ಮೈಸೂರು: ಜಿಲ್ಲೆಯ ವಿಜ್ಞಾನ ಶಿಕ್ಷಕ ಕೆ.ಎಸ್‌.ಮಧುಸೂದನ್‌ (Madhusudan) ಅವರಿಗೆ ಈ ಬಾರಿಯ  ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (National Teachers’ Award) ಬಂದಿದೆ.

    ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯಲ್ಲಿ ಮಧುಸೂದನ್ ವಿಜ್ಞಾನ ಶಿಕ್ಷಕರಾಗಿದ್ದಾರೆ. ವರ್ಚುಯಲ್ ರಿಯಾಲಿಟಿ, ಕೃತಕ ಬುದ್ಧಿಮತ್ತೆ, ರೋಬೊಟಿಕ್ಸ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದು ಸರ್ಕಾರಿ ಶಾಲೆ ಬಲವರ್ಧನೆಗೆ ಪಣತೊಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ.

    ಕೆ.ಎಸ್‌.ಮಧುಸೂದನ್‌ ನವೋದಯ ಶಾಲೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ ನವೋದಯ ಶಾಲೆಯಲ್ಲಿ ಸಿಗುವ ರಾಷ್ಟ್ರಮಟ್ಟದ ಶಿಕ್ಷಣ ರಾಜ್ಯಮಟ್ಟದ ಶಾಲೆಗಳಿಗೂ ಸಿಗಬೇಕೆಂದು ಪಣ ತೊಟ್ಟಿದ್ದಾರೆ. ಈ ಬಾರಿ ದೇಶದ 45 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಬಂದಿದ್ದು ಇದರಲ್ಲಿ ರಾಜ್ಯದಿಂದ ಆಯ್ಕೆಯಾದ ಏಕೈಕ ಶಿಕ್ಷಕ ಮಧುಸೂದನ್‌ ಆಗಿರುವುದು ವಿಶೇಷ. ಇದನ್ನೂ ಓದಿ: 99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

    ಸರ್ಕಾರಿ ಶಾಲೆಯಲ್ಲಿ ಅತ್ಯಾಧುನಿಕ ಲ್ಯಾಬ್ ರೂಪಿಸಿದ್ದು ಹಿನಕಲ್ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5 ರಿಂದ 7ನೇ ತರಗತಿವರೆಗಿನ ಮಕ್ಕಳಿಗಾಗಿ ಒಂದು ವಿಜ್ಞಾನ ಲ್ಯಾಬ್‌ ನಿರ್ಮಾಣ ಮಾಡಿದ್ದಾರೆ.

    ಬೇಸಿಕ್‌ ಎಲೆಕ್ಟ್ರಾನಿಕ್ಸ್‌ ಕಲಿಕೆ, ಲರ್ನಿಂಗ್‌ ಮ್ಯಾನೇಜ್‌ಮೆಂಟ್‌, ಇಂಗ್ಲಿಷ್‌ ಶಿಕ್ಷಣ, ಕೃತಕ ಬುದಿಮತ್ತೆ, ರೋಬೊಟಿಕ್ಸ್‌ ತಂತ್ರಜ್ಞಾನದ ಶಿಕ್ಷಣ, 1 ಮತ್ತು 2ನೇ ತರಗತಿ ಮಕ್ಕಳಿಗೆ ಪ್ರೊಜೆಕ್ಟರ್‌ ಮೂಲಕ ಸ್ಮಾರ್ಟ್‌ ಕ್ಲಾಸ್‌. ಕ್ಯೂಆರ್‌ ಕೋಡ್‌ ಮತ್ತು ಸ್ಕ್ಯಾ‌ನರ್‌ ಬಳಸಿ ಮಕ್ಕಳ ದಾಖಲಾತಿ ನಮೂದು, ಮಕ್ಕಳ ಹಾಜರಾತಿ ಮಾಹಿತಿಯು ಪಾಲಕರ ಮೊಬೈಲ್‌ಗೆ ರವಾನೆ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ವೆಬ್‌ಸೈಟ್‌ ಮುಖಾಂತರ ಪಡೆದುಕೊಳ್ಳುವ ರೀತಿಯಲ್ಲಿ ಮಧುಸೂದನ್‌ ಸಾಫ್ಟ್‌ವೇರ್‌ ಅಭಿವೃದ್ಧಿ ಮಾಡಿದ್ದಾರೆ.

