Tag: ರಾಷ್ಟ್ರ ಪ್ರಶಸ್ತಿ

  • ರಾಜ್ಯದ ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

    ರಾಜ್ಯದ ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

    ಹೈದರಾಬಾದ್: ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.

    ಹೈದರಾಬಾದ್‍ನಲ್ಲಿ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ವೇಳೆ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್ ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು(ಐಸಿಟಿ) ಬಳಸುವ ವಿಭಾಗಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನಿಶ್ ಮೌದ್ಗಿಲ್ ಸ್ವೀಕರಿಸಿದರು. ಇದನ್ನೂ ಓದಿ:  ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ

    Contact tracing, 24x7 coordination, close watch on the quarantined in COVID-19 War Room in Karnataka | Deccan Herald

    ನಂತರ ಈ ಕುರಿತು ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಗಳಿಗೆ ನಾವು ಸಪೋರ್ಟ್ ನೆಟ್ ವರ್ಕ್ ಆಗಿದ್ದೇವೆ. ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿಯನ್ನು ನೀಡಿ ಜೀವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್ ನಿರ್ವಹಣೆಗೆ ಬೆಂಬಲ ವ್ಯವಸ್ಥಿತವಾಗಿದೆ. ನಾವು ಗಡಿಯಾರದಲ್ಲಿ ಇರುವ ಮುಳ್ಳುಗಳಂತೆ ಕೆಲಸ ಮಾಡುತ್ತಿದ್ದೇವೆ. ಸಾಂಕ್ರಾಮಿಕ ರೋಗದ ಬಳಿಕ ಹೆಚ್ಚಿನ ಸಿಬ್ಬಂದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದು ವಿವರಿಸಿದರು.

    ರಾಜ್ಯಕ್ಕೆ ಮಾರ್ಚ್ 2020 ರಲ್ಲಿ ಮೊದಲ ಅಲೆ ಅಪ್ಪಳಿಸಿತ್ತು. ಈ ಅಲೆ ಆರಂಭವಾದ 2-3 ದಿನಗಳಲ್ಲಿ ವಾರ್ಡ್ ರೂಮ್ ಅನ್ನು ಸ್ಥಾಪಿಸಲಾಗಿತ್ತು. ಈ ವೇಳೆ ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು. ಇಡೀ ಭಾರತದಲ್ಲಿ ಸೋಂಕಿತರ ಸಂಪರ್ಕ ಪತ್ತೆಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಹೆಮ್ಮೆಯಿಂದ ಹೇಳಿದರು.

     

    ಲೈನ್ ಲಿಸ್ಟ್ ಸಿಸ್ಟಮ್ ಎಂದು ಕರೆಯಲ್ಪಡುವ ರೋಗಿಗಳ ನಿರ್ವಹಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ನಮ್ಮ ರಾಜ್ಯವನ್ನೇ ಹರಿಯಾಣವೂ ಅನುಸರಿಸುತ್ತಿದೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಪಾಂಡಿಚೆರಿ ರಾಜ್ಯಪಾಲ ಕಿರಣ್ ಬೇಡಿ ಅವರು ಕೋವಿಡ್ ವಾರ್ ರೂಮ್ ನ್ನು ಸಂಪರ್ಕಿಸಿ, ಸಲಹೆಗಳನ್ನು ಪಡೆದುಕೊಂಡಿದ್ದರು. ಅಲ್ಲಿಗೇ ತಂಡವೊಂದನ್ನು ರವಾನಿಸಿ ಮಾಹಿತಿಯನ್ನು ನೀಡಲಾಗಿತ್ತು. ಇದಾದ ಬಳಿಕ ಪ್ರತೀ ರಾಜ್ಯವೂ ಇದೇ ಮಾರ್ಗವನ್ನು ಅನುಸರಿಸುತ್ತಿವೆ ಎಂದು ತಿಳಿಸಿದರು.