  • 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್‌ಆರ್‌ಟಿಸಿ

    3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್‌ಆರ್‌ಟಿಸಿ

    ಬೆಂಗಳೂರು: ಭಾರತದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ(ASRTU) ನೀಡುವ 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ಕೆಎಸ್‌ಆರ್‌ಟಿಸಿಗೆ ಲಭಿಸಿವೆ.

    ಕೆಎಸ್‌ಆರ್‌ಟಿಸಿಗೆ ಅಶ್ವಮೇಧ ಬ್ರ್ಯಾಂಡಿಂಗ್‌ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ 3 ಪ್ರಶಸ್ತಿಗಳು ಲಭಿಸಿದೆ. ಇದನ್ನೂ ಓದಿ: ‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಡಾ.ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ.ಹೆಚ್, ಕಲ್ಯಾಣಾಧಿಕಾರಿ ರಾಧ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಭಾಆಸೇ, ನಿರ್ವಾಹಕ ನಿರ್ದೇಶಕರಾದ ಸೂರ್ಯಕಿರಣ್ ಉಪಸ್ಥಿತರಿದ್ದರು. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಕೇರಳಾಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

    ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಒಕ್ಕೂಟವು 1965 ಆ. 13ರಂದು ಅಸ್ತಿತ್ವಕ್ಕೆ ಬಂದಿದೆ. ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

  • ರಾಷ್ಟ್ರ ಪ್ರಶಸ್ತಿಯನ್ನು ದೈವದ ಪಾದಕ್ಕೆ ಅರ್ಪಿಸುತ್ತೇನೆ: ರಿಷಬ್‌ ಶೆಟ್ಟಿ

    ರಾಷ್ಟ್ರ ಪ್ರಶಸ್ತಿಯನ್ನು ದೈವದ ಪಾದಕ್ಕೆ ಅರ್ಪಿಸುತ್ತೇನೆ: ರಿಷಬ್‌ ಶೆಟ್ಟಿ

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ವಾಪಸ್ ಆಗಿದ್ದಾರೆ. ಅವರಿಗೆ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ. ಈ ವೇಳೆ, ಅವರು ದೈವರಾಧನೆಯ ಬಗ್ಗೆ ಮಾತನಾಡಿದ್ದಾರೆ. ದೈವದ ಆಶೀರ್ವಾದ ಇಲ್ಲದೇ ಇದ್ದರೆ ನಾವು ಹೋಗಲು ಸಾಧ್ಯವೇ ಇರಲಿಲ್ಲ ಎಂದು ರಿಷಬ್ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸಂಜು ವೆಡ್ಸ್ ಗೀತಾ 2 : ಮಂಗ್ಲಿ ಹಾಡಿಗೆ ಸೊಂಟ ಬಳುಕಿಸಿದ ರಾಗಿಣಿ


    ರಿಷಬ್ ಶೆಟ್ಟಿ ಮಾತನಾಡಿ, ನ್ಯಾಷನಲ್ ಅವಾರ್ಡ್ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. ಈ ಚಿತ್ರವು ದೈವದ ಬಗ್ಗೆ ಹಾಗೂ ದೈವ ನರ್ತಕರ ಸಮುದಾಯದ ಬಗ್ಗೆ ಇರುವ ಸಿನಿಮಾವಾಗಿದೆ. ನ್ಯಾಷನಲ್ ಅವಾರ್ಡ್ ಕ್ರೆಡಿಟ್ ಅನ್ನು ದೈವ ನರ್ತಕ ಸಮುದಾಯಕ್ಕೆ ಸೇರಬೇಕು. ದೈವದ ಆಶೀರ್ವಾದ ಇಲ್ಲದೇ ಇದ್ದರೆ ನಾವು ಈ ಮಟ್ಟಕ್ಕೆ ಹೋಗಲು ಸಾಧ್ಯವೇ ಇರಲಿಲ್ಲ. ದೈವದ ಆಶೀರ್ವಾದದಿಂದ ಕಾಂತಾರ ಚಿತ್ರ ಇಲ್ಲಿ ತನಕ ಬಂದಿದೆ. ಈ ಪ್ರಶಸ್ತಿಯನ್ನು ದೈವದ ಪಾದಕ್ಕೆ ಸಲ್ಲಿಸುತ್ತೇನೆ ಎಂದು ಮಾತನಾಡಿದ್ದಾರೆ. ‘ಕಾಂತಾರ’ ಸಿನಿಮಾ ಮಾಡುವಾಗ ಅವಾರ್ಡ್ ಬರುತ್ತೆ ಎಂದು ಅಂದುಕೊಂಡಿರಲಿಲ್ಲ. ಎಲ್ಲಾ ಅಭಿಮಾನಿಗಳ ಪ್ರೀತಿಯಿಂದ ಸಾಧ್ಯವಾಗಿದೆ ಎಂದಿದ್ದಾರೆ.

    ಈ ವೇಳೆ, ಕಾಂತಾರ ಚಾಪ್ಟರ್ 1ರ (Kantara Chapter 1) ಬಗ್ಗೆ ಮಾತನಾಡಿ, ಕಾಂತಾರ ಶೂಟಿಂಗ್ ನಡೆಯುತ್ತಿದೆ. ಆದಷ್ಟು ಬೇಗ ನಿರ್ಮಾಪಕರು ರಿಲೀಸ್ ಡೇಟ್ ಅನೌನ್ಸ್ ಮಾಡುತ್ತಾರೆ. ‘ಕಾಂತಾರ 1’ ಬಹಳ ಚೆನ್ನಾಗಿ ಮೂಡಿ ಬರುತ್ತಿದೆ. ಈ ಹಿಂದೆ ‘ಕಾಂತಾರ’ ಚಿತ್ರ ನೋಡಿ ಅದೆಷ್ಟು ಹೆಮ್ಮೆಪಟ್ಟಿದ್ದೀರೋ ಚಿತ್ರದ ಪ್ರೀಕ್ವೆಲ್‌ಗೆ ಅದಕ್ಕಿಂತ ಹೆಚ್ಚು ಹೆಮ್ಮೆ ಪಡುತ್ತೀರಾ ಎಂದಿದ್ದಾರೆ.

    ‘ಕಾಂತಾರ’ ಮಂಗಳೂರಿನಲ್ಲಿ ಶುರುವಾದ ಸಿನಿಮಾ ಆಗಿದೆ. ಪ್ರಶಸ್ತಿ ತಗೊಂಡು ಇಲ್ಲಿಗೆ ಬರುವ ರೀತಿ ಆಗಿದೆ. ಇದು ನನ್ನ ಪುಣ್ಯ ಎಂದು ಭಾವಿಸುತ್ತೇನೆ. ಇಲ್ಲಿಯೇ ಕಥೆ ಶುರುವಾಗಿದ್ದು, ಪ್ರಶಸ್ತಿಯೂ ಇಲ್ಲಿಗೆ ಬಂದಿದೆ ಎಂದಿದ್ದಾರೆ. ಕಾಂತಾರದ ಇಡೀ ತಂಡವಾಗಿ ನಾವು ಕುಂದಾಪುರದಲ್ಲಿ ನೆಲೆಸಿದ್ದೇವೆ. ಈ ಪ್ರಶಸ್ತಿಯನ್ನ ದೈವಕ್ಕೆ, ದೈವ ನರ್ತಕರಿಗೆ ಹಾಗೂ ಅಪ್ಪು ಸರ್‌ಗೆ ಸಮರ್ಪಿಸುತ್ತೇನೆ. ಯಾವ ಮೂಲದಿಂದ ಬಂದಿದ್ದೇವೋ ಅದನ್ನ ಮರೆಯಬಾರದು ಎಂದು ರಿಷಬ್ ಸ್ಮರಿಸಿದ್ದಾರೆ. ಈ ಪ್ರಶಸ್ತಿಯನ್ನ ದೈವದ ಪಾದಕ್ಕೆ ಇಟ್ಟು ನನ್ನ ಕೆಲಸ ಮುಂದುವರೆಸುತ್ತೇನೆ ಎಂದಿದ್ದಾರೆ.