    ಸೋಂಕಿನ ನಿರ್ವಹಣೆಗೆ ಐಟಿಯೊಂದಿಗೆ ವ್ಯವಸ್ಥಿತ ಮತ್ತು ಸಂಘಟಿತ ವಿಧಾನದ ಅಗತ್ಯವಿದೆ. ನವೆಂಬರ್ 2020ರಲ್ಲಿ, ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯವು ವಾರ್ ರೂಮ್ ಅನ್ನು ಪರಿಶೀಲನೆ ಮಾಡಿತ್ತು. ಬಳಿಕ ಕೋವಿಡ್-19 ನಿರ್ವಹಣೆಯಲ್ಲಿ ಕೋವಿಡ್ ವಾರ್ ರೂಮ್ ಅತ್ಯಂತ ಪರಿಣಾಮಕಾರಿ ಎಂದು ಹೇಳಿತ್ತು. ನಮ್ಮ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾದರಿಯನ್ನು ಭಾರತ ಸರ್ಕಾರವು ಜೂನ್-ಜುಲೈ 2020 ರಲ್ಲಿ ಆಯ್ಕೆ ಮಾಡಿತ್ತು. ಅದನ್ನು ಕಾರ್ಯಗತಗೊಳಿಸಲು ಇತರ ರಾಜ್ಯಗಳಿಗೂ ಸೂಚನೆ ನೀಡಿತ್ತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

    ಪ್ರಸ್ತುತ ವಾರ್ ರೂಮ್‍ನಲ್ಲಿ ಸಂಯೋಜಕರು, ತಾಂತ್ರಿಕ ಮತ್ತು ಇತರ ಸಿಬ್ಬಂದಿಯನ್ನು ಹೊರತುಪಡಿಸಿ ಸುಮಾರು 20-30 ಜನರು ಕೆಲಸ ಮಾಡುತ್ತಿದ್ದಾರೆ. ಈಗ ಮೂರನೇ ಅಲೆಯಲ್ಲಿಯೂ ಬಂದಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಮಾಹಿತಿ ಸಂಗ್ರಹಣೆ ಮತ್ತು ವ್ಯವಸ್ಥಿತ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ವಾರ್ ರೂಮ್ ಶ್ರಮಿಸುತ್ತಿದೆ ಎಂದು ತಮ್ಮ ಪರಿಶ್ರಮದ ಬಗ್ಗೆ ತಿಳಿಸಿದರು.

  • ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ಬೆಂಗಳೂರು: ಅಕ್ಷಿ ಸಿನಿಮಾಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದ್ದು, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದ ಗೋವಿಂದೇ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ಗೋವಿಂದ್ ಗೌಡ(ಜಿಜಿ) ಅಕ್ಷಿ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಕನ್ನಡದ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ನಾನು ಆ ಸಿನಿಮಾದಲ್ಲಿ ಅಭಿನಯಿಸಿದ್ದೇನೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯಲು ಪ್ರಮುಖ ಕಾರಣ ಸಿನಿಮಾದ ನಿರ್ದೇಶಕ ಮನೋಜ್ ಕುಮಾರ್. ಹಾಗಾಗಿ ಅವರಿಗೆ ಈ ಕ್ರೆಡಿಟ್ ಸಲ್ಲಬೇಕು. ಸಿನಿಮಾ ಬಗ್ಗೆ ಹೇಳಿದಾಗ ಇಲ್ಲಿಯವರೆಗೂ ಜನರು ನನ್ನನ್ನು ಹಾಸ್ಯದ ಪಾತ್ರಗಳಲ್ಲಿ ಹೆಚ್ಚಾಗಿ ನೋಡಿದ್ದಾರೆ. ಆದರೆ ಅಕ್ಷಿ ಸಿನಿಮಾದಲ್ಲಿ ನನ್ನ ಪಾತ್ರ ಗಂಭೀರ ಪಾತ್ರವಾಗಿದ್ದು, ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಸಿನಿಮಾವನ್ನೂ ಪ್ರಾರಂಭಿಸುವುದಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಿ ಎಂದು ನಿರ್ದೇಶಕರಿಗೆ ಹೇಳಿದ್ದೆ. ಆದರೆ ಅವರು ನನ್ನ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ನೀನು ಈ ಪಾತ್ರವನ್ನು ಮಾಡಲೇಬೇಕು ಎಂದು ಹೇಳಿದ್ದರು. ನಿಜಕ್ಕೂ ಅವರ ಶ್ರಮದಿಂದ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. ಆದರೂ ಕೆಲವರು ಸಿನಿಮಾವನ್ನು ವೀಕ್ಷಿಸಿದ್ದು ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ ಎಂದರು.

    ಸದ್ಯ ಸಿನಿಮಾವನ್ನು ಏಪ್ರಿಲ್‍ನಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸುತ್ತಿದ್ದು, ಮೊದಲ ಬಾರಿಗೆ ಮನೋಜ್‍ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗೋವಿಂದೇ ಗೌಡ, ಇಳಾ ವಿಟ್ಲಾ, ಮಾಸ್ಟರ್ ಮಿಥುನ್, ಮಾಸ್ಟರ್ ಸೌಮ್ಯ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಶ್ರೀನಿವಾಸ್, ರಮೇಶ್ ಬಂಡವಾಳ ಹೂಡಿದ್ದು, ಕಲಾ ದೇಗುಲ ಶ್ರೀನಿವಾಸ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಮುಕುಲ್ ಗೌಡ ಛಾಯಾಗ್ರಹಣ ಸಿನಿಮಾಕ್ಕಿದೆ.