  • ಡಿಫ್ರೆಂಟ್ ಕಂಟೆಂಟ್ ಚಿತ್ರ ದೇಶಕ್ಕೆ ಇಷ್ಟ ಆಗಿದೆ: ಮಾನಸಿ ಸುಧೀರ್

    ಡಿಫ್ರೆಂಟ್ ಕಂಟೆಂಟ್ ಚಿತ್ರ ದೇಶಕ್ಕೆ ಇಷ್ಟ ಆಗಿದೆ: ಮಾನಸಿ ಸುಧೀರ್

    ಉಡುಪಿ: ಡಿಫ್ರೆಂಟ್ ಕಂಟೆಂಟ್ ಚಿತ್ರ ದೇಶಕ್ಕೆ ಇಷ್ಟ ಆಗಿದೆ. ಸಿಕ್ಕಿರುವಂತ ಪ್ರಶಸ್ತಿಗಳಿಗೆ ಈಗ ಕಿರೀಟ ಸಿಕ್ಕಿದೆ. ವರಮಹಾಲಕ್ಷ್ಮಿ ಹಬ್ಬದ ದಿನ ಶುಭಸುದ್ದಿ ಬಂದಿದೆ ಎಂದು ಉಡುಪಿಯಲ್ಲಿ ಕಾಂತಾರ ನಟಿ ಮಾನಸಿ ಸುಧೀರ್ ಹೇಳಿಕೆ ನೀಡಿದ್ದಾರೆ.

    ಕಾಂತಾರ (Kantara) ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿ (70th National Award) ಬಂದಿರುವ ಸಂತೋಷವನ್ನು ಚಿತ್ರದ ನಾಯಕ `ಶಿವ’ನ ತಾಯಿ `ಕಮಲ’ ಪಾತ್ರಧಾರಿ ಮಾನಸಿ ಸುಧೀರ್ (Manasi Sudhir) ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಈ ಅವಾರ್ಡನ್ನು ಕನ್ನಡದ ಜನತೆ ಮತ್ತು ದೈವನರ್ತಕರಿಗೆ ಸಲ್ಲಿಸಿದ್ದಾರೆ. ಇಂದು ಬಹಳ ಖುಷಿ ಮತ್ತು ಹೆಮ್ಮೆಪಡುವ ದಿನ ಎಂದರು. ಇದನ್ನೂ ಓದಿ: ಪ್ರಶಸ್ತಿಯನ್ನು ಪುನೀತ್‌ ರಾಜ್‌ಕುಮಾರ್‌, ದೈವಕ್ಕೆ, ದೈವ ನರ್ತಕರಿಗೆ ಅರ್ಪಣೆ ಮಾಡುತ್ತೇನೆ- ರಿಷಬ್ ಶೆಟ್ಟಿ

    ಶೂಟಿಂಗ್ ದಿನಗಳನ್ನು ಮೆಲುಕುಹಾಕುತ್ತಾ ಮಾತನಾಡಿದ ಅವರು, 40 ದಿನ ಚಿತ್ರದ ಸೆಟ್ಟಿನಲ್ಲಿದ್ದೆ. ಆ ಎಲ್ಲಾ ಕ್ಷಣಗಳು ಕಣ್ಣ ಮುಂದೆ ಬಂತು. ರಿಷಬ್ ವಿಭಿನ್ನ ನಿರ್ದೇಶನ, ನಟನೆ ಮತ್ತು ಪ್ಯಾಟರ್ನ್ ಚಿತ್ರಗಳನ್ನು ಕೊಡುತ್ತಾರೆ. ರಿಷಬ್ ಶೆಟ್ಟಿ ಸಿನಿಮಾಗಳು ಮನೋರಂಜನೆಗೆ ಮೋಸಮಾಡಲ್ಲ. ಚಿತ್ರದ ಕ್ಲೈಮ್ಯಾಕ್ಸ್ ಕಣ್ಣಾರೆ ನೋಡಿದ್ದೇನೆ. ಅದೊಂದು ವಿಶೇಷ ಆಕ್ಷನ್, ವಿಶೇಷ ಅನುಭವ. ಕಾಂತಾರದ ಕೊರಿಯೋಗ್ರಫಿ, ಫೈಟ್ ನಿಜಕ್ಕೂ ಅದ್ಭುತ. ಜನರಿಂದ ಸಿಕ್ಕ ಪ್ರತಿಕ್ರಿಯೆ ಮತ್ತು ಪ್ರೀತಿ ಬಹಳ ದೊಡ್ಡದು. ದೇಶ ವಿದೇಶದಿಂದಲೂ ಈ ಚಿತ್ರಕ್ಕೆ ಮೆಚ್ಚುಗೆ ಬಂದಿದೆ. ಚಿತ್ರ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಿಗೂ ಕನೆಕ್ಟ್ ಆಗುತ್ತದೆ ಎಂದರು.  ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?