  • ಭಾರತೀಯ ಸೇನೆಗೆ ನನ್ನ ‘ಉರಿ’ ರಾಷ್ಟ್ರಪ್ರಶಸ್ತಿ: ವಿಕ್ಕಿ ಕೌಶಾಲ್

    ಭಾರತೀಯ ಸೇನೆಗೆ ನನ್ನ ‘ಉರಿ’ ರಾಷ್ಟ್ರಪ್ರಶಸ್ತಿ: ವಿಕ್ಕಿ ಕೌಶಾಲ್

    ನವದೆಹಲಿ: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ‘ಉರಿ-ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕಾಗಿ ಬಾಲಿವುಡ್ ನಟ ವಿಕ್ಕಿ ಕೌಶಾಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

    ವಿಕ್ಕಿ ಕೌಶಾಲ್ ಅವರಿಗೆ ಸಾಕಷ್ಟು ಮಂದಿ ಟ್ವಿಟ್ಟರಿನಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ಹೀಗಿರುವಾಗ ನಟ ವಿಕ್ಕಿ ಕೌಶಾಲ್ ಟ್ವೀಟ್ ಮಾಡುವ ಮೂಲಕ ಭಾರತೀಯ ಸೇನೆಗೆ, ನನ್ನ ಪೋಷಕರಿಗೆ ಹಾಗೂ ಉರಿ ಚಿತ್ರತಂಡಕ್ಕೆ ಈ ರಾಷ್ಟ್ರಪ್ರಶಸ್ತಿಯನ್ನು ಡೆಡಿಕೇಟ್ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಟ್ವಿಟ್ಟರಿನಲ್ಲಿ ವಿಕ್ಕಿ ಕೌಶಾಲ್, “ನಾನು ಎಷ್ಟು ಖುಷಿಯಾಗಿದ್ದೇನೆ ಎಂದು ವಿವರಿಸಲು ಪದಗಳು ಕಡಿಮೆ ಆಗಬಹುದು. ನನ್ನ ಕೆಲಸವನ್ನು ಗುರುತಿಸಿ ಗೌರವಾನ್ವಿತ ರಾಷ್ಟ್ರ ಪ್ರಶಸ್ತಿ ನೀಡಿದ ಈ ಕ್ಷಣವನ್ನು ನಾನು ಹಾಗೂ ನನ್ನ ಪೋಷಕರು ಮರೆಯುವುದಿಲ್ಲ. ‘ಉರಿ- ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೆ ನನಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿದ ಎಲ್ಲ ತೀರ್ಪುಗಾರರಿಗೆ ಧನ್ಯವಾದ ತಿಳಿಸಲು ಇಷ್ಟಪಡುತ್ತೇನೆ. ಈ ಪ್ರಶಸ್ತಿಯನ್ನು ನಟ ಆಯುಷ್ಮಾನ್ ಅವರ ಜೊತೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

    ಅಲ್ಲದೆ “ನಾನು ಈ ಪ್ರಶಸ್ತಿಯನ್ನು ನನ್ನ ಪೋಷಕರಿಗೆ, ಉರಿ ಚಿತ್ರತಂಡಕ್ಕೆ ಹಾಗೂ ಮಳೆ ಇರಲಿ, ಬಿರುಗಾಳಿ ಇರಲಿ ಪ್ರತಿದಿನ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ದೇಶ ಕಾಯುವ ಯೋಧರಿಗೆ ಅರ್ಪಿಸುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

    ಉರಿ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಅಲ್ಲದೆ, ಅತ್ಯುತ್ತಮ ಬ್ಯಾಕ್‍ಗ್ರೌಂಡ್ ಪ್ರಶಸ್ತಿ, ಅತ್ಯುತ್ತಮ ಸೌಂಡ್ ಡಿಸೈನ್ ಪ್ರಶಸ್ತಿ ಹಾಗೂ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ದೊರೆತಿದೆ.