    ಕಾಂತಾರ ಫ್ರೀಕ್ವೆಲ್ ಕುತೂಹಲದ ಬಗ್ಗೆ ನಾನೇನು ಹೇಳುವುದಿಲ್ಲ. ಕುತೂಹಲ ಯಾವತ್ತೂ ಹಾಗೆ ಇರಬೇಕು. ಸಿನಿಮಾದ ಮಾರ್ಕೆಟಿಂಗ್ ಬಹಳ ಒಳ್ಳೆಯದು. ಕಾಂತಾರ ಪ್ರೀಕ್ವೆಲ್ ಬಗ್ಗೆ ಯಾವುದೇ ಮಾತುಕತೆ ಆಗಲಿಲ್ಲ. ನಾನು ಈವರೆಗೆ ಚಿತ್ರೀಕರಣದಲ್ಲಿ ಸದ್ಯ ಭಾಗಿ ಆಗಿಲ್ಲ. ಮೊದಲ ಅಧ್ಯಾಯದಲ್ಲಿ ನನ್ನ ಜೀವನ ಆಗಿದೆ. ಬಿಫೋರ್ ಕಾಂತರಾ ಆಫ್ಟರ್ ಕಾಂತಾರ ಎಂಬಂತಾಗಿದೆ. ಕನ್ನಡ ಚಿತ್ರರಂಗದಲ್ಲಿ ನನಗೆ ಬಹಳಷ್ಟು ಅವಕಾಶಗಳು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ- ನ್ಯಾಷನಲ್‌ ಅವಾರ್ಡ್‌ ಬಂದಿದ್ದಕ್ಕೆ ಯಶ್‌ ಸಂತಸ

  • ಭಾರತ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ

    ಭಾರತ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ

    ಬೆಂಗಳೂರು: ಭಾರತ ಚುನಾವಣಾ ಆಯೋಗ (Election Commission of India) ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ (Voter’s Day) ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ (National Award) ನಮ್ಮ ರಾಜ್ಯದ (ಕರ್ನಾಟಕ) ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

    2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ (Chitradurga) ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು (Divya Prabhu) ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ.ಸಿ (Shikha C) ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ಬಂದ ಹಣ ನಿದ್ರೆಯಲ್ಲಿರುವ ಸಿದ್ದರಾಮಯ್ಯಗೆ ಕಾಣಿಸುತ್ತಿಲ್ಲ: ಬೊಮ್ಮಾಯಿ

    ದಿವ್ಯಾ ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ. ಇದನ್ನೂ ಓದಿ: ರನ್‌ವೇನಲ್ಲೇ ಕುಳಿತು ಊಟ ಸೇವಿಸಿದ ಪ್ರಯಾಣಿಕರು – ಇಂಡಿಗೋಗೆ 1.2 ಕೋಟಿ ದಂಡ

    ಶಿಖಾ ಅವರು ಕಳೆದ 2023ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ. ಇದನ್ನೂ ಓದಿ: ಅಮಿತ್‌ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್‌ಡಿಕೆ

    ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಇದನ್ನೂ ಓದಿ: ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿಯನ್ನು ಅಭಿನಂದಿಸಿದ ಸಿಎಂ

    ಆಯೋಗ ಪ್ರತಿ ವರ್ಷ ನವದೆಹಲಿಯಲ್ಲಿ ಜನವರಿ 25 ರಂದು ಹಮ್ಮಿಕೊಳ್ಳುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾ ದಿನದಂದು ರಜೆ ನೀಡುವಂತೆ ವಕೀಲರ ಸಂಘ ಮನವಿ

  • ದಿ ಕಾಶ್ಮೀರ್ ಫೈಲ್ಸ್: ರಾಷ್ಟ್ರ ಪ್ರಶಸ್ತಿ ಬಗ್ಗೆ ಅಸಮಾಧಾನ ಹೊರ ಹಾಕಿದ ಅನುಪಮ್ ಖೇರ್

    ದಿ ಕಾಶ್ಮೀರ್ ಫೈಲ್ಸ್: ರಾಷ್ಟ್ರ ಪ್ರಶಸ್ತಿ ಬಗ್ಗೆ ಅಸಮಾಧಾನ ಹೊರ ಹಾಕಿದ ಅನುಪಮ್ ಖೇರ್

    ಮೊನ್ನೆಯಷ್ಟೇ ಕೇಂದ್ರ ಸರಕಾರ 69ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಿತ್ತು. ಈ ಪ್ರಶಸ್ತಿಗಳ ಬಗ್ಗೆ ಬಾಲಿವುಡ್ ನಟ ಅನುಪಮ್ ಖೇರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ (The Kashmir Files) ಚಿತ್ರದ ನಟನೆಗಾಗಿ ತಮಗೆ ರಾಷ್ಟ್ರ ಪ್ರಶಸ್ತಿ (National Award) ಬರಬೇಕಿತ್ತು ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

    ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಚಿತ್ರಕ್ಕೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಸಂದಿದ್ದರೆ, ಈ ಸಿನಿಮಾದ ನಟನೆಗಾಗಿ ಅತ್ಯುತ್ತಮ ಪೋಷಕಿ ನಟಿ ಪ್ರಶಸ್ತಿ ಕೂಡ ಚಿತ್ರ ಪಡೆದುಕೊಂಡಿದೆ. ಆದರೆ, ಅನುಪಮ್ ಖೇರ್ (Anupam Kher) ಅವರಿಗೆ ಈ ಸಿನಿಮಾದ ನಟನೆಗಾಗಿ ಪ್ರಶಸ್ತಿ ಬರಬೇಕಿತ್ತು ಎನ್ನುವುದು ನಟನ ವಾದ.

     

    ದಿ ಕಾಶ್ಮೀರ್ ಫೈಲ್ಸ್  ಸಿನಿಮಾಗೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಬಂದಿರುವುದಕ್ಕೆ ತಮಿಳು ನಾಡು ಮುಖ್ಯಮಂತ್ರಿ ಸ್ಟಾಲಿನ್  ಟೀಕೆ ಮಾಡಿದ್ದರು. ಭಾವೈಕ್ಯತೆಯನ್ನು ಹಾಳು ಮಾಡುವ ಚಿತ್ರಕ್ಕೆ ಅಂಥದ್ದೊಂದು ಪ್ರಶಸ್ತಿ ಕೊಟ್ಟಿರುವುದಕ್ಕೆ ಅವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಕೂಡ ಅಸಮಾಧಾನ ಹೊರ ಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿಯಲ್ಲಿ ಸನ್ಮಾನ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿಯಲ್ಲಿ ಸನ್ಮಾನ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ.  ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮಯ ಸಂಗತಿ.

    ಇಂದು ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗಾಗಿ ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಇದನ್ನೂ ಓದಿ:ಸಿನಿಮಾರಂಗಕ್ಕೆ ಗುಡ್ ಬೈ: ರಾಜಕೀಯ ಅಖಾಡಕ್ಕೆ ರಶ್ಮಿಕಾ ಮಂದಣ್ಣ

    ಪ್ರತಿ ಸಲವೂ ಇಂಥದ್ದೊಂದು ಸಂಪ್ರದಾಯವನ್ನು ವಾಣಿಜ್ಯ ಮಂಡಳಿಯು ಇಟ್ಟುಕೊಂಡು ಬಂದಿದೆ. ಅದನ್ನು ಭಾ.ಮಾ ಹರೀಶ್ ಮತ್ತು ತಂಡ ಮುಂದುವರೆಸಿಕೊಂಡು ಹೋಗುತ್ತಿದೆ. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ 30 ಭಾಷೆಗಳಲ್ಲಿ 400ಕ್ಕೂ ಅಧಿಕ ಸಿನಿಮಾಗಳ ಅರ್ಜಿ ಸಲ್ಲಿಸಿದ್ದವು. ಇಂದು ನವದೆಹಲಿಯಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    1954ರಿಂದ ರಾಷ್ಟ್ರ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈಗ 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಭಾರತ ಸರ್ಕಾರವು ಚಲನಚಿತ್ರೋತ್ಸವ ಜವಬ್ದಾರಿ ಹೊತ್ತುಕೊಂಡಿದೆ. ಕೋವಿಡ್‌ನಿಂದ ರಾಷ್ಟ್ರ ಪ್ರಶಸ್ತಿ ಕಾರ್ಯವನ್ನ ಮುಂದೂಡಲಾಗಿತ್ತು. 2020ರ ಸಾಲಿನಲ್ಲಿ ಸಾಧನೆ ಮಾಡಿದ ಪ್ರತಿಭೆಗೆ ಗುರುತಿಸಿ, ಗೌರವಿಸಲಾಗಿದೆ. ಇದನ್ನೂ ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಚಲನಚಿತ್ರ ನಿರ್ಮಾಪಕರಾದ ವಿಪುಲ್ ಶಾ ಮತ್ತು ಅನುರಾಗ್ ಠಾಕೂರ್ ಅವರನ್ನ ಭೇಟಿ ಮಾಡಿ, 68ನೇ ರಾಷ್ಟ್ರ ಪ್ರಶಸ್ತಿಯ ಕುರಿತು ವರದಿ ಸಲ್ಲಿಸಲಾಯಿತು. ಯಾರಿಗೆಲ್ಲಾ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.

    ಅತ್ಯುತ್ತಮ ಚಲನಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ನಿರ್ದೇಶಕ: ಸಚಿ, ಅಯ್ಯಪ್ಪನಂ ಕೊಶಿಯಮ್

    ಅತ್ಯುತ್ತಮ ಮನರಂಜನೆ ಚಿತ್ರ: ತಾನ್ಹಾಜಿ

    ಅತ್ಯುತ್ತಮ ನಟ: ಸೂರ್ಯ (ಸೂರರೈ ಪೋಟ್ರು)
    ಅಜಯ್ ದೇವಗನ್ ( ತಾನ್ಹಾಜಿ)

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ( ಸೂರರೈ ಪೋಟ್ರು)

    ಅತ್ಯುತ್ತಮ ಪೋಷಕ ನಟಿ: ಬಿಜು ಮೆನನ್( ಅಯ್ಯಪ್ಪನಂ ಕೋಶಿಯಂ)

    Live Tv
    [brid partner=56869869 player=32851 video=960834 autoplay=true]

  • ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕರ್ನಾಟಕದ ಕಲೆಗೆ ಸಂದ ಗೌರವ : ಪವನ್ ಒಡೆಯರ್

    ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕರ್ನಾಟಕದ ಕಲೆಗೆ ಸಂದ ಗೌರವ : ಪವನ್ ಒಡೆಯರ್

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದ, ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿವೆ. ಈ ಸಂಭ್ರಮವನ್ನು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಹಂಚಿಕೊಂಡ ನಿರ್ಮಾಪಕ ಪವನ್ ಒಡೆಯರ್, ರಾಷ್ಟ್ರ ಪ್ರಶಸ್ತಿಯು ಕರ್ನಾಟಕ ಕಲೆಗೆ ಸಂದ ಗೌರವ ಎಂದರು. ಈ ಸಿನಿಮಾವನ್ನು ತಾವು ದುಡ್ಡಿಗಾಗಿ ನಿರ್ಮಾಣ ಮಾಡಲಿಲ್ಲ ಎಂದಿದ್ದಾರೆ.

    ಡೊಳ್ಳು ಸಿನಿಮಾದ ಸ್ಕ್ರಿಪ್ಟ್ ಕೇಳಿದ ತಕ್ಷಣವೇ ನಾನೇ ಈ ಚಿತ್ರವನ್ನು ನಿರ್ಮಾಣ ಮಾಡಬೇಕು ಎಂದುಕೊಂಡೆ. ಇದು ಹಣ ಮಾಡುವುದಕ್ಕಾಗಿ ನಿರ್ಮಾಣ ಮಾಡಿದ ಸಿನಿಮಾವಲ್ಲ. ನನ್ನ ನಾಡಿಗೆ, ನನ್ನ ನಾಡ ಕಲೆಗೆ ನಮ್ಮಿಂದ ಋಣ ಸಂದಾಯ ಅಂದುಕೊಂಡು ಮಾಡಿದ ಚಿತ್ರ. ನನ್ನ ಸಂಸ್ಥೆಯಲ್ಲಿ ನಿರ್ಮಾಣವಾದ ಮೊದಲ ಸಿನಿಮಾ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಡೊಳ್ಳು ಪಡೆದುಕೊಂಡಿದೆ. ಇದೀಗ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದೆ. ಇದು ಸಾರ್ಥಕ ಭಾವ ಎನ್ನುತ್ತಾರೆ ಪವನ್ ಒಡೆಯರ್‍. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಈ ಬಾರಿ ಕನ್ನಡ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಂದಿದ್ದು, ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

    Live Tv
    [brid partner=56869869 player=32851 video=960834 autoplay=true]

  • Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

    ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

    ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

    ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

    ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

    Live Tv
    [brid partner=56869869 player=32851 video=960834 autoplay=true]