  • ಡಬಲ್ ಸಂಭ್ರಮದಲ್ಲಿ ಶ್ರುತಿ ಹರಿಹರನ್

    ಡಬಲ್ ಸಂಭ್ರಮದಲ್ಲಿ ಶ್ರುತಿ ಹರಿಹರನ್

    ಬೆಂಗಳೂರು: ಶ್ರುತಿ ಹರಿಹರನ್ ಅವರಿಗೆ ಇಂದು ಡಬಲ್ ಸಂಭ್ರಮ. ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪಡೆದ ಸಂಭ್ರಮದಲ್ಲೇ ಇಂದು ಅವರು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ.

    ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಶ್ರುತಿ ಹರಿಹರನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಶ್ರುತಿ ಹರಿಹರನ್ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ ಉತ್ಸುಕರಾಗಿದ್ದಾರೆ” ಎಂದು ಬರೆದುಕೊಂಡಿದ್ದರು. ಈ ಮೂಲಕ ಶ್ರುತಿ ಅವರು ತಾವೂ ಗರ್ಭಿಣಿ ಎಂಬುದನ್ನು ಅಧಿಕೃತವಾಗಿ ಹೇಳಿಕೊಂಡಿದ್ದರು.

    https://www.instagram.com/p/Bz-rVWjJHRH/

    ಇನ್ನೊಂದೆಡೆ ನಿರ್ದೇಶಕ ಮಂಸೋರೆ ನಿರ್ದೇಶನದಲ್ಲಿ ಮೂಡಿ ಬಂದಿದ್ದ, ನಟಿ ಶ್ರುತಿ ಹರಿಹರನ್ ಅಭಿನಯದ ‘ನಾತಿಚರಾಮಿ’ ಸಿನಿಮಾ ಬರೋಬ್ಬರಿ 5 ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ, ಅತ್ಯುತ್ತಮ ಹಿನ್ನೆಲೆ ಗಾಯಕಿ, ಅತ್ಯುತ್ತಮ ಸಾಹಿತ್ಯ, ಅತ್ಯುತ್ತಮ ಎಡಿಟಿಂಗ್ ಹಾಗೂ ಸಿನಿಮಾ ನಟಿ ಶೃತಿ ಹರಿಹರನ್ ಅವರಿಗೆ ವಿಶೇಷ ಅಭಿನಯದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

    ನಟಿ ಶ್ರುತಿ ಹರಿಹರನ್ ಅವರು ತಾನು ಮದುವೆಯಾಗಿದ್ದೇನೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಆರೋಪ ಕೇಳಿ ಬಂದ ಸಂದರ್ಭದಲ್ಲಿ ದೂರು ನೀಡುವಾಗ ಮದುವೆಯಾಗಿದ್ದ ವಿಚಾರ ಬಹಿರಂಗವಾಗಿತ್ತು. ಶ್ರುತಿ ಡ್ಯಾನ್ಸ್ ಮಾಸ್ಟರ್ ಮತ್ತು ಪ್ರಸಿದ್ಧ ಕಲರಿ ಪಟ್ಟು ಕಲಾವಿದರಾಗಿರುವ ರಾಮ್ ಕುಮಾರ್ ಅವರನ್ನು ಮದುವೆಯಾಗಿದ್ದಾರೆ.

    ಶ್ರುತಿ ದೂರಿನಲ್ಲಿ ಮದುವೆಯಾಗಿದೆ ಎಂದು ನಮೂದಿಸುವ ಮೊದಲು ರಾಮ್ ಕುಮಾರ್ ಜೊತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವುದಾಗಿ ಹೇಳಿಕೊಂಡಿರಲಿಲ್ಲ. ಶ್ರುತಿ ಹರಿಹರನ್ ರಾಮ್ ಕುಮಾರ್ ಜೊತೆಯಲ್ಲಿ ಮೊದಲ ಬಾರಿಗೆ `ಪ್ರೇಮ’ ಎಂಬ ವಿಡಿಯೋ ಹಾಡಿನಲ್ಲಿ ಇಬ್ಬರು ಒಟ್ಟಾಗಿ ಅಭಿನಯಿಸಿದ್ದರು.

  • ಬರಗಾಲದಲ್ಲೂ 200 ಹಸು ಸಾಕಿ, ದಿನಕ್ಕೆ 500 ಲೀ. ಹಾಲು ಉತ್ಪಾದಿಸಿ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರದುರ್ಗದ ಮಹಿಳೆ

    ಬರಗಾಲದಲ್ಲೂ 200 ಹಸು ಸಾಕಿ, ದಿನಕ್ಕೆ 500 ಲೀ. ಹಾಲು ಉತ್ಪಾದಿಸಿ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರದುರ್ಗದ ಮಹಿಳೆ

    ಚಿತ್ರದುರ್ಗ: ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

    ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

    ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

    ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

    ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.